ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಇಂದು ಬೆಳಗ್ಗೆ 8ಗಂಟೆಯಿಂದ ಪ್ರಾರಂಭವಾಗಿದೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು ವಿಧಾನಸಭೆ ಚುನಾವಣೆ ನಡೆದಿತ್ತು. ಹಾಗೇ, ಗುಜರಾತ್ನಲ್ಲಿ ಡಿಸೆಂಬರ್ 1 ಮತ್ತು 5ರಂದು, ಎರಡು ಹಂತದಲ್ಲಿ ಮತದಾನ ನಡೆದಿತ್ತು. ಇವೆರಡೂ ರಾಜ್ಯಗಳ ಮತ ಎಣಿಕೆ ಆಯಾ ರಾಜ್ಯಗಳಲ್ಲಿ ಪ್ರಾರಂಭವಾಗಿದೆ. ಹಿಮಾಚಲ ಪ್ರದೇಶ ಮತ್ತು ಗುಜರಾತ್ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಗೆಲ್ಲುತ್ತದೆ ಎಂಬುದು ಚುನಾವಣೋತ್ತರ ಸಮೀಕ್ಷೆಗಳ ವರದಿ. ಈಗಾಗಲೇ ಎರಡೂ ರಾಜ್ಯಗಳಲ್ಲಿ ಪ್ರಾರಂಭ ಆಗಿರುವ ಮತ ಎಣಿಕೆಯ ಕ್ಷಣಕ್ಷಣದ ಮಾಹಿತಿ, ನಿಮ್ಮ ವಿಸ್ತಾರ ನ್ಯೂಸ್ (http://www.vistaranews.com)ವೆಬ್ಸೈಟ್ನಲ್ಲಿ.
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿ, ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಆರಂಭದಲ್ಲಿಯೇ ತಮ್ಮ ಕ್ಷೇತ್ರ ಸೇರಾಜ್ನಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಕಾಂಗ್ರೆಸ್ನಿಂದ ಚೇತ್ರಾಮ್ ಠಾಕೂರ್ ಮತ್ತು ಆಮ್ ಆದ್ಮಿ ಪಕ್ಷದಿಂದ ಗೀತಾನಂದ್ ಠಾಕೂರ್ ಕಣದಲ್ಲಿ ಇದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಆರಂಭದಲ್ಲೇ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ. ಬಿಜೆಪಿ 16 ಕ್ಷೇತ್ರಗಳು ಮತ್ತು ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಮುನ್ನಡೆ. ಆಪ್ ಒಂದೂ ಕ್ಷೇತ್ರದಲ್ಲಿ ಇಲ್ಲ.
ಗುಜರಾತ್ನಲ್ಲಿ 55 ವಿಧಾನಸಭಾ ಕ್ಷೇತ್ರದಲ್ಲಿ ಮುನ್ನಡೆ, ಕಾಂಗ್ರೆಸ್ 17 ಮತ್ತು ಆಪ್ 2 ಕ್ಷೇತ್ರಗಳಲ್ಲಿ ಮುನ್ನಡೆ.
ಹಿಮಾಚಲ ಪ್ರದೇಶ ಮತ್ತು ಗುಜರಾತ್ ಚುನಾವಣೆ ಮತ ಎಣಿಕೆ ಶುರು