ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಚುನಾವಣೆ ಫಲಿತಾಂಶದ (Assembly Elections 2023) ಸ್ಪಷ್ಟ ಚಿತ್ರಣ ಸಿಕ್ಕಿದೆ. ಸೋಮವಾರ ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆ ಆರಂಭವಾಗಿದ್ದು, ಝೆಡ್‌ಪಿಎಂ ಪಕ್ಷವು ಮುನ್ನಡೆ ಸಾಧಿಸಿದೆ. ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.
ಶಿವರಾಜ್ ಸಿಂಗ್ ಚೌಹಾಣ್‌ಗೆ ಪಟ್ಟ?
ಮಧ್ಯಪ್ರದೇಶದಲ್ಲಿ 5ನೇ ಬಾರಿಗೆ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮುಖ್ಯಮಂತ್ರಿ ಪಟ್ಟ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಲೋಕಸಭೆ ಚುನಾವಣೆಯ ಸೆಮಿ ಫೈನಲ್‌ನಲ್ಲಿ ಗೆದ್ದ ಬಿಜೆಪಿ
ಲೋಕಸಭೆ ಸಮರದ ಸೆಮಿ ಫೈನಲ್ ಎಂದೇ ಪರಿಗಣಿಸಲ್ಪಟ್ಟ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದೆ. ಇದರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 4 ರಾಜ್ಯಗಳ ಪೈಕಿ 3ರಲ್ಲಿ ಮುಂದಿದೆ. ಅದರಲ್ಲೂ ದೊಡ್ಡ ರಾಜ್ಯಗಳಾದ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಮಲ ಅರಳಿದೆ. ಬೋನಸ್ ಎನ್ನವಂತೆ ಛತ್ತೀಸ್‌ಗಢದಿಂದಲೂ ಬಿಜೆಪಿಗೆ ಪೂರಕ ಫಲಿತಾಂಶ ಬರುತ್ತಿದೆ.
ಜನರ ನಾಡಿಮಿಡಿತ ತಿಳಿಸುವ ಫಲಿತಾಂಶ: ಬೊಮ್ಮಾಯಿ
ಇದು ಜನರ ನಾಡಿಮಿಡಿತ ತಿಳಿಸುವ ಫಲಿತಾಂಶ. ಮೋದಿ ಆಡಳಿತವನ್ನು ಜನರು ಒಪ್ಪಿಕೊಂಡಿದ್ದಾರೆ ಎನ್ನುವುದಕ್ಕೆ ಇದು ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕಾಂಗ್ರೆಸ್‌ಗೆ ಸಮಾಧಾನ ತಂದ ತೆಲಂಗಾಣ ಫಲಿತಾಂಶ
ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿರುವ ಕಾಂಗ್ರೆಸ್‌ಗೆ ಸದ್ಯ ತೆಲಂಗಾಣದಿಂದ ಮಾತ್ರ ಗುಡ್‌ನ್ಯೂಸ್ ಲಭಿಸಿದೆ. ಇಲ್ಲಿ ಕೈ ಪಡೆ ಬಿಆರ್‌ಎಸ್ ಹಿಂದಿಕ್ಕಿ ಮುನ್ನಡೆ ಸಾಧಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ 64 ಸ್ಥಾನಗಳಲ್ಲಿ ಮುಂದಿದ್ದರೆ ಬಿಆರ್‌ಎಸ್ ಕೇವಲ 40 ಸ್ಥಾನಗಳಲ್ಲಿ ಮುನ್ನಡೆ ದಾಖಲಿಸಿದೆ.