ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಇಂದು ಬೆಳಗ್ಗೆ 8ಗಂಟೆಯಿಂದ ಪ್ರಾರಂಭವಾಗಿದೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು ವಿಧಾನಸಭೆ ಚುನಾವಣೆ ನಡೆದಿತ್ತು. ಹಾಗೇ, ಗುಜರಾತ್ನಲ್ಲಿ ಡಿಸೆಂಬರ್ 1 ಮತ್ತು 5ರಂದು, ಎರಡು ಹಂತದಲ್ಲಿ ಮತದಾನ ನಡೆದಿತ್ತು. ಇವೆರಡೂ ರಾಜ್ಯಗಳ ಮತ ಎಣಿಕೆ ಆಯಾ ರಾಜ್ಯಗಳಲ್ಲಿ ಪ್ರಾರಂಭವಾಗಿದೆ. ಹಿಮಾಚಲ ಪ್ರದೇಶ ಮತ್ತು ಗುಜರಾತ್ ಎರಡೂ ರಾಜ್ಯಗಳಲ್ಲಿ ಬಿಜೆಪಿಯೇ ಗೆಲ್ಲುತ್ತದೆ ಎಂಬುದು ಚುನಾವಣೋತ್ತರ ಸಮೀಕ್ಷೆಗಳ ವರದಿ. ಈಗಾಗಲೇ ಎರಡೂ ರಾಜ್ಯಗಳಲ್ಲಿ ಪ್ರಾರಂಭ ಆಗಿರುವ ಮತ ಎಣಿಕೆಯ ಕ್ಷಣಕ್ಷಣದ ಮಾಹಿತಿ, ನಿಮ್ಮ ವಿಸ್ತಾರ ನ್ಯೂಸ್ (http://www.vistaranews.com)ವೆಬ್ಸೈಟ್ನಲ್ಲಿ.
ಗುಜರಾತ್ ರಿಸಲ್ಟ್
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಡಿಸೆಂಬರ್ 11 ಅಥವಾ 12 (ಭಾನುವಾರ ಅಥವಾ ಸೋಮವಾರ)ರಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸಂಭ್ರಮಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವಿನ ಭರವಸೆಯಲ್ಲಿದೆ. ಈಗಾಗಲೇ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಶಿಮ್ಲಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.
Sweets are being distributed among Congress workers in Shimla as the party leads in 40 seats in Himachal Pradesh pic.twitter.com/wWnNXg6x83
— ANI (@ANI) December 8, 2022
ಹಿಮಾಚಲ ಪ್ರದೇಶದಲ್ಲಿ ಆಪರೇಶನ್ ಕಮಲ ಭಯ
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 26 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಇನ್ನೂ ಗೆಲುವು ಖಚಿತ ಪಡದೆ ಇರುವಾಗಲೇ ಅಲ್ಲಿ ಕಾಂಗ್ರೆಸ್ಗೆ ಆಪರೇಶನ್ ಕಮಲದ ಭಯ ಶುರುವಾಗಿದೆ. ಕಾಂಗ್ರೆಸ್ನ ಶಾಸಕರನ್ನು ಛತ್ತೀಸ್ಗಢ್ ಅಥವಾ ರಾಜಸ್ಥಾನಕ್ಕೆ ಸ್ಥಳಾಂತರ ಮಾಡಲು ಪ್ಲ್ಯಾನ್ ರೂಪಿಸಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ‘ಬಿಜೆಪಿ ಏನು ಬೇಕಾದರೂ ಮಾಡಬಹುದು. ಹೀಗಾಗಿ ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಲು ನಾವು ಎಲ್ಲ ಪ್ರಯತ್ನಗಳನ್ನೂ ಮಾಡುತ್ತೇವೆ’ ಎಂದು ಕಾಂಗ್ರೆಸ್ ನಾಯಕ ವಿಕ್ರಮಾದಿತ್ಯ ಸಿಂಗ್ ಹೇಳೀದ್ದಾರೆ.
ಹಿಮಾಚಲ ಪ್ರದೇಶ ರಿಸಲ್ಟ್
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ 39 ಮತ್ತು ಬಿಜೆಪಿ 26 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಒಂದು ಗಮನಾರ್ಹ ಸಂಗತಿಯೆಂದರೆ, 21 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ನಡುವಿನ ಮತಗಳ ಅಂತರ ಕೇವಲ 1000 ಆಗಿದ್ದು..ಮತ ಎಣಿಕೆ ಮುಗಿಯುವ ಹೊತ್ತಿಗೆ ಏನು ಬೇಕಾದರೂ ಆಗಬಹುದು ಎನ್ನುವ ಸ್ಥಿತಿಯಿದೆ.
ಗುಜರಾತ್ ಚುನಾವಣಾ ಫಲಿತಾಂಶ
ಗುಜರಾತ್ನ ಕಂಭಾಲಿಯಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುಲುಭಾಯ್ ಬೇರಾ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಆಪ್ನಿಂದ ಈಶುದಾನ್ ಗಧ್ವಿ ಸ್ಪರ್ಧಿಸಿದ್ದು, ಅವರೇ ಗುಜರಾತ್ನಲ್ಲಿ ಆಪ್ ಸಿಎಂ ಅಭ್ಯರ್ಥಿಯಾಗಿದ್ದರು. ಬಿಜೆಪಿಯ ಮುಲುಭಾಯ್ ಅವರು ಈಶುದಾನ್ ಗಧ್ವಿಗಿಂತ 7956 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.