ವಿಸ್ತಾರ Explainer: New Parliament Building: ನೂತನ ಸಂಸತ್ ಭವನದ ರಚನೆ, ವಿನ್ಯಾಸ ಅದ್ಭುತ! ವಿಡಿಯೊ ನೋಡಿ Vistara News
Connect with us

EXPLAINER

ವಿಸ್ತಾರ Explainer: New Parliament Building: ನೂತನ ಸಂಸತ್ ಭವನದ ರಚನೆ, ವಿನ್ಯಾಸ ಅದ್ಭುತ! ವಿಡಿಯೊ ನೋಡಿ

ಗಣೇಶ ಚತುರ್ಥಿ ದಿನವಾದ ಮಂಗಳವಾರದಿಂದ (ಸೆಪ್ಟೆಂಬರ್​ 19ರಂದು) ನೂತನ ಸಂಸತ್​ ಭವನದಲ್ಲಿ ಕಲಾಪಗಳು ನಡೆಯಲಿವೆ.

VISTARANEWS.COM


on

New parliament Building
Koo

ನವದೆಹಲಿಯಲ್ಲಿ ನಿರ್ಮಿಸಿರುವ ನೂತನ ಸಂಸತ್‌ ಭವನಕ್ಕೆ (New Parliament Building) ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಉದ್ಘಾಟನೆಯಾಗಿದ್ದರೂ ಇದುವರೆಗೆ ಸಂಸತ್‌ ಕಲಾಪಗಳು ವೃತ್ತಾಕಾರದ ಹಳೆಯ ಭವನದಲ್ಲಿಯೇ ನಡೆದಿದ್ದವು. ಆದರೀಗ ನೂತನ ಸಂಸತ್‌ ಭವನದಲ್ಲಿ ಕಲಾಪ (Special Parliament Session) ಆರಂಭಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಗಣೇಶ ಚತುರ್ಥಿಯ (ಸೆಪ್ಟೆಂಬರ್‌ 19) ಶುಭದಿನದಂದೇ ಹೊಸ ಸಂಸತ್‌ನಲ್ಲಿ ಕಲಾಪ ಆರಂಭವಾಗಲಿದೆ.

ಈ ಹಿಂದೆ ಕಲಾಪಗಲು ನಡೆಯುತ್ತಿದ್ದ ಸಂಸತ್‌ ಭವನ ಸ್ವಾತಂತ್ರ್ಯೋತ್ತರ ಕಾಲದ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ಹಲವು ಅಧಿಕಾರ ಹಸ್ತಾಂತರಗಳು, ಹಲವು ಚಾರಿತ್ರಿಕ ಕಲಾಪಗಳು, ಹಲವು ಜಾಗತಿಕ ಖ್ಯಾತಿಯ ಮುತ್ಸದ್ಧಿಗಳು ಹಾಗೂ ಚರ್ಚೆಗಳು…ಇತ್ಯಾದಿ. ಇಷ್ಟರಲ್ಲಿಯೇ ಈ ಸಂಸತ್‌ ಭವನ ಇತಿಹಾಸ ಸೇರಲಿದೆ. ಹೊಸ, ಭವ್ಯ ಸಂಸತ್‌ ಭವನ (New Parliament Building) ಹೊಸದೊಂದು ಇತಿಹಾಸಕ್ಕೆ ಮುನ್ನುಡಿ ಬರೆಯಲಿದೆ.

ಮೂಲ ಸಂಸತ್‌ ಭವನ ಕಟ್ಟಡ ರಚನೆಯಾದುದು 1927ರಲ್ಲಿ. ಹತ್ತಿರ ಹತ್ತಿರ ಒಂದು ಶತಮಾನ ಇದಕ್ಕೆ ಪೂರ್ಣಗೊಂಡಿದೆ. ಶತಮಾನ ಹಳೆಯದಾದ ಈ ರಚನೆ ಇಂದಿನ ಹಾಗೂ ಮುಂದಿನ ಅವಶ್ಯಕತೆಗಳನ್ನು ಪೂರೈಸಲು ಸಾಕಾಗದು. ಇದನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ ಮತ್ತು ರಾಜ್ಯಸಭೆ ಸಂಸತ್ತಿಗೆ ಹೊಸ ಕಟ್ಟಡ ನಿರ್ಮಿಸಲು ನಿರ್ಣಯಗಳನ್ನು ಅಂಗೀಕರಿಸಿದವು. ಡಿಸೆಂಬರ್ 10, 2020ರಂದು ಪ್ರಧಾನಿ ನರೇಂದ್ರ ಮೋದಿ ಹೊಸ ಭವನಕ್ಕೆ ಶಂಕುಸ್ಥಾಪನೆ ಮಾಡಿದರು.

ಎಷ್ಟು ದೊಡ್ಡದಿದೆ ಈ ಭವನ?

ಈ ಕಟ್ಟಡವನ್ನು 64,500 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಿಸಲಾಗಿದೆ. ಸೆಂಟ್ರಲ್ ವಿಸ್ಟಾ ಕಟ್ಟಡಗಳ ಮಾದರಿಯಲ್ಲಿ ನಿರ್ಮಿಸಲಾದ ಹೊಸ ಸಂಸತ್ತು ತ್ರಿಕೋನಾಕೃತಿಯಲ್ಲಿದೆ. ಇದು ಲೋಕಸಭೆ, ರಾಜ್ಯಸಭೆ, ಸೆಂಟ್ರಲ್ ಲಾಂಜ್ ಮತ್ತು ಸಾಂವಿಧಾನಿಕ ಅಧಿಕಾರಿಗಳ ಕಚೇರಿಗಳನ್ನು ಹೊಂದಿದೆ. ಹೊಸ ಲೋಕಸಭೆಯನ್ನು ಭಾರತದ ರಾಷ್ಟ್ರೀಯ ಪಕ್ಷಿಯಾದ ನವಿಲಿನ ಮಾದರಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಹೊಸ ರಾಜ್ಯಸಭೆಯು ರಾಷ್ಟ್ರೀಯ ಪುಷ್ಪವಾದ ಕಮಲದ ಹೋಲಿಕೆಯನ್ನು ಹೊಂದಿದೆ. ರಾಷ್ಟ್ರಪತಿ ಭವನದಂತಹ ಭಾರತದ ಪ್ರಮುಖ ಪಾರಂಪರಿಕ ಕಟ್ಟಡಗಳಿಂದಲೂ ವಿವಿಧ ವಾಸ್ತುಶಿಲ್ಪದ ಪ್ರಭಾವಗಳನ್ನು ಪಡೆದಿದೆ.

ಹಳೆಯ ಕಟ್ಟಡದಲ್ಲಿ ಲೋಕಸಭೆಯಲ್ಲಿ 543 ಮತ್ತು ರಾಜ್ಯಸಭೆಯಲ್ಲಿ 250 ಸದಸ್ಯರು ಕುಳಿತುಕೊಳ್ಳಬಹುದು. ಹೊಸ ಸಂಸತ್ ಕಟ್ಟಡ ಲೋಕಸಭೆಯಲ್ಲಿ 888 ಸದಸ್ಯರು ಮತ್ತು 384 ಸದಸ್ಯರಿಗೆ ಸ್ಥಳಾವಕಾಶವನ್ನು ಹೊಂದಿದೆ. ಕೇಂದ್ರ ಪ್ರಾಂಗಣದಲ್ಲಿ ಎರಡೂ ಸದನಗಳ ಸದಸ್ಯರು ಮುಕ್ತವಾಗಿ ಸಭೆ ಸೇರಲು ಸ್ಥಳವಿದೆ. ಜಂಟಿ ಅಧಿವೇಶನ ನಡೆದಾಗ ಇದನ್ನು ಉಪಯೋಗಿಸಿಕೊಳ್ಳಲಾಗುತ್ತದೆ. ಪುನರಾಭಿವೃದ್ಧಿಯಾದ ಶ್ರಮ ಶಕ್ತಿ ಭವನದಲ್ಲಿ ಸಂಸದರಿಗಾಗಿ ಸುಮಾರು 800 ಕೋಣೆಗಳನ್ನು ನಿರ್ಮಿಸಲಾಗುತ್ತಿದೆ.

ನೂತನ ಕಟ್ಟಡವು ಆರು ಸಮಿತಿ ಕೊಠಡಿಗಳನ್ನು ಹೊಂದಿರುತ್ತದೆ. ಪ್ರಸ್ತುತ ಕಟ್ಟಡದಲ್ಲಿ ಅಂತಹ ಮೂರು ಕೊಠಡಿಗಳಷ್ಟೇ ಇವೆ. ಮಂತ್ರಿಮಂಡಲದ ಬಳಕೆಗೆ 92 ಕೊಠಡಿಗಳು ಇರುತ್ತವೆ. ಹೊಸ ಕಟ್ಟಡದಲ್ಲಿ, ಲೋಕಸಭೆ ಮತ್ತು ರಾಜ್ಯಸಭೆಗಳ ಪ್ರತಿ ಬೆಂಚ್‌ನಲ್ಲಿ ಇಬ್ಬರು ಸದಸ್ಯರು ಅಕ್ಕಪಕ್ಕದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತದೆ. ಪ್ರತಿ ಆಸನದಲ್ಲಿ ಡಿಜಿಟಲ್ ವ್ಯವಸ್ಥೆಗಳು ಮತ್ತು ಟಚ್ ಸ್ಕ್ರೀನ್‌ಗಳನ್ನು ಅಳವಡಿಸಲಾಗುತ್ತಿದೆ.

ಹಳೆಯ ಸಂಸತ್‌ ಕಟ್ಟಡದ ಬಳಕೆ ಮುಂದುವರಿಯಲಿದೆ. ಎರಡು ಕಟ್ಟಡಗಳು ಒಂದಕ್ಕೊಂದು ಪೂರಕವಾಗಿರುವಂತೆ ಇವೆ. ಇವುಗಳ ಮೂಲ ವಾಸ್ತುಶಿಲ್ಪದ ತಂತ್ರವೇ ಹಾಗಿದೆ. ಹಳೆಯ ಕಟ್ಟಡದ ಐತಿಹಾಸಿಕ ಪರಂಪರೆಯನ್ನು ಉಳಿಸಿಕೊಳ್ಳಲು ಕಾಳಜಿ ವಹಿಸಲಾಗುತ್ತದೆ. ಸಂಸತ್ತಿನ ಸಂಕೀರ್ಣದಲ್ಲಿರುವ ಎಲ್ಲಾ ಪ್ರತಿಮೆಗಳನ್ನು ಸಹ ಪುನಃಸ್ಥಾಪಿಸಲಾಗುತ್ತದೆ. ಉನ್ನತ ಮಟ್ಟದ ಭದ್ರತಾ ಮಾನದಂಡಗಳನ್ನು ಗಮನದಲ್ಲಿಟ್ಟುಕೊಂಡು ಕಟ್ಟಡವನ್ನು ವಿನ್ಯಾಸಗೊಳಿಸಲಾಗಿದೆ.

ಇದನ್ನು ಓದಿ : Special Parliament Session: ಸಂಸತ್ತಿನ ಮೆಟ್ಟಿಲಿಗೆ ನಾನೇಕೆ ನಮಿಸಿದೆ? ಭಾವುಕರಾದ ಮೋದಿ ಹೇಳಿದ್ದಿಷ್ಟು…

ಹೊಸ ಕಟ್ಟಡದಲ್ಲಿ ಭಾರತದ ಪ್ರಜಾಪ್ರಭುತ್ವ ಪರಂಪರೆಯನ್ನು ಪ್ರದರ್ಶಿಸುವ ಸಂವಿಧಾನ ಭವನ ಇರಲಿದೆ. ಲಕ್ಷಾಂತರ ಮುದ್ರಿತ ಹಾಗೂ ಡಿಜಿಟಲ್‌ ಬುಕ್‌ಗಳನ್ನು ಹೊಂದಿರುವ ಗ್ರಂಥಾಲಯವಿರುತ್ತದೆ. ಊಟದ ಕೋಣೆ ಮತ್ತು ಸದಸ್ಯರಿಗೆ ಸಾಕಷ್ಟು ಪಾರ್ಕಿಂಗ್ ವ್ಯವಸ್ಥೆ ಸೇರಿವೆ. ಹೊಸ ಕಟ್ಟಡವು ಮಳೆನೀರು ಕೊಯ್ಲು ಮತ್ತು ನೀರಿನ ಮರುಬಳಕೆ ವ್ಯವಸ್ಥೆಯನ್ನು ಹೊಂದಿದೆ. ಕಟ್ಟಡದಾದ್ಯಂತ 100% ಯುಪಿಎಸ್ ಪವರ್ ಬ್ಯಾಕಪ್ ಒದಗಿಸಲಾಗಿದೆ.

ಹೊಸ ಕಟ್ಟಡದ ವಿನ್ಯಾಸವನ್ನು ಅಹಮದಾಬಾದ್ ಮೂಲದ HCP ಡಿಸೈನ್ ಮತ್ತು ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ಮಾಡಿದೆ. ಕೇಂದ್ರದ ಸೆಂಟ್ರಲ್ ವಿಸ್ಟಾ ಪುನರಾಭಿವೃದ್ಧಿ ಯೋಜನೆಗಳ ಭಾಗವಾದ ಹೊಸ ಸಂಸತ್‌ ಕಟ್ಟಡ ನಿರ್ಮಾಣದ ಗುತ್ತಿಗೆಯನ್ನು ಟಾಟಾ ಪ್ರಾಜೆಕ್ಟ್ಸ್ ಪಡೆದಿದ್ದು, ಇದನ್ನು ನಿರ್ಮಿಸಿದೆ.

ಅಧಿಕಾರದ ಹಸ್ತಾಂತರಕ್ಕೆ ಸೆಂಗೋಲ್‌?

ಹೊಸ ಸಂಸತ್‌ ಭವನದ ಇನ್ನೊಂದು ಆಕರ್ಷಣೆ ಎಂದರೆ, ಪುರಾತನ ಭಾರತದಲ್ಲಿ ಅಧಿಕಾರದ ಹಸ್ತಾಂತರಕ್ಕೆ ಬಳಸುತ್ತಿದ್ದ ಸೆಂಗೋಲ್‌ ಅಥವಾ ರಾಜದಂಡ. ಕ್ರಿಸ್ತಪೂರ್ವ 3ನೇ ಶತಮಾನದಲ್ಲಿ ಆಡಳಿತ ನಡೆಸಿದ್ದ ಚೋಳ ರಾಜನ ಅವಧಿಯಲ್ಲಿ ಮಹತ್ವ ಪಡೆದ ರಾಜದಂಡ ಇದಾಗಿತ್ತು. ಸೆಂಗೋಲ್​ ಸದ್ಯ ಅಲಹಾಬಾದ್​ ಮ್ಯೂಸಿಯಂನಲ್ಲಿದೆ. ಅದನ್ನು ತಮಿಳಿನ ಹಿರಿಯರು ಪ್ರಧಾನಿಗೆ ನೀಡಲಿದ್ದು, ಅದನ್ನು ಲೋಕಸಭೆಯ ಸ್ಪೀಕರ್​ ಕುರ್ಚಿಯ ಸಮೀಪ ಪ್ರಧಾನಿ ಇಡಲಿದ್ದಾರೆ. ಚಿನ್ನದಿಂದ ಮಾಡಿದ ಈ ದಂಡವನ್ನು ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ರಾಜಾಜಿಯವರು ತಮಿಳುನಾಡಿನ ಚಿನ್ನಾಭರಣ ತಯಾರಕರಿಂದ ಮಾಡಿಸಿ ತರಿಸಿ ನೆಹರೂ ಅವರಿಗೆ ನೀಡಿದ್ದರು. ನಂತರ ಇದು ಮ್ಯೂಸಿಯಂ ಸೇರಿತ್ತು.

ಬೃಹತ್‌ ರಾಷ್ಟ್ರ ಲಾಂಛನ

ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಸಂಸತ್ತಿನ ಕಟ್ಟಡದ ಮೇಲಿರುವ ರಾಷ್ಟ್ರೀಯ ಲಾಂಛನವಾದ ನಾಲ್ಕು ಸಿಂಹಗಳನ್ನು ಅನಾವರಣಗೊಳಿಸಿದ್ದಾರೆ. 6.5 ಮೀಟರ್ ಎತ್ತರವಾಗಿರುವ ಈ ಲಾಂಛನ 9,500 ಕೆಜಿ ತೂಕ ಹೊಂದಿದ್ದು ಕಂಚಿನಿಂದ ಮಾಡಲ್ಪಟ್ಟಿದೆ.

ಈ ಕಟ್ಟಡದ ನಿರ್ಮಾಣಕ್ಕೆಂದು ತೆಗೆದಿರಿಸಲಾದ ಹಣದ 2600 ಕೋಟಿ ರೂ. ಇದುವರೆಗೆ ಇದರ ನಿರ್ಮಾಣದಲ್ಲಿ ಸುಮಾರು 23,04,095 ಮಾನವ ದಿನಗಳಷ್ಟು ಉದ್ಯೋಗ ನೀಡಲಾಗಿದೆ. 26,045 ಟನ್‌ ಸ್ಟೀಲ್‌ ಬಳಸಲಾಗಿದೆ. 63,807 ಟನ್ ಸಿಮೆಂಟ್‌ ಹಾಗೂ ‌9,689 ಘನ ಮೀಟರ್‌ ಹಾರುಬೂದಿ ಬಳಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

EXPLAINER

ವಿಸ್ತಾರ Explainer: Google Birthday: ಗೂಗಲ್‌ನ 25 ವರ್ಷದ ಇತಿಹಾಸ ಹೇಗಿತ್ತು? ಒಂದು ನೋಟ ಇಲ್ಲಿದೆ

ಟೆಕ್ ದೈತ್ಯ ಗೂಗಲ್‌ (Google search Engine) 25ನೇ ವರ್ಷದ ಜನ್ಮದಿನ (Google birthday) ಆಚರಿಸಿಕೊಂಡಿದೆ. ಈ ಕಂಪನಿ ಸಾಗಿ ಬಂದ ಇತಿಹಾಸದ (Google history) ಕೆಲವು ಮೈಲಿಗಲ್ಲುಗಳು ಇಲ್ಲಿವೆ.

VISTARANEWS.COM


on

Edited by

Google
Koo

ನ್ಯೂಯಾರ್ಕ್‌: ತಂತ್ರಜ್ಞಾನದ ದೈತ್ಯ ಗೂಗಲ್ ಕಂಪನಿ (Google search engine) ಇಂದು (ಸೆಪ್ಟೆಂಬರ್ 27) 25ನೇ ವರ್ಷದ ಜನ್ಮದಿನ (Google 25th Birthday) ವರ್ಷಗಳನ್ನು ಪೂರೈಸಿದೆ. ಈ ವಿಶೇಷ ಈವೆಂಟ್‌ನ (Google Birthday) ಸಂದರ್ಭದಲ್ಲಿ Google ಹೊಸ ಡೂಡಲ್ ಅನ್ನು ಪ್ರದರ್ಶಿಸಿತು. ಅದರಲ್ಲಿ ಕಳೆದ ವರ್ಷಗಳಲ್ಲಿ Google ಲೋಗೋ ನಡೆದುಬಂದ ಇತಿಹಾಸವನ್ನು ತೋರಿಸಿತು.

“ಇಪ್ಪತ್ತೈದು ವರ್ಷಗಳ ಹಿಂದೆ, ದೊಡ್ಡ ಮತ್ತು ಚಿಕ್ಕ ಪ್ರಶ್ನೆಗಳಿಗೆ ಉತ್ತರಗಳನ್ನು ಹುಡುಕಲು ನಿಮಗೆ ಸಹಾಯ ಮಾಡಲು ನಾವು Google search ಪ್ರಾರಂಭಿಸಿದೆವು. ಅಂದಿನಿಂದ, ಶತಕೋಟಿ ಜನರು ತಮ್ಮ ಕುತೂಹಲವನ್ನು ತಿಳಿಗೊಳಿಸಲು ನಮ್ಮತ್ತ ಮುಖ ಮಾಡಿದರು” ಎಂದು ಗೂಗಲ್ ಹೇಳಿದೆ.

ಆರಂಭದಲ್ಲಿ ʼಬ್ಯಾಕ್‌ರಬ್ʼ ಎಂದು ಕರೆಯಲ್ಪಟ್ಟಿದ್ದ ಈ ಸ್ಟಾರ್ಟ್‌ಅಪ್ ಈಗ ವಿಶ್ವದ ಅತ್ಯಂತ ಮೌಲ್ಯಯುತ ಮತ್ತು ಪ್ರಭಾವಶಾಲಿ ಕಂಪನಿಗಳಲ್ಲಿ ಒಂದಾಗಿದೆ. Gmail ಮತ್ತು Search ಸೇರಿದಂತೆ Googleನ ಅನೇಕ ಸೇವೆಗಳನ್ನು ಈಗ ನೂರು ಕೋಟಿ ಜನ ಬಳಸುತ್ತಿದ್ದಾರೆ. ಅದರ ಸಂಸ್ಥಾಪಕರಾದ ಲ್ಯಾರಿ ಪೇಜ್ ಮತ್ತು ಸೆರ್ಗೆ ಬ್ರಿನ್ ಅವರು ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಸ್ಥಾನ ಪಡೆದಿದ್ದಾರೆ.

google doodle

ಟೆಕ್ ದೈತ್ಯ ಗೂಗಲ್‌ ಸಾಗಿ ಬಂದ ಇತಿಹಾಸದ ಕೆಲವು ಮೈಲಿಗಲ್ಲುಗಳು ಇಲ್ಲಿವೆ.

  • 1995-1996ರಲ್ಲಿ ಲ್ಯಾರಿ ಪೇಜ್ ಮತ್ತು ಸೆರ್ಗೆ ಬ್ರಿನ್ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯದಲ್ಲಿ ಭೇಟಿಯಾದರು. ಬ್ಯಾಕ್‌ರಬ್ ಹೆಸರಿನಲ್ಲಿ ಸರ್ಚ್‌ ಎಂಜಿನ್ ಅನ್ನು ಹುಟ್ಟುಹಾಕಿದರು.
  • 1998ರಲ್ಲಿ ಈ ಸ್ಟಾರ್ಟಪ್ ಗೂಗಲ್ ಎಂದು ಮರುನಾಮಕರಣಗೊಂಡಿತು. ಸನ್ ಮೈಕ್ರೋಸಿಸ್ಟಮ್ಸ್ ಸಹ-ಸಂಸ್ಥಾಪಕ ಆಂಡಿ ಬೆಚ್ಟೋಲ್‌ಶೀಮ್‌ನಿಂದ $100,000 ನಿಧಿಯನ್ನು ಪಡೆಯಿತು.
  • 1999ರಲ್ಲಿ ಗೂಗಲ್ ತನ್ನ ಮೊದಲ ಪತ್ರಿಕಾ ಪ್ರಕಟಣೆ ನೀಡಿ, ಸಿಕ್ವೊಯಾ ಕ್ಯಾಪಿಟಲ್ ಮತ್ತು ಕ್ಲೀನರ್ ಪರ್ಕಿನ್ಸ್‌ನಿಂದ $25 ಮಿಲಿಯ ಹಣ ಪಡೆದುದನ್ನು ಘೋಷಿಸಿತು. ಅಧಿಕೃತವಾಗಿ “ಗೂಗ್ಲರ್ಸ್” ಪದವನ್ನು ಜಗತ್ತಿಗೆ ಘೋಷಿಸಿತು.
  • ಜೂನ್ 2000ದಲ್ಲಿ, ಆ ಕಾಲದ ಅತ್ಯಂತ ಜನಪ್ರಿಯ ವೆಬ್‌ಸೈಟ್‌ಗಳಲ್ಲಿ ಒಂದಾದ Yahooಗೆ Google ಡೀಫಾಲ್ಟ್ ಸರ್ಚ್ ಎಂಜಿನ್ ಪೂರೈಕೆದಾರನಾಯಿತು. 2000ದ ಅಕ್ಟೋಬರ್‌ನಲ್ಲಿ ಆನ್‌ಲೈನ್ ಜಾಹೀರಾತು ಪ್ಲಾಟ್‌ಫಾರ್ಮ್ ಆಡ್‌ವರ್ಡ್ಸ್ ಅನ್ನು ಪ್ರಾರಂಭಿಸಿತು. ಇದು Googleನ ವ್ಯವಹಾರಕ್ಕೆ ಪ್ರಮುಖವಾಗಿತ್ತು.
  • 2001ರಲ್ಲಿ ಎರಿಕ್ ಸ್ಮಿತ್ ಅವರು Googleನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ನಿರ್ದೇಶಕರ ಮಂಡಳಿಯ ಅಧ್ಯಕ್ಷರಾಗಿ ಹೆಸರಿಸಲ್ಪಟ್ಟರು.
  • ಏಪ್ರಿಲ್ 2004ರಲ್ಲಿ 1 GB ವರೆಗಿನ ಸಂಗ್ರಹ ಸಾಮರ್ಥ್ಯದೊಂದಿಗೆ Gmail ಅನ್ನು ಬಿಡುಗಡೆ ಮಾಡಿತು.
  • 2004ರ ಆಗಸ್ಟ್‌ನಲ್ಲಿ ಪ್ರತಿ ಷೇರಿಗೆ $85 ಆರಂಭಿಕ ಬೆಲೆಯಲ್ಲಿ ಸರಿಸುಮಾರು 19.6 ಮಿಲಿಯ ಷೇರುಗಳ ಆರಂಭಿಕ ಸಾರ್ವಜನಿಕ ಕೊಡುಗೆಯನ್ನು ನೀಡಿತು.
  • 2004ರ ಫೆಬ್ರವರಿಯಲ್ಲಿ ಡೆಸ್ಕ್‌ಟಾಪ್‌ಗಾಗಿ ಗೂಗಲ್ ಮ್ಯಾಪ್‌ ಅನ್ನು ಪ್ರಾರಂಭಿಸಿತು.
  • 2005ರ ಆಗಸ್ಟ್‌ನಲ್ಲಿ ಮೊಬೈಲ್ ಸ್ಟಾರ್ಟ್ಅಪ್ ಆಂಡ್ರಾಯ್ಡ್ ಅನ್ನು ಖರೀದಿಸಿತು. Google Talk ತ್ವರಿತ ಸಂದೇಶ ಸೇವೆಯನ್ನು ಪ್ರಾರಂಭಿಸಿತು.
  • 2006ರಲ್ಲಿ ಆನ್‌ಲೈನ್ ವೀಡಿಯೊ ಸೇವೆ YouTube ಅನ್ನು $1.65 ಶತಕೋಟಿಗೆ ಖರೀದಿಸಿತು. 2007 ಏಪ್ರಿಲ್‌ನಲ್ಲಿ $3.1 ಶತಕೋಟಿಗೆ ವೆಬ್ ಜಾಹೀರಾತು ಪೂರೈಕೆದಾರ DoubleClick ಅನ್ನು ಸ್ವಾಧೀನಪಡಿಸಿಕೊಂಡಿತು.
  • ಮೇ 2007 ಯುನಿವರ್ಸಲ್‌ ಸರ್ಚ್‌ ಅನ್ನು ಪರಿಚಯಿಸಿತು. ಇದು ಬಳಕೆದಾರರಿಗೆ ಚಿತ್ರಗಳು, ವೀಡಿಯೊಗಳು ಮತ್ತು ಸುದ್ದಿಗಳಂತಹ ಎಲ್ಲಾ ವಿಷಯ ಪ್ರಕಾರಗಳಲ್ಲಿ ಹುಡುಕಾಟ ಫಲಿತಾಂಶಗಳನ್ನು ಏಕಕಾಲದಲ್ಲಿ ಒದಗಿಸಿತು.
  • ಸೆಪ್ಟೆಂಬರ್‌ನಲ್ಲಿ ಮೊದಲ Android ಫೋನ್, T-Mobile G1 ಅಥವಾ 2008 HTC ಡ್ರೀಮ್ ಅನ್ನು ಪ್ರಾರಂಭಿಸಿತು.
  • Google Chrome ವೆಬ್ ಬ್ರೌಸರ್ ಅನ್ನು ಪ್ರಾರಂಭಿಸಿತು. ಜನವರಿ 2010ರಲ್ಲಿ HTCಯೊಂದಿಗೆ ಸಹ-ಅಭಿವೃದ್ಧಿಪಡಿಸಿದ Nexus One ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿತು.
  • ಮಾರ್ಚ್ 2010ರಲ್ಲಿ ಚೀನಾದಲ್ಲಿ ಗೂಗಲ್‌ ಬ್ಯಾನ್‌ ಮಾಡಲಾಯಿತು.
  • ಅಕ್ಟೋಬರ್‌ನಲ್ಲಿ ಗೂಗಲ್ ಕ್ಯಾಲಿಫೋರ್ನಿಯಾದಲ್ಲಿ ಟೊಯೋಟಾ ಪ್ರಿಯಸ್ ಕಾರುಗಳ ಸಣ್ಣ ಸಮೂಹದೊಂದಿಗೆ ತನ್ನ ಮೊದಲ ಸ್ವಯಂ-ಚಾಲನಾ 2010 ವಾಹನಗಳನ್ನು ಪರೀಕ್ಷಿಸಿತು.
  • ಜೂನ್ 2011ರಲ್ಲಿ Google+ ಎಂಬ ಸಾಮಾಜಿಕ ನೆಟ್‌ವರ್ಕಿಂಗ್ ಸೇವೆಯನ್ನು ಪ್ರಾರಂಭಿಸಿತು. ಇದನ್ನು 2018ರಲ್ಲಿ ಮುಚ್ಚಲಾಯಿತು.
  • ಮೊಟೊರೊಲಾ ಮೊಬಿಲಿಟಿಯನ್ನು ಸ್ವಾಧೀನಪಡಿಸಿಕೊಂಡಿತು. ಮೊಟೊರೊಲಾದ ಸೆಲ್‌ಫೋನ್, ಟಿವಿ ಸೆಟ್-ಟಾಪ್ ಬಾಕ್ಸ್ ವ್ಯವಹಾರಗಳನ್ನು $12.5 ಬಿಲಿಯನ್‌ಗೆ ಹೊಂದಿತು.
  • 2012ರಲ್ಲಿ ಗೂಗಲ್ ಗ್ಲಾಸ್ ಅನ್ನು ಪ್ರಾರಂಭಿಸಿತು. 2013ರಲ್ಲಿ ಇಸ್ರೇಲಿ ಮ್ಯಾಪಿಂಗ್ ಸ್ಟಾರ್ಟ್ಅಪ್ Waze ಅನ್ನು ಸುಮಾರು $1 ಶತಕೋಟಿಗೆ ಸ್ವಾಧೀನಪಡಿಸಿಕೊಂಡಿತು. 2014ರ ಜನವರಿಯಲ್ಲಿ AI ಸಂಸ್ಥೆ DeepMind ಅನ್ನು ಸ್ವಾಧೀನಪಡಿಸಿಕೊಂಡಿತು.
  • 2015ರಲ್ಲಿ ಹೊಸದಾಗಿ ಆಲ್ಫಾಬೆಟ್ ಕಂಪನಿಯಾಗಿ ಪಬ್ಲಿಕ್‌ ಆಯಿತು. ಇದು YouTube, Google ಮತ್ತು ಇತರ ಘಟಕಗಳನ್ನು ಹೊಂದಿದೆ. ಸುಂದರ್ ಪಿಚೈ ಗೂಗಲ್ ಸಿಇಒ ಆಗಿ ನೇಮಕಗೊಂಡರು.
  • ಅಕ್ಟೋಬರ್‌ನಲ್ಲಿ ಮೊದಲ ಪಿಕ್ಸೆಲ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿತು. 2016ರ ನವೆಂಬರ್‌ನಲ್ಲಿ ಗೂಗಲ್ ಹೋಮ್ ಸ್ಮಾರ್ಟ್ ಸ್ಪೀಕರ್ ಅನ್ನು ಪ್ರಾರಂಭಿಸಿತು.
  • ಜೂನ್ 2017ರಲ್ಲಿ ಯುರೋಪಿಯನ್ ಕಮಿಷನ್ ನಿಯಮ ಉಲ್ಲಂಘನೆಗಾಗಿ Googleಗೆ 2.42 ಶತಕೋಟಿ ಯುರೋ ದಂಡ ವಿಧಿಸಿತು. 2018ರಲ್ಲಿ ಮತ್ತೆ 4.34 ಶತಕೋಟಿ ಯುರೋ, 2019ರಲ್ಲಿ 1.49 ಬಿಲಿಯನ್ ಯುರೋ ದಂಡ ವಿಧಿಸಿತು.
  • 2019ರ ಡಿಸೆಂಬರ್‌ನಲ್ಲಿ ಸಂಸ್ಥಾಪಕರಾದ ಪೇಜ್ ಮತ್ತು ಬ್ರಿನ್ ಅವರು CEO ಮತ್ತು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರು. ಪಿಚೈ ಆಲ್ಫಾಬೆಟ್‌ನ CEO ಆದರು.
  • 2020ರಲ್ಲಿ ಆಲ್ಫಾಬೆಟ್ ಮಾರುಕಟ್ಟೆ ಬಂಡವಾಳೀಕರಣದಲ್ಲಿ $1 ಟ್ರಿಲಿಯನ್‌ಗೆ ತಲುಪಿತು. 2023ರ ಜನವರಿಯಲ್ಲಿ ಕಂಪನಿ 12,000 ಉದ್ಯೋಗಗಳನ್ನು ಕಡಿತಗೊಳಿಸಿತು. ಇದು ಉದ್ಯೋಗಿಗಳ ಪ್ರಮಾಣದ 6%.
  • ಫೆಬ್ರವರಿಯಲ್ಲಿ ಗೂಗಲ್ ಬಾರ್ಡ್ ಅನ್ನು ಪ್ರಕಟಿಸಿತು. ಇದು AI-ಚಾಲಿತ ಚಾಟ್‌ಬಾಟ್. ಆದರೆ ಇದರಲ್ಲಿದ್ದ ದೋಷದಿಂದಾಗಿ ಕಂಪನಿಯ ಷೇರು ಮೌಲ್ಯದಲ್ಲಿ $100 ಶತಕೋಟಿ ನಷ್ಟವಾಯಿತು.
  • Googleನ ಮೊದಲ ಉದ್ಯೋಗಿಗಳಲ್ಲಿ ಒಬ್ಬರಾದ ಸುಸಾನ್ ವೊಜ್ಸಿಕಿ, YouTube CEO ಹುದ್ದೆಯಿಂದ ಕೆಳಗಿಳಿದರು. ನೀಲ್ ಮೋಹನ್ ಆ ಸ್ಥಾನಕ್ಕೆ ಬಂದರು. 2023 ಮಾರ್ಚ್‌ನಲ್ಲಿ ಕೆಲವು ಬಳಕೆದಾರರಿಗೆ ಬಾರ್ಡ್ ಅನ್ನು ಬಳಕೆಗೆ ಬಿಟ್ಟಿತು.

ಇದನ್ನೂ ಓದಿ: Google birthday: ಗೂಗಲ್‌ಗೆ 25 ವರ್ಷ; ಚಂದದ ಡೂಡಲ್‌ನೊಂದಿಗೆ ಸ್ವಾಗತಿಸಿದ ಕಂಪನಿ

Continue Reading

EXPLAINER

Asian Games 2023 : ಏಷ್ಯನ್​ ಗೇಮ್ಸ್​​​ಗೆ ಅರುಣಾಚಲ ಪ್ರದೇಶದ ಅಥ್ಲಿಟ್​ಗೆ ಚೀನಾ ಪ್ರವೇಶ ನಿರಾಕರಣೆ, ಭಾರತದ ಖಂಡನೆ; ಏನಿದು ಹೊಸ ವಿವಾದ?

ಏಷ್ಯನ್ ಗೇಮ್ಸ್​ ಕ್ರೀಡಾಕೂಟದ (Asian Games 2023) ಸ್ಫೂರ್ತಿ ಮತ್ತು ಸದಸ್ಯ ರಾಷ್ಟ್ರಗಳ ಸ್ಪರ್ಧಿಗಳ ವಿರುದ್ಧ ತಾರತಮ್ಯವನ್ನು ನಿಷೇಧಿಸುವ ನಿಯಮಗಳನ್ನು ಚೀನಾ ಉಲ್ಲಂಘಿಸಿದೆ ಎಂದು ವಿದೇಶಾಂಗ ಸಚಿವಾಲಯ ಟೀಕಿಸಿದೆ.

VISTARANEWS.COM


on

Anurag Tahakur
Koo

ನವ ದೆಹಲಿ: ಚೀನಾದ ಆತಿಥ್ಯದಲ್ಲಿ ನಡೆಯುವ ಏಷ್ಯನ್​ ಗೇಮ್ಸ್​ನಲ್ಲಿ (Asian Games 2023) ಗಡಿ ರಾಜಕೀಯ ಮುನ್ನೆಲೆಗೆ ಬಂದಿದೆ. ಅರುಣಾಚಲ ಪ್ರದೇಶದ ಮೂವರು ವುಶ್​ ಸ್ಪರ್ಧಿಗಳಿಗೆ ಚೀನಾದ ಅಧಿಕಾರಿಗಳು ಪ್ರವೇಶ ನಿರಾಕರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಅರುಣಾಚಲ ಪ್ರದೇಶ ವಿಚಾರದಲ್ಲಿ ಭಾರತ ಹಾಗೂ ಚೀನಾ ನಡುವೆ ವಿವಾದವಿದೆ. ಹೀಗಾಗಿ ವುಶು ಸ್ಪರ್ಧಿಗಳಿಗೆ ಅಲ್ಲಿನ ಅಧಿಕಾರಿಗಳು ಪ್ರವೇಶ ನಿರಾಕರಿಸಿದ್ದರು. ಅವರಿಗೆ ಮಾನ್ಯತಾ ಪತ್ರಗಳನ್ನು ಡೌನ್​ಲೋಡ್​ ಮಾಡಲು ಸಾಧ್ಯವಾಗದ ಕಾರಣ ದೆಹಲಿಯಲ್ಲೇ ಉಳಿದಿದ್ದಾರೆ. ಚೀನಾದ ಈ ನೀತಿಗೆ ಭಾರತ ಖಂಡನೆ ವ್ಯಕ್ತಪಡಿಸಿದ್ದು, ಕ್ರೀಡಾ ಸಚಿವ ಅನುರಾಗ್​ ಠಾಕೂರ್​ ಕ್ರೀಡಾಕೂಟದ ಹಿನ್ನೆಲೆಯಲ್ಲಿ ಚೀನಾಗೆ ಪ್ರವಾಸ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಆತಿಥೇಯರ ಆಹ್ವಾನವನ್ನು ಖಡಾಖಂಡಿತವಾಗಿ ತಿರಸ್ಕರಿಸಿದ್ದಾರೆ.

ಚೀನಾ ತಾರತಮ್ಯವನ್ನು ವಿರೋಧಿಸಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಮ್ಮ ಚೀನಾ ಭೇಟಿಯನ್ನು ರದ್ದುಗೊಳಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಶುಕ್ರವಾರ ತಿಳಿಸಿದೆ.

ಚೀನಾದ ಹ್ಯಾಂಗ್ಝೌನಲ್ಲಿ ನಡೆಯಲಿರುವ 19 ನೇ ಏಷ್ಯನ್ ಕ್ರೀಡಾಕೂಟಕ್ಕೆ ಮಾನ್ಯತೆ ಮತ್ತು ಪ್ರವೇಶ ನಿರಾಕರಿಸುವ ಮೂಲಕ ಚೀನಾದ ಅಧಿಕಾರಿಗಳು ಅರುಣಾಚಲ ಪ್ರದೇಶದ ಕೆಲವು ಭಾರತೀಯ ಕ್ರೀಡಾಪಟುಗಳಿಗೆ ಪೂರ್ವನಿಯೋಜಿತ ತಾರತಮ್ಯ ಎಸಗಿದೆ ಎಂದು ಭಾರತ ಸರ್ಕಾರ ತಿಳಿದುಕೊಂಡಿದೆ ಎಂದು ಗೃಹ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ವಾಸಸ್ಥಳ ಅಥವಾ ಜನಾಂಗೀಯತೆಯ ಆಧಾರದ ಮೇಲೆ ಭಾರತೀಯ ನಾಗರಿಕರನ್ನು ವಿಭಿನ್ನವಾಗಿ ಪರಿಗಣಿಸುವುದನ್ನು ಭಾರತ ವಿರೋಧಿಸುತ್ತದೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಎಂದು ಗೃಹ ಸಚಿವಾಲಯ ಹೇಳಿದೆ.

ಭಾರತವು ಕುರಿತು ತಮ್ಮ ಬಲವಾದ ಪ್ರತಿಭಟನೆ ದಾಖಲಿಸಿದೆ. ಏಷ್ಯನ್ ಕ್ರೀಡಾಕೂಟದ ಸ್ಫೂರ್ತಿ ಮತ್ತು ಸದಸ್ಯ ರಾಷ್ಟ್ರಗಳ ಸ್ಪರ್ಧಿಗಳ ವಿರುದ್ಧ ತಾರತಮ್ಯವನ್ನು ನಿಷೇಧಿಸುವ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಚೀನಾವನ್ನು ತರಾಟೆಗೆ ತೆಗೆದುಕೊಳ್ಳುತ್ತೇವೆ ಎಂದು ಭಾರತ ಹೇಳಿದೆ.

ಚೀನಾದ ಕ್ರಮದ ವಿರುದ್ಧ ನಮ್ಮ ಪ್ರತಿಭಟನೆಯ ಸಂಕೇತವಾಗಿ, ಭಾರತದ ಮಾಹಿತಿ ಮತ್ತು ಪ್ರಸಾರ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವರು ಚೀನಾಕ್ಕೆ ನಿಗದಿಯಾಗಿದ್ದ ಭೇಟಿಯನ್ನು ರದ್ದುಗೊಳಿಸಿದ್ದಾರೆ. ನಮ್ಮ ಹಿತಾಸಕ್ತಿಗಳನ್ನು ರಕ್ಷಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಹಕ್ಕನ್ನು ಭಾರತ ಸರ್ಕಾರ ಕಾಯ್ದಿರಿಸಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಡೀ ಅರುಣಾಚಲ ಪ್ರದೇಶ ಚೀನಾದ ವಾದವನ್ನು ತಿರಸ್ಕರಿಸಿದೆ: ಕೇಂದ್ರ ಸಚಿವ ಕಿರಣ್ ರಿಜಿಜು

ಅರುಣಾಚಲ ಪ್ರದೇಶದ ಕ್ರೀಡಾಪಟುಗಳಿಗೆ ವೀಸಾ ನಿರಾಕರಿಸುವ ಚೀನಾದ ನಿರ್ಧಾರವನ್ನು ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ಮಂಗಳವಾರ ಬಲವಾಗಿ ಖಂಡಿಸಿದ್ದಾರೆ. ರಾಜ್ಯದ ಜನರು ತಮ್ಮ ಭೂಮಿಯ ಮೇಲಿನ ಚೀನಾದ ಹಕ್ಕನ್ನು ದೃಢವಾಗಿ ವಿರೋಧಿಸುತ್ತದೆ. ಹೀಗಾಗಿ ಚೀನಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಗೆ (ಐಒಸಿ) ಕರೆ ನೀಡಿದರು.

ಹ್ಯಾಂಗ್ಝೌನಲ್ಲಿ ನಡೆಯಲಿರುವ 19 ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾಗವಹಿಸಬೇಕಿದ್ದ ಅರುಣಾಚಲ ಪ್ರದೇಶದ ನಮ್ಮ ವುಶು ಕ್ರೀಡಾಪಟುಗಳಿಗೆ ವೀಸಾ ನಿರಾಕರಿಸಿದ ಚೀನಾದ ಈ ಕ್ರಮವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಇದು ಕ್ರೀಡಾ ಸ್ಫೂರ್ತಿ ಮತ್ತು ಏಷ್ಯನ್ ಕ್ರೀಡಾಕೂಟದ ನಡವಳಿಕೆಯನ್ನು ನಿಯಂತ್ರಿಸುವ ನಿಯಮಗಳನ್ನು ಉಲ್ಲಂಘಿಸುತ್ತದೆ, ಇದು ಸದಸ್ಯ ರಾಷ್ಟ್ರಗಳ ಸ್ಪರ್ಧಿಗಳ ವಿರುದ್ಧ ತಾರತಮ್ಯವನ್ನು ಸ್ಪಷ್ಟವಾಗಿ ನಿಷೇಧಿಸುತ್ತದೆ” ಎಂದು ಅವರು ರಿಜಿಜು ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಅರುಣಾಚಲ ಪ್ರದೇಶವು ವಿವಾದಿತ ಪ್ರದೇಶವಲ್ಲ. ಅದು ಭಾರತದ ಅವಿಭಾಜ್ಯ ಅಂಗವಾಗಿದೆ. ಅರುಣಾಚಲ ಪ್ರದೇಶದ ಸಂಪೂರ್ಣ ಜನರು ತನ್ನ ಭೂಮಿ ಮತ್ತು ಜನರ ಮೇಲೆ ಚೀನಾದ ಯಾವುದೇ ಕಾನೂನುಬಾಹಿರ ಹಕ್ಕನ್ನು ದೃಢವಾಗಿ ವಿರೋಧಿಸುತ್ತಾರೆ. ಚೀನಾದ ಕಾನೂನುಬಾಹಿರ ಕ್ರಮವನ್ನು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ನಿಯಂತ್ರಿಸಬೇಕು ಎಂದು ಅವರು ಹೇಳಿದರು.

ಈ ವಿಷಯವನ್ನು ಎರಡೂ ಸರ್ಕಾರಗಳೊಂದಿಗೆ ತೆಗೆದುಕೊಳ್ಳಲಾಗುತ್ತಿದೆ: ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ

ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾದ ಹಂಗಾಮಿ ಅಧ್ಯಕ್ಷ ರಣಧೀರ್ ಸಿಂಗ್ ಪ್ರತಿಕ್ರಿಯೆ ನೀಡಿ, ಈ ವಿಷಯವನ್ನು ಆಯೋಜಕರ ಕಾರ್ಯಕಾರಿ ಗುಂಪಿನೊಂದಿಗೆ ಚರ್ಚಿಸಲಾಗುವುದು. ಎರಡೂ ದೇಶಗಳ ಸರ್ಕಾರಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ನಾವು ನಿನ್ನೆ ಕಾರ್ಯಕಾರಿ ಗುಂಪಿನೊಂದಿಗೆ ಸಭೆ ನಡೆಸಿದ್ದೇವೆ. ಅವರು ಇದನ್ನು ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ. ಇದು ನಮ್ಮೊಳಗೂ ಚರ್ಚೆಯಲ್ಲಿದೆ. ನಾವು ಅದರ ಒಸಿಎ ಕಡೆಯಿಂದ ಬಂದಿದ್ದೇವೆ. ನಾವು ಅದನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಏನಿದು ವಿವಾದ?

ಅರುಣಾಚಲ ಪ್ರದೇಶದ ವುಶು ಅಥ್ಲೀಟ್​​ಗಳು ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​​ಗಾಗಿ ಚೀನಾಕ್ಕೆ ಪ್ರಯಾಣಿಸಲು ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ. ನೈಮನ್ ವಾಂಗ್ಸು, ಒನಿಲು ಟೆಗಾ ಮತ್ತು ಮೆಪುಂಗ್ ಲಮ್ಗು ಅವರನ್ನೊಳಗೊಂಡ ಮೂವರು ತಂಡದ ಸದಸ್ಯರಿಗೆ ಚೀನಾ ಪ್ರವೇಶಕ್ಕೆ ಅವಕಾಶ ಸಿಗಲಿರಲಿಲ್ಲ. ಅವರು ದೆಹಲಿಯಲ್ಲೇ ಉಳಿದುಕೊಂಡಿದ್ದಾರೆ

ವರದಿಗಳ ಪ್ರಕಾರ, ಹ್ಯಾಂಗ್ಝೌ ​ ಏಷ್ಯನ್ ಗೇಮ್ಸ್ ಸಂಘಟನಾ ಸಮಿತಿಯು ಮೂವರು ಕ್ರೀಡಾಪಟುಗಳಿಗೆ ಮಾನ್ಯತಾ ಪತ್ರ ನೀಡಿದೆ. ಆದರೆ ಅವರ ಪತ್ರಗಳನ್ನು ಮೌಲ್ಯಮಾಪನಕ್ಕಾಗಿ ಡೌನ್ಲೋಡ್ ಮಾಡಲು ಸಾಧ್ಯವಾಗಲಿಲ್ಲ. ಇತರ ಕ್ರೀಡಾಪಟುಗಳಿಗೆ ಯಾವುದೇ ಸಮಸ್ಯೆ ಉಂಟಾಗಿಲ್ಲ. ಐಜಿಐ ವಿಮಾನ ನಿಲ್ದಾಣದಿಂದ ಬುಧವಾರ ರಾತ್ರಿ ಚೀನಾಕ್ಕೆ ತೆರಳಲು ಸಜ್ಜಾಗಿದ್ದ 11 ಸದಸ್ಯರ ವುಶು ತಂಡದ ಭಾಗವಾಗಿದ್ದರು ಅವರೆಲ್ಲರೂ.

ಏಷ್ಯನ್ ಗೇಮ್ಸ್ ಗಾಗಿ ಭಾರತದ ಚೆಫ್-ಡಿ-ಮಿಷನ್ ಭೂಪೇಂದ್ರ ಸಿಂಗ್ ಬಜ್ವಾ ಈ ವಿಷಯವನ್ನು ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾ ಮತ್ತು ಹ್ಯಾಂಗ್ ಝೌ ಏಷ್ಯನ್ ಗೇಮ್ಸ್ ಸಂಘಟನಾ ಸಮಿತಿಯ ಗಮನಕ್ಕೆ ತಂದರು. ಇದಕ್ಕೂ ಮುನ್ನ ಚೆಂಗ್ಡುವಿನಲ್ಲಿ ನಡೆಯಲಿರುವ ವಿಶ್ವ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಭಾಗವಹಿಸಲು 12 ಸದಸ್ಯರ ತಂಡ ಪ್ರಯಾಣಿಸುತ್ತಿದ್ದಾಗ ದೆಹಲಿಯ ಚೀನಾದ ರಾಯಭಾರ ಕಚೇರಿ ಮೂವರು ಕ್ರೀಡಾಪಟುಗಳಿಗೆ ಸ್ಟೇಪಲ್ಡ್ ವೀಸಾಗಳನ್ನು (ಅಧಿಕೃತ ಮುದ್ರೆಯೊತ್ತದ ಅನುಮತಿ ಪತ್ರ) ನೀಡಿತ್ತು. ಆ ಸಮಯದಲ್ಲಿ ಭಾರತವು ಬಲವಾದ ಪ್ರತಿಭಟನೆಯನ್ನು ದಾಖಲಿಸಿದ ನಂತರ ಪ್ರವಾಸ ರದ್ದುಗೊಳಿಸಲಾಯಿತು.

ಅರುಣಾಚಲ ಪ್ರದೇಶದ ಕ್ರೀಡಾಪಟುಗಳಿಗೆ ಈ ಹಿಂದೆಯೂ ಸ್ಟಾಂಪ್ ವೀಸಾ ನೀಡಲು ಚೀನಾ ನಿರಾಕರಿಸಿದೆ . 2011ರಲ್ಲಿ ಅರುಣಾಚಲ ಪ್ರದೇಶದ ಐವರು ಕರಾಟೆ ಪಟುಗಳಿಗೆ ಕ್ವಾನ್ಝೌನಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಲು ಸ್ಟೇಪಲ್ಡ್ ವೀಸಾ ನೀಡಲಾಗಿತ್ತು. ಏಪ್ರಿಲ್​​ನಲ್ಲಿ ಅರುಣಾಚಲ ಪ್ರದೇಶದ ಕೆಲವು ಸ್ಥಳಗಳ ಮರುನಾಮಕರಣವನ್ನು ಚೀನಾ ಸಾರಾಸಗಟಾಗಿ ತಿರಸ್ಕರಿಸಿತ್ತು.

ಚೀನಾದ ಹೊಸ ‘ಕಾನೂನುಬಾಹಿರ’ ನಕ್ಷೆ

ಈ ತಿಂಗಳ ಆರಂಭದಲ್ಲಿ, ಚೀನಾ ತನ್ನ ದೇಶದ ಹೊಸ ನಕ್ಷೆಯನ್ನು ಪ್ರಕಟಿಸಿ ಅರುಣಾಚಲ ಪ್ರದೇಶ ತನ್ನ ಭಾಗವೆಂದು ಹೇಳಿತ್ತು. ಇದು ಭಾರತವನ್ನು ಕೆರಳಿಸಿತ್ತು. ಚೀನಾದ ನೈಸರ್ಗಿಕ ಸಂಪನ್ಮೂಲ ಸಚಿವಾಲಯದ ವೆಬ್​ಸೈಟ್​ ಮತ್ತು ಅಲ್ಲಿನ ಗ್ಲೋಬಲ್ ಟೈಮ್ಸ್​ ಹೊಸ ನಕ್ಷೆಯನ್ನು ಹಂಚಿಕೊಂಡಿತ್ತು. ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಪ್ರದೇಶ, ತೈವಾನ್ ಮತ್ತು ದಕ್ಷಿಣ ಚೀನಾ ಸಮುದ್ರ ಪ್ರದೇಶದಗಳನ್ನು ತಮ್ಮ ಭೂಪ್ರದೇಶದ ಅಡಿಯಲ್ಲಿ ಸೇರಿಸಿಕೊಳ್ಳಲಾಗಿದೆ.

ಈ ನಕ್ಷೆಯನ್ನು ಯುನೈಟೆಡ್ ಸ್ಟೇಟ್ಸ್, ತೈವಾನ್ ಮತ್ತು ವಿಯೆಟ್ನಾಂ ಸೇರಿದಂತೆ ಹಲವಾರು ದೇಶಗಳು ವ್ಯಾಪಕವಾಗಿ ಟೀಕಿಸಿದವು. ಹಲವಾರು ಪ್ರತಿಭಟನೆಗಳ ಹೊರತಾಗಿಯೂ, ಚೀನಾ ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಆಧಾರರಹಿತ ಪ್ರಾದೇಶಿಕ ಹಕ್ಕುಗಳನ್ನು ಸ್ಥಾಪಿಸುವುದನ್ನು ಮುಂದುವರಿಸಿದೆ.

ಇದನ್ನೂ ಓದಿ : G20 Summit 2023: ಭಾರತ ಸೂಪರ್ ಪವರ್ ರಾಷ್ಟ್ರ, ಚೀನಾಕ್ಕಿಂತ ಮುಂದಿದೆ; ಆಫ್ರಿಕನ್ ಯೂನಿಯನ್ ಶ್ಲಾಘನೆ

ಏಪ್ರಿಲ್​ನಲ್ಲಿ ಅರುಣಾಚಲ ಪ್ರದೇಶದ 11 ಸ್ಥಳಗಳ ಹೆಸರುಗಳನ್ನು ಪ್ರಮಾಣೀಕರಿಸುವುದಾಗಿ ಚೀನಾ ಸರ್ಕಾರ ಹೇಳಿತ್ತು. ಆ ಸಮಯದಲ್ಲಿ, ಅರುಣಾಚಲ ಪ್ರದೇಶ ದಕ್ಷಿಣ ಟಿಬೆಟ್​ ಎಂದಿತ್ತು. ಅಲ್ಲಿನ ಸರ್ಕಾರವು ಜಾಂಗ್ನಾನ್ ಎಂದು ಹೇಳಿಕೊಂಡಿತ್ತು. ಇದಲ್ಲದೆ, ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಅರುಣಾಚಲ ಪ್ರದೇಶದ ರಾಜಧಾನಿ ಇಟಾನಗರಕ್ಕೆ ಹತ್ತಿರ ಪಟ್ಟಣವೊಂದನ್ನು ನಿರ್ಮಿಸಿದೆ.

ಇತ್ತ , ಅರುಣಾಚಲ ಪ್ರದೇಶ ಎಂದೆಂದಿಗೂ ಭಾರತ ಅವಿಭಾಜ್ಯ ಅಂಗ ಎಂದು ಹೇಳಿದೆ ನವದೆಹಲಿಯಲ್ಲಿ ನಡೆಯಲಿರುವ ಬಹುನಿರೀಕ್ಷಿತ ಜಿ 20 ಶೃಂಗಸಭೆಗೆ ಸುಮಾರು ಹತ್ತು ದಿನಗಳ ಮೊದಲು ಭಾರತ ಮತ್ತೊಂದು ಬಾರಿ ಇದನ್ನು ದೃಢಪಡಿಸಿತ್ತು.

Continue Reading

EXPLAINER

ವಿಸ್ತಾರ Explainer: ಕೆನಡಾದ ಜಸ್ಟಿನ್‌ ಟ್ರುಡೋ ಸರ್ಕಾರ ಖಲಿಸ್ತಾನಿಗಳಿಗೆ ಬೆಂಬಲ ನೀಡುತ್ತಿರುವುದೇಕೆ? ಇಲ್ಲಿದೆ ಇನ್‌ಸೈಡ್‌ ಸ್ಟೋರಿ!

ವಿಸ್ತಾರ Explainer: ಭಾರತ ಹಾಗೂ ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ತಾರಕಕ್ಕೇರಿದೆ. ಭಾರತದ ವಿರುದ್ಧ ಕೆನಡಾ ಆರೋಪ ಮಾಡುವುದು, ಭಾರತದ ರಾಯಭಾರಿಯನ್ನು ಉಚ್ಚಾಟಿಸುವುದು ಸೇರಿ ಹಲವು ಉದ್ಧಟತನ ಮಾಡುತ್ತಿದೆ. ಇದಕ್ಕೆ ಭಾರತವೂ ತಕ್ಕ ತಿರುಗೇಟು ನೀಡುತ್ತಿದೆ. ಆದರೆ, ಬಿಕ್ಕಟ್ಟಿನ ಹಿಂದೆ ಏನಿದೆ ಕಾರಣ?

VISTARANEWS.COM


on

Edited by

Narendra Modi Justin Turdeau And Narendra Modi
Koo

“ಕೆನಡಾದಲ್ಲಿರುವ ಭಾರತ ವಿರೋಧಿ ಚಟುವಟಿಕೆಗಳನ್ನು ನಿಗ್ರಹಿಸಿ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳವವರೆಗೆ ಭಾರತ ಹಾಗೂ ಕೆನಡಾ ಮಧ್ಯೆ ಎಲ್ಲವೂ ಚೆನ್ನಾಗಿತ್ತು. ಖುಷಿಯಿಂದಲೇ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಭಾರತದ ಆತಿಥ್ಯ ಸ್ವೀಕರಿಸಿದ್ದರು. ಆದರೆ, ಯಾವಾಗ ಮೋದಿ ಅವರು ಭಾರತ ವಿರೋಧಿ ಚಟುವಟಿಕೆಗಳು ಎಂದರೋ, ಆಗ ಜಸ್ಟಿನ್‌ ಟ್ರುಡೋ ವಿಚಲಿತರಾದರು. ವಿಮಾನ ಕೆಟ್ಟು ನಿಂತಾಗ ಭಾರತದ ವಿಐಪಿ ಕೋಣೆಗಳಲ್ಲಿ ಇರಿ ಎಂದರೆ ಒಲ್ಲೆ ಎಂದರು. ನಮ್ಮದೇ ದೇಶದ ವಿಮಾನದಲ್ಲಿ (ಏರ್‌ ಇಂಡಿಯಾ ಒನ್)‌ ಕೆನಡಾಗೆ ತೆರಳಿ ಎಂದಾಗಲೂ ಜಸ್ಟಿನ್‌ ಟ್ರುಡೋ ಬೇಡ ಎಂದು ತಲೆ (ವಿಸ್ತಾರ Explainer) ಅಲ್ಲಾಡಿಸಿದರು.

ಭಾರವಾದ ಮನಸ್ಸಿನಿಂದ ಭಾರತದಿಂದ ಹಿಂತಿರುಗಿದ ಕೆಲವೇ ದಿನಗಳಲ್ಲಿ ಭಾರತದ ಜತೆ ನಡೆಯಬೇಕಿದ್ದ ವ್ಯಾಪಾರ ಒಪ್ಪಂದವನ್ನು ಕೆನಡಾ ರದ್ದುಪಡಿಸಿತು. ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನು ಉಚ್ಚಾಟಿಸಿತು. ಭಾರತದ ವಿರುದ್ಧ ಹಲವು ಆರೋಪ ಮಾಡಿತು. ಜಮ್ಮು-ಕಾಶ್ಮೀರ, ಮಣಿಪುರದಲ್ಲಿ ಹಿಂಸೆ ನಡೆಯುತ್ತಿದೆ, ಅಲ್ಲಿಗೆ ತೆರಳಬೇಡಿ ಎಂದು ಭಾರತದಲ್ಲಿರುವ ಕೆನಡಾ ನಾಗರಿಕರಿಗೆ ಸೂಚಿಸಿತು. ಹಾಗಾದರೆ, ಭಾರತದ ಮೇಲೆ ಕೆನಡಾ ಇಷ್ಟೊಂದು ಮುರಕೊಂಡು ಬೀಳಲು ಕಾರಣವೇನು? ನರೇಂದ್ರ ಮೋದಿ ಅವರು “ಭಾರತ ವಿರೋಧಿ ಚಟುವಟಿಕೆ” ಎಂದು ಹೇಳಿದ್ದು ಜಸ್ಟಿನ್‌ ಟ್ರುಡೋ ಅವರಿಗೇಕೆ ಅಷ್ಟೊಂದು ಆಳವಾಗಿ ನಾಟಿತು? ಜಸ್ಟಿನ್‌ ಟ್ರುಡೋ ಅವರೇಕೆ ಖಲಿಸ್ತಾನಿಗಳ ಪರ ನಿಲ್ಲುತ್ತಿದ್ದಾರೆ? ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಪರೋಕ್ಷವಾಗಿ ಸೂಚಿಸಿದರೂ ಏಕೆ ಜಸ್ಟಿನ್‌ ಟ್ರುಡೋ ಕೆರಳಿ ಕೆಂಡವಾಗಿದ್ದಾರೆ? ಇದರ ಹಿಂದೆ ಯಾವ ರಾಜಕೀಯ, ಅಧಿಕಾರದ ದಾಹ ಅಡಗಿದೆ? ಅಷ್ಟಕ್ಕೂ, ಖಲಿಸ್ತಾನಿಗಳ ಬೆಂಬಲ ಇಲ್ಲದಿದ್ದರೆ ಜಸ್ಟಿನ್‌ ಟ್ರುಡೋ ಅಧಿಕಾರವನ್ನೇ ಕಳೆದುಕೊಳ್ಳಲಿದ್ದಾರೆಯೇ? ಇಲ್ಲಿದೆ ಮಾಹಿತಿ.

ಖಲಿಸ್ತಾನಿ ಪಕ್ಷದ ಬೆಂಬಲವೇ ಜಸ್ಟಿನ್‌ ಟ್ರುಡೋ ಬಲ

ಒಂದೇ ಮಾತಿನಲ್ಲಿ ಹೇಳುವುದಾದರೆ, ಜಸ್ಟಿನ್‌ ಟ್ರುಡೋ ಸರ್ಕಾರ ನಿಂತಿರುವುದೇ ಖಲಿಸ್ತಾನಿಗಳ ಪರವಾಗಿರುವ ಪಕ್ಷದ ಬೆಂಬಲದ ಮೇಲೆ. ಹೌದು, 2021ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಜಸ್ಟಿನ್‌ ಟ್ರುಡೋ ಅವರ ಲಿಬರಲ್‌ ಪಕ್ಷವು ಬಹುಮತ ಪಡೆದು ಅಧಿಕಾರ ಪಡೆದಿಲ್ಲ. ಮ್ಯಾಜಿಕ್‌ ನಂಬರ್‌ ಆದ 170 ಸೀಟುಗಳ ಬದಲು ಜಸ್ಟಿನ್‌ ಟ್ರುಡೋ ಅವರ ಪಕ್ಷವು 157 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆಗ, ಖಲಿಸ್ತಾನಿಗಳ ಪರ ಒಲವಿರುವ, ಜಗಮೀತ್‌ ಸಿಂಗ್‌ ನೇತೃತ್ವದ ನ್ಯೂ ಡೆಮಾಕ್ರಟಿಕ್‌ ಪಕ್ಷವು ಜಸ್ಟಿನ್‌ ಟ್ರುಡೋ ಅವರಿಗೆ ಬೆಂಬಲ ಸೂಚಿಸಿತು. ಜಗಮೀತ್‌ ಸಿಂಗ್‌ ತನ್ನ ಪಕ್ಷದ 25 ಸಂಸದರ ಬೆಂಬಲವನ್ನು ಜಸ್ಟಿನ್‌ ಟ್ರುಡೋ ಅವರಿಗೆ ಘೋಷಿಸಿದ. 182 ಸಂಸದರ ಬಲದೊಂದಿಗೆ ಜಸ್ಟಿನ್‌ ಟ್ರುಡೋ ಕೆನಡಾ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು. ಈಗ ನರೇಂದ್ರ ಮೋದಿ ಅವರ ಕರೆಗೆ ಓಗೊಟ್ಟು ಕೆನಡಾದಲ್ಲಿರುವ ಖಲಿಸ್ತಾನಗಳ ವಿರುದ್ಧ ಕ್ರಮ ತೆಗೆದುಕೊಂಡರೆ, ಖಲಿಸ್ತಾನ ಚಳವಳಿ ಹಿನ್ನೆಲೆಯ ಜಗಮೀತ್‌ ಸಿಂಗ್‌ ಪಕ್ಷವು ಬೆಂಬಲ ವಾಪಸ್‌ ಪಡೆಯುತ್ತದೆ. ಆಗ, ಜಸ್ಟಿನ್‌ ಟ್ರುಡೋ ಅಧಿಕಾರ ಕಳೆದುಕೊಳ್ಳುತ್ತಾರೆ.

ಯಾರು ಈ ಜಗಮೀತ್‌ ಸಿಂಗ್?‌

ಪಂಜಾಬ್‌ ಮೂಲದ ದಂಪತಿಗೆ ಕೆನಡಾದ ಒಂಟಾರಿಯೋದ ಸ್ಕಾರ್‌ಬೊರಫ್‌ನಲ್ಲಿ 1979ರಲ್ಲಿ ಜನಿಸಿದ ಜಗಮೀತ್‌ ಸಿಂಗ್‌ ಈಗ ಕೆನಡಾದ ಮೂರನೇ ಅತಿದೊಡ್ಡ ಪಕ್ಷದ ನಾಯಕನಾಗಿದ್ದಾನೆ. ವಕೀಲನಾಗಿ ವೃತ್ತಿ ಆರಂಭಿಸಿ, ಕೆನಡಾದಲ್ಲಿರುವ ಸಿಖ್‌ ಸಮುದಾಯದ ನಾಯಕನಾಗಿ, ಶಾಸಕನಾಗಿ, ಸಂಸದನಾಗಿ, ಖಲಿಸ್ತಾನ ಪರ ಹೋರಾಟಕ್ಕೆ ಬೆಂಬಲ ಸೂಚಿಸಿ ಈಗ ಸರ್ಕಾರದ ಭಾಗವೇ ಆಗಿದ್ದಾನೆ. ಅಷ್ಟೇ ಅಲ್ಲ, ಜಸ್ಟಿನ್‌ ಟ್ರುಡೋ ಅವರಿಗೇ ಆಗಾಗ ತನ್ನ ಬೇಡಿಕೆಗಳನ್ನು ಇಡುತ್ತ, ಅವುಗಳನ್ನು ಈಡೇರಿಸಿಕೊಳ್ಳುತ್ತ, ಪರೋಕ್ಷವಾಗಿ ಖಲಿಸ್ತಾನಿಗಳಿಗೆ ಬೆಂಬಲಿಸುತ್ತ ‘ಪವರ್‌ ಕಂಟ್ರೋಲರ್’‌ ಆಗಿ ಹೊರಹೊಮ್ಮಿದ್ದಾನೆ.

ಭಾರತದಲ್ಲಿ ಖಲಿಸ್ತಾನ ವಿಷ ಬೀಜ ಬಿತ್ತಿದ ಭಿಂದ್ರನ್‌ವಾಲೆಯ ಪೋಸ್ಟರ್‌ಗಳುಳ್ಳ ಖಲಿಸ್ತಾನಿ ಹೋರಾಟದಲ್ಲಿ ಜಗಮೀತ್‌ ಸಿಂಗ್‌ ಭಾಗವಹಿಸುತ್ತಾನೆ. ಆ ಮೂಲಕ ಖಲಿಸ್ತಾನಿ ಹೋರಾಟಕ್ಕೆ ಬೆಂಬಲ ಸೂಚಿಸುತ್ತಾನೆ. ಕೃಷಿ ಕಾಯ್ದೆಗಳ ವಿರುದ್ಧ ಭಾರತದಲ್ಲಿ ನಡೆದ ಪ್ರತಿಭಟನೆಯ ಹಿಂದೆ ಖಲಿಸ್ತಾನಿಗಳ ಕೈವಾಡ ಇದೆ ಎಂಬ ಮಾಹಿತಿ ಹರಿದಾಡುತ್ತಲೇ, ಭಾರತದ ರೈತರ ಪರ ಕಾಳಜಿ ತೋರುತ್ತಾನೆ. ಅವಕಾಶ ಸಿಕ್ಕಾಗಲೆಲ್ಲ ಭಾರತ ವಿರೋಧಿ ಮನಸ್ಥಿತಿ ತೋರುತ್ತಾನೆ. ಅಷ್ಟೇ ಏಕೆ, 2013ರಲ್ಲಿ ಈತ ಪಂಜಾಬ್‌ಗೆ ಆಗಮಿಸುತ್ತಾನೆ ಎಂದಾಗ ಆಗಿನ ಯುಪಿಎ ಸರ್ಕಾರವು ಈತನಿಗೆ ವೀಸಾ ನೀಡಿರಲಿಲ್ಲ.

ಜಸ್ಟಿನ್‌ ಟ್ರುಡೋ ಹಾಗೂ ಜಗಮೀತ್‌ ಸಿಂಗ್

ಇದನ್ನೂ ಓದಿ: India Canada Row: ಏಟಿಗೆ ಎದುರೇಟು; ಕೆನಡಾದಲ್ಲಿರುವ ಭಾರತೀಯರಿಗೆ ಕೇಂದ್ರ ಅಡ್ವೈಸರಿ

ಜಸ್ಟಿನ್‌ ಟ್ರುಡೋಗೆ ಅಧಿಕಾರವೇ ಮುಖ್ಯ

ತಂದೆಯ (ಪಿಯರ್‌ ಟ್ರುಡೋ) ಕಾಲದಿಂದಲೂ ಕೆನಡಾ ಅಧಿಕಾರದ ಪಡಸಾಲೆಯಲ್ಲಿ ಓಡಾಡಿಕೊಂಡಿರುವ ಜಸ್ಟಿನ್‌ ಟ್ರುಡೋ ಅವರಿಗೆ ಈಗ ಅಧಿಕಾರವೇ ಮುಖ್ಯ. ಯಾವುದೇ ಪಕ್ಷಕ್ಕೆ ಅಧಿಕಾರವೇ ಮುಖ್ಯವಾದರೂ, ಆ ಪಕ್ಷ ಯಾವ ನೀತಿಗಳ ಆಧಾರದ ಮೇಲೆ ನಿಲ್ಲುತ್ತದೆ ಎಂಬುದು ಮುಖ್ಯವಾಗುತ್ತದೆ. ಆದರೆ, ಖಲಿಸ್ತಾನಿಗಳಿಗೆ ಬೆಂಬಲ ನೀಡುವುದು ಪಿಯರ್‌ ಟ್ರುಡೋ ಕಾಲದಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ಈ ಸಂಪ್ರದಾಯವನ್ನು ಮುರಿಯುವುದು, ಮುರಿದು ಅಧಿಕಾರ ಕಳೆದುಕೊಳ್ಳುವುದು ಜಸ್ಟಿನ್‌ ಟ್ರುಡೋ ಅವರಿಗೆ ಸುತಾರಾಂ ಇಷ್ಟವಿಲ್ಲ. ಹಾಗಾಗಿಯೇ, ಜೂನ್‌ನಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಗೀಡಾಗಿದ್ದಕ್ಕೆ ಸೆಪ್ಟೆಂಬರ್‌ನಲ್ಲಿ ಭಾರತದ ವಿರುದ್ಧ ಮಾತನಾಡಿದರು. ಭಾರತ ವಿರೋಧಿ ಚಟುವಟಿಕೆ ನಿಯಂತ್ರಿಸಿ ಎಂದಿದ್ದಕ್ಕೇ ಭಾರತದ ರಾಯಭಾರಿಯನ್ನು ವಜಾಗೊಳಿಸಿದರು. ಈಗ ಭಾರತದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನೆನಪಿರಲಿ, 1982ರಲ್ಲಿ ಕೆನಡಾ ಪ್ರಧಾನಿಯಾಗಿದ್ದ ಪಿಯರ್‌ ಟ್ರುಡೋ, ಉಗ್ರ ತಲವಿಂದರ್‌ ಪಾರ್ಮರ್‌ನನ್ನು ಭಾರತಕ್ಕೆ ಹಸ್ತಾಂತರಿಸಲು ಒಪ್ಪಿರಲಿಲ್ಲ.

ಭಾರತ ವಿರುದ್ಧ ಜಸ್ಟಿನ್‌ ಟ್ರುಡೋ ಆರೋಪ

ಇದನ್ನೂ ಓದಿ: India Canada Row: ಕೆನಡಾಗೆ ಭಾರತ ಮತ್ತೊಂದು ಗುದ್ದು; ವೀಸಾ ಸೇವೆಯೇ ರದ್ದು

ಹೇಗಿದೆ ಭಾರತ-ಕೆನಡಾ ಸಂಬಂಧ?

ಕೆನಡಾದಲ್ಲಿ ಭಾರತೀಯ ಮೂಲದ 14 ಲಕ್ಷ ಜನ ವಾಸಿಸುತ್ತಿದ್ದಾರೆ. ಸುಮಾರು 2.26 ಲಕ್ಷ ವಿದ್ಯಾರ್ಥಿಗಳು ಕೆನಡಾದಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಭಾರತ ಹಾಗೂ ಕೆನಡಾ ಮಧ್ಯೆ 8 ಶತಕೋಟಿಗೂ ಅಧಿಕ ಡಾಲರ್‌ ಮೊತ್ತದ ವ್ಯಾಪಾರ ಇದೆ. ಭಾರತವು 4 ಶತಕೋಟಿ ಡಾಲರ್‌ ಮೊತ್ತದ ಉತ್ಪನ್ನಗಳನ್ನು ಕೆನಡಾಗೆ ರಫ್ತು ಮಾಡುತ್ತದೆ. ಕೆನಡಾ ಭಾರತಕ್ಕೆ 4 ಶತಕೋಟಿ ಡಾಲರ್‌ ಮೊತ್ತದ ಉತ್ಪನ್ನಗಳನ್ನು ರಫ್ತು ಮಾಡುತ್ತದೆ. ಇಷ್ಟಿದ್ದರೂ 2010ಕ್ಕಿಂತ ಮೊದಲಿನಿಂದಲೂ ಭಾರತ ಹಾಗೂ ಕೆನಡಾ ವ್ಯಾಪಾರ ಸಂಬಂಧವು ಅಷ್ಟಕ್ಕಷ್ಟೇ ಇದೆ. 2010ರಿಂದಲೂ ಬೃಹತ್‌ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲು ಮಾತುಕತೆ ನಡೆಸಲಾಗುತ್ತಿದೆ. ಆದರೆ, ಇತ್ತೀಚೆಗೆ ಒಪ್ಪಂದ ಮಾಡಿಕೊಳ್ಳಲು ಎರಡೂ ದೇಶ ಒಪ್ಪಿಕೊಂಡಿದ್ದವು. ಈಗ ಜಸ್ಟಿನ್‌ ಟ್ರುಡೋ ಅವರ ಅಧಿಕಾರದ ದಾಹದಿಂದಾಗಿ ಒಪ್ಪಂದವನ್ನು ಮುಂದೂಡಲಾಗಿದೆ. ಭಾರತ ಕೂಡ ಸರಿಯಾಗಿಯೇ ತಿರುಗೇಟು ನೀಡಿರುವುದರಿಂದ ಶೀಘ್ರದಲ್ಲಿ ಒಪ್ಪಂದ ಮಾಡಿಕೊಳ್ಳುವ ಲಕ್ಷಣಗಳೂ ಕಾಣಿಸುತ್ತಿಲ್ಲ.

Continue Reading

EXPLAINER

Parliament Dress Code : ಮೋದಿ ಉದ್ಘಾಟಿಸಿದ ಸಂಸತ್‌ ಭವನದ ಸಿಬ್ಬಂದಿಗೆ ‘ಕಮಲ’ ಸಮವಸ್ತ್ರ; ಇದರ ಉದ್ದೇಶವೇನು?

ನೂತನ ಸಂಸತ್ ಭವನದ ಸಿಬ್ಬಂದಿಗಾಗಿ ವಿನ್ಯಾಸ ಮಾಡಲಾದ ಸಮವಸ್ತ್ರ (Parliament Dress Code) ಸಣ್ಣ ಕಿಡಿಯೊಂದನ್ನು ಹಚ್ಚಿದೆ. ಇದು ಬಿಜೆಪಿಯ ಕಿತಾಪತಿ ಎಂಬುದಾಗಿ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

VISTARANEWS.COM


on

Parliament Dress Code
Koo

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಅವರು ಇತ್ತೀಚೆಗೆ ಉದ್ಘಾಟನೆ ಮಾಡಿದ್ದ ನೂತನ ಸಂಸತ್​ ಭವನದಲ್ಲಿ ಮಂಗಳವಾರದಿಂದ (ಸೆಪ್ಟೆಂಬರ್​ 19) ಸಂಸತ್​ ಕಲಾಪಗಳು ನಡೆಯಲಿವೆ. ಅಚ್ಚುಕಟ್ಟಾಗಿ ಹಾಗೂ ಅತ್ಯಾಧುನಿಕವಾಗಿ ನಿರ್ಮಾಣಗೊಂಡಿರುವ ಸಂಸತ್ ಭವನಕ್ಕೆ ಹೋದ ಬಳಿಕ ಸಂಪೂರ್ಣ ಚಿತ್ರಣವೇ ಬದಲಾಗಲಿದೆ. ಸಂಸತ್​ ಸದಸ್ಯರು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿದರೆ ಮಿಕ್ಕೆಲ್ಲವೂ ಹೊಸತು. ಏತನ್ಮಧ್ಯೆ, ಅಲ್ಲಿನ ಸಿಬ್ಬಂದಿಗಾಗಿ ವಿನ್ಯಾಸ ಮಾಡಲಾದ ಸಮವಸ್ತ್ರ (Parliament Dress Code) ಸಣ್ಣ ಕಿಡಿಯೊಂದನ್ನು ಹಚ್ಚಿದೆ. ಇದು ಬಿಜೆಪಿಯ ಕಿತಾಪತಿ ಎಂಬುದಾಗಿ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಹಾಗಾದರೆ ಏನಿದು ವಿವಾದ? ಪ್ರತಿಪಕ್ಷಗಳು ಏಕೆ ವಿರೋಧವೇಕೆ ? ಯಾವ ಸಿಬ್ಬಂದಿಗೆ ಯಾವ ಉಡುಪು ಎಂಬುದರ ಮಾಹಿತಿ ಇಲ್ಲಿದೆ.

ಪ್ರತಿಪಕ್ಷಗಳಿಗೆ ಕೋಪ ಯಾಕೆ?

ಸಂಸತ್‌ ಭವನದ ಪರಿಚಾರಕರು, ಪರಿಚಾರಕಿಯರು, ಸೆಕ್ಯುರಿಟಿ ಸಿಬ್ಬಂದಿ, ವಾಹನಗಳ ಚಾಲಕರು, ಮಾರ್ಷಲ್‌ಗಳು ಸೇರಿ ಹಲವು ಸಿಬ್ಬಂದಿಗೆ ಕೇಂದ್ರ ಸರ್ಕಾರವು ಕೆಂಪು, ಕಂದು, ಖಾಕಿ ಸೇರಿ ಹಲವು ಬಣ್ಣದ, ವಿಧವಿಧದ ಸಮವಸ್ತ್ರಗಳನ್ನು ನೀಡಲು ಮುಂದಾಗಿದೆ. ಆದರೆ, ಸಿಬ್ಬಂದಿಯ ಸಮವಸ್ತ್ರದ ಮೇಲೆ ಬಿಜೆಪಿಯ ಪಕ್ಷದ ಚಿಹ್ನೆಯಾದ ‘ಕಮಲ’ ಇರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ಸಮವಸ್ತ್ರದ ಮೇಲೆ ಕಮಲದ ಚಿತ್ರಗಳು

“ಸಂಸತ್‌ ಸಿಬ್ಬಂದಿ ಸಮವಸ್ತ್ರದ ಮೇಲೆ ಕಮಲದ ಚಿಹ್ನೆ ಏಕೆ ಮುದ್ರಿಸಲಾಗಿದೆ? ರಾಷ್ಟ್ರೀಯ ಪ್ರಾಣಿ ಹುಲಿ ಅಥವಾ ರಾಷ್ಟ್ರೀಯ ಪಕ್ಷ ನವಿಲಿನ ಚಿಹ್ನೆ ಏಕಿಲ್ಲ” ಎಂದು ಲೋಕಸಭೆಯಲ್ಲಿ ಕಾಂಗ್ರೆಸ್‌ ಸಚೇತಕ ಮಾಣಿಕಂ ಟ್ಯಾಗೋರ್‌ ಪ್ರಶ್ನಿಸಿದ್ದಾರೆ. ಕಾಂಗ್ರೆಸ್‌ನ ಹಲವು ನಾಯಕರು ಸ್ಪೀಕರ್‌ ಓಂ ಬಿರ್ಲಾ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳಾ ಸಿಬ್ಬಂದಿಯ ಸಮವಸ್ತ್ರ

ವೈವಿಧ್ಯಮಯ ಸಮವಸ್ತ್ರ

ಸಂಸತ್‌ ಸಿಬ್ಬಂದಿಗೆ ಕೇಂದ್ರ ಸರ್ಕಾರವು ವೈವಿಧ್ಯಮಯ ಸಮವಸ್ತ್ರಗಳನ್ನು ನೀಡಲು ಮುಂದಾಗಿದೆ. ಖಾಕಿ ಪೈಜಾಮ, ಕ್ರೀಮ್‌ ಬಣ್ಣದ ಜಾಕೆಟ್‌ಗಳು, ಕ್ರೀಮ್‌ ಟಿಶರ್ಟ್‌ಗಳು (ಇವುಗಳ ಮೇಲೆ ಗುಲಾಬಿ ಬಣ್ಣದ ಕಮಲದ ಚಿತ್ರಗಳಿವೆ) ಪುರುಷರಿಗಾಗಿ ನೀಡಲಾಗುತ್ತಿದೆ. ಇನ್ನು ಮಹಿಳಾ ಸಿಬ್ಬಂದಿಯು ಬ್ರೈಟ್‌ ಕಲರ್‌ ಸೀರೆ, ಜಾಕೆಟ್‌ಗಳನ್ನು ನೀಡಲಾಗುತ್ತಿದೆ. ಹಾಗೆಯೇ, ಮಾರ್ಷಲ್‌ಗಳಿಗೆ ರುಮಾಲು ನೀಡಲಾಗುತ್ತದೆ. ಅಷ್ಟೇ ಅಲ್ಲ, ಅಧಿಕಾರಿಗಳು ಕೆನ್ನೇರಳೆ ಅಥವಾ ಗಾಢ ಗುಲಾಬಿಯ ನೆಹರು ಜಾಕೆಟ್‌ ಧರಿಸಲಿದ್ದಾರೆ.

ಮಹಿಳೆಯರು ಹಾಗೂ ಪುರುಷ ಸೆಕ್ಯುರಿಟಿ ಗಾರ್ಡ್‌ಗಳ ಉಡುಪು

ಅಧಿಕಾರಿಗಳ ಪ್ರಕಾರ ಸಿಬ್ಬಂದಿಯ ಸಮವಸ್ತ್ರಗಳಿಗೆ ಹೊಸ ವಿನ್ಯಾಸಗಳನ್ನು ಸೂಚಿಸಲು ಎಲ್ಲಾ 18 ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿಗಳ (ಎನ್‌ಐಎಫ್‌ಟಿ) ಬಳಿ ಕೇಳಲಾಯಿತು. ತಜ್ಞರ ಸಮಿತಿಯು ಆ ಪ್ರಸ್ತಾವನೆಗಳಿಂದ ಹೊಸ ಸಮವಸ್ತ್ರವನ್ನು ಅಂತಿಮಗೊಳಿಸಿತು. ಸಂಸತ್ತಿನ ಸೆಕ್ರೆಟರಿಯೇಟ್‌ನ ಎಲ್ಲಾ ಐದು ಪ್ರಮುಖ ಶಾಖೆಗಳಾದ ವರದಿಗಾರಿಕೆ, ಟೇಬಲ್ ಆಫೀಸ್, ನೋಟಿಸ್ ಆಫೀಸ್, ಶಾಸಕಾಂಗ ಶಾಖೆ ಮತ್ತು ಭದ್ರತೆಯ ಅಧಿಕಾರಿಗಳು ಈ ಅಧಿವೇಶನದಲ್ಲಿ ಮಾರ್ಷಲ್‌ಗಳಂತೆ ಹೊಸ ಸಮವಸ್ತ್ರಗಳನ್ನು ಧರಿಸುತ್ತಾರೆ. ಈ ಶಾಖೆಗಳು ಸಂಸದರು ಮತ್ತು ಇತರ ಸಂದರ್ಶಕರೊಂದಿಗೆ ವ್ಯವಹರಿಸುತ್ತವೆ. ಅವರ ಸಮವಸ್ತ್ರಗಳು ಭಾರತೀಯ ಸಂಸತ್ತಿನ ಘನತೆ ಮತ್ತು ಗ್ಲಾಮರ್ ಅನ್ನು ಹೆಚ್ಚಿಸಲಿವೆ ಎನ್ನಲಾಗಿದೆ.

ಪುರುಷ ಮಾರ್ಷಲ್‌ಗಳ ದಿರಸು

ಇದನ್ನೂ ಓದಿ: Special Parliament session: ಹೊಸ ಸಂಸತ್ತಿನಲ್ಲಿ ಸಿಬ್ಬಂದಿಗೆ ಹೊಸ ʼಭಾರತೀಯʼ ಸಮವಸ್ತ್ರ; ಏನೇನು ಬದಲಾವಣೆ?

ಸೆಪ್ಟೆಂಬರ್ 18ರಿಂದ 22ರವರೆಗೆ ನಿಗದಿಯಾಗಿರುವ ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನವು ಬಹುತೇಕ ಹೊಸ ಸಂಸತ್‌ ಕಟ್ಟಡದಲ್ಲಿ ನಡೆಯಲಿದೆ. ಅಧಿವೇಶನದ ಮೊದಲ ದಿನ ಹಳೆ ಕಟ್ಟಡದಲ್ಲಿ ನಡೆದರೆ, ಉಳಿದ ಭಾಗ ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ನೂತನ ಕಟ್ಟಡದಲ್ಲಿ ನಡೆಯಲಿದೆ. ಕಲಾಪಕ್ಕೆ ಹೊಸ ಕಟ್ಟಡ ಪೂರ್ತಿ ಸಜ್ಜಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
Malayalam Film 2018
South Cinema4 mins ago

Oscars 2024: ‘ಆಸ್ಕರ್‌’ಗೆ ಪ್ರವೇಶ ಪಡೆದ ಮಲಯಾಳಂ ಸಿನಿಮಾ; ನೀವೂ ಇದನ್ನು ನೋಡಿರುತ್ತೀರಿ!

Mulayam Singh Yadav Statue
ದೇಶ11 mins ago

Mulayam Singh Yadav: ಮುಲಾಯಂ ಸಿಂಗ್‌ ಮೂರ್ತಿ ತೆರವು; ಯೋಗಿ ನಾಡಲ್ಲಿ ರೂಲ್ಸ್‌ ಎಂದರೆ ರೂಲ್ಸ್!

Parineeti Chopra with Raghav
ಬಾಲಿವುಡ್13 mins ago

Parineeti Chopra: ‘ಓ ಪ್ರಿಯಾ’; ಪತಿಗಾಗಿ ವಿಶೇಷ ಹಾಡು ರೆಕಾರ್ಡ್‌ ಮಾಡಿದ ಪರಿಣಿತಿ ಚೋಪ್ರಾ!

demat account
ಮನಿ ಗೈಡ್13 mins ago

Demat Account: ಡಿಮ್ಯಾಟ್ ಖಾತೆದಾರರಿಗೆ ಗುಡ್‌ ನ್ಯೂಸ್:‌ ನಾಮಿನಿ ಘೋಷಣೆಗೆ ಸಮಯ ವಿಸ್ತರಣೆ

HD Kumaraswamy Press meet vs congress government
ಕರ್ನಾಟಕ19 mins ago

BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್‌: ಎಚ್.ಡಿ. ಕುಮಾರಸ್ವಾಮಿ ಕಿಡಿ

ODI AUS
Live News38 mins ago

ind vs Aus : ಮೂರನೇ ಏಕ ದಿನ ಪಂದ್ಯ; ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದಿಂದ ಬ್ಯಾಟಿಂಗ್ ಆಯ್ಕೆ

Madhya Pradesh Rape News
ಕ್ರೈಂ50 mins ago

ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!

CM siddaramaiah at Chamarajanagar
ಕರ್ನಾಟಕ1 hour ago

CM Siddaramaiah: CWRC ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ ಎಂದ ಸಿದ್ದರಾಮಯ್ಯ

Google
EXPLAINER1 hour ago

ವಿಸ್ತಾರ Explainer: Google Birthday: ಗೂಗಲ್‌ನ 25 ವರ್ಷದ ಇತಿಹಾಸ ಹೇಗಿತ್ತು? ಒಂದು ನೋಟ ಇಲ್ಲಿದೆ

HD DeveGowda HD Kumaraswamy and PM Narendra Modi on BJP JDS alliance
ಕರ್ನಾಟಕ1 hour ago

BJP JDS alliance : ವಿಜಯದಶಮಿ ನಂತರ ಜೆಡಿಎಸ್‌ ಸೀಟು ಹಂಚಿಕೆ ಅಂತಿಮ ಮಾತುಕತೆ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

bangalore bandh
ಕರ್ನಾಟಕ1 day ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

dina bhavishya
ಪ್ರಮುಖ ಸುದ್ದಿ9 hours ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ2 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ2 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ3 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌