Site icon Vistara News

Gujarat Election | ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ, ಕಮಲ ಮುಡಿದ ಗುಜರಾತ್‌ನ ಪ್ರಮುಖ ನಾಯಕ

Gujarat Election

ಗಾಂಧಿನಗರ: ಗುಜರಾತ್ ವಿಧಾನಸಭೆಗೆ ಚುನಾವಣಾ (Gujarat Election) ವೇಳಾಪಟ್ಟಿ ಘೋಷಣೆಯಾದ ಬೆನ್ನಲ್ಲೇ ಪಕ್ಷಾಂತರ ಪರ್ವ ಶುರುವಾಗಿದೆ. ಕಾಂಗ್ರೆಸ್‌ನ ಪ್ರಮುಖ ನಾಯಕ ಹಿಮಾನ್ಷು ವ್ಯಾಸ್ ಅವರು ಬಿಜೆಸಿ ಪಕ್ಷವನ್ನು ಸೇರಿದ್ದಾರೆ. ಸಾಗರೋತ್ತರ ಕಾಂಗ್ರೆಸ್ ಉಸ್ತುವಾರಿ ಹಾಗೂ ಪಕ್ಷದ ಕಾರ್ಯದರ್ಶಿ ಹುದ್ದೆಗೂ ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಮೊದಲು ಬಿಜೆಪಿಗೆ ಮಾಜಿ ಸಚಿವ ಜೈ ನಾರಾಯಣ್ ವ್ಯಾಸ್ ಕೂಡ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಅಥವಾ ಆಪ್ ಸೇರ್ಪಡೆಯಾಗುವ ಸಾಧ್ಯತೆಗಳಿವೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ತಮ್ಮ ರಾಜೀನಾಮೆ ಸಲ್ಲಿಸಿರುವ ಹಿಮಾನ್ಷು ವ್ಯಾಸ್, ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ ಕಾರ್ಯದರ್ಶಿ ಹಾಗೂ ಸಾಗರೋತ್ತರ ಕಾಂಗ್ರೆಸ್ ಉಸ್ತುವಾರಿಗೆ ರಾಜೀನಾಮೆ ನೀಡುತ್ತಿದ್ದೇನೆ. ಜತೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಶನಿವಾರವಷ್ಟೇ ಕಾಂಗ್ರೆಸ್ ಪಕ್ಷವು ಗುಜರಾತ್ ಚುನಾವಣೆಗೆ 43 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಸಮಾಲೋಚನೆ ನಡೆಸಿದ ಬಳಿಕವಷ್ಟೇ ಕಾಂಗ್ರೆಸ್ ಈ ಪಟ್ಟಿಯನ್ನು ಬಿಡುಗಡೆ ಮಾಡಿತ್ತು.

ಇದನ್ನೂ ಓದಿ | ವಿಸ್ತಾರ ನ್ಯೂಸ್‌ ಕಚೇರಿಗೆ ಸಿಎಂ ಬೊಮ್ಮಾಯಿ ಭೇಟಿ, ಟಿವಿ ಚಾನೆಲ್‌ ಸಿದ್ಧತೆಗೆ ಮೆಚ್ಚುಗೆ

Exit mobile version