Site icon Vistara News

NIA Raid : ಎನ್​ಐಎ ದಾಳಿ ವೇಳೆ ಪತ್ತೆಯಾಯ್ತು ಹಮಾಸ್​ ಧ್ವಜ, ಗನ್ ಮತ್ತು ಕ್ಯಾಶ್​

NIA Raid in bangalore

ಬೆಂಗಳೂರು : ಬೆಂಗಳೂರು ಹಾಗೂ ಮಹಾರಾಷ್ಟ್ರದ ಹಲವೆಡೆ ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ) ಅಧಿಕಾರಿಗಳು ಉಗ್ರರ ಸುಳಿವಿನ ಪತ್ತೆಗಾಗಿ ನಡೆಸಿದ್ದ ದಾಳಿಯ (NIA Raid) ವೇಳೆ ಹಮಾಸ್ ಉಗ್ರರಿಗೆ ಸಂಬಂಧಿಸಿದ​ ಧ್ವಜ. ಗನ್​, ಟ್ಯಾಪ್​ಟಾಪ್​ ಸೇರಿದಂತೆ ಶಂಕಿತರಿಗೆ ಸೇರಿದ ಹಲವು ವಸ್ತುಗಳು ವಶಪಡಿಸಿಕೊಳ್ಳಲಾಗಿ ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ದಾಳಿ ನಡೆದಿತ್ತು. ಆದರೆ, ಇಲ್ಲಿ ದೊರಕಿರುವ ವಸ್ತುಗಳ ಬಗ್ಗೆ ಪ್ರತ್ಯೇಕ ಮಾಹಿತಿ ಲಭ್ಯವಿಲ್ಲ. ಒಟ್ಟಾರೆಯಾಗಿ ದೊರಕಿರುವ ವಸ್ತುಗಳ ಬಗ್ಗೆ ಎನ್​ಐಎ ಮಾಹಿತಿ ನೀಡಿದೆ.

ಮಹಾರಾಷ್ಟ್ರದ ಹಲವೆಡೆ ಶೋಧ ನಡೆಸಿದ ವೇಳೆ 51 ಹಮಾಸ್ ಧ್ವಜ ಪತ್ತೆಯಾಗಿದೆ ಎಂದು ಎನ್​ಐಎ ಅಧಿಕಾರಿಗಳು ತಿಳಿಸಿದ್ದಾರೆ. ದಾಳಿ ಸಂದರ್ಭದಲ್ಲಿ ಒಟ್ಟು 68.03 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ. ಜತೆಗೆ ಒಂದು ಪಿಸ್ತೂಲ್, ಎರಡು ಏರ್ ಗನ್, ಎಂಟು ಚಾಕುಗಳು, ಎರಡು ಲ್ಯಾಪ್‌ಟಾಪ್, ಆರು ಹಾರ್ಡ್ ಡಿಸ್ಕ್, ಮೂರು ಸಿಡಿಗಳು, 38 ಮೊಬೈಲ್, ಹತ್ತು ಮ್ಯಾಗಜೀನ್ ಬುಕ್ಸ್ ಹಾಗೂ 51 ಹಮಾಸ್ ಧ್ವಜಗಳನ್ನು ಜಪ್ತಿ ಮಾಡಲಾಗಿದೆ.

ಬೆಂಗಳೂರಿನ ಪುಲಿಕೇಶಿನಗರ, ಮಹಾರಾಷ್ಟ್ರದ ಪಡ್ಗಾ, ಬೊರಿವಲಿ, ಠಾಣೆ, ಮೀರಾ ರಸ್ತೆ ಹಾಗೂ ಪುಣೆ ಸೇರಿ ಒಟ್ಟು 44 ಕಡೆ ಏಕಕಾಲಕ್ಕೆ ದಾಳಿ ನಡೆಸಿ ಶೋಧ ಕೈಗೊಂಡಿದ್ದರು ಎನ್ಐಎ ಅಧಿಕಾರಿಗಳು. ಈ ಸಂಬಂಧ 15 ಶಂಕಿತರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಅದರಲ್ಲಿ ಆದಿಲ್ ಖೋತ್ ಎಂಬಾತನ ಮನೆಯಲ್ಲಿ ಧ್ವಜಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ.

ಫಿರೋಜ್ ದಸ್ತಗೀರ್ ಖುವಾನ್, ರಾಜೀಲ್ ಅಬ್ದುಲ್, ಜಿಶಾನದ ಅಝಾಜ್, ಮುಕ್ಬುಲ್ ನಚಾಮ್ ಎಂಬುವರ ಮನೆಯಲ್ಲಿ ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳು ಪತ್ತೆಯಾಗಿದ್ದರೆ, ಸೈಫ್ ಅತೀಕ್ ನಚಾಮ್, ರೇಹಾನದ ಅಶ್ಫಾಕ್ ಸೂಸೆ ಹಾಗೂ ಅತೀಫ್ ನಾಸಿರ್ ಮುಲ್ಲಾ ಎಂಬುವರ ಮನೆಯಲ್ಲಿ ನಗದು ಹಣ ಪತ್ತೆ.

ಇದನ್ನೂ ಓದಿ : Soumya Vishwanathan : ಮಗಳನ್ನು ಕೊಂದವರಿಗೆ ಜೀವಾವಧಿ ಶಿಕ್ಷೆಯಾಗುತ್ತಿದ್ದಂತೆ ಕೊನೆಯುಸಿರೆಳೆದ ಅಪ್ಪ

ಮಹಾರಾಷ್ಟ್ರದ ನಂಟಿನ ಮೇಳೆ ಬೆಂಗಳೂರಿನ ಪುಲಿಕೇಶಿ ನಗರದಲ್ಲಿ ಅಲಿ ಅಬ್ಬಾಸ್ ಎಂಬಾತರನ ಮನೆ ಮೇಲೆ ದಾಳಿ ನಡೆಸಿ ಶೋಧ ನಡೆಸಿದರು ಎನ್ಐಎ ಅಧಿಕಾರಿಗಳು ಈ ವೇಳೆ ಮನೆಯಲ್ಲಿದ್ದ ಮೊಬೈಲ್, ಲ್ಯಾಪ್‌ಟಾಪ್ ಪರಿಶೀಲನೆ ನಡೆಸಿದ್ದರು. ಎನ್ಐಎ ಪರಿಶೀಲನೆ ವೇಳೆ ಅಲಿ ಅಬ್ಬಾಸ್ ಮನೆಯಲ್ಲಿ ಹಣ ಮಾತ್ರ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಅಬ್ಬಾಸ್ ವಿಚಾರಣೆ ನಡೆಸಿ ತೆರಳಿದ ಎನ್ಐಎ ಅಧಿಕಾರಿಗಳು.

ಉರ್ದು ಶಾಲೆ ನಡೆಸುತ್ತಿದ್ದ ಅಬ್ಬಾಸ್​​

ಬೆಂಗಳೂರಿನ ಪುಲಿಕೇಶಿನಗರದಲ್ಲಿ ದಾಳಿಗೆ ಒಳಗಾದ ಅಬ್ಬಾಸ್​ ಅಲಿ ಮುಂಬಯು ಮೂಲದ ವ್ಯಕ್ತಿ. ಆತ ಪುಲಿಕೇಶಿನಗರ ವ್ಯಾಪ್ತಿಯಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಎಂದು ಗೊತ್ತಾಗಿದೆ. ಎನ್‌ಐಎ ಈತನನ್ನು ವಶಕ್ಕೆ ಪಡೆದು ಕರೆದೊಯ್ದಿದ್ದು, ಹೆಚ್ಚಿನ ವಿವರಗಳು ದೊರೆಯಬೇಕಿದೆ.

ದೇಶಾದ್ಯಂತ ಭಯೋತ್ಪಾದಕ ದಾಳಿ ನಡೆಸಲು ಜಾಗತಿಕ ಭಯೋತ್ಪಾದಕ ಗುಂಪು ಐಸಿಸ್ ಸಂಚು ರೂಪಿಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕರ್ನಾಟಕ ಮತ್ತು ಮಹಾರಾಷ್ಟ್ರದ ಸುಮಾರು 44 ಸ್ಥಳಗಳಲ್ಲಿ ಇಂದು ಮುಂಜಾನೆ ದಾಳಿ ನಡೆಸಿತ್ತು. ಕರ್ನಾಟಕದಲ್ಲಿ ಒಬ್ಬಾತ ಸೇರಿದಂತೆ 14 ಮಂದಿಯನ್ನು ಎನ್‌ಐಎ ವಶಕ್ಕೆ ತೆಗೆದುಕೊಂಡಿದೆ. 2020ರಲ್ಲಿ ಕೂಡ ಎನ್‌ಐಎ ನಡೆಸಿದ ಇಂಥದೇ ಕಾರ್ಯಾಚರಣೆಯೊಂದರಲ್ಲಿ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದರಲ್ಲಿ ನೇತ್ರತಜ್ಞನಾಗಿದ್ದ ಅಬ್ದುರ್ರಹಮಾನ್‌ ಎಂಬಾತ ಐಸಿಸ್‌ ಪರವಾಗಿ ಕಾರ್ಯಾಚರಿಸುತ್ತಿದ್ದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿತ್ತು.

ಕರ್ನಾಟಕದಲ್ಲಿ ಒಂದುಕಡೆ, ಪುಣೆಯಲ್ಲಿ 2 ಕಡೆ, ಠಾಣೆ ಗ್ರಾಮೀಣದಲ್ಲಿ 31 ಕಡೆ, ಠಾಣೆ ನಗರದಲ್ಲಿ 9 ಕಡೆ ಮತ್ತು ಭಯಂದರ್​ನಲ್ಲಿ ಒಂದು ಕಡೆ ಎನ್ಐಎ ಅಧಿಕಾರಿಗಳು ಶೋಧನೆ ನಡೆಸುತ್ತಿದ್ದಾರೆ. ‘ಭಾರತದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಹರಡುವ ಭಯೋತ್ಪಾದಕ ಸಂಘಟನೆಯ ಯೋಜನೆಗಳನ್ನು ವಿಫಲಗೊಳಿಸಲು ಎನ್ಐಎ ವ್ಯಾಪಕ ತನಿಖೆ ನಡೆಸುತ್ತಿದೆʼ ಎಂದು ಹೇಳಲಾಗಿದೆ.

ಡಿಸೆಂಬರ್ 2ರಂದು ಬಳ್ಳಾರಿಯಲ್ಲಿ ನಡೆದಿತ್ತು ದಾಳಿ

ರಾಷ್ಟ್ರೀಯ ತನಿಖಾ ದಳವು (National Investigation Agency) ನಕಲಿ ನೋಟು ಜಾಲದ ಮೇಲೆ ಮುಗಿಬಿದ್ದಿತ್ತು. ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಎನ್‌ಐಎ ಏಕಕಾಲದಲ್ಲಿ ದಾಳಿ (NIA Raid) ನಡೆಸಿದ್ದು, ಅದರಲ್ಲಿ ಕರ್ನಾಟಕದ ಬಳ್ಳಾರಿಯಲ್ಲೂ ಒಬ್ಬನನ್ನು ಸೆರೆ ಹಿಡಿದಿದೆ. ಬಳ್ಳಾರಿಯಲ್ಲಿ ಬಂಧಿತ ಆರೋಪಿಯನ್ನು ಮಹೇಂದ್ರ ಎಂದು ಗುರುತಿಸಲಾಗಿದ್ದು, ಆತನಿಂದ ಭಾರಿ ಪ್ರಮಾಣದ ನಕಲಿ ನೋಟು, ನೋಟು ತಯಾರಿಸುವ ಪೇಪರ್, ಪ್ರಿಂಟಿಂಗ್ ಮೆಷಿನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಈತ 500, 200, ಹಾಗೂ 100 ರೂ ಮುಖಬೆಲೆಯ ನೋಟು ತಯಾರಿಸುತ್ತಿದ್ದ ಎನ್ನಲಾಗಿದೆ.

Exit mobile version