Hijab Row | ಹಿಜಾಬ್‌ ನಿಷೇಧ ಪ್ರಶ್ನಿಸಿದ ಅರ್ಜಿ ವಿಚಾರಣೆ ಆರಂಭ, ಸೆ.7ಕ್ಕೆ ಮುಂದೂಡಿದ ಸುಪ್ರೀಂ - Vistara News

ದೇಶ

Hijab Row | ಹಿಜಾಬ್‌ ನಿಷೇಧ ಪ್ರಶ್ನಿಸಿದ ಅರ್ಜಿ ವಿಚಾರಣೆ ಆರಂಭ, ಸೆ.7ಕ್ಕೆ ಮುಂದೂಡಿದ ಸುಪ್ರೀಂ

ಕರ್ನಾಟಕದಲ್ಲಿ ಉಂಟಾಗಿರುವ ಹಿಜಾಬ್‌ ವಿವಾದದ (Hijab Row) ಕುರಿತು ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್‌, ಸೆಪ್ಟೆಂಬರ್‌ 7ಕ್ಕೆ ವಿಚಾರಣೆ ಮುಂದೂಡಿದೆ.

VISTARANEWS.COM


on

Hijab
ಸಾಂದರ್ಭಿಕ ಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕರ್ನಾಟಕದಲ್ಲಿ ಉಂಟಾಗಿರುವ ಹಿಜಾಬ್‌ ವಿವಾದದ (Hijab Row) ಕುರಿತು ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್‌, ಸೆಪ್ಟೆಂಬರ್‌ 7ಕ್ಕೆ ವಿಚಾರಣೆ ಮುಂದೂಡಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸುವುದನ್ನು ನಿಷೇಧಿಸಿದ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ರಾಜ್ಯ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಪೀಠವು, ಬುಧವಾರಕ್ಕೆ ವಿಚಾರಣೆ ಮುಂದೂಡಿದೆ.

ಹಿಜಾಬ್‌ಗೆ ಅನುಮತಿ ನೀಡಬೇಕು ಎಂದು ಸಲ್ಲಿಸಿದ ಅರ್ಜಿದಾರರ ಪರ ದೇವದತ್‌ ಕಾಮತ್‌ ವಾದ ಮಂಡಿಸಿದರೆ, ರಾಜ್ಯ ಸರ್ಕಾರದ ಪರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ವಾದ ಮಂಡಿಸಿದರು. ಕರ್ನಾಟಕದ ಅಡ್ವೊಕೇಟ್‌ ಜನರಲ್‌ ಸಹ ವಾದ ಮಂಡಿಸಿದರು. ಇಡೀ ದಿನ ಅರ್ಜಿದಾರರು ಹಾಗೂ ಸರ್ಕಾರದ ಪರ ವಕೀಲರು ಮಂಡಿಸಿದ ವಾದ-ಪ್ರತಿವಾದ ಆಲಿಸಿದ ಬಳಿಕ ವಿಚಾರಣೆ ಮುಂದೂಡಲಾಯಿತು.

ವರ್ಷದ ಆರಂಭದಲ್ಲಿ ಉಂಟಾದ ಹಿಜಾಬ್‌ ವಿವಾದವು ದೇಶಾದ್ಯಂತ ಸುದ್ದಿ ಮಾಡಿತ್ತು. ಉಡುಪಿಯ ಸರ್ಕಾರಿ ಪಿಯು ಕಾಲೇಜ್‌ಗೆ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಆಗಮಿಸಿದ್ದು ಹಾಗೂ ಹಿಜಾಬ್‌ ಧರಿಸಿಯೇ ಬರುವುದಾಗಿ ಪಟ್ಟು ಹಿಡಿದ ಕಾರಣ ವಿವಾದವು ಭುಗಿಲೆದ್ದಿತ್ತು. ಬಳಿಕ ಮಾರ್ಚ್‌ 15ರಂದು ಕರ್ನಾಟಕ ಹೈಕೋರ್ಟ್‌, ರಾಜ್ಯ ಸರ್ಕಾರದ ತೀರ್ಪನ್ನು ಎತ್ತಿಹಿಡಿದ ಬಳಿಕ ವಿವಾದ ಸ್ವಲ್ಪ ತಣ್ಣಗಾಗಿತ್ತು.

ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿವೆ. ಆಗಸ್ಟ್‌ 29ರಂದು ಮೊದಲ ಬಾರಿಗೆ ವಿಚಾರಣೆ ಆರಂಭಿಸಿದ್ದ ಸುಪ್ರೀಂ ಕೋರ್ಟ್‌, ಕರ್ನಾಟಕ ಸರ್ಕಾರಕ್ಕೆ ನೋಟಿಸ್‌ ನೀಡಿ, ಸೆಪ್ಟೆಂಬರ್‌ 5ಕ್ಕೆ ವಿಚಾರಣೆ ಮುಂದೂಡಿತ್ತು.

ಇದನ್ನೂ ಓದಿ | ಹಿಜಾಬ್‌ ವಿವಾದ: ರಾಜ್ಯ ಸರಕಾರಕ್ಕೆ ನೋಟಿಸ್‌ ಜಾರಿಗೊಳಿಸಿದ ಸುಪ್ರೀಂ, ಅರ್ಜಿದಾರರಿಗೆ ತೀವ್ರ ತರಾಟೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Drown In Water: ಭೀಕರ ದುರಂತ; ನಾಲ್ವರು ಮಕ್ಕಳು ಸೇರಿ ಐವರು ನೀರುಪಾಲು

Drown In Water:ಪುಣೆ ಎಸ್ಪಿ ಪಂಕಜ್ ದೇಶ್‌ಮುಖ್‌ ಈ ಬಗ್ಗೆ ಮಾಹಿತಿ ನೀಡಿದ್ದು, 2 ಶವಗಳನ್ನು ಹೊರತೆಗೆಯಲಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎಲ್ಲಾ ಐದು ಜನರು ಪುಣೆ ಸಯ್ಯದ್ ನಗರಕ್ಕೆ ಸೇರಿದ ಒಂದೇ ಕುಟುಂಬದವರು ಎಂದು ಹೇಳಿದ್ದಾರೆ. ನಾವು 40 ವರ್ಷದ ಮಹಿಳೆ ಮತ್ತು 13 ವರ್ಷದ ಬಾಲಕಿಯ ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಘಟನೆಯಲ್ಲಿ 6 ವರ್ಷದ ಇಬ್ಬರು ಬಾಲಕಿಯರು ಹಾಗೂ 4 ವರ್ಷದ ಬಾಲಕ ನಾಪತ್ತೆಯಾಗಿದ್ದಾರೆ.

VISTARANEWS.COM


on

Drown In Water
Koo

ಮುಂಬೈ:ಮಹಾರಾಷ್ಟ್ರದ ಲೋನಾವಾಲಾದಲ್ಲಿ ಭಾನುವಾರ ಎಡೆಬಿಡದೆ ಸುರಿಯುತ್ತಿರುವ ಮಳೆ(Heavy Rain)ಯಿಂದಾಗಿ ಭೂಶಿ ಅಣೆಕಟ್ಟು(Bhushi Dam) ತುಂಬಿ ಹರಿದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ ಕನಿಷ್ಠ ಐವರು ನೀರಿನಲ್ಲಿ ಮುಳುಗಿ(Drown In Water) ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 1:30ಕ್ಕೆ ಘಟನೆ ನಡೆದಿದ್ದು, ಶೋಧ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ.

ಪುಣೆ ಎಸ್ಪಿ ಪಂಕಜ್ ದೇಶ್‌ಮುಖ್‌ ಈ ಬಗ್ಗೆ ಮಾಹಿತಿ ನೀಡಿದ್ದು, 2 ಶವಗಳನ್ನು ಹೊರತೆಗೆಯಲಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಎಲ್ಲಾ ಐದು ಜನರು ಪುಣೆ ಸಯ್ಯದ್ ನಗರಕ್ಕೆ ಸೇರಿದ ಒಂದೇ ಕುಟುಂಬದವರು ಎಂದು ಹೇಳಿದ್ದಾರೆ. ನಾವು 40 ವರ್ಷದ ಮಹಿಳೆ ಮತ್ತು 13 ವರ್ಷದ ಬಾಲಕಿಯ ಶವಗಳನ್ನು ವಶಪಡಿಸಿಕೊಂಡಿದ್ದೇವೆ. ಘಟನೆಯಲ್ಲಿ 6 ವರ್ಷದ ಇಬ್ಬರು ಬಾಲಕಿಯರು ಹಾಗೂ 4 ವರ್ಷದ ಬಾಲಕ ನಾಪತ್ತೆಯಾಗಿದ್ದಾರೆ. ಅವರು ಭೂಶಿ ಅಣೆಕಟ್ಟಿನಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಜಲಪಾತದಿಂದ ಕೆಳಕ್ಕೆ ಬಿದ್ದು ನೀರುಪಾಲಾಗಿದ್ದಾರೆ ಎಂದು ದೇಶಮುಖ್ ಹೇಳಿದ್ದಾರೆ.

ಎರಡು ವಾರಗಳ ಹಿಂದೆ ಜಮೀನಿನಲ್ಲಿ ನೀರು ತುಂಬಿದ್ದ ಆಳವಾದ ಗುಂಡಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ನಡೆದಿತ್ತು.. ಗುಂಡಿಗೆ ಬಿದ್ದ ಬಾಲಕಿಯನ್ನು ರಕ್ಷಿಸಲು ಹೋಗಿ ಇನ್ನಿಬ್ಬರು ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ನೀಲಮ್ಮ ಖಿಲಾರಹಟ್ಟಿ (16), ಮುತ್ತಪ್ಪ ಖಿಲಾರಹಟ್ಟಿ (24) ಹಾಗೂ ಶಿವು ಯಾಳವಾರ (25) ಮೃತರು.

ಹಡಲಗೇರಿ ಗ್ರಾಮದ ಚಿನ್ನಪ್ಪ ತಳವಾರ ಎಂಬುವವರ ಜಮೀನಿನಲ್ಲಿ ಎಮ್ಮೆ ಮೇಯಿಸಲು ಬಾಲಕಿ ನೀಲಮ್ಮ ಹೋಗಿದ್ದಳು. ಈ ವೇಳೆ ಎಮ್ಮೆಗೆ ನೀರು ಕುಡಿಸಲು ಗುಂಡಿ ಬಳಿ ಬಂದಾಗ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ. ಇದನ್ನು ಕಂಡು ಆಕೆಯನ್ನು ರಕ್ಷಣೆ ಮಾಡಲು ಬಂದ ಸಂಬಂಧಿಕ ಮುತ್ತಪ್ಪ ಖಿಲಾರಹಟ್ಟಿ ನೀರಿನಲ್ಲಿ ಸಿಲುಕಿದ್ದಾನೆ. ಅವರಿಬ್ಬರೂ ಹೊರ ಬರಲಾರದೇ ಪರದಾಡುತ್ತಿದ್ದಾಗ ಅವರನ್ನು ಕಾಪಾಡಲು ಹೋದ ಶಿವು ಯಾಳವಾರ ಕೂಡ ನೀರು ಪಾಲಾಗಿದ್ದ.

ಇದನ್ನೂ ಓದಿ: Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

Continue Reading

ಬೆಂಗಳೂರು

Hosur International Airport: ಹೊಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿನ ಪ್ರತಿಷ್ಠೆಗೆ ಧಕ್ಕೆ?

Hosur International Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದಲ್ಲಿರುವ ಹೊಸೂರಿನಲ್ಲಿ ತಮಿಳುನಾಡು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಮುಂದಾಗಿದೆ. ಈ ವಿಮಾನ ನಿಲ್ದಾಣವು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮತ್ತು ಅದರ ಸುತ್ತಮುತ್ತಲಿನ ಇತರ ಪ್ರದೇಶಗಳ ಕಂಪನಿಗಳಿಗೆ ಸುಲಭವಾಗಿ ಪ್ರವೇಶಿಸಲು ಅನುಕೂಲವಾಗುತ್ತದೆ ಎನ್ನುತ್ತಿದ್ದಾರೆ ಕೈಗಾರಿಕೋದ್ಯಮಿಗಳು. ಆದರೆ ಬೆಂಗಳೂರಿನ ಮೇಲೆ ಇದರ ಅಡ್ಡ ಪರಿಣಾಮಗಳು ಬೀರುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

VISTARANEWS.COM


on

By

Hosur International Airport
Koo

ಬೆಂಗಳೂರಿಗೆ ಸಮೀಪದಲ್ಲೇ ಇರುವ ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Hosur International Airport) ನಿರ್ಮಾಣದ ಕುರಿತು ತಮಿಳುನಾಡು (tamilnadu) ಮುಖ್ಯಮಂತ್ರಿ (cm) ಎಂ.ಕೆ. ಸ್ಟಾಲಿನ್ (m.k. stalin) ಅವರ ಘೋಷಣೆಯು ಇದರ ಪರಿಣಾಮದ ಬಗ್ಗೆ ಚರ್ಚೆಗಳನ್ನು ಹುಟ್ಟುಹಾಕಿದೆ. ಸ್ಟಾಲಿನ್ ಘೋಷಣೆಗೆ ಕೆಲವೇ ದಿನಗಳ ಮೊದಲು ಕರ್ನಾಟಕದ (karnataka) ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ (m.b. patil) ಅವರು ಬೆಂಗಳೂರಿನೊಳಗೆ (bengaluru) ಉದ್ದೇಶಿತ ಎರಡನೇ ವಿಮಾನ ನಿಲ್ದಾಣದ ಅಭಿವೃದ್ಧಿ ಕುರಿತಾಗಿ ಅಧ್ಯಯನವನ್ನು ಪ್ರಾರಂಭಿಸಿದ್ದರು.

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಿಂದ ಕೇವಲ 40 ಕಿ.ಮೀ ದೂರದಲ್ಲಿರುವ ಹೊಸೂರು ಐಟಿ ಮತ್ತು ಎಲೆಕ್ಟ್ರಿಕಲ್ ಇಂಡಸ್ಟ್ರಿಯಲ್ ಪಾರ್ಕ್‌ಗಳಿಗೆ ನೆಲೆಯಾಗಿದೆ. ಇದು ಪೂರ್ವ ಮತ್ತು ದಕ್ಷಿಣ ಬೆಂಗಳೂರಿಗೆ ಹತ್ತಿರವಾಗಿರುವುದರಿಂದ ಸ್ಥಳೀಯ ವ್ಯವಹಾರಗಳಿಗೆ ಆಯಕಟ್ಟಿನ ದೃಷ್ಟಿಯಿಂದ ಅನುಕೂಲಕರವಾಗಿದೆ.

ಕೈಗಾರಿಕಾ ಅಭಿವೃದ್ಧಿಯ ಮೇಲೆ ಏನು ಪರಿಣಾಮ?

ಉತ್ತರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಲಿಸಿದರೆ ಹೊಸೂರು ವಿಮಾನ ನಿಲ್ದಾಣದ ಅಭಿವೃದ್ಧಿಯು ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ, ಮಹದೇವಪುರ ಮತ್ತು ದಕ್ಷಿಣ ಮತ್ತು ಪೂರ್ವ ಬೆಂಗಳೂರಿನ ಇತರ ಪ್ರದೇಶಗಳಲ್ಲಿನ ಕಂಪನಿಗಳಿಗೆ ಸುಲಭವಾಗಿ ಪ್ರವೇಶಿಸಲು ಅನುಕೂಲವಾಗುತ್ತದೆ ಎನ್ನುತ್ತಾರೆ ಕೈಗಾರಿಕೋದ್ಯಮಿಗಳು. ಆದರೂ ಇದು ಬೆಂಗಳೂರಿನ ಒಟ್ಟಾರೆ ವ್ಯಾಪಾರ ಪರಿಸರದ ಮೇಲೆ ಗಮನಾರ್ಹ ಪರಿಣಾಮವನ್ನೂ ಬೀರಬಲ್ಲದು ಎನ್ನಲಾಗುತ್ತದೆ.

ಹೊಸೂರು ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವುದು ಒಳ್ಳೆಯದೇ. ಈ ವಿಮಾನ ನಿಲ್ದಾಣವು ಉತ್ತರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಲಿಸಿದರೆ ಎಲೆಕ್ಟ್ರಾನಿಕ್ ಸಿಟಿ, ಮಹದೇವಪುರ ಮತ್ತು ದಕ್ಷಿಣ ಮತ್ತು ಪೂರ್ವ ಬೆಂಗಳೂರಿನ ಇತರ ಜಿಲ್ಲೆಗಳಲ್ಲಿ ನೆಲೆಸಿರುವ ವ್ಯಾಪಾರಗಳಿಗೆ ಹೆಚ್ಚು ಲಾಭವನ್ನು ತರಲಿದೆ. ಇದು ಬೆಂಗಳೂರಿನ ವಾಣಿಜ್ಯ ಚಟುವಟಿಕೆ ಮೇಲೆ ಬೀರುವ ಪರಿಣಾಮವನ್ನು ಅಲ್ಲಗಳೆಯಲಾಗುವುದಿಲ್ಲ. ಆದರೆ ಹೊಸೂರು ವಿಮಾನ ನಿಲ್ದಾಣವು ಕರ್ನಾಟಕದ ವ್ಯಾಪಾರ ಹಿತಾಸಕ್ತಿಗಳಿಗೆ ಧಕ್ಕೆ ತರುವುದಿಲ್ಲ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (ಎಫ್‌ಕೆಸಿಸಿಐ) ಹಿರಿಯ ಉಪಾಧ್ಯಕ್ಷ ರಮೇಶ್ ಚಂದ್ರ ಲಹೋಟಿ ಅಭಿಪ್ರಾಯಪಟ್ಟಿದ್ದಾರೆ.

ಆದರೆ ತಮಿಳುನಾಡು ಹೊಸೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಿದರೆ, ಹಲವು ಕೈಗಾರಿಕೆಗಳು ಬೆಂಗಳೂರಿನಿಂದ ತಮಿಳುನಾಡಿಗೆ ವಲಸೆ ಹೋಗುವ ಸಾಧ್ಯತೆ ಇದೆ. ಹೊಸೂರು ಬೆಂಗಳೂರಿನಿಂದ ಕೆಲವೇ ಕಿ.ಮೀ ದೂರದಲ್ಲಿ ಇರುವುದರಿಂದ ಮತ್ತು ತಮಿಳುನಾಡು ಕರ್ನಾಟಕಕ್ಕಿಂತ ಹೆಚ್ಚು ಕೊಡುಗೆ ನೀಡುವುದರಿಂದ ಬಹುರಾಷ್ಟ್ರೀಯ ಕಂಪನಿಗಳು ಕರ್ನಾಟಕದಿಂದ ವಲಸೆ ಹೋಗುವ ಅಪಾಯವೂ ಇದೆ. ಬೆಂಗಳೂರು ಈಗ ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಜಾಗತಿಕವಾಗಿ ಪ್ರತಿಷ್ಠಿತ ನಗರವಾಗಿ ಹೊರ ಹೊಮ್ಮಿದೆ. ಆದರೆ ಮುಂದೆ ಹೊಸೂರು ವಿಮಾನ ನಿಲ್ದಾಣ ಶುರುವಾದರೆ ಬೆಂಗಳೂರಿನ ಪ್ರತಿಷ್ಠೆಗೆ ಧಕ್ಕೆ ಬರುವ ಸಾಧ್ಯತೆ ಇದೆ.

ಹೊಸೂರಿನಲ್ಲಿ ವಿಮಾನ ನಿಲ್ದಾಣ ಆಗುವುದರಿಂದ ಬೆಂಗಳೂರಿಗೇ ಹೆಚ್ಚು ಪ್ರಯೋಜನವಿದೆ. ಈಗ ಐಟಿ ಕಂಪನಿಗಳು ಹೆಚ್ಚಿರುವ ಎಲೆಕ್ಟ್ರಾನಿಕ್‌ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಸುಲಭವಾಗಿ ಬಂದು ಹೋಗಲು ಉದ್ಯಮಿಗಳಿಗೆ ಮತ್ತು ಸಿಬ್ಬಂದಿಗೆ ಅನುಕೂಲವಾಗಿದೆ ಎಂಬ ಲೆಕ್ಕಾಚಾರವೂ ಇದೆ.

ಈ ವಿಮಾನ ನಿಲ್ದಾಣವೇ ಏಕೆ?

ಬೆಂಗಳೂರು ಇಂಟರ್ ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ ನಡುವಿನ ರಿಯಾಯಿತಿ ಒಪ್ಪಂದವು ಅದರ 25ನೇ ವಾರ್ಷಿಕೋತ್ಸವದ ಮೊದಲು ಪ್ರಸ್ತುತ ವಿಮಾನ ನಿಲ್ದಾಣದ 150 ಕಿ.ಮೀ. ವ್ಯಾಪ್ತಿಯೊಳಗೆ ಯಾವುದೇ ಹೊಸ ಅಥವಾ ಅಸ್ತಿತ್ವದಲ್ಲಿರುವ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲು, ಸುಧಾರಿಸಲು ಅಥವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಅಪ್‌ಗ್ರೇಡ್ ಮಾಡಬಾರದು ಎಂಬ ಷರತ್ತು ವಿಧಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ತನ್ನ 25ನೇ ವಾರ್ಷಿಕೋತ್ಸವವನ್ನು 2033ರಲ್ಲಿ ಆಚರಿಸಲಿದೆ.

2033ರ ವೇಳೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತನ್ನ ಗರಿಷ್ಠ ಪ್ರಯಾಣಿಕರ ನಿರ್ವಹಣೆ ಸಾಮರ್ಥ್ಯವನ್ನು ತಲುಪುತ್ತದೆ ಎಂದು ನಿರೀಕ್ಷಿಸಲಾಗಿದೆ. ಇದು ಬೆಂಗಳೂರಿನಲ್ಲಿ ವಿಮಾನ ಪ್ರಯಾಣದ ಸಮಸ್ಯೆಗಳನ್ನು ಉಂಟುಮಾಡಬಹುದು. ಈ ಕಾಳಜಿಯು ಹೆಚ್ಚುತ್ತಿರುವ ವಿಮಾನ ಪ್ರಯಾಣಿಕರ ದಟ್ಟಣೆಯನ್ನು ಸರಿಹೊಂದಿಸಲು ಎರಡನೇ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಆದ್ಯತೆ ನೀಡಲು ರಾಜ್ಯ ಸರ್ಕಾರ ಮತ್ತು ಬೆಂಗಳೂರು ಇಂಟರ್ ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ಎರಡನ್ನೂ ಪ್ರೇರೇಪಿಸುತ್ತದೆ.

ಬೆಂಗಳೂರು ಇಂಟರ್ ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ಟರ್ಮಿನಲ್ 2 ರ ಹಂತ 2 ಅನ್ನು ಪೂರ್ಣಗೊಳಿಸಲು ಮತ್ತು ಟರ್ಮಿನಲ್ 3 ಅನ್ನು ನಿರ್ಮಾಣಕ್ಕೆ ಯೋಚಿಸುತ್ತಿದ್ದರೆ ಸರ್ಕಾರವು ಎರಡನೇ ವಿಮಾನ ನಿಲ್ದಾಣಕ್ಕಾಗಿ ಭೂಮಿಯನ್ನು ಹುಡುಕುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರವು ಟೆಂಡರ್‌ಗಳನ್ನು ನೀಡಿದರೆ ಈ ಹೊಸ ವಿಮಾನ ನಿಲ್ದಾಣದ ನಿರ್ವಹಣೆಗೆ ಬಿಡ್ಡಿಂಗ್‌ಗೆ ಬಿಐಎಎಲ್ ಆಸಕ್ತಿ ತೋರಿಸಿದೆ.

ವಿಳಂಬದಿಂದ ಆತಂಕ ಏಕೆ?

ಹೊಸೂರು ವಿಮಾನ ನಿಲ್ದಾಣ ಘೋಷಣೆಗೆ ಕೆಲವು ಮಂದಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಕರ್ನಾಟಕವು ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲು ಆದ್ಯತೆ ನೀಡಬೇಕು. ಇದಕ್ಕಾಗಿ ಆನೇಕಲ್ ಅಥವಾ ಬಿಡದಿ ಬಳಿ ಅನುಕೂಲಕರ ವಾತಾವರಣ ಇದೆ. ಪ್ರಸ್ತುತ ನೆರೆಯ ರಾಜ್ಯವು ಹೊಸ ವಿಮಾನ ನಿಲ್ದಾಣವನ್ನು ಯೋಜಿಸುತ್ತಿದೆ. ಎರಡನೇ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ನಾವು ನಮ್ಮ ಪ್ರಯತ್ನಗಳನ್ನು ತ್ವರಿತವಾಗಿ ಮಾಡಬೇಕಾಗಿದೆ. ಬೆಂಗಳೂರು ಈಗಾಗಲೇ ತನ್ನ ಉತ್ಪಾದನಾ ಘಟಕಗಳಲ್ಲಿ ಸಾಕಷ್ಟು ಭಾಗವನ್ನು ತಮಿಳುನಾಡಿಗೆ ಕಳೆದುಕೊಂಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

ಹೊಸೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉತ್ತಮ ಸಂಪರ್ಕವಿದ್ದರೆ ಮಾತ್ರ ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಅನುಕೂಲವಾಗಲಿದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದು, ವ್ಯಾಪಾರ ಹೂಡಿಕೆಗಳ ವಿಷಯದಲ್ಲಿ ಇಲ್ಲಿ ಕಠಿಣ ಸವಾಲುಗಳು ಇದೆ ಎಂದು ತಿಳಿಸಿದ್ದಾರೆ. ಹೊಸೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಬೆಂಗಳೂರು ಇಂಟರ್ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ (BIAL) ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Continue Reading

ಕ್ರೈಂ

Google Map: ತಪ್ಪು ದಾರಿ ತೋರಿಸಿದ ಗೂಗಲ್‌ ಮ್ಯಾಪ್‌; ನದಿಗೆ ಬಿದ್ದ ಕಾರು!

ಕೇರಳದ ಕಾಸರಗೋಡಿನ ಪಲ್ಲಂಚಿಯಲ್ಲಿ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಕಾರಿನಲ್ಲಿ ಸಿಲುಕಿದ್ದ ಯುವಕರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಆಸ್ಪತ್ರೆಗೆ ಹೋಗಲು ಗೂಗಲ್ ಮ್ಯಾಪ್ (Google Map) ಬಳಸಿ ದಾರಿ ಹುಡುಕುತ್ತಾ ಹೋದ ಯುವಕರಿಬ್ಬರು ತಮ್ಮ ಕಾರನ್ನು ಉಕ್ಕಿ ಹರಿಯುತ್ತಿದ್ದ ನದಿಗೆ ಇಳಿಸಿದ್ದರು. ಈ ಯುವಕರಿಬ್ಬರು ಅಪಾಯದಿಂದ ಪಾರಾಗಿದ್ದೇ ಪವಾಡ.

VISTARANEWS.COM


on

By

Google Map
Koo

ಕಾಸರಗೋಡು: ಆಸ್ಪತ್ರೆಗೆ ಹೋಗಲು ಗೂಗಲ್ ಮ್ಯಾಪ್ (Google Map) ಬಳಸಿ ದಾರಿ ಹುಡುಕುತ್ತಾ ಹೋದ ಯುವಕರಿಬ್ಬರು ತಮ್ಮ ಕಾರನ್ನು ಉಕ್ಕಿ ಹರಿಯುತ್ತಿದ್ದ ನದಿಗೆ ಇಳಿಸಿದ ಘಟನೆ ಕೇರಳದ (kerala) ಕಾಸರಗೋಡು (kasaragodu) ಜಿಲ್ಲೆಯಲ್ಲಿ ನಡೆದಿದೆ. ಅದೃಷ್ಟವಶಾತ್ ವಾಹನ ಮರಕ್ಕೆ ಸಿಲುಕಿದ್ದರಿಂದ ಯುವಕರಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೇರಳದ ಕಾಸರಗೋಡಿನ ಪಲ್ಲಂಚಿಯಲ್ಲಿ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಕಾರಿನಲ್ಲಿ ಸಿಲುಕಿದ್ದ ಯುವಕರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಹೈದರಾಬಾದ್ ಮೂಲದ ಪ್ರವಾಸಿಗರಾದ ಯುವಕರು ಬೆಳ್ಳಂಬೆಳಗ್ಗೆ ಹತ್ತಿರದ ಆಸ್ಪತ್ರೆಗೆ ಹೋಗುತ್ತಿದ್ದರು. ಇದಕ್ಕಾಗಿ ಅವರು ಗೂಗಲ್ ನಕ್ಷೆಯನ್ನು ಬಳಸಿಕೊಂಡು ಮುಂದುವರಿಯುತ್ತಿದ್ದರು. ಎಂದು ಯುವಕರಲ್ಲಿ ಒಬ್ಬರಾದ ಅಬ್ದುಲ್ ರಶೀದ್ ತಿಳಿಸಿದ್ದಾರೆ.

ಗೂಗಲ್ ನಕ್ಷೆ ಕಿರಿದಾದ ರಸ್ತೆಯನ್ನು ತೋರಿಸಿತ್ತು. ಹೀಗಾಗಿ ಕಾರನ್ನು ಮುಂದೆ ಓಡಿಸಿದೆವು. ವಾಹನದ ಹೆಡ್‌ಲೈಟ್ ಅನ್ನು ಬಳಸಿದಾಗ ನಮ್ಮ ಮುಂದೆ ಸ್ವಲ್ಪ ನೀರು ಇದೆ ಎಂದು ಅನಿಸಿತು. ಆದರೆ ಎರಡು ಕಡೆ ನದಿ ಮತ್ತು ಮಧ್ಯದಲ್ಲಿ ಸೇತುವೆ ಇರುವುದು ಗೊತ್ತಾಗಲಿಲ್ಲ. ಸೇತುವೆಗೆ ತಡೆ ಗೋಡೆಯೂ ಇರಲಿಲ್ಲ ಎಂದು ಅವರು ತಿಳಿಸಿದರು.

ಕಾರು ಹಠಾತ್ತನೆ ನೀರಿನ ಪ್ರವಾಹಕ್ಕೆ ಸಿಲುಕಲು ಪ್ರಾರಂಭಿಸಿತು. ಆದರೆ ಅನಂತರ ನದಿಯ ದಡದಲ್ಲಿರುವ ಮರದಲ್ಲಿ ಸಿಲುಕಿಕೊಂಡಿತು. ಅಷ್ಟರಲ್ಲಾಗಲೇ ಕಾರಿನ ಬಾಗಿಲು ತೆರೆದು ವಾಹನದಿಂದ ಹೊರಬಂದು ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಸಂಪರ್ಕಿಸಿ ಸ್ಥಳವನ್ನು ತಿಳಿಸಿದೆವು. ಅನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಗ್ಗಗಳನ್ನು ಬಳಸಿ ನಮ್ಮನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದಿದ್ದಾರೆ ಎಂದು ಅವರು ವಿವರಿಸಿದರು. ನಾವು ನಮ್ಮ ಜೀವ ಉಳಿಸಿಕೊಳ್ಳಬಹುದು ಎಂದು ಕನಸಿನಲ್ಲೂ ಯೋಚಸಲಿಲ್ಲ. ಇದು ಪುನರ್ಜನ್ಮ ಎಂದು ಭಾವಿಸುತ್ತೇವೆ ಎಂದು ರಶೀದ್ ಹೇಳಿದರು.

ಇದು ಮೊದಲಲ್ಲ

ಗೂಗಲ್ ನಕ್ಷೆ ತಪ್ಪು ದಾರಿ ತೋರಿಸಿರುವುದು ಇದು ಮೊದಲಲ್ಲ. ಕಳೆದ ತಿಂಗಳು, ಹೈದರಾಬಾದ್‌ನಿಂದ ಪ್ರವಾಸಿಗರ ಗುಂಪೊಂದು ಕೊಟ್ಟಾಯಂನ ಕುರುಪ್ಪಂಥಾರ ಬಳಿ ಉಕ್ಕಿ ಹರಿಯುತ್ತಿದ್ದ ನದಿಗೆ ವಾಹನವನ್ನು ಓಡಿಸಿತ್ತು. ಸಮೀಪದ ಪೊಲೀಸ್ ಗಸ್ತು ಘಟಕ ಮತ್ತು ಸ್ಥಳೀಯ ನಿವಾಸಿಗಳ ಪ್ರಯತ್ನದಿಂದಾಗಿ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದರೂ ಅವರ ವಾಹನವು ಸಂಪೂರ್ಣವಾಗಿ ಮುಳುಗಿತ್ತು.

ಕಳೆದ ಮೇ 24ರಂದು ತಡರಾತ್ರಿ ಈ ಘಟನೆ ನಡೆದಿತ್ತು. ಅವರು ಪ್ರಯಾಣಿಸುತ್ತಿದ್ದ ರಸ್ತೆಯು ಭಾರೀ ಮಳೆಯಿಂದಾಗಿ ಹೊಳೆಯಿಂದ ಉಕ್ಕಿ ಹರಿಯುವ ನೀರಿನಿಂದ ಆವೃತವಾಗಿತ್ತು. ಪ್ರವಾಸಿಗರಿಗೆ ಈ ಪ್ರದೇಶದ ಪರಿಚಯವಿಲ್ಲದ ಕಾರಣ, ಅವರು ಗೂಗಲ್ ಮ್ಯಾಪ್ ಬಳಸಿ ಹೋಗುತ್ತಿದ್ದರು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಇಬ್ಬರು ಯುವ ವೈದ್ಯರು ಕಾರು ಅಪಘಾತದಲ್ಲಿ ಸಾವನ್ನಪ್ಪಿದರು. ಇದಕ್ಕೆ ಕಾರಣ ಗೂಗಲ್ ನಕ್ಷೆ ಬಳಸಿ ಅವರು ದಾರಿಯನ್ನು ಹುಡುಕಿಕೊಂಡು ಹೋಗಿ ನದಿಗೆ ಬಿದ್ದರು. ವೈದ್ಯರಾದ ಅದ್ವೈತ್ ಮತ್ತು ಅಜ್ಮಲ್ ಮೃತರು. ಕಾರಿನಲ್ಲಿದ್ದ ಇತರ ಮೂವರು ಅದೃಷ್ಟವಶಾತ್ ಪಾರಾಗಿದ್ದಾರೆ. ಚಾಲಕನು ನದಿಯನ್ನು ನೀರಿನಿಂದ ತುಂಬಿದ ರಸ್ತೆ ಎಂದು ತಪ್ಪಾಗಿ ಭಾವಿಸಿ ಮುಂದೆ ಓಡಿಸಿದ್ದರಿಂದ ಈ ದುರ್ಘಟನೆ ಸಂಭವಿಸಿತ್ತು.

ಇದನ್ನೂ ಓದಿ: IND vs SA Final: 40 ಸಾವಿರ ಅಡಿ ಎತ್ತರದಲ್ಲಿಯೂ ಮೊಳಗಿದ ವಿಶ್ವಕಪ್​ ಗೆಲುವಿನ ಸಂಭ್ರಮ; ವಿಡಿಯೊ ವೈರಲ್​

ಆಗಸ್ಟ್ 2022ರಲ್ಲಿ ಎರ್ನಾಕುಲಂನಿಂದ ಕುಂಬನಾಡ್‌ಗೆ ಹಿಂತಿರುಗುತ್ತಿದ್ದ ಕುಟುಂಬವೊಂದು ಕೊಟ್ಟಾಯಂ ಜಿಲ್ಲೆಯ ಪರಚಲ್ ಬಳಿ ದಾರಿ ತಪ್ಪಿ ಕಾಲುವೆಗೆ ಕಾರನ್ನು ತೆಗೆದುಕೊಂಡು ಹೋಗಿದ್ದರು. ಇದಕ್ಕೆ ಮುಖ್ಯ ಕಾರಣ ಗೂಗಲ್ ನಕ್ಷೆ ತಪ್ಪು ದಾರಿ ತೋರಿದ್ದು. ಸ್ಥಳೀಯ ನಿವಾಸಿಗಳ ತ್ವರಿತ ರಕ್ಷಣಾ ಕಾರ್ಯಾಚರಣೆಯಿಂದ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದರು.

Continue Reading

ವೈರಲ್ ನ್ಯೂಸ್

Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

ಸಾಮಾಜಿಕ ಮಾಧ್ಯಮವಾದ ಎಕ್ಸ್‌ನಲ್ಲಿ ಶೋನಿಕಪೂರ್ ಹಂಚಿಕೊಂಡ ವೈರಲ್ ವಿಡಿಯೋದಲ್ಲಿ ಅಪ್ರಾಪ್ತ ಯುವತಿಯೊಬ್ಬಳು ರೀಲ್ಸ್ ಗಾಗಿ ಬೀದಿಯಲ್ಲಿ ಧೂಮಪಾನ ಮಾಡುತ್ತಿರುವ ವಿಡಿಯೋ ಮಾಡಿದ್ದಾಳೆ. ಬಳಿಕ ಇದನ್ನು ಸಾಮಾಜಿಕ ಜಾಲತಾಣದಲ್ಲಿ (Viral Video) ಹಾಕಿದ್ದು ಸಾಕಷ್ಟು ಮಂದಿಯ ಗಮನ ಸೆಳೆದಿತ್ತು. ಇದು ಮನೆಯವರಿಗೆ ತಿಳಿದು ತಂದೆಯಿಂದ ಸಾಕಷ್ಟು ಏಟು ಕೂಡ ತಿಂದಳು. ಈ ಎರಡು ವಿಡಿಯೊಗಳನ್ನು ನೋಡಿ.

VISTARANEWS.COM


on

By

Viral Video
Koo

ರೀಲ್ಸ್ (reels) ಹುಚ್ಚು ನಮ್ಮಿಂದ ಯಾವ ಕೆಲಸವನ್ನು ಬೇಕಾದರೂ ಮಾಡಿಸುತ್ತದೆ ಎನ್ನುವುದಕ್ಕೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಉದಾಹರಣೆಗಳು ಲಭ್ಯವಾಗುತ್ತಿದೆ. ಇದೀಗ ಪಶ್ಚಿಮ ಬಂಗಾಳದ (west bengal) ಯುವತಿಯೊಬ್ಬಳು ರೀಲ್ಸ್ ಮಾಡಿ ತಂದೆಯ ಕೈಯಿಂದ ಸರಿಯಾಗಿ ಹೊಡೆತ ತಿಂದಿರುವ ಘಟನೆ ನಡೆದಿದೆ. ಇದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ಭಾರೀ ವೈರಲ್ (Viral Video) ಆಗಿದೆ.

ರೀಲ್ಸ್ ಗಾಗಿ ಯುವತಿಯೊಬ್ಬಳು ಸಿಗರೇಟ್ ಸೇದುತ್ತಿರುವ ವಿಡಿಯೋ ಮಾಡಿ ತಂದೆಯಿಂದ ಸರಿಯಾಗಿ ಏಟು ಕೂಡ ತಿಂದಿದ್ದಾಳೆ. ಸಾಮಾಜಿಕ ಮಾಧ್ಯಮವಾದ ಎಕ್ಸ್‌ನಲ್ಲಿ ಶೋನಿ ಕಪೂರ್ ಹಂಚಿಕೊಂಡ ವೈರಲ್ ವಿಡಿಯೋದಲ್ಲಿ ಅಪ್ರಾಪ್ತ ಯುವತಿಯೊಬ್ಬಳು ರೀಲ್ಸ್ ಗಾಗಿ ಬೀದಿಯಲ್ಲಿ ಧೂಮಪಾನ ಮಾಡುತ್ತಿರುವ ವಿಡಿಯೋ ಮಾಡಿದ್ದಾಳೆ. ಬಳಿಕ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು ಸಾಕಷ್ಟು ಮಂದಿಯ ಗಮನ ಸೆಳೆದಿತ್ತು. ಇದು ಮನೆಯವರಿಗೆ ತಿಳಿದು ತಂದೆಯಿಂದ ಸಾಕಷ್ಟು ಏಟು ಕೂಡ ತಿಂದಳು.

ವೈರಲ್ ಆಗಿರುವ ವಿಡಿಯೋದ ಇನ್ನೊಂದು ಭಾಗದಲ್ಲಿ ಬೀದಿಯಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಅವಳ ತಂದೆ ಹೇಗೆ ಅವಳಿಗೆ ಬೆಲ್ಟ್‌ನಿಂದ ಹೊಡೆಯುತ್ತಿದ್ದಾರೆ ಎಂಬುದನ್ನು ನೋಡಬಹುದು. ಈ ಸಂಪೂರ್ಣ ಘಟನೆಯು ಯುವ ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ಒಂದು ಎಚ್ಚರಿಕೆಯ ಕಥೆಯಾಗಿದೆ. ರೀಲ್ಸ್ ಗಾಗಿ ನಾವು ಮಾಡುವ ಸ್ಟಂಟ್ ಗಳು ಮನೆಯವರಿಗೆ ಕೆಟ್ಟ ಹೆಸರು ತರಬಹುದು ಅಥವಾ ಅವರಿಗೆ ಮುಜುಗರ ಉಂಟು ಮಾಡಬಹುದು ಎನ್ನುವ ಯೋಚನೆ ನಮ್ಮಲ್ಲಿ ಇರಬೇಕು. ಆನ್ ಲೈನ್ ನಲ್ಲಿ ಜವಾಬ್ದಾರಿಯುತ ನಡವಳಿಕೆಯನ್ನು ತೋರಿಸುವುದು ಕೂಡ ಬಹು ಮುಖ್ಯವಾಗಿದೆ. ಮಕ್ಕಳು ಈ ಬಗ್ಗೆ ಪೋಷಕರೊಂದಿಗೆ ಮುಕ್ತವಾಗಿ ಮಾತನಾಡಬೇಕು ಎನ್ನುವುದನ್ನು ಈ ವಿಡಿಯೋದಲ್ಲಿ ಹೇಳಲಾಗಿದೆ.

ಈ ವಿಡಿಯೋ ಗೆ ಸಾಕಷ್ಟು ಮಂದಿ ಕಾಮೆಂಟ್ ಕೂಡ ಮಾಡಿದ್ದಾರೆ. ಒಬ್ಬರು ನನ್ನ ತಂದೆ ಖಂಡಿತಾ ನನ್ನ ತಲೆ ಬೋಳಿಸುತ್ತಿದ್ದರು ಎಂದು ಹೇಳಿದ್ದರೆ, ಇನ್ನೊಬ್ಬರು ಅವಳ ತಂದೆ ಜೈಲಿಗೆ ಹೋಗುವುದು ಖಚಿತ. ಅವರು ಅದನ್ನು ಚಿತ್ರೀಕರಿಸಬಾರದು ಎಂದು ತಿಳಿಸಿದ್ದಾರೆ.


ಸಾಮಾಜಿಕ ಮಾಧ್ಯಮ ಬಳಕೆದಾರರು ಇತ್ತೀಚಿನ ದಿನಗಳಲ್ಲಿ ತಮ್ಮ ಅನುಯಾಯಿಗಳನ್ನು ಹೆಚ್ಚಿಸಲು, ಹೆಚ್ಚು ಲೈಕ್ ಗಳನ್ನು ಪಡೆಯಲು ಮಾಡುವ ಕೆಲವೊಂದು ರೀಲ್ಸ್ ಗಳು ಅವರನ್ನು ತೊಂದರೆಗೆ ಸಿಲುಕಿಸುತ್ತದೆ. ಹೀಗಾಗಿ ಈ ವೈರಲ್ ವೀಡಿಯೊ ಆನ್‌ಲೈನ್ ಜವಾಬ್ದಾರಿಯ ಪ್ರಾಮುಖ್ಯತೆ ಮತ್ತು ಸಾಮಾಜಿಕ ಮಾಧ್ಯಮದ ಸಂಭಾವ್ಯ ಅಪಾಯಗಳನ್ನು ಎತ್ತಿ ತೋರಿಸುತ್ತದೆ. ಇದರಿಂದ ಪ್ರತಿಯೊಬ್ಬರೂ ಕಲಿಯಬೇಕಾದ ಕೆಲವು ಸಂಗತಿಗಳಿವೆ.

ಇದನ್ನೂ ಓದಿ: Viral Video: ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ! ವಿಡಿಯೊ ನೋಡಿ

ಆನ್ ಲೈನ್ ನಲ್ಲಿ ಏನಾದರೂ ಪೋಸ್ಟ್ ಮಾಡುವ ಮೊದಲು ಯೋಚಿಸಿ. ಒಮ್ಮೆ ಏನನ್ನಾದರೂ ಆನ್‌ಲೈನ್‌ನಲ್ಲಿ ಹಂಚಿಕೊಂಡರೆ ಬಳಿಕ ಅದನ್ನು ಸಂಪೂರ್ಣವಾಗಿ ಅಳಿಸಲು ಕಷ್ಟವಾಗಬಹುದು ಅಥವಾ ಅಸಾಧ್ಯವಾಗಬಹುದು. ಅನುಯಾಯಿಗಳ ಬಗ್ಗೆ ಗಮನವಿರಲಿ. ನಿಮಗೆ ಹಾಸ್ಯವಾಗಿ ಕಾಣುವ ಕೆಲವು ಸಂಗತಿಗಳು ಕೆಲವರಿಗೆ ಗ್ರಹಿಸಲು ಕಷ್ಟವಾಗಬಹುದು. ಇದು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು.

ಅದೇ ರೀತಿ ಮುಕ್ತ ಸಂವಹನವು ಮುಖ್ಯ. ಆನ್‌ಲೈನ್ ಸುರಕ್ಷತೆ ಮತ್ತು ಜವಾಬ್ದಾರಿಯುತ ಸಾಮಾಜಿಕ ಮಾಧ್ಯಮ ಬಳಕೆಯ ಕುರಿತು ಪೋಷಕರು ತಮ್ಮ ಮಕ್ಕಳೊಂದಿಗೆ ಮುಕ್ತ ಸಂಭಾಷಣೆಗಳನ್ನು ನಡೆಸುವುದು ಕೂಡ ಬಹು ಮುಖ್ಯವಾಗಿದೆ.

Continue Reading
Advertisement
Virat kohli
ಪ್ರಮುಖ ಸುದ್ದಿ7 mins ago

Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ವಿವರ ಇಲ್ಲಿದೆ

Drown In Water
ದೇಶ10 mins ago

Drown In Water: ಭೀಕರ ದುರಂತ; ನಾಲ್ವರು ಮಕ್ಕಳು ಸೇರಿ ಐವರು ನೀರುಪಾಲು

Road Accident
ಕರ್ನಾಟಕ20 mins ago

Road Accident: ಚನ್ನರಾಯಪಟ್ಟಣದಲ್ಲಿ ಭೀಕರ ಅಪಘಾತ; ಬಸ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

Hosur International Airport
ಬೆಂಗಳೂರು42 mins ago

Hosur International Airport: ಹೊಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿನ ಪ್ರತಿಷ್ಠೆಗೆ ಧಕ್ಕೆ?

Karnataka Politics
ಕರ್ನಾಟಕ54 mins ago

Karnataka Politics: ಸ್ಥಾನ ಭದ್ರಪಡಿಸಲು ದೆಹಲಿಯಲ್ಲಿ ಸಿಎಂ, ಡಿಸಿಎಂ ಪ್ರಯತ್ನ: ಎನ್.ರವಿಕುಮಾರ್ ಟೀಕೆ

Google Map
ಕ್ರೈಂ1 hour ago

Google Map: ತಪ್ಪು ದಾರಿ ತೋರಿಸಿದ ಗೂಗಲ್‌ ಮ್ಯಾಪ್‌; ನದಿಗೆ ಬಿದ್ದ ಕಾರು!

Viral Video
ವೈರಲ್ ನ್ಯೂಸ್1 hour ago

Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

Reasi Terror Attack
ದೇಶ2 hours ago

Reasi Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಕರ ಮೇಲೆ ಉಗ್ರರ ದಾಳಿ; ಹಲವೆಡೆ NIA ರೇಡ್‌

Jasprit Bumrah
ಪ್ರಮುಖ ಸುದ್ದಿ2 hours ago

Jasprit Bumrah : ಮಗನ ಮುಂದೆ ವಿಶ್ವ ಕಪ್​ ಗೆದ್ದಿದ್ದು ದೊಡ್ಡ ಖುಷಿ ಎಂದ ಜಸ್​ಪ್ರಿತ್​ ಬುಮ್ರಾ

Bangalore–Mysore Expressway
ಕರ್ನಾಟಕ2 hours ago

Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು7 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ1 day ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌