ಅಹಮದಾಬಾದ್: ಗುಜರಾತ್ನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗೋಡೆ ಕುಸಿದು 8 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ಕಳೆದ ಜೂನ್ ೧ರಿಂದ ರಾಜ್ಯದಲ್ಲಿ ಪ್ರವಾಹ, ಭೂಕುಸಿತ ಮತ್ತು ಸಿಡಿಲು ಬಡಿದು ೬೪ ಮಂದಿ ಪ್ರಾಣ ಕಳೆದುಕೊಂಡಂತಾಗಿದೆ.
ಅಹಮದಾಬಾದ್, ರಾಜ್ ಕೋಟ್ನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮುಂದಿನ 4೮ ಗಂಟೆಯಲ್ಲಿ ಭಾರಿ ಮಳೆಯಾಗಲಿದೆ. ಮಳೆ ಹೆಚ್ಚಾಗಿದ್ದರಿಂದ ನದಿ ತೊರೆಗಳು ಉಕ್ಕಿ ಹರಿಯುತ್ತಿರುವುದರಿಂದ ರಾಜ್ಕೋಟ್ನಲ್ಲಿರುವ ಎರಡು ಅಣೆಕಟ್ಟುಗಳ ಗೇಟುಗಳನ್ನು ತೆರೆಯಲಾಗಿದೆ. ಹೀಗಾಗಿ ನಗರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಪ್ರವಾಹ ಪೀಡಿತ ಸ್ಥಳಗಳಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ.
ಇದನ್ನು ಓದಿ| Rain fury: ಮಹಾಮಳೆಗೆ ತತ್ತರಿಸಿದ ಅಹಮದಾಬಾದ್: ಒಂದೇ ದಿನ 115 ಮಿ.ಮೀ ಮಳೆ, 5 ವರ್ಷದಲ್ಲೇ ಇದು ದಾಖಲೆ
ಕೇವಲ ಗುಜರಾತ್ ಮಾತ್ರವಲ್ಲದೆ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದಲ್ಲೂ ವರುಣಾರ್ಭಟ ಜೋರಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನರು ಮನೆಗಳಿಂದ ಹೊರಗೆ ಬರಲಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನು ಓದಿ| Rain News | ರಾಜ್ಯದ ಹಲವೆಡೆ ಮುಂದುವರಿದ ಮಳೆ: ಶಾಲಾ ಕಟ್ಟಡ ಕುಸಿತ, ಆಕಳು-ಕರುಗಳ ಸಾವು