ಜೈಪುರ: ಭಾರತ-ಚೀನಾ ಬಿಕ್ಕಟ್ಟಿನ ಕುರಿತು ಕೇಂದ್ರ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಇದೇ ವೇಳೆ “ದೇಶಕ್ಕಾಗಿ ಬಿಜೆಪಿಯ ಒಂದು ನಾಯಿಯಾದರೂ ಪ್ರಾಣತ್ಯಾಗ ಮಾಡಿದೆಯೇ” ಎಂಬ ಟೀಕೆಯನ್ನು ಪುನರುಚ್ಚರಿಸಿದ್ದಾರೆ.
ರಾಜಸ್ಥಾನದ ಅಲ್ವರ್‌ನಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವ ಮಧ್ಯೆಯೇ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. “ಬಿಜೆಪಿಯು ದೇಶದ ಹೊರಗಡೆ ಸಿಂಹದಂತೆ ಮಾತನಾಡುತ್ತದೆ. ಆದರೆ, ದೇಶದೊಳಗೆ ಇಲಿಯಂತೆ ವರ್ತಿಸುತ್ತಿದೆ. ಹಾಗಾಗಿಯೇ, ಕೇಂದ್ರ ಸರ್ಕಾರಕ್ಕೆ ಚೀನಾ ಬಿಕ್ಕಟ್ಟು ಬಗೆಹರಿಸಿಕೊಳ್ಳಲು ಆಗುತ್ತಿಲ್ಲ” ಎಂದು ಆರೋಪಿಸಿದರು.
“ಕಠಿಣ ಕ್ರಮ ತೆಗೆದುಕೊಳ್ಳದಿದ್ದರೂ ಬಿಜೆಪಿಯರು ದೊಡ್ಡ ದೇಶಭಕ್ತರಂತೆ ವರ್ತಿಸುತ್ತಾರೆ. ಆದರೆ, ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌ನ ಹಲವಾರು ನಾಯಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಮಹತ್ವದ ಪಾತ್ರ ನಿರ್ವಹಿಸಿದೆ. ಆದರೆ, ದೇಶಕ್ಕಾಗಿ ಬಿಜೆಪಿಯ ಒಂದು ನಾಯಿಯಾದರೂ ಪ್ರಾಣ ತೆತ್ತಿದೆಯೇ” ಎಂದು ಖರ್ಗೆ ಟೀಕಿಸಿದ್ದಾರೆ.
ಇದನ್ನೂ ಓದಿ | China Pe Charcha | ʼಚೀನಾ ಪೆ ಚರ್ಚಾ ಯಾವಾಗ?ʼ, ಗಡಿ ಬಿಕ್ಕಟ್ಟಿನ ಕುರಿತು ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಸವಾಲು