Gautam Adani's youngest son Jeet is engaged to a diamond merchant ವಜ್ರದ ವ್ಯಾಪಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡ ಗೌತಮ್​ ಅದಾನಿ ಕಿರಿಯ ಪುತ್ರ ಜೀತ್​ - Vistara News ವಜ್ರದ ವ್ಯಾಪಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡ ಗೌತಮ್​ ಅದಾನಿ ಕಿರಿಯ ಪುತ್ರ ಜೀತ್​

ದೇಶ

ವಜ್ರದ ವ್ಯಾಪಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡ ಗೌತಮ್​ ಅದಾನಿ ಕಿರಿಯ ಪುತ್ರ ಜೀತ್​

ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಜೀತ್​ ಅದಾನಿ, ವಜ್ರದ ವ್ಯಾಪಾರಿ ಜೈಮಿನ್ ಶಾ ಪುತ್ರಿ ಜತೆ ಎಂಗೇಜ್ಮೆಂಟ್​ ಮಾಡಿಕೊಂಡಿದ್ದಾರೆ.

VISTARANEWS.COM


on

Gautam Adani's youngest son Jeet is engaged to a diamond merchant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್: ಅದಾನಿ ಗ್ರೂಪ್ ಫೈನಾನ್ಸ್‌ನ ಉಪಾಧ್ಯಕ್ಷ ಹಾಗೂ ಗೌತಮ್ ಅದಾನಿಯ (Gautam Adani) ಕಿರಿಯ ಮಗ ಜೀತ್ ಅದಾನಿ ವಜ್ರದ ವ್ಯಾಪಾರಿ ದಿವಾ ಜೈಮಿನ್ ಶಾ ಅವರೊಂದಿಗೆ ಮಾರ್ಚ್ 12ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ನಿಶ್ಚಿತಾರ್ಥದಲ್ಲಿ ಆಪ್ತ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಮಾತ್ರ ಪಾಲ್ಗೊಂಡಿದ್ದರು. ವಧು ದಿವಾ ಸಿ ಅವರು ದಿನೇಶ್ ಆ್ಯಂಡ್ ಕೊ. ಪ್ರೈ.ಲಿ.ನ ವಜ್ರದ ವ್ಯಾಪಾರಿ ಜೈಮಿನ್ ಶಾ ಅವರ ಪುತ್ರಿ.

2019 ರಲ್ಲಿ ಅದಾನಿ ಗ್ರೂಪ್‌ ಸೇರಿದ ಜೀತ್​ ಅವರು ಅದಾನಿ ಗ್ರೂಪ್ ಫೈನಾನ್ಸ್‌ನ ಉಪಾಧ್ಯಕ್ಷರಾಗಿದ್ದಾರೆ. ಅದಾನಿ ಸಮೂಹದ ಸಿಎಫ್‌ಒ ಕಚೇರಿಯಲ್ಲಿ ತಮ್ಮ ವೃತ್ತಿಜೀವನ ಪ್ರಾರಂಭಿಸಿದ ಜೀತ್‌, ಸ್ಟ್ರಾಟೆಜಿಕ್ ಫೈನಾನ್ಸ್, ಕ್ಯಾಪಿಟಲ್ ಮಾರ್ಕೆಟ್ಸ್ ಮತ್ತು ರಿಸ್ಕ್ & ಗವರ್ನೆನ್ಸ್ ಪಾಲಿಸಿಗಳನ್ನು ನೋಡಿಕೊಳ್ಳುತ್ತಿದ್ದರು. ಅದಕ್ಕಿಂತ ಮೊದಲು ಅವರು ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾ ಸ್ಕೂಲ್ ಆಫ್ ಎಂಜಿನಿಯರಿಂಗ್ ಆ್ಯಂಡ್​ ಅಪ್ಲೈಡ್ ಸೈನ್ಸಸ್‌ನಿಂದ ಪದವಿ ಪಡೆದಿದ್ದಾರೆ. ಅದಾನಿ ಗ್ರೂಪ್‌ನ ವೆಬ್‌ಸೈಟ್ ಪ್ರಕಾರ ಜೀತ್ ಅವರು ಸದ್ಯ ಅದಾನಿ ಏರ್‌ಪೋರ್ಟ್ಸ್ ವ್ಯವಹಾರ ಮತ್ತು ಅದಾನಿ ಡಿಜಿಟಲ್ ಲ್ಯಾಬ್ಸ್‌ನ್ನು ಮುನ್ನಡೆಸುತ್ತಿದ್ದಾರೆ.

ಇದನ್ನೂ ಓದಿ : ನನ್ನ ಮುಖವೇನಾದರೂ ಅದಾನಿ ಮುಖದಂತೆಯೇ ಇದೆಯಾ?; ಇ.ಡಿ. ದಾಳಿ ಬಗ್ಗೆ ವ್ಯಂಗ್ಯ ಮಾಡಿದ ಲಾಲು ಪುತ್ರ ತೇಜಸ್ವಿ ಯಾದವ್​

ಗೌತಮ್‌ ಅದಾನಿ ಅವರ ಹಿರಿಯ ಮಗ ಕರಣ್ ಅದಾನಿ ಅವರು ಸಿರಿಲ್ ಶ್ರಾಫ್ ಅವರ ಪುತ್ರಿ ಪರಿಧಿ ಶ್ರಾಫ್ ಅವರನ್ನು ವಿವಾಹವಾಗಿದ್ದಾರೆ. ಸಿರಿಲ್ ಕಾನೂನು ಸಂಸ್ಥೆ ಸಿರಿಲ್ ಅಮರಚಂದ್ ಮಂಗಲದಾಸ್‌ನ ವ್ಯವಸ್ಥಾಪಕ ಪಾಲುದಾರರರು. ಕರಣ್ ಅದಾನಿ ಪೋರ್ಟ್ಸ್ಡ್‌ ಆ್ಯಂಡ್​ ಸ್ಪೆಷಲ್‌ ಎಕನಾಮಿಕ್‌ ಝೋನ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ.

ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್‌ ಹಿಂಡನ್‌ಬರ್ಗ್‌ ರಿಸರ್ಚ್‌ ಅದಾನಿ ಗ್ರೂಪ್ ಬಗ್ಗೆ ಬಿಡುಗಡೆ ಮಾಡಿದ್ದ ವರದಿಯ ಬಳಿಕ ಸಮೂಹದ ಷೇರುಗಳು ಭಾರೀ ಕುಸಿತ ಕಂಡಿದ್ದವು. ಅಲ್ಲಿಂದ ಅದಾನಿ ಗ್ರೂಪ್​ ನಿತ್ಯ ಸುದ್ದಿಯಲ್ಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Arunachal Pradesh landslide: ಅರುಣಾಚಲದಲ್ಲಿ ಭೂಕುಸಿತ, ಚೀನಾ ಗಡಿ ಪ್ರದೇಶಕ್ಕೆ ಸಂಪರ್ಕ ಬಂದ್‌

Arunachal Pradesh landslide: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಿನ್ನೆ ರಾಷ್ಟ್ರೀಯ ಹೆದ್ದಾರಿ-313ರಲ್ಲಿ ಹುನ್ಲಿ ಮತ್ತು ಅನಿನಿ ನಡುವೆ ಭಾರೀ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತ ಹಾಗೂ ಕತ್ತರಿಸಿಹೋದ ರಸ್ತೆಯ ಮೂಲಕ ನೀರಿನ ಪ್ರವಾಹ ಹರಿಯುತ್ತಿರುವ ಹಲವು ವೀಡಿಯೊಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ (viral video) ಆಗಿವೆ.

VISTARANEWS.COM


on

arunachal pradesh landslide
Koo

ಗುವಾಹಟಿ: ಮಳೆಯಿಂದ (Rain) ಉಂಟಾದ ಭಾರೀ ಭೂಕುಸಿತದಿಂದ (Landslide) ಅರುಣಾಚಲ ಪ್ರದೇಶದ ಹೆದ್ದಾರಿಯ ಪ್ರಮುಖ ಭಾಗ ಕೊಚ್ಚಿ (Arunachal Pradesh landslide) ಹೋಗಿದ್ದು, ಚೀನಾ ಗಡಿಗೆ (China Border) ಹೊಂದಿಕೊಂಡಿರುವ ಜಿಲ್ಲೆ ದಿಬಾಂಗ್ ಕಣಿವೆಯೊಂದಿಗೆ ರಸ್ತೆ ಸಂಪರ್ಕ ಕತ್ತರಿಸಿಹೋಗಿದೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಿನ್ನೆ ರಾಷ್ಟ್ರೀಯ ಹೆದ್ದಾರಿ-313ರಲ್ಲಿ ಹುನ್ಲಿ ಮತ್ತು ಅನಿನಿ ನಡುವೆ ಭಾರೀ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತ ಹಾಗೂ ಕತ್ತರಿಸಿಹೋದ ರಸ್ತೆಯ ಮೂಲಕ ನೀರಿನ ಪ್ರವಾಹ ಹರಿಯುತ್ತಿರುವ ಹಲವು ವೀಡಿಯೊಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ (viral video) ಆಗಿವೆ. ಹೆದ್ದಾರಿಯ ಒಂದು ಭಾಗ ಕಾಣೆಯಾಗಿರುವುದನ್ನು ಇವು ತೋರಿಸಿವೆ.

ರಸ್ತೆ ತುಂಡಾಗಿದ್ದು, ವಾಹನಗಳು ಇನ್ನೊಂದು ಬದಿಗೆ ದಾಟಲು ಅಸಾಧ್ಯವಾಗಿದೆ. ಈ ಕಷ್ಟಕರವಾದ ಭೂಪ್ರದೇಶದಲ್ಲಿ ಹೆದ್ದಾರಿಯನ್ನು ಜೀವನಾಡಿ ಎಂದು ಪರಿಗಣಿಸುವ ಸ್ಥಳೀಯರು ಮತ್ತು ಭದ್ರತಾ ಪಡೆಗಳಿಗೆ ಇದರಿಂದ ಭಾರೀ ತೊಂದರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (NHIDCL) ಈ ಹೆದ್ದಾರಿಯ ಹಾನಿಗೊಳಗಾದ ಭಾಗವನ್ನು ಸರಿಪಡಿಸಲು ಮುಂದಾಗಿದೆ.

ಪ್ರಸ್ತುತ, ಕತ್ತರಿಸಿಹೋಗಿರುವ ಪ್ರದೇಶಕ್ಕೆ ಆಹಾರ ಮತ್ತು ಇತರ ಅಗತ್ಯ ವಸ್ತುಗಳ ಕೊರತೆ ಆಗಿಲ್ಲ. “ಹುನ್ಲಿ ಮತ್ತು ಅನಿನಿ ನಡುವಿನ ಹೆದ್ದಾರಿಗೆ ವ್ಯಾಪಕವಾದ ಹಾನಿಯಿಂದಾಗಿ ಪ್ರಯಾಣಿಕರಿಗೆ ಉಂಟಾಗುತ್ತಿರುವ ಅನನುಕೂಲತೆಯನ್ನು ನಿವಾರಿಸಲು ಯತ್ನಿಸಲಾಗುತ್ತಿದೆ. ಈ ರಸ್ತೆಯು ದಿಬಾಂಗ್ ಕಣಿವೆಯನ್ನು ದೇಶದ ಇತರ ಭಾಗಗಳಿಗೆ ಸಂಪರ್ಕಿಸುತ್ತದೆ. ಹೀಗಾಗಿ ಶೀಘ್ರವಾಗಿ ಸಂಪರ್ಕವನ್ನು ಮರುಸ್ಥಾಪಿಸಲು ಸೂಚನೆಗಳನ್ನು ನೀಡಲಾಗಿದೆ” ಎಂದು ಅರುಣಾಚಲ ಪ್ರದೇಶದ ಸಚಿವ ಪೆಮಾ ಖಂಡು ಆನ್‌ಲೈನ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ದಿಬಾಂಗ್ ವ್ಯಾಲಿ ಆಡಳಿತದ ಪ್ರಕಾರ ಹೆದ್ದಾರಿ ಮರುಸ್ಥಾಪನೆಗೆ ಕನಿಷ್ಠ ಮೂರು ದಿನಗಳು ಬೇಕಾಗಬಹುದು. ಭೂಕುಸಿತ ಉಂಟಾಗುವ ಪ್ರದೇಶಗಳಲ್ಲಿ ಮತ್ತು ಜಲಮೂಲಗಳಿಂದ ಹಾಗೂ ಮೀನುಗಾರಿಕೆಯಂತಹ ಚಟುವಟಿಕೆಗಳಿಂದ ದೂರವಿರಲು ಆಡಳಿತವು ಜನರಿಗೆ ಮನವಿ ಮಾಡಿದೆ. ರಾತ್ರಿಯಲ್ಲಿ ಪ್ರಯಾಣಿಸುವುದರ ವಿರುದ್ಧ ಮತ್ತು ಮಳೆಗಾಲದಲ್ಲಿ ಮಣ್ಣನ್ನು ಕತ್ತರಿಸದಂತೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Viral video: ಸೇನಾ ಹೆಲಿಕಾಪ್ಟರ್‌ಗಳ ಭಯಾನಕ ಡಿಕ್ಕಿ; 10 ಸಾವು

Continue Reading

ಅಂಕಣ

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

JEE Main 2024 Result: ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು.

VISTARANEWS.COM


on

Nilkrishna Gajare JEE main 2024 result AIR 1
Koo

ಹೊಸದಿಲ್ಲಿ: ಮಹಾರಾಷ್ಟ್ರದ ವಾಶಿಮ್‌ನ ರೈತರ ಮಗ (farmer’s son) ನೀಲಕೃಷ್ಣ ಗಜರೆ (Nilkrishna Gajare) ಅವರು ಜೆಇಇ ಮೇನ್ 2024 ಪರೀಕ್ಷೆಯಲ್ಲಿ (JEE Main 2024 Result) ದೇಶಕ್ಕೇ ಅಗ್ರಸ್ಥಾನ (AIR 1, First Rank) ಪಡೆದಿದ್ದಾರೆ. ಪರೀಕ್ಷೆಯಲ್ಲಿ ಪರಿಪೂರ್ಣ ಅಂಕಗಳನ್ನು (100) ಗಳಿಸಿದ್ದಾರೆ. ದಕ್ಷೇಶ್ ಸಂಜಯ್ ಮಿಶ್ರಾ ಮತ್ತು ಆರವ್ ಭಟ್ ಕ್ರಮವಾಗಿ AIR 2 ಮತ್ತು 3 ಪಡೆದಿದ್ದಾರೆ. ದೇಶದ ವಿವಿಧ ರಾಜ್ಯಗಳ ಒಟ್ಟು 56 ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿದ್ದಾರೆ.

ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು. “ಪರೀಕ್ಷೆಯನ್ನು ತೆಗೆದುಕೊಂಡ ನಂತರ, ನಾನು ಪ್ರಶ್ನೆ ಪತ್ರಿಕೆಯನ್ನು ವಿಶ್ಲೇಷಿಸಿದೆ. ನಾನು ದುರ್ಬಲ ವಿಷಯಗಳ ಮೇಲೆ ವಿಶೇಷ ಗಮನವನ್ನು ನೀಡುತ್ತಿದ್ದೇನೆ. JEEಯಂತಹ ಪರೀಕ್ಷೆಯನ್ನು ಉತ್ತರಿಸಲು ಸ್ಪಷ್ಟ ಪರಿಕಲ್ಪನೆಗಳನ್ನು ಹೊಂದಿರುವುದು ಬಹಳ ಮುಖ್ಯ. ಇದಲ್ಲದೆ ನಾನು ಒಂದಕ್ಕಿಂತ ಹೆಚ್ಚು ಬಾರಿ ಪ್ರಶ್ನೆಗಳನ್ನು ಅಭ್ಯಾಸ ಮಾಡುತ್ತೇನೆ” ಎಂದು ಗಜರೆ ಹೇಳಿದ್ದಾರೆ.

IIT- JEEಗೆ ತಯಾರಾಗಲು ಗಜರೆ 11ನೇ ತರಗತಿಯಲ್ಲಿ ALLEN ವೃತ್ತಿ ಸಂಸ್ಥೆಗೆ ಸೇರಿದರು. ಅವರು ತಮ್ಮ ಪ್ರಯಾಣದ ಅಡೆತಡೆಗಳನ್ನು ಹೇಗೆ ನಿವಾರಿಸಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ.

“ನನ್ನ ಜೆಇಇ ಪ್ರಯಾಣ 11ನೇ ತರಗತಿಯಲ್ಲಿ ಪ್ರಾರಂಭವಾದ ಮೊದಲ ಒಂದು ಅಥವಾ ಎರಡು ತಿಂಗಳುಗಳಲ್ಲಿ ನಾನು ಸ್ವಲ್ಪ ತೊಂದರೆಗಳನ್ನು ಎದುರಿಸಿದೆ. ಅಂದರೆ, 10ನೇ ತರಗತಿಗೆ ಹೋಲಿಸಿದರೆ 11 ಮತ್ತು 12ನೇ ತರಗತಿಗಳ ಪಠ್ಯಕ್ರಮವು ಸಾಕಷ್ಟು ವಿಸ್ತಾರವಾಗಿದೆ. ಆದ್ದರಿಂದ ನಾನು ಆರಂಭದಲ್ಲಿ ಕೆಲವು ತೊಂದರೆಗಳನ್ನು ಎದುರಿಸಿದೆ. ಆದರೆ ನಾನು ಕೈಬಿಡಲಿಲ್ಲ. ನನ್ನ ಅಧ್ಯಯನವನ್ನು ನಿರಂತರವಾಗಿ ಮುಂದುವರಿಸಿದೆ. ನಾನು ವಿದ್ಯಾರ್ಥಿಗಳಿಗೆ ನೀಡಲು ಬಯಸುವ ಸಂದೇಶ ಏನೆಂದರೆ, ನೀವು ಅಂತಹ ತೊಂದರೆಗಳನ್ನು ಎದುರಿಸಿದರೆ ಅಥವಾ ನನ್ನಿಂದ ಸಾಧ್ಯವೇ ಇಲ್ಲ ಎಂದು ಭಾವಿಸಿದರೆ, ಕೈಬಿಡಬೇಡಿ. ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮುಂದುವರಿಸಿ. ಒಳ್ಳೆಯ ಫಲಿತಾಂಶ ದಕ್ಕುತ್ತದೆ” ಎಂದು ಅವರು ಇನ್‌ಸ್ಟಿಟ್ಯೂಟ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಲೈವ್ ವೇಳೆ ಹೇಳಿದರು.

“ಜೆಇಇ ಅಡ್ವಾನ್ಸ್ಡ್‌ನಲ್ಲಿ ಐಐಟಿ ಬಾಂಬೆಯಲ್ಲಿ ಕಂಪ್ಯೂಟರ್ ಸೈನ್ಸ್‌ ಸೀಟು ಪಡೆಯುವುದು ನನ್ನ ಗುರಿ. ಪ್ರಸ್ತುತ ಅದಕ್ಕಾಗಿ ತಯಾರಿ ನಡೆಸುತ್ತಿದ್ದೇನೆ” ಎಂದು ಗಜರೆ ಹೇಳಿದ್ದಾರೆ. ಐಐಟಿ-ಜೆಇಇ ಆಕಾಂಕ್ಷಿಗಳಿಗೆ ಗಜರೆ ಸಲಹೆಯನ್ನೂ ಹಂಚಿಕೊಂಡಿದ್ದಾರೆ. “ನಿಮ್ಮ ಗುರಿಯನ್ನು ಖಚಿತಪಡಿಸಿ. ಅದರ ಪ್ರಕಾರ ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮಾಡಿ. ವಿಷಯಗಳನ್ನು ನಿಜವಾದ ಆಸಕ್ತಿಯಿಂದ ಅಧ್ಯಯನ ಮಾಡಿ. ಇದರಿಂದ ಅವು ಹೊರೆಯಾಗುವುದಿಲ್ಲ. ನಿಮ್ಮ ಸಿದ್ಧತೆಯನ್ನು ಸ್ಥಿರವಾಗಿ ಮತ್ತು ನಿರಂತರವಾಗಿ ಮಾಡಿ.”

56 ಅಭ್ಯರ್ಥಿಗಳಿಗೆ ಶೇ.100 ಅಂಕ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್ಯ 2024 ಸೆಷನ್ 2 ಪರೀಕ್ಷಾ ಫಲಿತಾಂಶ (JEE Main 2024 Result session 2) ಪ್ರಕಟವಾಗಿದೆ. ಒಟ್ಟು 56 ಅಭ್ಯರ್ಥಿಗಳು (Students) ಶೇ.100 ಅಂಕಗಳನ್ನು ಗಳಿಸಿದ್ದು, ಕಳೆದ ಬಾರಿಗಿಂತ 13 ಹೆಚ್ಚು ವಿದ್ಯಾರ್ಥಿಗಳು ಇದನ್ನು ಪಡೆದಿದ್ದಾರೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ. ಕಟ್‌ಆಫ್‌ (Cut off marks) ಅಂಕಗಳನ್ನು ಕೂಡ 2.45%ರಷ್ಟು ಹೆಚ್ಚಿಸಲಾಗಿದೆ.

ಸಂಸ್ಥೆಯು ಇಂದು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2024 ಫಲಿತಾಂಶವನ್ನು ಬಿಡುಗಡೆ ಮಾಡಿದೆ. 2024ರ ಪರೀಕ್ಷೆಗಳಲ್ಲಿ ಒಟ್ಟು 9.24 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8.2 ಲಕ್ಷ ಜನರು ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದ JEE ಮುಖ್ಯ 2023 ಪರೀಕ್ಷೆಗಳಿಗೆ ಹಾಜರಾಗಿದ್ದರು. ಜೆಇಇ ಮುಖ್ಯ ಏಪ್ರಿಲ್ ಸೆಷನ್‌ಗೆ ಹಾಜರಾದವರು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: jeemain.nta.ac.in.

ಇದನ್ನೂ ಓದಿ: JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

Continue Reading

ದೇಶ

Aircraft Crash: ಭಾರತೀಯ ವಾಯುಪಡೆಯ ವಿಮಾನ ಪತನ; ಭಾಗಗಳು ಸುಟ್ಟು ಭಸ್ಮ

Aircraft Crash: ರಾಜಸ್ಥಾನದ ಜೈಸಲ್ಮೇರ್‌ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ವಿಮಾನವೊಂದು ಪತನಗೊಂಡಿದೆ. ದೈನಂದಿನ ಹಾರಾಟದ ವೇಳೆ ವಿಮಾನ ಪತನಗೊಂಡಿದೆ. ಅವಘಡದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಉನ್ನತ ತನಿಖೆಗೆ ಆದೇಶಿಸಲಾಗಿದೆ.

VISTARANEWS.COM


on

Aircraft Crash
Koo

ಜೈಪುರ: ಭಾರತೀಯ ವಾಯಪಡೆಯ (Indian Air Force) ಕಣ್ಗಾವಲು ವಿಮಾನವೊಂದು ರಾಜಸ್ಥಾನದ (Rajasthan) ಜೈಸಲ್ಮೇರ್‌ ಜಿಲ್ಲೆಯಲ್ಲಿ ಗುರುವಾರ (ಏಪ್ರಿಲ್‌ 25) ಬೆಳಗ್ಗೆ ಪತನಗೊಂಡಿದೆ. ಇದು ಮಾನವರಹಿತ ವಿಮಾನವಾದ ಕಾರಣ ಯಾವುದೇ ಸಾವು-ನೋವು ಸಂಭವಿಸಿಲ್ಲ. ಆದಾಗ್ಯೂ, ವಿಮಾನವು ಜಮೀನಿನಲ್ಲಿ ಪತನಗೊಂಡ (Aircraft Crash) ಕಾರಣ ಯಾವುದೇ ಅವಘಡ ಸಂಭವಿಸಿಲ್ಲ. ಆದರೆ, ಇಡೀ ವಿಮಾನವು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.

ಜಿಲ್ಲಾ ಕೇಂದ್ರವಾದ ಜೈಸಲ್ಮೇರ್‌ನಿಂದ ಸುಮಾರು 25 ಕಿಲೋಮೀಟರ್‌ ದೂರದಲ್ಲಿರುವ ಪಿಥಾಲ ಗ್ರಾಮದ ಬಳಿಯ ಜಮೀನಿನಲ್ಲಿ ವಿಮಾನ ಪತನವಾಗಿದೆ. ಈ ಕುರಿತು ವಾಯುಪಡೆಯೇ ಮಾಹಿತಿ ನೀಡಿದೆ. “ಜೈಸಲ್ಮೇರ್‌ ಬಳಿಯಲ್ಲಿ ಭಾರತೀಯ ವಾಯುಪಡೆಯ ಮಾನವರಹಿತ ವಿಮಾನವು ಪತನಗೊಂಡಿದೆ. ದೈನಂದಿನ ಹಾರಾಟದ ವೇಳೆ ವಿಮಾನ ಪತನಗೊಂಡಿದೆ. ಅವಘಡದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಯಾರದ್ದೇ ವೈಯಕ್ತಿಕ ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ” ಎಂದು ತಿಳಿಸಿದೆ.

ವಿಮಾನ ಪತನದ ಸುದ್ದಿ ತಿಳಿಯುತ್ತಲೇ ಖುರಿ ಪೊಲೀಸ್‌ ಠಾಣೆ ಅಧಿಕಾರಿ ಮೇ ಜಾಬ್ತಾ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ವಾಯುಪಡೆ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿದೆ. ವಿಮಾನ ಪತನವಾಗುತ್ತಲೇ ಸುತ್ತಮುತ್ತಲಿನ ನೂರಾರು ಗ್ರಾಮಸ್ಥರು ಜಮಾಯಿಸಿದ್ದರು.

ಕಳೆದ ತಿಂಗಳಷ್ಟೇ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯುಪಡೆಯ ತೇಜಸ್​ ಯುದ್ಧ ವಿಮಾನ ಪತನಗೊಂಡಿತ್ತು. ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (ಎಲ್‌ಸಿಎ) ತೇಜಸ್ ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್ ಬಳಿ ಪತನಗೊಂಡಿದ್ದು, ಪೈಲಟ್​ಗಳು ಸುರಕ್ಷಿತವಾಗಿದ್ದರು.

ʼಭಾರತ್ ಶಕ್ತಿ 2024ʼ ತರಬೇತಿ ವೇಳೆ ಫೈಟರ್ ಜೆಟ್ ಜೈಸಲ್ಮೇರ್‌ನ ಜವಾಹರ್ ಕಾಲೋನಿ ಬಳಿ ಪತನವಾಗಿತ್ತು. ಮಧ್ಯಾಹ್ನ 2 ಗಂಟೆಗೆ ಫೈಟರ್ ಜೆಟ್ ಪತನವಾಗಿ ಬೆಂಕಿ ಹತ್ತಿಕೊಂಡಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು. ಹೇಗೋ ಇಬ್ಬರೂ ಪೈಲಟ್‌ಗಳು ಫೈಟರ್ ಜೆಟ್‌ನಿಂದ ಜಿಗಿದು ತಮ್ಮ ಪ್ರಾಣ ಉಳಿಸಿಕೊಂಡಿದ್ದರು.

ಇದನ್ನೂ ಓದಿ: Russian Military Plane: ರಕ್ಷಣಾ ಸಚಿವಾಲಯದ ವಿಮಾನ ಪತನ; 15 ಮಂದಿಯ ದಾರುಣ ಸಾವು

Continue Reading

ದೇಶ

Horlicks Label: ಹಾರ್ಲಿಕ್ಸ್‌ ಇನ್ನು ಹೆಲ್ತ್‌ ಡ್ರಿಂಕ್ಸ್‌ ಅಲ್ಲ ಎಂದ ಹಿಂದುಸ್ತಾನ್‌ ಯುನಿಲಿವರ್;‌ ಕಾರಣ ಏನು?

Horlicks Label: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯವು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಹಾರ್ಲಿಕ್ಸ್‌ ಸೇರಿ ಹಲವು ಮಾಲ್ಟ್‌ ಆಧಾರಿತ ಪಾನೀಯಗಳ ಮೇಲಿನ ಹೆಲ್ತ್‌ ಫುಡ್‌ ಡ್ರಿಂಕ್ಸ್‌ ಎಂಬ ಲೇಬಲ್‌ ತೆಗೆದುಹಾಕಲಾಗಿದೆ. ಇನ್ನು ಇವು ಕ್ರಿಯಾತ್ಮಕ ಪೌಷ್ಟಿಕ ಪಾನೀಯ ಎನಿಸಿಕೊಳ್ಳಲಿವೆ. ಇದರಿಂದ ಜನರ ದಾರಿ ತಪ್ಪಿಸುವ ಜಾಹೀರಾತು, ಗ್ರಾಹಕರ ಗೊಂದಲ ನಿವಾರಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Horlicks Label
Koo

ನವದೆಹಲಿ: ಭಾರತದಲ್ಲಿ ಹಾರ್ಲಿಕ್ಸ್‌ ಕುಡಿಯದವರೇ ಇರಲಿಕ್ಕಿಲ್ಲ. ಚಿಕ್ಕ ಮಕ್ಕಳಿಂದ ಹಿಡಿದು, ದೊಡ್ಡವರವರೆಗೆ ಕುಡಿಯುತ್ತಾರೆ. ಅದರಲ್ಲೂ, ಯಾರು ಬಾಲ್ಯದಲ್ಲಿ ಹಾರ್ಲಿಕ್ಸ್‌ ಕುಡಿದಿಲ್ಲವೋ, ಅಷ್ಟರಮಟ್ಟಿಗೆ ಅವರ ಬಾಲ್ಯ ‘ಸಪ್ಪೆ’ ಎಂದೇ ಹೇಳಲಾಗುತ್ತಿದೆ. ಇಂತಹ ನೆನಪುಗಳ ಹಿನ್ನೆಲೆ ಹೊಂದಿರುವ ಹಾರ್ಲಿಕ್ಸ್‌ ಬಾಟಲಿ ಮೇಲಿನ ಹೆಲ್ತ್‌ ಫುಡ್‌ ಡ್ರಿಂಕ್ಸ್‌ (Health Food Drinks) ಎಂಬ ಲೇಬಲ್‌ಅನ್ನು (Horlicks Label) ಹಿಂದುಸ್ತಾನ್‌ ಯುನಿಲಿವರ್‌ (HUL) ತೆಗೆದುಹಾಕಿದೆ. ಇತ್ತೀಚಿನ ನಿಯಮಗಳ ಬದಲಾವಣೆ ಭಾಗವಾಗಿ ಲೇಬಲ್‌ಅನ್ನು ತೆಗೆದುಹಾಕಿದೆ ಎಂದು ಹೇಳಲಾಗುತ್ತಿದೆ.

ಹಾರ್ಲಿಕ್ಸ್‌ ಬಾಟಲಿ ಮೇಲಿನ ಹೆಲ್ತ್‌ ಫುಡ್‌ ಡ್ರಿಂಕ್ಸ್‌ ಲೇಬೆಲ್‌ ತೆಗೆದುಹಾಕಲಾಗಿದ್ದು, ಈಗ ಹಾರ್ಲಿಕ್ಸ್‌ ಸೇರಿ ಹಲವು ರೀತಿಯ ಪಾನೀಯಗಳನ್ನು ಕ್ರಿಯಾತ್ಮಕ ಪೌಷ್ಟಿಕ ಪಾನೀಯ (Functional Nutritional Drinks) ಎಂಬ ಹೊಸ ಕೆಟಗರಿಗೆ ಸೇರಿಸಲಾಗಿದೆ. ಪಾನೀಯಗಳನ್ನು ಹೆಲ್ತ್‌ ಫುಡ್‌ ಡ್ರಿಂಕ್ಸ್‌ ಕೆಟಗರಿಯಿಂದ ತೆಗೆದು, ಕ್ರಿಯಾತ್ಮಕ ಪೌಷ್ಟಿಕ ಪಾನೀಯಗಳ ಪಟ್ಟಿಗೆ ಸೇರಿಸಬೇಕು. ವೆಬ್‌ಸೈಟ್‌ ಸೇರಿ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲೂ ಇದನ್ನೇ ನಮೂದಿಸಬೇಕು ಎಂಬುದಾಗಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯವು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಹಿಂದುಸ್ತಾನ್‌ ಯುನಿಲಿವರ್‌ ಈ ಕ್ರಮ ತೆಗೆದುಕೊಂಡಿದೆ.

“ಸಚಿವಾಲಯದ ಸೂಚನೆಯಂತೆ ನಾವು ಹೆಲ್ತ್‌ ಫುಡ್‌ ಡ್ರಿಂಕ್ಸ್‌ ಕೆಟಗರಿಯನ್ನು ಕ್ರಿಯಾತ್ಮಕ ಪೌಷ್ಟಿಕ ಪಾನೀಯ ಎಂಬುದಾಗಿ ಬದಲಾಯಿಸಿದ್ದೇವೆ. ಈ ಹೆಸರಿನಿಂದಲೇ ಕರೆಯುವುದು ಸಮಂಜಸ ಎಂಬ ನಿರ್ಧಾರಕ್ಕೆ ಬರಲಾಗಿದೆ. ಹಾಗೆಯೇ, ಹೊಸ ಹೆಸರು ಪಾರ್ದರ್ಶಕವಾಗಿಯೂ ಇದೆ. ಹಾಗಾಗಿ, ಹೊಸ ಹೆಸರನ್ನು ಇಡಲಾಗಿದೆ” ಎಂದು ಹಿಂದುಸ್ತಾನ್‌ ಯುನಿಲಿವರ್‌ನ ಚೀಫ್‌ ಫೈನಾನ್ಶಿಯಲ್‌ ಆಫೀಸರ್‌ ರಿತೇಶ್‌ ತಿವಾರಿ ಮಾಹಿತಿ ನೀಡಿದ್ದಾರೆ. ಇದರಿಂದ ದಾರಿತಪ್ಪಿಸುವ ಜಾಹೀರಾತುಗಳ ತಡೆಯಾಗುವುದರ ಜತೆಗೆ ಗ್ರಾಹಕರಿಗೂ ಗೊಂದಲ ಇರುವುದಿಲ್ಲ ಎಂಬುದು ಸಚಿವಾಲಯದ ಚಿಂತನೆಯಾಗಿದೆ ಎಂದು ತಿಳಿದುಬಂದಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳ ಕಾಯ್ದೆ ಅಡಿಯಲ್ಲಿ ಹೆಲ್ತ್‌ ಡ್ರಿಂಕ್ಸ್‌ ಎಂಬ ಪದಕ್ಕೆ ಸರಿಯಾದ ವ್ಯಾಖ್ಯಾನ ಸಿಗದ ಕಾರಣ ಹೊಸ ಹೆಸರು ಸೂಚಿಸಲಾಗಿದೆ. ಇದೇ ಕಾರಣಕ್ಕಾಗಿ ಇತ್ತೀಚೆಗೆ ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರವು (FSSAI) ಇತ್ತೀಚೆಗೆ ಎಲ್ಲ ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್‌ಗಳಿಗೆ ಹೆಲ್ತ್‌ ಡ್ರಿಂಕ್ಸ್‌ ಅಥವಾ ಎನರ್ಜಿ ಡ್ರಿಂಕ್ಸ್‌ ಎಂಬ ಕೆಟಗರಿಯನ್ನು ತೆಗೆದುಹಾಕಬೇಕು ಎಂದು ಸೂಚಿಸಿತ್ತು. ಡೇರಿ, ಸಿರೀಲ್‌ ಅಥವಾ ಮಾಲ್ಟ್‌ ಆಧಾರಿತ ಪಾನೀಯಗಳ ಮೇಲಿನ ಲೇಬೆಲ್‌ ತೆಗೆದುಹಾಕಲು ಸೂಚಿಸಿತ್ತು. ಅದರಂತೆ, ಕೆಟಗರಿಯನ್ನು ತೆಗೆದುಹಾಕಲಾಗಿದೆ.

ಇದನ್ನೂ ಓದಿ: MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಗುಣಮಟ್ಟ ತಪಾಸಣೆಗೆ ಸೂಚನೆ

Continue Reading
Advertisement
arunachal pradesh landslide
ವೈರಲ್ ನ್ಯೂಸ್6 mins ago

Arunachal Pradesh landslide: ಅರುಣಾಚಲದಲ್ಲಿ ಭೂಕುಸಿತ, ಚೀನಾ ಗಡಿ ಪ್ರದೇಶಕ್ಕೆ ಸಂಪರ್ಕ ಬಂದ್‌

Neha Murder case CID Officer
ಹುಬ್ಬಳ್ಳಿ14 mins ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Virender Sehwag
ಕ್ರೀಡೆ22 mins ago

Virender Sehwag: ಬಡ ದೇಶದ ಕ್ರಿಕೆಟ್​ ಲೀಗ್​ ಆಡಲ್ಲ ಎಂದ ವೀರೇಂದ್ರ ಸೆಹವಾಗ್; ಕಾರಣವೇನು?

Guru Raghavendra and Vasishta Co operative Bank fraud handed over to SIT says DK Shivakumar
ಬೆಂಗಳೂರು24 mins ago

Bank fraud: ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

Shakhahaari Movie In OTT amzon Prime
ಸ್ಯಾಂಡಲ್ ವುಡ್30 mins ago

Shakhahaari Movie: ಒಟಿಟಿಗೆ ಎಂಟ್ರಿ ಕೊಡ್ತಿದೆ ʻಶಾಖಾಹಾರಿʼ ಸಿನಿಮಾ! ಸ್ಟ್ರೀಮಿಂಗ್‌ ಎಲ್ಲಿ? ಯಾವಾಗ?

Xiaomi EV
ಆಟೋಮೊಬೈಲ್31 mins ago

Xiaomi EV: ತಿಂಗಳಲ್ಲಿ 75 ಸಾವಿರ ಆರ್ಡರ್ ಸ್ವೀಕರಿಸಿದ ಕ್ಸಿಯೋಮಿ ಎಸ್‌ಯು 7 ಎಲೆಕ್ಟ್ರಿಕ್‌ ಕಾರು; ಟೆಸ್ಲಾಗಿಂತ ಅಗ್ಗ!

Nilkrishna Gajare JEE main 2024 result AIR 1
ಅಂಕಣ39 mins ago

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

Aircraft Crash
ದೇಶ45 mins ago

Aircraft Crash: ಭಾರತೀಯ ವಾಯುಪಡೆಯ ವಿಮಾನ ಪತನ; ಭಾಗಗಳು ಸುಟ್ಟು ಭಸ್ಮ

Lok Sabha Election 2024 vote for better future and 98 year old woman dies when returning officer arrives at home to cast her vote
ಪ್ರಮುಖ ಸುದ್ದಿ56 mins ago

Lok Sabha Election 2024: ಮತ ಹಾಕಿಸಿಕೊಳ್ಳಲು ಚುನಾವಣಾಧಿಕಾರಿಗಳು ಮನೆಗೆ ಬಂದಾಗಲೇ 98ರ ವೃದ್ಧೆ ಸಾವು!

Horlicks Label
ದೇಶ59 mins ago

Horlicks Label: ಹಾರ್ಲಿಕ್ಸ್‌ ಇನ್ನು ಹೆಲ್ತ್‌ ಡ್ರಿಂಕ್ಸ್‌ ಅಲ್ಲ ಎಂದ ಹಿಂದುಸ್ತಾನ್‌ ಯುನಿಲಿವರ್;‌ ಕಾರಣ ಏನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder case CID Officer
ಹುಬ್ಬಳ್ಳಿ14 mins ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

ಟ್ರೆಂಡಿಂಗ್‌