ವಿಸ್ತಾರ TOP 10 NEWS : ದೆಹಲಿ ಡಿಸಿಎಂ ಮನೀಷ್​​ ಸಿಸೋಡಿಯಾ ಬಂಧನದಿಂದ ಹಿಡಿದು ಜೋಶಿ, ಎಚ್​ಡಿಕೆ ಜಟಾಪಟಿವರೆಗಿನ ಪ್ರಮುಖ ಸುದ್ದಿಗಳಿವು - Vistara News

ದೇಶ

ವಿಸ್ತಾರ TOP 10 NEWS : ದೆಹಲಿ ಡಿಸಿಎಂ ಮನೀಷ್​​ ಸಿಸೋಡಿಯಾ ಬಂಧನದಿಂದ ಹಿಡಿದು ಜೋಶಿ, ಎಚ್​ಡಿಕೆ ಜಟಾಪಟಿವರೆಗಿನ ಪ್ರಮುಖ ಸುದ್ದಿಗಳಿವು

ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಭವಿಸಿದ ಪ್ರಮುಖ ಬೆಳವಣಿಗೆಗಳ ಒಂದು ಸುತ್ತು ನೋಟವೇ ವಿಸ್ತಾರ TOP 10 NEWS

VISTARANEWS.COM


on

From Delhi DCM Manish Sisodia's arrest to Joshi, HDK's fight, Vistaranews main news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. ಅಬಕಾರಿ ನೀತಿ ಹಗರಣ, ದೆಹಲಿ ಡಿಸಿಎಂ ಮನೀಷ್‌ ಸಿಸೋಡಿಯಾ ಬಂಧನ
ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಗರಣಕ್ಕೆ (Delhi Liquor Policy Case) ಸಂಬಂದಿಸಿದಂತೆ ಕೇಂದ್ರ ತನಿಖಾ ದಳ(CBI)ದ ಅಧಿಕಾರಿಗಳು ದೆಹಲಿ ಉಪಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ (Manish Sisodia Arrested) ಅವರನ್ನು ಭಾನುವಾರ ಬಂಧಿಸಿದ್ದಾರೆ. ಇನ್ನು ಬಂಧನ ಖಂಡಿಸಿ ಆಪ್‌ ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

2. ನಾಳೆ ಶಿವಮೊಗ್ಗದಲ್ಲಿ ರಾಜ್ಯದ 2ನೇ ಅತಿದೊಡ್ಡ ಏರ್‌ಪೋರ್ಟ್‌ ಲೋಕಾರ್ಪಣೆ; ಮೋದಿ ಕಾರ್ಯಕ್ರಮದ ವಿವರ ಏನು?
ತಾಲೂಕಿನ ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು (Shivamogga Airport) ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ (ಫೆ.27) ರಂದು ಲೋಕಾರ್ಪಣೆಗೊಳಿಸಲಿದ್ದು, ಎಲ್ಲ ಸಿದ್ಧತೆಗಳೂ ಪೂರ್ಣಗೊಂಡಿದೆ. ಬೆಳಗ್ಗೆ 11.35ಕ್ಕೆ ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಮೋದಿ ಆಗಮಿಸಲಿದ್ದು, ಈ ವಿಮಾನವೇ ಅಧಿಕೃತವಾಗಿ ಲ್ಯಾಂಡ್‌ ಆಗಲಿರುವ ಪ್ರಥಮ ವಿಮಾನವಾಗಲಿದೆ. 11.45 ರಿಂದ 11.55ರ ವರೆಗೆ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಮೋದಿ ವೀಕ್ಷಣೆ ನಡೆಸಲಿದ್ದು, ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕ ಸಭೆಯಲ್ಲಿ ಏರ್ಪೋರ್ಟ್‌ ಅನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಅಲ್ಲದೆ, ಇದು ರಾಜ್ಯದಲ್ಲೇ ೨ನೇ ಅತಿ ದೊಡ್ಡ ವಿಮಾನ ನಿಲ್ದಾಣ ಎಂಬ ಖ್ಯಾತಿಯನ್ನೂ ಹೊಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.
ಹೆಚ್ಚಿನ ಓದಿಗಾಗಿ: ನಾಳೆ ಕುಂದಾನಗರಿಯಲ್ಲಿ ಮೋದಿ ಮೇನಿಯಾ; ಪೌರ ಕಾರ್ಮಿಕ ಮಹಿಳೆ ಸೇರಿ ಐವರು ಸಾಮಾನ್ಯ ಕಾರ್ಮಿಕರಿಂದ ಪ್ರಧಾನಿಗೆ ಸ್ವಾಗತ

3. ಅರುಣಾಚಲ ಪ್ರದೇಶದಿಂದ ಗುಜರಾತ್‌ವರೆಗೆ ಕಾಂಗ್ರೆಸ್‌ನಿಂದ ಮತ್ತೊಂದು ಪಾದಯಾತ್ರೆ
ಭಾರತ್ ಜೋಡೋ ಯಾತ್ರೆ(Bharat Jodo Yatra)ಯ ಯಶಸ್ಸಿನಿಂದ ಮೈಕೊಡವಿ ಎದ್ದುನಿಂತಿರುವ ಕಾಂಗ್ರೆಸ್ ಪಕ್ಷವು(Congress), ಮತ್ತೊಂದು ಅದೇ ರೀತಿಯ ಪಾದಯಾತ್ರೆಯನ್ನು ಕೈಗೊಳ್ಳುವ ಯೋಜನೆಯನ್ನು ಹಾಕಿಕೊಂಡಿದೆ. ಕಾಂಗ್ರೆಸ್ ಪಕ್ಷದ 85ನೇ ಮಹಾಧಿವೇಶನದಲ್ಲಿ (Congress plenary Session) ಈ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: 1. ಅದಾನಿಯ ಸತ್ಯ ಗೊತ್ತಾಗುವ ತನಕ ಪ್ರಶ್ನೆ ಕೇಳುತ್ತೇವೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
2. ಸೋನಿಯಾ ನಿವೃತ್ತಿ ಹೊಂದಲ್ಲ, ಇನಿಂಗ್ಸ್‌ ಅಂತ್ಯ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್‌ ವಕ್ತಾರೆ ಸ್ಪಷ್ಟನೆ

4. ಹಾಸನ ಟಿಕೆಟ್‌ ವಿಚಾರದಿಂದ ಕೈಚೆಲ್ಲಿದ ಎಚ್‌.ಡಿ. ಕುಮಾರಸ್ವಾಮಿ: ಓವರ್‌ ಟು ರಾಷ್ಟ್ರೀಯ ಅಧ್ಯಕ್ಷರು
ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌ ನೀಡಿಕೆ ಗೊಂದಲವನ್ನು ಬಗೆಹರಿಸಲು ಬಗೆಬಗೆಯಾಗಿ ಪ್ರಯತ್ನಿಸಿದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಕೊನೆಗೂ ಕೈಚೆಲ್ಲಿದ್ದಾರೆ. ಇನ್ನು ಹಾಸನದ ವಿಚಾರದಲ್ಲಿ ಎಲ್ಲ ನಿರ್ಧಾರವನ್ನೂ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡರು ತೆಗೆದುಕೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

5 .ಮನೆ‌ಯನ್ನೇ ನಿರ್ವಹಿಸಲಾಗದವರು ದೇಶ, ರಾಜ್ಯವನ್ನು ಹೇಗೆ ನಿರ್ವಹಿಸ್ತೀರಾ?; ದೇವೇಗೌಡ ಕುಟುಂಬಕ್ಕೆ ಪ್ರಲ್ಹಾದ್‌ ಜೋಶಿ ಪ್ರಶ್ನೆ
ಮನೆ‌ಯನ್ನೇ ನಿರ್ವಹಿಸಲಾಗದವರು ಇನ್ನು ದೇಶ, ರಾಜ್ಯವನ್ನು ಹೇಗೆ ನಿರ್ವಹಣೆ ಮಾಡುತ್ತೀರಿ? ಮನೆಯಲ್ಲಿ 10-12 ಜನವಿದ್ದು, ಎಲ್ಲರೂ ಎಲೆಕ್ಷನ್‌ಗೆ ನಿಂತರೂ ನಿಮಗೆ ಸಮಾಧಾನ ಇಲ್ಲವೇ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡರ (HD Devegowda) ಕುಟುಂಬಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಪ್ರಶ್ನಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಓದಿಗಾಗಿ: 1. ಮೊದಲು ನಿಮ್ಮ ಕುಟುಂಬವನ್ನು ನೆಟ್ಟಗೆ ಇಟ್ಟುಕೊಳ್ಳಿ; ಜೋಶಿಗೆ ಎಚ್‌.ಡಿ. ಕುಮಾರಸ್ವಾಮಿ ತಿರುಗೇಟು

6. ಇ ಸಂಜೀವಿನಿ ಆ್ಯಪ್, ಯುಪಿಐ ಕುರಿತು ಮನ್‌ ಕಿ ಬಾತ್‌ನಲ್ಲಿ ಮೋದಿ ಮೆಚ್ಚುಗೆ
“ಇ ಸಂಜೀವಿನಿ ಆ್ಯಪ್ ಹಾಗೂ ಏಕೀಕೃತ ಪಾವತಿ ವ್ಯವಸ್ಥೆಯು (UPI) ದೇಶದ ಡಿಜಿಟಲ್‌ ಶಕ್ತಿಯ ದ್ಯೋತಕ” ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು. ಮನ್‌ ಕಿ ಬಾತ್‌ ರೇಡಿಯೊ ಕಾರ್ಯಕ್ರಮದಲ್ಲಿ (Mann Ki Baat) ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಅವರು, “ಕೊರೊನಾ ಸಂದರ್ಭದಲ್ಲಿ ಇ ಸಂಜೀವಿನಿ ಆ್ಯಪ್ ಪ್ರಮುಖ ಪಾತ್ರ ನಿರ್ವಹಿಸಿದೆ. ಹಾಗೆಯೇ, ದೇಶದ ಯುಪಿಐ ಈಗ ಸಾಗರದಾಚೆ ತಲುಪುತ್ತಿದೆ” ಎಂದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

7. ಶಿಕಾರಿಪುರದಿಂದಲೇ ಸ್ಪರ್ಧೆ: ಗೊಂದಲಗಳಿಗೆ ತೆರೆ ಎಳೆದ ಬಿ.ವೈ. ವಿಜಯೇಂದ್ರ
ಬಿ.ಎಸ್‌. ಯಡಿಯೂರಪ್ಪ ಅವರಿಗೆ ರಾಜಕೀಯ ಜೀವನ ಕಲ್ಪಿಸಿದ ಶಿಕಾರಿಪುರದಿಂದಲೇ ತಮ್ಮ ಸ್ಪರ್ಧೆಯನ್ನು ರಾಜ್ಯ ಬಿಜೆಪಿ ( BJP Politics) ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಖಚಿತಪಡಿಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯ ಮುನ್ನಾದಿನ ಶಿವಮೊಗ್ಗದ ಗೃಹದಲ್ಲಿ ವಿಸ್ತಾರ ನ್ಯೂಸ್‌ ಜತೆಗೆ ಮಾತನಾಡಿದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

8. ಫೆ.27ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್‌ ಕೇಂದ್ರಗಳ ಕಾರ್ಯಾರಂಭ; ಶುಲ್ಕ ಹೀಗಿದೆ
ಸುಮಾರು 8000 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ (Bangalore–Mysore Expressway) ಮೊದಲ ಹಂತದ ಕಾಮಗಾರಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಫೆ.27ರಿಂದ ಮೊದಲ ಹಂತದ ಟೋಲ್‌ ಕೇಂದ್ರಗಳು ಕಾರ್ಯಾರಂಭ ಮಾಡಲಿವೆ. ಬೆಂಗಳೂರು-ನಿಡಘಟ್ಟವರೆಗಿನ ಹೆದ್ದಾರಿಯಲ್ಲಿ ಸಾಗಲು ವಾಹನಗಳಿಗೆ ನಿಗದಿತ ಸುಂಕ ನೀಡಬೇಕಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

9. ರಾಜ್ಯ ಸರ್ಕಾರಿ ನೌಕರರ ಹೋರಾಟದ ನಡುವೆಯೇ ಕೇಂದ್ರ ಉದ್ಯೋಗಿಗಳಿಗೆ ಭರ್ಜರಿ ವೇತನ ಏರಿಕೆ ಶೀಘ್ರ
ವೇತನ ಪರಿಷ್ಕರಣೆಗಾಗಿ ರಾಜ್ಯ ಸರ್ಕಾರಿ ನೌಕರರ ಹೋರಾಟ, ಮುಷ್ಕರದ ನಡುವೆಯೇ ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ವೇತನ ಏರಿಕೆಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯವಾಗಿ ಅವರ ಕನಿಷ್ಠ ಮಾಸಿಕ ವೇತನ 26,000 ರೂ.ಗೆ ಏರಿಕೆಯಾಗುವ ಸಾಧ್ಯತೆ ಇದೆ. ಹೋಳಿ ಹಬ್ಬಕ್ಕೆ ಮುನ್ನ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಸಿಹಿ ಸುದ್ದಿಯಿದು. ಕೆಲ ದಿನಗಳಲ್ಲಿ ಕೇಂದ್ರ ಸರ್ಕಾರ ಉದ್ಯೋಗಿಗಳ ತುಟ್ಟಿಭತ್ಯೆ ( Dearness Allowance) ಮತ್ತು ಫಿಟ್‌ಮೆಂಟ್‌ ಫ್ಯಾಕ್ಟರ್‌ (fitment factor) ಅಡಿಯಲ್ಲಿ ಕನಿಷ್ಠ ವೇತನವನ್ನು ಏರಿಸುವ ಸಾಧ್ಯತೆ ಇದೆ. ( 7th Pay commission) ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ.

10. ದಕ್ಷಿಣ ಕೊರಿಯಾ ರಾಯಭಾರಿ ಕಚೇರಿ ಸಿಬ್ಬಂದಿಯ ‘ನಾಟು ನಾಟು’ ಡ್ಯಾನ್ಸ್​ಗೆ ಪ್ರಧಾನಿ ಮೋದಿ ಶ್ಲಾಘನೆ
ರಾಜಮೌಳಿ ನಿರ್ದೇಶನದ ಆರ್​ಆರ್​ಆರ್ ಸಿನಿಮಾದ ‘ನಾಟು..ನಾಟು’ ಹಾಡು ಸಿಕ್ಕಾಪಟೆ ಫೇಮಸ್ ಆಗಿದೆ. ಈಗಾಗಲೇ ಆಸ್ಕರ್​ ಪ್ರಶಸ್ತಿಗೂ ನಾಮ ನಿರ್ದೇಶನಗೊಂಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಖತ್​ ಫೇಮಸ್​ ಹಾಗಿರುವ ನಾಟು..ನಾಟು ಹಾಡಿಗೆ ಭಾರತದಲ್ಲಿರುವ ದಕ್ಷಿಣ ಕೊರಿಯಾ ರಾಯಭಾರಿ ಕಚೇರಿ ಸಿಬ್ಬಂದಿ ಡ್ಯಾನ್ಸ್ ಮಾಡಿದ್ದರು. ಆ ವಿಡಿಯೊವನ್ನು Korea Embassy India ಟ್ವಿಟರ್​ ಅಕೌಂಟ್​ನಲ್ಲಿ ಶೇರ್ ಕೂಡ ಮಾಡಿಕೊಂಡಿದ್ದರು. ಈ ವಿಡಿಯೊವನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್​ ಖಾತೆಯಲ್ಲಿ ರೀಶೇರ್​ ಮಾಡಿಕೊಂಡಿದ್ದಾರೆ. ಕೊರಿಯನ್ ರಾಯಭಾರಿ ಕಚೇರಿ ಸಿಬ್ಬಂದಿಯ ಉತ್ಸಾಹ ಮತ್ತು ತಂಡದ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್​ಮಾಡಿ.

ಇನ್ನಷ್ಟು ಪ್ರಮುಖ ಸುದ್ದಿಗಳಿವು

  1. ಬಿಜೆಪಿ ಎಂಎಲ್‌ಸಿ ಮಗಳ ನೇಮಕಕ್ಕೇ 50 ಲಕ್ಷ ರೂ. ಲಂಚಕ್ಕೆ ಬೇಡಿಕೆ: ಎಚ್‌.ಡಿ. ಕುಮಾರಸ್ವಾಮಿ ಆರೋಪ
  2. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ಗುಂಡಿಗೆ ಪಂಡಿತ ಬಲಿ
  3. ಕೊನೇ ಗ್ರಾಮ ವಾಸ್ತವ್ಯ ಯಶಸ್ವಿ; ಗ್ರಾಮಕ್ಕೆ 1 ಕೋಟಿ ರೂ. ಘೋಷಿಸಿದ ಆರ್.‌ ಅಶೋಕ್‌
  4. ಅಧಿಕಾರಕ್ಕೆ ಬಂದರೆ ಪಾಕಿಸ್ತಾನ, ಚೀನಾಗೆ ಅನುದಾನ ಕಡಿತ: ಅಮೆರಿಕನ್ನರಿಗೆ ನಿಕ್ಕಿ ಭರವಸೆ
  5. ಪಿಚ್​ಗೆ ನೀವು ಮರ್ಯಾದೆ ಕೊಟ್ಟರೆ ಅದು ನಿಮಗೆ ಗೌರವ ಕೊಡುತ್ತದೆ; ಅಶ್ವಿನ್ ಕಿವಿಮಾತು ಹೇಳಿದ್ದು ಯಾರಿಗೆ?
  6. ಷೇರು ಹೂಡಿಕೆದಾರರಿಗೆ 6 ದಿನಗಳಲ್ಲಿ 8.30 ಲಕ್ಷ ಕೋಟಿ ರೂ. ನಷ್ಟ
  7. ಪ್ರೀತಿಸಿದ ಹುಡುಗಿಗೆ ಮೆಸೇಜ್ ಮಾಡುತ್ತಿದ್ದ ಸ್ನೇಹಿತನನ್ನು ಕೊಂದು, ಖಾಸಗಿ ಅಂಗ ಕತ್ತರಿಸಿದ ಯುವಕ; ಗರ್ಲ್​ಫ್ರೆಂಡ್​ಗೆ ಫೋಟೋ ಕಳಿಸಿದ!
  8. ಬಾಲಾಕೋಟ್ ಏರ್‌ಸ್ಟ್ರೈಕ್‌ಗೆ 4 ವರ್ಷ, ಪಾಕ್‌ನ ಉಗ್ರರ ಶಿಬಿರಗಳು ಧ್ವಂಸ! ಅಂದು ಏನೆಲ್ಲ ನಡೆಯಿತು?
  9. Sunday Read: ಹೊಸ ಪುಸ್ತಕ: ಕಾಣೆಯಾಗಿದ್ದಾರೆ ಹುಡುಕಿ ಕೊಡಬೇಡಿ
  10. ಮಕ್ಕಳ ಕಥೆ: ಸೂರ್ಯನ ಕಳೆದುಹೋದ ಸೈಕಲ್‌ ಎಲ್ಲಿ ಹೋಗಿತ್ತು?
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Asaduddin Owais: ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಮಂಗಳವಾರ 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ʼಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದು, ವಿವಾದ ಎಬ್ಬಿಸಿದೆ. ಓವೈಸಿ ನಡೆಗೆ ಕಿಡಿಕಾರಿರುವ ಬಿಜೆಪಿ ಅವರ ಸದಸ್ಯತ್ವವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದೆ. ಹಾಗಾದರೆ ಓವೈಸಿ ಸದಸ್ಯತ್ವ ರದ್ದಾಗುತ್ತ? ಕಾನೂನು ಏನು ಹೇಳುತ್ತದೆ? ಇಲ್ಲಿದೆ ವಿವರ.

VISTARANEWS.COM


on

Asaduddin Owais
Koo

ನವದೆಹಲಿ: ಎಐಎಂಐಎಂ (AIMIM) ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಮಂಗಳವಾರ 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ʼಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದು, ವಿವಾದ ಎಬ್ಬಿಸಿದೆ. ಓವೈಸಿ ನಡೆಗೆ ಕಿಡಿಕಾರಿರುವ ಬಿಜೆಪಿ ಅವರ ಸದಸ್ಯತ್ವವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದೆ. ಹಾಗಾದರೆ ಓವೈಸಿ ಸದಸ್ಯತ್ವ ರದ್ದಾಗುತ್ತ? ಕಾನೂನು ಏನು ಹೇಳುತ್ತದೆ? ಮುಂತಾದ ಪ್ರಶ್ನೆಗೆ ಇಲ್ಲಿದೆ ಉತ್ತರ.

ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಓವೈಸಿ ಕೊನೆಗೆ, ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹೈದರಾಬಾದ್‌ನಿಂದ ಕಣಕ್ಕಿಳಿದಿದ್ದ ಓವೈಸಿ ತಮ್ಮ ಪ್ರಬಲ ಸ್ಪರ್ಧಿ ಬಿಜೆಪಿಯ ಮಾಧವಿ ಲತಾ ಕೊಂಪೆಲ್ಲಾ ಅವರನ್ನು ಸೋಲಿಸಿ ಸತತ ಐದನೇ ಬಾರಿಗೆ ಲೋಕಸಭೆಗೆ ಪ್ರವೇಶಿಸಿದ್ದಾರೆ.

ಸಮರ್ಥಿಸಿಕೊಂಡ ಓವೈಸಿ

ʼಜೈ ಪ್ಯಾಲೆಸ್ತೀನ್​’ ಘೋಷಣೆಗೆ ಬಿಜೆಪಿ ತೀವ್ರ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಓವೈಸಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸದನದ ಹೊರಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್ ಎಂದು ಹೇಳುವುದರಲ್ಲಿ ಯಾವುದೇ ತಪ್ಪಿಲ್ಲʼʼ ಎಂದಿದ್ದಾರೆ. “ಇತರ ಸದಸ್ಯರು ಸಹ ವಿವಿಧ ರೀತಿಯ ಘೋಷಣೆ ಕೂಗುತ್ತಾರೆ. ಅದು ಹೇಗೆ ತಪ್ಪಾಗುತ್ತದೆ? ನಾನು ಏನು ಹೇಳಬೇಕೋ ಅದನ್ನು ಹೇಳಿದೆ. ಪ್ಯಾಲೆಸ್ತೀನ್ ಬಗ್ಗೆ ಮಹಾತ್ಮ ಗಾಂಧಿ ಹೇಳಿದ್ದನ್ನು ಓದಿ” ಎಂದು ಓವೈಸಿ ಹೇಳಿದ್ದಾರೆ.

ಓವೈಸಿ ಅವರ ಪ್ರಮಾಣ ವಚನದ ವಿಡಿಯೊ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಪ್ರಮಾಣ ವಚನ ಸ್ವೀಕರಿಸಲು ವೇದಿಕೆಯತ್ತ ಸಾಗುತ್ತಿದ್ದ ಓವೈಸಿ ಅವರನ್ನು ಬಿಜೆಪಿ ಸಂಸದರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗುವ ಮೂಲಕ ಪ್ರಚೋದಿಸಿದ್ದಾರೆ ಎಂದು ಕೆಲವರು ಅವರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಯಾವೆಲ್ಲ ಕಾರಣಕ್ಕೆ ಸದಸ್ಯತ್ವ ರದ್ದಾಗುತ್ತದೆ?

ಇದೀಗ ಓವೈಸಿ ಅವರ ಸದಸ್ಯತ್ವ ರದ್ದಾಗುತ್ತ ಎನ್ನುವ ಪ್ರಶ್ನೆ ಎದ್ದಿದೆ. ಕಾನೂನು ಪ್ರಕಾರ ಯಾವೆಲ್ಲ ಕಾರಣಗಳಿಗೆ ಸದಸ್ಯತ್ವ ರದ್ದುಪಡಿಸಲಾಗುತ್ತದೆ ಎನ್ನುವ ವಿವರ ಇಲ್ಲಿದೆ.

  • ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರದ ಅಡಿಯಲ್ಲಿ ಯಾವುದೇ ಲಾಭದಾಯಕ ಹುದ್ದೆಯನ್ನು ಹೊಂದಿದ್ದರೆ
  • ನ್ಯಾಯಾಲಯವು ಅಭ್ಯರ್ಥಿಯನ್ನು ಮಾನಸಿಕ ಅಸ್ವಸ್ಥ ಎಂದು ಘೋಷಿಸಿದ್ದರೆ
  • ಸ್ವಯಂಪ್ರೇರಿತವಾಗಿ ವಿದೇಶಿ ಪೌರತ್ವವನ್ನು ಪಡೆದಿದ್ದರೆ
  • ಸಂಸತ್ತಿನ ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹಗೊಂಡಿದ್ದರೆ ಅಂತಹವರ ಸದಸ್ಯತ್ವ ರದ್ದುಗೊಳಿಸಲಾಗುತ್ತದೆ.

ಈ ಪ್ರಕರಣವನ್ನು ಲೋಕಸಭೆಯ ನೈತಿಕ ಸಮಿತಿಗೆ ಕಳುಹಿಸಲಾಗುವುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸಮಿತಿ ಸದಸ್ಯರು ತನಿಖೆ ನಡೆಸಿ ಓವೈಸಿ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಿದ್ದಾರೆ. ಅದಾಗ್ಯೂ ಓವೈಸಿ ಅವರ ಸದಸ್ಯತ್ವ ರದ್ದಾಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಇದನ್ನೂ ಓದಿ: Chhatrapal Singh Gangwar: ಪ್ರಮಾಣ ವಚನದ ವೇಳೆ ʼಜೈ ಹಿಂದೂ ರಾಷ್ಟ್ರʼ ಘೋಷಣೆ ಮೊಳಗಿಸಿದ ಬಿಜೆಪಿ ಸಂಸದ!

2018ರಲ್ಲಿ, ನ್ಯಾಷನಲ್ ಕಾನ್ಫರೆನ್ಸ್ ಶಾಸಕ ಮೊಹಮ್ಮದ್ ಅಕ್ಬರ್ ಲೋನ್ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ʼಪಾಕಿಸ್ತಾನ್ ಜಿಂದಾಬಾದ್ʼ ಎಂಬ ಘೋಷಣೆಯನ್ನು ಕೂಗಿದ್ದರು. ಇದರ ಹೊರತಾಗಿಯೂ ಅವರು ತಮ್ಮ ಸದಸ್ಯತ್ವವನ್ನು ಕಳೆದುಕೊಂಡಿರಲಿಲ್ಲ.

Continue Reading

ದೇಶ

IRCTC: ಆನ್‌ಲೈನ್‌ನಲ್ಲಿ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ ಮಾಡೋ ಮುನ್ನ ಹೊಸ ನಿಯಮದ ಬಗ್ಗೆ ಇರಲಿ ಗಮನ!

IRCTC: ಹೊಸ ನಿಯಮದ ಪ್ರಕಾರ ಒಬ್ಬ ವ್ಯಕ್ತಿ ತನ್ನ ಖಾತೆಯಿಂದ ಪ್ರತಿ ತಿಂಗಳು 12ವರೆಗೆ ಟಿಕೆಟ್‌ ಬುಕ್ಕಿಂಗ್‌ ಮಾಡಬಹುದಾಗಿದೆ. ಖಾತೆದಾರರು ಆಧಾರ್-ದೃಢೀಕರಣವನ್ನು ಹೊಂದಿದ್ದರೆ, ಅವರು ತಿಂಗಳಿಗೆ 24 ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ವೈಯಕ್ತಿಕ ಬಳಕೆದಾರ ID ಗಳನ್ನು ಬಳಸಿ ಬುಕ್ ಮಾಡಲಾದ ಟಿಕೆಟ್‌ಗಳು ಕೇವಲ ವೈಯಕ್ತಿಕ ಬಳಕೆಗಾಗಿ ಕಟ್ಟು ನಿಟ್ಟುಗೊಳಿಸಲಾಗಿದೆ. ಈ ಟಿಕೆಟ್‌ಗಳ ಯಾವುದೇ ವಾಣಿಜ್ಯ ಮಾರಾಟವನ್ನು ರೈಲ್ವೆ ಕಾಯಿದೆ, 1989 ರ ಸೆಕ್ಷನ್ 143 ರ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲಾಗುತ್ತದೆ.

VISTARANEWS.COM


on

IRCTC
Koo

ಹೊಸದಿಲ್ಲಿ: ನಮ್ಮ ಸ್ನೇಹಿತರಿಗೆ, ಸಂಬಂಧಿಕರಿಗೆ ಆನ್‌ಲೈನ್‌ನಲ್ಲಿ ರೈಲ್ವೆ ಟಿಕೆಟ್‌ ಬುಕ್ಕಿಂಗ್‌(Online Ticket Booking) ಮಾಡುವ ಅವಕಾಶವನ್ನು ತೆಗೆದು ಹಾಕಲಾಗಿದೆ ಎಂಬ ಸುದ್ದಿಯನ್ನು ರೈಲ್ವೇ ಸಚಿವಾಲಯ(Railway Ministry) ತಿರಸ್ಕರಿಸಿದೆ. ರೈಲ್ವೇ ಸಚಿವಾಲಯದ ವಕ್ತಾರ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಸುದ್ದಿ ಸುಳ್ಳು ಮತ್ತು ದಾರಿ ತಪ್ಪಿಸುವಂತ ವಿಚಾರ ಎಂದು ಸ್ಪಷ್ಟಪಡಿಸಿದೆ. ಬೇರೆ ಬೇರೆ ಸರ್‌ನೇಮ್‌ಗಳಿರುವವರೂ ಪರಸ್ಪರ ಟಿಕೆಟ್‌ ಬುಕ್ಕಿಂಗ್‌ ಮಾಡಿಕೊಳ್ಳಬಹುದು ಎಂದು ಹೇಳಿದೆ. ಇದರ ಜೊತೆಗೆ ರೈಲ್ವೇ ಇಲಾಖೆ(IRCTC) ವೆಬ್‌ಸೈಟ್‌ನಲ್ಲಿ ಇ ಟಿಕೆಟ್‌ ಬುಕ್ಕಿಂಗ್‌ ಮಾಡಲು ಕೆಲವೊಂದು ನಿಯಮಗಳನ್ನು ಜಾರಿಗೊಳಿಸಲಾಗಿದೆ. ಅದು ಸ್ನೇಹಿತರು, ಕುಟುಂಬಸ್ಥರ ಮತ್ತು ಸಂಬಂಧಿಕರಿಗೆ ವೈಯಕ್ತಿಕ ಯೂಸರ್‌ ಐಡಿ ಬಳಸಿ ಟಿಕೆಟ್‌ ಬುಕ್‌ ಮಾಡಬಹುದಾಗಿದೆ.

ಪ್ರತಿ ವ್ಯಕ್ತಿ ಎಷ್ಟು ಟಿಕೆಟ್‌ ಬುಕ್‌ ಮಾಡಬಹುದು?

ಹೊಸ ನಿಯಮದ ಪ್ರಕಾರ ಒಬ್ಬ ವ್ಯಕ್ತಿ ತನ್ನ ಖಾತೆಯಿಂದ ಪ್ರತಿ ತಿಂಗಳು 12ವರೆಗೆ ಟಿಕೆಟ್‌ ಬುಕ್ಕಿಂಗ್‌ ಮಾಡಬಹುದಾಗಿದೆ. ಖಾತೆದಾರರು ಆಧಾರ್-ದೃಢೀಕರಣವನ್ನು ಹೊಂದಿದ್ದರೆ, ಅವರು ತಿಂಗಳಿಗೆ 24 ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ವೈಯಕ್ತಿಕ ಬಳಕೆದಾರ ID ಗಳನ್ನು ಬಳಸಿ ಬುಕ್ ಮಾಡಲಾದ ಟಿಕೆಟ್‌ಗಳು ಕೇವಲ ವೈಯಕ್ತಿಕ ಬಳಕೆಗಾಗಿ ಕಟ್ಟು ನಿಟ್ಟುಗೊಳಿಸಲಾಗಿದೆ. ಈ ಟಿಕೆಟ್‌ಗಳ ಯಾವುದೇ ವಾಣಿಜ್ಯ ಮಾರಾಟವನ್ನು ರೈಲ್ವೆ ಕಾಯಿದೆ, 1989 ರ ಸೆಕ್ಷನ್ 143 ರ ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲಾಗುತ್ತದೆ.

ಆನ್‌ಲೈನ್‌ ಟಿಕೆಟ್‌ ಬುಕ್ಕಿಂಗ್‌ ಮಾಡುವುದು ಹೇಗೆ?

  1. IRCTC ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ನಿಮ್ಮ ಖಾತೆಗೆ ಲಾಗ್ ಇನ್ ಮಾಡಿ.
    “ಬುಕ್ ಯುವರ್ ಟಿಕೆಟ್” ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
    ಬೋರ್ಡಿಂಗ್ ಮತ್ತು ಡೆಸ್ಟಿನೇಶನ್‌ ವಿಳಾಸಗಳನ್ನು ಭರ್ತಿ ಮಾಡಿ.
    ಪ್ರಯಾಣದ ದಿನಾಂಕವನ್ನು ಆಯ್ಕೆಮಾಡಿ.
    ಪ್ರಯಾಣದ ವರ್ಗವನ್ನು ಆಯ್ಕೆಮಾಡಿ.
    ಲಭ್ಯವಿರುವ ರೈಲು ಆಯ್ಕೆಗಳನ್ನು ವೀಕ್ಷಿಸಿ.
    “ಬುಕ್ ನೌ” ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
    ಪ್ರಯಾಣಿಕರ ವಿವರಗಳನ್ನು ಭರ್ತಿ ಮಾಡಿ.
    ಮೊಬೈಲ್ ಸಂಖ್ಯೆ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಿ.

ಟಿಕೆಟ್‌ ಕ್ಯಾನ್ಸಲ್‌ ಮಾಡೋದು ಹೇಗೆ?

  1. IRCTC ವೆಬ್‌ಸೈಟ್‌ಗೆ ಹೋಗಿ ಮತ್ತು ನಿಮ್ಮ ಬಳಕೆದಾರಹೆಸರು ಮತ್ತು ಪಾಸ್‌ವರ್ಡ್ ಅನ್ನು ನಮೂದಿಸಿ.
    “ನನ್ನ ಖಾತೆ” ವಿಭಾಗದ ಮೇಲೆ ಸುಳಿದಾಡಿ ಮತ್ತು ಡ್ರಾಪ್-ಡೌನ್ ಮೆನುವಿನಿಂದ “ಬುಕ್ ಮಾಡಿದ ಟಿಕೆಟ್ ಇತಿಹಾಸ” ಆಯ್ಕೆಮಾಡಿ.
    ನೀವು ರದ್ದುಗೊಳಿಸಲು ಬಯಸುವ ಬುಕಿಂಗ್ ಅನ್ನು ಹುಡುಕಿ ಮತ್ತು “ಟಿಕೆಟ್ ರದ್ದುಗೊಳಿಸು” ಆಯ್ಕೆಯನ್ನು ಕ್ಲಿಕ್ ಮಾಡಿ.
    ಒಂದು ಪಾಪ್-ಅಪ್ ವಿಂಡೋ ಕಾಣಿಸುತ್ತದೆ.
    ನೀವು ರದ್ದುಗೊಳಿಸಲು ಬಯಸುವ ಪ್ರಯಾಣಿಕರನ್ನು ಆಯ್ಕೆ ಮಾಡಿ ಮತ್ತು ಮುಂದಿನ ಪೆಟ್ಟಿಗೆಯನ್ನು ಪರಿಶೀಲಿಸಿ

ಇದನ್ನೂ ಓದಿ: Manoj Kalyane: ಬಿಜೆಪಿ ಮುಖಂಡ, ಮಧ್ಯ ಪ್ರದೇಶ ಸಚಿವರ ಆಪ್ತನ ಹತ್ಯೆ; ಬೈಕ್‌ನಲ್ಲಿ ಬಂದು ಗುಂಡಿನ ಮಳೆಗೆರೆದ ದುಷ್ಕರ್ಮಿಗಳು

Continue Reading

ದೇಶ

Lok Sabha Speaker: ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

Lok Sabha Speaker: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ ಭಾರೀ ಕುತೂಹಲ ಮೂಡಿಸಿದ್ದ ಚುನಾವಣೆಯಲ್ಲಿ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

VISTARANEWS.COM


on

Lok Sabha Speaker
Koo

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್‌ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಅವರು ಸ್ಪೀಕರ್‌ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ (Lok Sabha Speaker). ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಓಂ ಬಿರ್ಲಾ ಅವರು ಬಹುಮತಗಳನ್ನು ಪಡೆದುಕೊಂಡರು. ಓಂ ಬಿರ್ಲಾ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವ ಪ್ರಸ್ತಾಪವನ್ನು ಪ್ರಧಾನಿ ನರೇಂದ್ರ ಮೋದಿ ಮಂಡಿಸಿದರು. ಬಳಿಕ ಹಲವು ನಾಯಕರು ಅನುಮೋದಿಸಿದರು. ಧ್ವನಿ ಮತದ ಮೂಲಕ ಸದಸ್ಯರು ಮತ ಚಲಾಯಿಸಿದರು. ಈ ಮೂಲಕ ಓಂ ಬಿರ್ಲಾ ಅವರು ಬಲರಾಮ್ ಜಖರ್ (1980-89) ನಂತರ ಎರಡು ಪೂರ್ಣ ಅವಧಿಗೆ ಆಯ್ಕೆಯಾದ ಎರಡನೇ ಸ್ಪೀಕರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾದರು. ಲೋಕಸಭೆಯ ಎರಡನೇ ಸ್ಪೀಕರ್ ಎಂ.ಎ.ಅಯ್ಯಂಗಾರ್ ಮತ್ತು ಗುರ್ದಿಯಾಲ್ ಸಿಂಗ್ ಧಿಲ್ಲಾನ್ ಈ ಹಿಂದೆ ಎರಡು ಬಾರಿ ಈ ಹುದ್ದೆಯನ್ನು ಆಯ್ಕೆಯಾಗಿದ್ದರೂ ಅವರ ಎರಡನೇ ಅವಧಿ ಒಂದೂವರೆ ವರ್ಷಕ್ಕಿಂತ ಹೆಚ್ಚು ಕಾಲ ಉಳಿದಿರಲಿಲ್ಲ. ಹಂಗಾಮಿ ಸ್ಪೀಕರ್‌ ಭಾರ್ತೃಹರಿ ಮಹತಾಬ್‌ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ವಿಪ್‌ ಜಾರಿ

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್‌ ಎಲ್ಲ ಸದಸ್ಯರಿಗೆ ಹಾಜರಾಗುವಂತೆ ಮಂಗಳವಾರ ವಿಪ್‌ ಜಾರಿ ಮಾಡಿದ್ದವು.

ಕೊನೆ ಕ್ಷಣದಲ್ಲಿ ಸುರೇಶ್‌ಗೆ ಬೆಂಬಲ ಸೂಚಿಸಿದ ಟಿಎಂಸಿ

ಇಂಡಿ ಬಣ ಅಭ್ಯರ್ಥಿಯಾಗಿ ಕೆ.ಸುರೇಶ್ ಅವರನ್ನು ಆಯ್ಕೆ ಮಾಡುವ ಮುನ್ನ ತಮ್ಮ ಬಳಿ ಸಮಾಲೋಚನೆಯನ್ನೇ ನಡೆಸಿಲ್ಲ ಎಂದು ಟಿಎಂಸಿ ಮಂಗಳವಾರ ಆರೋಪಿಸಿತ್ತು. ಕೆ. ಸುರೇಶ್ ಅವರನ್ನು ಇಂಡಿ ಬಣ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರ ಎಂದು ಟಿಎಂಸಿ ಹೇಳಿ ಇಂಡಿ ಬಣವನ್ನು ಆತಂಕಕ್ಕೆ ದೂಡಿತ್ತು. ಆದರೆ ಕೊನೆಕ್ಷಣದಲ್ಲಿ ಟಿಎಂಸಿ ಸದಸ್ಯರು ಸುರೇಶ್‌ ಅವರಿಗೆ ಬೆಂಬಲ ಸೂಚಿಸಿದರು.

ಇದನ್ನೂ ಓದಿ: Lok Sabha Speaker Election: ಲೋಕಸಭೆ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್‌ ಹುದ್ದೆಗೆ ನಡೆಯಲಿದೆ ಚುನಾವಣೆ

ಏಳು ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ ಮತ್ತು ಕೇರಳದ ವಯನಾಡು ಸ್ಥಾನಕ್ಕೆ ರಾಹುಲ್‌ ಗಾಂಧಿ ರಾಜೀನಾಮೆ ನೀಡಿದ ಕಾರಣ 535 ಸಂಸದರು ಇಂದು ಮತ ಚಲಾಯಿಸಿದ್ದರು. ಹೀಗಾಗಿ ಬಹುಮತಕ್ಕೆ 268 ಸದಸ್ಯರ ಬೆಂಬಲ ಅಗತ್ಯವಿತ್ತು. ಓಂ ಬಿರ್ಲಾ ಅವರಿಗೆ ಎನ್‌ಡಿಎ ಜತೆಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷ, ಇತರರು ಬೆಂಬಲ ಸೂಚಿಸಿದ್ದರಿಂದ ಸುಲಭವಾಗಿ 300ಕ್ಕೆಂತ ಹೆಚ್ಚು ಮತ ಪಡೆದುಕೊಂಡರು.

Continue Reading

ದೇಶ

VHP leader murder: VHP ಮುಖಂಡನ ಬರ್ಬರ ಹತ್ಯೆ; ಹಂತಕರ ಪತ್ತೆಗಾಗಿ NIA 10ಲಕ್ಷ ರೂ. ಬಹುಮಾನ ಘೋಷಣೆ

VHP leader murder: ಎನ್‌ಐಎ ಪ್ರಕಟಣೆ ಪ್ರಕಾರ ಹಂತಕರಾದ ಗರ್‌ಪಧನಾ ಗ್ರಾಮದ ನಿವಾಸಿಯಾಗಿರುವ ಕುಲದೀಪ್‌ ಸಿಂಗ್‌ ಪುತ್ರ ಹರ್ಜಿತ್‌ ಸಿಂಗ್‌ ಅಲಿಯಾಸ್‌ ಲಡ್ಡಿ ಮತ್ತು ಯಮುನಾ ನಗರ ನಿವಾಸಿ ಕುಲ್ಬೀರ್‌ ಸಿಂಗ್‌ ಪುತ್ರ ಸುಖ್ವಿಂದರ್‌ ಸಿಂಗ್‌ ವಿರುದ್ಧ ಹರಿಯಾಣದ ಜಗಧಾರಿ ಪೊಲೀಸ್‌ ಠಾಣೆಯಲ್ಲಿ ಮೇ 9ರಂದು ವಿಕಾಸ್‌ ಪ್ರಭಾಕರ್‌ ಹತ್ಯೆ ಪ್ರಕರಣ ದಾಖಲಾಗಿದೆ.

VISTARANEWS.COM


on

VHP leader murder
Koo

ಪಂಜಾಬ್‌: ವಿಶ್ವ ಹಿಂದೂ ಪರಿಷದ್‌(VHP leader murder) ಮುಖಂಡನ ಹಂತಕರ ಪತ್ತೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ತಲಾ ಹತ್ತು ಲಕ್ಷ ರೂ. ಬಹುಮಾನ ಘೋಷಿಸಿದೆ. ಅಷ್ಟೇ ಅಲ್ಲದೇ ಎನ್‌ಐಎ ಈ ಇಬ್ಬರು ಹಂತಕರ ಫೊಟೋವನ್ನೂ ಸಹ ಬಿಡುಗಡೆ ಮಾಡಿದೆ. ಕಳೆದ ತಿಂಗಳು ವಿಶ್ವ ಹಿಂದೂ ಪರಿಷದ್‌ ನಾಯಕ ವಿಕಾಸ್‌ ಪ್ರಭಾಕರ್‌ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಹಂತಕರ ಪತ್ತೆಗಾಗಿ ಎನ್‌ಐಎ ಪ್ರಕಟಣೆ ಹೊರಡಿಸಿದೆ.

ಎನ್‌ಐಎ ಪ್ರಕಟಣೆ ಪ್ರಕಾರ ಹಂತಕರಾದ ಗರ್‌ಪಧನಾ ಗ್ರಾಮದ ನಿವಾಸಿಯಾಗಿರುವ ಕುಲದೀಪ್‌ ಸಿಂಗ್‌ ಪುತ್ರ ಹರ್ಜಿತ್‌ ಸಿಂಗ್‌ ಅಲಿಯಾಸ್‌ ಲಡ್ಡಿ ಮತ್ತು ಯಮುನಾ ನಗರ ನಿವಾಸಿ ಕುಲ್ಬೀರ್‌ ಸಿಂಗ್‌ ಪುತ್ರ ಸುಖ್ವಿಂದರ್‌ ಸಿಂಗ್‌ ವಿರುದ್ಧ ಹರಿಯಾಣದ ಜಗಧಾರಿ ಪೊಲೀಸ್‌ ಠಾಣೆಯಲ್ಲಿ ಮೇ 9ರಂದು ವಿಕಾಸ್‌ ಪ್ರಭಾಕರ್‌ ಹತ್ಯೆ ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ?

ಪ್ರಭಾಕರ್ ಅವರು ವಿಎಚ್‌ಪಿಯ ನಂಗಲ್ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ದುರಂತವೆಂದರೆ, ಏಪ್ರಿಲ್ 13, 2024 ರಂದು ಪಂಜಾಬ್‌ನ ರೂಪನಗರ ಜಿಲ್ಲೆಯ ನಂಗಲ್ ಪಟ್ಟಣದ ಅವರ ಅಂಗಡಿಯಲ್ಲಿ ಮೋಟಾರ್‌ಸೈಕಲ್‌ನಲ್ಲಿ ಹೋಗುತ್ತಿದ್ದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಮಾರಣಾಂತಿಕವಾಗಿ ಗುಂಡು ಹಾರಿಸಿ ಕೊಂದಿದ್ದರು. ಇಬ್ಬರು ದುಷ್ಕರ್ಮಿಗಳು ರೂಪನಗರ ರೈಲು ನಿಲ್ದಾಣದ ಬಳಿ ಇರುವ ಬಗ್ಗಾ ಅವರ ಮಿಠಾಯಿ ಅಂಗಡಿಗೆ ನುಗ್ಗಿ ಅವರ ಮೇಲೆ ಗುಂಡು ಹಾರಿಸಿದರು. ತದನಂತರ ಸ್ಥಳದಿಂದ ಪರಾರಿಯಾಗಿದ್ದರು.

ಪ್ರಭಾಕರ್ ಹತ್ಯೆಯ ಹಿಂದಿನ ದೊಡ್ಡ ಪಿತೂರಿಯನ್ನು ಬಯಲಿಗೆಳೆಯಲು ಕೇಂದ್ರ ಗೃಹ ಸಚಿವಾಲಯವು ಪ್ರಕರಣದ ಕುರಿತು ಎನ್‌ಐಎ ತನಿಖೆಗೆ ಶಿಫಾರಸು ಮಾಡಿತ್ತು. ಆರೋಪಿಗಳ ವಿರುದ್ಧ ಐಪಿಸಿ, ಯುಎ(ಪಿ) ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಬಗ್ಗೆ ಯಾವುದೇ ಮಾಹಿತಿಯನ್ನು ಸಿಕ್ಕಿದರೆ ಎನ್‌ಐಎ ಪ್ರಧಾನ ಕಚೇರಿಯ ದೂರವಾಣಿ ಸಂಖ್ಯೆ: 011-24368800, WhatsApp/ಟೆಲಿಗ್ರಾಂ: +91-8585931100 ಮತ್ತು ಇಮೇಲ್ ಐಡಿ: do.nia@gov.in ನಲ್ಲಿ ಹಂಚಿಕೊಳ್ಳಬಹುದು ಎಂದು NIA ತಿಳಿಸಿದೆ. ಇದಲ್ಲದೆ, ದೂರವಾಣಿ ಸಂಖ್ಯೆ: 0172-2682900, 2682901 ಮೂಲಕ ಇಬ್ಬರ ವಿರುದ್ಧ ಮಾಹಿತಿಯನ್ನು ಹಂಚಿಕೊಳ್ಳಲು ಅದರ ಚಂಡೀಗಢ ಕಚೇರಿಯನ್ನು ಸಂಪರ್ಕಿಸಬಹುದು; WhatsApp/ಟೆಲಿಗ್ರಾಮ್ ಸಂಖ್ಯೆ: 7743002947ಮತ್ತು info-chd.nia@gov.in ಕ್ಕೂ ಸಂಪರ್ಕಿಸಬಹುದು ಎಂದು ಎನ್‌ಐಎ ಹೇಳಿದೆ.

ಇದನ್ನೂ ಓದಿ: Bengaluru Power Cut: ಜೂ.27ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Continue Reading
Advertisement
Jayam Ravi's wife Aarti Ravi removes all her Instagram photos
ಕಾಲಿವುಡ್6 seconds ago

Jayam Ravi: ಜಯಂ ರವಿ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಹಾದಿಯಲ್ಲಿ ಮತ್ತೊಂದು ಸ್ಟಾರ್‌ ಜೋಡಿ!

Gold Rate Today
ಚಿನ್ನದ ದರ25 mins ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕ್ರೀಡೆ30 mins ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Rashmika Mandanna Ayushmann Khurrana Team Up For Horror Comedy
ಟಾಲಿವುಡ್36 mins ago

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Self Harming
ಕರ್ನಾಟಕ41 mins ago

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

jewellery robbery case
ಕ್ರೈಂ42 mins ago

Robbery Case: 30 ಸೆಕೆಂಡ್‌ನಲ್ಲಿ ಇಡೀ ಜ್ಯುವೆಲ್ಲರಿ ದರೋಡೆ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Parineethi Chopra
Latest53 mins ago

Parineethi Chopra: ಏಳುಮಲ್ಲಿಗೆ ತೂಕದ ಚೆಲುವೆ ಪರಿಣಿತಿ ಚೋಪ್ರಾ ಸಿಕ್ಕಾಪಟ್ಟೆ ದಪ್ಪಗಾಗಿದ್ದು ಯಾಕೆ?

Asaduddin Owais
ದೇಶ56 mins ago

Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Actor Darshan support by anchor hemalatha
ಸ್ಯಾಂಡಲ್ ವುಡ್1 hour ago

‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Life threat
ಕರ್ನಾಟಕ1 hour ago

Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌