ನವದೆಹಲಿ: ರಕ್ಷಾ ಬಂಧನಕ್ಕೆ (Raksha Bandhan) ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 200 ರೂ. ಕಡಿತ (LPG Price Cut) ಮಾಡಿದ್ದ ಕೇಂದ್ರ ಸರ್ಕಾರವು (Central Government) ಈಗ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಖುಷಿ ಸುದ್ದಿ ನೀಡಿದೆ. 200 ರೂ. ಇದ್ದ ಸಬ್ಸಿಡಿ ಮೊತ್ತವನ್ನು 300 ರೂಪಾಯಿಗೆ ಏರಿಕೆ ಮಾಡಿದೆ. ಪ್ರಧಾನಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ(Pradhan Mantri Ujjwala Yojana).
ಸದ್ಯ, 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ 903 ರೂ. ಇದೆ. ಜೂನ್ 2020 ರಲ್ಲಿ ಸಬ್ಸಿಡಿಯನ್ನು ಸ್ಥಗಿತಗೊಳಿಸಿದ ನಂತರ ಉಜ್ವಲ ಯೋಜನೆಯ ಫಲಾನುಭವಿಗಳು ಸೇರಿದಂತೆ ಎಲ್ಲಾ ಬಳಕೆದಾರರು LPG ಸಿಲಿಂಡರ್‌ಗಳನ್ನು ಮಾರುಕಟ್ಟೆ ದರದಲ್ಲಿ ಖರೀದಿಸುತ್ತಿದ್ದರು. ಖರೀದಿಸುತ್ತಾರೆ. ಈಗ, ಇತ್ತೀಚಿನ ಸರ್ಕಾರದ ನಿರ್ಧಾರದ ನಂತರ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 300 ರೂಪಾಯಿಗಳ ಸಬ್ಸಿಡಿಯನ್ನು ನೇರವಾಗಿ ಅವರಿಗೆ ಜಮಾ ಮಾಡಲಾಗುತ್ತದೆ. ಪರಿಷ್ಕೃತ ದರ ಅನ್ವಯ ಈಗ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ 6.03 ರೂ.ಗೆ ದೊರೆಯಲಿದೆ.
ಮೇ 2016 ರಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯನ್ನು ಒಂದು ಪ್ರಮುಖ ಯೋಜನೆಯಾಗಿ ಪರಿಚಯಿಸಿತು. ಎಲ್‌ಪಿಜಿಯಂತಹ ಶುದ್ಧ ಅಡುಗೆ ಇಂಧನಗಳನ್ನು ಗ್ರಾಮೀಣ ಮತ್ತು ವಂಚಿತ ಕುಟುಂಬಗಳಿಗೆ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಸಾಂಪ್ರದಾಯಿಕ ಅಡುಗೆ ಇಂಧನಗಳಾದ ಉರುವಲು, ಕಲ್ಲಿದ್ದಲು ಬದಲಿಗೆ ಈ ಎಲ್‌ಪಿಜಿ ಸಿಲಿಂಡರ್‌ಗಳ್ನು ಸಬ್ಸಿಡಿ ದರದಲ್ಲಿ ಒದಗಿಸುವುದಾಗಿತ್ತು. ಸಾಂಪ್ರದಾಯಿಕ ಅಡುಗೆ ಇಂಧನಗಳ ಬಳಕೆಯು ಗ್ರಾಮೀಣ ಮಹಿಳೆಯರ ಆರೋಗ್ಯದ ಮೇಲೆ ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಬೀರಿದೆ.
ವಾಣಿಜ್ಯ ಬಳಕೆಯ ಸಿಲಿಂಡರ್ ತುಟ್ಟಿ
ಈ ತಿಂಗಳ ಮೊದಲ ದಿನವೇ (ಅಕ್ಟೋಬರ್ 1) ದೇಶದ ತೈಲ ಕಂಪನಿಗಳು ಜನರಿಗೆ ಬೆಲೆಯೇರಿಕೆಯ (LPG Price Hike) ಶಾಕ್ ನೀಡಿವೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 209 ರೂ. ಏರಿಕೆ ಮಾಡಿದ್ದು, ಭಾನುವಾರದಿಂದಲೇ ನೂತನ ಜಾರಿಗೆ ಬಂದಿದೆ. ಇದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ (Commercial LPG Cylinder) ಬಳಕೆದಾರರು ಮಾತ್ರವಲ್ಲ, ಗ್ರಾಹಕರಿಗೂ ಹೊರೆಯಾಗಿ ಪರಿಣಮಿಸಲಿದೆ.
ಈ ಸುದ್ದಿಯನ್ನೂ ಓದಿ: LPG Price Hike: ತಿಂಗಳ ಮೊದಲ ದಿನವೇ ಬ್ಯಾಡ್ ನ್ಯೂಸ್; ಎಲ್‌ಪಿಜಿ ಬೆಲೆ 209 ರೂ. ಏರಿಕೆ!
ಕಳೆದ ತಿಂಗಳಷ್ಟೇ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 157 ರೂ. ಇಳಿಕೆ ಮಾಡಿದ ಕಾರಣ ಬಳಕೆದಾರರು ತುಸು ನಿಟ್ಟುಸಿರು ಬಿಟ್ಟಿದ್ದರು. ಆದರೆ ಈಗ ಏಕಾಏಕಿ 209 ರೂ. ಏರಿಕೆ ಮಾಡಿರುವುದು ಹೊರೆಯಾಗಲಿದೆ. ಹೋಟೆಲ್ ಸೇರಿ ವಾಣಿಜ್ಯ ಕಾರಣಗಳಿಗಾಗಿ ಎಲ್‌ಪಿಜಿ ಬಳಸುವವರು ತಮ್ಮ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದರಿಂದ ಗ್ರಾಹಕರ ಮೇಲೂ ಪರಿಣಾಮ ಬೀರಲಿದೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆಯಿಂದಾಗಿ ದೆಹಲಿಯಲ್ಲಿ 19 ಕೆಜಿಯ ಸಿಲಿಂಡರ್ ಬೆಲೆ ಈಗ 1,731 ರೂ. ಆಗಿದೆ. ಇದುವರೆಗೆ ದೆಹಲಿಯಲ್ಲಿ 1,522 ರೂ. ಇತ್ತು. ಬೆಂಗಳೂರಿನಲ್ಲಂತೂ ದರ ಪರಿಷ್ಕರಣೆಯ ಬಳಿಕ ಎಲ್‌ಪಿಜಿ ಸಿಲಿಂಡರ್ ಬೆಲೆ 1,800 ರೂ. ದಾಟಿದೆ ಎಂದು ತಿಳಿದುಬಂದಿದೆ.
ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.ೆ