ನವ ದೆಹಲಿ: ಶಾನ್ ದಾರ್ ಶತಾಬ್ದಿ ಕಾ ಈಶ್ವರ್ ಚರಣೋ ಮೇ ವಿರಾಮ್.. ತಾಯಿಯಲ್ಲಿ ಯಾವಾಗಲೂ ತ್ರಿಮೂರ್ತಿಗಳನ್ನು ನಾನು ಕಂಡಿದ್ದೇನೆ. ಅವರ ಬದುಕು ತಪೋ ಸದೃಶ, ನಿಸ್ವಾರ್ಥ ಕರ್ಮಯೋಗಿಯ ಬಾಳ್ವೆ. ಮೌಲ್ಯಗಳಿಗೆ ಬದ್ಧವಾಗಿದ್ದ ತುಂಬು ಜೀವನ..ಅವರಿಗೆ 100 ವರ್ಷ ಪೂರ್ಣವಾದಾಗ ಆಶೀರ್ವಾದ ಪಡೆಯಲು ಭೇಟಿ ನೀಡಿದ್ದೆ. ಆಗ ಅವರು ನೀಡಿದ ಹಿತ ವಚನ ನೆನಪಾಗುತ್ತಿದೆ. ಯಾವಾಗಲೂ ಬುದ್ಧಿವಂತಿಕೆಯಿಂದ ಕೆಲಸಗಳನ್ನು ಮಾಡಿ, ಪರಿಶುದ್ಧತೆಯಿಂದ ಬದುಕಿರಿ ಎಂದು (Heeraben Modi) ಹೇಳಿದ್ದರು.
-ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಟ್ವೀಟ್ಗಳಲ್ಲಿ ತಮ್ಮ ನೆಚ್ಚಿನ ತಾಯಿ ಹೀರಾಬೆನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.