ಲಖನೌ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆ ಮೊಘಲ್‌ಘರಾಹಿ ಗ್ರಾಮದಲ್ಲಿ ಜುಲೈ 2ರಂದು ನಡೆದ ಕಾಲ್ತುಳಿತ (Hathras Stampede) ಪ್ರಕರಣದ ಆಘಾತದಿಂದ ದೇಶ ಇನ್ನೂ ಹೊರ ಬಂದಿಲ್ಲ. ಭೋಲೆ ಬಾಬಾ (Bhole Baba) ಅವರ ಸತ್ಸಂಗ ಕಾರ್ಯಕ್ರಮದಲ್ಲಿ ಈ ದುರಂತ ಸಂಭವಿಸಿದ್ದು, ಸುಮಾರು 121 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ನಡೆದ ಬಳಿಕ ತಲೆ ಮರೆಸಿಕೊಂಡಿರುವ ಸ್ವಯಂಘೋಷಿತ ʼದೇವ ಮಾನವʼ ನಾರಾಯಣ ಸಾಕಾರ್ ಹರಿ ಆಲಿಯಾಸ್ ಭೋಲೇ ಬಾಬಾ ಇದೀಗ ಘಟನೆಗೆ ಸಮಾಜಘಾತುಕ ಶಕ್ತಿ ಕಾರಣ ಎಂದು ದೂರಿದ್ದಾರೆ.
ಅಜ್ಞಾತ ಸ್ಥಳದಿಂದ ಹೇಳಿಕೆ ಬಿಡುಗಡೆ ಮಾಡಿರುವ ಭೋಲೇ ಬಾಬಾ, ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಜತೆಗೆ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ತಾನು ಸ್ಥಳದಿಂದ ನಿರ್ಗಮಿಸಿದ ಬಹಳ ಸಮಯದ ನಂತರ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ.
#WATCH | Visuals from Ram Kutir Charitable Trust in Mainpuri district. A search operation was underway for 'Bhole Baba', who conducted a Satsang in Hathras where a stampede took place today claiming the lives of 116 people. pic.twitter.com/8u1Be55ScA
— ANI (@ANI) July 2, 2024
ಭೋಲೇ ಬಾಬಾ ಹೇಳಿದ್ದೇನು?
“ನಾನು / ನಾವು ಮೃತರ ಕುಟುಂಬಗಳಿಗೆ ಸಂತಾಪವನ್ನು ಸಂತಾಪ ಸೂಚಿಸುತ್ತಿದ್ದೇವೆ. ಅವರ ಕುಟುಂಬಕ್ಕೆ ನೋವು ಮರೆಸುವ ಶಕ್ತಿ ಲಭಿಸಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಭು / ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇವೆ” ಎಂದು ಹೇಳಿದ್ದಾರೆ. ಕೆಲವು ಸಮಾಜ ವಿರೋಧಿ ಶಕ್ತಿಗಳು ಸೃಷ್ಟಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ವಕೀಲ ಎ.ಪಿ.ಸಿಂಗ್ ಅವರಲ್ಲಿ ವಿನಂತಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಪ್ರಾಥಮಿಕ ವರದಿಯಲ್ಲಿ ಏನಿದೆ?
ʼʼ80 ಸಾವಿರ ಜನರಿಗಾಗಿ ಅನುಮತಿ ಪಡೆದ ಸತ್ಸಂಗ ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದರು. ಭೋಲೆ ಬಾಬಾ ಮಧ್ಯಾಹ್ನ 12.30ರ ಸುಮಾರಿಗೆ ಸತ್ಸಂಗ ಪೆಂಡಾಲ್‌ಗೆ ಆಗಮಿಸಿದ್ದರು. ಕಾರ್ಯಕ್ರಮವು 1 ಗಂಟೆ ನಡೆಯಿತು. ನಂತರ ಮಧ್ಯಾಹ್ನ 1.40ರ ಸುಮಾರಿಗೆ ಭೋಲೆ ಬಾಬಾ ಪೆಂಡಾಲ್‌ನಿಂದ ಹೊರಬಂದರು” ಎಂದು ವರದಿ ತಿಳಿಸಿದೆ.
"Bhole Baba is not inside, neither he was yesterday nor he is today": DSP Mainpuri on police deployment outside ashram
— ANI Digital (@ani_digital) July 3, 2024
Read @ANI Story | https://t.co/0nWxF02wdl#HathrasStampede #UttarPradeshPolice #Mainpuri pic.twitter.com/x4joP6qJcc
ʼʼಭೋಲೆ ಬಾಬಾ ಹೊರಡುವ ವೇಳೆ ವೇಳೆ ಲಕ್ಷಾಂತರ ಮಂದಿ ಅವರ ಪಾದ ಮುಟ್ಟಿ, ಅವರು ಮೆಟ್ಟಿದ ನೆಲದ ಮಣ್ಣನ್ನು ತೆಗೆದುಕೊಳ್ಳಲು ಓಡಿ ಹೋಗಿದ್ದಾರೆ. ಹಾಗೆ ಓಡಿ ಹೋಗುವ ಭರದಲ್ಲಿ ಕಾಲ್ತುಳಿತ ಉಂಟಾಗಿದೆ. ಒಬ್ಬರನ್ನೊಬ್ಬರು ತುಳಿದುಕೊಂಡು ಮುಂದೆ ಸಾಗಿದ್ದು ಹಾಗೂ ಚರಂಡಿಯಲ್ಲಿ ಬಿದ್ದಿದ್ದು ಸಾವಿನ ಸಂಖ್ಯೆ ಜಾಸ್ತಿಯಾಗಲು ಕಾರಣ” ಎಂದು ತನಿಖೆಯ ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Hathras Stampede: ಹತ್ರಾಸ್ ಕಾಲ್ತುಳಿತ- FIRನಲ್ಲಿ ಭೋಲೇ ಬಾಬಾನ ಹೆಸರೇ ಇಲ್ಲ!
ಕಾಲ್ತುಳಿತದಿಂದ ಮೃತಪಟ್ಟವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ. ಘಟನೆ ಬಗ್ಗೆ ಈಗಾಗಲೇ ತನಿಖೆ ಆರಂಭವಾಗಿದೆ. ಬುಧವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ ಮತ್ತು ಗಾಯಾಳುಗಳನ್ನು ಸಂತೈಸಿದ್ದಾರೆ. ಸಂತ್ರಸ್ತರಿಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೃತರ ಮತ್ತು ಗಾಯಗೊಂಡವರ ಕುಟುಂಬಕ್ಕೆ ಕ್ರಮವಾಗಿ 2 ಲಕ್ಷ ರೂ. ಮತ್ತು 50 ಸಾವಿರ ರೂ. ಪರಿಹಾರ ಧನವನ್ನು ಈಗಾಗಲೇ ಘೋಷಿಸಲಾಗಿದೆ.