ಕೇರಳ: ಅಕ್ರಮ ಚಿನ್ನ ಸಾಗಾಟ(Gold Smuggling) ಮಾಡುತ್ತಿದ್ದ ಗಗನಸಖಿಯನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಚ್ಚರಿಯ ವಿಚಾರವೆಂದರೆ 960 ಗ್ರಾಂ ಚಿನ್ನವನ್ನು ಆಕೆ ತನ್ನ ಗುದನಾಳದಲ್ಲಿಟ್ಟುಕೊಂಡು ಬಂದಿದ್ದಳು ಎನ್ನಲಾಗಿದೆ. ಇದೀಗ ಆಕೆಯನ್ನು ಅರೆಸ್ಟ್ ಮಾಡಿರುವ ಕಂದಾಯ ಗುಪ್ತಚರ ನಿರ್ದೇಶನಾಲಯ(DRI) ಆಕೆಯನ್ನು 14 ದಿನಗಳ ಕಾಲ ತನ್ನ ವಶಕ್ಕೆ ಪಡೆದಿದೆ.
ಬಂಧಿತ ಗಗನಸಖಿಯನ್ನು ಕೋಲ್ಕತ್ತಾ ಮೂಲದ ಸುರಭಿ ಖತುನ್ ಎಂದು ಗುರುತಿಸಲಾಗಿದ್ದು, ಆಕೆ ತನ್ನ ಗುದನಾಳದಲ್ಲಿ ಬರೋಬ್ಬರಿ 960 ಚಿನ್ನವನ್ನು ಅಕ್ರಮವಾಗಿ ಭಾರತಕ್ಕೆ ತಂದಿದ್ದಾಳೆ. ಆಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ಮಸ್ಕತ್‌ನಿಂದ ಕಣ್ಣೂರಿಗೆ ಮೇ 28ರಂದು ಬಂದಿದ್ದ ವಿಮಾನದಲ್ಲಿ ಆಕೆ ಬಂದಿದ್ದಳು. DRI ಅಧಿಕಾರಿಗಳು ಚೆಕ್ಕಿಂಗ್ ಮಾಡುವಾಗ ಆಕೆಯ ಬಳಿಕ ಚಿನ್ನ ಇರುವ ವಿಚಾರ ಬಯಲಾಗಿದೆ. ತಕ್ಷಣ ಆಕೆಯನ್ನು ಅರಸ್ಟ್ ಮಾಡಲಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಾದ ಬಳಿಕ ಆಕೆಯನ್ನು ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಗಿದ್ದು, ಆಕೆಯನ್ನು 14 ದಿನಗಳ ಕಾಲ DRI ಕಸ್ಟಡಿಗೆ ಒಪ್ಪಿಸಲಾಗಿದೆ.
ಇನ್ನು ಗಗನಸಖಿಯೊಬ್ಬಳು ತನ್ನ ಗುದನಾಳದಲ್ಲಿ ಚಿನ್ನ ಅಡಗಿಸಿಟ್ಟುಕೊಂಡು ಅಕ್ರಮ ಸಾಗಾಟ ಮಾಡಿರುವುದು ಇದೇ ಮೊದಲ ಪ್ರಕರಣ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇನ್ನು ನಿನ್ನೆಯಷ್ಟೇ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರ ಆಪ್ತ ಸಹಾಯಕನನ್ನು ಅರೆಸ್ಟ್ ಮಾಡಲಾಗಿತ್ತು. ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣ(IGI Airport)ದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಶಶಿ ತರೂರ್ ಅವರ ಪಿಎ ಶಿವ ಪ್ರಸಾದ್ ಅವರನ್ನು ವಶಕ್ಕೆ ಪಡೆಸಿದ್ದಾರೆ. ಶಿವ ಕುಮಾರ್ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಕಸ್ಟಮ್ಸ್ ಅಧಿಕಾರಿಗಳು ಟರ್ಮಿನಲ್ 3ರಲ್ಲಿ ಅವರನ್ನು ಪರಿಶೀಲನೆ ನಡೆಸಿ ಬಂಧಿಸಿದ್ದಾರೆ ಎನ್ನಲಾಗಿದೆ.
ಈ ಕುರಿತು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ದುಬೈನಿಂದ ತಮ್ಮ ಸಹಾಯಕನ ಮೂಲಕ ಅಕ್ರಮವಾಗಿ ಚಿನ್ನವನ್ನು ಶಿವಕುಮಾರ್ ತರಿಸಿದ್ದರು. ಇದನ್ನು ಪಡೆಯುವ ವೇಳೆ ಕಸ್ಟಮ್ಸ್ ಅಧಿಕಾರಿಗಳು ಅವರನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು 30ಲಕ್ಷ ರೂ.ಗೂ ಅಧಿಕ ಮೊತ್ತದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಈ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕುಮಾರ್ ದುಬೈನಿಂದ ದೆಹಲಿ ಏರ್‌ಪೋರ್ಟ್‌ಗೆ ಬಂದಿಳಿಯುತ್ತಿದ್ದಂತೆ ಕಸ್ಟಮ್ಸ್ ಆದಿಕಾರಿಗಳು ಅವರನ್ನು ವಿಚಾರಣೆಗೊಳಪಡಿಸಿದ್ದು, ಚಿನ್ನ ಎಲ್ಲಿಂದ ಬಂತು ಹೇಗೆ ಬಂದು ಎಂಬ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಆಗ ಕುಮಾರ್ ಅಧಿಕಾರಿಗಳ ಪ್ರಶ್ನೆಗೆ ಸಮಾಧಾನಕರ ಉತ್ತರ ನೀಡಿಲ್ಲ. ಹೀಗಾಗಿ ಅವರನ್ನು ಅರೆಸ್ಟ್ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.