Site icon Vistara News

Hassan Pen Drive Case: ಮೋದಿಯ ʼರಾಜಕೀಯ ಕುಟುಂಬʼದ ಅಪರಾಧಿಗಳಿಗೆ ರಕ್ಷಣೆ ಖಾತ್ರಿಯಾ? ರಾಹುಲ್‌ ಗಾಂಧಿ ಕಿಡಿ

Rahul Gandhi

Wayanad or Rae Bareli? Rahul Gandhi says not guided by God like Narendra Modi

ನವದೆಹಲಿ: ಸಂಸದ ಪ್ರಜ್ವಲ್‌ ರೇವಣ್ಣ(Prajwal Revanna) ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ(Hassan Pen Drive Case) ಆರೋಪದ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಪ್ರತಿಕ್ರಿಯಿಸಿದ್ದು, ಪ್ರಧಾನಿ ನರೇಂದ್ರ ಮೋದಿ(Narendra Modi) ವಿರುದ್ಧ ಹರಿಹಾಯ್ದಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ರಾಹುಲ್‌ ಗಾಂಧಿ ಪ್ರಧಾನಿ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಪ್ರಧಾನಿ ಮೌನವಹಿಸಿರುವುದು ನಾಚಿಕೆಗೇಡಿನ ವಿಚಾರವಾಗಿದೆ. ಈ ಘೋರ ಅಪರಾಧದ ಬಗ್ಗೆ ಪ್ರಧಾನಿ ಮೌನವಹಿಸಿದ್ದು ಯಾಕೆ? ಕೂಡಲೇ ಪ್ರಧಾನಿ ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ನೂರಾರು ಹೆಣ್ಣುಮಕ್ಕಳನ್ನು ಶೋಷಣೆ ಮಾಡಿದ ವಿಚಾರ ಗೊತ್ತಿದ್ದರೂ ಕೇವಲ ಮತಕ್ಕಾಗಿ ನರರೂಪ ರಾಕ್ಷಸನ ಪರವಾಗಿ ಪ್ರಚಾರ ಮಾಡಿದ್ದು ಯಾಕೆ? ಈ ಘೋರ ಅಪರಾಧದ ಬಗ್ಗೆ ಪ್ರಧಾನಿ ಮೌನವಹಿಸಿದ್ದು ಯಾಕೆ? ಕೂಡಲೇ ಪ್ರಧಾನಿ ಉತ್ತರಿಸಬೇಕು. ಅಷ್ಟಕ್ಕೂ, ಇಷ್ಟು ದೊಡ್ಡ ಕ್ರಿಮಿನಲ್ ದೇಶದಿಂದ ಹೇಗೆ ಸುಲಭವಾಗಿ ತಪ್ಪಿಸಿಕೊಂಡರು? ಕೈಸರ್‌ಗಂಜ್‌ನಿಂದ ಕರ್ನಾಟಕದವರೆಗೆ ಮತ್ತು ಉನ್ನಾವೊದಿಂದ ಉತ್ತರಾಖಂಡದವರೆಗೆ ಹೆಣ್ಣು ಮಕ್ಕಳ ಅಪರಾಧಿಗಳಿಗೆ ಪ್ರಧಾನಿ ಮೌನ ಬೆಂಬಲ ನೀಡುತ್ತಿರುವುದು ದೇಶಾದ್ಯಂತ ಅಪರಾಧಿಗಳಿಗೆ ಧೈರ್ಯ ತುಂಬುತ್ತಿದೆ. ಇನ್ನು ಎಲ್ಲ ಅಪರಾಧಿಗಳು ಮೋದಿಯವರ ‘ರಾಜಕೀಯ ಕುಟುಂಬದ’ ಭಾಗವಾಗುವುದರಿಂದ ಅವರಿಗೆ ಭದ್ರತೆ ಸಿಗುತ್ತದೆ ಎಂಬುದು ಖಾತ್ರಿ ಆಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಹಾಸನ ಸಂಸದ, ಜೆಡಿಎಸ್‌ ಮುಖಂಡ , ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ( ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 24 ಗಂಟೆಯೊಳಗೆ ವಿಚಾರಣೆಗೆ ಹಾಜಾರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದೆ. ಒಂದು ವೇಳೆ ಗಡುವಿನೊಳಗೆ ವಿಚಾರಣೆಗೆ ಹಾಜರಾಗದೇ ಇದ್ದರೆ ಬಂಧಿಸುವ ಅಧಿಕಾರ ಎಸ್‌ಐಟಿಗೆ ಇದೆ. ಇಲ್ಲವೇ ಇನ್ನೂ ಎರಡು ಬಾರಿ ನೋಟಿಸ್‌ ನೀಡಿ ಕಾಯಬಹುದಾಗಿದೆ. ಈ ಎಲ್ಲವೂ ತನಿಖಾಧಿಕಾರಿಯ ವಿವೇಚನೆಗೆ ಬಿಟ್ಟ ವಿಷಯವಾಗಿದೆ.

ಇದನ್ನೂ ಓದಿ: Prajwal Revanna: ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ; ಮೋದಿ ವಿರುದ್ಧ ನಟಿಯ ಆಕ್ರೋಶ!

ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಬುಧವಾರ – ಮೇ 1) ವಿಚಾರಣೆಗೆ ಹಾಜರಾಗಬೇಕು. ಕಾರಣ, ಸಿಆರ್‌ಪಿಸಿ 41ಎ ಅಡಿಯಲ್ಲಿ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ 24 ಗಂಟೆ ಒಳಗೆ ವಿಚಾರಣೆಗೆ ಹಾಜರಾಗದೆ ಹೋದಲ್ಲಿ ಮತ್ತೊಂದು ನೋಟಿಸ್‌ ಅನ್ನು ಎಸ್‌ಐಟಿ ನೀಡಲಿದೆ. ಇಲ್ಲವೇ ನೋಟಿಸ್‌ ನೀಡದೆಯೂ ಬಂಧಿಸುವ ಅಧಿಕಾರವಿದೆ. ವಿದೇಶದಿಂದ ಮೇ 3 ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ಏರ್‌ಫೋರ್ಟ್‌ಗೆ ಪ್ರಜ್ವಲ್ ರೇವಣ್ಣ ಆಗಮಿಸಲಿದ್ದರೆ ಎನ್ನಲಾಗಿದ್ದು, ಬಳಿಕವಷ್ಟೇ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

Exit mobile version