ರಾಮಮಂದಿರಕ್ಕೆ ಹೋದವರು ಮುಸ್ಲಿಮರಾಗಿ ಬರುತ್ತಾರೆ ಎಂದ ಪಾಕ್‌ ಮಾಜಿ ಕ್ರಿಕೆಟಿಗ; ಬೆಂಡೆತ್ತಿದ ಜನ - Vistara News

ದೇಶ

ರಾಮಮಂದಿರಕ್ಕೆ ಹೋದವರು ಮುಸ್ಲಿಮರಾಗಿ ಬರುತ್ತಾರೆ ಎಂದ ಪಾಕ್‌ ಮಾಜಿ ಕ್ರಿಕೆಟಿಗ; ಬೆಂಡೆತ್ತಿದ ಜನ

ರಾಮಮಂದಿರದ ಕುರಿತು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಜಾವೇದ್‌ ಮಿಯಾಂದಾದ್‌ ನೀಡಿರುವ ಉದ್ಧಟತನದ ಹೇಳಿಕೆಯ ವಿಡಿಯೊ ಭಾರಿ ವೈರಲ್‌ ಆಗಿದೆ. ಪಾಕ್‌ ಮಾಜಿ ಕ್ರಿಕೆಟಿಗನಿಗೆ ಭಾರತೀಯರು ಬೆಂಡೆತ್ತಿದ್ದಾರೆ.

VISTARANEWS.COM


on

Javed Miandad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದ (Ram Mandir) ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಮಮಂದಿರದ ಗರ್ಭಗುಡಿಯಲ್ಲಿ 2024ರ ಜನವರಿ 22ರಂದು ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಿದ್ದಾರೆ. ಇದಕ್ಕಾಗಿ ಭರದ ಸಿದ್ಧತೆಗಳೂ ನಡೆಯುತ್ತಿವೆ. ಇದರ ಬೆನ್ನಲ್ಲೇ, “ರಾಮಮಂದಿರಕ್ಕೆ ಹೋದವರು ಮುಸ್ಲಿಮರಾಗಿ ಹೊರಬರುತ್ತಾರೆ” ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಜಾವೇದ್‌ ಮಿಯಾಂದಾದ್‌ (Javed Miandad) ಹೇಳಿರುವ ಹಳೆಯ ವಿಡಿಯೊ (Viral Video) ಈಗ ವೈರಲ್‌ ಆಗಿದೆ.

“ಅಯೋಧ್ಯೆ ರಾಮಮಂದಿರಕ್ಕೆ ಹೋಗುವ ಹಿಂದುಗಳು ಮುಸ್ಲಿಮರಾಗಿ ಹೊರಬರುತ್ತಾರೆ. ಯಾವುದೇ ನೆಲದ ಮೂಲವು ಇಸ್ಲಾಂ ಆಗಿದ್ದರೆ, ಅದರ ಹೊಳಪು ಮರೆಯಾಗುವುದಿಲ್ಲ ಎಂಬುದು ನಮ್ಮ ನಂಬಿಕೆಯಾಗಿದೆ. ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ ತಪ್ಪು ಮಾಡಿದ್ದಾರೆ. ಆದರೆ, ಅದೇ ಭೂಮಿಯಲ್ಲಿ ಮುಸ್ಲಿಮರು ಮತ್ತೆ ಎದ್ದು ಬರಲಿದ್ದಾರೆ ಎಂದು ಅಲ್ಲಾಹುವಿನಲ್ಲಿ ನಂಬಿಕೆ ಇಟ್ಟಿದ್ದೇವೆ” ಎಂಬುದಾಗಿ ಜಾವೇದ್‌ ಮಿಯಾಂದಾದ್‌ ಹೇಳಿದ್ದಾರೆ.

ವೈರಲ್‌ ಆಗಿರುವ ವಿಡಿಯೊ

ನರೇಂದ್ರ ಮೋದಿ ಅವರು 2020ರ ಆಗಸ್ಟ್‌ 5ರಂದು ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಮೂರು ದಿನದ ಬಳಿಕ ಜಾವೇದ್‌ ಮಿಯಾಂದಾದ್‌ ಹೀಗೆ ಹೇಳಿರುವ ವಿಡಿಯೊ ಪೋಸ್ಟ್‌ ಮಾಡಿದ್ದರು. ಆಗಲೂ ವಿಡಿಯೊ ವೈರಲ್‌ ಆಗಿತ್ತು. ಈಗಲೂ ವೈರಲ್‌ ಆಗುತ್ತಿದೆ. ಇನ್ನು ವಿಡಿಯೊ ವೈರಲ್‌ ಆಗುತ್ತಲೇ ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ನಾಯಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಆರ್‌ಎಸ್‌ಎಸ್‌ಗೆ ಕಾರ್ಯಕ್ರಮಗಳ ಆಯೋಜನೆ ಹೊಣೆ

ರಾಮಮಂದಿರಕ್ಕೆ ಚಾಲನೆ ನೀಡುವ ದಿನ ದೇಶಾದ್ಯಂತ 5 ಲಕ್ಷ ದೇವಾಲಯಗಳಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ವೇಳೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆರ್‌ಎಸ್‌ಎಸ್‌ ಕಚೇರಿಗಳ ಪದಾಧಿಕಾರಿಗಳು ಈ ಕಾರ್ಯಕ್ರಮಗಳ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಟ್ರಸ್ಟ್‌ ತಿಳಿಸಿದೆ. “ರಾಮಮಂದಿರಕ್ಕೆ ಚಾಲನೆ ನೀಡುವ ದಿನ ಇಡೀ ದೇಶವೇ ರಾಮಮಯವಾಗಲಿದೆ. ದೇಶದ ಪ್ರತಿಯೊಂದು ದೇವಾಲಯಗಳಲ್ಲೂ ಸನಾತನ ಧರ್ಮದ ಅನುಯಾಯಿಗಳು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು” ಎಂದು ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್ ಕರೆ ನೀಡಿದ್ದಾರೆ.

ಇದನ್ನೂ ಓದಿ: Ram Mandir: ರಾಮಮಂದಿರದ ‘ಕ್ರೆಡಿಟ್’‌ ರಾಜೀವ್‌ ಗಾಂಧಿಗೂ ನೀಡಿ; ಕಮಲ್‌ ನಾಥ್‌ ಆಗ್ರಹ!

ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ 2019ರ ನವೆಂಬರ್‌ 9ರಂದು ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿ, ರಾಮಜನ್ಮಭೂಮಿಯಲ್ಲಿಯೇ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದೆ. 2020ರ ಆಗಸ್ಟ್‌ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Asaram Bapu: ಬಾಲಕಿ ಮೇಲೆ ಅತ್ಯಾಚಾರ; ಅಸಾರಾಂ ಬಾಪುಗೆ ಜೈಲೇ ಗತಿ

Asaram Bapu: ಅಸಾರಾಂ ಬಾಪು ಬಂಡವಾಳ ಬಯಲಾಗಲು ಆರಂಭವಾಗಿದ್ದು 2008ರಿಂದ. ಆಗ ಅವರ ಗುರುಕುಲದಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಮಕ್ಕಳು 2008ರ ಜುಲೈ 3ರಂದು ಕಾಣೆಯಾದರು. ಅದಾದ ಎರಡೇ ದಿನಗಳಲ್ಲಿ ಅವರ ಮೃತ ದೇಹಗಳು ಸಬರಮತಿ ನದಿ ದಡದಲ್ಲಿ ಸಿಕ್ಕಿದ್ದವು. ಇದು ಭಾರಿ ಸುದ್ದಿಯಾಗಿತ್ತು.

VISTARANEWS.COM


on

Asaram Bapu
Koo

ನವದೆಹಲಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು (Asaram Bapu) ಅವರಿಗೆ ಭಾರಿ ಹಿನ್ನಡೆಯಾಗಿದೆ. ಜಾಮೀನು ಕೋರಿ ಅಸಾರಾಂ ಬಾಪು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (Supreme Court) ವಜಾಗೊಳಿಸಿದ್ದು, ರಾಜಸ್ಥಾನ ಹೈಕೋರ್ಟ್‌ (Rajasthan High Court) ಮೊರೆ ಹೋಗುವಂತೆ ಸೂಚಿಸಿದೆ. ಹಾಗೆಯೇ, ಅಸಾರಾಂ ಬಾಪು ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂದು ರಾಜಸ್ಥಾನ ಹೈಕೋರ್ಟ್‌ಗೆ ಸರ್ವೋಚ್ಚ ನ್ಯಾಯಾಲಯ ಸೂಚಿಸಿದೆ.

ಅಸಾರಾಂ ಬಾಪು ಪರ ಹಿರಿಯ ವಕೀಲ ಮುಕುಲ್‌ ರೋಹಟ್ಗಿ ವಾದ ಮಂಡಿಸಿದರು. “ಅಸಾರಾಂ ಬಾಪು ಅವರಿಗೆ ಈಗಾಗಲೇ ಹಲವು ಬಾರಿ ಹೃದಯಾಘಾತವಾಗಿದೆ. ಓಪನ್‌ ಹಾರ್ಟ್‌ ಸರ್ಜರಿಗೆ ಒಳಗಾಗುವ ಸ್ಥಿತಿಯಲ್ಲೂ ಅವರಿಲ್ಲ. ಆದರೆ, ಪೊಲೀಸ್‌ ಕಸ್ಟಡಿಯಲ್ಲೇ ಅವರು ಚಿಕಿತ್ಸೆ ಪಡೆಯಲು ಇಚ್ಛಿಸುತ್ತಿದ್ದಾರೆ. ಅವರ ಅನಾರೋಗ್ಯದ ದೃಷ್ಟಿಯಿಂದ ಜಾಮೀನು ನೀಡಬೇಕು” ಎಂದು ಮನವಿ ಮಾಡಿದರು. ಆದರೆ, ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತ ಅವರಿದ್ದ ಪೀಠವು, ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸೂಚಿಸಿತು.

ಏನಿದು ಪ್ರಕರಣ?

ಅಸಾರಾಂ ಬಾಪು ಅವರು 2013ರಲ್ಲಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಬಯಲಾಗುತ್ತಲೇ ಅವರ ವಿರುದ್ಧ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. 2018ರಲ್ಲಿ ಅಧೀನ ನ್ಯಾಯಾಲಯವು ಇವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಅಷ್ಟೇ ಅಲ್ಲ, 2023ರಲ್ಲಿ ಕೂಡ ಮತ್ತೊಂದು ಅತ್ಯಾಚಾರ ಪ್ರಕರಣದಲ್ಲಿ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಅಸಾರಾಂ ಬಾಪು ಎಂದು ಪ್ರಖ್ಯಾತಿ ಪಡೆದಿರುವ ಈ ದೇವಮಾನವನ ನಿಜ ಹೆಸರು ಅಸುಮಲ್‌ ಹರ್ಪಲಾನಿ. 1970ರ ದಶಕದಲ್ಲಿ ಅಹಮದಾಬಾದ್‌ನ ಶಬರಮತಿ ನದಿ ದಡದಲ್ಲಿ ಆಶ್ರಮವೊಂದನ್ನು ಸ್ಥಾಪಿಸಿದರು. ಆ ಆಶ್ರಮದಲ್ಲಿ ಪ್ರಸಿದ್ಧಿ ಪಡೆದ ಅವರು ನಂತರ ಅದನ್ನೇ ತಮ್ಮ ಉದ್ಯಮವನ್ನಾಗಿ ಮಾಡಿಕೊಂಡು ದೇಶದ ಹಲವಾರು ಭಾಗಗಳಲ್ಲಿ ಆಶ್ರಮಗಳನ್ನು ತೆರೆದರು. ಹಲವು ಗುರುಕುಲಗಳನ್ನೂ ನಡೆಸಿದರು. ಅವರ ಆಶ್ರಮದ ವತಿಯಿಂದ ರಿಷಿ ಪ್ರಸಾದ್‌ ಹೆಸರಿನ ಮಾಸಿಕ ಪತ್ರಿಕೆಯೂ ಬಿಡುಗಡೆಯಾಗುತ್ತಿದ್ದು, ಅದೂ ಕೂಡ ಸಾಕಷ್ಟು ಪ್ರಸಿದ್ಧಿ ಪಡೆದುಕೊಂಡಿದೆ.

ಇದನ್ನೂ ಓದಿ: love and Crime : ನೋಡಿ ಸ್ವಾಮಿ.. ನೀನೇ ಬೇಕು ಎಂದು ಟೆಕ್ಕಿ ಮಹಿಳೆ ಬೆನ್ನುಹತ್ತಿದ್ದಾನೆ ಈ ಆಸಾಮಿ!

ಈ ಅಸಾರಾಂ ಬಾಪು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಕಾಲದಲ್ಲಿ ಅವರಿಗೆ ಸಾಮಾನ್ಯರ ಜತೆಯಲ್ಲಿ ಗಣ್ಯರೂ ಕೂಡ ಅನುಯಾಯಿಗಳಾಗಿದ್ದರು. ಆಗಿನ ಗುಜರಾತ್‌ ಮುಖ್ಯಮಂತ್ರಿ ಹಾಗೂ ಈಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೂ ಈ ಅಸಾರಾಂರನ್ನು ಭೇಟಿ ಮಾಡುತ್ತಿದ್ದರು. ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ, ಎಲ್‌.ಕೆ.ಆಡ್ವಾಣಿ, ಕಾಂಗ್ರೆಸ್‌ನ ಹಿರಿಯ ನಾಯಕ ಕಮಲ್‌ನಾಥ್‌, ದಿಗ್ವಿಜಯ ಸಿಂಗ್‌ ಕೂಡ ಅಸಾರಾಂರನ್ನು ಭೇಟಿ ಮಾಡಿರುವವರೇ. ಹಾಗೆಯೇ ಮೂರು ನಕಲಿ ಎನ್‌ಕೌಂಟರ್‌ ಆರೋಪದಲ್ಲಿ ಜೈಲು ಸೇರಿ ಬಿಡುಗಡೆಯಾದ ನಿವೃತ್ತ ಐಪಿಎಸ್‌ ಅಧಿಕಾರಿ ಡಿ.ಜೆ.ವಂಜಾರಾ ಕೂಡ ಅಸಾರಾಂ ಅನುಯಾಯಿಗಳಾಗಿದ್ದವರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Sensex Jump : ಷೇರು ಮಾರುಕಟ್ಟೆಯಲ್ಲಿ ಮಿಂಚಿನ ಸಂಚಾರ; 1000 ಅಂಕಗಳಷ್ಟು ಏರಿಕೆ

Sensex Jump : 2023-24 ಮೂರನೇ ತ್ರೈಮಾಸಿಕದ ಜಿಡಿಪಿಯಲ್ಲಿ ಭರ್ಜರಿ ಚೇತರಿಕೆ ಕಂಡಿರುವ ಕಾರಣ ಷೇರು ಮಾರುಕಟ್ಟೆಯಲ್ಲಿ ದೊಡ್ಡ ಏರಿಕೆಯಾಗಿದೆ.

VISTARANEWS.COM


on

Sensex points
Koo

ನವ ದೆಹಲಿ: ಬಿಎಸ್ಇ ಸೆನ್ಸೆಕ್ಸ್ 1,000 ಪಾಯಿಂಟ್ಸ್ ಏರಿಕೆಯಾಗಿದ್ದು (Sensex Jump) 73,574 ಅಂಕಗಳಿಗೆ ತಲುಪಿದೆ. ಎನ್ಎಸ್ಇ ನಿಫ್ಟಿ50 ಶುಕ್ರವಾರದ ವಹಿವಾಟಿನಲ್ಲಿ ಮೊದಲ ಬಾರಿಗೆ 22,300 ಅಂಕಗಳನ್ನು ತಲುಪಿ ಹೊಸ ಗರಿಷ್ಠ ಮಟ್ಟಕ್ಕೇರಿದೆ. ಬಿಎಸ್ಇಯಲ್ಲಿ ಎಲ್ಲಾ ಲಿಸ್ಟೆಡ್ ಕಂಪನಿಗಳ ಮಾರುಕಟ್ಟೆ ಬಂಡವಾಳವು 3.23 ಲಕ್ಷ ಕೋಟಿ ರೂ.ಗಳಿಂದ 391.18 ಲಕ್ಷ ಕೋಟಿ ರೂ.ಗೆ ಏರಿದೆ. 2023-24ರ ಹಣಕಾಸು ವರ್ಷದ ತ್ರೈಮಾಸಿಕದಲ್ಲಿ ಜಿಡಿಜಿ ನಿರೀಕ್ಷೆ ಮೀರಿ ಶೇಕಡಾ 8.3ರಷ್ಟು ದಾಖಲಾಗಿರುವ ಕಾರಣ ಷೇರು ಮಾರುಕಟ್ಟೆಯಲ್ಲಿ ಭರ್ಜರಿ ಚೈತನ್ಯ ಕಂಡಿದೆ.

ಸೆನ್ಸೆಕ್ಸ್ 30 ಷೇರುಗಳ ಪೈಕಿ ಟಾಟಾ ಸ್ಟೀಲ್, ಮಹೀಂದ್ರಾ & ಮಹೀಂದ್ರಾ ಮತ್ತು ಜೆಎಸ್​ಡಬ್ಲ್ಯು ಸ್ಟೀಲ್ ತಲಾ 2 ಪ್ರತಿಶತದಷ್ಟು ಏರಿಕೆ ಕಂಡಿವೆ. ಟಾಟಾ ಮೋಟಾರ್ಸ್, ಮಾರುತಿ, ಎಲ್​ಆ್ಯಂಡ್​ಡಿ ಮತ್ತು ಪವರ್ ಗ್ರಿಡ್ ಇತರ ಪ್ರಮುಖ ಲಾಭ ಗಳಿಸಿದ ಸಂಸ್ಥೆಗಳು. ಸನ್ ಫಾರ್ಮಾ ಶೇಕಡಾ 0.8 ರಷ್ಟು ಕುಸಿದಿದೆ. ಬಿಎಸ್ಇ ಮಿಡ್​ಕ್ಯಾಫ್​ ಸೂಚ್ಯಂಕವು ಶೇಕಡಾ 0.7 ರಷ್ಟು ಏರಿಕೆ ಕಂಡರೆ, ಸ್ಮಾಲ್ ಕ್ಯಾಪ್ ಶೇಕಡಾ 1 ರಷ್ಟು ಏರಿಕೆಯಾಗಿದೆ.

ಮಾರುಕಟ್ಟೆ ಏರಿಕೆಗೆ ಪ್ರಮುಖ ಕಾರಣಗಳೇನು?

ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ಭಾರತೀಯ ಆರ್ಥಿಕತೆಯು ಶೇಕಡಾ 8.4 ರಷ್ಟು ಬೆಳೆದಿದೆ. ಇದು ಆರು ತ್ರೈಮಾಸಿಕಗಳಲ್ಲಿ ಅತ್ಯಂತ ವೇಗದ ಬೆಳವಣಿಗೆಯಾಗಿದೆ. ಉತ್ಪಾದನೆ ಮತ್ತು ನಿರ್ಮಾಣ ಚಟುವಟಿಕೆಯಿಂದಾಗಿ ಈ ಬೆಳವಣಿಗೆಯಾಗಿದೆ.

ಇದನ್ನೂ ಓದಿ : Money Guide: ಸಾಮಾನ್ಯ ವಿಮೆ v/s ಜೀವ ವಿಮೆ; ಯಾವುದು ಉತ್ತಮ? ನಿಮಗೆ ತಿಳಿದಿರಲೇಬೇಕಾದ ಮಾಹಿತಿ ಇಲ್ಲಿದೆ

ಉತ್ಸಾಹಭರಿತ ಜಾಗತಿಕ ಮಾರುಕಟ್ಟೆಗಳು

ಸಕಾರಾತ್ಮಕ ಜಾಗತಿಕ ಮಾರುಕಟ್ಟೆಯೂ ಷೇರು ಸೂಚ್ಯಂಕಗಳು ಏರಲು ಸಹಾಯ ಮಾಡಿದವು. ವಾಲ್ ಸ್ಟ್ರೀಟ್ ಷೇರುಗಳು ರಾತ್ರೋರಾತ್ರಿ ಭಾರೀ ಏರಿಕೆ ಕಂಡಿತ್ತು. ಜಪಾನ್ ನ ನಿಕೈ ಮಾರುಕಟ್ಟೆ ಹೊಸ ದಾಖಲೆಯ ಎತ್ತರವನ್ನು ಮುಟ್ಟಿದೆ. ಚೀನಾದ ಸಿಎಸ್ಐ 300 ಶೇಕಡಾ 0.2 ರಷ್ಟು ಏರಿಕೆಯಾಗಿದೆ.

ನಿರೀಕ್ಷೆಗೂ ಮೀರಿ ಭಾರತದ ಜಿಡಿಪಿ ಬೆಳವಣಿಗೆ

ನವದೆಹಲಿ : ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ (GDP Growth) ಶೇಕಡಾ 8.4 ಕ್ಕೆ ಏರಿಕೆಯಾಗಿದೆ ಎಂದು ಸಾಂಖ್ಯಿಕ ಮತ್ತು ಯೋಜನೆ ಅನುಷ್ಠಾನ ಸಚಿವಾಲಯ ಗುರುವಾರ ಹೇಳಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ಶೇ.4.3ರಷ್ಟಿತ್ತು. ಹೀಗಾಗಿ ನಿರೀಕ್ಷೆ ಮೀರಿದ ಬೆಳವಣಿಗೆಯಾಗಿದೆ ಎಂದು ಹೇಳಲಾಗಿದೆ.

2023-24ರ ಮೂರನೇ ತ್ರೈಮಾಸಿಕದಲ್ಲಿ ಸ್ಥಿರ (2011-12) ದರಗಳಲ್ಲಿ ಜಿಡಿಪಿ 43.72 ಲಕ್ಷ ಕೋಟಿ ರೂ.ಗೆ ಅಂದಾಜಿಸಲಾಗಿದೆ. ಇದು 2022-23 ರ ಮೂರನೇ ತ್ರೈಮಾಸಿಕದಲ್ಲಿ 40.35 ಲಕ್ಷ ಕೋಟಿ ರೂ ಆಗಿತ್ತು. ಅದಕ್ಕೆ ಹೋಲಿಕೆ ಮಾಡಿದರೆ 8.4 ರಷ್ಟು ಬೆಳವಣಿಗೆಯ ದರವನ್ನು ತೋರಿಸುತ್ತದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ. ವಿಶ್ಲೇಷಕರು ಮೂರನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯನ್ನು ಶೇಕಡಾ 7ಕ್ಕಿಂತ ಕಡಿಮೆ ಎಂದು ಅಂದಾಜಿಸಿದ್ದರು. ಆದರೆ, ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶವು ಭಾರತೀಯ ಆರ್ಥಿಕತೆಯು ವೇಗವಾಗಿ ಬೆಳೆಯುತ್ತಿದೆ ಎಂದು ತೋರಿಸಿದೆ.

ನಿರ್ಮಾಣ ಕ್ಷೇತ್ರದ ಎರಡಂಕಿ ಬೆಳವಣಿಗೆ ದರ (ಶೇ.10.7), ಉತ್ಪಾದನಾ ವಲಯದ ಬೆಳವಣಿಗೆ ದರ (ಶೇ.8.5) 2024ರ ಹಣಕಾಸು ವರ್ಷದಲ್ಲಿ ಜಿಡಿಪಿ ಬೆಳವಣಿಗೆಯನ್ನು ಹೆಚ್ಚಿಸಿದೆ ಎಂದು ಸರಕಾರ ತಿಳಿಸಿದೆ. ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 8.4 ರಷ್ಟು ಬೆಳವಣಿಗೆಯ ಹಿಂದಿನ ಪ್ರಮುಖ ಕಾರಣವೇ ಈ ಕ್ಷೇತ್ರಗಳಲ್ಲಿನ ಬೆಳವಣಿಗೆಯಾಗಿದೆ.

Continue Reading

ದೇಶ

Lok Sabha Election: ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಈ ಬಾರಿ ಹೊಸ ಮಾನದಂಡ! ಹೊಸ ಮುಖಗಳಿಗೆ ಚಾನ್ಸ್

Lok Sabha Electionr: ಲೋಕಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸುವ ಮೊದಲು ಅಭ್ಯರ್ಥಿಗಳ ಪಟ್ಟಿಯೊಂದನ್ನು ಬಿಜೆಪಿ ಬಿಡುಗಡೆ ಮಾಡಲಿದೆ. ಅದಕ್ಕಾಗಿ ರಾತ್ರಯಿಡೀ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ವ್ಯಾಪಕ ಚರ್ಚೆ ನಡೆಸಲಾಗಿದೆ.

VISTARANEWS.COM


on

BJP meeting
Koo

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ (Lok Sabha Election) ಭಾರತೀಯ ಜನತಾ ಪಕ್ಷ (BJP) ತನ್ನ ಅಭ್ಯರ್ಥಿಗಳ ಪಟ್ಟಿಯ ಮೊದಲ ಭಾಗವನ್ನು ಇಂದು (ಮಾರ್ಚ್​ 1ರಂದು) ಪ್ರಕಟಿಸುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಮುಂಬರುವ ಚುನಾವಣಾ ಸಮರದಲ್ಲಿ ಪಕ್ಷವನ್ನು ಪ್ರತಿನಿಧಿಸಲು ಸಜ್ಜಾಗಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಹೊಸ ಮಾನದಂಡಗಳನ್ನು ಅನುಸರಿಸಿದೆ. ಅಭ್ಯರ್ಥಿಯ ಸಾರ್ವಜನಿಕ ಚಟುವಟಿಕೆ, ಆಂತರಿಕ ಮೌಲ್ಯಮಾಪನಗಳು ಮತ್ತು ಉನ್ನತ ಮಟ್ಟದ ಕಾರ್ಯತಂತ್ರ ಸೇರಿದಂತೆ ಬಹು ಹಂತದ ಪ್ರಕ್ರಿಯೆ ಪ್ರಕಾರ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ಹೀಗಾಗಿ 60ರಿಂದ70 ರಷ್ಟು ಹಾಲಿ ಸಂಸದರಿಗೆ ಟಿಕೆಟ್​ ಸಿಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಿದ್ದ (ಫೆಬ್ರುವರಿ 29ರಂದು) ತಡರಾತ್ರಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಕುರಿತು ಸಮಗ್ರ ಚರ್ಚೆ ನಡೆಸಲಾಗಿದೆ. ಪ್ರತಿಯೊಂದು ಹಂತದಲ್ಲಿ ಪಕ್ಷದ ವಿಜಯಕ್ಕೆ ಆಗುವ ಅನುಕೂಲತೆಗಳನ್ನು ಚರ್ಚಿಸಲಾಗಿದೆ.

ತಳಮಟ್ಟದಿಂದ ಪ್ರತಿಕ್ರಿಯೆ ಪಡೆಯಲು ಬಿಜೆಪಿ ತಂತ್ರಜ್ಞಾನವನ್ನು ಬಳಸಿಕೊಂಡಿದೆ. ನಮೋ ಆ್ಯಪ್ ಬಳಸಿ, ಹಾಲಿ ಸಂಸದರ ಕಾರ್ಯಕ್ಷಮತೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಾರ್ವಜನಿಕರಿಗೆ ವೇದಿಕೆ ಕಲ್ಪಿಸಲಾಗಿತ್ತು. ಸಾಂಪ್ರದಾಯಿಕ ವಿಧಾನಗಳಿಗಿಂತ ಭಿನ್ನವಾಗಿ ಪ್ರತಿ ಕ್ಷೇತ್ರದ ಮೂವರು ಅತ್ಯಂತ ಜನಪ್ರಿಯ ನಾಯಕರ ಬಗ್ಗೆ ವಿಚಾರಿಸಿ ಜನರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ. ಪಕ್ಷದ ಯೋಜನೆ ಪ್ರಕಾರ ಸ್ಥಳೀಯ ಜನರ ಭಾವನೆಗಳು ಮತ್ತು ಆಕಾಂಕ್ಷೆಗಳನ್ನು ಅಭ್ಯರ್ಥಿ ಪ್ರತಿನಿಧಿಸುತ್ತಿದ್ದಾರೆಯೇ ಎಂಬುದನ್ನೂ ಪರಿಶೀಲನೆ ಮಾಡಿಸಲಾಗಿದೆ.

ಕಳೆದ ಎರಡು ವರ್ಷಗಳಿಂದ ಬಿಜೆಪಿ ತನ್ನ ಸಂಸದರಿಂದ ನಿರಂತರವಾಗಿ ಕಾರ್ಯಕ್ಷಮತೆ ವರದಿ ಪಡೆದುಕೊಂಡಿದೆ. ಅವರ ಕೆಲಸದ ಬಗ್ಗೆ ಮೌಲ್ಯಮಾಪನ ಮಾಡಿದೆ. ಅವರ ಕಾಳಜಿಗಳನ್ನು ಪರಿಹರಿಸಿದೆ. ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಬಲಪಡಿಸಲು ಪ್ರತಿ ಕ್ಷೇತ್ರದ ಸಮಗ್ರ ವರದಿಗಳನ್ನು ಸಂಗ್ರಹಿಸಲು ಖಾಸಗಿ ಸಮೀಕ್ಷೆಗಳನ್ನೂ ಆಯೋಜಿಸಿದೆ.

ಸಚಿವರಿಗೆ ಜವಾಬ್ದಾರಿ

ಲೋಕಸಭೆ ಕ್ಷೇತ್ರಗಳಿಗೆ ಭೇಟಿ ನೀಡಿ ವರದಿಗಳನ್ನು ಸಂಗ್ರಹಿಸುವುದು ಮತ್ತು ಹಾಲಿ ಸಂಸದರ ಕಾರ್ಯಕ್ಷಮತೆಯ ಬಗ್ಗೆ ಒಳನೋಟಗಳನ್ನು ಪಡೆಯುವ ಕೆಲಸವನ್ನು ಹಾಲಿ ಕೇಂದ್ರ ಸಚಿವರಿಗೆ ವಹಿಸಲಾಗಿತ್ತು ಎಂದು ಹೇಳಲಾಗಿದೆ.

ಸಚಿವರು ಮತ್ತು ವಿಭಿನ್ನ ಮೂಲಗಳಿಂದ ಸಂಗ್ರಹಿಸಿದ ಮಾಹಿತಿಯನ್ನು ನಂತರ ರಾಜ್ಯ ಮಟ್ಟದ ಚುನಾವಣಾ ಸಮಿತಿ ಸಭೆಗಳಲ್ಲಿ ಒಟ್ಟುಗೂಡಿಸಿ ಅಂತಿಮ ಆಯ್ಕೆ ಪ್ರಕ್ರಿಯೆಗೆ ಶುರು ಮಾಡಲಾಗಿದೆ. ಈ ಚರ್ಚೆಗಳ ನಂತರ ಪ್ರತಿ ರಾಜ್ಯದ ಪ್ರಮುಖ ಬಿಜೆಪಿ ತಂಡವು ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ, ಗೃಹ ಸಚಿವ ಅಮಿತ್​​ ಶಾ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಂತಹ ಉನ್ನತ ನಾಯಕರ ಜತೆ ಚರ್ಚೆ ನಡೆಸಿದೆ.

ಕಳಪೆ ಸಾಧನೆ ತೋರಿದ್ದರೆ ಮುಲಾಜಿಲ್ಲ

ಇತರ ಪಕ್ಷಗಳಿಂದಲೂ ಅಭ್ಯರ್ಥಿಗಳನ್ನು ಸೆಳೆಯುವ ಪ್ರಯತ್ನವೂ ನಡೆದಿದೆ. ಈ ಮೂಲಕ ಬಿಜೆಪಿ ವ್ಯಾಪ್ತಿ ವಿಸ್ತರಣೆ ಮಾಡಲು ಯತ್ನಿಸಲಾಗಿದೆ. ಎಲ್ಲದಕ್ಕಿಂತ ಪ್ರಮುಖವಾಗಿ ಕಳಪೆ ಸಾಧನೆ ತೋರಿದ ಸಂಸದರಿಗೆ ಟಿಕೆಟ್ ನೀಡದಿರುವ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹೊಸ ಮುಖಗಳಿಗೆ ದಾರಿ ಮಾಡಿಕೊಡಲು ಕನಿಷ್ಠ 60-70 ಹಾಲಿ ಸಂಸದರಿಗೆ ಈ ಬಾರಿ ಟಿಕೆಟ್‌ ನಿರಾಕರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ : Lok Sabha Election : ಬಿಜೆಪಿಯಿಂದ ಮಧ್ಯರಾತ್ರಿ ಸಭೆ; 100 ಅಭ್ಯರ್ಥಿಗಳ ಪಟ್ಟಿ ಫೈನಲ್​

ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಕ್ಕೆ ಸೇರಿದ ಅನೇಕ ಸಂಸದರು ಮತ್ತೆ ಸ್ಪರ್ಧಿಸುವ ನಿರೀಕ್ಷೆಯಿದೆ ಎಂದು ಪಕ್ಷ ಹೇಳಿದೆ. 2019ರ ಚುನಾವಣೆಯಲ್ಲಿ ಬಿಜೆಪಿ 85 ಒಬಿಸಿ ಸಂಸದರನ್ನು ಗೆಲ್ಲಿಸಿತ್ತು.

ಹೊಸ ಅಭ್ಯರ್ಥಿಗಳು, ಹಳೆಯ ಮುಖಗಳು

ಫೆಬ್ರುವರಿ 29ರಿಂದ ರಾತ್ರಿ 11 ಗಂಟೆಯಿಂದ ಬೆಳಗಿನ ಜಾವ 3.30ರವರೆಗೆ ನಡೆದ ಸಭೆಯಲ್ಲಿ, ಬಿಜೆಪಿ 2019ರ ಚುನಾವಣೆಯಲ್ಲಿ ಕಳೆದುಕೊಂಡ ಸ್ಥಾನಗಳನ್ನು ಮರು ವಶಪಡಿಸಿಕೊಳ್ಳುವ ಬಗ್ಗೆಯೂ ವಿಶೇಷವಾಗಿ ಚರ್ಚಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಭೂಪೇಂದರ್ ಯಾದವ್, ಧರ್ಮೇಂದ್ರ ಪ್ರಧಾನ್ ಮತ್ತು ಮನ್ಸುಖ್ ಮಂಡಾವಿಯಾ ಸೇರಿದಂತೆ ಹಲವಾರು ಕೇಂದ್ರ ಸಚಿವರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಲೇಬೇಕಾಗುತ್ತದೆ. ರಾಜ್ಯಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಈ ಸಚಿವರನ್ನು ಕಣಕ್ಕಿಳಿಸಿರಲಿಲ್ಲ.

Continue Reading

ಪ್ರಮುಖ ಸುದ್ದಿ

JNU Violence: ಜೆಎನ್‌ಯು ವಿವಿಯಲ್ಲಿ ಎಡ- ಬಲ ವಿದ್ಯಾರ್ಥಿಗಳ ಚಕಮಕಿ, ಹಿಂಸಾಚಾರ

JNU Violence: ಎಬಿವಿಪಿ ಮತ್ತು ಎಡ ಗುಂಪಿನ ವಿದ್ಯಾರ್ಥಿಗಳು ಪರಸ್ಪರರ ವಿರುದ್ಧ ಪೊಲೀಸ್ ದೂರುಗಳನ್ನು ದಾಖಲಿಸಿದ್ದಾರೆ.

VISTARANEWS.COM


on

jnu violence
Koo

ಹೊಸದಿಲ್ಲಿ: ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (Jawaharlal Nehru university- JNU) ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡಪಕ್ಷಗಳ ಬೆಂಬಲಿತ ಗುಂಪುಗಳ (ಜೆಎನ್‌ಯುಎಸ್‌ಯು) ಸದಸ್ಯರ ನಡುವೆ ಘರ್ಷಣೆ ಭುಗಿಲೆದ್ದಿದೆ. ಹಿಂಸಾಚಾರ (JNU Violence) ನಡೆದಿದ್ದು, ಇದರ ಪರಿಣಾಮವಾಗಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡರು.

ಸ್ಕೂಲ್ ಆಫ್ ಲ್ಯಾಂಗ್ವೇಜಸ್‌ನಲ್ಲಿ ಚುನಾವಣಾ ಸಮಿತಿ ಸದಸ್ಯರ ಆಯ್ಕೆಯ ವಿವಾದ ಸೃಷ್ಟಿಯಾದುದರಿಂದ ಉಂಟಾದ ಈ ಪ್ರಕರಣ ಗುರುವಾರ ರಾತ್ರಿ ಹಿಂಸಾಚಾರಕ್ಕೆ ತಿರುಗಿತು. ಇದರಿಂದ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಗಾಯಾಳುಗಳು ಆಸ್ಪತ್ರೆ ಸೇರಿದ್ದಾರೆ ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಸೋಶಿಯಲ್‌ ಮೀಡಿಯಾಗಳಲ್ಲಿ ಈ ಪ್ರಕರಣದ ಹೊಡೆದಾಟದ ಘಟನೆ ಎಂದು ಕೆಲವು ವಿಡಿಯೋಗಳು ಹರಿದಾಡುತ್ತಿವೆ. ಇದರಲ್ಲಿ ವಿದ್ಯಾರ್ಥಿಗಳ ಮೇಲೆ ಕೋಲು ಹಿಡಿದು ಹಲ್ಲೆ ಮಾಡುತ್ತಿರುವ ಒಬ್ಬ ವ್ಯಕ್ತಿಯನ್ನು ಕಾಣಬಹುದು. ಇನ್ನೊಂದು ದೃಶ್ಯದಲ್ಲಿ ಬೇರೊಬ್ಬ ವ್ಯಕ್ತಿ ಬೈಸಿಕಲ್ ಅನ್ನು ಎತ್ತಿ ಎದುರಿನ ಗುಂಪಿನವರ ಮೇಲೆ ಎಸೆಯುತ್ತಿದ್ದಾನೆ. ವಿಶ್ವವಿದ್ಯಾನಿಲಯದ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಅವರನ್ನು ಗುಂಪುಗೂಡಿ ಥಳಿಸಲಾಗಿದೆ ಎಂದು ಇನ್ನು ಕೆಲವು ವಿಡಿಯೊಗಳು ಸೂಚಿಸಿವೆ. ವಿಶ್ವವಿದ್ಯಾಲಯದ ಮೂಲಗಳ ಪ್ರಕಾರ ಗಾಯಗೊಂಡ ವಿದ್ಯಾರ್ಥಿಗಳನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತನ್ನ ಪ್ರಭಾವವನ್ನು ಹಾಳುಗೆಡಹಲು ABVP ಪ್ರಯತ್ನಿಸುತ್ತಿದೆ. ಚುನಾವಣಾ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು JNUSU ಆರೋಪಿಸಿದೆ. ವಿದ್ಯಾರ್ಥಿ ಸಾಮಾನ್ಯ ಸಭೆಯ ನಂತರ ABVP ಸದಸ್ಯರು ಸೇರಿ ದಾಳಿಯನ್ನು ನಡೆಸಿದರು ಎಂದು JNUSU ಆರೋಪಿಸಿದೆ. ವ್ಯತಿರಿಕ್ತವಾಗಿ, ಎಡಪಂಥೀಯ ಜೆಎನ್‌ಯುಎಸ್‌ಯು ಸದಸ್ಯರು ದಾಳಿಯನ್ನು ಪ್ರಾರಂಭಿಸಿದರು ಎಂದು ಎಬಿವಿಪಿ ವಾದಿಸಿದೆ.

ಘರ್ಷಣೆಗೆ ಪ್ರತಿಕ್ರಿಯೆಯಾಗಿ, ಎಬಿವಿಪಿ ಮತ್ತು ಎಡ ಗುಂಪಿನ ವಿದ್ಯಾರ್ಥಿಗಳು ಪರಸ್ಪರರ ವಿರುದ್ಧ ಪೊಲೀಸ್ ದೂರುಗಳನ್ನು ದಾಖಲಿಸಿದರು. ವಿಶ್ವವಿದ್ಯಾನಿಲಯ ಆಡಳಿತವು ತಕ್ಷಣದ ಪ್ರತಿಕ್ರಿಯೆಯನ್ನು ನೀಡಿಲ್ಲ. ಗಾಯಗೊಂಡ ವಿದ್ಯಾರ್ಥಿಗಳ ನಿಖರವಾದ ಸಂಖ್ಯೆಯನ್ನೂ ದೃಢೀಕರಿಸಿಲ್ಲ.

“ಜೆಎನ್‌ಯು ಆಡಳಿತವು ಕ್ಯಾಂಪಸ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಬದ್ಧವಾಗಿದೆ. ರಾಜಕೀಯ ಪಕ್ಷಪಾತವಿಲ್ಲದೆ, ಗಲಾಟೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಉಪಕುಲಪತಿ ಶಾಂತಿಶ್ರೀ ಡಿ ಪಂಡಿತ್ ಭರವಸೆ ನೀಡಿದ್ದಾರೆ. ವಿಶ್ವವಿದ್ಯಾನಿಲಯದಲ್ಲಿ ಪರಿಸ್ಥಿತಿಯನ್ನು ಪರಿಹರಿಸಲು ಮತ್ತು ಕ್ಯಾಂಪಸ್‌ನಲ್ಲಿ ಸಹಜ ಸ್ಥಿತಿ ಮರಳಿಸಲು ಪ್ರಯತ್ನಗಳು ನಡೆಯುತ್ತಿವೆ.

ಇದನ್ನೂ ಓದಿ: JNU Campus : ಜೆಎನ್​ಯು ಕ್ಯಾಂಪಸ್​ನಲ್ಲಿ ದೇಶ ವಿರೋಧಿ ಘೋಷಣೆ, ಪ್ರತಿಭಟನೆ ನಿಷೇಧ​!

Continue Reading
Advertisement
Exam Tips
ಆರೋಗ್ಯ10 mins ago

Exam Tips: ಮಕ್ಕಳ ಪರೀಕ್ಷೆ ಪೋಷಕರಿಗೂ ಪರೀಕ್ಷೆಯೇ? ಇಲ್ಲಿವೆ ಒತ್ತಡರಹಿತ ಎಕ್ಸಾಮ್‌ಗಾಗಿ ಟಿಪ್ಸ್!

Water crisis in Karnataka Govt orders supply from private borewells
ಬೆಂಗಳೂರು12 mins ago

water crisis: ಕರ್ನಾಟಕಕ್ಕೆ ಜಲಾಘಾತ! ಹಳ್ಳಿ ಹಳ್ಳಿಯಲ್ಲಿ ನೀರಿಲ್ಲ; ಖಾಸಗಿ ಬೋರ್‌ವೆಲ್‌ನಿಂದ ಪೂರೈಕೆಗೆ ಸರ್ಕಾರ ಸೂಚನೆ

rameshwaram cafe bengaluru incident
ಬೆಂಗಳೂರು18 mins ago

blast in bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಜಸ್ಟ್‌ 10 ಸೆಕೆಂಡ್‌ ಅಂತರದಲ್ಲಿ ಎರಡೆರಡು ಬಾರಿ ಸ್ಫೋಟ!

Pro Kabaddi Final
ಕ್ರೀಡೆ34 mins ago

Pro Kabaddi Final: ಕೆಲವೇ ಕ್ಷಣದಲ್ಲಿ ಫೈನಲ್; ಚೊಚ್ಚಲ ಪ್ರಶಸ್ತಿಗಾಗಿ ಪುಣೇರಿ-ಹರಿಯಾಣ ಫೈಟ್​

Doggie's Summer Fashion
ಫ್ಯಾಷನ್40 mins ago

Doggie’s Summer Fashion: ಮುದ್ದಿನ ಶ್ವಾನಗಳಿಗೂ ಬಂತು ಫ್ಯಾಷೆನಬಲ್‌ ಸಮ್ಮರ್‌ ಕ್ಯಾಪ್ಸ್ & ಹ್ಯಾಟ್ಸ್

Kannada New Movie dheer bhahath Roy song out
ಸ್ಯಾಂಡಲ್ ವುಡ್41 mins ago

Kannada New Movie: ʻಧೀರ ಭಗತ್ ರಾಯ್ʼ ಸಿನಿಮಾದ ʼಏನು ಕರ್ಮʼ ಹಾಡು ಬಿಡುಗಡೆ

T20 World Cup
ಪ್ರಮುಖ ಸುದ್ದಿ51 mins ago

T20 World Cup : ಟಿ20 ವಿಶ್ವ ಕಪ್​ನಲ್ಲಿ ಭಾರತಕ್ಕೆ ಎಷ್ಟು ಪಂದ್ಯಗಳಿವೆ?

Jet Suit Race
ವಿದೇಶ53 mins ago

Jet Suit Race: ವಿಶ್ವದ ಮೊದಲ ಜೆಟ್‌ ಸೂಟ್‌ ರೇಸ್‌ಗೆ ದುಬೈ ಸಾಕ್ಷಿ; ಏನಿದು ಅದ್ಭುತ ರೇಸ್?‌

Kannada New Movie line man song out now
ಸ್ಯಾಂಡಲ್ ವುಡ್57 mins ago

Kannada New Movie: ಲೈನ್ ಮ್ಯಾನ್ ಸಿನಿಮಾದಿಂದ ಬಂತು ಮೊದಲ ಹಾಡು!

Road collapse
ಬೆಂಗಳೂರು1 hour ago

Road Collapse: ರಸ್ತೆ ಕುಸಿದು ಸಿಲುಕಿದ ಲಾರಿ; ಜಲಮಂಡಳಿ ಬೇಕಾಬಿಟ್ಟಿ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

rameshwaram cafe bengaluru incident
ಬೆಂಗಳೂರು1 hour ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ2 hours ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ13 hours ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

dina bhavishya read your daily horoscope predictions for February 28 2024
ಭವಿಷ್ಯ2 days ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ3 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ3 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ3 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

read your daily horoscope predictions for february 27 2024
ಭವಿಷ್ಯ4 days ago

Dina Bhavishya : ಇಂದು ಆಪ್ತರಿಂದಲೇ ಈ ರಾಶಿಯವರಿಗೆ ಕಂಟಕ!

Crowd mistakes Arabic words as Quran Verses on the kurta and Pak Women mobbed
ವಿದೇಶ4 days ago

Pak Woman: ಕುರ್ತಾ ಮೇಲಿನ ಅರೇಬಿಕ್ ಪದಗಳನ್ನು ತಪ್ಪಾಗಿ ತಿಳಿದು ಮಹಿಳೆ ಮೇಲೆ ಹಲ್ಲೆಗೆ ಯತ್ನ

ಟ್ರೆಂಡಿಂಗ್‌