Site icon Vistara News

Ludhiana Gas Leak: ಲುಧಿಯಾನ ಕಾರ್ಖಾನೆಯಲ್ಲಿ ಅನಿಲ ಸೋರಿಕೆ ದುರಂತ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

Gas Leak in Ludhiana factory 9 Dead 11 ill

#image_title

ಪಂಜಾಬ್​​ನ ಲುಧಿಯಾನದ ಗಿಯಾಸ್ಪುರ ಪ್ರದೇಶದಲ್ಲಿರುವ ಒಂದು ಕಾರ್ಖಾನೆಯಲ್ಲಿ ಅನಿಲ ಸೋರಿಕೆ (Ludhiana Gas Leak) ಉಂಟಾಗಿ 11 ಮಂದಿ ಮೃತಪಟ್ಟಿದ್ದಾರೆ. ಪ್ರಾರಂಭದಲ್ಲಿ ಈ ಸಂಖ್ಯೆ 9 ಇತ್ತು. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಹಲವರು ಅಸ್ವಸ್ಥರಾಗಿದ್ದು ಅವರನ್ನೆಲ್ಲ ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ. ವಿಷಾನಿಲಯ ಸೋರಿಕೆಯಾಗಿರುವ ಕಾರ್ಖಾನೆಗೆ ಎನ್​ಡಿಆರ್​ಎಫ್​ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ), ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮೃತಪಟ್ಟವರಲ್ಲಿ 13 ಮತ್ತು 11 ವರ್ಷದ ಇಬ್ಬರು ಬಾಲಕರೂ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲುಧಿಯಾನದಲ್ಲಿ ಕಾರ್ಖಾನೆ ಇರುವ ಸಂಪೂರ್ಣ ಪ್ರದೇಶದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಸ್ಥಳದಲ್ಲಿ ವೈದ್ಯಕೀಯ ತಂಡಗಳೂ ಇದ್ದು, ಅಸ್ವಸ್ಥರಾದವರಿಗೆ ಎಲ್ಲರಿಗೂ ಪ್ರಾಥಮಿಕ ಚಿಕಿತ್ಸೆ ನೀಡಿ, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ. ಆಂಬ್ಯುಲೆನ್ಸ್​​ಗಳೂ ಕೂಡ ಸನ್ನದ್ಧವಾಗಿವೆ. ಸ್ಥಳೀಯರಂತೂ ತುಂಬ ಆತಂಕಕ್ಕೀಡಾಗಿದ್ದಾರೆ. ಹಲವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಒಂದೇ ಕುಟುಂಬದ ಐವರು ಎಚ್ಚರ ತಪ್ಪಿದ್ದಾಗಿ ವರದಿಯಾಗಿದೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್​ ಅವರು ಲುಧಿಯಾನ ಗ್ಯಾಸ್ ಸೋರಿಕೆ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಪೊಲೀಸರು ಮತ್ತು ಎನ್​ಡಿಆರ್​ಎಫ್​ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಎಲ್ಲ ರೀತಿಯ ನೆರವನ್ನೂ ಸರ್ಕಾರದಿಂದ ಒದಗಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: Chemical leakage : ರಾಸಾಯನಿಕ ತುಂಬಿದ ಟ್ಯಾಂಕರ್‌ ಪಲ್ಟಿ, ಅನಿಲ ಸೋರಿಕೆಯಿಂದ ಹೆದ್ದಾರಿ ಸಂಚಾರ ಬಂದ್‌

Exit mobile version