ಪಾಟಿದಾರ್‌ ನಾಯಕನ ʼಹಾರ್ದಿಕʼ ಸ್ವಾಗತಕ್ಕೆ ಸಜ್ಜಾದ BJP? : ಮೋದಿ ನಾಡಿನಲ್ಲಿ ಚುನಾವಣಾ ವರ್ಷದ ಅಚ್ಚರಿ - Vistara News

ದೇಶ

ಪಾಟಿದಾರ್‌ ನಾಯಕನ ʼಹಾರ್ದಿಕʼ ಸ್ವಾಗತಕ್ಕೆ ಸಜ್ಜಾದ BJP? : ಮೋದಿ ನಾಡಿನಲ್ಲಿ ಚುನಾವಣಾ ವರ್ಷದ ಅಚ್ಚರಿ

ಮಾತೆತ್ತಿದರೆ ಪ್ರಧಾನಿ ಮೋದಿ ಹಾಗೂ ಗೃಹಸಚಿವ ಅಮಿತ್‌ ಷಾ ವಿರುದ್ಧ ಹರಿಹಾಯುತ್ತಿದ್ದ ಗುರಜಾತ್‌ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಹಾರ್ದಿಕ್‌ ಪಟೇಲ್‌ ಈಗ ಬದಲಾಗಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

“ಕಳೆದ ಐದು ವರ್ಷದಲ್ಲಿ ಪ್ರಧಾನಿ ಮೋದಿ ಏನೂ ಕೆಲಸ ಮಾಡಿಲ್ಲ, ಹಾಗಾಗಿ ಅವರು ಸೈನಿಕರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ”, “ಪ್ರಧಾನಿ ಮೋದಿಯವರು ಜನರಿಗೆ ಸಂಬಂಧಿಸಿದ ನಿಜ ವಿಚಾರಗಳನ್ನು ಬಿಟ್ಟು ತಮ್ಮನ್ನು ತಾವು ಬಿಂಬಿಸಿಕೊಳ್ಳುವಲ್ಲೆ ನಿರತರಾಗಿದ್ದಾರೆ”. ಹೀಗೆ ಮಾತೆತ್ತಿದರೆ ಪ್ರಧಾನಿ ಮೋದಿ ಹಾಗೂ ಗೃಹಸಚಿವ ಅಮಿತ್‌ ಷಾ ವಿರುದ್ಧ ಹರಿಹಾಯುತ್ತಿದ್ದ ಗುರಜಾತ್‌ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷ ಹಾರ್ದಿಕ್‌ ಪಟೇಲ್‌ ಈಗ ಬದಲಾಗಿದ್ದಾರೆ.

ಕೆಲವು ದಿನಗಳ ಹಿಂದಿನಿಂದ ಅವರ ಮಾತಿನ ಧಾಟಿಯನ್ನು ಗಮನಿಸಿದವರೆಲ್ಲರೂ, ಸದ್ಯದಲ್ಲೆ ಹಾರ್ದಿಕ್‌ ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ಹೇಳುತ್ತಿರುವುದರಲ್ಲಿ ಅತಿಶಯೋಕ್ತಿ ಇಲ್ಲ. “ನಾವೆಲ್ಲರೂ ಸಾವಿರಾರು ವರ್ಷಗಳಿಂದ ಹಿಂದುತ್ವವನ್ನು ಆಚರಿಸಿಕೊಂಡು ಬರುತ್ತಿದ್ದೇವೆ”, “ಜನರಿಗೆ ತಕ್ಕಂತೆ ಬಿಜೆಪಿ ಯೋಜನೆಗಳನ್ನು ರೂಪಿಸುತ್ತಿದೆ, ಅದಕ್ಕೇ ಜಯಗಳಿಸುತ್ತಿದೆ” ಎನ್ನುವಂತಹ ಮಾತುಗಳೇ ಇದಕ್ಕೆ ಸಾಕ್ಷಿ.

ಗುಜರಾತ್‌ನ ಪ್ರಬಲ ಪಾಟೀದಾರ್‌ ಸಮುದಾಯಕ್ಕೆ ಸೇರಿದವರಾದರೂ ಅತ್ಯಂತ ಬಡ ಕುಟುಂಬದಿಂದ ಬಂದವರು ಹಾರ್ದಿಕ್‌ ಪಟೇಲ್‌. ಈಗಿನ್ನೂ 28 ವರ್ಷದವರಿದ್ದು, ಈಲ್ಲಿವರೆಗೆ ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ಕಾಲೇಜು ದಿನಗಳಿಂದಲೂ ನಾಯಕತ್ವ ಗುಣ ಹೊಂದಿದ್ದ ಹಾರ್ದಿಕ್‌ ಜೀವನಕ್ಕೆ 2015 ಪ್ರಮುಖ ತಿರುವು ನೀಡಿತು. ತಮ್ಮ ಸಹೋದರಿ ಮೋನಿಕಾ ಒಂದು ಸರ್ಕಾರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ್ದಳು. ಆದರೆ ಆ ವಿದ್ಯಾರ್ಥಿ ವೇತನ ನೀಡಲು ನಿರಾಕರಿಸಲಾಯಿತು. ಇದೇ ವೇಳೆ ಮೋನಿಕಾ ಸ್ನೇಹಿತೆಯೊಬ್ಬಳಿಗೆ ಇದೇ ವಿದ್ಯಾರ್ಥಿವೇತನ ಸಿಕ್ಕಿತು. ಅದರಲ್ಲೂ ಆಕೆ ಮೋನಿಕಾಗಿಂತ ಕಡಿಮೆ ಅಂಕ ಗಳಿಸಿದ್ದಳು. ಆಕೆಗೆ ಈ ವಿದ್ಯಾರ್ಥಿವೇಥನ ದೊರಕಲು ಕಾರಣವಾಗಿದ್ದು ಆಕೆ ಇತರೆ ಹಿಂದುಳಿದ ವರ್ಗಕ್ಕೆ(ಒಬಿಸಿ) ಸೇರಿದವಳು ಎಂಬ ಕಾರಣಕ್ಕೆ. ಈ ಘಟನೆ ಹಾರ್ದಿಕ್‌ ಮೇಲೆ ಭಾರೀ ಪರಿಣಾಮ ಬೀರಿತು.

ಸಾಮಾಜಿಕ ನ್ಯಾಯ ನೀಡಿಕೆ ವ್ಯವಸ್ಥೆಯಲ್ಲಿ ಸೂಕ್ತ ಬದಲಾವಣೆ ಮಾಡಲೇಬೇಕು ಎಂದು ಪಾಟೀದಾರ್‌ ಸಮುದಾಯವನ್ನೂ ಒಬಿಸಿಗೆ ಸೇರಿಸಬೇಕು ಎಂಬ ಹೋರಾಟ ಆರಂಭಿಸಿದರು. ಪ್ರಾರಂಭದಲ್ಲಿ ಪಾಟಿದಾರ್‌ ಅನಾಮತ್‌ ಆಂದೋಲನ್‌ ಸಮಿತಿ(PAAS) ಮೂಲಕ ಪ್ರಾರಂಭವಾದ ಚಳವಳಿ ವ್ಯಾಪಕ ರೂಪ ತಳೆಯಿತು. ಹೋರಾಟದ ವೇಳೆ ಬಂಧನ, ಮೆಹಸಾನಾದಲ್ಲಿ ಗಲಭೆಗೆ ಸಂಬಂಧಿಸಿ ಚುನಾವಣೆಯಿಂದ ಬಹಿಷ್ಕಾರಕ್ಕೆ ಕಾರಣವಾಯಿತು.

ಆನಂತರದಲ್ಲಿಯೂ ನಿರಂತರ ಬಿಜೆಪಿ, ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದ ಪಟೇಲ್‌ 2017ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದರು. ರಾಹುಲ್‌ ಗಾಂಧಿ ಮುಂದಿನ ಪ್ರಧಾನಿ ಆಗಬೇಕು ಎಂಬ ಉದ್ದೇಶದೊಂದಿಗೆ 2019ರಲ್ಲಿ ಕಾಂಗ್ರೆಸ್‌ ಸೇರ್ಪಡೆ ಆದರು. ಅವರನ್ನು ಗುಜರಾತ್‌ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷರಾಗಿಯೂ ನೇಮಕ ಮಾಡಲಾಯಿತು.

ರಾಜ್ಯ ಘಟಕದೊಂದಿಗೆ ಅಪಸ್ವರ

ಅದೇಕೊ ಕೆಲ ದಿನಗಳಿಂದ ಹಾರ್ದಿಕ್‌ ಪಟೇಲ್‌ ಧ್ವನಿ ಬದಲಾಗಿದೆ. ಕಾಂಗ್ರೆಸ್‌ನಲ್ಲಿ ನಾನು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ವರನಂತೆ ಆಗಿದ್ದೇನೆ ಎಂದಿದ್ದರು. ಇದರ ಜತೆಗೇ, ನಾನೊಬ್ಬ ಅಪ್ಪಟ ಹೆಮ್ಮೆಯ ಹಿಂದು. ಬಿಜೆಪಿ, ಆಪ್‌ ಸೇರಿ ಎಲ್ಲ ಆಯ್ಕೆಗಳನ್ನೂ ಮುಕ್ತವಾಗಿಸಿಕೊಂಡಿದ್ದೇನೆ ಎಂದು ಸಂದರ್ಶನವೊಂದರಲ್ಲಿ ತಿಳಿಸಿದ್ದು ಸಾಕಷ್ಟು ಕುತೂಹಲ ಮೂಡಿಸಿತ್ತು.

ತಮ್ಮ ಮಾತನ್ನು ಇನ್ನೂ ಮುಂದುವರಿಸಿದ ಪಟೇಲ್‌, ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸುವ, ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಮಾಡುವಂತಹ ಬಿಜೆಪಿ ನಿರ್ಧಾರ ಸ್ವಾಗತಾರ್ಹವಾದದ್ದು. ಈಂತಹ ನಿರ್ಧಾರಗಳ ಮೂಲಕವೇ ಜನರ ವಿಶ್ವಾಸ ಉಳಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗಿದೆ. ಕಾಂಗ್ರೆಸ್‌ ಮಾತ್ರ ಓಬೀರಾಯನ ನೀತಿಗಳಿಗೆ ಜೋತು ಬಿದ್ದಿದೆ. ಇದೇ ಕಾರಣಕ್ಕೆ ಕಾಂಗ್ರೆಸ್‌ ಜನರಿಂದ ದೂರಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್‌ನಲ್ಲಿ ಆತ್ಮಾವಲೋಕನ ನಡೆಯುತ್ತಿಲ್ಲ. ನಾಯಕರು ತಮ್ಮಷ್ಟಕ್ಕೆ ತಾವು ಕಚ್ಚಾಡಿಕೊಳ್ಳುವುದರಲ್ಲೆ ನಿರತರಾಗಿದ್ದಾರೆ. ಈ ಬಗ್ಗೆ ಅನೇಕ ಬಾರಿ ರಾಹುಲ್‌ ಗಾಂಧಿ ಅವರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಯುವ ನಾಯಕರಿಗೆ ಆದ್ಯತೆ ನೀಡದಿದ್ದರೆ ಜನರಿಗೆ ಕಾಂಗ್ರೆಸ್‌ ಹೊರೆಯಾಗಲಿದೆ ಎಂದು ತಮ್ಮ ಮಾತನ್ನು ಮುಂದುವರಿಸಿದ್ದರು.

ಹಾರ್ದಿಕ್‌ ಪಟೀಲ್‌ ಹೇಳಿಕೆ ಬೆನ್ನಲ್ಲೆ ಗುಜರಾತ್‌ ಆಮ್‌ ಆದ್ಮಿ ಪಕ್ಷದ ಅಧ್ಯಕ್ಷ ಗೋಪಾಲ್‌ ಇತಾಲಿಯಾ ಪ್ರತಿಕ್ರಿಯಿಸಿ, ತಮ್ಮ ಪಕ್ಷಕ್ಕೆ ಹಾರ್ದಿಕ್‌ ಪಟೇಲ್‌ ಅವರನ್ನು ಸ್ವಾಗತಿಸಿದ್ದಾರೆ. ಬಿಜೆಪಿ ಅಧ್ಯಕ್ಷ ಸಿ.ಆರ್‌. ಪಟೇಲ್‌ ಈ ರೀತಿ ಸ್ವಾಗತ ಮಾಡಿಲ್ಲವಾದರೂ, ನರೇಂದ್ರ ಮೋದಿ ನೇತೃತ್ವದ ಆಡಳಿತವನ್ನು ಹಾರ್ದಿಕ್‌ ಪಟೇಲರಂತಹ ಯುವ ನಾಯಕರು ಹೊಗಳುತ್ತಿರುವುದರಲ್ಲಿ ಆಶ್ಚರ್ಯವೇನೂ ಇಲ್ಲ ಎಂದಿದ್ದಾರೆ.

ಸದ್ಯಕ್ಕೆ ಬಿಜೆಪಿ ಸೇರಲ್ಲ

ಅನೇಕ ಹೇಳಿಕೆಗಳ ನಂತರ, ಬಿಜೆಪಿ ಸೇರುತ್ತಾರೆ ಎಂಬ ಸುದ್ದಿಗಳ ಕುರಿತು ಹಾರ್ದಿಕ್‌ ಪಟೇಲ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಸುದ್ದಿಗಾರರಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿರುವ ಪಟೇಲ್‌, ಸದ್ಯದ ಪರಿಸ್ಥಿತಿಯಲ್ಲಿ ಬಿಜೆಪಿ ಸೇರುವ ಯಾವುದೇ ಸನ್ನಿವೇಶ ಇಲ್ಲ. ನಾವು ಶತೃಗಳ ಶಕ್ತಿಯನ್ನು ಅರಿಯಬೇಕು. ಬಿಜೆಪಿ ಮಾಡಿದ ಉತ್ತಮ ನಿರ್ಧಾರಗಳನ್ನು ಹೊಗಳಿದ್ದೇನೆ. ಅಷ್ಟು ಮಾತ್ರಕ್ಕೇ ತಾನು ಬಿಜೆಪಿ ಸೇರ್ಪಡೆ ಆಗುವುದಿಲ್ಲ. ಕಾಂಗ್ರೆಸ್‌ ಪಕ್ಷದ ಕುರಿತು ನನ್ನ ಕಾಳಜಿಯನ್ನು ಹೈಕಮಾಂಡ್‌ ಕೇಳಿಸಿಕೊಳ್ಳುತ್ತದೆ ಎಂದು ಈಗಲೂ ವಿಶ್ವಾಸ ಇರುವುದಾಗಿ ತಿಳಿಸಿದ್ದಾರೆ.

2017ರಲ್ಲಿ ಗುಜರಾತ್‌ ವಿಧಾನಸಭೆಗೆ ಚುನಾವಣೆಗಳು ನಡೆದಿದ್ದವು. 2022ರ ಡಿಸೆಂಬರ್‌ ವೇಳೆಗೆ ಚುನಾವಣೆ ಎದುರಾಗಲಿದೆ. ಈಗಾಗಲೆ ಗುಜರಾತ್‌ ಚುನಾವಣಾ ಕಣ ರಂಗೇರಲು ಆರಂಭವಾಗಿದೆ. ಸದ್ಯಕ್ಕಂತೂ ಬಿಜೆಪಿ ಸೇರುವುದಿಲ್ಲ ಎಂದು ಪಟೇಲ್‌ ಸ್ಪಷ್ಟಪಡಿಸಿದ್ದಾರೆ. ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದಾರೆ. ರಾಹುಲ್‌ ಗಾಂಧಿಯವರ ಟ್ವೀಟ್‌ಗಳನ್ನು ರಿಟ್ವೀಟ್‌ ಮಾಡುವ ಮೂಲಕವೂ ತಾವಿನ್ನೂ ಕಾಂಗ್ರೆಸ್‌ನಲ್ಲೇ ಇದ್ದೀನಿ ಎಂದು ಸ್ಪಷ್ಟಪಡಿಸುತ್ತಿದ್ದಾರೆ. ಆದರೆ ತಮ್ಮ ಇಚ್ಚೆಗೆ ಅನುಸಾರವಾಗಿ ಕಾಂಗ್ರೆಸ್‌ನಲ್ಲಿ ಬದಲಾವಣೆಗಳಾಗುತ್ತವೆ ಎಂಬ ಯಾವುದೇ ಖಾತ್ರಿ ಇಲ್ಲ. ಅತ್ಯಂತ ಕ್ರಿಯಾಶೀಲನಾಗಿರುವ ಯುವ ನಾಯಕ, ಈ ವಾತಾವರಣ ಬದಲಾಗದಿದ್ದರೆ ಕಾಂಗ್ರೆಸ್‌ನಲ್ಲೇ ಉಳಿಯುವುದು ಬಹುತೇಕ ಅಸಾಧ್ಯ. ಬಿಜೆಪಿಗೆ ಅಲ್ಲದಿದ್ದರೂ ಡಿಸೆಂಬರ್‌ ಚುನಾವಣೆ ವೇಳೆಗೆ ಆಮ್‌ ಆದ್ಮಿ ಪಾರ್ಟಿಗಾದರೂ ಸೇರ್ಪಡೆ ಆಗುವುದು ಬಹುತೇಕ ನಿಶ್ಚಯ ಎನ್ನುವಂತೆ ಕಾಣುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ದೇಶ

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

VISTARANEWS.COM


on

Rakshit Shetty Richard Anthony Produce By Hombale

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೊಸ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಚುನಾವಣೆಯಲ್ಲಿ ಮಮತಾ ವಿರುದ್ಧ ಸೆಣಸಿ ಗೆದ್ದಿರುವ ಸುವೇಂದು ಅಧಿಕಾರಿ ಹೊಸ ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ. ಶನಿವಾರ ಬೆಳಗ್ಗೆ ೧೧ ಗಂಟೆಗೆ ಸುವೇಂದು ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅಮಿತ್‌ ಶಾ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಸುವೇಂದು ಅಧಿಕಾರಿಯನ್ನು ಪ.ಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಯಿತು. ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಹೆಸರು ಇತಿಹಾಸದಲ್ಲಿ ದಾಖಲಾಗಲಿದೆ.
ಇದೇ ವೇಳೆ ಯಾವುದೇ ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಸದೇ ಇರಲು ಬಿಜೆಪಿ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

Continue Reading

ದೇಶ

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

VISTARANEWS.COM


on

ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಹಿಂಸಾಚಾರ ಭುಗಿಲೆದ್ದಿದೆ. ಸಿಎಂ ರೇಸ್‌‌ನಲ್ಲಿರೋ ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌‌ ಹತ್ಯೆ ಆಗಿದೆ. ಆದ್ರೆ, ದುಷ್ಕರ್ಮಿಗಳ ಟಾರ್ಗೆಟ್‌‌‌‌‌ ಇದಿದ್ದು, ಸುವೇಂದು ಅಧಿಕಾರಿ, ಚಂದ್ರನಾಥ್‌ ಸುವೇಂದು‌ ಅವರ ಕಾರಿನಲ್ಲೇ ಮನೆಗೆ ಹೋಗ್ತಿದ್ದಾಗ ದುಷ್ಕಿರ್ಮಿಗಳು ಅಡ್ಡಗಟ್ಟಿ ಪಿಸ್ತೂಲ್‌‌ನಿಂದ ಶೂಟೌಟ್‌‌‌‌ ಮಾಡಿ ಕೊಲೆ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಆಗ್ಬೇಕೆಂದು ಕಣ್ಣೀರು ಹಾಕುತ್ತಲೆ ಸುವೇಂದು ಅಧಿಕಾರಿ ಗುಡುಗಿದ್ದಾರೆ. ಇದೆಲ್ಲದರ ಮಧ್ಯೆ ಪಶ್ಚಿಮ ಬಂಗಾಳದ ಗದ್ದುಗೆ ಯಾರು ಏರ್ತಾರೆ ಅನ್ನೋ ಕುತೂಹಲಕ್ಕೆ ನಾಳೆ ಬ್ರೇಕ್‌ ಬೀಳಲಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಹ ವೀಕ್ಷಕ ಒಡಿಶಾದ ಮುಖ್ಯಮಂತ್ರಿ ಮೋಹನ್ ಮಾಝಿ ನೇತೃತ್ವದಲ್ಲಿ ನಾಳೆ ಸಂಜೆ 4 ಗಂಟೆಗೆ ನೂತನ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಸಭೆಯಲ್ಲೇ ಪಶ್ಚಿಮ ಬಂಗಾಳದ ಸಿಎಂ ಯಾರಾಗಬೇಕು ಅನ್ನೋದು ಫೈನಲ್‌ ಆಗಲಿದೆ.
ಇವತ್ತಿಗೆ ಮಮತಾ ಬ್ಯಾನರ್ಜಿ ಆಡಳಿತಾವಧಿ ಮುಕ್ತಾಯಗೊಂಡಿದೆ. ಮೇ 9ರಂದು ನೂತನ ಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಸುವೇಂದು ಅಧಿಕಾರಿಯವರ ಜನಪ್ರಿಯತೆಯೋ ಅಥವಾ ದಿಲೀಪ್ ಘೋಷ್, ಸಮಿಕ್ ಭಟ್ಟಾಚಾರ್ಯ ಅವರ ಸಂಘಟನಾ ನಿಷ್ಠೆಯೋ? ಹೈಕಮಾಂಡ್ ಯಾರಿಗೆ ಮನ್ನಣೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

ರಾಜಕೀಯ

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

VISTARANEWS.COM


on

ತಮಿಳುನಾಡು ರಾಜಕೀಯ ಕ್ಷಣಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿದೆ. ವಿಜಯ್‌ ಪ್ರಮಾಣವಚನಕ್ಕೆ ಗವರ್ನರ್‌ ಎರಡನೇ ಸಲವೂ ಬ್ರೇಕ್‌ ಹಾಕಿದ್ದಾರೆ. ೧೧೮ ಶಾಸಕರ ಬೆಂಬಲದ ಪತ್ರ ತನ್ನಿ, ಅಲ್ಲಿಯವರೆಗೆ ಉಳಿದ ಯಾವ ಪಕ್ಷಕ್ಕೂ ಪ್ರಮಾಣವಚನಕ್ಕೆ ಆಹ್ವಾನಿಸುವುದಿಲ್ಲ ಎಂದು ಗವರ್ನರ್‌ ರಾಜೇಂದ್ರ ಅರ್ಲೇಕರ್‌ ಟಿವಿಕೆ ಮುಖ್ಯಸ್ಥ ವಿಜಯ್‌ಗೆ ಸೂಚಿಸಿದ್ದಾರೆ.
ಈ ಮಧ್ಯೆ, ಟಿವಿಕೆ ಪಕ್ಷ ಬೆಂಬಲಕ್ಕಾಗಿ ವಿಸಿಕೆಯನ್ನು ಸಂಪರ್ಕಿಸಿದೆ. ಸಿಪಿಐ ಮತ್ತು ಸಿಪಿಎಂ ಪಕ್ಷಗಳನ್ನೂ ವಿಜಯ್‌ ಮಾತುಕತೆ ನಡೆಸುತ್ತಿದ್ದಾರೆ. ವಿಸಿಕೆ, ಸಿಪಿಐ ಮತ್ತು ಸಿಪಿಎಂ ತಲಾ ಇಬ್ಬರು ಶಾಸಕರನ್ನು ಹೊಂದಿದೆ. ಮೂರೂ ಪಕ್ಷಗಳು ಇದುವರೆಗೆ ವಿಜಯ್‌ಗೆ ಅಧಿಕೃತ ಬೆಂಬಲ ಘೋಷಿಸಿಲ್ಲ.
ಮತ್ತೊಂದು ಕಡೆ, ಚೆನ್ನೈನಲ್ಲಿ ವಿಜಯ್‌ ಬೆಂಬಲಿಗರ ಜಮಾವಣೆ ಏರುತ್ತಿದೆ. ರಾಜ್ಯಪಾಲರ ನಡೆಯಿಂದ ಆಕ್ರೋಶಗೊಂಡಿರುವ ಟಿವಿಕೆ ನಾಯಕರು ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಪ್ರಮಾಣ ವಚನ ಸ್ವೀಕರಿಸಲು ವಿಜಯ್‌ಗೆ ಆಹ್ವಾನ ನೀಡುವಂತೆ ರಾಜ್ಯಪಾಲರಿಗೆ ಸೂಚಿಸಬೇಕು ಎಂದು ರಾಷ್ಟ್ರಪತಿಗೆ ಇ-ಮೇಲ್‌ ರವಾನಿಸಿದ್ದಾರೆ

Continue Reading

ಕ್ರೈಂ

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

VISTARANEWS.COM


on

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನವಾಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಹಿಂಸಾಚಾರ ಜೋರಾಗಿತ್ತು. ಇದೀಗ ರಕ್ತದೋಕುಳಿಯೇ ಹರಿದಿದೆ. ಬಿಜೆಪಿ ನಾಯಕ ಹಾಗೂ ಸಿಎಂ ರೇಸ್​ನಲ್ಲಿರುವ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ.


ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗಾಡಿ ಅಡ್ಡಗಟ್ಟಿ, ಗುಂಡಿನ ದಾಳಿ ಮಾಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಒಬ್ಬ ವ್ಯಕ್ತಿ ಕಾರಿನ ಕಿಟಕಿಯ ಹತ್ತಿರ ಬಂದು ಚಂದ್ರನಾಥ್ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈಗ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಹತ್ಯೆ ಕೇಸ್‌ ಟ್ವಿಸ್ಟ್‌ ಪಡೆದುಕೊಂಡಿದೆ. ಅಸಲಿಗೆ ಸುವೇಂದು ಅಧಿಕಾರಿ ಕೊಲೆಗೆ ಟಾರ್ಗೆಟ್‌‌ , ಮಾಡಲಾಗಿತ್ತು ಎನ್ನಲಾಗಿದ್ದು, ಅದು ಮಿಸ್‌‌ ಆಗಿ ಸುವೇಂದು ಆಪ್ತನ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ದುಷ್ಕರ್ಮಿಗಳು ಆಸ್ಟ್ರಿಯಾ ಮೂಲದ ಗ್ಲಾಕ್‌ ಪಿಸ್ತೂಲ್‌ ಬಳಸಿ ಶೂಟ್‌ ಮಾಡಿದ್ದಾರೆ.

Continue Reading
Advertisement
Rakshit Shetty Richard Anthony Produce By Hombale
ದೇಶ14 hours ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ14 hours ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ14 hours ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ2 days ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ2 days ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ2 days ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ2 days ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ2 days ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest3 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest3 days ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌