ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಇಂದು ಬೆಳಗ್ಗೆ 8ಗಂಟೆಯಿಂದ ಪ್ರಾರಂಭವಾಗಿದೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು ವಿಧಾನಸಭೆ ಚುನಾವಣೆ ನಡೆದಿತ್ತು. ಹಾಗೇ, ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5ರಂದು, ಎರಡು ಹಂತದಲ್ಲಿ ಮತದಾನ ನಡೆದಿತ್ತು. ಇವೆರಡೂ ರಾಜ್ಯಗಳ ಮತ ಎಣಿಕೆ ಆಯಾ ರಾಜ್ಯಗಳಲ್ಲಿ ಪ್ರಾರಂಭವಾಗಿದೆ. ಹಿಮಾಚಲ ಪ್ರದೇಶ ಮತ್ತು ಗುಜರಾತ್ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಗೆಲ್ಲುತ್ತದೆ ಎಂಬುದು ಚುನಾವಣೋತ್ತರ ಸಮೀಕ್ಷೆಗಳ ವರದಿ. ಈಗಾಗಲೇ ಎರಡೂ ರಾಜ್ಯಗಳಲ್ಲಿ ಪ್ರಾರಂಭ ಆಗಿರುವ ಮತ ಎಣಿಕೆಯ ಕ್ಷಣಕ್ಷಣದ ಮಾಹಿತಿ, ನಿಮ್ಮ ವಿಸ್ತಾರ ನ್ಯೂಸ್ (http://www.vistaranews.com)ವೆಬ್ಸೈಟ್ನಲ್ಲಿ.
ಗುಜರಾತ್ ಎಲೆಕ್ಷನ್ ರಿಸಲ್ಟ್
ಮತಯಂತ್ರ ತಿರುಚಲಾಗಿದೆ ಎಂದು ಆಪಾದಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾಂಗ್ರೆಸ್ ಅಭ್ಯರ್ಥಿ ಭರತ್‌ಭಾಯಿ ವೆಲ್ಜಿಭಾಯಿ ಸೋಲಂಕಿ
ಗಾಂಧಿಧಾಮ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸಿದ ಸೋಲಂಕಿಯಿಂದ ಆತ್ಮಹತ್ಯೆಗೆ ಯತ್ನ
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ
ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಎಂದ ಜೈರಾಮ್ ಠಾಕೂರ್
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸೋಲು ಹಿನ್ನೆಲೆ ರಾಜೀನಾಮೆಗೆ ಸಿದ್ಧ
ಬಹುಮತ ಪಡೆದು ಸರ್ಕಾರ ರಚಿಸುವತ್ತ ಕಾಂಗ್ರೆಸ್ ಸನ್ನದ್ಧ
ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಮುಖಭಂಗ
ಜನರ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಎಂದ ಮುಖ್ಯಮಂತ್ರಿ ಜೈರಾಮ್ ಠಾಕೂರ್
ಬಿಜೆಪಿ ನಡೆಸುವ ʼಆಪರೇಷನ್ ಕಮಲʼದ ಭೀತಿ ಇಲ್ಲ ಎಂದು ಕಾಂಗ್ರೆಸ್ ವಿಶ್ವಾಸ
ಸತತ 6ನೇ ಬಾರಿಗೆ ಗೆದ್ದ ಜೈರಾಮ್ ಠಾಕೂರ್
ಹಿಮಾಚಲ ಪ್ರದೇಶದಲ್ಲಿ ಇಷ್ಟು ದಿನ ಮುಖ್ಯಮಂತ್ರಿಯಾಗಿದ್ದ ಜೈರಾಮ್ ಠಾಕೂರ್ ಈ ಸಲವೂ ಸೆರಾಜ್ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಈ ಮೂಲಕ ಸತತ 6ನೇ ಬಾರಿಗೆ ಅವರು ಗೆದ್ದಂತಾಗಿದೆ. ಈ ಸಲ ಜೈರಾಮ್ ಠಾಕೂರ್ ಅವರು ತಮ್ಮ ಹತ್ತಿರದ ಪ್ರತಿಸ್ಪರ್ಧಿ ವಿರುದ್ಧ 37 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ
ಗುಜರಾತ್‌ನಲ್ಲಿ ಬಿಜೆಪಿ ಗೆಲುವಿನ ನಾಗಾಲೋಟ
ಬಿಜೆಪಿ 42 ಸ್ಥಾನಗಳಲ್ಲಿ ಗೆಲುವು, 115 ಕ್ಷೇತ್ರದಲ್ಲಿ ಮುನ್ನಡೆ
ಕಾಂಗ್ರೆಸ್ 16 ಕ್ಷೇತ್ರಗಳಲ್ಲಿ ಮುನ್ನಡೆ