Site icon Vistara News

Odisha Train Accident : ದುರಂತ ಸಂತ್ರಸ್ತರ ಅನಾಥ ಮಕ್ಕಳಿಗೆ ಶಿಕ್ಷಣ; ಗೌತಮ್ ಅದಾನಿ ಭರವಸೆ

Gautam Adani

Gautam Adani overtakes Mukesh Ambani as India's richest man

ನವ ದೆಹಲಿ: ಒಡಿಶಾದ ಬಾಲಾಸೋರ್​ನಲ್ಲಿ ನಡೆದ ತ್ರಿವಳಿ ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಶಿಕ್ಷಣ ನೀಡುವ ಜವಾಬ್ದಾರಿಯನ್ನು ಅದಾನಿ ಗ್ರೂಪ್ ತೆಗೆದುಕೊಳ್ಳಲಿದೆ ಎಂದು ಗೌತಮ್ ಅದಾನಿ ಭಾನುವಾರ ಘೋಷಿಸಿದ್ದಾರೆ. ಅದಾನಿ ಸಮೂಹದ ಮುಖ್ಯಸ್ಥರಾಗಿರುವ ಕೈಗಾರಿಕೋದ್ಯಮಿ ಗೌತಮ್​ ಅವರು ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ನೆರವಾಗುವುದು ಮತ್ತು ಸಂತ್ರಸ್ತರ ಮಕ್ಕಳಿಗೆ ಉತ್ತಮ ಭವಿಷ್ಯ ಸೃಷ್ಟಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ನಾವೆಲ್ಲರೂ ತೀವ್ರವಾಗಿ ತೊಂದರೆಗೀಡಾಗಿದ್ದೇವೆ ಎಂದು ಗೌತಮ್ ಅದಾನಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಈ ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಕಂದಮ್ಮಗಳ ಶಾಲಾ ಶಿಕ್ಷಣವನ್ನು ಅದಾನಿ ಗ್ರೂಪ್ ನೋಡಿಕೊಳ್ಳಲಿದೆ. ಸಂತ್ರಸ್ತರು ಮತ್ತು ಅವರ ಕುಟುಂಬಗಳನ್ನು ಬೆಂಬಲಿಸುವುದು ಮತ್ತು ಮಕ್ಕಳಿಗೆ ಉತ್ತಮ ನಾಳೆಯನ್ನು ನೀಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಒಡಿಶಾ ರೈಲು ದುರಂತದಲ್ಲಿ ಮಡಿದವರಿಗೆ ಮಿಡಿದ ಸೆಹ್ವಾಗ್​, ಸಂತ್ರಸ್ತರ ಮಕ್ಕಳಿಗೆ ಶಿಕ್ಷಣ ಕೊಡಿಸುವ ಭರವಸೆ

ಒಡಿಶಾದ ಬಾಲಸೋರ್​​ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತವನ್ನು ದೇಶದ ಶತಮಾನದಲ್ಲೇ ಅತ್ಯಂತ ಭೀಕರ ರೈಲು ಎಂದು ಕರೆಯಲಾಗಿದೆ.

ಟಿಕೆಟ್ ಇಲ್ಲದವರಿಗೂ ಪರಿಹಾರ

ಒಡಿಶಾದಲ್ಲಿ ಸಂಭವಿಸಿದ ಅಪಘಾತದಲ್ಲಿ (Odisha Train Accident) ಸಿಲುಕಿರುವ ಪ್ಯಾಸೆಂಜರ್ ರೈಲುಗಳಲ್ಲಿ ಪ್ರಯಾಣಿಸಿದ್ದ ಟಿಕೆಟ್ ರಹಿತ ಪ್ರಯಾಣಿಕರಿಗೂ ಪರಿಹಾರ ನೀಡಲಾಗುವುದು ಎಂದು ರೈಲ್ವೆ ಇಲಾಖೆ ಭಾನುವಾರ ತಿಳಿಸಿದೆ. ಇದು ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿದೆ ಎಂದು ಅಧಿಕಾರಿಗಳು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. “ಪ್ರಯಾಣಿಕರು ಟಿಕೆಟ್ ಇಲ್ಲದೇ ಪ್ರಯಾಣ ಮಾಡಿದ್ದರೂ ಅವರಿಗೆ ಪರಿಹಾರ ನೀಡಲಾಗುವುದು” ಎಂದು ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಹೇಳಿದ್ದಾರೆ.

ಅದೇ ರೀತಿ ಸುದ್ದಿಗಾರರೊಂದಿಗೆ ಮಾತನಾಡಿದ ರೈಲ್ವೆ ಮಂಡಳಿಯ ಕಾರ್ಯಾಚರಣೆ ಮತ್ತು ವ್ಯವಹಾರ ಅಭಿವೃದ್ಧಿ ಸದಸ್ಯ ಜಯ ವರ್ಮಾ ಸಿನ್ಹಾ, ಆಸ್ಪತ್ರೆಗಳಲ್ಲಿ ದಾಖಲಾದ ಪ್ರತಿಯೊಬ್ಬ ಗಾಯಾಳುವಿಗೆ ತಮ್ಮ ಸಂಬಂಧಿಕರು ಅಥವಾ ಆಪ್ತರನ್ನು ಪತ್ತೆ ಹಚ್ಚುವುದಕ್ಕೆ ನೆರವಾಲು ಸ್ಕೌಟ್ ಅಥವಾ ಗೈಡ್ಸ್​​ ನೆರವು ನೀಡಲಾಗಿದೆ ಎಂಬುದಾಗಿ ಹೇಳಿದ್ದಾರೆ.

ಸಹಾಯವಾಣಿ ಸಂಖ್ಯೆ 139 ಲಭ್ಯವಿದೆ. ಈ ಸಂಪರ್ಕ ಸಂಖ್ಯೆ ಮೂಲಕ ಹಿರಿಯ ರೈಲ್ವೆ ಅಧಿಕಾರಿಗಳು ಕರೆಗಳಿಗೆ ಉತ್ತರಿಸುತ್ತಿದ್ದಾರೆ. ಸಾಧ್ಯವಾದಷ್ಟು ಜನರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರ್ಮಾ ಇದೇ ವೇಳೆ ಮಾಹಿತಿ ನೀಡಿದ್ದಾರೆ.

ಗಾಯಗೊಂಡವರು ಅಥವಾ ಮೃತರ ಕುಟುಂಬದ ಸದಸ್ಯರು ನಮಗೆ ಕರೆ ಮಾಡಬಹುದು. ಅಧಿಕಾರಿಗಳು ಅವರಿಗೆ ಎಲ್ಲ ರೀತಿಯ ಸಹಾಯ ನೀಡುತ್ತಿದ್ದಾರೆ. ಗಾಯಳುಗಳನ್ನು ಭೇಟಿ ಮಾಡಲು ವ್ಯವಸ್ಥೆ ಮಾಡುತ್ತಿದ್ದಾರೆ. ಸಂಬಂಧಿಕರ ಅವರ ಪ್ರಯಾಣ ಮತ್ತು ಇತರ ವೆಚ್ಚಗಳನ್ನು ನಾವು ನೋಡಿಕೊಳ್ಳುತ್ತಿದ್ದಾರೆ ಎಂದು ಜಯ್​ ವರ್ಮಾ ಅವರು ಹೇಳಿದ್ದಾರೆ.

Exit mobile version