Site icon Vistara News

VISTARA TOP 10 NEWS : ಜಾತಿ ಗಣತಿಗೆ ಮೋದಿ ವಿರೋಧ, ಶಿವಮೊಗ್ಗದಲ್ಲಿ ಪೊಲೀಸರಿಗೇ ಬೆದರಿಕೆ ಹಾಕಿದ್ದ ಕಿಡಿಗೇಡಿಗಳು ಮತ್ತಿತರ ದಿನದ ಪ್ರಮುಖ ಸುದ್ದಿಗಳು

Top 10 news

1. ಜಾತಿ ಗಣತಿಯಿಂದ ಹಿಂದೂಗಳಲ್ಲಿ ಒಡಕು ಮೂಡಿಸುತ್ತಿರುವ ಕಾಂಗ್ರೆಸ್: ಪ್ರಧಾನಿ ಮೋದಿ ವಾಗ್ದಾಳಿ
ಜಗದಲ್‌ಪುರ, ಛತ್ತೀಸ್‌ಗಢ: ಜಾತಿ ಗಣತಿಯ (caste census) ಮೂಲಕ ಕಾಂಗ್ರೆಸ್ ಪಕ್ಷವು (Congress Party) ಹಿಂದೂಗಳಲ್ಲಿ ಒಡಕು ಮೂಡಿಸುತ್ತಿದೆ (Dividing Hindus) ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಹೇಳಿದ್ದಾರೆ. ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ(Chhattisgarh Assembly Election) ನಡೆಯಲಿರುವ ಛತ್ತೀಸ್‌ಗಢ ಜಗದಲ್‌ಪುರದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಭಾರತದ ಸಂಪನ್ಮೂಲಗಳ ಮೇಲಿನ ಹಕ್ಕನ್ನು ಬಡವರು ಹೊಂದಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ನಿನ್ನೆ ರಾಜಸ್ಥಾನದಲ್ಲಿ ಮಾತನಾಡಿದ್ದ ಪ್ರಧಾನಿ ಅವರು, ಇದೇ ರೀತಿಯ ಹೇಳಿಕೆಯನ್ನು ನೀಡಿದ್ದರು. ಜಾತಿ ಗಣತಿಯ ಮೂಲಕ ಪ್ರತಿಪಕ್ಷಗಳು ದೇಶವನ್ನು ಒಡೆಯುವ ಸಂಚು ರೂಪಿಸಿವೆ ಎಂದು ಹೇಳಿದ್ದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

2. ಮೋದಿ ಅಸಮಾಧಾನದ ಮಧ್ಯೆ ರಾಜ್ಯದಲ್ಲಿ ಮಂಡನೆಯಾಗುತ್ತಾ ಜಾತಿಗಣತಿ ವರದಿ?
ಬೆಂಗಳೂರು: ಕಾಂತರಾಜು ನೇತೃತ್ವದ ಸಮಿತಿಯಿಂದ (Committee headed by Kantharaju) 2018ರಲ್ಲಿ ಸಿದ್ಧವಾಗಿರುವ ಜಾತಿಗಣತಿ ವರದಿಯು (Caste Census Report) ರಾಜ್ಯದಲ್ಲಿ ಜಾರಿಯಾಗಲಿದೆಯೇ ಎಂಬ ಪ್ರಶ್ನೆ ಮೂಡಿದೆ. ಬಿಹಾರದಲ್ಲಿ ಈಗಾಗಲೇ ಜಾತಿಗಣತಿ ವರದಿಯನ್ನು ಅಂಗೀಕಾರ ಮಾಡಲಾಗಿದೆ. ಇದಕ್ಕೆ ವ್ಯಾಪಕ ಪರ-ವಿರೋಧ ಚರ್ಚೆಗಳು ಪ್ರಾರಂಭವಾಗಿವೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಸಹ ವರದಿ ಬಗ್ಗೆ ಆಕ್ಷೇಪಣೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ (Backward Classes Commission Chairman Jayaprakash Hegde) ಅವರು, ನವೆಂಬರ್‌ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ನಡುವೆ ಕಾಂಗ್ರೆಸ್‌ ಹಿರಿಯ ಮುಖಂಡರಿಂದಲೇ ವರದಿ ಅಂಗೀಕಾರಕ್ಕೆ ಒತ್ತಡಗಳು ಕೇಳಿಬಂದಿವೆ. ಆದರೆ, ಸಿಎಂ ಸಿದ್ದರಾಮಯ್ಯ (CM Siddaramaiah) ಇದರ ಬಗ್ಗೆ ಜಾಣ್ಮೆಯ ಉತ್ತರವನ್ನು ನೀಡಿದ್ದು, ಮೊದಲು ತಮ್ಮ ಬಳಿ ವರದಿ ಬರಲಿ ಎಂದು ಹೇಳಿದ್ದಾರೆ. ಹಾಗಾದರೆ, ಲೋಕಸಭೆ ಚುನಾವಣೆಗೆ ಮುನ್ನ ರಾಜ್ಯದಲ್ಲಿ ಮಂಡನೆಯಾಗಲಿದೆಯೇ? ಅಥವಾ ರಾಜ್ಯ ಸರ್ಕಾರ ಸಬೂಬು ಹೇಳುತ್ತಾ ಮುಂದೂಡಲಿದೆಯೇ ಎಂಬ ಕುತೂಹಲ ಮೂಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

3. ನಾವು ಎಂಥಾ ನನ್ಮಕ್ಕಳು ಗೊತ್ತಲ್ವ? ; ಇನ್ಸ್‌ಪೆಕ್ಟರ್‌ಗೇ ಆವಾಜ್‌ ಹಾಕಿದ ಖತರ್ನಾಕ್‌ ಖಲೀಂ
ಶಿವಮೊಗ್ಗ: ಭಾನುವಾರ ಈದ್‌ ಮಿಲಾದ್‌ ಮೆರವಣಿಗೆಯ (Eid Milad Procession) ವೇಳೆ ಉಂಟಾದ ಗಲಭೆಯ (Shivamogga Violence) ಸಂದರ್ಭದಲ್ಲಿ ಕೆಲವೊಂದು ಮುಸ್ಲಿಂ ಯುವಕರು (Muslim Youths) ವಸ್ತುಶಃ ರಾಕ್ಷಸರಂತೆಯೇ ಅಟ್ಟಹಾಸ ಮೆರೆದಿರುವುದನ್ನು ಅಲ್ಲಿನ ಮನೆಯವರು ಕಣ್ಣೀರು ಹಾಕುತ್ತಾರೆ ವಿವರಿಸುತ್ತಿದ್ದಾರೆ. ಇವರು ಮನೆಗಳಿಗೆ ಕಲ್ಲು ತೂರಾಟ ನಡೆಸಿದ್ದಲ್ಲದೆ, ಪೊಲೀಸರಿಗೂ ಆವಾಜ್‌ (Threatening to Police) ಹಾಕಿರುವ ದೃಶ್ಯಗಳು ಲಭ್ಯವಾಗಿದ್ದು ಆತಂಕ ಹುಟ್ಟಿಸುವಂತಿವೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : ಕೋಮು ಗಲಭೆ ಮಾಡುವವರ ವಿರುದ್ಧ ಕಠಿಣ ಕ್ರಮ; ಸಿದ್ದರಾಮಯ್ಯ ಎಚ್ಚರಿಕೆ

4. ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಸರ್ಕಾರ ಸಂಚು? ಡಿಕೆಶಿ ಸೂತ್ರಧಾರ
ಬೆಂಗಳೂರು: 2022ರ ಏಪ್ರಿಲ್‌ 16ರಂದು ನಡೆದ ಹಳೆ ಹುಬ್ಬಳ್ಳಿ ಗಲಭೆ (Hubballi Riots) ಪ್ರಕರಣವನ್ನೇ ಕೈಬಿಡಲು ರಾಜ್ಯ ಸರಕಾರ ಸಿದ್ಧತೆ ನಡೆಸಿದೆಯಾ ಎಂಬ ಪ್ರಶ್ನೆ ಎದುರಾಗಿದೆ. ಅಂದು ವಾಟ್ಸ್‌ ಆಪ್‌ ಸ್ಟೇಟಸ್‌ (Whatsapp Status) ಮುಂದಿಟ್ಟುಕೊಂಡು ಮುಸ್ಲಿಂ ಗುಂಪುಗಳು (Muslim groups) ಹಳೆ ಹುಬ್ಬಳ್ಳಿಯ ಪೊಲೀಸ್‌ ಠಾಣೆ ಮೇಲೆ ದಾಳಿ (Muslims attack on Hale hubballi police station) ಮಾಡಿದ್ದವು. ಪೊಲೀಸರೇ ಭಯದಿಂದ ನಡುಗುವಂತಾದ ಈ ಪ್ರಕರಣದಲ್ಲಿ ಸುಮಾರು 40 ಮಂದಿಯನ್ನು ಬಂಧಿಸಲಾಗಿತ್ತು. ಇದೀಗ ಈ ಪ್ರಕರಣವನ್ನು ಕೈಬಿಡುವ ಬಗ್ಗೆ ಪ್ರಕ್ರಿಯೆಗಳು ನಡೆಯತ್ತಿರುವುದು ಬೆಳಕಿಗೆ ಬಂದಿದೆ. ಶಿವಮೊಗ್ಗದಲ್ಲಿ ದೊಡ್ಡ ಮಟ್ಟದ ಗಲಭೆ ನಡೆದು ಅದರ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂಬ ಬೇಡಿಕೆ ಜೋರಾಗಿರುವ ನಡುವೆಯೇ ಈ ವಿದ್ಯಮಾನ ನಡೆಯುತ್ತಿರುವುದು ಪೊಲೀಸರ ನೈತಿಕ ಬಲವನ್ನು ಕುಸಿಯುವಂತೆ ಮಾಡಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

5. ಏಷ್ಯನ್​ ಗೇಮ್ಸ್​ನಲ್ಲಿ ಭಾರತದ ಪದಕಗಳ ಸಂಖ್ಯೆ ಎಷ್ಟಾಯಿತು? ಇಲ್ಲಿದೆ ವಿವರ
ಹ್ಯಾಂಗ್ಝೌ: ಚೀನಾದಲ್ಲಿ ನಡೆಯತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಅಥ್ಲೀಟ್​ಗಳು ಪದಕಗಳ ಬೇಟೆಯನ್ನು ಮುಂದುವರಿಸಿದ್ದಾರೆ. ಮಂಗಳವಾರ (ಅಕ್ಟೋಬರ್​ 3ರಂದು) ಭಾರತಕ್ಕೆ ಎರಡು ಚಿನ್ನದ ಪದಕ, ಎರಡು ಬೆಳ್ಳಿಯ ಪದಕ ಹಾಗೂ ಐದು ಕಂಚಿನ ಪದಕಗಳು ಲಭಿಸಿವೆ. ಇದರೊಂದಿಗೆ ಭಾರತ 15 ಚಿನ್ನ, 26 ಬೆಳ್ಳಿ ಹಾಗೂ 28 ಕಂಚಿನ ಪದಕದೊಂದಿಗೆ ಒಟ್ಟಾರೆ 69 ಪದಕಗಳನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಭಾರತ ಖಂಡಾಂತರ ಕ್ರೀಡಾಕೂಟದಲ್ಲಿ ಅತಿದೊಡ್ಡ ಪದಕ ಗಳಿಕೆಯ ಹಾದಿಯಲ್ಲಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

6. ಇಲ್ಲಿದೆ ವಿಶ್ವಕಪ್ ವೇಳಾಪಟ್ಟಿ;​ ಭಾರತದ ಪಂದ್ಯಗಳ ಡೇಟ್​ ಮಾರ್ಕ್​ ಮಾಡಿಕೊಳ್ಳಿ

7. Nobel Prize 2023: ಅಗೋಸ್ಟಿನಿ, ಕ್ರೌಸ್ಟ್, ಎಲ್‌’ಹುಲ್ಲಿಯರ್‌ಗೆ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿ ಘೋಷಣೆ

8. ಬಿಜೆಪಿಗೆ ಚಿಲುಮೆ ತಂದ ಸಂಕಟ! ರಾಜ್ಯ ಸರ್ಕಾರದಿಂದ ಮತ್ತೊಂದು ತನಿಖಾಸ್ತ್ರ

9. BBK Season 10 : ಅಕ್ಟೋಬರ್‌ 8 ರಿಂದ ಬಿಗ್‌ ಬಾಸ್‌ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?

10. Bed Bugs: ಪ್ಯಾರಿಸ್‌ನಲ್ಲಿ ಸಿಕ್ಕಾಪಟ್ಟೆ ತಿಗಣೆ ಕಾಟ! ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಎಂಟ್ರಿ ಕೊಟ್ಟ ಫ್ರಾನ್ಸ್ ಸರ್ಕಾರ
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

Exit mobile version