ಪಾಟಿದಾರ್‌ ನಾಯಕನ ʼಹಾರ್ದಿಕʼ ಸ್ವಾಗತಕ್ಕೆ ಸಜ್ಜಾದ BJP? : ಮೋದಿ ನಾಡಿನಲ್ಲಿ ಚುನಾವಣಾ ವರ್ಷದ ಅಚ್ಚರಿ - Vistara News

ದೇಶ

ಪಾಟಿದಾರ್‌ ನಾಯಕನ ʼಹಾರ್ದಿಕʼ ಸ್ವಾಗತಕ್ಕೆ ಸಜ್ಜಾದ BJP? : ಮೋದಿ ನಾಡಿನಲ್ಲಿ ಚುನಾವಣಾ ವರ್ಷದ ಅಚ್ಚರಿ

ಮಾತೆತ್ತಿದರೆ ಪ್ರಧಾನಿ ಮೋದಿ ಹಾಗೂ ಗೃಹಸಚಿವ ಅಮಿತ್‌ ಷಾ ವಿರುದ್ಧ ಹರಿಹಾಯುತ್ತಿದ್ದ ಗುರಜಾತ್‌ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಹಾರ್ದಿಕ್‌ ಪಟೇಲ್‌ ಈಗ ಬದಲಾಗಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

“ಕಳೆದ ಐದು ವರ್ಷದಲ್ಲಿ ಪ್ರಧಾನಿ ಮೋದಿ ಏನೂ ಕೆಲಸ ಮಾಡಿಲ್ಲ, ಹಾಗಾಗಿ ಅವರು ಸೈನಿಕರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ”, “ಪ್ರಧಾನಿ ಮೋದಿಯವರು ಜನರಿಗೆ ಸಂಬಂಧಿಸಿದ ನಿಜ ವಿಚಾರಗಳನ್ನು ಬಿಟ್ಟು ತಮ್ಮನ್ನು ತಾವು ಬಿಂಬಿಸಿಕೊಳ್ಳುವಲ್ಲೆ ನಿರತರಾಗಿದ್ದಾರೆ”. ಹೀಗೆ ಮಾತೆತ್ತಿದರೆ ಪ್ರಧಾನಿ ಮೋದಿ ಹಾಗೂ ಗೃಹಸಚಿವ ಅಮಿತ್‌ ಷಾ ವಿರುದ್ಧ ಹರಿಹಾಯುತ್ತಿದ್ದ ಗುರಜಾತ್‌ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಹಾರ್ದಿಕ್‌ ಪಟೇಲ್‌ ಈಗ ಬದಲಾಗಿದ್ದಾರೆ.

ಕೆಲವು ದಿನಗಳ ಹಿಂದಿನಿಂದ ಅವರ ಮಾತಿನ ಧಾಟಿಯನ್ನು ಗಮನಿಸಿದವರೆಲ್ಲರೂ, ಸದ್ಯದಲ್ಲೆ ಹಾರ್ದಿಕ್‌ ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ಹೇಳುತ್ತಿರುವುದರಲ್ಲಿ ಅತಿಶಯೋಕ್ತಿ ಇಲ್ಲ. “ನಾವೆಲ್ಲರೂ ಸಾವಿರಾರು ವರ್ಷಗಳಿಂದ ಹಿಂದುತ್ವವನ್ನು ಆಚರಿಸಿಕೊಂಡು ಬರುತ್ತಿದ್ದೇವೆ”, “ಜನರಿಗೆ ತಕ್ಕಂತೆ ಬಿಜೆಪಿ ಯೋಜನೆಗಳನ್ನು ರೂಪಿಸುತ್ತಿದೆ, ಅದಕ್ಕೇ ಜಯಗಳಿಸುತ್ತಿದೆ” ಎನ್ನುವಂತಹ ಮಾತುಗಳೇ ಇದಕ್ಕೆ ಸಾಕ್ಷಿ.

ಗುಜರಾತ್‌ನ ಪ್ರಬಲ ಪಾಟೀದಾರ್‌ ಸಮುದಾಯಕ್ಕೆ ಸೇರಿದವರಾದರೂ ಅತ್ಯಂತ ಬಡ ಕುಟುಂಬದಿಂದ ಬಂದವರು ಹಾರ್ದಿಕ್‌ ಪಟೇಲ್‌. ಈಗಿನ್ನೂ 28 ವರ್ಷದವರಿದ್ದು, ಈಲ್ಲಿವರೆಗೆ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ಕಾಲೇಜು ದಿನಗಳಿಂದಲೂ ನಾಯಕತ್ವ ಗುಣ ಹೊಂದಿದ್ದ ಹಾರ್ದಿಕ್‌ ಜೀವನಕ್ಕೆ 2015 ಪ್ರಮುಖ ತಿರುವು ನೀಡಿತು. ತಮ್ಮ ಸಹೋದರಿ ಮೋನಿಕಾ ಒಂದು ಸರ್ಕಾರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ್ದಳು. ಆದರೆ ಆ ವಿದ್ಯಾರ್ಥಿ ವೇತನ ನೀಡಲು ನಿರಾಕರಿಸಲಾಯಿತು. ಇದೇ ವೇಳೆ ಮೋನಿಕಾ ಸ್ನೇಹಿತೆಯೊಬ್ಬಳಿಗೆ ಇದೇ ವಿದ್ಯಾರ್ಥಿವೇತನ ಸಿಕ್ಕಿತು. ಅದರಲ್ಲೂ ಆಕೆ ಮೋನಿಕಾಗಿಂತ ಕಡಿಮೆ ಅಂಕ ಗಳಿಸಿದ್ದಳು. ಆಕೆಗೆ ಈ ವಿದ್ಯಾರ್ಥಿವೇಥನ ದೊರಕಲು ಕಾರಣವಾಗಿದ್ದು ಆಕೆ ಇತರೆ ಹಿಂದುಳಿದ ವರ್ಗಕ್ಕೆ(ಒಬಿಸಿ) ಸೇರಿದವಳು ಎಂಬ ಕಾರಣಕ್ಕೆ. ಈ ಘಟನೆ ಹಾರ್ದಿಕ್‌ ಮೇಲೆ ಭಾರೀ ಪರಿಣಾಮ ಬೀರಿತು.

ಸಾಮಾಜಿಕ ನ್ಯಾಯ ನೀಡಿಕೆ ವ್ಯವಸ್ಥೆಯಲ್ಲಿ ಸೂಕ್ತ ಬದಲಾವಣೆ ಮಾಡಲೇಬೇಕು ಎಂದು ಪಾಟೀದಾರ್‌ ಸಮುದಾಯವನ್ನೂ ಒಬಿಸಿಗೆ ಸೇರಿಸಬೇಕು ಎಂಬ ಹೋರಾಟ ಆರಂಭಿಸಿದರು. ಪ್ರಾರಂಭದಲ್ಲಿ ಪಾಟಿದಾರ್‌ ಅನಾಮತ್‌ ಆಂದೋಲನ್‌ ಸಮಿತಿ(PAAS) ಮೂಲಕ ಪ್ರಾರಂಭವಾದ ಚಳವಳಿ ವ್ಯಾಪಕ ರೂಪ ತಳೆಯಿತು. ಹೋರಾಟದ ವೇಳೆ ಬಂಧನ, ಮೆಹಸಾನಾದಲ್ಲಿ ಗಲಭೆಗೆ ಸಂಬಂಧಿಸಿ ಚುನಾವಣೆಯಿಂದ ಬಹಿಷ್ಕಾರಕ್ಕೆ ಕಾರಣವಾಯಿತು.

ಆನಂತರದಲ್ಲಿಯೂ ನಿರಂತರ ಬಿಜೆಪಿ, ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದ ಪಟೇಲ್‌ 2017ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದರು. ರಾಹುಲ್‌ ಗಾಂಧಿ ಮುಂದಿನ ಪ್ರಧಾನಿ ಆಗಬೇಕು ಎಂಬ ಉದ್ದೇಶದೊಂದಿಗೆ 2019ರಲ್ಲಿ ಕಾಂಗ್ರೆಸ್‌ ಸೇರ್ಪಡೆ ಆದರು. ಅವರನ್ನು ಗುಜರಾತ್‌ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷರಾಗಿಯೂ ನೇಮಕ ಮಾಡಲಾಯಿತು.

ರಾಜ್ಯ ಘಟಕದೊಂದಿಗೆ ಅಪಸ್ವರ

ಅದೇಕೊ ಕೆಲ ದಿನಗಳಿಂದ ಹಾರ್ದಿಕ್‌ ಪಟೇಲ್‌ ಧ್ವನಿ ಬದಲಾಗಿದೆ. ಕಾಂಗ್ರೆಸ್‌ನಲ್ಲಿ ನಾನು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ವರನಂತೆ ಆಗಿದ್ದೇನೆ ಎಂದಿದ್ದರು. ಇದರ ಜತೆಗೇ, ನಾನೊಬ್ಬ ಅಪ್ಪಟ ಹೆಮ್ಮೆಯ ಹಿಂದು. ಬಿಜೆಪಿ, ಆಪ್‌ ಸೇರಿ ಎಲ್ಲ ಆಯ್ಕೆಗಳನ್ನೂ ಮುಕ್ತವಾಗಿಸಿಕೊಂಡಿದ್ದೇನೆ ಎಂದು ಸಂದರ್ಶನವೊಂದರಲ್ಲಿ ತಿಳಿಸಿದ್ದು ಸಾಕಷ್ಟು ಕುತೂಹಲ ಮೂಡಿಸಿತ್ತು.

ತಮ್ಮ ಮಾತನ್ನು ಇನ್ನೂ ಮುಂದುವರಿಸಿದ ಪಟೇಲ್‌, ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವ, ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಮಾಡುವಂತಹ ಬಿಜೆಪಿ ನಿರ್ಧಾರ ಸ್ವಾಗತಾರ್ಹವಾದದ್ದು. ಈಂತಹ ನಿರ್ಧಾರಗಳ ಮೂಲಕವೇ ಜನರ ವಿಶ್ವಾಸ ಉಳಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗಿದೆ. ಕಾಂಗ್ರೆಸ್‌ ಮಾತ್ರ ಓಬೀರಾಯನ ನೀತಿಗಳಿಗೆ ಜೋತು ಬಿದ್ದಿದೆ. ಇದೇ ಕಾರಣಕ್ಕೆ ಕಾಂಗ್ರೆಸ್‌ ಜನರಿಂದ ದೂರಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್‌ನಲ್ಲಿ ಆತ್ಮಾವಲೋಕನ ನಡೆಯುತ್ತಿಲ್ಲ. ನಾಯಕರು ತಮ್ಮಷ್ಟಕ್ಕೆ ತಾವು ಕಚ್ಚಾಡಿಕೊಳ್ಳುವುದರಲ್ಲೆ ನಿರತರಾಗಿದ್ದಾರೆ. ಈ ಬಗ್ಗೆ ಅನೇಕ ಬಾರಿ ರಾಹುಲ್‌ ಗಾಂಧಿ ಅವರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಯುವ ನಾಯಕರಿಗೆ ಆದ್ಯತೆ ನೀಡದಿದ್ದರೆ ಜನರಿಗೆ ಕಾಂಗ್ರೆಸ್‌ ಹೊರೆಯಾಗಲಿದೆ ಎಂದು ತಮ್ಮ ಮಾತನ್ನು ಮುಂದುವರಿಸಿದ್ದರು.

ಹಾರ್ದಿಕ್‌ ಪಟೀಲ್‌ ಹೇಳಿಕೆ ಬೆನ್ನಲ್ಲೆ ಗುಜರಾತ್‌ ಆಮ್‌ ಆದ್ಮಿ ಪಕ್ಷದ ಅಧ್ಯಕ್ಷ ಗೋಪಾಲ್‌ ಇತಾಲಿಯಾ ಪ್ರತಿಕ್ರಿಯಿಸಿ, ತಮ್ಮ ಪಕ್ಷಕ್ಕೆ ಹಾರ್ದಿಕ್‌ ಪಟೇಲ್‌ ಅವರನ್ನು ಸ್ವಾಗತಿಸಿದ್ದಾರೆ. ಬಿಜೆಪಿ ಅಧ್ಯಕ್ಷ ಸಿ.ಆರ್‌. ಪಟೇಲ್‌ ಈ ರೀತಿ ಸ್ವಾಗತ ಮಾಡಿಲ್ಲವಾದರೂ, ನರೇಂದ್ರ ಮೋದಿ ನೇತೃತ್ವದ ಆಡಳಿತವನ್ನು ಹಾರ್ದಿಕ್‌ ಪಟೇಲರಂತಹ ಯುವ ನಾಯಕರು ಹೊಗಳುತ್ತಿರುವುದರಲ್ಲಿ ಆಶ್ಚರ್ಯವೇನೂ ಇಲ್ಲ ಎಂದಿದ್ದಾರೆ.

ಸದ್ಯಕ್ಕೆ ಬಿಜೆಪಿ ಸೇರಲ್ಲ

ಅನೇಕ ಹೇಳಿಕೆಗಳ ನಂತರ, ಬಿಜೆಪಿ ಸೇರುತ್ತಾರೆ ಎಂಬ ಸುದ್ದಿಗಳ ಕುರಿತು ಹಾರ್ದಿಕ್‌ ಪಟೇಲ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸುದ್ದಿಗಾರರಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿರುವ ಪಟೇಲ್‌, ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ ಸೇರುವ ಯಾವುದೇ ಸನ್ನಿವೇಶ ಇಲ್ಲ. ನಾವು ಶತೃಗಳ ಶಕ್ತಿಯನ್ನು ಅರಿಯಬೇಕು. ಬಿಜೆಪಿ ಮಾಡಿದ ಉತ್ತಮ ನಿರ್ಧಾರಗಳನ್ನು ಹೊಗಳಿದ್ದೇನೆ. ಅಷ್ಟು ಮಾತ್ರಕ್ಕೇ ತಾನು ಬಿಜೆಪಿ ಸೇರ್ಪಡೆ ಆಗುವುದಿಲ್ಲ. ಕಾಂಗ್ರೆಸ್‌ ಪಕ್ಷದ ಕುರಿತು ನನ್ನ ಕಾಳಜಿಯನ್ನು ಹೈಕಮಾಂಡ್‌ ಕೇಳಿಸಿಕೊಳ್ಳುತ್ತದೆ ಎಂದು ಈಗಲೂ ವಿಶ್ವಾಸ ಇರುವುದಾಗಿ ತಿಳಿಸಿದ್ದಾರೆ.

2017ರಲ್ಲಿ ಗುಜರಾತ್‌ ವಿಧಾನಸಭೆಗೆ ಚುನಾವಣೆಗಳು ನಡೆದಿದ್ದವು. 2022ರ ಡಿಸೆಂಬರ್‌ ವೇಳೆಗೆ ಚುನಾವಣೆ ಎದುರಾಗಲಿದೆ. ಈಗಾಗಲೆ ಗುಜರಾತ್‌ ಚುನಾವಣಾ ಕಣ ರಂಗೇರಲು ಆರಂಭವಾಗಿದೆ. ಸದ್ಯಕ್ಕಂತೂ ಬಿಜೆಪಿ ಸೇರುವುದಿಲ್ಲ ಎಂದು ಪಟೇಲ್‌ ಸ್ಪಷ್ಟಪಡಿಸಿದ್ದಾರೆ. ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದಾರೆ. ರಾಹುಲ್‌ ಗಾಂಧಿಯವರ ಟ್ವೀಟ್‌ಗಳನ್ನು ರಿಟ್ವೀಟ್‌ ಮಾಡುವ ಮೂಲಕವೂ ತಾವಿನ್ನೂ ಕಾಂಗ್ರೆಸ್‌ನಲ್ಲೇ ಇದ್ದೀನಿ ಎಂದು ಸ್ಪಷ್ಟಪಡಿಸುತ್ತಿದ್ದಾರೆ. ಆದರೆ ತಮ್ಮ ಇಚ್ಚೆಗೆ ಅನುಸಾರವಾಗಿ ಕಾಂಗ್ರೆಸ್‌ನಲ್ಲಿ ಬದಲಾವಣೆಗಳಾಗುತ್ತವೆ ಎಂಬ ಯಾವುದೇ ಖಾತ್ರಿ ಇಲ್ಲ. ಅತ್ಯಂತ ಕ್ರಿಯಾಶೀಲನಾಗಿರುವ ಯುವ ನಾಯಕ, ಈ ವಾತಾವರಣ ಬದಲಾಗದಿದ್ದರೆ ಕಾಂಗ್ರೆಸ್‌ನಲ್ಲೇ ಉಳಿಯುವುದು ಬಹುತೇಕ ಅಸಾಧ್ಯ. ಬಿಜೆಪಿಗೆ ಅಲ್ಲದಿದ್ದರೂ ಡಿಸೆಂಬರ್‌ ಚುನಾವಣೆ ವೇಳೆಗೆ ಆಮ್‌ ಆದ್ಮಿ ಪಾರ್ಟಿಗಾದರೂ ಸೇರ್ಪಡೆ ಆಗುವುದು ಬಹುತೇಕ ನಿಶ್ಚಯ ಎನ್ನುವಂತೆ ಕಾಣುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

DK Shivakumar: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆಶಿಗೆ ಶಾಕ್‌, ಸಿಬಿಐ ತನಿಖೆ ಕೈಬಿಡಲು ಸುಪ್ರೀಂ ಕೋರ್ಟ್‌ ನಕಾರ

DK Shivakumar: 2013ರಿಂದ 2017ರವರೆಗಿನ ಅವಧಿಯಲ್ಲಿ ಡಿಕೆಶಿಯವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸಿದ್ದಾರೆಂದು ಸಿಬಿಐ ಆರೋಪಿಸಿದ್ದು, ಆ ಕುರಿತಂತೆ ಎಫ್ಐಆರ್ ದಾಖಲಿಸಿತ್ತು. ಆ ಪ್ರಕರಣವನ್ನು ಕೈಬಿಡುವಂತೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಡಿಕೆಶಿ ಮನವಿ ಸಲ್ಲಿಸಿದ್ದರು.

VISTARANEWS.COM


on

DK Shivakumar cbi supreme court
Koo

ಬೆಂಗಳೂರು: ಅಕ್ರಮ ಆಸ್ತಿ (Disproportionate assets) ಗಳಿಕೆ ಆರೋಪದಡಿ ತಮ್ಮ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ, CBI) ಆರಂಭಿಸಿರುವ ತನಿಖೆಯನ್ನು (CBI probe) ಕೈಬಿಡುವಂತೆ ಸೂಚಿಸಬೇಕು ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.

2013ರಿಂದ 2017ರವರೆಗಿನ ಅವಧಿಯಲ್ಲಿ ಡಿಕೆಶಿಯವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸಿದ್ದಾರೆಂದು ಸಿಬಿಐ ಆರೋಪಿಸಿದ್ದು, ಆ ಕುರಿತಂತೆ ಎಫ್ಐಆರ್ ದಾಖಲಿಸಿತ್ತು. ಆ ಪ್ರಕರಣವನ್ನು ಕೈಬಿಡುವಂತೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಡಿಕೆಶಿ ಮನವಿ ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಾಲಾ ತ್ರಿವೇದಿ ನೇತೃತ್ವದ ಪೀಠ, ಡಿಕೆ ಶಿವಕುಮಾರ್ ಅವರ ಅರ್ಜಿಯನ್ನು ವಜಾಗಳಿಸಿತು.

ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಅನುಮತಿ ಪಡೆಯದೆ ತನಿಖೆ ಆರಂಭಿಸಲಾಗಿದೆ. 2018 ರ ತಿದ್ದುಪಡಿಯ ದಿನಾಂಕದ ಮೊದಲು ಸೆಕ್ಷನ್ 17 ಎ ಸೇರಿಸಲಾದ ಅಪರಾಧಗಳಿಗೆ ಸೆಕ್ಷನ್ 17 ಎ ಅನ್ವಯಿಸುತ್ತದೆಯೇ ಎಂಬ ವಿಷಯವನ್ನು ಘನ ಪೀಠಕ್ಕೆ ಉಲ್ಲೇಖಿಸಲಾಗಿದೆ ಎಂದು ಅವರು ಚಂದ್ರಬಾಬು ನಾಯ್ಡು ಪ್ರಕರಣದ ತೀರ್ಪನ್ನು ಉಲ್ಲೇಖಿಸಿದರು.

ವಾದ ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ತ್ರಿವೇದಿ ಅವರು, ವಿಭಜಿತ ತೀರ್ಪಿನ ಆಧಾರದ ಮೇಲೆ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಉತ್ತರಿಸಿದರು. ಡಿಕೆಶಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಅರ್ಜಿಯ ಕುರಿತು ನೋಟಿಸ್ ಜಾರಿ ಮಾಡುವಂತೆ ಮನವಿ ಮಾಡುತ್ತಿರುವುದಾಗಿ ತಿಳಿಸಿದರು. ಆದರೆ, ಪೀಠ ಇದಕ್ಕೆ ನಿರಾಸಕ್ತಿ ವ್ಯಕ್ತಪಡಿಸಿತು.

ಯಾವುದಿದು ಪ್ರಕರಣ?

ಈ ಹಿಂದಿನ ಸಿದ್ದರಾಮಯ್ಯನವರ ರಾಜ್ಯ ಸರ್ಕಾರದಲ್ಲಿ ಡಿಕೆಶಿಯವರು ಇಂಧನ ಸಚಿವರಾಗಿದ್ದರು. ಆ ಸರ್ಕಾರದ ಅವಧಿಯಲ್ಲಿ 74 ಕೋಟಿ ರೂ.ಗಳಷ್ಟು ದಾಖಲೆರಹಿತ ಆದಾಯವನ್ನು ಡಿಕೆ ಶಿವಕುಮಾರ್ ಅವರು ಗಳಿಸಿದ್ದಾರೆಂದು ಹೇಳಲಾಗಿದೆ. ಅದರಂತೆ, 74.93 ಕೋಟಿ ರೂಪಾಯಿಗಳನ್ನು ಹೆಚ್ಚುವರಿಯಾಗಿ ಗಳಿಸಿದ್ದಾರೆಂದು ಸಿಬಿಐ ಆರೋಪಿಸಿತ್ತು. ಆ ಹಿನ್ನೆಲೆಯಲ್ಲಿ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ 2019ರಲ್ಲಿ ರಾಜ್ಯ ಸರ್ಕಾರಕ್ಕೆ ಸಿಬಿಐ ಅರ್ಜಿ ಸಲ್ಲಿಸಿತ್ತು.

2019ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ಸಿಬಿಐ ಮನವಿಗೆ ಸ್ಪಂದಿಸಿ ತನಿಖೆಗೆ ಅನುಮತಿ ನೀಡಿತ್ತು. ಆನಂತರ ಸಿಬಿಐ, ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಅದೇ ತನಿಖೆಯನ್ನು ಕೈಬಿಡುವಂತೆ ಡಿಕೆ ಶಿವಕುಮಾರ್ ಅವರು ಹೈಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದು ಮೊದಲಿಗೆ ಅದು ವಿಭಾಗೀಯ ಪೀಠದಲ್ಲಿ ವಿಚಾರಣೆಯಾಗಿ ಆನಂತರ ಅದೀಗ ವಿಸ್ತ್ರೃತ ಪೀಠಕ್ಕೆ ವರ್ಗಾವಣೆಯಾಗಿದೆ.

ಈ ಪ್ರಕರಣವನ್ನು ಸಿಬಿಐಗೆ ವಹಿಸಿದ್ದ ಹಿಂದಿನ ಸರ್ಕಾರದ ನಿರ್ಧಾರವನ್ನು ಹಾಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ರದ್ದು ಮಾಡಲು ನಿರ್ಧರಿಸಿದೆ. ಅದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಮತ್ತೆ ಹೈಕೋರ್ಟ್ ಮೊರೆ ಹೋಗಿರುವ ಸಿಬಿಐ, ಒಮ್ಮೆ ತನಿಖೆಗೊಳಪಡಿಸಲಾಗಿರುವ ಪ್ರಕರಣವನ್ನು ಪುನಃ ಹಿಂಪಡೆಯುವುದು ಸಲ್ಲದು ಎಂದು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದೆ. ಅತ್ತ, ಸುಪ್ರೀಂ ಕೋರ್ಟ್‌ಗೂ ಸಿಬಿಐ ಮೇಲ್ಮನವಿ ಸಲ್ಲಿಸಿದೆ.

ಕರ್ನಾಟಕ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಅಕ್ರಮಗಳು ಬಿಜೆಪಿ ಆಡಳಿತಾವಧಿಯಲ್ಲೇ ಶುರುವಾಗಿರುವಂಥವು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾದ ನಂತರ ಅವು ಮೇಲೆದ್ದಿವೆ. ಬಿಜೆಪಿಯು ಆ ಎಲ್ಲಾ ಹಗರಣಗಳನ್ನು ನಮ್ಮ ತಲೆಗೆ ಕಟ್ಟಲು ನೋಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: DK Shivakumar: ಸಿಎಂ- ಡಿಸಿಎಂ ದಂಗಲ್‌ ವಿಷಯ ಎತ್ತುವ ಶಾಸಕರಿಗೆ ನೊಟೀಸ್: ಡಿಕೆ ಶಿವಕುಮಾರ್

Continue Reading

ಗ್ಯಾಜೆಟ್ಸ್

BSNL New Plan: 395 ದಿನಗಳ ವ್ಯಾಲಿಡಿಟಿಯ ಬಿಎಸ್‌ಎನ್‌ಎಲ್ ಹೊಸ ಪ್ಲ್ಯಾನ್‌; ಜಿಯೊ, ಏರ್‌ಟೆಲ್‌ಗೆ ಸೆಡ್ಡು

ಭಾರತದ ಅತೀ ದೊಡ್ಡ ದೂರಸಂಪರ್ಕ ಸಂಸ್ಥೆಯಾದ ಬಿಎಸ್ ಎನ್ ಎಲ್ ಹೊಸ ಮತ್ತು ಆಕರ್ಷಕ ಯೋಜನೆಗಳನ್ನು (BSNL New Plan) ಪರಿಚಯಿಸುವ ಮೂಲಕ ಭಾರತದಾದ್ಯಂತ ತನ್ನ 4ಜಿ ಸೇವೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲು ಸಜ್ಜಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

By

BSNL New Plan
Koo

ಖಾಸಗಿ ಟೆಲಿಕಾಂ ಕಂಪನಿಗಳು (private telecom company) ಜುಲೈ 2024ರ ಆರಂಭದಲ್ಲಿ ತಮ್ಮ ಶುಲ್ಕಗಳನ್ನು ನವೀಕರಿಸಿದಾಗಿನಿಂದ ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪೆನಿಯು ಸಾಮಾಜಿಕ ಮಾಧ್ಯಮದಲ್ಲಿ (social media) ಗಮನ ಸೆಳೆಯುತ್ತಿದೆ. ಭಾರತದ (india) ಅತೀ ದೊಡ್ಡ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್ (bsnl) ಹೊಸ ಮತ್ತು ಆಕರ್ಷಕ ಯೋಜನೆಗಳನ್ನು (BSNL New Plan) ಪರಿಚಯಿಸುವ ಮೂಲಕ ಭಾರತದಾದ್ಯಂತ ತನ್ನ 4ಜಿ ಸೇವೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲು ಸಜ್ಜಾಗಿದೆ.

ಬಿಎ ಸ್ ಎನ್ ಎಲ್ ಹೊಸ ಯೋಜನೆ

ಬಿ ಎಸ್ ಎನ್ ಎಲ್ ಅತ್ಯುತ್ತಮ ಯೋಜನೆಗಳಲ್ಲಿ ಒಂದು 395 ದಿನಗಳ ಮಾನ್ಯತೆಯನ್ನು ನೀಡುತ್ತದೆ. 13 ತಿಂಗಳ ಯೋಜನೆ ಇದಾಗಿದ್ದು, 2,399 ರೂ.ಗಳಾಗಿದ್ದು, ಇದು ತಿಂಗಳಿಗೆ ಸುಮಾರು 200 ರೂ. ಯ ಶುಲ್ಕವನ್ನು ವಿಧಿಸಿದಂತಾಗುತ್ತದೆ.

4ಜಿ ಯೋಜನೆಯ ಪ್ರಯೋಜನಗಳು

ಬಿಎಸ್ ಎನ್ ಎಲ್ 4ಜಿ ಯೋಜನೆಯ ವೈಶಿಷ್ಟ್ಯಗಳೆಂದರೆ ಇದರ ಮಾನ್ಯತೆ 395 ದಿನಗಳು. ಡೇಟಾ ಪ್ರತಿದಿನ 2GB ಹೈಸ್ಪೀಡ್ ಅನ್ನು ಒಳಗೊಂಡಿದ್ದು, ಎಸ್ ಎಮ್ ಎಸ್ ದಿನಕ್ಕೆ 100 ಉಚಿತ, ದೇಶದಾದ್ಯಂತ ಯಾವುದೇ ನೆಟ್‌ವರ್ಕ್‌ನಲ್ಲಿ ಅನಿಯಮಿತ ಧ್ವನಿ ಕರೆಗಳು, ರಾಷ್ಟ್ರವ್ಯಾಪಿ ರೋಮಿಂಗ್ ಉಚಿತವಾಗಿರುತ್ತದೆ. ಜಿಂಗ್ ಸಂಗೀತ, ಬಿಎಸ್ ಎನ್ ಎಲ್ ಟ್ಯೂನ್ಸ್, ಹಾರ್ಡಿ ಆಟಗಳು, ಚಾಲೆಂಜರ್ ಅರೆನಾ ಆಟಗಳು ಮತ್ತು ಗೇಮನ್ ಆಸ್ಟ್ರೋಟೆಲ್ ಸೌಲಭ್ಯಗಳು ದೊರೆಯಲಿದೆ.

BSNL New Plan

ಅನಿಯಮಿತ ಸೌಲಭ್ಯ

ಬಿಎಸ್ ಎನ್ ಎಲ್ ನಿಂದ ಮತ್ತೊಂದು ದೀರ್ಘಾವಧಿಯ ಆಯ್ಕೆಯು 365 ದಿನಗಳ ಯೋಜನೆಯಾಗಿದೆ. ಈ ಯೋಜನೆಯ ಮಾನ್ಯತೆಯು 365 ದಿನಗಳು. ದೈನಂದಿನ ಬಳಕೆಯ ಮಿತಿಯಿಲ್ಲದ 600 ಜಿಬಿ ಡೇಟಾ, ದಿನಕ್ಕೆ 100 ಉಚಿತ ಎಸ್ ಎಂಎಸ್, ದೇಶಾದ್ಯಂತ ಯಾವುದೇ ನೆಟ್‌ವರ್ಕ್‌ನಲ್ಲಿ ಅನಿಯಮಿತ ಧ್ವನಿ ಕರೆ ಸೌಲಭ್ಯಗಳು ಲಭ್ಯವಾಗಲಿದೆ.

ಇದನ್ನೂ ಓದಿ: EMI Loan: ಇಎಂಐನಲ್ಲಿ ಫೋನ್ ಖರೀದಿ ಮಾಡುವುದು ಲಾಭವೇ ಅಥವಾ ನಷ್ಟವೇ? ಇಲ್ಲಿದೆ ಲೆಕ್ಕಾಚಾರ

ಪಿ ಎಲ್ ಐ ಯೋಜನೆಯಡಿಯಲ್ಲಿ ಮಾರಾಟ

ಟೆಲಿಕಾಂ ಉಪಕರಣಗಳ ತಯಾರಿಕಾ ವಲಯವು ಉತ್ಪಾದನೆ- ಸಂಯೋಜಿತ ಪ್ರೋತ್ಸಾಹ (ಪಿಎಲ್‌ಐ) ಯೋಜನೆಯಡಿಯಲ್ಲಿ 50,000 ಕೋಟಿ ರೂಪಾಯಿಗಳನ್ನು ಮೀರಿ ಮಾರಾಟ ಮಾಡಿದೆ. 17,800 ಕ್ಕೂ ಹೆಚ್ಚು ನೇರ ಉದ್ಯೋಗಗಳು ಮತ್ತು ಇನ್ನೂ ಹೆಚ್ಚಿನ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಿದೆ.

ಪಿಎಲ್ ಐ ಯೋಜನೆಯಲ್ಲಿ ಹೂಡಿಕೆಗಳು

ಟೆಲಿಕಾಂ ಪಿಎಲ್‌ಐ ಯೋಜನೆಯ ಮೂರು ವರ್ಷಗಳಲ್ಲಿ 3,400 ಕೋಟಿ ರೂಪಾಯಿಗಳ ಹೂಡಿಕೆಯನ್ನು ಆಕರ್ಷಿಸಿದೆ ಎಂದು ಸರ್ಕಾರ ತಿಳಿಸಿದೆ.

Continue Reading

ವಾಣಿಜ್ಯ

One Nation One Rate: ಚಿನ್ನಕ್ಕೆ ದೇಶಾದ್ಯಂತ ಒಂದೇ ದರ! ಹೊಸ ನಿಯಮ ಶೀಘ್ರ! ಬಂಗಾರ ದರ ಇಳಿಕೆ?

One Nation One Rate: ದೇಶದ ಎಲ್ಲಡೆ ಚಿನ್ನಕ್ಕೆ ಒಂದೇ ಬೆಲೆ ನಿಗದಿ ಪಡಿಸಲು ಚಿಂತನೆ ನಡೆದಿದೆ. ಪ್ರತಿ ರಾಜ್ಯದ ವಿಭಿನ್ನ ತೆರಿಗೆಗಳ ಹೊರತಾಗಿ ವಿವಿಧ ಅಂಶಗಳು ಪರಿಣಾಮ ಬೀರುವುದರಿಂದ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಈ ವ್ಯತ್ಯಾಸ ಕಂಡು ಬರುತ್ತಿದೆ. ಇದೀಗ ಈ ನಿಯಮದಲ್ಲಿ ಬದಲಾವಣೆ ಕಂಡು ಬರಲಿದ್ದು, ಶೀಘ್ರದಲ್ಲೇ ‘ಒಂದು ರಾಷ್ಟ್ರ, ಒಂದು ದರ’ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ.

VISTARANEWS.COM


on

One Nation One Rate
Koo

ನವದೆಹಲಿ: ಒಂದು ದೇಶ ಒಂದು ಚುನಾವಣೆಯ ಚರ್ಚೆ ಜೋರಾಗಿ ನಡೆಯುತ್ತಿದೆ. ಈ ಮಧ್ಯೆ ದೇಶದ ಎಲ್ಲೆಡೆ ಚಿನ್ನಕ್ಕೆ ಒಂದೇ ಬೆಲೆ ನಿಗದಿಪಡಿಸಲು ಚಿಂತನೆ ನಡೆದಿದೆ (One Nation One Rate). ಈಗ ಚಿನ್ನಕ್ಕೆ ದೇಶದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ಬೆಲೆಯಿದೆ (Gold Rate). ಪ್ರತಿ ರಾಜ್ಯದ ವಿಭಿನ್ನ ತೆರಿಗೆಗಳ ಹೊರತಾಗಿ ವಿವಿಧ ಅಂಶಗಳು ಪರಿಣಾಮ ಬೀರುವುದರಿಂದ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಈ ವ್ಯತ್ಯಾಸ ಕಂಡು ಬರುತ್ತಿದೆ. ಇದೀಗ ಈ ನಿಯಮದಲ್ಲಿ ಬದಲಾವಣೆ ಕಂಡು ಬರಲಿದ್ದು, ಶೀಘ್ರದಲ್ಲೇ ‘ಒಂದು ರಾಷ್ಟ್ರ, ಒಂದು ದರ’ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ.

ಈ ನಿಯಮ ಜಾರಿಗೆ ಬಂದರೆ ನೀವು ದೇಶದಲ್ಲಿ ಎಲ್ಲಿಯಾದರೂ ಒಂದೇ ದರದಲ್ಲಿ ಚಿನ್ನ ಖರೀದಿಸಬಹುದು. ಇದರಿಂದ ಗ್ರಾಹಕರ ಜತೆಗೆ ಚಿನ್ನದ ವ್ಯಾಪಾರಿಗಳು ಮತ್ತು ಆಭರಣ ವ್ಯಾಪಾರಿಗಳು ಅನುಕೂಲವಾಗಲಿದೆ. ಈಗಾಗಲೇ ದೇಶಾದ್ಯಂತದ ಎಲ್ಲ ದೊಡ್ಡ ದೊಡ್ಡ ಆಭರಣ ವ್ಯಾಪಾರಿಗಳು ಇದನ್ನು ಕಾರ್ಯಗತಗೊಳಿಸಲು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದರಿಂದ ಚಿನ್ನದ ಬೆಲೆಗಳನ್ನು ನಿಯಂತ್ರಿಸಲು ಸಾಧ್ಯವಾಗಲಿದೆ. ‘ಒಂದು ರಾಷ್ಟ್ರ, ಒಂದು ದರ’ ನೀತಿಗೆ ರತ್ನ ಮತ್ತು ಆಭರಣ ಮಂಡಳಿ (Gem and Jewellery Council) ಸಹ ಬೆಂಬಲ ಸೂಚಿಸಿದೆ. ದೇಶಾದ್ಯಂತ ಚಿನ್ನದ ಏಕರೂಪದ ಬೆಲೆ ಜಾರಿಗೊಳಿಸುವುದು ಇದರ ಉದ್ದೇಶ ಎಂದು ಮೂಲಗಳು ತಿಳಿಸಿವೆ. 2024ರ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಅಧಿಕೃತ ಘೋಷಣೆ ಹೊರ ಬೀಳಲಿದೆ. ಈ ನೀತಿ ಜಾರಿಗೆ ತಂದ ನಂತರ ಕಂಡುಬರುವ ಸವಾಲುಗಳನ್ನು ಎದುರಿಸಲು ಚಿನ್ನದ ಉದ್ಯಮವು ಈಗಾಗಲೇ ಯೋಜನೆಯನ್ನು ರೂಪಿಸುತ್ತಿದೆ.

ʼʼಈ ಯೋಜನೆಯಡಿ ದೇಶಾದ್ಯಂತ ಚಿನ್ನದ ಬೆಲೆಯನ್ನು ಏಕರೂಪಗೊಳಿಸಲು ಕೇಂದ್ರ ಸರ್ಕಾರ ಬಯಸಿದೆ. ಈ ನಿಯಮ ಜಾರಿಗೆ ತಂದ ನಂತರ ನೀವು ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ ಅಥವಾ ಕೋಲ್ಕತ್ತಾದಂತಹ ಮೆಟ್ರೋ ನಗರ ಅಥವಾ ಮಂಗಳೂರು, ಹುಬ್ಬಳ್ಳಿಯಂತಹ ಸಣ್ಣ ನಗರದಲ್ಲಿ ಚಿನ್ನವನ್ನು ಖರೀದಿಸಿದರೆ ಒಂದೇ ಬೆಲೆಯನ್ನು ಪಾವತಿಸಬೇಕಾಗುತ್ತದೆ. ಸರ್ಕಾರವು ರಾಷ್ಟ್ರೀಯ ಬುಲಿಯನ್ ಎಕ್ಸ್‌ಚೇಂಜ್‌ ರಚಿಸಲಿದ್ದು, ಇದು ಎಲ್ಲೆಡೆ ಚಿನ್ನದ ಸಮಾನ ಬೆಲೆಗಳನ್ನು ನಿಗದಿಪಡಿಸಲಿದೆ. ಆಭರಣ ವ್ಯಾಪಾರಿಗಳು ಈ ಬೆಲೆಗೆ ಚಿನ್ನವನ್ನು ಮಾರಾಟ ಮಾಡಬೇಕಾಗುತ್ತದೆʼʼ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಿನ್ನದ ಬೆಲೆ ಕಡಿಮೆಯಾಗಬಹುದು

ಈ ನಿಯಮದ ಅನುಷ್ಠಾನದೊಂದಿಗೆ ಮಾರುಕಟ್ಟೆಯಲ್ಲಿ ಪಾರದರ್ಶಕತೆ ಹೆಚ್ಚಾಗಲಿದೆ. ಇದಲ್ಲದೆ ಚಿನ್ನವನ್ನು ಮಾರಾಟ ಮಾಡಲು ಅನೇಕ ಬಾರಿ ಅನಿಯಂತ್ರಿತ ಬೆಲೆಗಳನ್ನು ವಿಧಿಸುವ ಆಭರಣ ವ್ಯಾಪಾರಿಗಳನ್ನು ಸಹ ಹತೋಟಿಗೆ ತರಲು ಸಾಧ್ಯವಾಗುತ್ತದೆ. ಕಳೆದ ಕೆಲವು ವರ್ಷಗಳಲ್ಲಿ, ಚಿನ್ನದ ಬೆಲೆಗಳು ತೀವ್ರವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ.

ಅನುಕೂಲಗಳೇನು?

  • ಹೆಚ್ಚಿದ ಪಾರದರ್ಶಕತೆ: ಒಂದೇ ಚಿನ್ನದ ದರವು ಎಲ್ಲ ಕಡೆಯ ಗ್ರಾಹಕರಿಗೆ ಸಮಾನವಾಗಿರುತ್ತದೆ.
  • ಹೆಚ್ಚು ಪರಿಣಾಮಕಾರಿ: ಬೆಲೆಗಳನ್ನು ಸುವ್ಯವಸ್ಥಿತಗೊಳಿಸುವುದರಿಂದ ಚಿನ್ನದ ಮಾರುಕಟ್ಟೆ ಹೆಚ್ಚು ಪರಿಣಾಮಕಾರಿಯಾಗುತ್ತದೆ.
  • ಸಂಭಾವ್ಯ ಬೆಲೆ ಕಡಿತ: ಬೆಲೆ ಅಸಮಾನತೆಯನ್ನು ನಿವಾರಿಸುವುದು ಚಿನ್ನದ ಬೆಲೆ ಇಳಿಕೆಗೆ ಕಾರಣವಾಗಬಹುದು.
  • ಮಧ್ಯಸ್ಥಿಕೆ ತೆಗೆದುಹಾಕುವುದು: ಏಕೀಕೃತ ಬೆಲೆಯು ಮಧ್ಯವರ್ತಿಗಳನ್ನು ತೆಗೆದುಹಾಕುತ್ತದೆ.
  • ಸಮಾನತೆ: ಈ ನಿಯಮ ದೇಶಾದ್ಯಂತದ ಎಲ್ಲ ಆಭರಣ ವ್ಯಾಪಾರಿಗಳಿಗೆ ನ್ಯಾಯಯುತ ಸ್ಪರ್ಧಾತ್ಮಕ ವಾತಾವರಣವನ್ನು ಒದಗಿಸುತ್ತದೆ.

ಇದನ್ನೂ ಓದಿ: Gold Rate Today: ಹಲವು ದಿನಗಳ ಬಳಿಕ ಇಳಿಕೆಯಾದ ಚಿನ್ನದ ಬೆಲೆ; ಇಂದಿನ ದರ ಇಷ್ಟಿದೆ ನೋಡಿ

Continue Reading

ದೇಶ

Arvind Kejriwal: “ಜೈಲಿನಲ್ಲಿ ಕೇಜ್ರಿವಾಲ್‌ ಹತ್ಯೆಗೆ ಸಂಚು”- ಸಂಚಲನ ಮೂಡಿಸ್ತಿದೆ ಆಪ್‌ ಆರೋಪ

Arvind Kejriwal: ಮಾಧ್ಯಮಗೋಷ್ಠಿ ನಡೆಸಿದ ದಿಲ್ಲಿ ಸಚಿವೆ ಆತಿಷಿ, ಕೇಜ್ರಿವಾಲ್‌ ಅವರನ್ನು ಜೈಲಿಗೆ ತಳ್ಳುವುದು ಮಾತ್ರವಲ್ಲ, ಅವರನ್ನು ಅನಾರೋಗ್ಯಕ್ಕೀಡು ಮಾಡಿ ಕೊಲೆಗೈಯುವ ಸಂಚು ಬಿಜೆಪಿಗಿದೆ. ಸರ್ವಾಧಿಕಾರಿ ತಮ್ಮ ವಿರೋಧಿಗಳನ್ನು ಜೈಲಿಗೆ ತಳ್ಳಿ ಅವರ ಆರೋಗ್ಯ ಹದಗೆಡುವಂತೆ ಮಾಡುತ್ತಿದ್ದಾರೆ. ಕೇಜ್ರಿವಾಲ್‌ಗೆ ಏನಾದರೂ ಹೆಚ್ಚು ಕಡಿಮೆ ಆದರೆ ಅದಕ್ಕೆ ಬಿಜೆಪಿಯೇ ನೇರ ಜವಾಬ್ದಾರಿ ಎಂದು ಹೇಳಿದ್ದಾರೆ.

VISTARANEWS.COM


on

Arvind Kejriwal
Koo

ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣ(Delhi Excise policy)ದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್(Arvind Kejriwal) ಅವರಿಗೆ ಜೈಲಿನಲ್ಲಿ ಜೀವ ಬೆದರಿಕೆ ಇದೆ ಎಂದು ಆಪ್‌ ಆತಂಕ ವ್ಯಕ್ತಪಡಿಸಿದೆ. ತಿಹಾರ್‌ನಲ್ಲಿ ಕೇಜ್ರಿವಾಲ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡದೇ ಅವರ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ಆಪ್‌ ಗಂಭೀರ ಆರೋಪ ಮಾಡಿದೆ.

ಮಾಧ್ಯಮಗೋಷ್ಠಿ ನಡೆಸಿದ ದಿಲ್ಲಿ ಸಚಿವೆ ಆತಿಷಿ, ಕೇಜ್ರಿವಾಲ್‌ ಅವರನ್ನು ಜೈಲಿಗೆ ತಳ್ಳುವುದು ಮಾತ್ರವಲ್ಲ, ಅವರನ್ನು ಅನಾರೋಗ್ಯಕ್ಕೀಡು ಮಾಡಿ ಕೊಲೆಗೈಯುವ ಸಂಚು ಬಿಜೆಪಿಗಿದೆ. ಸರ್ವಾಧಿಕಾರಿ ತಮ್ಮ ವಿರೋಧಿಗಳನ್ನು ಜೈಲಿಗೆ ತಳ್ಳಿ ಅವರ ಆರೋಗ್ಯ ಹದಗೆಡುವಂತೆ ಮಾಡುತ್ತಿದ್ದಾರೆ. ಕೇಜ್ರಿವಾಲ್‌ಗೆ ಏನಾದರೂ ಹೆಚ್ಚು ಕಡಿಮೆ ಆದರೆ ಅದಕ್ಕೆ ಬಿಜೆಪಿಯೇ ನೇರ ಜವಾಬ್ದಾರಿ ಎಂದು ಹೇಳಿದ್ದಾರೆ.

ಕೇಜ್ರಿವಾಲ್‌ ಕಳೆದ 30 ವರ್ಷಗಳಿಂದ ಸಕ್ಕರೆ ಖಾಯಿಲೆ ಹೊಂದಿರುವ ರೋಗಿ. ಇನ್ಸುಲಿನ್‌ ತೆಗೆದುಕೊಳ್ಳಲು ಅಥವಾ ವೈದ್ಯರನ್ನು ಭೇಟಿ ಮಾಡಲೂ ಅವರಿಗೆ ಬಿಜೆಪಿ ನೇತೃತ್ವದ ಸರ್ಕಾರ ಅವಕಾಶ ನೀಡುತ್ತಿಲ್ಲ. ಕೇಜ್ರಿವಾಲ್‌ಗೆ ಏನಾದರೂ ಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆಯಾಗಲಿದೆ. ಸಿಎಂ ಕೇಜ್ರಿವಾಲ್ ಇಡಿ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ಜಾಮೀನು ಪಡೆದ ತಕ್ಷಣ, ಬಿಜೆಪಿ ಅವರ ಜಾಮೀನು ರದ್ದುಗೊಳಿಸುವಂತೆ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿತ್ತು ಮತ್ತು ನಂತರ ಅವರನ್ನು ಸಿಬಿಐ ಬಂಧಿಸಿತು. ಸಕ್ಕರೆ ಖಾಯಿಲೆಯಿಂದಾಗಿ ಕೇಜ್ರಿವಾಲ್ ಅವರ ಆರೋಗ್ಯ ದಿನೇ ದಿನೇ ಕುಸಿಯುತ್ತಿದೆ. ಅವರ ತೂಕವೂ ಕ್ಷೀಣಿಸುತ್ತಿದೆ ಎಂದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: World Record: ಒಂದೇ ದಿನ ಬರೋಬ್ಬರಿ 11 ಲಕ್ಷ ಗಿಡ ನೆಟ್ಟು ವಿಶ್ವ ದಾಖಲೆ ಬರೆದ ಇಂದೋರ್‌; ದೇಶದ ಸ್ವಚ್ಛ ನಗರಕ್ಕೆ ಇನ್ನೊಂದು ಗರಿ

Continue Reading
Advertisement
kalaburagi News
ಕಲಬುರಗಿ3 seconds ago

Kalaburagi News : ಕಲಬುರಗಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ನದಿಗೆ ಹಾರಿ ಯುವಕ-ಯುವತಿ ಆತ್ಮಹತ್ಯೆ

Ban on PTI
ವಿದೇಶ18 mins ago

Ban on PTI: ಇಮ್ರಾನ್‌ ಖಾನ್‌ಗೆ ಬಿಗ್‌ ಶಾಕ್‌! ಪಿಟಿಐ ಪಕ್ಷದ ಮೇಲೆ ನಿಷೇಧ

dcm dk shivakumar
ಪ್ರಮುಖ ಸುದ್ದಿ48 mins ago

DK Shivakumar: `ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಸಿಬಿಐಗೇನು ಕೆಲಸ?’ ಅಕ್ರಮ ಆಸ್ತಿ ಕೇಸ್‌ ಬಗ್ಗೆ ಡಿಕೆ ಶಿವಕುಮಾರ್‌ ಪ್ರಶ್ನೆ

DK Shivakumar cbi supreme court
ಪ್ರಮುಖ ಸುದ್ದಿ2 hours ago

DK Shivakumar: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆಶಿಗೆ ಶಾಕ್‌, ಸಿಬಿಐ ತನಿಖೆ ಕೈಬಿಡಲು ಸುಪ್ರೀಂ ಕೋರ್ಟ್‌ ನಕಾರ

Healthy Heart Tips
ಆರೋಗ್ಯ2 hours ago

Healthy Heart Tips: ನಿಮ್ಮ ಹೃದಯ ಆರೋಗ್ಯವಾಗಿರಬೇಕೆ? ಮಳೆಗಾಲದಲ್ಲಿ ಈ ಏಳು ಆಹಾರಗಳಿಂದ ದೂರವಿರಿ!

actor Chetan
ಸಿನಿಮಾ2 hours ago

Actor Chetan: ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆ ಬೇಡ: ನಟ ಚೇತನ್‌

Ragini Prajwal shanabhogara magalu will release
ಸ್ಯಾಂಡಲ್ ವುಡ್2 hours ago

Ragini Prajwal: ರಾಗಿಣಿ ಪ್ರಜ್ವಲ್ ಅಭಿನಯದ `ಶಾನುಭೋಗರ ಮಗಳು’ ಚಿತ್ರ ಸದ್ಯದಲ್ಲೇ ತೆರೆಗೆ!

BSNL New Plan
ಗ್ಯಾಜೆಟ್ಸ್2 hours ago

BSNL New Plan: 395 ದಿನಗಳ ವ್ಯಾಲಿಡಿಟಿಯ ಬಿಎಸ್‌ಎನ್‌ಎಲ್ ಹೊಸ ಪ್ಲ್ಯಾನ್‌; ಜಿಯೊ, ಏರ್‌ಟೆಲ್‌ಗೆ ಸೆಡ್ಡು

Viral Video
Latest3 hours ago

Viral Video: ರಸ್ತೆಯಲ್ಲಿ ಬಾಲಕನನ್ನು ಅಟ್ಟಾಟಿಸಿ ದಾಳಿ ಮಾಡಿದ ಕೋತಿಗಳು; ಆತಂಕ ಮೂಡಿಸುವ ವಿಡಿಯೊ

Anant Ambani Marriage
Latest3 hours ago

Anant Ambani Marriage: ಅಂಬಾನಿ ಮದುವೆ ಸಮಾರಂಭದೊಳಗೆ ನುಸುಳಿದ್ದ ಇಬ್ಬರು ʼನಕಲಿ ಅತಿಥಿʼಗಳ ಬಂಧನ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ10 hours ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ23 hours ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ1 day ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ1 day ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ2 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ2 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

ಟ್ರೆಂಡಿಂಗ್‌