Site icon Vistara News

Himachal Pradesh Election | ಹಿಮಾಚಲ ಪ್ರದೇಶ ವಿಧಾನಸಭೆ ಎಲೆಕ್ಷನ್, ನಾಳೆ ಮತದಾನ, ಡಿ.8ಕ್ಕೆ ರಿಸಲ್ಟ್

Himachal Pradesh election

ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ನಾಳೆ(ನ.12) ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ರಿಸಲ್ಟ್ ಪ್ರಕಟವಾಗಲಿದೆ. ಒಟ್ಟು 68 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಮಧ್ಯೆ ತೀವ್ರ ಸ್ಪರ್ಧೆ ಏರ್ಪಟ್ಟಿದ್ದು, ಆಮ್ ಆದ್ಮಿ ಪಾರ್ಟಿ ಕೂಡ ಪ್ರಮುಖ ಪಾತ್ರ ನಿರ್ವಹಿಸುವ ಸಾಧ್ಯತೆ ಇದೆ(Himachal Pradesh Election).

1990ರ ದಶಕದಿಂದ ಈಚೆಗೆ, ಹಿಮಾಚಲ ಪ್ರದೇಶದ ಚುನಾವಣೆಯ ಪ್ಯಾಟರ್ನ್ ಗಮನಿಸಿದರೆ, ಒಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ.. ಹೀಗೆ ಅಧಿಕಾರವನ್ನು ಹಿಡಿದಿವೆ. ಈ ಪ್ಯಾಟರ್ನ್ ಅನ್ನು ಈ ಬಾರಿ ಬಿಜೆಪಿಯೇನಾದರೂ ಬದಲಿಸಲಿದೆಯೇ? ಕಾದು ನೋಡಬೇಕು. ಆದರೆ, ಹಲವು ಚುನಾವಣಾ ಪೂರ್ವ ಸಮೀಕ್ಷೆಗಳು ಈ ಬಾರಿಯೂ ಬಿಜೆಪಿಯೇ ಅಧಿಕಾರಕ್ಕೆ ಏರಲಿದೆ ಎಂದು ಭವಿಷ್ಯ ನುಡಿದಿವೆ.

ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶಕ್ಕೆ ಎರಡು ಬಾರಿ ಭೇಟಿ ನೀಡಿ, ಚುನಾವಣಾ ಪ್ರಚಾರವನ್ನು ಕೈಗೊಂಡಿದ್ದಾರೆ. ಕಾಂಗ್ರೆಸ್ ಪರವಾಗಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಪ್ರಚಾರ ಕೈಗೊಂಡಿದ್ದಾರೆ. ಡಿಸೆಂಬರ್ 1 ಮತ್ತು 5ರಂದು ಗುಜರಾತ್‌ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಎರಡೂ ರಾಜ್ಯಗಳ ಎಲೆಕ್ಷನ್ ರಿಸಲ್ಟ್ ಡಿಸೆಂಬರ್ 8ರಂದು ಪ್ರಕಟಿಸಲಿದೆ.

ಇದನ್ನೂ ಓದಿ | ಹಿಮಾಚಲ ಪ್ರದೇಶ, ಗುಜರಾತ್​​ನಲ್ಲಿ​ ಚುನಾವಣೋತ್ತರ ಸಮೀಕ್ಷೆ ನಡೆಸುವಂತಿಲ್ಲ: ಚುನಾವಣಾ ಆಯೋಗದ ಆದೇಶ

Exit mobile version