ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಚುನಾವಣೆ ಫಲಿತಾಂಶದ (Assembly Elections 2023) ಸ್ಪಷ್ಟ ಚಿತ್ರಣ ಸಿಕ್ಕಿದೆ. ಸೋಮವಾರ ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆ ಆರಂಭವಾಗಿದ್ದು, ಝೆಡ್‌ಪಿಎಂ ಪಕ್ಷವು ಮುನ್ನಡೆ ಸಾಧಿಸಿದೆ. ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.
ರಾಜಸ್ಥಾನ ಮತಗಟ್ಟೆ ಸಮೀಕ್ಷೆ
ಮಧ್ಯಪ್ರದೇಶ ಮತಗಟ್ಟೆ ಸಮೀಕ್ಷೆ ವರದಿ
ತೆಲಂಗಾಣ ಮತಗಟ್ಟೆ ಸಮೀಕ್ಷೆ ಹೇಳುವುದೇನು?
7,643 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ
ನಾಲ್ಕೂ ರಾಜ್ಯಗಳ 638 ವಿಧಾನಸಭೆ ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು, 7,643 ಅಭ್ಯರ್ಥಿಗಳ ಭವಿಷ್ಯವು ಭಾನುವಾರ ತೀರ್ಮಾನವಾಗಲಿದೆ. ಈಗಾಗಲೇ ಅಭ್ಯರ್ಥಿಗಳು ಗೆಲುವಿಗೆ ಪ್ರಾರ್ಥನೆ ಮಾಡುತ್ತಿದ್ದು, ಗೆಲುವು ಸಾಧಿಸಿದರೆ ಭರ್ಜರಿ ಸಂಭ್ರಮಾಚರಣೆಗೂ ಅಭ್ಯರ್ಥಿಗಳು ಸಿದ್ಧರಾಗಿದ್ದಾರೆ ಎಂದು ತಿಳಿದುಬಂದಿದೆ.
8 ಗಂಟೆಯಿಂದ ಮತಎಣಿಕೆ ಆರಂಭ
ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಬೆಳಗ್ಗೆ 8 ಗಂಟೆಯಿಂದಲೇ ಮತಎಣಿಕೆ ಆರಂಭವಾಗಲಿದೆ. ಇದಕ್ಕಾಗಿ ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಹಾಗೆಯೇ, ಬಿಗಿ ಬಂದೋಬಸ್ತ್ ಕೂಡ ಏರ್ಪಡಿಸಲಾಗಿದೆ. ಮಧ್ಯಾಹ್ನದ ವೇಳೆಗೆ ನಾಲ್ಕೂ ರಾಜ್ಯಗಳ ಚುನಾವಣೆ ಫಲಿತಾಂಶದ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದೇ ಹೇಳಲಾಗುತ್ತಿದೆ.