Site icon Vistara News

Heeraben Modi | ಪಿಎಂ ನರೇಂದ್ರ ಮೋದಿ ತಾಯಿ ನಿಧನಕ್ಕೆ ರಾಹುಲ್, ಪ್ರಿಯಾಂಕಾ ಕಂಬನಿ

Heeraben Modi @ Rahul Gandhi and Priyanaka

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ (Heeraben Modi) ಅವರ ನಿಧನದ ಸುದ್ದಿ ತಿಳಿದು ಬಹಳ ದುಃಖವಾಯಿತು. ಈ ಕಠಿಣ ಪರಿಸ್ಥಿತಿಯಲ್ಲಿ ಮೋದಿ ಹಾಗೂ ಅವರ ಕುಟುಂಬದವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ ಮತ್ತು ಪ್ರೀತಿ ಕಳುಹಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿ, ಸಂತಾಪ ವ್ಯಕ್ತಪಡಿಸಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಮೋದಿ ಅವರ ತಾಯಿ ಹೀರಾಬೆನ್ ಅವರನ್ನು ಅಹಮದಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವಯೋಸಹಜ ಆರೋಗ್ಯ ತೊಂದರೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ಬೆಳಗ್ಗೆ ನಿಧನರಾದರು.

ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೂ ಟ್ವೀಟ್ ಮಾಡಿ, ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ನಿಧನ ಸುದ್ದಿ ಕೇಳಿ ದುಃಖವಾಯಿತು. ಅವರಿಗೆ ಸದ್ಗತಿ ಸಿಗಲಿ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ಪ್ರಿಯಾಂಕಾ ಅವರು ಟ್ವೀಟ್ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಹೀರಾಬೆನ್ ಅವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಇದನ್ನೂ ಓದಿ | Heeraben Modi | ಗಾಂಧಿ ನಗರದಲ್ಲಿ ನಡೆದ ಹೀರಾಬೆನ್‌ ಮೋದಿ ಅಂತ್ಯಕ್ರಿಯೆ

Exit mobile version