Site icon Vistara News

Election Results Live Updates| ಗುಜರಾತ್​​ನಲ್ಲಿ 7ನೇ ಬಾರಿಗೆ ಅರಳಿದ ಕಮಲ; ಕೈ ಹಿಡಿದ ಹಿಮಾಚಲ ಪ್ರದೇಶ

election Result 2022

ಗುಜರಾತ್​ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಇಂದು ಬೆಳಗ್ಗೆ 8ಗಂಟೆಯಿಂದ ಪ್ರಾರಂಭವಾಗಿದೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್​ 12ರಂದು ವಿಧಾನಸಭೆ ಚುನಾವಣೆ ನಡೆದಿತ್ತು. ಹಾಗೇ, ಗುಜರಾತ್​​ನಲ್ಲಿ ಡಿಸೆಂಬರ್​ 1 ಮತ್ತು 5ರಂದು, ಎರಡು ಹಂತದಲ್ಲಿ ಮತದಾನ ನಡೆದಿತ್ತು. ಇವೆರಡೂ ರಾಜ್ಯಗಳ ಮತ ಎಣಿಕೆ ಆಯಾ ರಾಜ್ಯಗಳಲ್ಲಿ ಪ್ರಾರಂಭವಾಗಿದೆ. ಹಿಮಾಚಲ ಪ್ರದೇಶ ಮತ್ತು ಗುಜರಾತ್​ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಗೆಲ್ಲುತ್ತದೆ ಎಂಬುದು ಚುನಾವಣೋತ್ತರ ಸಮೀಕ್ಷೆಗಳ ವರದಿ. ಈಗಾಗಲೇ ಎರಡೂ ರಾಜ್ಯಗಳಲ್ಲಿ ಪ್ರಾರಂಭ ಆಗಿರುವ ಮತ ಎಣಿಕೆಯ ಕ್ಷಣಕ್ಷಣದ ಮಾಹಿತಿ, ನಿಮ್ಮ ವಿಸ್ತಾರ ನ್ಯೂಸ್​ (http://vistaranews.com)ವೆಬ್​ಸೈಟ್​​ನಲ್ಲಿ.

Lakshmi Hegde

ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿದ ಪ್ರಧಾನಿ ಮೋದಿ

ಗುಜರಾತ್​ ಮತ್ತು ಹಿಮಾಚಲ ಪ್ರದೇಶದ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿದ್ದಾರೆ. ಅವರು ಕೆಲವೇ ಕ್ಷಣದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Lakshmi Hegde

ಬಿಜೆಪಿ ಪ್ರಧಾನ ಕಚೇರಿಗೆ ಬಿಜೆಪಿ ನಾಯಕರ ಆಗಮನ

ಗುಜರಾತ್​​ನಲ್ಲಿ ಅಮೋಘ ಗೆಲುವು ಪಡೆದು, ಹಿಮಾಚಲದಲ್ಲಿ ಕಡಿಮೆ ಅಂತರದಿಂದ ಕಾಂಗ್ರೆಸ್​ ವಿರುದ್ಧ ಗೆದ್ದ ಬೆನ್ನಲ್ಲೇ ಬಿಜೆಪಿ ನಾಯಕರು ದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಗೆ ಆಗಮಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್​ ಶಾ ಈಗಾಗಲೇ ಅಲ್ಲಿಗೆ ಧಾವಿಸಿದ್ದಾರೆ.

Lakshmi Hegde

ಗುಜರಾತ್​ ಚುನಾವಣೆ ಫಲಿತಾಂಶ

ಗುಜರಾತ್​​ನಲ್ಲಿ ಸಂಜೆ 5.30ರವರೆಗೆ ಬಿಜೆಪಿ 131 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್​ 12 ಕ್ಷೇತ್ರದಲ್ಲಿ ಗೆದ್ದಿದೆ ಮತ್ತು ಇನ್ನೂ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Lakshmi Hegde

ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಸಲ್ಲಿಕೆ

ಗೆಲ್ಲಿಸಿದ ಗುಜರಾತ್​ ಜನರಿಗೆ ಮತ್ತು ಬಿಜೆಪಿಯನ್ನು ಸೋಲಿಸಿದ ಹಿಮಾಚಲ ಪ್ರದೇಶ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಸಲ್ಲಿಸಿದ್ದಾರೆ. ಈ ಮೂಲಕ ಸೋಲು-ಗೆಲುವು ಎರಡನ್ನೂ ಸಮಾನವಾಗಿ ಸ್ವೀಕರಿಸುತ್ತೇವೆ ಎಂಬ ಸಂದೇಶ ಕೊಟ್ಟಿದ್ದಾರೆ.

ಗುಜರಾತ್​ ಜನರಿಗೆ ಧನ್ಯವಾದಗಳು. ಅಭೂತ ಪೂರ್ವ ಚುನಾವಣಾ ಫಲಿತಾಂಶ ನೋಡಿ ತುಂಬ ಖುಷಿಯಾಗಿದೆ. ಇಲ್ಲಿನ ಜನರು ಅಭಿವೃದ್ಧಿ ರಾಜಕಾರಣಕ್ಕೆ ಆಶೀರ್ವಾದ ಮಾಡಿದ್ದಾರೆ. ಹಾಗೇ, ಅಭಿವೃದ್ಧಿ ವೇಗ ಇನ್ನಷ್ಟು ಹೆಚ್ಚಬೇಕು ಎಂಬ ಸಂದೇಶವನ್ನು ಅವರು ಕೊಟ್ಟಿದ್ದಾರೆ. ಗುಜರಾತ್​ ಜನಶಕ್ತಿಗೆ ನಾನು ತಲೆಬಾಗುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್​ನಲ್ಲಿ ಹೇಳಿದ್ದಾರೆ.

ಹಾಗೇ ಇನ್ನೊಂದು ಟ್ವೀಟ್​ ಮಾಡಿ ‘ಹಿಮಾಚಲ ಪ್ರದೇಶದ ಜನರಿಗೆ ಧನ್ಯವಾದಗಳು. ಬಿಜೆಪಿಗೆ ನೀವು ತೋರಿಸಿದ ಪ್ರೀತಿ ಮತ್ತು ಸಹಕಾರಕ್ಕೆ ಸದಾ ಋಣಿಯಾಗಿರುತ್ತೇವೆ. ಇಲ್ಲಿನ ಜನರ ಆಶೋತ್ತರಗಳನ್ನು ಈಡೇರಿಸಲು ಸದಾ ಬದ್ಧರಾಗಿರುತ್ತೇವೆ ಎಂದು ಹೇಳಿದ್ದಾರೆ.

Lakshmi Hegde

ಹಿಮಾಚಲ ಪ್ರದೇಶದ ಜನರಿಗೆ ರಾಹುಲ್ ಗಾಂಧಿ ಧನ್ಯವಾದ

ಎಲ್ಲ ಕಡೆ ಕಾಂಗ್ರೆಸ್ ಮುಳುಗುತ್ತಿದ್ದ ಹೊತ್ತಲ್ಲಿ, ಅದರ ಕೈಹಿಡಿದು ಎತ್ತಿದ ಹಿಮಾಚಲ ಪ್ರದೇಶದ ಜನತೆಗೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಧನ್ಯವಾದ ಸಲ್ಲಿಸಿದ್ದಾರೆ. ಟ್ವೀಟ್ ಮಾಡಿದ ರಾಹುಲ್ ಗಾಂಧಿ, ‘ಒಂದು ನಿರ್ಣಾಯಕ ವಿಜಯ ದೊರಕಿಸಿಕೊಟ್ಟ ಹಿಮಾಚಲ ಪ್ರದೇಶದ ಜನರಿಗೆ ಹೃತ್ಪೂರ್ವಕ ಧನ್ಯವಾದಗಳು. ಕಾಂಗ್ರೆಸ್​ ಕಾರ್ಯಕರ್ತರು ಮತ್ತು ಮುಖಂಡರಿಗೂ ಕೃತಜ್ಞತೆಗಳು. ನಿಮ್ಮೆಲ್ಲರ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯೇ ಈ ಗೆಲುವಿಗೆ ಕಾರಣವಾಗಿದೆ. ಜನರಿಗೆ ನೀಡಿದ ಭರವಸೆಯನ್ನು ಶೀಘ್ರವೇ ನೆರವೇರಿಸುತ್ತೇವೆ’ ಎಂದು ಹೇಳಿದ್ದಾರೆ.

हिमाचल प्रदेश की जनता को इस निर्णायक जीत के लिए दिल से धन्यवाद।

सभी कांग्रेस कार्यकर्ताओं और नेताओं को हार्दिक बधाई। आपका परिश्रम और समर्पण इस विजय की शुभकामनाओं का असली हकदार है।

फिर से आश्वस्त करता हूं, जनता को किया हर वादा जल्द से जल्द निभाएंगे।
— Rahul Gandhi (@RahulGandhi) December 8, 2022
Exit mobile version