Site icon Vistara News

Hathras Stampede: ಕಾಲ್ತುಳಿತದ ಬಳಿಕ ಕಾಲ್ಕಿತ್ತಿದ್ದ ಡೋಂಗಿ ಬಾಬಾ- ವೈರಲ್‌ ಆಯ್ತು ವಿಡಿಯೋ

Hatras Stampede

ಲಖನೌ: ಉತ್ತರಪ್ರದೇಶದ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತ(Hathras Stampede) ದುರ್ಘಟನೆಗೆ ಸಂಬಂಧಿಸಿದ ಕೆಲವೊಂದು ಸಿಸಿಟಿವಿ ದೃಶ್ಯಾವಳಿಗಳು ಇದೀಗ ವೈರಲ್‌ ಆಗುತ್ತಿದೆ. ಅದರಲ್ಲಿ ಪ್ರಮುಖವಾಗಿ ಘಟನೆ ಬಳಿಕ ನಾರಾಯಣ ಸಾಕರ್‌ ಹರಿ ಅಲಿಯಾಸ್‌ ಭೋಲೆ ಬಾಬಾ(Bhole Baba) ತನ್ನ ಬೆಂಬಲಿಗರೊಂದಿಗೆ ಸ್ಥಳದಿಂದ ಎಸ್ಕೇಪ್‌ ಆಗುತ್ತಿರುವ ದೃಶ್ಯ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ. ಈ ದೃಶ್ಯ ಪೆಟ್ರೋಲ್‌ ಪಂಪ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ತನಿಖೆ ಆರಂಭಿಸಿರುವ ಉತ್ತರ ಪ್ರದೇಶ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಹಾಗೆಯೇ, ಪ್ರಮುಖ ಆರೋಪಿಯ ಕುರಿತು ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದಾರೆ.

“ಹತ್ರಾಸ್‌ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸೇರಿ ಒಟ್ಟು ಆರು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ. ಇದುವರೆಗೆ 121 ಮಂದಿ ಮೃತಪಟ್ಟಿದ್ದು, ಎಲ್ಲರ ಶವಗಳನ್ನು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆ ಪ್ರಕ್ರಿಯೆಯೂ ಮುಕ್ತಾಯಗೊಂಡಿದೆ” ಎಂದು ಅಲಿಗಢ ಐಜಿ ಶಾಲಾಭ್‌ ಮಾಥುರ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಭೋಲೆ ಬಾಬಾ ನಂತರ ಪ್ರತ್ಯಕ್ಷರಾಗಿದ್ದು, “ನಾನು ಸತ್ಸಂಗ ಮುಗಿಸಿ ತೆರಳಿದ ಬಳಿಕ ಘಟನೆ ನಡೆದಿದೆ. ಇದು ಸಮಾಜಘಾತುಕ ಶಕ್ತಿಗಳ ಕೃತ್ಯ” ಎಂದಿದ್ದಾರೆ. ಕಾಲ್ತುಳಿತದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರವು ಎಸ್‌ಐಟಿ ರಚಿಸಿದೆ.

ಹತ್ರಾಸ್‌ ಕಾಲ್ತುಳಿತ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದ್ದು, ಈಗಾಗಲೇ ಮೃತರ ಸಂಬಂಧಿಕರಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ., ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಘೋಷಿಸಿದೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆಗಾಗಿ ಎಸ್‌ಐಟಿಯನ್ನೂ ರಚಿಸಲಾಗಿದೆ. ಮತ್ತೊಂದೆಡೆ, ನೂರಾರು ಜನರ ಸಾವಿನ ಬಳಿಕ ಭೋಲೆ ಬಾಬಾ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:BJP Muslim Candidate: ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್? ಏನಿದರ ಗುಟ್ಟು?

Exit mobile version