ಲಖನೌ: ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯಕ್ಕೆ ಹೊಂದಿಕೊಂಡಂತಿರುವ ಜ್ಞಾನವಾಪಿ ಮಸೀದಿಯಲ್ಲಿ (Gyanvapi Mosque) ಹಿಂದುಗಳು ಮಾಡುತ್ತಿರುವ ಪೂಜೆಗೆ ತಡೆಯಾಜ್ಞೆ ನೀಡಲು ಅಲಹಾಬಾದ್ ಹೈಕೋರ್ಟ್ (Allahabad High Court) ನಿರಾಕರಿಸಿದೆ. ಪೂಜೆಗೆ ಕೂಡಲೇ ತಡೆಯಾಜ್ಞೆ ನೀಡಬೇಕು ಎಂಬುದಾಗಿ ಕೋರಿ ಅಂಜುಮಾನ್ ಇಂತೇಜಾಮಿಯಾ ಮಸೀದಿ ಸಮಿತಿಯು (Anjuman Intezamia Masajid Committee) ಮನವಿ ಮಾಡಿತ್ತು. ಆದರೆ, ಮಧ್ಯಂತರ ಆದೇಶ ಹೊರಡಿಸಲು ಕೋರ್ಟ್ ನಿರಾಕರಿಸಿದೆ.
ಮಸೀದಿ ಸಮಿತಿಯು ಇದಕ್ಕೂ ಮೊದಲು ಕ್ಷಿಪ್ರವಾಗಿ ಅರ್ಜಿಯ ವಿಚಾರಣೆ ನಡೆಸಿ, ಪೂಜೆಗೆ ತಡೆಯಾಜ್ಞೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು. ಆದರೆ, ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಎಂದು ಸುಪ್ರೀಂ ಕೋರ್ಟ್ ಸೂಚಿಸಿದ ಹಿನ್ನೆಲೆಯಲ್ಲಿ ಮಸೀದಿ ಸಮಿತಿಯು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈಗ ಮುಂದಿನ ವಿಚಾರಣೆ ಹಾಗೂ ಆದೇಶದವರೆಗೆ ಹಿಂದುಗಳು ಪೂಜೆ ಮಾಡಬಹುದಾಗಿದೆ.
The Allahabad High Court today refused to allow the Gyanvapi Mosque committee's plea seeking an interim stay on Puja being performed in the southern cellar of the Gyanvapi Mosque (known as Vyas Tehkhana).
— Live Law (@LiveLawIndia) February 2, 2024
Read more: https://t.co/j7m3ohm17w#AllahabadHighCourt #GyanvapiMosque pic.twitter.com/TKkr7Ln2E6
ಮಸೀದಿ ನಿರ್ಮಾಣಕ್ಕೂ ಮೊದಲುಇಲ್ಲಿ ದೊಡ್ಡ ಹಿಂದೂ ದೇವಾಲಯ ಅಸ್ತಿತ್ವದಲ್ಲಿತ್ತು ಎಂದು ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್ಐ) ವರದಿ ಹೇಳಿದ ನಂತರ ಮಸೀದಿಯ ಮುಚ್ಚಿದ ಭಾಗದಲ್ಲಿ ಉತ್ಖನನ ಮತ್ತು ವೈಜ್ಞಾನಿಕ ಸಮೀಕ್ಷೆ ಕೋರಿ ನಾಲ್ವರು ಹಿಂದೂ ಮಹಿಳೆಯರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದಾದ ಒಂದು ದಿನದ ನಂತರ ಜಿಲ್ಲಾ ನ್ಯಾಯಾಲಯದ ಆದೇಶ ಬಂದಿದೆ. ಮಸೀದಿ ಬಳಿ ವಿವಾದಿತ ರಚನೆಯಿದೆ. ಅದನ್ನು ಹಿಂದೂಗಳು ಶಿವಲಿಂಗ ಎಂದು ಹೇಳುತ್ತಿದ್ದಾರೆ. ಆದರೆ, ಇದು ಪ್ರಾರ್ಥನಾ ಕೊಳದ ಭಾಗವಾಗಿದೆ ಎಂದು ಮುಸ್ಲಿಂ ಸಮುದಾಯದವರು ಹೇಳುತ್ತಿದ್ದಾರೆ.
ಇದನ್ನೂ ಓದಿ: Gyanvapi Mosque: ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ; ಕಾಂಗ್ರೆಸ್ ನಿಲುವು ಸ್ಪಷ್ಟಪಡಿಸಲು ಬಿಜೆಪಿ ಆಗ್ರಹ
ಏನಿದು ಜ್ಞಾನವಾಪಿ ಮಸೀದಿ?
ಇದೊಂದು ಬಾವಿ. ವಾಪಿ ಎಂದರೆ ಸಂಸ್ಕೃತದಲ್ಲಿ ಬಾವಿ. ಜ್ಞಾನದ ಬಾವಿ ಎಂಬುದು ಇದರ ಅಕ್ಷರಾರ್ಥ. ಸಾಮಾನ್ಯವಾಗಿ ಶಿವ ದೇವಾಲಯಗಳಲ್ಲಿ ಒಂದು ಬಾವಿ ಕಡ್ಡಾಯವಾಗಿ ಇರುತ್ತದೆ. ಶಿವಲಿಂಗಕ್ಕೆ ನಿತ್ಯ ಅಭಿಷೇಕ ಮಾಡಲು ಈ ಬಾವಿಯ ನೀರನ್ನು ಬಳಸಲಾಗುತ್ತದೆ. ಸದ್ಯ ಈ ಬಾವಿಯನ್ನು ಮಂದಿರ ಹಾಗೂ ಮಸೀದಿಗಳು ಹಂಚಿಕೊಂಡಿವೆ. ಹಿಂದೆ ಮುಸ್ಲಿಂ ರಾಜರ ದಾಳಿಯಾದಾಗ ಕಾಶಿ ವಿಶ್ವನಾಥ ದೇವಾಲಯದ ಅರ್ಚಕರೊಬ್ಬರು ಶಿವಲಿಂಗ ಅಪವಿತ್ರವಾಗದಂತೆ ಅದನ್ನು ತೆಗೆದುಕೊಂಡು ಬಂದು ಈ ಬಾವಿಗೆ ಎಸೆದು ರಕ್ಷಿಸಿದರು ಎಂದು ಕತೆಯಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ