ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಇಂದು ಬೆಳಗ್ಗೆ 8ಗಂಟೆಯಿಂದ ಪ್ರಾರಂಭವಾಗಿದೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು ವಿಧಾನಸಭೆ ಚುನಾವಣೆ ನಡೆದಿತ್ತು. ಹಾಗೇ, ಗುಜರಾತ್ನಲ್ಲಿ ಡಿಸೆಂಬರ್ 1 ಮತ್ತು 5ರಂದು, ಎರಡು ಹಂತದಲ್ಲಿ ಮತದಾನ ನಡೆದಿತ್ತು. ಇವೆರಡೂ ರಾಜ್ಯಗಳ ಮತ ಎಣಿಕೆ ಆಯಾ ರಾಜ್ಯಗಳಲ್ಲಿ ಪ್ರಾರಂಭವಾಗಿದೆ. ಹಿಮಾಚಲ ಪ್ರದೇಶ ಮತ್ತು ಗುಜರಾತ್ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಗೆಲ್ಲುತ್ತದೆ ಎಂಬುದು ಚುನಾವಣೋತ್ತರ ಸಮೀಕ್ಷೆಗಳ ವರದಿ. ಈಗಾಗಲೇ ಎರಡೂ ರಾಜ್ಯಗಳಲ್ಲಿ ಪ್ರಾರಂಭ ಆಗಿರುವ ಮತ ಎಣಿಕೆಯ ಕ್ಷಣಕ್ಷಣದ ಮಾಹಿತಿ, ನಿಮ್ಮ ವಿಸ್ತಾರ ನ್ಯೂಸ್ (http://www.vistaranews.com)ವೆಬ್ಸೈಟ್ನಲ್ಲಿ.
ಉತ್ತರ ಪ್ರದೇಶದ ಮೈನ್‌ಪುರಿ ಲೋಕಸಭೆ ಕ್ಷೇತ್ರದ ಬೈಎಲೆಕ್ಷನ್ ರಿಸಲ್ಟ್
ಸಮಾಜವಾದಿ ಪಾರ್ಟಿಯ ಅಭ್ಯರ್ಥಿ ಡಿಂಪಲ್ ಯಾದವ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಗುಜರಾತ್ನಲ್ಲಿ ಹಾರ್ದಿಕ್ ಪಟೇಲ್ಗೆ ಮುನ್ನಡೆ
ಗುಜರಾತ್ನ ವಿರಾಮಗಂ ವಿಧಾನಸಭಾ ಕ್ಷೇತ್ರದಲ್ಲಿ ಹಾರ್ದಿಕ್ ಪಟೇಲ್ ಮುನ್ನಡೆ ಸಾಧಿಸಿದ್ದಾರೆ. ಇವರು ಮೊದಲು ಕಾಂಗ್ರೆಸ್ನ ಪ್ರಭಾವಿ ನಾಯಕರಾಗಿದ್ದರು. ಇದೇ ವರ್ಷ ಮೇ ತಿಂಗಳಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ, ಚುನಾವಣೆಗೆ ಟಿಕೆಟ್ ಪಡೆದಿದ್ದರು.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ಗೆ ಮುನ್ನಡೆ
ಹಿಮಾಚಲ ಪ್ರದೇಶದಲ್ಲಿ ಮತ ಎಣಿಕೆ ಪ್ರಾರಂಭ ಆದಾಗಿನಿಂದಲೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕತ್ತುಕತ್ತಿನ ಫೈಟ್ ನಡೆಯುತ್ತಿದ್ದು, ಸದ್ಯ ಕಾಂಗ್ರೆಸ್ 37 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 31 ಕ್ಷೇತ್ರಗಲ್ಲಿ ಮುನ್ನಡೆಯಲ್ಲಿದೆ.
ಹಿಮಾಚಲ ಪ್ರದೇಶದ ಈಗಿನ ಟ್ರೆಂಡ್
ಹಿಮಾಚಲ ಪ್ರದೇಶದಲ್ಲಿ ಸದ್ಯ ಬಿಜೆಪಿ 36 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 32 ಕ್ಷೇತ್ರಗಳಲ್ಲಿ ಮುಂದಿದೆ. ಇಲ್ಲಿ ಆಮ್ ಆದ್ಮಿ ಪಕ್ಷ ಇನ್ನೂ ಒಂದೇ ಒಂದು ಕ್ಷೇತ್ರದಲ್ಲೂ ಮುನ್ನಡೆ ಸಾಧಿಸಿಲ್ಲ.
ಗುಜರಾತ್ನಲ್ಲಿ ಎಲ್ಲ ದಾಖಲೆಗಳನ್ನೂ ಮುರಿಯುತ್ತೇವೆ
ಮತಗಳಿಕೆಯಲ್ಲಿ ಇದುವರೆಗಿನ ಎಲ್ಲ ದಾಖಲೆಗಳನ್ನೂ ಮುರಿದು ಈ ಸಲ ಗುಜರಾತ್ನಲ್ಲಿ ಅಧಿಕಾರ ಹಿಡಿಯುತ್ತೇವೆ. ಪ್ರತಿಪಕ್ಷಗಳ ಎಲ್ಲ ಅಭ್ಯರ್ಥಿಗಳಿಗಿಂತಲೂ ಬಹುದೊಡ್ಡ ಅಂತರದಿಂದ ನಮ್ಮ ಎಲ್ಲ ಅಭ್ಯರ್ಥಿಗಳೂ ಗೆಲ್ಲುತ್ತಾರೆ ಎಂದು ಗುಜರಾತ್ ಬಿಜೆಪಿ ಸಚಿವ, ಪಶ್ಚಿಮ ಸೂರತ್ ಅಭ್ಯರ್ಥಿ ಪೂರ್ಣೇಶ್ ಮೋದಿ ಭರವಸೆ ವ್ಯಕ್ತಪಡಿಸಿದ್ದಾರೆ.