ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಚುನಾವಣೆ ಫಲಿತಾಂಶದ (Assembly Elections 2023) ಸ್ಪಷ್ಟ ಚಿತ್ರಣ ಸಿಕ್ಕಿದೆ. ಸೋಮವಾರ ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆ ಆರಂಭವಾಗಿದ್ದು, ಝೆಡ್‌ಪಿಎಂ ಪಕ್ಷವು ಮುನ್ನಡೆ ಸಾಧಿಸಿದೆ. ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.
ಜಾಗೃತ ಮಹಿಳಾ ಶಕ್ತಿಯ ಬಲದಿಂದಾಗಿ ಬಿಜೆಪಿಗೆ ಭರ್ಜರಿ ಜಯ: ಬಿಜೆಪಿ ವಿಜಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವ್ಯಾಖ್ಯಾನ
ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳ ಮತದಾರರು ಬಿಜೆಪಿಗೆ ಅಭೂತಪೂರ್ವ ಜಯ ತಂದುಕೊಟ್ಟಿದ್ದಾರೆ: ಬಿಜೆಪಿ ವಿಜಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹರ್ಷ
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಹಿನ್ನೆಲೆಯಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿವಿಧ ರಾಜ್ಯಗಳಲ್ಲಿನ ಪಕ್ಷಗಳ ಇತ್ತೀಚಿನ ಬಲಾಬಲ
ರಾಜಸ್ಥಾನ
ಬಿಜೆಪಿ: 116
ಕಾಂಗ್ರೆಸ್: 68
ಮಧ್ಯಪ್ರದೇಶ
ಬಿಜೆಪಿ: 168
ಕಾಂಗ್ರೆಸ್: 61
ಛತ್ತೀಸ್‌ಗಢ
ಬಿಜೆಪಿ: 56
ಕಾಂಗ್ರೆಸ್: 34
ತೆಲಂಗಾಣ
ಕಾಂಗ್ರೆಸ್: 63
ಬಿಆರ್‌ಎಸ್: 40