ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಇಂದು ಬೆಳಗ್ಗೆ 8ಗಂಟೆಯಿಂದ ಪ್ರಾರಂಭವಾಗಿದೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು ವಿಧಾನಸಭೆ ಚುನಾವಣೆ ನಡೆದಿತ್ತು. ಹಾಗೇ, ಗುಜರಾತ್ನಲ್ಲಿ ಡಿಸೆಂಬರ್ 1 ಮತ್ತು 5ರಂದು, ಎರಡು ಹಂತದಲ್ಲಿ ಮತದಾನ ನಡೆದಿತ್ತು. ಇವೆರಡೂ ರಾಜ್ಯಗಳ ಮತ ಎಣಿಕೆ ಆಯಾ ರಾಜ್ಯಗಳಲ್ಲಿ ಪ್ರಾರಂಭವಾಗಿದೆ. ಹಿಮಾಚಲ ಪ್ರದೇಶ ಮತ್ತು ಗುಜರಾತ್ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಗೆಲ್ಲುತ್ತದೆ ಎಂಬುದು ಚುನಾವಣೋತ್ತರ ಸಮೀಕ್ಷೆಗಳ ವರದಿ. ಈಗಾಗಲೇ ಎರಡೂ ರಾಜ್ಯಗಳಲ್ಲಿ ಪ್ರಾರಂಭ ಆಗಿರುವ ಮತ ಎಣಿಕೆಯ ಕ್ಷಣಕ್ಷಣದ ಮಾಹಿತಿ, ನಿಮ್ಮ ವಿಸ್ತಾರ ನ್ಯೂಸ್ (http://www.vistaranews.com)ವೆಬ್ಸೈಟ್ನಲ್ಲಿ.
ಹಿಮಾಚಲ ಪ್ರದೇಶ ಫಲಿತಾಂಶ
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, 22 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಇನ್ನೊಂದೆಡೆ ಬಿಜೆಪಿ 13 ಕ್ಷೇತ್ರಗಳಲ್ಲಿ ಗೆದ್ದು, ಇನ್ನೂ 13 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಆಪ್ ವಿರುದ್ಧ ಕಾಂಗ್ರೆಸ್ ಆರೋಪ
ಗುಜರಾತ್ನಲ್ಲಿ ಕಾಂಗ್ರೆಸ್ ಮತ ಒಡೆದಿದ್ದು ಆಮ್ ಆದ್ಮಿ ಪಕ್ಷ ಮತ್ತು ಅಸಾದುದ್ದೀನ್ ಓವೈಸಿ (AIMIM) ಪಕ್ಷ ಎಂದು ಗುಜರಾತ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಜೆ.ಠಾಕೂರ್ ಆರೋಪಿಸಿದ್ದಾರೆ. ಬಿಜೆಪಿಗೆ ಅಷ್ಟು ದೊಡ್ಡ ಮಟ್ಟದ ಗೆಲುವು ಹೇಗೆ ಲಭಿಸಿತು? ನಮ್ಮಲ್ಲೇನು ದೋಷ ಇತ್ತು? ಎಂಬುದನ್ನು ವಿಶ್ಲೇಷಿಸಲು ಶೀಘ್ರವೇ ಒಂದು ಸಭೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಪಕ್ಷೇತರ ಅಭ್ಯರ್ಥಿಗೆ ಗೆಲುವು
ಹಿಮಾಚಲ ಪ್ರದೇಶದ ಡೆಹ್ರಾ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ನ ರಾಜೇಶ್ ಶರ್ಮಾರಿಗಿಂತಲೂ 3500 ಮತಗಳನ್ನು ಹೆಚ್ಚು ಪಡೆದು ಜಯಗಳಿಸಿದ್ದಾರೆ.
ಕ್ರೆಡಿಟ್ ನನಗೆ ಬೇಡ ಎಂದ ಖರ್ಗೆ
ಹಿಮಾಚಲ ಪ್ರದೇಶದ ಗೆಲುವಿನ ಕ್ರೆಡಿಟ್ ನನಗೆ ಬೇಡ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ. ಹಾಗೇ ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸಾಮಾನ್ಯ. ಇದು ಸೈದ್ಧಾಂತಿಕ ಹೋರಾಟದ ಫಲ. ನಮ್ಮಲ್ಲಿರುವ ನ್ಯೂನತೆಗಳನ್ನು ಒಂದೊಂದಾಗಿ ಬಗೆಹರಿಸಿಕೊಂಡು, ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಎಐಸಿಸಿಗೆ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಖರ್ಗೆ ಹಿಮಾಚಲ ಪ್ರದೇಶದಲ್ಲಿ ಪ್ರಚಾರ ನಡೆಸಿದ್ದರು. ಹೋದಲ್ಲೆಲ್ಲ ಸೋಲುತ್ತಿದ್ದ ಕಾಂಗ್ರೆಸ್ ಈಗ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಿ, ತಾನು ಅಧಿಕಾರ ಹಿಡಿದಿದೆ.
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ ಠಾಕೂರ್
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಜೈರಾಮ್ ಠಾಕೂರ್ ಅವರು ಶಿಮ್ಲಾದಲ್ಲಿರುವ ರಾಜಭವನಕ್ಕೆ ತೆರಳಿದ್ದಾರೆ. ಅವರು ಕೆಲವೇ ಕ್ಷಣದಲ್ಲಿ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.
#watch | Outgoing Himachal Pradesh CM Jairam Thakur reaches Raj Bhawan in Shimla to tender his resignation to the Governor.#himachalelectionresults2022 pic.twitter.com/XtsDKymTZv— ANI (@ANI) December 8, 2022