Henna Jihad: ಹಿಂದೂ ಮಹಿಳೆಯರಿಗೆ ಮುಸ್ಲಿಮರು ಮೆಹಂದಿ ಹಚ್ಚಿದರೆ ಹುಷಾರ್‌! ಭುಗಿಲೆದ್ದ ಹೆನ್ನಾ ಜಿಹಾದ್‌ ವಿವಾದ - Vistara News

ದೇಶ

Henna Jihad: ಹಿಂದೂ ಮಹಿಳೆಯರಿಗೆ ಮುಸ್ಲಿಮರು ಮೆಹಂದಿ ಹಚ್ಚಿದರೆ ಹುಷಾರ್‌! ಭುಗಿಲೆದ್ದ ಹೆನ್ನಾ ಜಿಹಾದ್‌ ವಿವಾದ

Henna Jihad: ಕ್ರಾಂತಿ ಸೇನಾ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಪೂನಂ ಚೌಧರಿ ಮಾತನಾಡಿ, ಹರಿಯಲಿ ತೀಜ್ ಹಿಂದೂಗಳಿಗೆ ಮಹತ್ವದ ಹಬ್ಬವಾಗಿದೆ. ಈ ಸಂದರ್ಭದಲ್ಲಿ ಯಾವುದೇ ಹಿಂದೂ ಮಹಿಳೆ ಮುಸ್ಲಿಂ ಯುವಕರಿಂದ ಮೆಹಂದಿ ಹಚ್ಚಿಸಿಕೊಳ್ಳಬಾರದು. ಇದು ಅವರ ಹಬ್ಬಕ್ಕೆ ಅಗೌರವ ಎಂದು ಪರಿಗಣಿಸಲಾಗಿದೆ.

VISTARANEWS.COM


on

Henna Jihad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಲವ್‌ ಜಿಹಾದ್‌(Love Jihad), ಭೂಮಿ ಜಿಹಾದ್‌ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ಇದೀಗ ಹೆನ್ನಾ ಜಿಹಾದ್‌(Henna Jihad) ವಿಚಾರ ಭಾರೀ ಸದ್ದು ಮಾಡುತ್ತಿದೆ. ಮುಜಾಫರ್‌ನಗರದಲ್ಲಿ ಹರಿಯಲಿ ತೀಜ್ ಹಬ್ಬದ ಸಂದರ್ಭದಲ್ಲಿ ಮೆಹಂದಿ ಹಚ್ಚುವ ಕುರಿತು ಹೊಸ ವಿವಾದ ಹುಟ್ಟಿಕೊಂಡಿದೆ. ಈ ಹಬ್ಬದ ಸಂದರ್ಭದಲ್ಲಿ ಯಾವುದೇ ಮುಸ್ಲಿಂ ಯುವಕರು ಹಿಂದೂ ಮಹಿಳೆಯರಿಗೆ ಮೆಹಂದಿ ಹಚ್ಚುವುದು ಕಂಡುಬಂದರೆ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕ್ರಾಂತಿ ಸೇನೆಯ ಮಹಿಳಾ ಮೋರ್ಚಾ ಘೋಷಿಸಿದೆ.

ಕ್ರಾಂತಿ ಸೇನಾ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಪೂನಂ ಚೌಧರಿ ಮಾತನಾಡಿ, ಹರಿಯಲಿ ತೀಜ್ ಹಿಂದೂಗಳಿಗೆ ಮಹತ್ವದ ಹಬ್ಬವಾಗಿದೆ. ಈ ಸಂದರ್ಭದಲ್ಲಿ ಯಾವುದೇ ಹಿಂದೂ ಮಹಿಳೆ ಮುಸ್ಲಿಂ ಯುವಕರಿಂದ ಮೆಹಂದಿ ಹಚ್ಚಿಸಿಕೊಳ್ಳಬಾರದು. ಇದು ಅವರ ಹಬ್ಬಕ್ಕೆ ಅಗೌರವ ಎಂದು ಪರಿಗಣಿಸಲಾಗಿದೆ. ಈ ಹಬ್ಬದ ಸಂದರ್ಭದಲ್ಲಿ ಯಾವುದೇ ಮುಸ್ಲಿಂ ಯುವಕರು ಹಿಂದೂ ಮಹಿಳೆಯರಿಗೆ ಮೆಹಂದಿ ಹಚ್ಚುವುದು ಕಂಡುಬಂದರೆ ಕ್ರಾಂತಿ ಸೇನೆಯು ತಮ್ಮ ಕೈಗೆತ್ತಿಕೊಳ್ಳುತ್ತದೆ ಎಂದು ಪೂನಂ ಚೌಧರಿ ಎಚ್ಚರಿಸಿದ್ದಾರೆ.

ಕ್ರಾಂತಿ ಸೇನಾ ವಾಡಿಕೆಯಂತೆ ಇಂತಹ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತದೆ ಮತ್ತು ಯಾವುದೇ ಮುಸ್ಲಿಂ ಯುವಕರು ಹಿಂದೂ ಮಹಿಳೆಯರಿಗೆ ಮೆಹಂದಿ ಹಚ್ಚುವುದು ಕಂಡುಬಂದರೆ ಕ್ರಮ ತೆಗೆದುಕೊಳ್ಳುತ್ತದೆ, ಏಕೆಂದರೆ ಅದು ಅವರ ಧರ್ಮಕ್ಕೆ ಅವಮಾನ ಎಂದು ಅವರು ನಂಬುತ್ತಾರೆ. ಕನ್ವರ್ ಯಾತ್ರೆಯ ಸಂದರ್ಭದಲ್ಲಿ ಅಂಗಡಿಗಳ ಲೇಬಲ್‌ಗೆ ಸಂಬಂಧಿಸಿದಂತೆ ಮುಜಫರ್‌ನಗರದಲ್ಲಿ ಈ ಹಿಂದೆ ವಿವಾದ ಉಂಟಾಗಿತ್ತು. ಇದೀಗ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಮೆಹಂದಿ ಹಚ್ಚುವ ವಿಚಾರ ಬಹಳ ಸದ್ದು ಮಾಡುತ್ತಿದೆ.

ಏನಿದು ಹರಿಯಲಿ ತೀಜ್ ಹಬ್ಬ?

ಹರಿಯಲಿ ತೀಜ್ ಉತ್ತರ ಭಾರತದ ರಾಜ್ಯಗಳಲ್ಲಿ ಜನಪ್ರಿಯವಾಗಿರುವ ಪ್ರಮುಖ ಹಬ್ಬವಾಗಿದೆ. ಇದನ್ನು ಶ್ರಾವಣ ಮಾಸದ ಶುಕ್ಲ ಪಕ್ಷ ತೃತೀಯದಂದು ಆಚರಿಸಲಾಗುತ್ತದೆ. ಈ ಸಮಯದಲ್ಲಿ, ವಿವಾಹಿತ ಮಹಿಳೆಯರು ತಮ್ಮ ಗಂಡನ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಈ ಉಪವಾಸವನ್ನು ಆಚರಿಸುತ್ತಾರೆ. ಹಿಂದೂ ಧರ್ಮದಲ್ಲಿ, ಶ್ರಾವಣ ಮಾಸದಲ್ಲಿ ಬೀಳುವ ತೀಜ್ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ತೀಜ್ ಹಬ್ಬವನ್ನು ಪಾರ್ವತಿ ದೇವಿಗೆ ಸಮರ್ಪಿಸಲಾಗಿದೆ.

ಈ ಮಂಗಳಕರ ಹಬ್ಬದಂದು, ಪಾರ್ವತಿ ದೇವಿಗೆ ಪೂಜೆ, ಉಪವಾಸ ಇತ್ಯಾದಿಗಳನ್ನು ಮಾಡುವ ವಿಧಿ ಇದೆ ಮತ್ತು ಜನರು ಈ ದಿನ ಹಲವಾರು ಮೇಕಪ್ ವಸ್ತುಗಳನ್ನು ದಾನ ಮಾಡುತ್ತಾರೆ. ಈ ಉಪವಾಸದ ಸಮಯದಲ್ಲಿ, ವಿವಾಹಿತ ಮಹಿಳೆಯರು ಹಸಿರು ಬಟ್ಟೆಗಳನ್ನು ಧರಿಸುತ್ತಾರೆ ಮತ್ತು ಮೆಹೆಂದಿಯನ್ನು ಹಚ್ಚುತ್ತಾರೆ. ಪಂಚಾಂಗದ ಪ್ರಕಾರ, ಹರಿಯಲಿ ತೀಜ್ ಹಬ್ಬವನ್ನು ಪ್ರತಿ ವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿಯಂದು ಆಚರಿಸಲಾಗುತ್ತದೆ. 2024 ರಲ್ಲಿ, ಹರಿಯಲಿ ತೀಜ್ ಹಬ್ಬವನ್ನು ಆಗಸ್ಟ್ 7 ರಂದು ಬುಧವಾರ ಆಚರಿಸಲಾಗುತ್ತದೆ.

ಕೆಲವು ದಿನಗಳ ಹಿಂದೆ ಲವ್‌ ಜಿಹಾದ್‌ ವಿರುದ್ಧ ಕ್ರಮ ತೆಗೆದುಕೊಳ್ಳುವ ದಿಸೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. ಲವ್‌ ಜಿಹಾದ್‌ನಲ್ಲಿ ತೊಡಗುವವರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸುವ ಉತ್ತರ ಪ್ರದೇಶ ಕಾನೂನು ಬಾಹಿರ ಧಾರ್ಮಿಕ ಮತಾಂತರ (ತಿದ್ದುಪಡಿ) ವಿಧೇಯಕಕ್ಕೆ ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ರಾಜ್ಯಪಾಲರ ಅಂಕಿತ ಸಿಕ್ಕರೆ ವಿಧೇಯಕವು ಕಾಯ್ದೆಯಾಗಿ ಜಾರಿಗೆ ಬರಲಿದೆ. ಕಾಯ್ದೆ ಜಾರಿಯಾದರೆ, ಲವ್‌ ಜಿಹಾದ್‌ನಲ್ಲಿ ತೊಡಗಿಸಿಕೊಂಡವರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ:Love Jihad: ಲವ್‌ ಜಿಹಾದ್‌ ವಿರುದ್ಧ ಯೋಗಿ ದಿಟ್ಟ ಕ್ರಮ; ಇನ್ನು ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಗ್ಯಾರಂಟಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Parliament Session: ವಿನೇಶ್‌ ಫೋಗಟ್‌ ಅನರ್ಹತೆಯ ವಿಚಾರ ಚರ್ಚೆಗೆ ಆಗ್ರಹಿಸಿ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ, ಸಭಾತ್ಯಾಗ

Parliament Session: ಕುಸ್ತಿಪಟು ವಿನೇಶ್‌ ಫೋಗಟ್‌ ಅವರ ಅನರ್ಹತೆ ವಿವಾರವನ್ನು ಚರ್ಚಿಸಬೇಕು ಎಂದು ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರು ಗದ್ದಲ ಎಬ್ಬಿಸಿದ್ದಾರೆ. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಇದಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಬಳಿಕ ಸಭಾತ್ಯಾಗ ಮಾಡಿದ್ದಾರೆ. ʼʼವಿನೇಶ್ ಫೋಗಟ್ ಅವರ ಅನರ್ಹತೆಯಿಂದ ಇಡೀ ದೇಶಕ್ಕೆ ನೋವಾಗಿದೆ. ಆದರೆ ಪ್ರತಿಪಕ್ಷಗಳ ನಾಯಕರು ತಮಗೆ ಮಾತ್ರ ನೋವಾಗಿದೆ ಎನ್ನುವಂತೆ ವರ್ತಿಸುತ್ತಿದ್ದಾರೆ. ಆದರೆ ಈ ವಿಚಾರವನ್ನು ರಾಜಕೀಯಗೊಳಿಸುವುದು ಫೋಗಟ್ ಅವರಿಗೆ ಮಾಡಿದ ದೊಡ್ಡ ಅಗೌರವ” ಎಂದು ಜಗದೀಪ್ ಧನ್ಕರ್ ಹೇಳಿದ್ದಾರೆ.

VISTARANEWS.COM


on

Parliament Session
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics) ವಿನೇಶ್‌ ಫೋಗಟ್‌ (Vinesh Phogat) ಅವರಿಗೆ ಮಾತ್ರವಲ್ಲ ಇಡೀ ಭಾರತೀಯರಿಗೆ ಆಘಾತವಾಗಿದೆ. ಕುಸ್ತಿಯಲ್ಲಿ ಫೈನಲ್‌ ತಲುಪಿ ಇತಿಹಾಸ ಸೃಷ್ಟಿಸಿದ್ದ ಅವರು ಇನ್ನೇನು ಚಿನ್ನದ ಪದಕಕ್ಕಾಗಿ ಕಾದಾಡಬೇಕು ಎನ್ನುವರಷ್ಟರಲ್ಲಿಯೇ ದೇಹದ ತೂಕ 100 ಗ್ರಾಂ ಹೆಚ್ಚಾದ ಹಿನ್ನೆಲೆಯಲ್ಲಿ ಅನರ್ಹಗೊಂಡಿರುವುದು ಕೋಟ್ಯಂತರ ಭಾರತೀಯರ ಕನಸನ್ನು ನುಚ್ಚು ನೂರಾಗಿಸಿದೆ. ಈ ವಿಚಾರ ಸಂಸತ್ತಿನ ಅಧಿವೇಶನದಲ್ಲಿಯೂ ಪ್ರತಿಧ್ವನಿಸಿದೆ. ವಿನೇಶ್‌ ಫೋಗಟ್‌ ಅವರ ಅನರ್ಹತೆಯ ವಿಚಾರ ಚರ್ಚಿಸಲು ಅವಕಾಶ ನೀಡಲಿಲ್ಲ ಎನ್ನುವ ಕಾರಣಕ್ಕೆ ಪ್ರತಿಪಕ್ಷಗಳ ಇಂಡಿ ಒಕ್ಕೂಟದ ಸದಸ್ಯರು ರಾಜ್ಯಸಭೆಯಿಂದ ಹೊರ ನಡೆದರು (Parliament Session).

ಪಟ್ಟಿ ಮಾಡಲಾದ ದಾಖಲೆಗಳನ್ನು ಸದನದಲ್ಲಿ ಮಂಡಿಸಿದ ಕೂಡಲೇ ಪ್ರತಿಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎದ್ದು ನಿಂತು ಅನರ್ಹತೆಯ ವಿಷಯವನ್ನು ಪ್ರಸ್ತಾವಿಸಿದರು. ಇದರ ಹಿಂದೆ ಯಾರು ಇದ್ದಾರೆ ಎಂದು ಪ್ರಶ್ನಿಸಿದರು. ಆದರೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರು ಖರ್ಗೆ ಅವರಿಗೆ ಈ ವಿಷಯ ಎತ್ತಲು ಅವಕಾಶ ನೀಡಲಿಲ್ಲ. ಬಳಿಕ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯಾನ್ ಕೂಡ ಪ್ರಶ್ನೆಗಳನ್ನು ಕೇಳಲು ಮುಂದಾದರು. ಅವರಿಗೂ ಅವಕಾಶ ದೊರೆಯಲಿಲ್ಲ. ಇದಕ್ಕೆ ಡೆರೆಕ್ ಒ’ಬ್ರಿಯಾನ್ ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಗದೀಪ್ ಧನ್ಕರ್ ಅವರು, “ನೀವು ಸಭಾಧ್ಯಕ್ಷರ ಮೇಲೆ ಕೂಗುತ್ತಿದ್ದೀರಿ. ನಿಮ್ಮ ಈ ನಡವಳಿಕೆ ಸರಿಯಲ್ಲ. ನಿಮ್ಮ ಕ್ರಮವನ್ನು ನಾನು ಖಂಡಿಸುತ್ತೇನೆ. ಈ ವರ್ತನೆ ಪುನರಾವರ್ತಿಸಿದರೆ ಮುಂದಿನ ಬಾರಿ ಸದನದಿಂದ ಹೊರಗೆ ಕಳುಹಿಸಬೇಕಾಗುತ್ತದೆʼʼ ಎಂದು ಎಚ್ಚರಿಕೆ ನೀಡಿದರು. ಇದರಿಂದ ಸದನದಲ್ಲಿ ಕೋಲಾಹಲ ಮೂಡಿ ಪ್ರತಿಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು.

ʼʼವಿನೇಶ್ ಫೋಗಟ್ ಅವರ ಅನರ್ಹತೆಯಿಂದ ಇಡೀ ದೇಶಕ್ಕೆ ನೋವಾಗಿದೆ. ಆದರೆ ಪ್ರತಿಪಕ್ಷಗಳ ನಾಯಕರು ತಮಗೆ ಮಾತ್ರ ನೋವಾಗಿದೆ ಎನ್ನುವಂತೆ ವರ್ತಿಸುತ್ತಿದ್ದಾರೆ. ಆದರೆ ಈ ವಿಚಾರವನ್ನು ರಾಜಕೀಯಗೊಳಿಸುವುದು ಫೋಗಟ್ ಅವರಿಗೆ ಮಾಡಿದ ದೊಡ್ಡ ಅಗೌರವ” ಎಂದು ಜಗದೀಪ್ ಧನ್ಕರ್ ಹೇಳಿದರು. “ಹರಿಯಾಣ ಸರ್ಕಾರವು ತಕ್ಷಣವೇ ಫೋಗಟ್ ಅವರಿಗೆ ಎಲ್ಲ ರೀತಿಯ ಆರ್ಥಿಕ ಸಹಾಯ ನೀಡುವುದಾಗಿ ಘೋಷಿಸಿದ್ದು ಉತ್ತಮ ಕಾರ್ಯʼʼ ಎಂದು ಅವರು ಮೆಚ್ಚುಗೆ ಸೂಚಿಸಿದರು.

ಪ್ರತಿಪಕ್ಷಗಳು ಹೇಳಿದ್ದೇನು?

“ವಿನೇಶ್ ಫೋಗಟ್ ಅವರ ಅನರ್ಹತೆಯ ಬಗ್ಗೆ ಚರ್ಚೆ ನಡೆಸಲು ನಾವು ಸಮಯ ಕೇಳಿದ್ದೆವು. ಆದರೆ ಸರ್ಕಾರ ಸಿದ್ಧವಾಗಿಲ್ಲ” ಎಂದು ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ಸಂಸತ್ತಿನ ಹೊರಗೆ ಸುದ್ದಿಗಾರರಿಗೆ ತಿಳಿಸಿದರು. ಜತೆಗೆ ಅವರು ಇಂದು ಕುಸ್ತಿಯಿಂದ ನಿವೃತ್ತಿ ಘೋಷಿಸಿದ ಫೋಗಟ್ ಭರವಸೆಯನ್ನು ಕಳೆದುಕೊಳ್ಳಬಾರದು ಎಂದರು. ಇಡೀ ದೇಶವು ಫೋಗಟ್ ಅವರನ್ನು ಬೆಂಬಲಿಸುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Parliament Session: ಇಂದು ವಕ್ಫ್ ಮಸೂದೆ ಮಂಡನೆ: ಸಂಸತ್ತಿನಲ್ಲಿ ಕೋಲಾಹಲ ಸಾಧ್ಯತೆ; ಅಧಿವೇಶನವನ್ನು Live ಆಗಿ ನೋಡಿ

ವಿನೇಶ್​ಗೆ 1.5 ಕೋಟಿ ರೂ. ಘೋಷಣೆ

ವಿನೇಶ್‌ ಫೋಗಟ್‌ ಅವರಿಗೆ ಹರಿಯಾಣ ಸರ್ಕಾರ ವಿಶೇಷ ಗೌರವ ಸೂಚಿಸಲು ನಿರ್ಧರಿಸಿದೆ. ಅವರ ಸಾಧನೆಯನ್ನು ಪರಿಗಣಿಸಿ 1.5 ಕೋಟಿ ರೂ. ನಗುದು ಬಹುಮಾನ ನೀಡುವುದಾಗಿ ಮುಖ್ಯಮಂತ್ರಿ ನಯಾಬ್‌ ಸಿಂಗ್‌ ಸೈನಿ ಘೋಷಿಸಿದ್ದಾರೆ.

Continue Reading

ದೇಶ

Buddhadeb Bhattacharjee: ಸರಳತೆಯಿಂದಲೇ ರಾಜಕಾರಣಿಗಳಿಗೆ ಮಾದರಿಯಾಗಿದ್ದ ಬುದ್ಧದೇವ್ ಭಟ್ಟಾಚಾರ್ಯ

Buddhadeb Bhattacharjee: ಎಡಪಂಥೀಯ ನಾಯಕ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಕೋಲ್ಕತ್ತಾದ ಸ್ವಗೃಹದಲ್ಲಿ ಗುರುವಾರ ನಿಧನರಾದರು. ತಮ್ಮ ಸರಳ ಜೀವನ ಶೈಲಿಯಿಂದಲೇ ರಾಜಕಾರಣಿಗಳಿಗೆ ಮಾದರಿಯಾಗಿದ್ದ ಅವರ ಪರಿಚಯ ಇಲ್ಲಿದೆ.

VISTARANEWS.COM


on

Buddhadeb Bhattacharjee
Koo

ಕೋಲ್ಕತ್ತಾ: ಎಡಪಂಥೀಯ ನಾಯಕ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ (Buddhadeb Bhattacharjee) ಇಂದು (ಆಗಸ್ಟ್‌ 8) ಬೆಳಿಗ್ಗೆ ತಮ್ಮ 80ನೇ ವಯಸ್ಸಿನಲ್ಲಿ ಕೋಲ್ಕತ್ತಾದ ಸ್ವಗೃಹದಲ್ಲಿ ನಿಧನರಾದರು. ಭಾರತೀಯ ರಾಜಕೀಯದಲ್ಲಿ ಪ್ರಮುಖ ನಾಯಕರಾಗಿದ್ದ ಅವರು, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದಿ) (Communist Party of India (Marxist)ದ ಪೊಲಿಟ್ ಬ್ಯೂರೋದ ಸದಸ್ಯರಾಗಿಯೂ ಗುರುತಿಸಿಕೊಂಡಿದ್ದರು. 2000ರಿಂದ 2011ರವರೆಗೆ ಅಂದರೆ 11 ವರ್ಷಗಳ ದೀರ್ಘ ಕಾಲ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದರು.

1944ರ ಮಾರ್ಚ್ 1ರಂದು ಬುದ್ಧದೇವ್ ಭಟ್ಟಾಚಾರ್ಯ ಅವರು ಉತ್ತರ ಕೋಲ್ಕತ್ತಾದಲ್ಲಿ ಜನಿಸಿದರು. ಪಶ್ಚಿಮ ಬಂಗಾಳದ ಶೈಲೇಂದ್ರ ಸರ್ಕಾರ್ ವಿದ್ಯಾಲಯದಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿ ಪ್ರೆಸಿಡೆನ್ಸಿಯಿಂದ ಬಂಗಾಳಿಯಲ್ಲಿ ಬಿಎ ಆನರ್ಸ್ ಪಡೆದರು. ಅವರಲ್ಲಿನ ಕ್ರಾಂತಿಕಾರಿ ಚಿಂತನೆಯು 1966ರಲ್ಲಿ ಸಿಪಿಎಂಗೆ ಸೇರುವಂತೆ ಮಾಡಿತು. ಅಲ್ಲಿಂದ ಬಳಿಕ ಅವರು ಪ್ರಬಲ ಎಡ ಪಂಥೀಯ ನಾಯಕರಾಗಿ ಬೆಳೆದರು.

ರಾಜಕೀಯ ಹಾದಿ

22ನೇ ವಯಸ್ಸಿನಲ್ಲಿ ಸಕ್ರಿಯ ರಾಜಕೀಯಕ್ಕೆ ಧುಮಿಕಿದ ಬುದ್ಧದೇವ್ ಭಟ್ಟಾಚಾರ್ಯ ಅವರು 1977ರಲ್ಲಿ ಜ್ಯೋತಿ ಬಸು ಅವರ ನಾಯಕತ್ವದಲ್ಲಿ ಸಿಪಿಎಂ ಅಧಿಕಾರಕ್ಕೆ ಬಂದಾಗ ಉತ್ತರ ಕೋಲ್ಕತ್ತಾದ ಕಾಸಿಪೋರ್‌ನಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 1982ರಲ್ಲಿ ಮತ್ತೆ ಸ್ಪರ್ಧಿಸಿದ್ದ ಅವರು ಕಾಂಗ್ರೆಸ್‌ನ ಪ್ರಫುಲ್ಲ ಕಾಂತಿ ಘೋಷ್ ವಿರುದ್ಧ ಸೋತರೂ 1987ರಲ್ಲಿ ಜಾದವ್‌ಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸಿದರು.

ಮುಖ್ಯಮಂತ್ರಿಯಾಗಿ…

ಬುದ್ಧದೇವ್ ಭಟ್ಟಾಚಾರ್ಯ ಅವರು 1987 ಮತ್ತು 1996ರ ನಡುವೆ ಮಾಹಿತಿ ಮತ್ತು ಸಂಸ್ಕೃತಿ ಸಚಿವರಾದರು. 1996ರಿಂದ 1999ರವರೆಗೆ ಗೃಹ ವ್ಯವಹಾರಗಳ ಸಚಿವರಾಗಿ ಗಮನ ಸೆಳೆದರು. ಆರೋಗ್ಯ ಕಾರಣಗಳಿಂದಾಗಿ 2000ರ ನವೆಂಬರ್ 6ರಂದು ಜ್ಯೋತಿಬಸು ಮುಖ್ಯಮಂತ್ರಿ ಪಟ್ಟದಿಂದ ಕೆಳಗೆ ಕೆಳಗೆ ಇಳಿದ ನಂತರ ಬುದ್ಧದೇವ್ ಭಟ್ಟಾಚಾರ್ಯ ಅಧಿಕಾರ ವಹಿಸಿಕೊಂಡರು. ಪಶ್ಚಿಮ ಬಂಗಾಳದಲ್ಲಿ ಎಡಪಕ್ಷದ 34 ವರ್ಷಗಳ ಆಡಳಿತದಲ್ಲಿ ಭಟ್ಟಾಚಾರ್ಯ ಅವರು ಅಧಿಕಾರದಲ್ಲಿದ್ದ ಎರಡನೇ ಮತ್ತು ಕೊನೆಯ ಸಿಪಿಎಂ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ.

ಸವಾಲುಗಳು

ಮುಖ್ಯಮಂತ್ರಿ ಪಟ್ಟಕ್ಕೇರಿದ ಭಟ್ಟಾಚಾರ್ಯ ಅವರ ಹಾದಿ ಸವಾಲುಗಳಿಂದ ಕೂಡಿತ್ತು. ಮುಖ್ಯಮಂತ್ರಿಯಾಗಿದ್ದ ಮೊದಲ ಅಧಿಕಾರಾವಧಿಯಲ್ಲಿ ಅವರು ಪಶ್ಚಿಮ ಬಂಗಾಳದಾದ್ಯಂತ ಕೈಗಾರಿಕಾ ಬೆಳವಣಿಗೆ ಮತ್ತು ಐಟಿ ಸೇವೆಗಳನ್ನು ಉತ್ತೇಜಿಸುವ ಹಲವು ಕ್ರಮಗಳನ್ನು ಪರಿಚಯಿಸಿದರು. ಅವರ ನಾಯಕತ್ವದಲ್ಲಿ ಪಶ್ಚಿಮ ಬಂಗಾಳದ ಐಟಿ ಉದ್ಯಮವು 2001 ಮತ್ತು 2005ರ ನಡುವೆ ಶೇ. 70ರಷ್ಟು ಬೆಳೆವಣಿಕೆ ಕಂಡಿದೆ ಎಂದು ಅಂದು ವಿಪ್ರೋ ಅಧ್ಯಕ್ಷ ಅಜೀಂ ಪ್ರೇಮ್‌ಜಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅಲ್ಲದೆ ಭಾರತದ ಅತ್ಯುತ್ತಮ ಮುಖ್ಯಮಂತ್ರಿ ಎಂದು ಶ್ಲಾಘಿಸಿದ್ದರು.

ಆದಾಗ್ಯೂ ಭಟ್ಟಾಚಾರ್ಯ ಅವರು ತಮ್ಮ ಎರಡನೇ ಅವಧಿಯಲ್ಲಿ ಹಲವು ಸವಾಲುಗಳನ್ನು ಎದುರಿಸಬೇಕಾಯಿತು. ಕೈಗಾರಿಕೀಕರಣಕ್ಕೆ ನೀಡಿದ ಒತ್ತು ಒತ್ತಡವನ್ನು ತಂದೊಡ್ಡಿತು. ನಂದಿಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಸಾಯನಿಕ ಕೇಂದ್ರದ ವಿರುದ್ಧ 2007ರಲ್ಲಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದರು. 2007ರ ಮಾರ್ಚ್ 14ರಂದು ಪೊಲೀಸ್ ಗುಂಡಿನ ದಾಳಿಯಲ್ಲಿ 14 ಮಂದಿ ಪ್ರತಿಭಟನಾಕಾರರು ಮೃತಪಟ್ಟಾಗ ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಂಡಿತು.

ಬಳಿಕ ಭೂಸ್ವಾಧೀನ ಸಮಸ್ಯೆಗಳಿಂದಾಗಿ ಸಿಂಗೂರಿನಲ್ಲಿ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ನ್ಯಾನೋ ಕಾರು ಯೋಜನೆ ವಿಫಲವಾಯಿತು. ಈ ಎಲ್ಲ ಘಟನೆಗಳು ಪಶ್ಚಿಮ ಬಂಗಾಳದಲ್ಲಿ ಸಿಪಿಎಂ ಪ್ರಾಬಲ್ಯದ ಕುಸಿತಕ್ಕೆ ಕಾರಣವಾದವು. 2011ರ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ 184 ಸ್ಥಾನಗಳನ್ನು ಗಳಿಸಿ ಅಧಿಕಾರಕ್ಕೆ ಬಂದರೆ, ಸಿಪಿಎಂನ ಕೇವಲ 40 ಸ್ಥಾನಗಳಿಗೆ ಸೀಮಿತವಾಯಿತು. ಅಲ್ಲಿಂದ ಬಳಿಕ ಪಶ್ಚಿಮ ಬಂಗಾಳದಲ್ಲಿ ಎಡಪಕ್ಷದ ಜನಪ್ರಿಯತೆ ಪಾತಾಳಕ್ಕೆ ಇಳಿಯಲಾರಂಭಿಸಿತು.

ಸರಳ ಜೀವನ

ಈ ಸವಾಲುಗಳ ಹೊರತಾಗಿಯೂ ಅವರು ಅಭಿವೃದ್ಧಿ ಮತ್ತು ಸುಧಾರಣೆಯ ಪ್ರಯತ್ನಗಳ ಮೂಲಕ ಪಶ್ಚಿಮ ಬಂಗಾಳದ ಇತಿಹಾಸದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದಾರೆ. ಅವರ ಸರಳ ಜೀವನ ಶೈಲಿ ಇತರ ರಾಜಕಾರಣಿಗಳಿಗೆ ಮಾದರಿ ಎಂದೇ ಹೇಳಲಾಗುತ್ತಿದೆ. 2011ರಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಅವರು ಸ್ವಂತ ಮನೆ ಅಥವಾ ಕಾರನ್ನು ಹೊಂದಿಲ್ಲ ಎನ್ನುವ ವಿಚಾರ ಬಹಿರಂಗಗೊಂಡಿತ್ತು. ಅವರು ತಮ್ಮ ಪತ್ನಿ ಮತ್ತು ಮಗಳೊಂದಿಗೆ ಬ್ಯಾಲಿಗಂಜ್‌ನ ಪಾಮ್ ಅವೆನ್ಯೂದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅವರ ಬ್ಯಾಂಕ್ ಖಾತೆಯಲ್ಲಿ ಇದ್ದುದು ಕೇವಲ 5,000 ರೂ.

ಇದನ್ನೂ ಓದಿ: Buddhadeb Bhattacharjee: ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ವಿಧಿವಶ

ರಾಜಕೀಯದಲ್ಲಿ ಐದು ದಶಕಗಳ ಸಕ್ರಿಯ ಪಾಲ್ಗೊಳ್ಳುವಿಕೆ ಬಳಿಕ, ಭಟ್ಟಾಚಾರ್ಯ ಅವರು 2015ರಲ್ಲಿ ಪಕ್ಷದೊಳಗಿನ ಎಲ್ಲ ಪ್ರಮುಖ ಜವಾಬ್ದಾರಿಗಳಿಂದ ಕೆಳಗಿಳಿದರು. ಕೆಲವು ತಿಂಗಳಿಂದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಪತ್ನಿ ಮೀರಾ ಭಟ್ಟಾಚಾರ್ಯ ಮತ್ತು ಪುತ್ರಿ ಸುಚೇತನಾ ಭಟ್ಟಾಚಾರ್ಯ ಅವರನ್ನು ಅಗಲಿದ್ದಾರೆ.

Continue Reading

ದೇಶ

Buddhadeb Bhattacharjee: ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ ವಿಧಿವಶ

Buddhadeb Bhattacharjee: ಬಂಗಾಳದಲ್ಲಿ ಎಡಪಕ್ಷದ 34 ವರ್ಷಗಳ ಆಡಳಿತದಲ್ಲಿ, ಭಟ್ಟಾಚಾರ್ಯ ಅವರು 2000 ರಿಂದ 2011 ರವರೆಗೆ ಸತತ 11 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಎರಡನೇ ಮತ್ತು ಕೊನೆಯ ಸಿಪಿಎಂ ಮುಖ್ಯಮಂತ್ರಿಯಾಗಿದ್ದರು. ಭಟ್ಟಾಚಾರ್ಯ ಅವರು 2011 ರ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರ TMC ಪಕ್ಷದ ವಿರುದ್ಧ ಸೋಲುಂಡಿದ್ದರು. ಆ ಮೂಲಕ ರಾಜ್ಯದಲ್ಲಿ ಎಡರಂಗದ 34 ವರ್ಷಗಳ ಆಳ್ವಿಕೆ ಕೊನೆಗೊಂಡಿತು.

VISTARANEWS.COM


on

Buddhadeb Bhattacharjee
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)(CPI-M) ನಾಯಕ ಬುದ್ಧದೇವ್ ಭಟ್ಟಾಚಾರ್ಯ(Buddhadeb Bhattacharjee) ಅವರು ಇಂದು ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದ ನಂತರ ಗುರುವಾರ ಬೆಳಿಗ್ಗೆ ತಮ್ಮ ಕೋಲ್ಕತ್ತಾದ ಮನೆಯಲ್ಲಿ ನಿಧನರಾಗಿದ್ದು, ಅವರಿಗೆ 80 ವರ್ಷ ವಯಸ್ಸಾಗಿತ್ತು.

ಬಂಗಾಳದಲ್ಲಿ ಎಡಪಕ್ಷದ 34 ವರ್ಷಗಳ ಆಡಳಿತದಲ್ಲಿ, ಭಟ್ಟಾಚಾರ್ಯ ಅವರು 2000 ರಿಂದ 2011 ರವರೆಗೆ ಸತತ 11 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಎರಡನೇ ಮತ್ತು ಕೊನೆಯ ಸಿಪಿಎಂ ಮುಖ್ಯಮಂತ್ರಿಯಾಗಿದ್ದರು. ಭಟ್ಟಾಚಾರ್ಯ ಅವರು 2011 ರ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಯವರ TMC ಪಕ್ಷದ ವಿರುದ್ಧ ಸೋಲುಂಡಿದ್ದರು. ಆ ಮೂಲಕ ರಾಜ್ಯದಲ್ಲಿ ಎಡರಂಗದ 34 ವರ್ಷಗಳ ಆಳ್ವಿಕೆ ಕೊನೆಗೊಂಡಿತು.

ಕ್ಷೀಣಿಸುತ್ತಿರುವ ಆರೋಗ್ಯದಿಂದಾಗಿ ಅವರು ರಾಜಕೀಯ ರಂಗದಿಂದ ದೂರ ಉಳಿದಿದ್ದರು. ಅವರು ಬಹಳ ಸಮಯದಿಂದಲೂ ತಮ್ಮ ಪಾಮ್‌ ಅವೆನ್ಯೂ ಅಪಾರ್ಟ್‌ಮೆಂಟ್‌ನಲ್ಲೇ ಉಳಿದಿದ್ದರು. ದೀರ್ಘಕಾಲದ ಕಾಯಿಲೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಇಂದು ಭಾರೀ ಏರುಪೇರಾಗಿತ್ತು. ಹೀಗಾಗಿ ಅವರು ಕೊನೆಯುಸಿರೆಳೆದಿದ್ದಾರೆ. ಇನ್ನು ಭಟ್ಟಾಚಾರ್ಯ ಅವರ ಸಾವಿಗೆ ಅನೇಕರು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: NEET: ಕರ್ನಾಟಕ ಬಳಿಕ ಪಶ್ಚಿಮ ಬಂಗಾಳದಲ್ಲೂ ನೀಟ್‌ ಪರೀಕ್ಷೆ ವಿರುದ್ಧ ನಿರ್ಣಯ; ಹೆಚ್ಚಾಯ್ತು ಆಕ್ರೋಶ

Continue Reading

ವಾಣಿಜ್ಯ

Repo Rate: ಗೃಹಸಾಲದ ಇಎಂಐ ಭಾರ ಇಳಿಕೆ ಇಲ್ಲ; ರೆಪೋ ದರ ಯಥಾಸ್ಥಿತಿ

Repo Rate: ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರಿಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ರಿಪೋ ದರ ಇಳಿಕೆ ಸದ್ಯಕ್ಕೆ ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿಯ ಹೆಚ್ಚಿನ ಸದಸ್ಯರ ಅಭಿಮತದ ಹಿನ್ನಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಇದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಬದಲಾವಣೆ ಆಗುವುದಿಲ್ಲ.

VISTARANEWS.COM


on

Repo Rate
Koo

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷೆಯಂತೆ ರಿಪೋ ದರ (Repo Rate) ಅಥವಾ ಬಡ್ಡಿದರವನ್ನು ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಹಣದುಬ್ಬರ ಇನ್ನೂ ಅಧಿಕ ಮಟ್ಟದಲ್ಲಿ ಇರುವುದರಿಂದ ರಿಪೋ ದರ ಇಳಿಕೆ ಸದ್ಯಕ್ಕೆ ಬೇಡ ಎಂಬುದು ಮಾನಿಟರಿ ಪಾಲಿಸಿ ಕಮಿಟಿ (Monetary Policy Committee)ಯ ಹೆಚ್ಚಿನ ಸದಸ್ಯರ ಅಭಿಮತದ ಹಿನ್ನಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಎಂಪಿಸಿ ಸಭೆಯಲ್ಲಿ ಕೈಗೊಂಡ ಈ ತೀರ್ಮಾನದ ಬಗ್ಗೆ ಇಂದು ಪತ್ರಿಕಾಗೋಷ್ಠಿಯಲ್ಲಿ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ಮಾಹಿತಿ ನೀಡಿದರು. ಇದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಬದಲಾವಣೆ ಆಗುವುದಿಲ್ಲ.

ʼʼಬಡ್ಡಿ ದರ ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ. ಎಂಪಿಸಿ ಸಭೆಯಲ್ಲಿ ಆರು ಸದಸ್ಯರಲ್ಲಿ ನಾಲ್ವರು ಬಡ್ಡಿದರ ಯಥಾಸ್ಥಿತಿ ಮುಂದುವರಿಸುವ ಇಚ್ಛೆ ವ್ಯಕ್ತಪಡಿಸಿದ್ದರಿಂದ ಈ ತೀರ್ಮಾನ ಕೈಗೊಳ್ಳಲಾಗಿದೆʼʼ ಎಂದು ಶಕ್ತಿಕಾಂತ ದಾಸ್ ತಿಳಿಸಿದರು. ಆರ್‌ಬಿಐ ಕೊನೆಯ ಬಾರಿಗೆ 2023ರ ಫೆಬ್ರವರಿಯಲ್ಲಿ ರೆಪೋ ದರವನ್ನು ಶೇ. 6.25ರಿಂದ ಶೇ. 6.50ಕ್ಕೆ ಏರಿಕೆ ಮಾಡಿತ್ತು.

ಗೃಹ ಸಾಲದ ಮೇಲೆ ಪರಿಣಾಮ ಬೀರುವುದಿಲ್ಲ

ರೆಪೋ ದರ ಯಥಾಸ್ಥಿಯಲ್ಲಿರುವುದರಿಂದ ರಿಯಲ್ ಎಸ್ಟೇಟ್ ಅಥವಾ ಗೃಹ ಸಾಲದ ಇಎಂಐಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರೆಪೋ ದರವು ಬದಲಾಗದೆ ಉಳಿದಿರುವುದರಿಂದ ಬ್ಯಾಂಕ್‌ಗಳು ಶೀಘ್ರದಲ್ಲೇ ತಮ್ಮ ಸಾಲದ ದರಗಳನ್ನು ಬದಲಾಯಿಸುವ ಸಾಧ್ಯತೆಯಿಲ್ಲ. ಅಂದರೆ ನಿಮ್ಮ ಇಎಂಐ ಸದ್ಯ ಏರಿಕೆ ಅಥವಾ ಇಳಿಕೆಯಾಗುವುದಿಲ್ಲ.

ಹಣದುಬ್ಬರ ನಿಯಂತ್ರಣದ ಗುರಿ

ಹಣದುಬ್ಬರವನ್ನು ನಿಯಂತ್ರಿಸುವುದೇ ಆರ್‌ಬಿಐಯ ಹಣಕಾಸು ನೀತಿಯ ಪ್ರಮುಖ ಗುರಿ. ಪ್ರಸ್ತುತ ಹಣದುಬ್ಬರ ದರ ಆರ್‌ಬಿಐಯ ಗುರಿಯಾದ ಶೇ. 4ಕ್ಕಿಂತ ಹೆಚ್ಚಾಗಿದೆ. ರೆಪೋ ದರವನ್ನು ಕಡಿಮೆ ಮಾಡುವುದು ಆರ್ಥಿಕತೆಯಲ್ಲಿ ಹಣದುಬ್ಬರದ ಒತ್ತಡದ ಹೆಚ್ಚಳಕ್ಕೆ ಕಾರಣವಾಗಬಹುದು. ಪ್ರಸ್ತುತ ದರವನ್ನು ಕಾಯ್ದುಕೊಳ್ಳುವುದು ಹಣದುಬ್ಬರವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ ಮತ್ತು ಸ್ವಲ್ಪ ಆರ್ಥಿಕ ಬೆಳವಣಿಗೆಗೆ ಅನುವು ಮಾಡಿಕೊಡುತ್ತದೆ ಎನ್ನುವುದು ಆರ್‌ಬಿಐಯ ಅಭಿಮತ. ʼʼರೆಪೋ ದರ ಕಡಿತವು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಬಹುದಾದರೂ ಆರ್‌ಬಿಐ ಈ ಹಂತದಲ್ಲಿ ಹಣದುಬ್ಬರವನ್ನು ನಿಯಂತ್ರಿಸಲು ಆದ್ಯತೆ ನೀಡುತ್ತಿದೆʼʼ ಎಂದು ಮೂಲಗಳು ತಿಳಿಸಿವೆ.

ರೆಪೋ ದರ ಎಂದರೇನು?

ದೇಶದ ವಾಣಿಜ್ಯ ಬ್ಯಾಂಕ್‌ಗಳಿಗೆ ಆರ್‌ಬಿಐ ನೀಡುವ ಸಾಲಕ್ಕೆ ವಿಧಿಸುವ ಬಡ್ಡಿದರವೇ ರೆಪೋದರ ಆಗಿದೆ. ಹಣದ ಕೊರತೆ ಸೇರಿ ಯಾವುದೇ ತುರ್ತು ಸಂದರ್ಭಗಳಲ್ಲಿ ವಾಣಿಜ್ಯ ಬ್ಯಾಂಕ್‌ಗಳು ಆರ್‌ಬಿಐನಿಂದ ಸಾಲ ಪಡೆಯುತ್ತವೆ. ಈ ಸಾಲಕ್ಕೆ ಆರ್‌ಬಿಐ ಬಡ್ಡಿ ವಿಧಿಸುತ್ತದೆ. ಇದನ್ನೇ ರೆಪೋ ರೇಟ್‌ ಎನ್ನುತ್ತಾರೆ. ಕೆಲವೊಮ್ಮೆ, ವಾಣಿಜ್ಯ ಬ್ಯಾಂಕ್‌ಗಳಿಂದ ಆರ್‌ಬಿಐ ಸಾಲ ಪಡೆಯತ್ತದೆ. ಆ ಸಾಲದ ಮೇಲಿನ ಬಡ್ಡಿಗೆ ರಿವರ್ಸ್‌ ರೆಪೋ ದರ ಎನ್ನುತ್ತಾರೆ. ರೆಪೋ ದರ ಏರಿಕೆಯಾದರೆ, ಬ್ಯಾಂಕುಗಳು ಕೂಡ ಗ್ರಾಹಕರಿಗೆ ನೀಡುವ ಸಾಲದ ಮೇಲಿನ ಬಡ್ಡಿಯನ್ನು ಏರಿಕೆ ಮಾಡುತ್ತವೆ. ಹಾಗಾಗಿ, ರೆಪೋ ದರವು ಸಾಲಗಾರರಿಗೆ ಪ್ರಮುಖ ಎನಿಸುತ್ತದೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾ ಹಿಂಸಾಚಾರ; ಬಹುರಾಷ್ಟ್ರೀಯ ಕಂಪನಿಗಳು ತತ್ತರ; ಭಾರತದ ಉದ್ಯಮಗಳ ಮೇಲೇನು ಪರಿಣಾಮ?

Continue Reading
Advertisement
Swapnil Kusale
ಕ್ರೀಡೆ11 mins ago

Swapnil Kusale: ತವರಿಗೆ ಮರಳಿದ ಸ್ವಪ್ನಿಲ್​ ಕುಸಾಲೆ; ಮುಂಬೈಯಲ್ಲಿ ಭರ್ಜರಿ ಸ್ವಾಗತ

Naga Chaitanya engagement Sobhita Dhulipala engaged
ಟಾಲಿವುಡ್13 mins ago

Naga Chaitanya: ನಾಗ ಚೈತನ್ಯ ಜತೆ ಎಂಗೇಜ್ ಆದ ಶೋಭಿತಾ ಧೂಳಿಪಾಲ; ಸಂಭ್ರಮದ ಫೋಟೋಸ್‌ ವೈರಲ್‌!

Parliament Session
ರಾಜಕೀಯ37 mins ago

Parliament Session: ವಿನೇಶ್‌ ಫೋಗಟ್‌ ಅನರ್ಹತೆಯ ವಿಚಾರ ಚರ್ಚೆಗೆ ಆಗ್ರಹಿಸಿ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ, ಸಭಾತ್ಯಾಗ

Assault Case
ಬೆಂಗಳೂರು39 mins ago

Assault Case : ಕಾರು ಚಾಲಕನ ಮುಖಕ್ಕೆ‌ ಉಗಿದು, ಗೂಂಡಾಗಿರಿ ಮಾಡಿದ ಆಟೋ ಡೈವರ್‌

Abhishek Ambareesh wife aviva is pregnant actress samalatha will become grandmother
ಸಿನಿಮಾ45 mins ago

Abhishek Ambareesh: ಗುಡ್‌ ನ್ಯೂಸ್‌ ಕೊಟ್ಟ ಅಭಿಷೇಕ್ ಅಂಬರೀಶ್; ಮಂಡ್ಯದ ಗಂಡು ಹುಟ್ಟಿ ಬರ್ತಿದ್ದಾರೆ ಅಂದ್ರು ಅಂಬಿ ಫ್ಯಾನ್ಸ್‌!

Prajwal Revanna Case HD Revanna bail plea arguments and counter arguments
ಕ್ರೈಂ53 mins ago

Prajwal Revanna Case: ರೇವಣ್ಣ, ಪ್ರಜ್ವಲ್‌ ರೇವಣ್ಣ ಅರ್ಜಿಗಳ ವಿಚಾರಣೆ ಆ.29ಕ್ಕೆ ಮುಂದೂಡಿಕೆ

Vinesh Phogat
ಕ್ರೀಡೆ54 mins ago

Vinesh Phogat: ವಿನೇಶ್​ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸರ್ಕಾರ

Bangladesh Unrest
ವಿದೇಶ1 hour ago

Bangladesh Unrest: ದೇವರ ಮೂರ್ತಿಗಳು ಪುಡಿ ಪುಡಿ; ಹಿಂದೂಗಳ ರಕ್ಷಣೆಗೆ ಸೇನೆ, ಪೊಲೀಸರೇ ಹಿಂದೇಟು

Paris Olympics
ಕ್ರೀಡೆ1 hour ago

Paris Olympics: ಒಲಿಂಪಿಕ್ಸ್​ನಲ್ಲಿಯೂ ಸದ್ದು ಮಾಡಿದ ‘​ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡು; ವಿಡಿಯೊ ವೈರಲ್​

Buddhadeb Bhattacharjee
ದೇಶ2 hours ago

Buddhadeb Bhattacharjee: ಸರಳತೆಯಿಂದಲೇ ರಾಜಕಾರಣಿಗಳಿಗೆ ಮಾದರಿಯಾಗಿದ್ದ ಬುದ್ಧದೇವ್ ಭಟ್ಟಾಚಾರ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌