ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಇಂದು ಬೆಳಗ್ಗೆ 8ಗಂಟೆಯಿಂದ ಪ್ರಾರಂಭವಾಗಿದೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು ವಿಧಾನಸಭೆ ಚುನಾವಣೆ ನಡೆದಿತ್ತು. ಹಾಗೇ, ಗುಜರಾತ್ನಲ್ಲಿ ಡಿಸೆಂಬರ್ 1 ಮತ್ತು 5ರಂದು, ಎರಡು ಹಂತದಲ್ಲಿ ಮತದಾನ ನಡೆದಿತ್ತು. ಇವೆರಡೂ ರಾಜ್ಯಗಳ ಮತ ಎಣಿಕೆ ಆಯಾ ರಾಜ್ಯಗಳಲ್ಲಿ ಪ್ರಾರಂಭವಾಗಿದೆ. ಹಿಮಾಚಲ ಪ್ರದೇಶ ಮತ್ತು ಗುಜರಾತ್ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಗೆಲ್ಲುತ್ತದೆ ಎಂಬುದು ಚುನಾವಣೋತ್ತರ ಸಮೀಕ್ಷೆಗಳ ವರದಿ. ಈಗಾಗಲೇ ಎರಡೂ ರಾಜ್ಯಗಳಲ್ಲಿ ಪ್ರಾರಂಭ ಆಗಿರುವ ಮತ ಎಣಿಕೆಯ ಕ್ಷಣಕ್ಷಣದ ಮಾಹಿತಿ, ನಿಮ್ಮ ವಿಸ್ತಾರ ನ್ಯೂಸ್ (http://www.vistaranews.com)ವೆಬ್ಸೈಟ್ನಲ್ಲಿ.
ಸತ್ಪಾಲ್ ಸಿಂಗ್ vs ಸತ್ಪಾಲ್ ಸಿಂಗ್
ಹಿಮಾಚಲ ಪ್ರದೇಶದ ಉನಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸತ್ಪಾಲ್ ಸಿಂಗ್ ಸತ್ತಿ ಅವರು, ಕಾಂಗ್ರೆಸ್ನ ಸತ್ಪಾಲ್ ಸಿಂಗ್ ರೈಝಾದ ಅವರಿಂತ ಮುನ್ನಡೆಯಲ್ಲಿದ್ದಾರೆ.
ಗುಜರಾತ್ ರಿಸಲ್ಟ್
ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿರುವ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳು ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
ಗುಜರಾತ್ನ ಗೋದ್ರಾದಲ್ಲಿ ಬಿಜೆಪಿ ಮುನ್ನಡೆ
ಗೋದ್ರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಸಿ.ಕೆ.ರೌಲ್ಜಿ ಅವರು ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಆಪ್ನಿಂದ ರಾಜೇಶ್ ಪಟೇಲ್ ರಾಜು ಮತ್ತು ಕಾಂಗ್ರೆಸ್ನಿಂದ ರಷ್ಮಿತಾಬೆನ್ ದುಷ್ಯಂತಸಿನ್ಹ್ ಚೌಹಾಣ್ ಕಣದಲ್ಲಿ ಇದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಕೈ-ಕಮಲ ಕತ್ತುಕತ್ತಿನ ಫೈಟ್
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ. ಬಿಜೆಪಿ 33 ಮತ್ತು ಕಾಂಗ್ರೆಸ್ 34 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಒಂದು ಸಲ ಬಿಜೆಪಿ ಮುನ್ನಡೆಯಲ್ಲಿದ್ದರೆ, ಮತ್ತೊಂದು ಸಲ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದೆ.
ಹಿಮಾಚಲ ಪ್ರದೇಶ ರಿಸಲ್ಟ್
ಸರಳ ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ, ಹಿನ್ನಡೆ ಅನುಭವಿಸುತ್ತಿರುವ ಕಾಂಗ್ರೆಸ್. ಇದು ಆರಂಭದ ಟ್ರೆಂಡ್. ಬಿಜೆಪಿ 39 ಕ್ಷೇತ್ರಗಳಲ್ಲಿ ಮುನ್ನಡೆ, ಕಾಂಗ್ರೆಸ್ 27 ಕ್ಷೇತ್ರಗಳಲ್ಲಿ ಮುನ್ನಡೆ.