Site icon Vistara News

Mizoram Election Results 2023 Live: ಮಿಜೋರಾಂನಲ್ಲಿ ಝೆಡ್‌ಪಿಎಂ ಪಕ್ಷಕ್ಕೆ ಬಹುಮತ; ಕಾಂಗ್ರೆಸ್‌ಗೆ ಒಂದೇ ಸ್ಥಾನ

vote counting

ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಚುನಾವಣೆ ಫಲಿತಾಂಶದ (Assembly Elections 2023) ಸ್ಪಷ್ಟ ಚಿತ್ರಣ ಸಿಕ್ಕಿದೆ. ಸೋಮವಾರ ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆ ಆರಂಭವಾಗಿದ್ದು, ಝೆಡ್‌ಪಿಎಂ ಪಕ್ಷವು ಮುನ್ನಡೆ ಸಾಧಿಸಿದೆ. ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.

Ramesh B

MP Election Result: ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ 5 ಕಾರಣಗಳೇನು?
Ramesh B

Rajasthan Election Result: ರಾಜಸ್ಥಾನದಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ? ಇಲ್ಲಿವೆ ಪ್ರಮುಖ ಕಾರಣಗಳು
Ramesh B

Election Result 2023: ಛತ್ತೀಸ್‌ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವಿಗೆ ಕಾರಣಗಳೇನು?
Ramesh B

ಬಿಜೆಪಿಗೆ ಮುನ್ನಡೆ

ರಾಜಸ್ಥಾನದಲ್ಲಿ ಬಿಜೆಪಿ ಸ್ಪಷ್ಟ ಬಹುಮತದತ್ತ ಸಾಗಿದೆ. ಸದ್ಯ ಬಿಜೆಪಿ 116 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ 68 ಕ್ಷೇತ್ರಗಳಲ್ಲಿ ಮುಂದಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ 165 ಸ್ಥಾನಗಳಲ್ಲಿ ಕಮಾಲ್‌ ಮಾಡಿದರೆ ಕಾಂಗ್ರೆಸ್‌ಗೆ 64 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಲು ಸಾಧ್ಯವಾಗಿದೆ. ಛತ್ತೀಸ್‌ಗಢದಲ್ಲಿ ಬಿಜೆಪಿ 53 ಸ್ಥಾನದಲ್ಲಿ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್‌ಗೆ 35 ಸ್ಥಾನಗಳಿಗೆ ಸದ್ಯ ತೃಪ್ತಿ ಪಟ್ಟುಕೊಂಡಿದೆ. ಇನ್ನು ತೆಲಂಗಾಣವೊಂದೇ ಕಾಂಗ್ರೆಸ್‌ಗೆ ಸಮಾಧಾನ ನೀಡಿದೆ. ಇಲ್ಲಿ ಕೈ ಪಡೆ 64 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಆರ್‌ಎಸ್ 38 ಕಡೆಗಳಲ್ಲಿ ಮುಂದಿದೆ.

Ramesh B

ದೇಶಕ್ಕೆ ಮೋದಿಯೇ ಗ್ಯಾರಂಟಿ: ಸ್ಮೃತಿ ಇರಾನಿ

ದೇಶಕ್ಕೆ ಮೋದಿಯೇ ಗ್ಯಾರಂಟಿ ಎಂದು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಹೇಳಿದ್ದಾರೆ. 3 ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದ ಹಿನ್ನಲೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ನ ಗ್ಯಾರಂಟಿ ಘೋಷಣೆಯನ್ನು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿ ಘೋಷಿಸಿದರೂ ಜಯ ಗಳಿಸಿಲ್ಲ ಎಂದಿದ್ದಾರೆ.

Exit mobile version