ನವದೆಹಲಿ: ವಿಶ್ವ ಮಹಿಳೆಯರ ದಿನಾಚರಣೆ (International Women’s Day 2024) ದಿನವೇ ಪ್ರಧಾನಿ ನರೇಮದ್ರ ಮೋದಿ (Narendra Modi) ಅವರು ದೇಶದ ಗೃಹಿಣಿಯರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಕೆ (LPG Price Cut) ಮಾಡಿ ನರೇಂದ್ರ ಮೋದಿ ಅವರು ಆದೇಶ ಹೊರಡಿಸಿದ್ದು, ಇದರಿಂದ ದೇಶದ ಲಕ್ಷಾಂತರ ಮಹಿಳೆಯರು ಅನುಕೂಲ ಪಡೆಯಲಿದ್ದಾರೆ. ನರೇಂದ್ರ ಮೋದಿ ಅವರೇ ಈ ಕುರಿತು ಎಕ್ಸ್ ಸಾಮಾಜಿಕ ಜಲತಾಣದಲ್ಲಿ ಮಾಹಿತಿ ನೀಡಿದ್ದಾರೆ.
“ಇಂದು ಮಹಿಳೆಯರ ದಿನ. ಹಾಗಾಗಿ, ಕೇಂದ್ರ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಸಲು ತೀರ್ಮಾನಿಸಿದೆ. ಇದರಿಂದ ದೇಶದ ಲಕ್ಷಾಂತರ ಮನೆಗಳಲ್ಲಿ ಹಣಕಾಸು ಹೊರೆಯಾಗುವುದು ತಪ್ಪಲಿದೆ. ಅದರಲ್ಲೂ, ದೇಶದ ಹೆಣ್ಣುಮಕ್ಕಳ ಸಬಲೀಕರಣದ ದಿಸೆಯಲ್ಲಿ ಕೇಂದ್ರ ಸರ್ಕಾರದ ನಿರ್ಧಾರವು ಮಹತ್ವದ್ದಾಗಿದೆ” ಎಂದು ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.
Today, on Women's Day, our Government has decided to reduce LPG cylinder prices by Rs. 100. This will significantly ease the financial burden on millions of households across the country, especially benefiting our Nari Shakti.
— Narendra Modi (@narendramodi) March 8, 2024
By making cooking gas more affordable, we also aim…
ಮಹಿಳೆಯರಿಗೆ ಕೈಗೆಟಕುವ ದರದಲ್ಲಿ ಅಡುಗೆ ಅನಿಲ ಸಿಗುವಂತೆ ಮಾಡುವ ಜತೆಗೆ ಕುಟುಂಬಗಳ ಸೌಖ್ಯಕ್ಕಾಗಿ ನೆರವು ನೀಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಇದು ಮಹಿಳೆಯರ ಸಬಲೀಕರಣ ಹಾಗೂ ಹೆಣ್ಣುಮಕ್ಕಳು ಸುಲಭವಾಗಿ ಜೀವನ ಸಾಗಿಸುವ ದಿಸೆಯಲ್ಲಿ ಕೇಂದ್ರ ಸರ್ಕಾರದ ಪ್ರಯತ್ನವಾಗಿದೆ” ಎಂದು ಪ್ರಧಾನಿ ಪೋಸ್ಟ್ ಮಾಡಿದ್ದಾರೆ.
ಉಜ್ವಲ ಯೋಜನೆ ಅಡಿಯಲ್ಲಿ ನೀಡುತ್ತಿರುವ ಅಡುಗೆ ಅನಿಲ ಸಿಲಿಂಡರ್‌ಗೆ ನೀಡುವ 300 ರೂಪಾಯಿ ಸಬ್ಸಿಡಿಯನ್ನು (LPG Subsidy) 2024-25ನೇ ಹಣಕಾಸು ವರ್ಷದವರೆಗೆ ವಿಸ್ತರಣೆ ಮಾಡಲು ಗುರುವಾರ (ಮಾರ್ಚ್ 7) ನಡೆದ ಸಚಿವ ಸಂಪುಟ ಸಭೆಯಲ್ಲಿಯೇ ತೀರ್ಮಾಣಿಸಲಾಗಿದೆ. ಇದರೊಂದಿಗೆ ಉಜ್ವಲ ಯೋಜನೆ ಅಡಿಯಲ್ಲಿ 14.2 ಕೆ.ಜಿ ತೂಕದ ಎಲ್‌ಪಿಜಿ ಸಿಲಿಂಡರ್ ಖರೀದಿಸುವವರಿಗೆ ಅನುಕೂಲವಾಗಲಿದೆ. ದೇಶದ 10 ಕೋಟಿ ಗೃಹಿಣಿಯರು ಸಬ್ಸಿಡಿಯ ಲಾಭ ಪಡೆಯಲಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ಬೆಲೆ ಇಳಿಕೆ ಮಾಡಿದೆ.
ಇದನ್ನೂ ಓದಿ: DA Hike: ಕೇಂದ್ರ ನೌಕರರಿಗೆ ಗುಡ್ ನ್ಯೂಸ್; ಶೇ.4ರಷ್ಟು ಡಿಎ ಹೆಚ್ಚಳದ ಜತೆಗೆ ಹಲವು ಬಂಪರ್!
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 300 ರೂಪಾಯಿಗಳ ಸಬ್ಸಿಡಿಯನ್ನು ನೇರವಾಗಿ ಅವರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಪರಿಷ್ಕೃತ ದರ ಅನ್ವಯ ಈಗ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ 603 ರೂ.ಗೆ ದೊರೆಯಲಿದೆ. ಈಗ ಸಬ್ಸಿಡಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ