ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಚುನಾವಣೆ ಫಲಿತಾಂಶದ (Assembly Elections 2023) ಸ್ಪಷ್ಟ ಚಿತ್ರಣ ಸಿಕ್ಕಿದೆ. ಸೋಮವಾರ ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆ ಆರಂಭವಾಗಿದ್ದು, ಝೆಡ್‌ಪಿಎಂ ಪಕ್ಷವು ಮುನ್ನಡೆ ಸಾಧಿಸಿದೆ. ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.
ಕಾಂಗ್ರೆಸ್‌ಗೆ ಹಿನ್ನಡೆ
ರಾಜಸ್ಥಾನದಲ್ಲಿನ ಆಡಳಿತರೂಢ ಕಾಂಗ್ರೆಸ್ ನೆಲ ಕಚ್ಚಿದೆ. ಇಲ್ಲಿ ಕಾಂಗ್ರೆಸ್ ಕೇವಲ 72 ಸ್ಥಾನದಲ್ಲಿ ಮುನ್ನಡೆಯಲ್ಲಿದ್ದರೆ, ಮಧ್ಯಪ್ರದೇಶದಲ್ಲೀ ಬಿಜೆಪಿ ಮುಂದೆ ಮಂಡಿಯೂರಿದೆ. ಇಲ್ಲಿ 65 ಸ್ಥಾನಗಳಲ್ಲಿ ಮಾತ್ರ ಮುಂದಿದೆ. ಇನ್ನು ಛತ್ತೀಸ್‌ಗಢದಲ್ಲಿ ಅಧಿಕಾರ ಕಳೆದುಕೊಳ್ಳುವುದು ಖಚಿತ. ಇಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಾಧಿಸಲು ಸಾಧ್ಯವಾಗಿದ್ದು 32 ಕ್ಷೇತ್ರಗಳಲ್ಲಿ ಮಾತ್ರ.
3 ರಾಜ್ಯಗಳಲ್ಲಿ ಅರಳಿದ ತಾವರೆ
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢಗಳಲ್ಲಿ ಬುಜೆಪಿ ತನ್ನ ಪಾರಮ್ಯ ಮರೆದಿದೆ. ಮಧ್ಯಪ್ರದೇಶದಲ್ಲಿ 164 ಸ್ಥಾನ, ರಾಜಸ್ಥಾನದಲ್ಲಿ 115 ಮತ್ತು ಛತ್ತೀಸ್‌ಗಢದಲ್ಲಿ 55 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತ್ತ ಕಾಂಗ್ರೆಸ್ ತೆಲಂಗಾಣದಲ್ಲಿ ಅಧಿಕ್ಕಾರಕ್ಕೇರುವುದು ಬಹುತೇಕ ಖಚಿತ. ಇಲ್ಲಿ ಕೈ ಪಡೆ 65 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ.
ರಾಜಸ್ಥಾನದಲ್ಲಿ ಬಿಜೆಪಿಗೆ 109 ಸ್ಥಾನಗಳಲ್ಲಿ ಮುನ್ನಡೆ
ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾದಂತಾಗಿದೆ. 109 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಆಡಳಿತರೂಢ ಕಾಂಗ್ರೆಸ್ 72 ಕ್ಷೇತ್ರಗಳಲ್ಲಿ ಮುಂದಿದೆ.
"ಛತ್ತೀಸ್‌ಗಢ ಗೆಲುವು ಮೋದಿ ಗ್ಯಾರಂಟಿ"
ರಾಯ್ಪುರ: “ಈ ಗೆಲುವು ಮೋದಿ ಗ್ಯಾರಂಟಿʼʼ ಎಂದು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ರಮಣ್ ಸಿಂಗ್ ಹೇಳಿದ್ದಾರೆ. ಮತಗಟ್ಟೆ ಸಮೀಕ್ಷೆಗಳನ್ನು ಸುಳ್ಳಾಗಿಸಿ ವಿಜಯದತ್ತ ಬಿಜೆಪಿ ಇಲ್ಲಿ ದಾಪುಗಾಲು ಹಾಕುತ್ತಿದೆ.