ತಿರುವನಂತಪುರಂ: ಕೇರಳದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹಾಗೂ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ ಸರ್ಕಾರದ ನಡುವಿನ ಸಂಘರ್ಷ (Kerala Governor VS LDF) ತಾರಕಕ್ಕೇರಿದೆ. ಕೇರಳದ ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದುಹಾಕುವ ಕುರಿತು ತೀರ್ಮಾನ ಕೈಗೊಂಡ ಬೆನ್ನಲ್ಲೇ ರಾಜ್ಯ ಸರ್ಕಾರವು ಕೇರಳ ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯಿಂದ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಕೆಳಗಿಳಿಸಿದೆ.
ಕೇರಳದ ಹಲವು ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಕೂಡಲೇ ಒಂಬತ್ತು ವಿವಿಗಳ ಕುಲಪತಿಗಳು ರಾಜೀನಾಮೆ ನೀಡಬೇಕು ಎಂದು ಆರಿಫ್ ಮೊಹಮ್ಮದ್ ಖಾನ್ ಆದೇಶಿಸಿದ್ದರು. ಇದಾದ ಬಳಿಕ ಕೇರಳ ಸರ್ಕಾರ ಹಾಗೂ ರಾಜ್ಯಪಾಲರ ಮಧ್ಯೆ ತೀವ್ರ ಬಿಕ್ಕಟ್ಟು ಉಂಟಾಗಿದೆ.
ಇದೇ ಕಾರಣಕ್ಕೆ ಒಂದು ಹೆಜ್ಜೆ ಮುಂದೆ ಇಟ್ಟಿರುವ ಪಿಣರಾಯಿ ಸರ್ಕಾರವು, ವಿವಿಗಳ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ಕೆಳಗಿಳಿಸುವ ಕುರಿತು ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಿದೆ. ಇಂತಹ ನಿರ್ಧಾರ ಕೈಗೊಂಡ ಬೆನ್ನಲ್ಲೇ ಕೇರಳ ಕಲಾಮಂಡಲಂ ವಿವಿ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ಕೆಳಗಿಳಿಸಿದೆ. ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ರಾಜ್ಯಪಾಲರನ್ನು ಸರ್ಕಾರಿ ವಿವಿಗಳ ಕುಲಾಧಿಪತಿ ಹುದ್ದೆಯಿಂದ ತೆರವುಗೊಳಿಸುವ ದಿಸೆಯಲ್ಲಿ ವಿಧೇಯಕ ಮಂಡಿಸಲಾಗಿದೆ.
ಇದನ್ನೂ ಓದಿ | Kerala Governor | ಕುಲಪತಿಗಳ ರಾಜೀನಾಮೆಗೆ ಕೇರಳ ರಾಜ್ಯಪಾಲ ಆದೇಶ, ಇಂದು ಸಂಜೆ ಹೈಕೋರ್ಟ್‌ನಲ್ಲಿ ವಿಚಾರಣೆ