G20 Summit 2023: ದಿಲ್ಲಿ ಜಿ20 ಶೃಂಗ ಸಭೆ ಸಕ್ಸೆಸ್! ಮಾನವ ಕೇಂದ್ರಿತ ನೀತಿಗೆ ವಿಶ್ವನಾಯಕರ ಬಹುಪರಾಕ್! - Vistara News

ದೇಶ

G20 Summit 2023: ದಿಲ್ಲಿ ಜಿ20 ಶೃಂಗ ಸಭೆ ಸಕ್ಸೆಸ್! ಮಾನವ ಕೇಂದ್ರಿತ ನೀತಿಗೆ ವಿಶ್ವನಾಯಕರ ಬಹುಪರಾಕ್!

G20 Summit 2023: ಶನಿವಾರ ದಿಲ್ಲಿಯಲ್ಲಿ ಆರಂಭವಾದ ಜಿ20 ಶೃಂಗ ಸಭೆ ಬಹುತೇಕ ಯಶಸ್ವಿಯಾಗಿದೆ. ಭಾನುವಾರ ಕೂಡ ಸಭೆ ನಡೆಯಲಿದ್ದು, ಇನ್ನಷ್ಟು ಮಹತ್ವದ ಚರ್ಚೆಗಳಾಗಲಿವೆ.

VISTARANEWS.COM


on

Narendra Modi At G20 Summit
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದಿಲ್ಲಿಯ ಭಾರತ್ ಮಂಟಪದಲ್ಲಿ (Bharat Mandapam) ಶನಿವಾರ 18ನೇ ಜಿ20 ಶೃಂಗಸಭೆಗೆ (G20 Summit 2023) ಚಾಲನೆ ದೊರೆಯಿತು. ಈ ಸಭೆಗೆ ಜಾಗತಿಕ ನಾಯಕರನ್ನು ಸ್ವಾಗತಿಸಿದ ಪ್ರಧಾನಿ ನರೇಂದ್ರ ಮೋದಿ(PM Narendra Modi), ಮೊದಲ ಅಧಿವೇಶನ ಉದ್ದೇಶಿಸಿ ಮಾತನಾಡಿದರು. “ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ-20 ಸಭೆಯು ಜಗತ್ತನ್ನು ಒಳಗೊಂಡು ನಡೆಯುತ್ತಿರುವ ಸಭೆಯಾಗಿದೆ. ಜಗತ್ತು ಒಗ್ಗೂಡುವ ಮೂಲಕ ಏಳಿಗೆ ಹೊಂದಬೇಕು ಎಂಬುದು ನಮ್ಮ ಆಶಯವಾಗಿದೆ” ಎಂದು ತಿಳಿಸಿದರು. ಬಳಿಕ ಮಧ್ಯಾಹ್ನದ ಹೊತ್ತಿಗೆ ಭಾರತದ ಹೊರಡಿಸಿದ ನವದೆಹಲಿ ಘೋಷಣೆಗೆ (G20 New Delhi Leaders’ Declaration) ಶೃಂಗದಲ್ಲಿ ಪಾಲ್ಗೊಂಡ ಎಲ್ಲ ರಾಷ್ಟ್ರಗಳು ತಮ್ಮ ಸಮ್ಮತಿ ಸೂಚಿಸಿದವು. ಇದರೊಂದಿಗೆ 18ನೇ ಜಿ20 ಶೃಂಗ ಸಭೆ ಬಹುತೇಕ ಯಶಸ್ವಿಯಾದಂತಾಗಿದೆ. ಈ ವೇಳೆ, ಹಲವು ದ್ವಿಪಕ್ಷೀಯ ಮಾತುಕತೆಗಳೂ ಕೂಡ ಯಶಸ್ವಿಯಾಗಿ ನಡೆದವು. ಶೃಂಗಸಭೆಯ ಎರಡನೇ ದಿನವಾದ ಭಾನುವಾರ(ಸೆ.10) ಇನ್ನಷ್ಟು ಮಹತ್ವದ ಚರ್ಚೆಗಳು ನಡೆಯಲಿವೆ.

ಪ್ರಧಾನಿ ಮೋದಿ ಹೇಳಿದ್ದೇನು?

“ಭಾರತದಲ್ಲಿ ಸಬ್‌ ಕಾ ಸಾಥ್‌ ಸಬ್‌ ಕಾ ವಿಶ್ವಾಸ್‌ ಎಂಬ ಮಂತ್ರದಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಇದೇ ಸೂತ್ರದಂತೆ ವಿಶ್ವವೂ ಮುನ್ನಡೆದರೆ ಮಾನವ ಏಳಿಗೆಯು ಸಾಧ್ಯವಾಗಲಿದೆ. ಹಾಗಾಗಿ, ಎಲ್ಲರೂ ಒಗ್ಗೂಡಿ ಮಾನವ ಕುಲವನ್ನು ಏಳಿಗೆಯತ್ತ, ಅಭಿವೃದ್ಧಿಯತ್ತ ಕೊಂಡೊಯ್ಯೋಣ. ಜಗತ್ತು ಒಂದಾದರೆ ಅಭಿವೃದ್ಧಿ, ಜಗತ್ತು ಒಂದಾದರೆ ಶಾಂತಿ ಸ್ಥಾಪನೆ ಸಾಧ್ಯವಾಗಲಿದೆ. ಇದೇ ಮನಸ್ಥಿತಿಯಲ್ಲಿ ನಾವು ಕೊರೊನಾದಂತಹ ಸಾಂಕ್ರಾಮಿಕ ಕಾಯಿಲೆಯನ್ನು ತೊಲಗಿಸಿದ್ದೇವೆ” ಎಂದು ಹೇಳಿದರು.

“ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್ ಜತೆಗೆ ಸಬ್‌ ಕಾ ವಿಶ್ವಾಸ್ ಕೂಡ ಎಲ್ಲರ ಆದ್ಯತೆಯಾಗಿದೆ. ಜಾಗತಿಕ ಆರ್ಥಿಕತೆ, ಹವಾಮಾನ ಬದಲಾವಣೆ, ಶಾಂತಿ ಸ್ಥಾಪನೆ, ಸರ್ವ ಕ್ಷೇತ್ರಗಳ ಏಳಿಗೆಗೆ ಶ್ರಮಿಸೋಣ. ಹಾಗೆಯೇ, ಉಗ್ರವಾದದ ವಿರುದ್ಧ ಎಲ್ಲರೂ ಹೋರಾಟ ನಡೆಸುವ ಮೂಲಕ ಮಾನವ ಕುಲವನ್ನು ಶಾಂತಿಯತ್ತ ಕೊಂಡೊಯ್ಯೋಣ. ಭಾರತದಲ್ಲಿ ಜಿ 20 ಶೃಂಗಸಭೆಯು ಜನರ ಸಭೆಯಾಗಿ ಪರಿವರ್ತನೆಯಾಗಿದೆ” ಎಂದರು.

“ಜಿ 20 ಶೃಂಗಸಭೆಗೆ ಭಾರತದ 140 ಕೋಟಿ ಜನರು ಕೂಡ ಯೋಗದಾನ ನೀಡಿದ್ದಾರೆ. ಭಾರತದ ಪ್ರಮುಖ ನಗರಗಳಲ್ಲಿ ಸಭೆ ನಡೆದಿರುವುದು ಜನರ ಸಹಭಾಗಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ” ಎಂದು ಹೇಳಿದರು. ಇದಾದ ಬಳಿಕ ಜಿ 20 ನಾಯಕರು ಫೋಟೊ ಸೆಷನ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಎಲ್ಲ ನಾಯಕರು ಒಗ್ಗೂಡಿ ಫೋಟೊ ತೆಗೆಸಿಕೊಳ್ಳುವ ಮೂಲಕ ಒಗ್ಗಟ್ಟಿನ ಸಂದೇಶ ರವಾನಿಸಲಿದ್ದಾರೆ.

ನಾಯಕರ ನಿರ್ಣಯ ಅಂಗೀಕರಿಸಿದ ಮೋದಿ

ಮಧ್ಯಾಹ್ನ ಊಟದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಅಧಿವೇಶನ ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ, ಜಿ 20 ಶೃಂಗಸಭೆಯ ನಾಯಕರ ನಿರ್ಣಯವನ್ನು ಅಂಗೀಕರಿಸಿದರು. “ಜಿ 20 ಸಭೆಯ ಎಲ್ಲ ನಾಯಕರು ಸಮ್ಮತಿಯಿಂದ ನಿರ್ಣಯ ತೆಗೆದುಕೊಳ್ಳಲಾಗಿದೆ” ಎಂದು ಘೋಷಿಸಿದರು.

“ನಮ್ಮ ಅಧಿಕಾರಿಗಳ ಪರಿಶ್ರಮ ಹಾಗೂ ಜಿ 20 ನಾಯಕರ ಸಹಕಾರದಿಂದಾಗಿ ಜಿ 20 ನಾಯಕರ ನಿರ್ಣಯವನ್ನು ಅಂಗೀಕರಿಸಲಾಗುತ್ತಿದೆ. ನಿರ್ಣಯ ಅಳವಡಿಸಿಕೊಂಡ ಕುರಿತು ನಾನು ಘೋಷಿಸಲು ಖುಷಿಯಾಗುತ್ತಿದೆ. ಇದಕ್ಕಾಗಿ ಎಲ್ಲರಿಗೂ ಅಭಿನಂದನೆಗಳು” ಎಂದು ಮೋದಿ ಹೇಳಿದರು. ಜಿ 20 ಶೃಂಗಸಭೆಯ ಎರಡನೇ ಅಧಿವೇಶನವು ‘ಒಂದು ಕುಟುಂಬ’ (One Family) ವಿಷಯದ ಆಧಾರದ ಮೇಲೆ ನಡೆಯುತ್ತಿದೆ.

ಉಕ್ರೇನ್‌ ಬಿಕ್ಕಟ್ಟಿನ ವಿಷಯದ ಕುರಿತು ಪ್ರಸ್ತಾಪ

ಉಕ್ರೇನ್‌ನಲ್ಲಿ ರಷ್ಯಾ ನಡೆಸುತ್ತಿರುವ ಆಕ್ರಮಣಕ್ಕೆ ವಿಷಯಕ್ಕೆ ಸಂಬಂಧಿಸಿದಂತೆ ಜಿ 20 ಶೃಂಗಸಭೆಯಲ್ಲಿ ತೆಗೆದುಕೊಂಡ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. ಉಕ್ರೇನ್‌ನಲ್ಲಿ ಶಾಂತಿಸ್ಥಾಪನೆ ಕುರಿತು ಗ್ರೂಪ್‌ನ ಎಲ್ಲ ರಾಷ್ಟ್ರಗಳು ಒಂದೇ ಅಭಿಪ್ರಾಯ ಮಂಡಿಸಿವೆ ಎಂದು ತಿಳಿದುಬಂದಿದೆ. ನಿರ್ಣಯದ ಕುರಿತು ಕೆಲವೇ ಕ್ಷಣಗಳಲ್ಲಿ ಪ್ರಕಟಣೆ ಹೊರಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಜಿ20 ನವದೆಹಲಿ ವಿಶ್ವ ನಾಯಕರ ಡಿಕ್ಲೆರೇಷನ್ ಹೀಗಿದೆ…

-ಬಲಿಷ್ಠ, ಸುಸ್ಥಿರ, ಸಮತೋಲಿತ ಮತ್ತು ಅಂತರ್ಗತ ಬೆಳವಣಿಗೆಯ ಉತ್ತೇಜನ
-ಸುಸ್ಥಿರ ಭವಿಷ್ಯಕ್ಕಾಗಿ ಹಸಿರು ಅಭಿವೃದ್ಧಿ ಒಪ್ಪಂದ
-ನೀಲಿ (ಸಮುದ್ರ) ಆರ್ಥಿಕತೆ, ಆಹಾರ ಭದ್ರತೆ ಕುರಿತಾದ ಘೋಷಣೆಗಳು ಅನುಮೋದನೆ
-ಬಲವಾದ, ಸಮರ್ಥನೀಯ, ಸಮತೋಲಿತ ಮತ್ತು ಅಂತರ್ಗತ ಬೆಳವಣಿಗೆ, ಜಾಗತಿಕ ಆರ್ಥಿಕ ಪರಿಸ್ಥಿತಿ
-ವಿಶ್ವದ ಬೆಳವಣಿಗೆಗಾಗಿ ಉತ್ತಮ ವ್ಯಾಪಾರ ಸಂಬಂಧ ಭವಿಷ್ಯದ ದೃಷ್ಟಿಯಲ್ಲಿ ತಯಾರಿ ನಡೆಸುವುದು
-ಆರ್ಥಿಕ ಒಳಗೊಳ್ಳುವಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಡುವುದು
-ಸುಸ್ಥಿರ ಅಭಿವೃದ್ಧಿ ಗುರಿಗಳ ಮೇಲೆ ಪ್ರಗತಿ ಸಾಧಿಸುವುದು ಹಾಗೂ ಅದರ ವೇಗವನ್ನ ಹೆಚ್ಚುಗೊಳಿಸುವುದು
-ವಿಶ್ವದಲ್ಲಿನ ಹಸಿವು ಮತ್ತು ಅಪೌಷ್ಟಿಕತೆಯನ್ನು ನಿವಾರಿಸುವ ಕೆಲಸ ಮಾಡುವುದು
-ಆಹಾರ ಮತ್ತು ಅಭದ್ರತೆಯ ಮೇಲೆ ಆರ್ಥಿಕ ಪರಿಣಾಮಗಳ ಬಗ್ಗೆ ಕಾಳಜಿ ವಹಿಸುವುದು
-ಜಾಗತಿಕ ಆರೋಗ್ಯ ಬಲಪಡಿಸುವುದು ಹಾಗೂ ಮಹತ್ತರ ಆರೋಗ್ಯ ವಿಧಾನವನ್ನು ಕಾರ್ಯಗತಗೊಳಿಸುವತ್ತ ಕೆಲಸ ಮಾಡುವುದು
-ಗುಣಮಟ್ಟದ ಶಿಕ್ಷಣವನ್ನು ನೀಡುವುದು
-ಸುಸ್ಥಿರ ಭವಿಷ್ಯಕ್ಕಾಗಿ ಹಸಿರು ಅಭಿವೃದ್ಧಿ ಒಪ್ಪಂದ
-ಹವಾಮಾನ ಬದಲಾವಣೆ ಮತ್ತು ಪರಿವರ್ತನೆಯ ಹಾದಿಗಳಿಂದ ಉಂಟಾಗುವ ಆರ್ಥಿಕ ಅಪಾಯಗಳು
-ಸುಸ್ಥಿರ ಅಭಿವೃದ್ಧಿ ಬಗ್ಗೆ ಗಮನ ಹರಿಸಿ ಜೀವನಶೈಲಿಯತ್ತ ಗಮನ ಕೊಡುವುದು
-ಸುಸ್ಥಿರ, ಕೈಗೆಟಕುವ ರೀತಿಯಲ್ಲಿ ಸುಸ್ಥಿರ ಹಣಕಾಸು ವ್ಯವಸ್ಥೆ ಅನುಷ್ಠಾನಗೊಳಿಸುವುದು
-ಪರಿಸರ ವ್ಯವಸ್ಥೆಗಳನ್ನು ಸಂರಕ್ಷಿಸುವುದು, ಸುಸ್ಥಿರವಾಗಿ ಬಳಸುವುದು ಮತ್ತು ಮರುಸ್ಥಾಪಿಸುವುದು
-ನೀಲಿ (ಸಾಗರ ) ಆಧಾರಿತ ಆರ್ಥಿಕತೆಯನ್ನು ಬಳಸಿಕೊಳ್ಳುವುದು ಮತ್ತು ಸಂರಕ್ಷಿಸುವುದು
-ಪ್ಲಾಸ್ಟಿಕ್ ಮಾಲಿನ್ಯವನ್ನು ತಡೆಯುವುದು
-ಮುಂದೆ ನಗರಗಳಾಗಿ ಬೆಳೆಯುವ ಪ್ರದೇಶಗಳಿಗೆ ಹಣಕಾಸು ಒದಗಿಸುವುದು
-ವಿಪತ್ತು ಅಪಾಯವನ್ನು ಕಡಿಮೆ ಮಾಡುವುದು ಮತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯವನ್ನು ನಿರ್ಮಿಸುವುದು
-21ನೇ ಶತಮಾನಕ್ಕೆ ಬಹುಪಕ್ಷೀಯ ಸಂಸ್ಥೆಗಳನ್ನ ಸ್ಥಾಪನೆ ಮಾಡುವತ್ತ ಕೆಲಸ ನಿರ್ವಹಿಸುವುದು
-ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳನ್ನು ಸುಧಾರಿಸುವುದು
-ಜಾಗತಿಕ ಸಾಲದ ದೋಷಗಳನ್ನು ನಿರ್ವಹಿಸುವುದು
-ತಾಂತ್ರಿಕ ರೂಪಾಂತರ ಮತ್ತು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಬಳಕೆ ಮಾಡುವುದು
-ಡಿಜಿಟಲ್ ಆರ್ಥಿಕತೆಯಲ್ಲಿ ಸುರಕ್ಷತೆ, ಭದ್ರತೆ, ಸ್ಥಿತಿಸ್ಥಾಪಕತ್ವ ಮತ್ತು ವಿಶ್ವಾಸವನ್ನ ನಿರ್ಮಾಣ ಮಾಡುವುದು
-ಕ್ರಿಪ್ಟೋ-ಸ್ವತ್ತುಗಳು, ನೀತಿ ಮತ್ತು ನಿಯಂತ್ರಣದ ಬಗ್ಗೆ ಗಮನ ಹರಿಸುವುದು
-ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ ಹಾಗೂ ಡಿಜಿಟಲ್ ಪರಿಸರ ವ್ಯವಸ್ಥೆಗಳನ್ನು ಬೆಳೆಸುವುದು
-ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಅನ್ನು ಜವಾಬ್ದಾರಿಯುತವಾಗಿ ಎಲ್ಲರೂ ಬಳಸಿಕೊಳ್ಳುವಂತೆ ಮಾಡುವುದು
-ಅಂತಾರಾಷ್ಟ್ರೀಯ ತೆರಿಗೆ
-ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ
-ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣವನ್ನು ಹೆಚ್ಚಿಸುವುದು
-ಒಂದು ಭೂಮಿ ಒಂದು ಕುಟುಂಬ ಒಂದು ಭವಿಷ್ಯದ ಗುರಿ
-ಮಹಿಳೆಯರ ಆಹಾರ ಭದ್ರತೆ, ಪೋಷಣೆ ಮತ್ತು ಯೋಗಕ್ಷೇಮವನ್ನು ಭದ್ರಪಡಿಸುವುದು
-ಮಹಿಳಾ ಸಬಲೀಕರಣದ ಮೇಲೆ ವರ್ಕಿಂಗ್ ಗ್ರೂಪ್ ರಚನೆ
-ಆರ್ಥಿಕ ವಲಯದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುವುದು
-ಭಯೋತ್ಪಾದನೆ ಮತ್ತು ಮನಿ ಲಾಂಡರಿಂಗ್ ನ್ನ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕಾರ್ಯ ಸನ್ನದ್ದಾರಾಗುವುದು.

ಈ ಸುದ್ದಿಯನ್ನೂ ಓದಿ: G20 Summit 2023: ನರೇಂದ್ರ ಮೋದಿಯನ್ನು ಶ್ಲಾಘಿಸಿದ ಅಮೆರಿಕ ಅಧ್ಯಕ್ಷ ಬೈಡೆನ್

ಅಮೆರಿಕ ಅಧ್ಯಕ್ಷರಿಗೆ ಕೊನಾರ್ಕ್ ಚಕ್ರದ ಮಾಹಿತಿ ನೀಡಿದ ಪಿಎಂ

ಜಿ 20 ಶೃಂಗಸಭೆ ನಡೆಯುತ್ತಿರುವ ಭಾರತ ಮಂಟಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ನಾಯಕರನ್ನು ಸ್ವಾಗತಿಸಿದರು. ನಿಗದಿತ ಸ್ಥಳದಲ್ಲಿ ನಿಂತು ಒಬ್ಬೊಬ್ಬರೇ ನಾಯಕರನ್ನು ಮೋದಿ ಆತ್ಮೀಯವಾಗಿ ಸ್ವಾಗತಿಸಿದರು. ಇದೇ ವೇಳೆ ಮೋದಿ (G20 Summit 2023) ಅವರು ನಿಂತಿದ್ದ ಜಾಗದಲ್ಲಿ ಕೊನಾರ್ಕ್‌ ಚಕ್ರದ ಬೃಹತ್‌ ಚಿತ್ರವನ್ನು ಅಳವಡಿಸಿದ್ದು, ಅದು ಗಮನ ಸೆಳೆಯಿತು. ಹಾಗೆಯೇ, ನರೇಂದ್ರ ಮೋದಿ ಅವರು ಕೊನಾರ್ಕ್‌ ಚಕ್ರದ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರಿಗೂ ವಿವರಿಸಿದರು.

ವಿವಿಧ ದ್ವಿಪಕ್ಷೀಯ ಮಾತುಕತೆ

ಜಿ20 ಶೃಂಗ ಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ರಾಷ್ಟ್ರಗಳ ಜತೆಗೆ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದರು. ಬ್ರಿಟನ್‌ ಪ್ರಧಾನಿ ರಿಷಿ ಸುನಕ್, ಜಪಾನ್‌ ಪ್ರಧಾನಿ ಫುಮಿಯೋ ಕಿಶಿದಾ ಸೇರಿ ಐದು ರಾಷ್ಟ್ರಗಳ ನಾಯಕರ ಜತೆ ಮೋದಿ ಮಹತ್ವದ ವಿಷಯಗಳನ್ನು ಚರ್ಚಿಸಿದ್ದಾರೆ. ಉಭಯ ದೇಶಗಳ ಸಂಬಂಧ ವೃದ್ಧಿ, ವ್ಯಾಪಾರ-ಒಪ್ಪಂದ ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.

ಗ್ಲೋಬರ್ ಬಯೋಫ್ಯುಯೆಲ್ಸ್ ಅಲಯನ್ಸ್

ಜಿ20 ಶೃಂಗ ಸಭೆಯ ಸಂದರ್ಭದಲ್ಲಿ ಭಾರತದ ನಿರಂತ್ರ ಪ್ರಯತ್ನಗಳ ಫಲವಾಗಿ ಗ್ಲೋಬಲ್ ಬಯೋಫ್ಯುಯೆಲ್ಸ್ ಅಲಯನ್ಸ್ ರಚನೆಯಾಗಿದೆ. ಭಾರತ, ಬ್ರೆಜಿಲ್, ಅಮೆರಿಕ ಸದಸ್ಯ ರಾಷ್ಟ್ರಗಳಾಗಿದ್ದು, ಅರ್ಜಿಂಟಿನಾ, ಕೆನಡಾ, ಇಟಲಿ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಸಿಂಗಾಪುರ್, ಮಾರಿಷಿಸ್ ಮತ್ತು ಯುಎಇ ಆಹ್ವಾನಿತ ಸದಸ್ಯ ರಾಷ್ಟ್ರಗಳಾಗಿವೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Major Accident: ಭೀಕರ ಅಪಘಾತ; ಟ್ರ್ಯಾಕ್ಟರ್-ಟ್ರಾಲಿ ಕೊಳಕ್ಕೆ ಬಿದ್ದು 15 ಮಂದಿ ಸಾವು

Major Accident: ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್-ಟ್ರಾಲಿ ಕೊಳಕ್ಕೆ ಬಿದ್ದು ಈ ದುರಂತ ಸಂಭವಿಸಿದೆ.

VISTARANEWS.COM


on

accident in up
Koo

ಲಕ್ನೋ: ಉತ್ತರ ಪ್ರದೇಶದ ಕಾಸ್ಗಂಜ್ (Kasganj) ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ (Major Accident) ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗ್ರಾಮಸ್ಥರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿ ಕೊಳಕ್ಕೆ ಬಿದ್ದು ಈ ದುರಂತ ಸಂಭವಿಸಿದೆ. ಮಾಘ ಪೂರ್ಣಿಮೆ (Magh Purnima)ಯ ಪ್ರಯುಕ್ತ ಗಂಗಾ ನದಿಯಲ್ಲಿನ ಪವಿತ್ರ ಸ್ನಾನಕ್ಕಾಗಿ ಗ್ರಾಮಸ್ಥರು ತೆರಳುತ್ತಿದ್ದಾಗ ಈ ಅವಘಢ ಸಂಭವಿಸಿದೆ.

ಪಟಿಯಾಲಿ ಕೊಟ್ವಾಲಿ ಪ್ರದೇಶದ ದರಿಯಾವ್ಗಂಜ್ ನಿಲ್ದಾಣದ ಬಳಿ ಸಂಭವಿಸಿದ ಅಪಘಾತದಲ್ಲಿ ಎಂಟು ಮಕ್ಕಳು ಮತ್ತು ಏಳು ಮಹಿಳೆಯರು ಸೇರಿದಂತೆ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಲಿಗಢ ವಲಯದ ಐಜಿ ಶಲಭ್ ಮಾಥುರ್ ಮಾಹಿತಿ ನೀಡಿದ್ದಾರೆ. ರಸ್ತೆಯಲ್ಲಿ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ಟ್ರ್ಯಾಕ್ಟರ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದ ಎಂದು ಅವರು ತಿಳಿಸಿದ್ದಾರೆ.

ಗ್ರಾಮಸ್ಥರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಕೆಸರು ತುಂಬಿದ ಕೊಳಕ್ಕೆ ಪಲ್ಟಿಯಾಗಿದ್ದರಿಂದ ಹೆಚ್ಚಿನ ಸಾವು ನೋವು ಸಂಭವಿಸಿದೆ. ಗಾಯಗೊಂಡವರನ್ನು ಕಾಸ್ಗಂಜ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಆಘಾತ ವ್ಯಕ್ತಪಡಿಸಿದ ಯೋಗಿ

ಅಪಘಾತದ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಘಾತ ವ್ಯಕ್ತಪಡಿಸಿದ್ದಾರೆ. ತೀವ್ರ ದುಃಖ ವ್ಯಕ್ತಪಡಿಸಿದ ಅವರು, ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರಿಗೆ ತ್ವರಿತ ಮತ್ತು ಸಮರ್ಪಕ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕಾಸ್ಗಂಜ್ ಜಿಲ್ಲೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ತ್ವರಿತ ರಕ್ಷಣಾ ಕಾರ್ಯಾಚರಣೆಗೆ ಆದೇಶಿಸಿದ್ದಾರೆ.

ಇದನ್ನೂ ಓದಿ: Road Accident: ರಾಯಬಾಗದಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಐವರ ಸಾವು

Continue Reading

ಪ್ರಮುಖ ಸುದ್ದಿ

Lok Sabha Election 2024: 4 ರಾಜ್ಯಗಳಲ್ಲಿ ಬಿಜೆಪಿ ವಿರುದ್ಧ ಎಎಪಿ- ಕಾಂಗ್ರೆಸ್ ಮೈತ್ರಿ ಹೋರಾಟ; ಯಾವ ರಾಜ್ಯ, ಎಷ್ಟು ಸೀಟು?

Lok Sabha Election 2024: ಕಾಂಗ್ರೆಸ್‌ ಹಾಗೂ ಆಪ್ ನಾಲ್ಕು ರಾಜ್ಯಗಳಲ್ಲಿ ಸೀಟು ಹಂಚಿಕೆ ಮಾಡಿಕೊಂಡಿದ್ದರೂ‌, ಪಂಜಾಬ್‌ನಲ್ಲಿ ಮಾತ್ರ ಯಾವುದೇ ಮೈತ್ರಿಗೆ ಸಿದ್ಧವಾಗಿಲ್ಲ.

VISTARANEWS.COM


on

rahul gandhi mallikarjun kharge arvind kejriwal
Koo

ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆಗೆ (Lok Sabha Election 2024) ಆಮ್ ಆದ್ಮಿ ಪಕ್ಷ (Aam Admi Party) ಮತ್ತು ಕಾಂಗ್ರೆಸ್ (Congress) ಮೈತ್ರಿಯನ್ನು ಶನಿವಾರ ಖಚಿತಪಡಿಸಿವೆ. ಎರಡೂ ಪಕ್ಷಗಳು ದಿಲ್ಲಿ, ಗೋವಾ, ಗುಜರಾತ್ ಮತ್ತು ಹರಿಯಾಣ ರಾಜ್ಯಗಳಲ್ಲಿ ತಮ್ಮ ಸೀಟು ಹಂಚಿಕೆ (Seat sharing) ಒಪ್ಪಂದವನ್ನು ಮಾಡಿಕೊಂಡಿವೆ.

ಗುಜರಾತ್‌ನಲ್ಲಿ ಕಾಂಗ್ರೆಸ್ 24 ಸ್ಥಾನಗಳಲ್ಲಿ, ಎಎಪಿ 2 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಹರಿಯಾಣದಲ್ಲಿ ಕಾಂಗ್ರೆಸ್ 9 ಸ್ಥಾನಗಳಲ್ಲಿ, ಎಎಪಿ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿದೆ. ದೆಹಲಿಯಲ್ಲಿ ಎಎಪಿ ನಾಲ್ಕು, ಕಾಂಗ್ರೆಸ್ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಲಿದೆ. ಗೋವಾದಲ್ಲಿ ಎರಡು ಲೋಕಸಭಾ ಕ್ಷೇತ್ರಗಳಿದ್ದು, ಇಲ್ಲಿ ಆಪ್‌ ಪ್ರಾಬಲ್ಯ ಇಲ್ಲದಿರುವುದರಿಂದ ಎರಡರಲ್ಲೂ ಕಾಂಗ್ರೆಸ್ ಸ್ಪರ್ಧಿಸಲಿದೆ. ಎರಡೂ ಪಕ್ಷಗಳೂ ಅಸ್ಸಾಂನಲ್ಲಿ ಸ್ಪರ್ಧೆಯ ಕುರಿತು ಚರ್ಚೆ ನಡೆಸುತ್ತಿವೆ.

“ಗುಜರಾತ್ 26 ಲೋಕಸಭಾ ಸ್ಥಾನಗಳನ್ನು ಹೊಂದಿದ್ದು, ಕಾಂಗ್ರೆಸ್ 24ರಲ್ಲಿ ಸ್ಪರ್ಧಿಸಲಿದೆ. ಎಎಪಿ ತನ್ನ ಅಭ್ಯರ್ಥಿಗಳನ್ನು ಭರೂಚ್ ಮತ್ತು ಭಾವನಗರದಲ್ಲಿ ಹಾಕಲಿದೆ. ಹರಿಯಾಣ 10 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 9ರಲ್ಲಿ ಸ್ಪರ್ಧಿಸಲಿದ್ದು, ಆಪ್‌ ತನ್ನ ಅಭ್ಯರ್ಥಿಯನ್ನು ಕುರುಕ್ಷೇತ್ರ ಲೋಕಸಭಾ ಕ್ಷೇತ್ರದಲ್ಲಿ ಹಾಕಲಿದೆ. ದೆಹಲಿಯಲ್ಲಿ ಆಪ್‌ ಹೊಸ ದೆಹಲಿ, ಪಶ್ಚಿಮ ದೆಹಲಿ, ದಕ್ಷಿಣ ದೆಹಲಿ ಮತ್ತು ಪೂರ್ವ ದೆಹಲಿಯಲ್ಲಿ ಸ್ಪರ್ಧಿಸಲಿದೆ. ಚಾಂದಿನಿ ಚೌಕ್, ಈಶಾನ್ಯ ಮತ್ತು ವಾಯುವ್ಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ” ಎಂದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಮುಕುಲ್ ವಾಸ್ನಿಕ್ ಹೇಳಿದ್ದಾರೆ.

ಉಭಯ ಪಕ್ಷಗಳ ನಾಯಕರ ಸುದೀರ್ಘ ಚರ್ಚೆಯ ನಂತರ, ಚಂಡೀಗಢ ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧಿಸಲು ನಿರ್ಧರಿಸಿದೆ ಎಂದು ವಾಸ್ನಿಕ್ ಹೇಳಿದರು. ಎರಡೂ ಪಕ್ಷಗಳು ಪಂಜಾಬ್‌ನಲ್ಲಿ ಸ್ಪರ್ಧೆಯ ಬಗ್ಗೆ ಯಾವುದೇ ಮಾತನಾಡಿಲ್ಲ. ಇಲ್ಲಿ 2022ರಲ್ಲಿ ಕಾಂಗ್ರೆಸ್ ಅನ್ನು ಪದಚ್ಯುತಗೊಳಿಸಿದ ಆಪ್‌ ನಂತರ ಸರ್ಕಾರವನ್ನು ರಚಿಸಿತ್ತು. ಈ ತಿಂಗಳ ಆರಂಭದಲ್ಲಿ ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ (Arvind Kejriwal), ತಮ್ಮ ಪಕ್ಷವು ಪಂಜಾಬ್‌ನ ಎಲ್ಲಾ 13 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದರು.

ಪಂಜಾಬ್ ಮತ್ತು ದೆಹಲಿಯಲ್ಲಿ ಹಳೆಯ ಪ್ರತಿಸ್ಪರ್ಧಿಗಳಾದ ಎಎಪಿ ಮತ್ತು ಕಾಂಗ್ರೆಸ್ ಕಳೆದ ತಿಂಗಳು ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದವು. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಈ ಮೈತ್ರಿ ಅಭ್ಯರ್ಥಿ ಗೆದ್ದ ಘೋಷಣೆ ಮಾಡಲಾಗಿದೆ.

“ಇಂದು ದೇಶ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದೆ. ಬಿಜೆಪಿ ಸರಕಾರ ಒಂದೊಂದಾಗಿ ಎಲ್ಲಾ ಸಂಸ್ಥೆಗಳನ್ನು ಮುಗಿಸುತ್ತಿದೆ. ಚುನಾವಣೆಗಳಲ್ಲಿ ಅಕ್ರನ ನಡೆಸಲಾಗುತ್ತಿದೆ. ಚುನಾವಣೆಯಲ್ಲಿ ಗೆಲ್ಲಲು ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಹಾಕಲಾಗುತ್ತಿದೆ. ರೈತರಿಗೆ ಅನ್ಯಾಯವಾಗುತ್ತಿದೆ. ದೇಶದ ಜನರು ನಿರುದ್ಯೋಗ ಮತ್ತು ಹಣದುಬ್ಬರದಿಂದ ನರಳುತ್ತಿದ್ದಾರೆ. ದೇಶಕ್ಕೆ ಪ್ರಾಮಾಣಿಕ ಮತ್ತು ಬಲಿಷ್ಠ ಪರ್ಯಾಯದ ಅಗತ್ಯವಿದೆ” ಎಂದು ಎಎಪಿ ಸಂಸದ ಸಂದೀಪ್ ಪಾಠಕ್ ಮೈತ್ರಿಯನ್ನು ಘೋಷಿಸಿದ ನಂತರ ಹೇಳಿದರು.

“ಇದನ್ನು ಗಮನದಲ್ಲಿಟ್ಟುಕೊಂಡು, ನಮ್ಮದೇ ಆದ ರಾಜಕೀಯ ಹಿತಾಸಕ್ತಿಗಳನ್ನು ಬದಿಗಿಟ್ಟು ಮತ್ತು ರಾಷ್ಟ್ರದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಾವು ಈ ಮೈತ್ರಿಕೂಟದಲ್ಲಿ ಒಂದಾಗಿದ್ದೇವೆ. ಇಂದು ದೇಶ ಮುಖ್ಯ, ಪಕ್ಷ ಗೌಣ. ಕಾಂಗ್ರೆಸ್ ಇಲ್ಲಿಂದ, ಎಎಪಿ ಅಲ್ಲಿಂದ ಸ್ಪರ್ಧಿಸಿದರೂ ಒಟ್ಟಾರೆಯಾಗಿ ಇಂಡಿಯಾ ಮೈತ್ರಿಕೂಟ ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ಗೆ 7ನೇ ಸಮನ್ಸ್‌ ನೀಡಿದ ಇ.ಡಿ; ಅರೆಸ್ಟ್‌ ಮಾಡ್ತಾರಾ?

Continue Reading

ವೈರಲ್ ನ್ಯೂಸ್

Viral Video: ಇಂಡಿಗೊ ವಿಮಾನದಲ್ಲಿ ಮತ್ತೊಂದು ಎಡವಟ್ಟು; ಆಹಾರ ಪೊಟ್ಟಣದ ಮೇಲೆ ಜಿರಳೆ ನರ್ತನ!

Viral Video: ಇಂಡಿಗೊ ವಿಮಾನದ ಆಹಾರ ಸಂಗ್ರಹದ ಜಾಗದಲ್ಲಿ ಜಿರಳೆಗಳು ಓಡಾಡುತ್ತಿರುವ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

indigo
Koo

ನವದೆಹಲಿ: ಇಂಡಿಗೊ ವಿಮಾನದ (IndiGo plane) ಆಹಾರ ಸಂಗ್ರಹದ ಜಾಗದಲ್ಲಿ ಜಿರಳೆಗಳು ಓಡಾಡುತ್ತಿರುವ ವಿಡಿಯೊವನ್ನು ಪತ್ರಕರ್ತ ತರುಣ್‌ ಶುಕ್ಲಾ ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಹಂಚಿಕೊಂಡಿದ್ದು, ವೈರಲ್‌ ಆಗಿದೆ (Viral Video). ವಿಮಾನಯಾನ ಸಂಸ್ಥೆಯಲ್ಲಿನ ನೈರ್ಮಲ್ಯ, ಆಹಾರ ಸುರಕ್ಷತೆ ಬಗ್ಗೆ ಇದು ಪ್ರಶ್ನೆ ಹುಟ್ಟು ಹಾಕಿದೆ. ಅನೇಕರು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಕೂಡಲೆ ಸಮಸ್ಯೆಗೆ ಸ್ಪಂದಿಸಿದ ಇಂಡಿಗೊ ಈ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಂಡಿದೆ.

ವಿಡಿಯೊದಲ್ಲೇನಿದೆ?

“ವಿಮಾನದ ಆಹಾರ ತಯಾರಿ ಪ್ರದೇಶದಲ್ಲಿ ಜಿರಳೆಗಳು ಕಂಡು ಬಂದಿರುವುದು ನಿಜವಾಗಿಯೂ ಭಯಾನಕ ದೃಶ್ಯʼʼ ಎಂದು ಬರೆದುಕೊಂಡಿರುವ ತರುಣ್‌ ಶುಕ್ಲಾ ಜಿರಳೆಗಳು ಓಡಾಡುತ್ತಿರುವ ವಿಡಿಯೊವನ್ನು ಪೋಸ್ಟ್‌ ಮಾಡಿದ್ದಾರೆ. ಜತೆಗೆ ಅವರು ಇಂಡಿಗೊದ ಪ್ರತಿಕ್ರಿಯೆಯನ್ನೂ ಹಂಚಿಕೊಂಡಿದ್ದಾರೆ. ಸಂಬಂಧಪಟ್ಟವರು ಕೂಡಲೇ ಪ್ರತಿಕ್ರಿಯಿಸಿ ಈ ಸಮಸ್ಯೆ ನಿವಾರಣೆಯತ್ತ ಗಮನ ಹರಿಸುವುದಾಗಿ ತಿಳಿಸಿದ್ದಾರೆ ಮತ್ತು ಸ್ವಚ್ಛಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತರುಣ್‌ ಶುಕ್ಲಾ ಹೇಳಿದ್ದಾರೆ.

ʼʼನಮ್ಮ ಸಿಬ್ಬಂದಿ ತಕ್ಷಣ ಅಗತ್ಯ ಕ್ರಮ ಕೈಗೊಂಡರು. ಮುನ್ನೆಚ್ಚರಿಕೆ ಕ್ರಮವಾಗಿ, ನಾವು ತಕ್ಷಣ ಇಡೀ ವಿಮಾನವನ್ನು ಸ್ವಚ್ಛಗೊಳಿಸಿದ್ದೇವೆ. ಇಂಡಿಗೊದಲ್ಲಿ ಸುರಕ್ಷಿತ, ತೊಂದರೆ-ಮುಕ್ತ ಅನುಭವವನ್ನು ಖಚಿತಪಡಿಸಿಕೊಳ್ಳಲು ತಕ್ಷಣ ಕಾರ್ಯ ಪ್ರವೃತ್ತರಾಗಿದ್ದೇವೆ ಮತ್ತು ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ. ಇನ್ನು ಮುಂದೆ ನಾವು ಸ್ವಚ್ಛತೆ ಮತ್ತು ನೈರ್ಮಲ್ಯದ ಅತ್ಯುನ್ನತ ಮಾನದಂಡಗಳನ್ನು ಕಾಪಾಡಿಕೊಳ್ಳುತ್ತೇವೆ” ಎಂದು ಇಂಡಿಗೊ ತಿಳಿಸಿದೆ.

ನೆಟ್ಟಿಗರು ಏನಂದ್ರು?

ತರುಣ್‌ ಶುಕ್ಲಾ ವಿಡಿಯೊವನ್ನು ಪೋಸ್ಟ್‌ ಮಾಡಿದ ಕೆಲವೇ ಹೊತ್ತಿನಲ್ಲಿ ಇದು ವೈರಲ್‌ ಆಗಿದೆ. ಅನೇಕರು ಕಮೆಂಟ್‌ ಮೂಲಕ ತಮ್ಮ ಆಘಾತವನ್ನು ವ್ಯಕ್ತಪಡಿಸಿದ್ದಾರೆ. ಜತೆಗೆ ತಮಗಾದ ಅನುಭವಗಳನ್ನೂ ಹಂಚಿಕೊಂಡಿದ್ದಾರೆ. “ಇಂಡಿಗೊ ಅಂತಾರಾಷ್ಟ್ರೀಯ ವಿಮಾನದಲ್ಲಿ ವ್ಯವಸ್ಥೆ ಸರಿಯಾಗಿಲ್ಲ. ಯಾವಾಗಲೂ ತಡವಾಗಿ ಚಲಿಸುತ್ತದೆ. ಅಲ್ಲದೆ ಪಾನೀಯಗಳನ್ನೂ ನೀಡುವುದಿಲ್ಲ. ನಾನು ಇಂಡಿಗೊ ಅಂತಾರಾಷ್ಟ್ರೀಯ ವಿಮಾನದಲ್ಲಿ ಮತ್ತೆ ಸಂಚರಿಸುವುದಿಲ್ಲ” ಎಂದು ಒಬ್ಬರು ಹೇಳಿದ್ದಾರೆ.

ಇನ್ನೊಬ್ಬರು ಇಂಡಿಗೊ ಸಂಸ್ಥೆಯ ಬೆಂಬಲಕ್ಕೆ ಧಾವಿಸಿದ್ದಾರೆ. ಇಂಡಿಯೊ ಯಾವತ್ತೂ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸುತ್ತದೆ ಎಂದಿದ್ದಾರೆ. ʼʼಇಂಡಿಗೊದಲ್ಲಿ ನಾನು ಇಷ್ಟಪಡುವುದು ಇದನ್ನೇ. ನಿಯಂತ್ರಣಕ್ಕೆ ಮೀರಿದ ಸಮಸ್ಯೆಗಳು ಯಾರಿಗಾದರೂ ಎದುರಾಗಬಹುದು. ಅದನ್ನು ಯಾವ ರೀತಿ ಎದುರಿಸುತ್ತಾರೆ ಎನ್ನುವುದು ಮುಖ್ಯ. ಇಂಡಿಗೊ ತನ್ನ ಸೇವೆಯಲ್ಲಿ ಏನಾದರೂ ಸಮಸ್ಯೆ ಎದುರಾದರೆ ಯಾವಾಗಲೂ ಅದನ್ನು ತ್ವರಿತವಾಗಿ ಪರಿಹರಿಸಲು ಮುಂದಾಗುತ್ತದೆ” ಎಂದು ಅವರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Viral News: ವ್ಯಕ್ತಿಯ ಮೂಗಿನ ಹೊಳ್ಳೆಗಳಲ್ಲಿ 68 ಬೆಂಕಿ ಕಡ್ಡಿ! ಇದು ಕೂಡ ವಿಶ್ವ ದಾಖಲೆ

ಹಿಂದೆಯೂ ಆಗಿತ್ತು

ಇಂಡಿಗೊ ಇಂತಹ ನೈರ್ಮಲ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಏಪ್ರಿಲ್‌ನಲ್ಲಿ ಇಂಡಿಗೊ ವಿಮಾನದಲ್ಲಿ ಊಟ ಮಾಡುವಾಗ ಜಿರಳೆ ತಮ್ಮ ಮೇಜಿನ ಮೇಲೆ ತೆವಳುತ್ತಿರುವ ವಿಡಿಯೊವನ್ನು ಪ್ರಯಾಣಿಕರೊಬ್ಬರು ಹಂಚಿಕೊಂಡಿದ್ದರು. ಮಾತ್ರವಲ್ಲ 2022ರ ಅಕ್ಟೋಬರ್‌ನಲ್ಲಿ ಪಾಟ್ನಾದಿಂದ ದೆಹಲಿಗೆ ಹೋಗುವ ವಿಮಾನದಲ್ಲಿ ಮತ್ತೊಬ್ಬ ಪ್ರಯಾಣಿಕರಿಗೂ ಜಿರಳೆ ಕಂಡು ಬಂದಿತ್ತು. ಕೆಲವು ದಿನಗಳ ಹಿಂದೆ ಪ್ರಯಾಣಿಕರೊಬ್ಬರಿಗೆ ವಿತರಿಸಿದ ಸ್ಯಾಂಡ್‌ವಿಚ್‌ನಲ್ಲಿ ಹುಳ ಪತ್ತೆಯಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Free Bus Travel: ಕರ್ನಾಟಕ ಮಾದರಿ, ಮಹಿಳೆಯರೊಂದಿಗೆ ಪುರುಷರಿಗೂ ಉಚಿತ ಪ್ರಯಾಣ ನೀಡಿದ ಹರಿಯಾಣ ಬಿಜೆಪಿ ಸರ್ಕಾರ

ಶುಕ್ರವಾರ ರಾಜ್ಯದ ಬಜೆಟ್‌ ಮಂಡಿಸಿದ ಹರಿಯಾಣ ಮುಖ್ಯಮಂತ್ರಿ ಮನೋಹರಲಾಲ್‌ ಖಟ್ಟರ್‌ ಅವರು ಉಚಿತ ಬಸ್‌ ಪ್ರಯಾಣದ (Free Bus Travel) ಘೋಷಣೆಯನ್ನು ಮಾಡಿದರು.

VISTARANEWS.COM


on

haryana free bus travel
Koo

ಚಂಡೀಗಢ: ಕರ್ನಾಟಕದಂತೆಯೇ (Karnataka) ಹರಿಯಾಣದಲ್ಲೂ ಉಚಿತ ಬಸ್‌ ಪ್ರಯಾಣದ (Haryana Free Bus Travel) ಯೋಜನೆಯನ್ನು ಅಲ್ಲಿನ ಬಿಜೆಪಿ ಸರ್ಕಾರ (BJP Government) ಘೋಷಣೆ ಮಾಡಿದೆ. ಆದರೆ ಉಚಿತ ಪ್ರಯಾಣವನ್ನು ಮಹಿಳೆಯರಿಗೆ ಮಾತ್ರವಲ್ಲ, ಪುರುಷರಿಗೂ ವಿಸ್ತರಿಸಿದೆ.

ಶುಕ್ರವಾರ ರಾಜ್ಯದ ಬಜೆಟ್‌ ಮಂಡಿಸಿದ ಹರಿಯಾಣ ಮುಖ್ಯಮಂತ್ರಿ ಮನೋಹರಲಾಲ್‌ ಖಟ್ಟರ್‌ (Manoharlal Khattar) ಅವರು ಉಚಿತ ಬಸ್‌ ಪ್ರಯಾಣದ ಘೋಷಣೆಯನ್ನು ಮಾಡಿದರು. ಇದೇ ಏಪ್ರಿಲ್‌ 1ರಿಂದ ಈ ಯೋಜನೆ ಜಾರಿಯಾಗಲಿದೆ. ಕರ್ನಾಟಕದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಿಸಿದ್ದ ಕಾಂಗ್ರೆಸ್‌ ಪಕ್ಷ ಕಳೆದ ಚುನಾವಣೆಯಲ್ಲಿ ಗೆದ್ದು ಬಂದು ನಂತರ ಶಕ್ತಿ ಯೋಜನೆಯನ್ನು ಜಾರಿಗೊಳಿಸಿತ್ತು.

ಆದರೆ ಹರಿಯಾಣದ ಯೋಜನೆಗೆ ಆದಾಯ ಮಿತಿ ಇದೆ. ಇದನ್ನು ಬಳಸುವವರ ಆದಾಯ ಮಿತಿ 1 ಲಕ್ಷದ ಒಳಗೆ ಇರಬೇಕು. ಈ ಆದಾಯ ಮಿತಿ ಹೊಂದಿರುವವರು ಹರಿಯಾಣ ಸಾರಿಗೆ ಬಸ್‌ ಸಂಸ್ಥೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿದೆ. ಒಂದು ಸಾವಿರ ಕಿ.ಮಿ.ವರೆಗೂ ಉಚಿತವಾಗಿ ಸಂಚರಿಸಲು ಅವಕಾಶವಿದೆ ಎಂದು ಖಟ್ಟರ್‌ ತಿಳಿಸಿದರು.

ಹರಿಯಾಣದಲ್ಲಿರುವ ಸುಮಾರು 22.89 ಲಕ್ಷ ಕುಟುಂಬಗಳಿಗೆ ಉಚಿತ ಬಸ್‌ ಪ್ರಯಾಣ ಯೋಜನೆಯಿಂದ ಲಾಭವಾಗಲಿದೆ. ಇದಕ್ಕಾಗಿ ಯೋಜನೆಯನ್ನು ರೂಪಿಸಿ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ. ಮುಂದಿನ ವರ್ಷ ಹರಿಯಾಣದಲ್ಲಿ ಚುನಾವಣೆ ನಡೆಯುವುದರಿಂದ ಸರ್ಕಾರ ಎಲ್ಲ ವರ್ಗಗಳನ್ನು ಮೆಚ್ಚಿಸುವ ಕೆಲಸ ಮಾಡಿದೆ. ಇದರಲ್ಲಿ ಉಚಿತ ಬಸ್‌ ಪ್ರಯಾಣ ಕೂಡ ಸೇರಿದೆ.

ಪಂಜಾಬ್‌, ಹರಿಯಾಣದಲ್ಲಿ ರೈತರು ಬೆಳೆಗೆ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನು ಬದ್ದವಾಗಿ ನೀಡಬೇಕು ಎನ್ನುವುದು ಸೇರಿದಂತೆ ಹಲವಾರು ಬೇಡಿಕೆಗಳೊಂದಿಗೆ ಹೋರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಜೆಟ್‌ನಲ್ಲಿ ಹರಿಯಾಣ ಸರ್ಕಾರ ಹಲವಾರು ಅಂಶಗಳನ್ನು ರೈತಪರವಾಗಿ ಪ್ರಕಟಿಸಿ ಅನ್ನದಾತ ಆಕ್ರೋಶದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದೆ.

ಹರಿಯಾಣ ರಾಜ್ಯ ಸರ್ಕಾರ ಸಹಕಾರ ಸಂಸ್ಥೆಗಳು ಹಾಗೂ ಬ್ಯಾಂಕ್‌ಗಳಿಂದ ಪಡೆದ ಕೃಷಿ ಸಾಲದ ಬಡ್ಡಿ ಮನ್ನಾ ಮಾಡುವ ಘೋಷಣೆಯೂ ಆಗಿದೆ. ಇದರಲ್ಲಿ ರೈತರ ದಂಡವೂ ಸೇರಿದೆ. ಆದರೆ ರೈತರು 2024ರ ಮೇ ಒಳಗೆ ಸಾಲದ ಅಸಲನ್ನು ಕಡ್ಡಾಯವಾಗಿ ತುಂಬಬೇಕು. ಸಾಲ ತುಂಬಿದವರಿಗೆ ಬಡ್ಡಿ ಹಾಗೂ ದಂಡದ ಮನ್ನಾ ಆಗಲಿದೆ ಎಂದು ಖಟ್ಟರ್‌ ವಿವರಿಸಿದರು.

ಕರ್ನಾಟಕದಲ್ಲಿ ಶಕ್ತಿ ಯೋಜನೆಯೂ (Shakthi Scheme) ಸೇರಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ. ಪ್ರಧಾನಿ ಮೋದಿ ಅವರು ಗ್ಯಾರಂಟಿ ಯೋಜನೆಯಿಂದ ಸರ್ಕಾರ ದಿವಾಳಿಯಾಗುತ್ತವೆ ಎನ್ನುವ ಹೇಳಿಕೆ ನೀಡಿದ್ದರು. ಇದರ ನಡುವೆ ಬಿಜೆಪಿ ಆಡಳಿತದ ಹರಿಯಾಣ ಸರ್ಕಾರ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಿದೆ.

ಇದನ್ನೂ ಓದಿ: Shakthi Scheme : ಖಾಸಗಿ ಬಸ್‌ಗೂ ವಿಸ್ತರಣೆ ಆಗುತ್ತಾ ಶಕ್ತಿ ಯೋಜನೆ? ಹೈಕೋರ್ಟ್‌ ಹೇಳಿದ್ದೇನು?

Continue Reading
Advertisement
PM Narendra Modi is determined to make India a developing country by 2047 says Pralhad Joshi
ರಾಜಕೀಯ24 mins ago

PM Narendra Modi: ಮೋದಿ ಚಿಂತೆ ಮಾಡುವವರಲ್ಲ, ಚಿಂತನೆ ಮಾಡುವ ಪ್ರಧಾನಿ: ಪ್ರಲ್ಹಾದ್‌ ಜೋಶಿ

Idli
ವೈರಲ್ ನ್ಯೂಸ್30 mins ago

Biodiversity: ದಿನಾ ಇಡ್ಲಿ ತಿಂತೀರಾ? ಹಾಗಾದ್ರೆ ಜೀವವೈವಿಧ್ಯ ಹಾನಿಗೆ ನಿಮ್ಮದೇ ಹೆಚ್ಚಿನ ಕೊಡುಗೆ!

Anil John Sequeira youngest judge in Karnataka
ದಕ್ಷಿಣ ಕನ್ನಡ34 mins ago

Anil John Sequeira : ಬಂಟ್ವಾಳ ಯುವಕನ ಅಪರೂಪದ ಸಾಧನೆ; 25ನೇ ವಯಸ್ಸಿಗೆ ನ್ಯಾಯಾಧೀಶರಾಗಿ ಆಯ್ಕೆ

Sachin Tendulkar
ಪ್ರಮುಖ ಸುದ್ದಿ45 mins ago

Sachin Tenulkar : ಒಡಿಐನಲ್ಲಿ ಸಚಿನ್​ ಮೊದಲ ದ್ವಿಶತಕ ಬಾರಿಸಿ ಇತಿಹಾಸ ಸೃಷ್ಟಿಸಿದ ದಿನವಿದು

Medical negligence Hospital fined Rs 10 lakh for drowning newborn baby in hot water
ಪ್ರಮುಖ ಸುದ್ದಿ47 mins ago

medical negligence: ನವಜಾತ ಶಿಶುವನ್ನು ಬಿಸಿನೀರಲ್ಲಿ ಮುಳುಗಿಸಿ ಚರ್ಮ ಕಾಯಿಲೆ ಕಥೆ ಕಟ್ಟಿದ್ದ ಆಸ್ಪತ್ರೆಗೆ 10 ಲಕ್ಷ ದಂಡ!

Woman offers namaz inside mosque boycott from the village
ಕೊಡಗು1 hour ago

Kodagu News : ಮಸೀದಿಯಲ್ಲಿ ನಮಾಜ್‌ ಮಾಡಿದ ಮಹಿಳೆಗೆ ಗ್ರಾಮದಿಂದಲೇ ಬಹಿಷ್ಕಾರ; ಪತಿ ಅಂತ್ಯಕ್ರಿಯೆಗೂ ನಕಾರ

Don't wait for OTT, come to the theatre , said actor Shakhahaari Movie Rangayana Raghu
ಸ್ಯಾಂಡಲ್ ವುಡ್1 hour ago

Shakhahaari Movie: ಒಟಿಟಿಗೆ ಕಾಯ್ಬೇಡಿ, ಚಿತ್ರಮಂದಿರಕ್ಕೆ ಬನ್ನಿ ಎಂದ ʻಶಾಖಾಹಾರಿʼ ನಟ ರಂಗಾಯಣ ರಘು!

accident in up
ದೇಶ1 hour ago

Major Accident: ಭೀಕರ ಅಪಘಾತ; ಟ್ರ್ಯಾಕ್ಟರ್-ಟ್ರಾಲಿ ಕೊಳಕ್ಕೆ ಬಿದ್ದು 15 ಮಂದಿ ಸಾವು

Sachin Tendulkar
ಕ್ರೀಡೆ1 hour ago

Sachin Tendulkar : ವಿಶೇಷಚೇತನ ಕ್ರಿಕೆಟರ್​ ಅಮೀರ್​ ಭೇಟಿಯಾದ ಕ್ರಿಕೆಟ್ ದೇವರು; ಇಲ್ಲಿದೆ ವಿಡಿಯೊ

rahul gandhi mallikarjun kharge arvind kejriwal
ಪ್ರಮುಖ ಸುದ್ದಿ1 hour ago

Lok Sabha Election 2024: 4 ರಾಜ್ಯಗಳಲ್ಲಿ ಬಿಜೆಪಿ ವಿರುದ್ಧ ಎಎಪಿ- ಕಾಂಗ್ರೆಸ್ ಮೈತ್ರಿ ಹೋರಾಟ; ಯಾವ ರಾಜ್ಯ, ಎಷ್ಟು ಸೀಟು?

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ4 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Varthur Santhosh
ಮಂಡ್ಯ2 hours ago

Varthur Santhosh: ಮತ್ತೆ ಹಳ್ಳಿಕಾರ್‌ ಒಡೆಯ ವಿವಾದ; ವರ್ತೂರ್‌ ಸಂತೋಷ್ ವಿರುದ್ಧ ಕಾನೂನು ಸಮರ

read your daily horoscope predictions for february 24 2024
ಭವಿಷ್ಯ10 hours ago

Dina Bhavishya : ಹೂಡಿಕೆ ವ್ಯವಹಾರದಲ್ಲಿ ಈ ರಾಶಿಯವರಿಗೆ ಸಿಗಲಿದೆ ಸಂಗಾತಿ ಸಾಥ್‌

Staff nurses attempt to convert at health centre in Ratagal village
ಕಲಬುರಗಿ22 hours ago

Forced Conversion : ಆಪರೇಶನ್‌ ಮತಾಂತರ; ನರ್ಸ್‌ಗಳಿಂದ ಹಿಂದೂಗಳ ಬ್ರೈನ್‌ ವಾಶ್‌

Fire breaks out in auto shed Burnt autos
ಬೆಂಗಳೂರು1 day ago

Fire Accident : ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ! 40-50 ಆಟೋಗಳು ಬೆಂಕಿಗಾಹುತಿ

He sent a private photo video of his girlfriend
ಬೆಳಗಾವಿ1 day ago

Belgavi News : ನವ ವಿವಾಹಿತೆಯ ಖಾಸಗಿ ವಿಡಿಯೊ ಹರಿಬಿಟ್ಟು ಹಳೇ ಪ್ರೇಮಿ ಕಿತಾಪತಿ!

read your daily horoscope predictions for february 23 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಫೀಸ್‌ನಲ್ಲಿ ಬಾಸ್‌ನ ಕಿರಿಕಿರಿಯಿಂದ ದಿನಪೂರ್ತಿ ಟೆನ್ಷನ್‌!

Catton Candy contain cancer Will there be a ban in Karnataka
ಬೆಂಗಳೂರು2 days ago

cotton candy Ban : ಕರ್ನಾಟಕದಲ್ಲಿ ಬ್ಯಾನ್‌ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್​​ ಕಾರಕ ವಿಷ ಪತ್ತೆ!

Swarnavalli Mutt appoints successor ceremony
ಕರ್ನಾಟಕ2 days ago

Swarnavalli Mutt: ಸ್ವರ್ಣವಲ್ಲೀ ಶ್ರೀಗಳ ಶಿಷ್ಯ ಸ್ವೀಕಾರ ಸಂಪನ್ನ; ಇಲ್ಲಿದೆ ಲೈವ್‌ ವಿಡಿಯೊ

read your daily horoscope predictions for february 21 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ವರ್ತನೆಯು ಕೋಪ, ಮುಜುಗರವನ್ನುಂಟು ಮಾಡುತ್ತೆ!

read your daily horoscope predictions for february 20 2024
ಭವಿಷ್ಯ4 days ago

Dina Bhavishya : ಈ ದಿನ ಆತುರದಲ್ಲಿ ಈ ರಾಶಿಯವರು ಯಾವ ತೀರ್ಮಾನವನ್ನು ಮಾಡ್ಬೇಡಿ!

ಟ್ರೆಂಡಿಂಗ್‌