Site icon Vistara News

Rajnath Singh | ಶೀಘ್ರವೇ ಭಾರತಕ್ಕೆ ಗಿಲ್ಗಿಟ್-ಬಾಲ್ಟಿಸ್ತಾನ್, ಪಿಒಕೆ! ಪಾಕ್‌ಗೆ ರಾಜನಾಥ್ ಸಿಂಗ್ ಎಚ್ಚರಿಕೆ

Rajnath Singh manipal visit

ನವ ದೆಹಲಿ: ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ವನ್ನು ಸಂಪೂರ್ಣವಾಗಿ ವಶಕ್ಕೆ ಪಡೆದುಕೊಂಡ ನಂತರವೇ 2019ರ ಆಗಸ್ಟ್ 5ರಂದು ಆರಂಭವಾಗಿರುವ ಜಮ್ಮು ಮತ್ತು ಕಾಶ್ಮೀರ ಇಂಟಿಗ್ರೇಷನ್ ಮಿಷನ್ ಪೂರ್ಣಗೊಳ್ಳಲಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ (Rajnath Singh) ಅವರು ಹೇಳಿದ್ದಾರೆ. ಪಾಕಿಸ್ತಾನದಿಂದ ದೌರ್ಜನ್ಯಕ್ಕೆ ಒಳಗಾಗಿರುವ ಮತ್ತು ಹಕ್ಕುಗಳನ್ನು ಕಳೆದುಕೊಂಡಿರುವ ಪಾಕ್ ಆಕ್ರಮಿತ ಕಾಶ್ಮೀರ ಜನರ ನೋವು ನಮಗೆ ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

ಶೌರ್ಯ ದಿವಸ್ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಂದೆಡೆ ಪಾಕಿಸ್ತಾನದ ದೌರ್ಜನ್ಯಕ್ಕೆ ಪಾಕ್ ಆಕ್ರಮಿತ ಕಾಶ್ಮೀರ ಜನರು ಒಳಗಾಗಿದ್ದರೆ, ಮತ್ತೊಂದೆಡೆ ಕಾಶ್ಮೀರ್, ಲಡಾಕ್ ಜನರು 2019ರಿಂದ ಅಭಿವೃದ್ಧಿ ಮತ್ತು ಸಮೃದ್ಧಿಯ ಪಥದಲ್ಲಿ ಸಾಗುತ್ತಿದ್ದಾರೆ. ಇದು ಕೇವಲ ಆರಂಭವಷ್ಟೇ. ಪಾಕ್ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ – ಬಾಲ್ಟಿಸ್ತಾನ್ ಮತ್ತು ಪಿಒಕೆಯ ಪ್ರದೇಶಗಳು ಭಾರತದೊಂದಿಗೆ ವಿಲೀನಗೊಳ್ಳುವ ದಿನಗಳು ದೂರವಿಲ್ಲ. ನ್ಯಾಯ ದೊರೆತಾಗ, 1947ರ ನಿರಾಶ್ರಿತರು ತಮ್ಮ ಜಮೀನು ಮತ್ತು ಮನೆಗಳನ್ನು ವಾಪಸ್ ಪಡೆಯಲಿದ್ದಾರೆ ಎಂದರು.

ಪಾಕ್ ಆಕ್ರಮಿಕ ಕಾಶ್ಮೀರದಲ್ಲಿ ಪಾಕಿಸ್ತಾನವು ಹದ್ದು ಮೀರಿ ವರ್ತಿಸುತ್ತಿದೆ. ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ಮೊಸಳೆ ಕಣ್ಣೀರು ಸುರಿಸುವ ಪಾಕಿಸ್ತಾನಕ್ಕೆ ನಾನು ಕೇಳಲು ಬಯಸುತ್ತೇನೆ. ಪಿಒಕೆಯಲ್ಲಿರುವ ಜನರಿಗೆ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ, ಉಲ್ಲಂಘನೆ ಮಾಡಲಾಗುತ್ತಿದೆ. ಇದಕ್ಕೇನು ಹೇಳುತ್ತೀರಿ? ಪಾಕಿಸ್ತಾನವು ಈ ಪ್ರದೇಶಗಳನ್ನು ಅಕ್ರಮವಾಗಿ ವಶಪಡಿಸಿಕೊಂಡು, ದ್ವೇಷದ ಬೀಜಗಳನ್ನು ಬಿತ್ತಲಾಗಿದೆ. ಪಿಒಕೆ ಜನರ ಮೇಲೆ ನಡೆಸಲಾಗಿರುವ ದೌರ್ಜನ್ಯ ಮತ್ತು ದಮನಕಾರಿ ನೀತಿಗೆ ಪಾಕಿಸ್ತಾನವು ತಕ್ಕ ಬೆಲೆಯನ್ನು ತೆರುವ ದಿನಗಳು ದೂರ ಇಲ್ಲ ಎಂದು ರಾಜನಾಥ ಸಿಂಗ್ ಅವರು ಎಚ್ಚರಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ | Nuclear Weapons | ಯಾವುದೇ ಕಾರಣಕ್ಕೂ ಅಣ್ವಸ್ತ್ರ ಬಳಕೆ ಕೂಡದು, ರಷ್ಯಾಗೆ ರಾಜನಾಥ್‌ ಸಿಂಗ್‌ ಆಗ್ರಹ

Exit mobile version