1. ಮಂದಿರ ಉದ್ಘಾಟನೆಗೆ ಅನುಷ್ಠಾನ ಸ್ವೀಕರಿಸಿದ ಪ್ರಧಾನಿ ಮೋದಿ; ಏನಿದು ಕಠಿಣ ಅಧ್ಯಾತ್ಮ ಸಾಧನೆ?
ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ಶ್ರೀರಾಮ ಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ವಿಶ್ವಾದ್ಯಂತದ ಕೊಟ್ಯಂತರ ಹಿಂದೂಗಳು ಅದರಲ್ಲೂ ವಿಶೇಷವಾಗಿ ರಾಮಭಕ್ತರು ಈ ಅಭೂತಪೂರ್ವ ಕ್ಷಣಕ್ಕಾಗಿ ಕಾಯುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ವಿಶೇಷ ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳಲಿದ್ದು, ಅದಕ್ಕಾಗಿ ಅವರು ಸಿದ್ಧತೆಗಳನ್ನು ನಡೆಸಿಕೊಳ್ಳುತ್ತಿದ್ದಾರೆ. ಅಂತೆಯೇ ಅವರು ಶುಕ್ರವಾರ (ಜನವರಿ 12) ಉದ್ಘಾಟನೆ ಕುರಿತು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ 11 ದಿನಗಳ ಕಾಲ ವಿಶೇಷ ಧಾರ್ಮಿಕ ಅನುಷ್ಠಾನ ಸ್ವೀಕರಿಸಿರುವುದಾಗಿ ಅವರು ಹೇಳಿದ್ದಾರೆ. ಇದೊಂದು ಅಪರೂಪದ ಕ್ಷಣ ಹಾಗೂ ಜೀವನದ ಸಾರ್ಥಕ್ಯ ಸಂದರ್ಭವೆಂದು ಬಣ್ಣಿಸಿದ್ದಾರೆ. ಹಾಗಾದರೆ, ಮೋದಿ ಕೈಗೊಂಡಿರುವ ಅನುಷ್ಠಾನವೇನು? ಈ ಪ್ರಕ್ರಿಯೆಯ ಮಹತ್ವವೇನು ಎಂಬ ಮಾಹಿತಿ ಇಲ್ಲಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಇದನ್ನೂ ಓದಿ: Ram Mandir : ಪ್ರಾಣ ಪ್ರತಿಷ್ಠಾಪನೆ ಮಾಡುವ ಗರ್ಭಗುಡಿ ಕಾಮಗಾರಿ ಪೂರ್ಣ ಮುಗಿದಿದೆ: ಮುಖ್ಯ ಅರ್ಚಕರ ಸ್ಪಷ್ಟನೆ
2. ರಾಮಲಲ್ಲಾ ಪ್ರತಿಷ್ಠಾಪನೆಗೆ ನಾನು ಹೋಗಲ್ಲ; ಜ. 22ರ ಬಳಿಕ ಹೋಗುವೆ: ಸಿಎಂ ಸಿದ್ದರಾಮಯ್ಯ
ಶಿವಮೊಗ್ಗ: ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ಅಯೋಧ್ಯೆ ರಾಮಮಂದಿರ ಜಟಾಪಟಿ ಮುಂದುವರಿದಿದೆ. ಅಯೋಧ್ಯೆ ರಾಮಜನ್ಮಭೂಮಿಯ (Ram Janmabhoomi) ರಾಮ ಮಂದಿರದಲ್ಲಿ (Ram Mandir) ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಈಗಾಗಲೇ ಕಾಂಗ್ರೆಸ್ ಸ್ಪಷ್ಟಪಡಿಸಿದೆ. ಇದನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಅವರೂ ಬೆಂಬಲಿಸಿದ್ದಾರೆ. ಹೀಗಾಗಿ ಅಂದು ತಾವು ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ಜ.22ರ ನಂತರ ನಾನು ಕೂಡ ಅಯೋಧ್ಯೆಗೆ ಹೋಗುತ್ತೇನೆ ಎಂದು ಹೇಳಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಇದನ್ನೂ ಓದಿ: Ram Mandir: ಮಂದಿರ ಆಹ್ವಾನ ತಿರಸ್ಕಾರ; ಚುನಾವಣೆಯಲ್ಲಿ ಸೋಲೆಂದ ಎಂದ ಕಾಂಗ್ರೆಸ್ ನಾಯಕ!
3. ಯುವನಿಧಿಗೆ ಅದ್ಧೂರಿ ಚಾಲನೆ; ನಿರುದ್ಯೋಗಿ ಯುವಜನತೆ ಖಾತೆ 3000 ರೂ. ಜಮೆ
ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ (Congress Guarantee Scheme) ಘೋಷಣೆಯಾಗಿರುವ ʼಯುವನಿಧಿʼ (Yuva Nidhi Scheme) ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು. ಈ ಮೂಲಕ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಯಿತು. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
4. ಜ. 20ರೊಳಗೆ ಪಂಚಮಸಾಲಿಗಳಿಗೆ 2ಎ ಮೀಸಲಾತಿ ಘೋಷಿಸಿ; ಸರ್ಕಾರಕ್ಕೆ ಗಡುವು ನೀಡಿದ ಜಯಮೃತ್ಯುಂಜಯ ಶ್ರೀ
ಹಾವೇರಿ: 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜದ ಹೋರಾಟ (Panchamasali Reservation) ಮತ್ತೆ ಆರಂಭವಾಗಿದೆ. ಕೂಡಲ ಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಗ್ರಾಮದಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಇಷ್ಟಲಿಂಗ ಪೂಜೆ ಮೂಲಕ ಶ್ರೀಗಳು ಪ್ರತಿಭಟನೆಗೆ ಚಾಲನೆ ನೀಡಿದರು. ನಂತರ ಪ್ರತಿಭಟನಾಕಾರರು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ತವಾಯಯಿತು. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
5. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಮುಹೂರ್ತ ಫಿಕ್ಸ್; ಯಾರಿಗೆಲ್ಲ ಟಿಕೆಟ್?
ನವದೆಹಲಿ: ದೇಶಕ್ಕೆ ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭೆ ಚುನಾವಣೆಗೆ (Lok Sabha Election 2024) ಕೆಲವೇ ತಿಂಗಳು ಬಾಕಿ ಇವೆ. ಕೇಂದ್ರದಲ್ಲಿ ಬಿಜೆಪಿ ಹಾಗೂ ನರೇಂದ್ರ ಮೋದಿ (Narendra Modi) ಹ್ಯಾಟ್ರಿಕ್ ಕನಸು ಕಾಣುತ್ತಿದ್ದರೆ, ಬಿಜೆಪಿಯನ್ನು ಶತಾಯಗತಾಯ ಸೋಲಿಸಲು ಪ್ರತಿಪಕ್ಷಗಳು ಒಗ್ಗೂಡಿ ಇಂಡಿಯಾ ಒಕ್ಕೂಟವನ್ನು ರಚಿಸಿವೆ. ಹಾಗೆಯೇ, ರಣತಂತ್ರಗಳನ್ನೂ ರೂಪಿಸುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಬಿಜೆಪಿಯು ಅಭ್ಯರ್ಥಿಗಳ ಮೊದಲ ಪಟ್ಟಿ (Candidates List) ಬಿಡುಗಡೆಗೆ ಸಜ್ಜಾಗಿದೆ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
6. ಸಾರ್ವಕಾಲಿಕ ಏರಿಕೆ ದಾಖಲಿಸಿದ ಸೆನ್ಸೆಕ್ಸ್! 200 ಪಾಯಿಂಟ್ ದಾಟಿದ ನಿಫ್ಟಿ
ನವದೆಹಲಿ: ಭಾರತದ ಬೃಹತ್ ಕಂಪನಿಗಳ ಅತ್ಯುತ್ತಮ ಪ್ರದರ್ಶನದ ಪರಿಣಾಮ ನಿಫ್ಟಿ (Nifty) ಮತ್ತು ಸೆನ್ಸೆಕ್ಸ್ (Sensex) ಶುಕ್ರವಾರ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು (All-Time High) ತಲುಪಿದವು. ಮಾಹಿತಿ ತಂತ್ರಜ್ಞಾನ ವಲಯದ ಕಂಪನಿಗಳ ಫಲಿತಾಂಶಗಳು ಮತ್ತು ಲಾಭದ ಕಾರಣಗಳು ಬೇಡಿಕೆಯ ಕುಸಿತವನ್ನು ಮೀರಿದವು ಮತ್ತು ಷೇರು ಪೇಟೆ (Stock Market) ಅತ್ಯುತ್ತಮ ಪ್ರದರ್ಶನ ತೋರಲು ಕಾರಣವಾಯಿತು. ರಾಷ್ಟ್ರೀಯ ಷೇರುಪೇಟೆ ನಿಫ್ಟಿ 50 ಶೇ.1.22 ಏರಿಕೆಯೊಂದಿಗೆ 21,911 ಪಾಯಿಂಟ್‌ಗೆ ತಲುಪಿಸಿದರೆ, ಮುಂಬೈ ಷೇರು ಪೇಟೆ ಸೆನ್ಸೆಕ್ಸ್, ಮಧ್ಯಾಹ್ನ 12.36ಕ್ಕೆ ಶೇ.1.31 ಏರಿಕೆಯಾಗಿ 72,661 ಕ್ಕೆ ತಲುತು ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
7. ಅಟಲ್ ಸೇತು ಲೋಕಾರ್ಪಣೆ; ಇದು ದೇಶದ ಅತಿ ಉದ್ದದ ಸಮುದ್ರ ಸೇತುವೆ
ಮುಂಬೈ: ವಾಣಿಜ್ಯ ನಗರಿ ಮುಂಬೈಯಲ್ಲಿ ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ (Mumbai Trans Harbour Link-MTHL) ಅನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಶುಕ್ರವಾರ ಮಧ್ಯಾಹ್ನ ಲೋಕಾರ್ಪಣೆ ಮಾಡಿದರು. 21.8 ಕಿ.ಮೀ ಉದ್ದದ ಈ ಅಟಲ್ ಸೇತು ದಕ್ಷಿಣ ಮುಂಬೈಯಿಂದ (South Mumbai) ನವೀ ಮುಂಬೈ (Navi Mumbai) ಅನ್ನು ಸಂಪರ್ಕಿಸುತ್ತದೆ ಮತ್ತು ಪ್ರತಿದಿನ ಸುಮಾರು 70,000 ವಾಹನಗಳು ಈ ಮಾರ್ಗದಲ್ಲಿ ಓಡಾಡಲಿವೆ. ಈ ಸೇತುವೆ ಸಂಪರ್ಕ ಕ್ರಾಂತಿಯನ್ನೇ ಸೃಷ್ಟಿಸಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
8. ಡಿ. ರೂಪಾ ಕ್ಷಮೆಯಾಚಿಸಲೇಬೇಕು; ಸುಪ್ರೀಂ ಕೋರ್ಟ್‌ನಲ್ಲಿ ರೋಹಿಣಿ ಪಟ್ಟು
ನವದೆಹಲಿ: ಐಪಿಎಸ್ ಅಧಿಕಾರಿ ಡಿ. ರೂಪಾ (D Roopa) ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ(Defamation case) ವಿಚಾರಣೆಯನ್ನು ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ನಡೆಸಿತು. ಈ ವೇಳೆ, ಡಿ ರೂಪಾ ಅವರು ಕ್ಷಮೆ ಕೇಳಲೇಬೇಕು (must apologise) ಎಂದು ರೋಹಿಣಿ ಸಿಂಧೂರಿ ಅವರು ಪಟ್ಟು ಹಿಡಿದರು. ಸೋಷಿಯಲ್ ಮೀಡಿಯಾಗಳಲ್ಲಿ ತಮ್ಮ ವಿರುದ್ಧ ಮಾಡಲಾಗಿರುವ ಎಲ್ಲ ಅವಹೇಳನಕಾರಿ ಪೋಸ್ಟ್‌ಗಳನ್ನು ತೆಗೆದು ಹಾಕಬೇಕು. ಇದರಿಂದ ನನ್ನ ಕುಟುಂಬಕ್ಕೆ ಘಾಸಿಯಾಗಿದೆ. ಹಾಗಾಗಿ, ಡಿ ರೂಪಾ ಅವರು ಕ್ಷಮೆಯಾಚಿಸಬೇಕು ಎಂದು ರೋಹಿಣಿ ಸಿಂಧೂರಿ ಪರ ವಕೀಲರು ವಾದ ಮಂಡಿಸಿದ್ದಾರೆ(Roopa Vs Sindhuri). ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
9. ಪತ್ನಿ ಲೈಂಗಿಕ ಸಂಬಂಧ ನಿರಾಕರಿಸಿದ್ರೆ ಪತಿ ಡಿವೋರ್ಸ್‌ಗೆ ಅರ್ಹರು ಎಂದ ಮಧ್ಯ ಪ್ರದೇಶ ಹೈಕೋರ್ಟ್
ನವದೆಹಲಿ: ಪತಿಯೊಂದಿಗೆ ಲೈಂಗಿಕ(physical relation) ಸಂಬಂಧವನ್ನು ನಿರಾಕರಿಸುವುದು ಮಾನಸಿಕ ಕ್ರೌರ್ಯಕ್ಕೆ(mental cruelty) ಸಮನಾಗಿದ್ದು, ಇದೇ ಆಧಾರದ ಮೇಲೆ ಪತಿ ವಿಚ್ಛೇದನ (divorce) ಪಡೆಯಲು ಅರ್ಹರಾಗಿರುತ್ತಾರೆ ಎಂದು ಮಧ್ಯ ಪ್ರದೇಶ ಹೈಕೋರ್ಟ್ ಹೇಳಿದೆ(MP High Court). ನ್ಯಾಯಮೂರ್ತಿಗಳಾದ ಶೀಲ್ ನಾಗ್ ಮತ್ತು ವಿನಯ್ ಸರಾಫ್ ಅವರಿದ್ದ ಪೀಠವು, ಈ ಪ್ರಕರಣದಲ್ಲಿ ಭೋಪಾಲ್ ಕೌಟುಂಬಿಕ ನ್ಯಾಯಾಲಯವು ನೀಡಿದ್ದ ತೀರ್ಪನ್ನು ತಿರಸ್ಕರಿಸಿ, ಅರ್ಜಿದಾರನಿಗೆ ವಿಚ್ಚೇದನ ಪಡೆಯಲು ಅವಕಾಶ ಕಲ್ಪಿಸಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
10. ಕಾಲಲ್ಲಿ ಬೌಲಿಂಗ್, ಕೈ ಇಲ್ಲದಿದ್ದರೂ ಬ್ಯಾಟಿಂಗ್; ಪ್ರತಿಯೊಬ್ಬರಿಗೂ ಸ್ಫೂರ್ತಿ ಈ ಕಾಶ್ಮೀರಿ ಯುವಕ
ಬೆಂಗಳೂರು: ಕೆಲವು ಸಾಧನೆಗಳೇ ಹಾಗೆ. ಪರ್ವತ ಏರಿದ ಮೇಲೆ ಕೆಳಗಿನ ಇಳಿಜಾರು ನೋಡುವಾಗ ಎದೆ ಝಲ್ಲೆನ್ನುತ್ತದೆ ಈ ಸಾಧನೆ ನಿಜವೇನಾ ಎಂಬ ಬೆರಗು ಮೂಡುತ್ತದೆ. ಶಿಖರ ಸಾಧನೆ ಆತ್ಮತೃಪ್ತಿ ತರುತ್ತದೆ. ಸುಲಭವಾಗಿ ದಕ್ಕಿದ್ದು ಸಾಧನೆ ಎನಿಸಿಕೊಳ್ಳುವುದಿಲ್ಲ. ಇತಿಹಾಸ ನಿರ್ಮಾಣ ದಿನ ಬೆಳಗಾದರೆ ಸಾಧ್ಯವಾಗುವುದಿಲ್ಲ. ನೆಲದಾಳದ ಲೋಹದ ತುಣುಕು ಅಪರಂಜಿ ಚಿನ್ನವಾಗಬೇಕಾದರೆ, ಬೆಂಕಿಯಲ್ಲಿ ಬೇಯಬೇಕು. ಸಾಧಕನೂ ಅಷ್ಟೆ, ಕಷ್ಟಗಳಲ್ಲಿ ನೋಯಬೇಕು, ಸವಾಲುಗಳನ್ನೆದುರಿಸಿ ಕಾದಬೇಕು, ಬೀಳಬೇಕು, ಮೈಕೊಡವಿ ಏಳಬೇಕು. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ