ಗಾಂಧಿನಗರ: ಗುಜರಾತ್ ಸರ್ಕಾರವು ಏಕರೂಪ ನಾಗರಿಕ ಸಂಹಿತೆ ಜಾರಿಗೆ (Uniform Civil Code) ತರಲು ಹೊರಟಿದೆ. ಇದಕ್ಕಾಗಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಸಮಿತಿಯೊಂದನ್ನು ರಚಿಸುವುದಾಗಿ ಶನಿವಾರ ಪ್ರಕಟಿಸಿದ್ದಾರೆ. ಶೀಘ್ರದಲ್ಲೇ ಗುಜರಾತ್ ರಾಜ್ಯವು ವಿಧಾನಸಭೆ ಚುನಾವಣೆಯನ್ನು ಎದುರಿಸಲಿದೆ. ಈ ಹಿನ್ನೆಲೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ನಿರ್ಧಾರವು ಮಹತ್ವದ ಹೆಜ್ಜೆ ಎನಿಸಿಕೊಂಡಿದೆ.
ಏಕರೂಪ ನಾಗರಿಕ ಸಂಹಿತೆ ಜಾರಿ ಸಂಬಂಧ, ಬಿಜೆಪಿ ಆಡಳಿತವಿರುವ ಹಿಮಾಚಲ ಪ್ರದೇಶ, ಉತ್ತರಾಖಂಡ ರಾಜ್ಯಗಳ ಈಗಾಗಲೇ ಪ್ರಯತ್ನ ನಡೆಸಿವೆ. ಈಗ ಆ ಸಾಲಿಗೆ ಗುಜರಾತ್ ಕೂಡ ಸೇರ್ಪಡೆಯಾಗುತ್ತಿದೆ. ಏಕರೂಪ ನಾಗರಿಕ ಸಂಹಿತೆ ಜಾರಿ ಬಿಜೆಪಿ ಪಕ್ಷದ ಬಹು ದಿನಗಳ ಬೇಡಿಕೆಯಾಗಿದ್ದು, ಪ್ರತಿ ಚುನಾವಣೆಯಲ್ಲೂ ಈ ಬಗ್ಗೆ ಚರ್ಚೆಯಾಗುತ್ತದೆ. ಈಗ ಸದ್ಯದಲ್ಲೇ ಗುಜರಾತ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈಗ ಮತ್ತೆ ಏಕರೂಪ ನಾಗರಿಕ ಸಂಹಿತೆ ಮುನ್ನೆಲೆಗೆ ಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ನಾಯಕತ್ವದಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಶನಿವಾರ ನಡೆದ ಸಚಿವ ಸಂಪುಟದಲ್ಲಿ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದಾರೆ. ಏಕರೂಪ ನಾಗರಿಕ ಸಂಹಿತೆ ಜಾರಿ ಸಂಬಂಧ ಸಮಿತಿಯನ್ನು ರಚಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಾಂಘ್ವಿ ಅವರು ಹೇಳಿದ್ದಾರೆ.
ಇದನ್ನೂ ಓದಿ | ಕೇಜ್ರಿವಾಲ್ ಚುನಾವಣೋತ್ಸಾಹ; ಗುಜರಾತ್ ಎಲೆಕ್ಷನ್ಗೆ 5 ತಿಂಗಳಿರುವಾಗಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ !