Site icon Vistara News

GST Collection: ಸೆಪ್ಟೆಂಬರ್ ತಿಂಗಳಲ್ಲಿ 1.63 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ, ಶೇ.10ರಷ್ಟು ಹೆಚ್ಚಳ!

GST Collection

GST collection in October 2023 hit second highest ever of ₹1.72 lakh crore

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಸಂಗ್ರಹವು (Goods and Service Tax) ಮತ್ತೊಂದು ಹಂತಕ್ಕೆ ತಲುಪಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, 2023ರ ಸೆಪ್ಟೆಂಬರ್ ತಿಂಗಳಲ್ಲಿ ಶೇ.10ರಷ್ಟು ಹೆಚ್ಚಳವಾಗಿದೆ. ಅಧಿಕೃತ ಮಾಹಿತಿಯ ಪ್ರಕಾರ ಸೆಪ್ಟೆಂಬರ್‌ನಲ್ಲಿ 1,62,712 ಕೋಟಿ ರೂ. ಸಂಗ್ರಹವಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಜಿಎಸ್‌ಟಿ ಕಲೆಕ್ಷನ್‌(GST Collection) ನಾಲ್ಕನೇ ಬಾರಿಗೆ 1.60 ಲಕ್ಷ ಕೋಟಿ ರೂ. ದಾಟಿದೆ ಎಂದು ಕೇಂದ್ರ ಹಣಕಾಸು ಇಲಾಖೆ ತಿಳಿಸಿದೆ(ministry of finance India).

ಸೆಪ್ಟೆಂಬರ್‌ಗೆ ಮುಕ್ತಾಯವಾದ 2023-24 ಸಾಲಿನ ಮೊದಲಾರ್ಧದಲ್ಲಿ ಒಟ್ಟಿ ಜಿಎಸ್‌ಟಿ ಸಂಗ್ರಹವು 8,92,508 ಕೋಟಿ ರೂಪಾಯಿಯಾಗಿದೆ. ಕಳೆದ ವರ್ಷಕ್ಕೆ ಹೋಲಿಸದರೆ ಜಿಎಸ್‌ಟಿ ಸಂಗ್ರಹದಲ್ಲಿ ಒಟ್ಟು ಶೇ.11ರಷ್ಟು ಏರಿಕೆಯಾಗಿದೆ. ವರ್ಷದ ಹಿಂದೆ 8,93,334 ಕೋಟಿ ರೂ. ಸಂಗ್ರಹವಾಗಿತ್ತು.

2023ರ ಸೆಪ್ಟೆಂಬರ್‌ರ ಆದಾಯವು ಕಳೆದ ವರ್ಷ ಇದೇ ತಿಂಗಳ ಜಿಎಸ್‌ಟಿ ಆದಾಯಕ್ಕಿಂತ 10 ಶೇಕಡಾ ಹೆಚ್ಚಾಗಿದೆ. ತಿಂಗಳ ಅವಧಿಯಲ್ಲಿ, ದೇಶೀಯ ವಹಿವಾಟುಗಳಿಂದ (ಸೇವೆಗಳ ಆಮದು ಸೇರಿದಂತೆ) ಆದಾಯವು ಕಳೆದ ವರ್ಷದ ಇದೇ ತಿಂಗಳಿನಲ್ಲಿ ಈ ಮೂಲಗಳಿಂದ ಬಂದ ಆದಾಯಕ್ಕಿಂತ 14 ಪ್ರತಿಶತ ಹೆಚ್ಚಾಗಿದೆ. 2023-24ರ ಹಣಕಾಸು ವರ್ಷದಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ನಾಲ್ಕನೇ ಬಾರಿಗೆ 1.60 ಲಕ್ಷ ಕೋಟಿ ರೂಪಾಯಿ ದಾಟಿದೆ ಎಂದು ಹಣಕಾಸು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: GST Collection: ಆಗಸ್ಟ್‌ ತಿಂಗಳಲ್ಲಿ ಭರ್ಜರಿ 1.6 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ!

2023-24ರ ಸಾಲಿನಲ್ಲಿ ಪ್ರತಿ ತಿಂಗಳು ಸರಾಸರಿ 1.65 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ. 2022-23ರ ಸಾಲಿನ ಮೊದಲಾರ್ಧ ಸಂಗ್ರಹವಾದ ಮೊತ್ತಕ್ಕೆ ಹೋಲಿಸಿದರೆ, ಇದು ಶೇ.11ರಷ್ಟು ಹೆಚ್ಚು. ಆ ಅವಧಿಯಲ್ಲಿ 1.49 ಲಕ್ಷ ರೂ. ಸರಾಸರಿ ಸಂಗ್ರಹವಾಗಿತ್ತು.

2023ರ ಸೆಪ್ಟೆಂಬರ್‌ನಲ್ಲಿ ಒಟ್ಟು ಜಿಎಸ್‌ಟಿ ಆದಾಯವು 1,62,712 ಕೋಟಿ ರೂ. ಆಗಿದೆ. ಈ ಪೈಕಿ ಸಿಜಿಎಸ್‌ಟಿ 29,818 ಕೋಟಿ ರೂ., ಎಸ್‌ಜಿಎಸ್‌ಟಿ 37,657 ಕೋಟಿ ರೂ., ಐಜಿಎಸ್‌ಟಿ 83,623 ಕೋಟಿ ರೂ. (ಸರಕುಗಳ ಆಮದಿನ ಮೇಲೆ ಸಂಗ್ರಹಿಸಲಾದ 41,145 ಕೋಟಿ ರೂ. ಸೇರಿದಂತೆ) ಮತ್ತು ಸೆಸ್ 11,613 ಕೋಟಿ ರೂ. (ಸಂಗ್ರಹಿಸಿದ ಸರಕುಗಳ ರೂ 881 ಕೋಟಿ ಸೇರಿದಂತೆ) ಸಂಗ್ರಹವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಾಣಿಜ್ಯದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version