Hijab row | ಹಿಜಾಬ್‌ ಬೇಕು- ಬೇಡ: ಸುಪ್ರೀಂ ಕೋರ್ಟ್‌ನಲ್ಲಿ ಯಾರ ವಾದ ಏನಿತ್ತು? - Vistara News

ಕೋರ್ಟ್

Hijab row | ಹಿಜಾಬ್‌ ಬೇಕು- ಬೇಡ: ಸುಪ್ರೀಂ ಕೋರ್ಟ್‌ನಲ್ಲಿ ಯಾರ ವಾದ ಏನಿತ್ತು?

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ಧಾರಣೆ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಉಭಯ ಪಕ್ಷಗಳು ನಡೆಸಿದ ವಾದ ವಿವಾದಗಳು ಏನು? ವಿವರ ಇಲ್ಲಿದೆ.

VISTARANEWS.COM


on

Same Sex Marriage is urban elitist views, Says Central government to Supreme Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ಧರಿಸುವ ಕುರಿತು ಕರ್ನಾಟಕದಲ್ಲಿ ಹುಟ್ಟಿಕೊಂಡ ವಿವಾದದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಕೊನೆಗೊಳಿಸಿದ್ದು, ಇಂದು ತೀರ್ಪು ನೀಡುತ್ತಿದೆ. ಈ ತೀರ್ಪಿನ ದೂರಗಾಮಿ ಪರಿಣಾಮ ದೇಶಾದ್ಯಂತ ಉಂಟಾಗಲಿದೆ.

ಕರ್ನಾಟಕ ಸರ್ಕಾರವು ಫೆಬ್ರವರಿ 5ರಂದು ಆದೇಶ ಹೊರಡಿಸಿ, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿಗಳು ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿತ್ತು. ಬಳಿಕ ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್‌ನ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸತತವಾಗಿ ವಿಚಾರಣೆ ನಡೆಸಿತ್ತು. ಸರ್ವೋಚ್ಚ ನ್ಯಾಯಾಲಯದ ಜಸ್ಟಿಸ್ ಹೇಮಂತ್ ಗುಪ್ತಾ ಮತ್ತು ಸುಧಾಂಶ ಧುಲಿಯಾ ಅವರಿದ್ದ ಪೀಠವು ಈ ಅರ್ಜಿಗಳ ವಿಚಾರಣೆ ನಡೆಸಿದೆ.

ಹಿಜಾಬ್‌ ಪರ ಕಕ್ಷಿದಾರರ ಕಡೆಯಿಂದ ದುಷ್ಯಂತ್‌ ದವೆ, ರಾಜೀವ್‌ ಧವನ್‌, ದೇವದತ್‌ ಕಾಮತ್‌, ಸಲ್ಮಾನ್‌ ಖುರ್ಷಿದ್‌, ಮೀನಾಕ್ಷಿ ಅರೋರಾ ಸೇರಿದಂತೆ 21 ವಕೀಲರು ವಾದಿಸಿದ್ದರು. ಕರ್ನಾಟಕ ಸರ್ಕಾರದ ಕಡೆಯಿಂದ ಸಾಲಿಟಿಸರ್‌ ಜನರಲ್‌ ತುಷಾರ್‌ ಮೆಹ್ತಾ, ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ, ಅಡಿಷನಲ್‌ ಸಾಲಿಸಿಟರ್‌ ಜನರಲ್‌ ಕೆ.ಎಂ ನಟರಾಜ್‌ ವಾದಿಸಿದ್ದರು.

ಹಿಜಾಬ್‌ ಪರ ವಕೀಲರ ವಾದಗಳು:

  • ಮುಸ್ಲಿಂ ಮಹಿಳೆಯರು ಹಿಜಾಬ್‌ ಧರಿಸುವ ಸ್ವಾತಂತ್ರ್ಯವನ್ನು ಭಾರತದ ಸಂವಿಧಾನವೇ ನೀಡಿದೆ. ಸಂವಿಧಾನದ 25ನೇ ವಿಧಿಯು ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ನಂಬುಗೆಯ ಸ್ವಾತಂತ್ರ್ಯದ ಹಕ್ಕನ್ನು ನೀಡುತ್ತದೆ. ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ಮತ್ತು ಆರೋಗ್ಯಕ್ಕೆ ಒಳಪಟ್ಟು ಮುಕ್ತವಾಗಿ ಧರ್ಮವನ್ನು ಪ್ರತಿಪಾದಿಸುವ, ಅಭ್ಯಾಸ ಮಾಡುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ನೀಡುತ್ತದೆ. ಆರ್ಟಿಕಲ್ 26 ಎಲ್ಲಾ ಪಂಗಡಗಳಿಗೆ ಧರ್ಮದ ವಿಷಯಗಳಲ್ಲಿ ತಮ್ಮದೇ ಆದ ವ್ಯವಹಾರಗಳನ್ನು ನಿರ್ವಹಿಸುವ ಹಕ್ಕನ್ನು ನೀಡುತ್ತದೆ.
  • ಶಿಕ್ಷಣ ಸಂಸ್ಥೆಗಳಲ್ಲಿ ಇದುವರೆಗೂ ಹಿಜಾಬ್‌ ಧಾರಣೆಯ ಕುರಿತು ಯಾವುದೇ ಸ್ಪಷ್ಟ ನಿರ್ದೇಶನ ಇರಲಿಲ್ಲ. ವಿವಾದ ಸೃಷ್ಟಿ ಮಾಡಿದ ಬಳಿಕ, ತರಾತುರಿಯಲ್ಲಿ ನಿರ್ಣಯ ತೆಗೆದುಕೊಂಡು ನಿರ್ಬಂಧದ ಆದೇಶ ನೀಡಲಾಗಿದೆ.
  • ಹಿಂದೂಗಳು ಶಾಲೆ ಕಾಲೇಜುಗಳಲ್ಲಿ ತಿಲಕ, ಬಳೆ, ಹೂವು ಮುಂತಾದವನ್ನು ಧರಿಸುವುದಕ್ಕೆ ಆಸ್ಪದವಿದೆ. ಸಿಕ್ಖರು ಕೃಪಾಣ್‌ ಹಾಗೂ ಪೇಟ ಧರಿಸಿ ಹಾಜರಾಗಬಹುದು. ಇವೂ ಕೂಡ ಧಾರ್ಮಿಕ ಸಂಕೇತಗಳೇ ಆಗಿವೆ. ಇವು ಆಗಬಹುದು ಎಂದಾದರೆ, ಮುಸ್ಲಿಂ ಮಹಿಳೆಯರೇಕೆ ಹಿಜಾಬ್‌ ಧರಿಸಬಾರದು?
  • ಹಿಜಾಬ್‌ ಧರಿಸಿ ಬರುವುದನ್ನು ನಿಷೇಧಿಸಿದರೆ ಮುಸ್ಲಿಂ ಬಾಲಕಿಯರ ಶಿಕ್ಷಣಕ್ಕೇ ಹೊಡೆತ ಬೀಳುತ್ತದೆ. ಹೆಚ್ಚಿನ ಮುಸ್ಲಿಂ ಪೋಷಕರು ಸಾಂಪ್ರದಾಯಿಕರಾಗಿದ್ದು, ಹಿಜಾಬ್‌ ಇಲ್ಲದೇ ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಲು ಒಪ್ಪಲಾರರು. ಇದರಿಂದ ಎಲ್ಲರಿಗೂ ಶಿಕ್ಷಣ ಹಕ್ಕಿನ ಅನ್ವಯಕ್ಕೂ ಧಕ್ಕೆ ಉಂಟಾಗುತ್ತದೆ.
  • ಇಸ್ಲಾಮಿಕ್‌ ದೇಶಗಳಲ್ಲಿ ಇದುವರೆಗೂ ಹತ್ತು ಸಾವಿರ ಆತ್ಮಹತ್ಯಾ ದಾಳಿಗಳು ನಡೆದಿವೆ. ಆದರೆ ಭಾರತದಲ್ಲಿ ನಡೆದಿರುವುದು ಒಂದೇ ಒಂದು, ಪುಲ್ವಾಮ ದಾಳಿ ಮಾತ್ರ. ಇದು ಇಲ್ಲಿನ ಮುಸ್ಲಿಮರು ದೇಶದ ಮೇಲಿಟ್ಟಿರುವ ವಿಶ್ವಾಸಕ್ಕೆ ಸಾಕ್ಷಿ.
  • ಮುಸ್ಲಿಂ ಯುವತಿಯರು ಹಿಜಾಬ್‌ ಧರಿಸುವುದು ಯಾರ ಧಾರ್ಮಿಕ ಭಾವನೆಗಳಿಗೂ ನೋವುಂಟು ಮಾಡುವುದಿಲ್ಲ. ಹಿಜಾಬ್‌ ಅವರ ವ್ಯಕ್ತಿತ್ವದ ವಿಶಿಷ್ಟತೆಯಾಗಿದೆ. ಆದರೆ ಲವ್‌ ಜಿಹಾದ್‌ ಆರೋಪಗಳು, ಶಿಕ್ಷಣ ಸಂಸ್ಥೆಗಳಲ್ಲಿ ಅವರು ಹಿಜಾಬ್‌ ಧರಿಸುವುದಕ್ಕೆ ನಿರಾಕರಣೆ ಇತ್ಯಾದಿಗಳು ಅಲ್ಪಸಂಖ್ಯಾತ ಸಮುದಾಯವನ್ನು ಅಂಚಿಗೆ ತಳ್ಳುವ ಮನೋಭಾವದ ಬೆಳವಣಿಗೆಯನ್ನು ಪ್ರತಿಬಿಂಬಿಸುತ್ತಿವೆ.
  • ಪಾಶ್ಚಿಮಾತ್ಯ ದೇಶಗಳು ಹಿಜಾಬ್ ಧಾರಣೆಗೆ ಅವಕಾಶ ನೀಡಿವೆ. ಅಮೆರಿಕದ ಸೈನ್ಯದಲ್ಲೂ ಟರ್ಬನ್‌ಗಳಿಗೆ ಅವಕಾಶ ನೀಡಲಾಗಿದೆ. ಸಿಕ್ಖರು ಟರ್ಬನ್‌ ಧರಿಸುವುದಕ್ಕೆ ಯಾವುದೇ ಆಕ್ಷೇಪ ಇಲ್ಲ. ಹಾಗೆಯೇ ಮುಸ್ಲಿಂ ಮಹಿಳೆಯರ ಹಿಜಾಬ್‌ಗೂ ಆಕ್ಷೇಪ ಇರಬಾರದು. ಕೆಲವರು ತಿಲಕ ಇಡಲು, ಕೆಲವರು ಕ್ರಾಸ್‌ ಧರಿಸಲು ಇಷ್ಟಪಡಬಹುದು. ಹೀಗಿರುವಾಗ ಹಿಜಾಬ್‌ ಹೇಗೆ ದೇಶದ ಏಕತೆಗೆ ಧಕ್ಕೆಯಾಗುತ್ತದೆ?

ಕರ್ನಾಟಕ ಸರ್ಕಾರದ ವಾದಗಳು:

  • ಭಾರತೀಯ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವು ಸ್ವಯಂಪೂರ್ಣ ಅಲ್ಲ. ಅದು ನಿಬಂಧನೆಗಳಿಗೆ ಒಳಪಟ್ಟಿರುತ್ತದೆ. ಸಾರ್ವಜನಿಕ ಹಿತ, ಕಾನೂನು ಸುವ್ಯವಸ್ಥೆ, ಸಾರ್ವಜನಿಕ ಶಾಂತಿ ಇತ್ಯಾದಿಗಳನ್ನು ಪರಿಗಣಿಸಿ ಸರ್ಕಾರ ಇದದಕ್ಕೆ ಸಂಬಂಧಿಸಿ ಸೂಕ್ತ ನಿಬಂಧನೆಗಳನ್ನು ವಿಧಿಸಬಹುದಾಗಿದೆ.
  • ಶಿಕ್ಷಣ ಸಂಸ್ಥೆಯು ಜಾತ್ಯತೀತ ಸ್ಥಳವಾಗಿದೆ. ಅಲ್ಲಿ ಧಾರ್ಮಿಕ ಚಿಹ್ನೆಗಳನ್ನು ಧರಿಸುವುದನ್ನು ಮಾನ್ಯ ಮಾಡಲು ಸಾಧ್ಯವಿಲ್ಲ. ಸಮವಸ್ತ್ರದ ಕುರಿತು ಸ್ಥಳೀಯ ಶಾಲಾ ನಿಯಮಗಳೂ ಇವೆ, ಸ್ಥೂಲವಾಗಿ ರಾಜ್ಯ ಸರ್ಕಾರಿ ನಿಯಮಗಳೂ ಇವೆ. ಸೂಚಿತ ಸಮವಸ್ತ್ರ ಹೊರತುಪಡಿಸಿ ಇತರ ವಸ್ತ್ರಗಳನ್ನು ಧರಿಸಲು ಅವಕಾಶವಿಲ್ಲ. ಇಂದು ಹಿಜಾಬ್‌ ಧಾರಣೆ ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹೊದ್ದು ಬರಲು ಆರಂಭಿಸಿದ್ದಾರೆ. ಈ ವಿವಾದ ಮುಂದುವರಿಯಬಹುದು, ಇದನ್ನು ನಿಲ್ಲಿಸಲು ಸೂಕ್ತ ಕ್ರಮವನ್ನು ಸರ್ಕಾರವೇ ಕೈಗೊಳ್ಳಬೇಕಾಗುತ್ತದೆ.
  • ಸರ್ಕಾರದ ಆದೇಶವು ಕೇವಲ ಹಿಜಾಬ್‌ ಅನ್ನು ನಿಷೇಧಿಸಿದ್ದಲ್ಲ. ಅದು ಎಲ್ಲ ಬಗೆಯ ಧಾರ್ಮಿಕ ಸಂಕೇತಗಳನ್ನೂ ಶಾಲೆ- ಕಾಲೇಜು ಆವರಣದ ಒಳಗೆ ನಿಷೇಧಿಸಿದೆ. ಕ್ಯಾಂಪಸ್‌ನಲ್ಲಿ ಸಮವಸ್ತ್ರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
  • ಹಿಂದೂಗಳು ಧರಿಸುವ ತಿಲಕ, ಹೂವು, ಬಳೆ ಇತ್ಯಾದಿಗಳು ಸಮವಸ್ತ್ರದ ವ್ಯಾಪ್ತಿಯಲ್ಲಿ ತರಲಾಗುವುದಿಲ್ಲ. ಅವು ಕಡ್ಡಾಯ ಧಾರ್ಮಿಕ ಆಚರಣೆಗಳಲ್ಲ. ಸ್ಥಳೀಯ ಶಾಲಾಡಳಿತಗಳು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು.
  • ಹಿಜಾಬ್‌ ಪ್ರಕರಣ ತೀವ್ರವಾಗುವುದರ ಹಿಂದೆ, ವಿದ್ಯಾರ್ಥಿಗಳು ಕಾಲೇಜು ತರಗತಿ ಬಹಿಷ್ಕರಿಸಿ ಹೊರಗಡೆ ಗೇಟ್‌ಗಳ ಮುಂದೆಯೇ ನಿಲ್ಲುವುದರ ಹಿಂದೆ ಪಿಎಫ್‌ಐ ಪ್ರಚೋದನೆ ಇದೆ. ಇದು ಕಾನೂನುಬಾಹಿರ ಶಕ್ತಿಗಳ ಪ್ರಚೋದನೆ. (ಇದಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸುವಂತೆ ಕೋರ್ಟ್‌ ಆದೇಶಿಸಿತ್ತು.)

ಪೀಠದ ಟಿಪ್ಪಣಿಗಳು :

  • ಸಿಖ್ಖರು ಧರಿಸುವ ಪೇಟ ಹಾಗೂ ಕೃಪಾಣ (ಸಿಖ್ಖರು ಇಟ್ಟುಕೊಳ್ಳುವ ಸಾಂಪ್ರದಾಯಿಕ ಸಣ್ಣ ಕತ್ತಿ) ಜತೆ ಹಿಜಾಬ್‌ ಅನ್ನು (Hijab Row) ಹೋಲಿಸುವುದು ಸರಿಯಲ್ಲ. ಸಿಖ್ಖರು ಧರಿಸುವ ಪೇಟ ಹಾಗೂ ಕೃಪಾಣಗಳು ಆ ಧರ್ಮದ ಐದು ಕಡ್ಡಾಯ ಅಂಶಗಳ ಭಾಗವಾಗಿದೆ. ಇದಕ್ಕೆ ಸುಪ್ರೀಂ ಕೋರ್ಟ್‌ ಮಾನ್ಯತೆ ನೀಡಿದೆ. ಹಾಗಾಗಿ, ಆ ಧರ್ಮೀಯರ ಟರ್ಬನ್‌ ಹಾಗೂ ಕೃಪಾಣದ ಜತೆ ಹೋಲಿಸುವುದು ಸಮಂಜಸವಲ್ಲ.
  • ಸಿಖ್‌ ಧರ್ಮವು ಭಾರತದ ಸಂಸ್ಕೃತಿಯಲ್ಲಿ ಮೇಳೈಸಿದೆ. ಅವರ ಧಾರ್ಮಿಕ ಆಚರಣೆಗಳನ್ನು ಸಂವಿಧಾನವೇ ಮಾನ್ಯ ಮಾಡಿದೆ. ಅಷ್ಟಕ್ಕೂ, ನಮಗೆ ಫ್ರಾನ್ಸ್‌ ಹಾಗೂ ಆಸ್ಟ್ರಿಯಾದ ಉದಾಹರಣೆಗಳು ಬೇಕಿಲ್ಲ. ಅಲ್ಲಿನ ಆಚರಣೆಗಳಿಗೂ ನಮ್ಮ ಆಚರಣೆಗಳಿಗೂ ಹೋಲಿಕೆ ಮಾಡುವುದು ಸಮಂಜಸ ಎನಿಸುವುದಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Supreme Court Argument : ಸೆಕ್ಯುರಿಟಿಯನ್ನು ಕರೆಸಿ ಹೊರಹಾಕಿಸುವೆ; ಲಾಯರ್ ವಿರುದ್ಧ ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಗರಂ

supreme court argument : ಹೂಡಾ ಅವರು ತಮ್ಮ ವಾದ ಮಾಡುತ್ತಿರುವ ನಡುವೆಯೇ ಮಧ್ಯಪ್ರವೇಶಿಸಿದ ನೆಡುಂಪರಾ ನನಗೂ ಮಂಡಿಸುವುದಕ್ಕೆ ಒಂದು ವಿಷಯವಿದೆ ಎಂದು ಹೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ಅವರು (ಹೂಡಾ) ವಾದಿಸುತ್ತಿದ್ದಾರೆ. ನೀವು ಅವನಿಗೆ ಅಡ್ಡಿಪಡಿಸಬಾರದು ಎಂದು ಹೇಳಿದರು. ಇದಕ್ಕೆ ಸವಾಲು ಹಾಕಿದ ನೆಡಂಪೆರಾ ಅವರು “ನಾನು ಇಲ್ಲಿ ಹಿರಿಯವ” ಎಂದು ಹೇಳಿದರು.

VISTARANEWS.COM


on

supreme court argument
Koo

ಬೆಂಗಳೂರು: ಸುಪ್ರೀಂ ಕೋರ್ಟ್​​ನಲ್ಲಿ ಜುಲೈ 23 ರಂದು ನೀಟ್-ಯುಜಿ ಕುರಿತ ಅರ್ಜಿಗಳ ವಿಚಾರಣೆಯ ವೇಳೆ (Supreme Court Argument) ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್​​ ಮುಖ್ಯ ನ್ಯಾಯಮೂರ್ತಿ (CJI) ಡಿವೈ ಚಂದ್ರಚೂಡ್ ಅವರು ಹಿರಿಯ ವಕೀಲ ಮ್ಯಾಥ್ಯೂಸ್ ನೆಡುಂಪರಾ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಪ್ರಕರಣದಲ್ಲಿ ಅರ್ಜಿದಾರರಲ್ಲಿ ಒಬ್ಬರನ್ನು ಪ್ರತಿನಿಧಿಸುತ್ತಿದ್ದ ಹಿರಿಯ ವಕೀಲರಾದ ನರೇಂದ್ರ ಹೂಡಾ ಅವರು ತಮ್ಮ ವಾದಗಳನ್ನು ಮಂಡಿಸುತ್ತಿದ್ದಾಗ ನೆಡುಂಪರಾ ಮಧ್ಯ ಪ್ರವೇಶಿಸಿದ್ದಕ್ಕೆ ಅವರು ಸಿಟ್ಟಾದರು. ಅಲ್ಲದೆ, ಭದ್ರತಾ ಸಿಬ್ಬಂದಿಯನ್ನು ಕರೆದು ಕೋರ್ಟ್​ನಿಂದ ಹೊರಕ್ಕೆ ಹಾಕುವೆ ಎಂದು ಎಚ್ಚರಿಕೆ ನೀಡಿದರು.

ಹೂಡಾ ಅವರು ತಮ್ಮ ವಾದ ಮಾಡುತ್ತಿರುವ ನಡುವೆಯೇ ಮಧ್ಯಪ್ರವೇಶಿಸಿದ ನೆಡುಂಪರಾ ನನಗೂ ಮಂಡಿಸುವುದಕ್ಕೆ ಒಂದು ವಿಷಯವಿದೆ ಎಂದು ಹೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ಅವರು (ಹೂಡಾ) ವಾದಿಸುತ್ತಿದ್ದಾರೆ. ನೀವು ಅವನಿಗೆ ಅಡ್ಡಿಪಡಿಸಬಾರದು ಎಂದು ಹೇಳಿದರು. ಇದಕ್ಕೆ ಸವಾಲು ಹಾಕಿದ ನೆಡಂಪೆರಾ ಅವರು “ನಾನು ಇಲ್ಲಿ ಹಿರಿಯವ” ಎಂದು ಹೇಳಿದರು. ಅವರ ಮಾತು ಸಿಜೆಐ ಅವರನ್ನು ಕೆರಳಿಸಿತು. ಅವರು ನೆಡುಂಪರಾಗೆ ತಕ್ಷಣವೇ ಎಚ್ಚರಿಕೆ ನೀಡಿದರು.

ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ನೀವು ಕೋರ್ಟ್​ನ ಗ್ಯಾಲರಿ ಜತೆ ಮಾತನಾಡುತ್ತಿಲ್ಲ. ನೀವು ನನ್ನ ಮಾತನ್ನು ಕೇಳಬೇಕು. ನಾನು ಈ ನ್ಯಾಯಾಲಯದ ಉಸ್ತುವಾರಿ. ತಕ್ಷಣವೇ ಸೆಕ್ಯೂರಿಟಿಯನ್ನು ಕರೆದು ನಿಮ್ಮ ಹೊರ ಹಾಕಬೇಕಾಗುತ್ತದೆ ಎಂದು ಹೇಳಿದರು. ಈ ವೇಳೆ ನೆಡುಂಪರಾ, ಇದನ್ನು ನೀವು ಹೇಳುವ ಅಗತ್ಯವಿಲ್ಲ ಹೇಳಿ ಹೊರಡಲು ಅನುವಾದರು.

ಈ ವೇಳೆ ಮುಖ್ಯ ನ್ಯಾಯಮೂರ್ತಿ, ನೀವು ಅದನ್ನು ಹೇಳಬೇಕಾಗಿಲ್ಲ. ನೀವಿನ್ನು ಹೋಗಬಹುದು. ನಾನು ಕಳೆದ 24 ವರ್ಷಗಳಿಂದ ನ್ಯಾಯಾಂಗ ವ್ಯವಸ್ಥೆಯನ್ನು ನೋಡಿದ್ದೇನೆ. ಈ ನ್ಯಾಯಾಲಯದಲ್ಲಿ ವಕೀಲರ ಕಾರ್ಯವಿಧಾನವನ್ನು ನನಗೆ ನಿರ್ದೇಶಿಸಲು ನಾನು ಅನುಮತಿ ಕೊಡುವುದಿಲ್ಲ ಎಂದು ಹೇಳಿದರು. ಈ ವೇಳೆ ನೆಡುಂಪರಾ ” ಈ ನ್ಯಾಯಾಲಯವನ್ನು 1979 ರಿಂದ ನೋಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Union Budget 2024 : ಹೂಡಿಕೆಗಳನ್ನು ಉತ್ತೇಜಿಸಲು ‘ಏಂಜಲ್ ಟ್ಯಾಕ್ಸ್’ ರದ್ದು ಮಾಡಿದ ಕೇಂದ್ರ ಸರ್ಕಾರ

ಈ ವೇಳೆ ಮುಖ್ಯ ನ್ಯಾಯಮೂರ್ತಿ ನೆಡುಂಪರಾ ಅವರಿಗೆ. “ದಯವಿಟ್ಟು ಸುಮ್ಮನಿರಿ. ಅಥವಾ ಕುಳಿತುಕೊಳ್ಳಿ. ನೀವು ಹೊರಡಲು ಬಯಸುತ್ತೀರಿ ಎಂದಾದರೆ ಹೋಗಬಹುದು. ಅದು ನಿಮ್ಮ ಆಯ್ಕೆ. ನೀವು ವಿಚಾರಣೆ ಮಧ್ಯಪ್ರವೇಶಿಸಬೇಕಾಗಿಲ್ಲ” ಎಂದು ಸಿಜೆಐ ಹೇಳಿದರು.

ನಾನೇ ನಿಮಗೆ ಕ್ಷಮೆ ನೀಡುತ್ತಿದ್ದೇನೆ ಎಂದ ನೆಡುಂಪರಾ

ಅಲ್ಲಿಗೂ ಸುಮ್ಮನಾಗದ ಮ್ಯಾಥ್ಯೂಸ್ ನೆಡುಂಪರಾ, ಬಳಿಕ “ನಾನು ಒಂದು ವಾಕ್ಯವನ್ನು ಹೇಳುವ ಮೂಲಕ ಮುಕ್ತಾಯಗೊಳಿಸುತ್ತೇನೆ. ನನಗೆ ಮಾಡಿದ ಎಲ್ಲಾ ಅವಮಾನಕ್ಕಾಗಿ ನಾನು ನ್ಯಾಯಾಂಗದ ಪ್ರಭುತ್ವವನ್ನು ಕ್ಷಮಿಸುತ್ತಿದ್ದೇನೆ. ಏಕೆಂದರೆ ಅವರು ಏನು ಮಾಡುತ್ತಿದ್ದಾರೆಂದು ನಿಮಗೆ ತಿಳಿದಿಲ್ಲ. ನನ್ನ ಮನಸ್ಸಿನಲ್ಲಿ ಏನೂ ಇಲ್ಲ, ಪ್ರಭುತ್ವದ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ಹೇಳಿ ಹೊರಟರು.

ವಿಚಾರಣೆಯಲ್ಲಿ ಎನ್​ಟಿಎಯನ್ನು ಪ್ರತಿನಿಧಿಸುತ್ತಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನೆಡುಂಪರಾ ಅವರ ನಡವಳಿಕೆಯನ್ನು ಅಗೌರವ ಎಂದು ಕರೆದಿದ್ದಾರೆ.

ಶಿಕ್ಷೆಗೆ ಒಳಗಾಗಿದ್ದ ನೆಡುಂಪಾರಾ?

2019ರಲ್ಲಿ, ಸುಪ್ರೀಂ ಕೋರ್ಟ್ ನೆಡುಂಪರಾ ಅವರನ್ನು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಘೋಷಿಸಿ. ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಆ ವೇಳೆ ಅವರು ಆಗಿನ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ಅವರ ತಂದೆ ಖ್ಯಾತ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ಹೆಸರನ್ನು ಅನಗತ್ಯವಾಗಿ ಕೋರ್ಟ್​ನಲ್ಲಿ ಉಲ್ಲೇಖಿಸಿದ್ದರು. ಬಳಿಕ ನೆಡುಂಪರಾ ಅವರು ಬೇಷರತ್​​ ಕ್ಷಮೆಯಾಚನೆ ಕೋರಿದ ಬಳಿಕ ಶಿಕ್ಷೆಯನ್ನು ಅಮಾನತುಗೊಳಿಸಿತ್ತು.

Continue Reading

ಪ್ರಮುಖ ಸುದ್ದಿ

Pennar River Dispute: ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; 8 ವಾರದಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

Pennar River Dispute: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಯರಗೋಳ ಬಳಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿ, ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್‌, 8 ವಾರಗಳಲ್ಲಿ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

VISTARANEWS.COM


on

Pennar River Dispute
Koo

ಬೆಂಗಳೂರು: ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ (Pennar River Dispute) ಸಂಬಂಧಿಸಿ 8 ವಾರಗಳಲ್ಲಿ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ನೀರು ಹಂಚಿಕೆ ಸಂಬಂಧ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ನ ನ್ಯಾ.ಹಿಮಾ ಕೊಯ್ಲಿ ನೇತೃತ್ವದ ಪೀಠ, ವಾಸ್ತವವಾಗಿ ಏನಾಗಿದೆ ಎಂಬುದನ್ನು ತಿಳಿಸುವಂತೆ ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ನಿರ್ದೇಶನ ನೀಡಿದೆ.

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಯರಗೋಳ ಬಳಿ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿತ್ತು. ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿತ್ತು. ಅಂತಾರಾಜ್ಯ ವಿವಾದವಾಗಿದ್ದರಿಂದ ನ್ಯಾಯಾಧೀಕರಣ ಸ್ಥಾಪನೆಗೆ ಆಗ್ರಹಿಸಿತ್ತು. ಆದರೆ ಮಾತುಕತೆಯಲ್ಲಿ ಇತ್ಯರ್ಥ ಮಾಡಿಕೊಳ್ಳುವ ಇರಾದೆಯನ್ನು ಕರ್ನಾಟಕ ವ್ಯಕ್ತಪಡಿಸಿತ್ತು. ಹಾಗಾಗಿ ವಾಸ್ತವವಾಗಿ ಏನಾಗಿದೆ ಎಂಬುದನ್ನು ತಿಳಿಸಲು 8 ವಾರಗಳಲ್ಲಿ ವರದಿ ನೀಡುವಂತೆ ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

2022ರ ಡಿಸೆಂಬರ್‌ನಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ಪೆನ್ನಾರ್‌ ನದಿ (ದಕ್ಷಿಣ ಪಿನಾಕಿನಿ) ನೀರು ಬಳಕೆ ವಿವಾದ ಬಗೆಹರಿಸಲು ಮೂರು ತಿಂಗಳೊಳಗೆ ನ್ಯಾಯಾಧಿಕರಣ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು. ಇದರಿಂದಾಗಿ, ಮಾತುಕತೆ ಮೂಲಕ ಜಲವಿವಾದ ಬಗೆಹರಿಸಿಕೊಳ್ಳುವ ಉದ್ದೇಶ ಹೊಂದಿದ್ದ ಕರ್ನಾಟಕಕ್ಕೆ ಹಿನ್ನಡೆಯಾಗಿತ್ತು.

ಏನಿದು ಪ್ರಕರಣ?

ದಕ್ಷಿಣ ಪಿನಾಕಿನಿಯ ಉಪನದಿಯಾದ ಮಾರ್ಕಂಡೇಯ ನದಿಗೆ ಅಡ್ಡಲಾಗಿ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಯರಗೋಳ ಗ್ರಾಮದ ಬಳಿ ಅಣೆಕಟ್ಟು ನಿರ್ಮಿಸಲು ಮುಂದಾಗಿದೆ. ಕೋಲಾರ, ಮಾಲೂರು, ಬಂಗಾರಪೇಟೆಯ ಹಲವು ಹಳ್ಳಿಗಳು ಹಾಗೂ ಪಟ್ಟಣಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದೆ. ಸುಮಾರು 240 ಕೋಟಿ ರೂ. ವೆಚ್ಚದ ಅಣೆಕಟ್ಟು ಯೋಜನೆಗೆ ಕೇಂದ್ರ ಜಲಶಕ್ತಿ ಸಚಿವಾಲಯದ ಅನುಮತಿಯನ್ನೂ ಪಡೆದಿದೆ. ಆದರೆ, ಇದಕ್ಕೆ ತಮಿಳುನಾಡು ಸರ್ಕಾರ ತಕರಾರು ತೆಗೆದಿದ್ದು, ಸುಪ್ರೀಂ ಕೋರ್ಟ್‌ ಮೊರೆಹೋಗಿದೆ.

ತಮಿಳುನಾಡು ತಕರಾರು ಏನು?

ಪೆನ್ನಾರ್‌ ನದಿಯ ನೀರಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸುವುದು ಅಂತಾರಾಜ್ಯ ಜಲವಿವಾದ ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂಬುದು ತಮಿಳುನಾಡಿನ ತಕರಾರಾಗಿದೆ. ಮಾರ್ಕಂಡೇಯ ನದಿಯು ಪೆನ್ನಾರ್‌ನ ಉಪನದಿಯಾದ ಕಾರಣ ಅಣೆಕಟ್ಟು ನಿರ್ಮಿಸಿದರೆ ನದಿ ನೀರಿನ ಹರಿವಿಗೆ ತೊಂದರೆಯಾಗುತ್ತದೆ. ತಮಿಳುನಾಡಿನ ಜನರು ಕೃಷಿ ಹಾಗೂ ಕುಡಿಯಲು ಪೆನ್ನಾರ್‌ ನದಿ ನೀರನ್ನು ಅವಲಂಬಿಸಿದ್ದಾರೆ. ಹಾಗಾಗಿ, ಅಣೆಕಟ್ಟು ನಿರ್ಮಿಸಲು ಅವಕಾಶ ನೀಡಬಾರದು ಎಂದು ತಕರಾರು ತೆಗೆದಿದೆ.

ಇದನ್ನೂ ಓದಿ | Assembly Session: ವಾಲ್ಮೀಕಿ ನಿಗಮ ಅಕ್ರಮ ದಲಿತರಿಗೆ ಮಾಡಿರೋ ಅನ್ಯಾಯ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಕರ್ನಾಟಕದ ವಾದವೇನು?

ಅಣೆಕಟ್ಟು ನಿರ್ಮಾಣ ಯೋಜನೆ ವೈಜ್ಞಾನಿಕವಾಗಿದ್ದು, ಕೇಂದ್ರ ಜಲಶಕ್ತಿ ಸಚಿವಾಲಯವೇ ಅನುಮತಿ ನೀಡಿದೆ ಎಂದು ಕರ್ನಾಟಕ ವಾದ ಮಂಡಿಸಿದೆ. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂಬುದು ಕರ್ನಾಟಕದ ಉದ್ದೇಶವಾಗಿತ್ತು. ಇದನ್ನು ರಾಜ್ಯ ಸರ್ಕಾರವು ಕೇಂದ್ರಕ್ಕೂ ಮನವರಿಕೆ ಮಾಡಿತ್ತು. ನ್ಯಾಯಾಧಿಕರಣದ ರಚನೆಯು ಬಿಕ್ಕಟ್ಟು ಬಗೆಹರಿಸಲು ಸಮಯ ತೆಗೆದುಕೊಳ್ಳುವುದರಿಂದ ಮಾತುಕತೆಗೆ ಕರ್ನಾಟಕ ಆದ್ಯತೆ ನೀಡಿತ್ತು.

Continue Reading

ಪ್ರಮುಖ ಸುದ್ದಿ

DK Shivakumar: `ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಸಿಬಿಐಗೇನು ಕೆಲಸ?’ ಅಕ್ರಮ ಆಸ್ತಿ ಕೇಸ್‌ ಬಗ್ಗೆ ಡಿಕೆ ಶಿವಕುಮಾರ್‌ ಪ್ರಶ್ನೆ

DK Shivakumar: ಸಿಬಿಐ ಎಫ್‌ಐಆರ್‌ ವಜಾ ಮಾಡಬೇಕು ಅಂತ ಕೇಳಿದ್ದೆವು. ಹೈಕೋರ್ಟ್‌ನಲ್ಲಿ ಮಾಡಲು ಆಗುವುದಿಲ್ಲ ಎಂದಿದ್ದರು. ಹೀಗಾಗಿ ಅಪೀಲ್ ಹಾಕಿದ್ದೆ. ಅಲ್ಲೂ ಏನೂ ಮಾಡಲು ಆಗುವುದಿಲ್ಲ ಎಂದು ನಿರ್ಣಯ ಬಂದಿದೆ. ಕೋರ್ಟ್ ಏನು ಹೇಳುತ್ತದೋ ಕೇಳೋಣ. ತನಿಖೆ ನಡೆಯಲಿ ಎಂದು ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದರು.

VISTARANEWS.COM


on

Kempambudi lake encroachment cleared soon says DCM DK Shivakumar
Koo

ಬೆಂಗಳೂರು: ಒಂದು ಸಲ ನಮ್ಮ ಸರಕಾರ ಪ್ರಕರಣವನ್ನು ಲೋಕಾಯುಕ್ತಕ್ಕೆ (Lokayukta) ಕೊಟ್ಟ ಮೇಲೆ ಸಿಬಿಐಯವರು ತನಿಖೆ (CBI Probe) ಮಾಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್‌ (Supreme Court) ತೀರ್ಮಾನವನ್ನು ಒಪ್ಪಿಕೊಳ್ಳುತ್ತೇನೆ ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DCM DK Shivakumar) ಹೇಳಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಆರಂಭಿಸಿರುವ ತನಿಖೆಯನ್ನು ಕೈಬಿಡುವಂತೆ ಸೂಚಿಸಬೇಕು ಎಂದು ಡಿಕೆ ಶಿವಕುಮಾರ್ (DK Shivakumar) ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು.

ಸಿಬಿಐ ಎಫ್‌ಐಆರ್‌ ವಜಾ ಮಾಡಬೇಕು ಅಂತ ಕೇಳಿದ್ದೆವು. ಹೈಕೋರ್ಟ್‌ನಲ್ಲಿ ಮಾಡಲು ಆಗುವುದಿಲ್ಲ ಎಂದಿದ್ದರು. ಹೀಗಾಗಿ ಅಪೀಲ್ ಹಾಕಿದ್ದೆ. ಅಲ್ಲೂ ಏನೂ ಮಾಡಲು ಆಗುವುದಿಲ್ಲ ಎಂದು ನಿರ್ಣಯ ಬಂದಿದೆ. ಕೋರ್ಟ್ ಏನು ಹೇಳುತ್ತದೋ ಕೇಳೋಣ. ತನಿಖೆ ನಡೆಯಲಿ ಎಂದು ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದರು.

ಲೋಕಾಯುಕ್ತದವರು ಇನ್ವೆಸ್ಟಿಗೇಶನ್ ಮಾಡುತ್ತಿದ್ದಾರೆ. CBIನವರಿಗೆ ಮಾಡಬೇಡಿ ಅಂತ ಹೇಳಿದರೂ ಮಾಡುತ್ತಿದ್ದಾರೆ. ಏನು ಬೇಕಾದರೂ ಮಾಡಲಿ, ನನ್ನದೇನೂ ತಪ್ಪಿಲ್ಲ. ನಮ್ಮ‌ ಸರ್ಕಾರ ಒಂದು ಸಲ ವಿತ್‌ಡ್ರಾ ಮಾಡಿದ ಮೇಲೆ ಮುಗಿಯಿತು. ನನ್ನ ಆಸ್ತಿ ದಾಖಲೆ ಏನಿದೆ ಕೊಡ್ತೀನಿ ಎಂದು ಡಿಕೆಶಿ ತಿಳಿಸಿದರು. ಕೇಂದ್ರ ಸರ್ಕಾರ ಇದನ್ನು ಉದ್ದೇಶಪೂರ್ವಕ ಮಾಡುತ್ತಿದೆಯಾ ಎಂಬ ಪ್ರಶ್ನೆಗೆ ʼಕೋರ್ಟ್ ಬಗ್ಗೆ ಏನು ಮಾತನಾಡಲೂ ಆಗುವುದಿಲ್ಲ. ಕೋರ್ಟ್ ಹೇಳಿದಂತೆ ಕೇಳಬೇಕುʼ ಎಂದು ಡಿಕೆಶಿ ಉತ್ತರಿಸಿದರು.

ಸಿಬಿಐ ತನಿಖೆ ಕೈಬಿಡಲು ಸುಪ್ರೀಂ ಕೋರ್ಟ್‌ ನಕಾರ

2013ರಿಂದ 2017ರವರೆಗಿನ ಅವಧಿಯಲ್ಲಿ ಡಿಕೆಶಿಯವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸಿದ್ದಾರೆಂದು ಸಿಬಿಐ ಆರೋಪಿಸಿದ್ದು, ಆ ಕುರಿತಂತೆ ಎಫ್ಐಆರ್ ದಾಖಲಿಸಿತ್ತು. ಆ ಪ್ರಕರಣವನ್ನು ಕೈಬಿಡುವಂತೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಡಿಕೆಶಿ ಮನವಿ ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಾಲಾ ತ್ರಿವೇದಿ ನೇತೃತ್ವದ ಪೀಠ, ಡಿಕೆ ಶಿವಕುಮಾರ್ ಅವರ ಅರ್ಜಿಯನ್ನು ವಜಾಗಳಿಸಿತು.

ಈ ಹಿಂದಿನ ಸಿದ್ದರಾಮಯ್ಯನವರ ರಾಜ್ಯ ಸರ್ಕಾರದಲ್ಲಿ ಡಿಕೆಶಿಯವರು ಇಂಧನ ಸಚಿವರಾಗಿದ್ದರು. ಆ ಸರ್ಕಾರದ ಅವಧಿಯಲ್ಲಿ 74 ಕೋಟಿ ರೂ.ಗಳಷ್ಟು ದಾಖಲೆರಹಿತ ಆದಾಯವನ್ನು ಡಿಕೆ ಶಿವಕುಮಾರ್ ಅವರು ಗಳಿಸಿದ್ದಾರೆಂದು ಹೇಳಲಾಗಿದೆ. ಅದರಂತೆ, 74.93 ಕೋಟಿ ರೂಪಾಯಿಗಳನ್ನು ಹೆಚ್ಚುವರಿಯಾಗಿ ಗಳಿಸಿದ್ದಾರೆಂದು ಸಿಬಿಐ ಆರೋಪಿಸಿತ್ತು. ಆ ಹಿನ್ನೆಲೆಯಲ್ಲಿ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ 2019ರಲ್ಲಿ ರಾಜ್ಯ ಸರ್ಕಾರಕ್ಕೆ ಸಿಬಿಐ ಅರ್ಜಿ ಸಲ್ಲಿಸಿತ್ತು.

2019ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ಸಿಬಿಐ ಮನವಿಗೆ ಸ್ಪಂದಿಸಿ ತನಿಖೆಗೆ ಅನುಮತಿ ನೀಡಿತ್ತು. ಆನಂತರ ಸಿಬಿಐ, ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಅದೇ ತನಿಖೆಯನ್ನು ಕೈಬಿಡುವಂತೆ ಡಿಕೆ ಶಿವಕುಮಾರ್ ಅವರು ಹೈಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದು ಮೊದಲಿಗೆ ಅದು ವಿಭಾಗೀಯ ಪೀಠದಲ್ಲಿ ವಿಚಾರಣೆಯಾಗಿ ಆನಂತರ ಅದೀಗ ವಿಸ್ತ್ರೃತ ಪೀಠಕ್ಕೆ ವರ್ಗಾವಣೆಯಾಗಿದೆ.

ಇದನ್ನೂ ಓದಿ: DK Shivakumar : ಡಿಕೆ ಶಿವಕುಮಾರ್‌ ಟಿಪ್ಪಣಿ ಆಧರಿಸಿ ಮಾಡಿದ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆಗೆ ಹೈಕೋರ್ಟ್‌ ತಡೆ

Continue Reading

ಪ್ರಮುಖ ಸುದ್ದಿ

DK Shivakumar: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಕೆಶಿಗೆ ಶಾಕ್‌, ಸಿಬಿಐ ತನಿಖೆ ಕೈಬಿಡಲು ಸುಪ್ರೀಂ ಕೋರ್ಟ್‌ ನಕಾರ

DK Shivakumar: 2013ರಿಂದ 2017ರವರೆಗಿನ ಅವಧಿಯಲ್ಲಿ ಡಿಕೆಶಿಯವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸಿದ್ದಾರೆಂದು ಸಿಬಿಐ ಆರೋಪಿಸಿದ್ದು, ಆ ಕುರಿತಂತೆ ಎಫ್ಐಆರ್ ದಾಖಲಿಸಿತ್ತು. ಆ ಪ್ರಕರಣವನ್ನು ಕೈಬಿಡುವಂತೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಡಿಕೆಶಿ ಮನವಿ ಸಲ್ಲಿಸಿದ್ದರು.

VISTARANEWS.COM


on

DK Shivakumar cbi supreme court
Koo

ಬೆಂಗಳೂರು: ಅಕ್ರಮ ಆಸ್ತಿ (Disproportionate assets) ಗಳಿಕೆ ಆರೋಪದಡಿ ತಮ್ಮ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ, CBI) ಆರಂಭಿಸಿರುವ ತನಿಖೆಯನ್ನು (CBI probe) ಕೈಬಿಡುವಂತೆ ಸೂಚಿಸಬೇಕು ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.

2013ರಿಂದ 2017ರವರೆಗಿನ ಅವಧಿಯಲ್ಲಿ ಡಿಕೆಶಿಯವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಆದಾಯವನ್ನು ಗಳಿಸಿದ್ದಾರೆಂದು ಸಿಬಿಐ ಆರೋಪಿಸಿದ್ದು, ಆ ಕುರಿತಂತೆ ಎಫ್ಐಆರ್ ದಾಖಲಿಸಿತ್ತು. ಆ ಪ್ರಕರಣವನ್ನು ಕೈಬಿಡುವಂತೆ ಸಿಬಿಐಗೆ ನಿರ್ದೇಶನ ನೀಡಬೇಕೆಂದು ಕೋರಿ ಡಿಕೆಶಿ ಮನವಿ ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಬಾಲಾ ತ್ರಿವೇದಿ ನೇತೃತ್ವದ ಪೀಠ, ಡಿಕೆ ಶಿವಕುಮಾರ್ ಅವರ ಅರ್ಜಿಯನ್ನು ವಜಾಗಳಿಸಿತು.

ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಅನುಮತಿ ಪಡೆಯದೆ ತನಿಖೆ ಆರಂಭಿಸಲಾಗಿದೆ. 2018 ರ ತಿದ್ದುಪಡಿಯ ದಿನಾಂಕದ ಮೊದಲು ಸೆಕ್ಷನ್ 17 ಎ ಸೇರಿಸಲಾದ ಅಪರಾಧಗಳಿಗೆ ಸೆಕ್ಷನ್ 17 ಎ ಅನ್ವಯಿಸುತ್ತದೆಯೇ ಎಂಬ ವಿಷಯವನ್ನು ಘನ ಪೀಠಕ್ಕೆ ಉಲ್ಲೇಖಿಸಲಾಗಿದೆ ಎಂದು ಅವರು ಚಂದ್ರಬಾಬು ನಾಯ್ಡು ಪ್ರಕರಣದ ತೀರ್ಪನ್ನು ಉಲ್ಲೇಖಿಸಿದರು.

ವಾದ ವಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ತ್ರಿವೇದಿ ಅವರು, ವಿಭಜಿತ ತೀರ್ಪಿನ ಆಧಾರದ ಮೇಲೆ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಉತ್ತರಿಸಿದರು. ಡಿಕೆಶಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಅರ್ಜಿಯ ಕುರಿತು ನೋಟಿಸ್ ಜಾರಿ ಮಾಡುವಂತೆ ಮನವಿ ಮಾಡುತ್ತಿರುವುದಾಗಿ ತಿಳಿಸಿದರು. ಆದರೆ, ಪೀಠ ಇದಕ್ಕೆ ನಿರಾಸಕ್ತಿ ವ್ಯಕ್ತಪಡಿಸಿತು.

ಯಾವುದಿದು ಪ್ರಕರಣ?

ಈ ಹಿಂದಿನ ಸಿದ್ದರಾಮಯ್ಯನವರ ರಾಜ್ಯ ಸರ್ಕಾರದಲ್ಲಿ ಡಿಕೆಶಿಯವರು ಇಂಧನ ಸಚಿವರಾಗಿದ್ದರು. ಆ ಸರ್ಕಾರದ ಅವಧಿಯಲ್ಲಿ 74 ಕೋಟಿ ರೂ.ಗಳಷ್ಟು ದಾಖಲೆರಹಿತ ಆದಾಯವನ್ನು ಡಿಕೆ ಶಿವಕುಮಾರ್ ಅವರು ಗಳಿಸಿದ್ದಾರೆಂದು ಹೇಳಲಾಗಿದೆ. ಅದರಂತೆ, 74.93 ಕೋಟಿ ರೂಪಾಯಿಗಳನ್ನು ಹೆಚ್ಚುವರಿಯಾಗಿ ಗಳಿಸಿದ್ದಾರೆಂದು ಸಿಬಿಐ ಆರೋಪಿಸಿತ್ತು. ಆ ಹಿನ್ನೆಲೆಯಲ್ಲಿ ಅವರ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ 2019ರಲ್ಲಿ ರಾಜ್ಯ ಸರ್ಕಾರಕ್ಕೆ ಸಿಬಿಐ ಅರ್ಜಿ ಸಲ್ಲಿಸಿತ್ತು.

2019ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ಸಿಬಿಐ ಮನವಿಗೆ ಸ್ಪಂದಿಸಿ ತನಿಖೆಗೆ ಅನುಮತಿ ನೀಡಿತ್ತು. ಆನಂತರ ಸಿಬಿಐ, ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಅದೇ ತನಿಖೆಯನ್ನು ಕೈಬಿಡುವಂತೆ ಡಿಕೆ ಶಿವಕುಮಾರ್ ಅವರು ಹೈಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದು ಮೊದಲಿಗೆ ಅದು ವಿಭಾಗೀಯ ಪೀಠದಲ್ಲಿ ವಿಚಾರಣೆಯಾಗಿ ಆನಂತರ ಅದೀಗ ವಿಸ್ತ್ರೃತ ಪೀಠಕ್ಕೆ ವರ್ಗಾವಣೆಯಾಗಿದೆ.

ಈ ಪ್ರಕರಣವನ್ನು ಸಿಬಿಐಗೆ ವಹಿಸಿದ್ದ ಹಿಂದಿನ ಸರ್ಕಾರದ ನಿರ್ಧಾರವನ್ನು ಹಾಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ರದ್ದು ಮಾಡಲು ನಿರ್ಧರಿಸಿದೆ. ಅದರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಮತ್ತೆ ಹೈಕೋರ್ಟ್ ಮೊರೆ ಹೋಗಿರುವ ಸಿಬಿಐ, ಒಮ್ಮೆ ತನಿಖೆಗೊಳಪಡಿಸಲಾಗಿರುವ ಪ್ರಕರಣವನ್ನು ಪುನಃ ಹಿಂಪಡೆಯುವುದು ಸಲ್ಲದು ಎಂದು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದೆ. ಅತ್ತ, ಸುಪ್ರೀಂ ಕೋರ್ಟ್‌ಗೂ ಸಿಬಿಐ ಮೇಲ್ಮನವಿ ಸಲ್ಲಿಸಿದೆ.

ಕರ್ನಾಟಕ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ವಾಲ್ಮೀಕಿ ನಿಗಮದ ಹಗರಣ ಹಾಗೂ ಮುಡಾ ಅಕ್ರಮಗಳು ಬಿಜೆಪಿ ಆಡಳಿತಾವಧಿಯಲ್ಲೇ ಶುರುವಾಗಿರುವಂಥವು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾದ ನಂತರ ಅವು ಮೇಲೆದ್ದಿವೆ. ಬಿಜೆಪಿಯು ಆ ಎಲ್ಲಾ ಹಗರಣಗಳನ್ನು ನಮ್ಮ ತಲೆಗೆ ಕಟ್ಟಲು ನೋಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: DK Shivakumar: ಸಿಎಂ- ಡಿಸಿಎಂ ದಂಗಲ್‌ ವಿಷಯ ಎತ್ತುವ ಶಾಸಕರಿಗೆ ನೊಟೀಸ್: ಡಿಕೆ ಶಿವಕುಮಾರ್

Continue Reading
Advertisement
Michel Phelps ರಾಜಮಾರ್ಗ ಅಂಕಣ
ಅಂಕಣ22 mins ago

ರಾಜಮಾರ್ಗ ಅಂಕಣ: 28 ಒಲಿಂಪಿಕ್ ಪದಕಗಳ ವಿಶ್ವದಾಖಲೆ- ಮೈಕೆಲ್ ಫೆಲ್ಪ್ಸ್

Aadhaar Update
ವಾಣಿಜ್ಯ35 mins ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ50 mins ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ2 hours ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ2 hours ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ2 hours ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ2 hours ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Mumbai Spa
ಪ್ರಮುಖ ಸುದ್ದಿ7 hours ago

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ13 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ14 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ15 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ16 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌