ಗಾಂಧಿನಗರ: ಶುಕ್ರವಾರ ದಿಲ್ಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರ ಮೇಲ್ಛಾವಣಿ ಕಾರುಗಳ ಮೇಲೆ ಕುಸಿದು ಬಿದ್ದು ಓರ್ವ ಮೃತಪಟ್ಟ ಘಟನೆ ಹಸಿಯಾಗಿರುವಾಗಲೇ ಗುಜರಾತ್‌ನಲ್ಲಿಯೂ ಇಂತಹದ್ದೇ ಘಟನೆ ನಡೆದಿದೆ. ಶನಿವಾರ ಸುರಿದ ಭಾರೀ ಮಳೆ (Heavy Rain)ಗೆ ರಾಜ್‌ಕೋಟ್ ವಿಮಾನ ನಿಲ್ದಾಣ (Rajkot Airport)ದ ಪ್ರಯಾಣಿಕರ ಪಿಕಪ್ ಮತ್ತು ಡ್ರಾಪ್ ಪ್ರದೇಶದ ಛಾವಣಿ ಕುಸಿದಿದೆ (Canopy Collapses). ಮೂಲಗಳ ಪ್ರಕಾರ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಏತನ್ಮಧ್ಯೆ ನೈಋತ್ಯ ಮಾನ್ಸೂನ್ ರಾಜ್ಯಕ್ಕೆ ಮತ್ತಷ್ಟು ಪ್ರವೇಶಿಸುತ್ತಿದ್ದಂತೆ ಗುಜರಾತ್‌ನಲ್ಲಿ ಭಾರಿ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF)ಯ ಏಳು ತಂಡಗಳನ್ನು ಕಚ್, ರಾಜ್‌ಕೋಟ್, ದೇವಭೂಮಿ ದ್ವಾರಕಾ, ಗಿರ್ ಸೋಮನಾಥ್, ಭಾವನಗರ, ನರ್ಮದಾ ಮತ್ತು ವಲ್ಸಾದ್ ಜಿಲ್ಲೆಗಳಲ್ಲಿ ನಿಯೋಜಿಸಲಾಗಿದೆ.
Canopy collapses at Rajkot Hirasar airport terminal amid heavy rains https://t.co/GfDf7kzEpd pic.twitter.com/oWjnAQkrYk
— DeshGujarat (@DeshGujarat) June 29, 2024
ದಿಲ್ಲಿಯಲ್ಲಿ ಏನಾಗಿತ್ತು?
ಅಧಿಕೃತ ಮೂಲಗಳ ಪ್ರಕಾರ ಶುಕ್ರವಾರ ದಿಲ್ಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಛಾವಣಿ ಶೀಟ್ ಮತ್ತು ಬೀಮ್ ಕುಸಿದು ಬಿದ್ದಿದ್ದು, ಪಾರ್ಕಿಂಗ್ ಏರಿಯಾದಲ್ಲಿದ್ದ ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿದ್ದವು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಘಟನೆ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಪ್ರತಿಕ್ರಿಯಿಸಿದ್ದು, ʼʼದಿಲ್ಲಿ ವಿಮಾನ ನಿಲ್ದಾಣದಲ್ಲಿ ನಡೆದಿರುವ ಘಟನೆ ಖುದ್ದು ಪರಿಶೀಲನೆ ನಡೆಸಲಾಗುತ್ತಿದೆ. ಗಾಯಾಳುಗಳನ್ನು ದಿಲಿ ಆಸ್ಪತ್ರೆಗೆ ದಾಖಲಿಸಲಾಗಿದೆʼʼ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಅವರು ಮೃತರ ಕುಟುಂಬಕ್ಕೆ 20 ಲಕ್ಷ ರೂ., ಸಣ್ಣಪುಟ್ಟ ಗಾಯಗೊಂಡವರಿಗೆ ತಲಾ 3 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.
ರಣಭೀಕರ ಮಳೆಗೆ ದಿಲ್ಲಿ ತತ್ತರ
ದಿಲ್ಲಿಯಲ್ಲಿಯೂ ಭಾರೀ ಮಳೆಯಾಗುತ್ತಿದೆ. ರಸ್ತೆ, ಮನೆಗಳಿಗೆ ನೀರು ನುಗ್ಗಿದ್ದು, ಜನ ಸಂಚಾರ ಅಸ್ತವ್ಯಸ್ತಗೊಂಡಿದೆ. ದಿಲ್ಲಿಯ ವಿವಿಧ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಸದ್ಯ ಭಾರೀ ಮಳೆಯ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ಆರೆಂಹ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: Delhi Rain: ಕುಸಿದು ಬಿದ್ದ ದಿಲ್ಲಿ ಏರ್‌ಪೋರ್ಟ್ ಛಾವಣಿ- ಒಬ್ಬ ಬಲಿ, 5 ಮಂದಿಗೆ ಗಂಭೀರ ಗಾಯ; ಕಾರುಗಳು ನಜ್ಜುಗುಜ್ಜು