ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಚುನಾವಣೆ ಫಲಿತಾಂಶದ (Assembly Elections 2023) ಸ್ಪಷ್ಟ ಚಿತ್ರಣ ಸಿಕ್ಕಿದೆ. ಸೋಮವಾರ ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆ ಆರಂಭವಾಗಿದ್ದು, ಝೆಡ್‌ಪಿಎಂ ಪಕ್ಷವು ಮುನ್ನಡೆ ಸಾಧಿಸಿದೆ. ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.
ಸೋಲಿನಿಂದ ಕುಗ್ಗುವುದಿಲ್ಲ ಎಂದ ಸಿದ್ದರಾಮಯ್ಯ
ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ.
— Siddaramaiah (@siddaramaiah) December 3, 2023
ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ.
ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್…
ಫಲಿತಾಂಶವನ್ನು ವಿನಯಪೂರ್ವಕವಾಗಿ ಸ್ವೀಕರಿಸುತ್ತೇವೆ: ರಾಹುಲ್ ಗಾಂಧಿ
मध्य प्रदेश, छत्तीसगढ़ और राजस्थान का जनादेश हम विनम्रतापूर्वक स्वीकार करते हैं – विचारधारा की लड़ाई जारी रहेगी।
— Rahul Gandhi (@RahulGandhi) December 3, 2023
तेलंगाना के लोगों को मेरा बहुत धन्यवाद – प्रजालु तेलंगाना बनाने का वादा हम ज़रूर पूरा करेंगे।
सभी कार्यकर्ताओं को उनकी मेहनत और समर्थन के लिए दिल से शुक्रिया।
ತೆಲಂಗಾಣದಲ್ಲಿ ಬಿಜೆಪಿ ಶಕ್ತಿ ವೃದ್ಧಿ
ತೆಲಂಗಾಣದಲ್ಲಿ 10 ವರ್ಷಗಳಿಂದ ಅಧಿಕಾರದಲ್ಲಿದ್ದ ಬಿಆರ್‌ಎಸ್ ಆಡಳಿತ ವಿರೋಧಿ ಅಲೆಗೆ ಕೊಚ್ಚಿ ಹೋಗಿದೆ. ಇದರ ಲಾಭವನ್ನು ಕಾಂಗ್ರೆಸ್ ಪಡೆದುಕೊಂಡಿದೆ. ಇತ್ತ ಬಿಜೆಪಿ ಬಲ ವೃದ್ಧಿಕೊಂಡಿದೆ. ಕಳೆದ ಬಾರಿ 1 ಸೀಟ್ ಪಡೆದಿದ್ದ ಬಿಜೆಪಿ ಈ ಬಾರಿ 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.