ಲಕ್ನೋ: ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ಗ್ರಾಮವೊಂದರಲ್ಲಿ ಮಹಿಳೆಯೊಬ್ಬಳು ಸಾಮೂಹಿಕ ಅತ್ಯಾಚಾರಕ್ಕೊಳಗಾದ (Physical Abuse) ಕೆಲವೇ ಗಂಟೆಗಳ ನಂತರ ಮಹಿಳೆ ಹಾಗೂ ಆಕೆಯ ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದ್ದು, ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.
30 ವರ್ಷದ ವ್ಯಕ್ತಿ ಮತ್ತು ಆತನ 27 ವರ್ಷದ ಪತ್ನಿ ಗುರುವಾರ ವಿಷ ಸೇವಿಸಿದ್ದಾರೆ. ಪತಿ ಅದೇ ದಿನ ಮೃತಪಟ್ಟರೆ, ಪತ್ನಿ ಗೋರಖ್ಪುರರದ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಬಸ್ತಿ ಎಸ್ಪಿ ಗೋಪಾಲ್ ಕೃಷ್ಣ ಶನಿವಾರ ತಿಳಿಸಿದ್ದಾರೆ.
ಸೆಪ್ಟೆಂಬರ್ 20 ಮತ್ತು 21 ರ ಮಧ್ಯರಾತ್ರಿ ಮನೆಗೆ ನುಗ್ಗಿದ ಇಬ್ಬರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದಂಪತಿಯ ಸಂಬಂಧಿಕರು ಆರೋಪಿಸಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.
ಆತ್ಮಹತ್ಯೆಗೂ ಮುನ್ನ ದಂಪತಿಗಳು ವಿಡಿಯೋ ರೆಕಾರ್ಡ್ ಮಾಡಿದ್ದು, ಅದರಲ್ಲಿ ಆರೋಪಿಗಳ ಹೆಸರುಗಳನ್ನು ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ, ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ) ಮತ್ತು 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಇಬ್ಬರ ವಿರುದ್ಧ ಶುಕ್ರವಾರ ಎಫ್ಐಆರ್ ದಾಖಲಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : Silk Smitha: ಸಿಲ್ಕ್ ಸ್ಮಿತಾ ಶವದ ಮೇಲೆ ಅತ್ಯಾಚಾರ ; ನಟಿಯ ಪುಣ್ಯತಿಥಿಯಂದು ಅಚ್ಚರಿಯ ಸತ್ಯ ಹೊರಬಿತ್ತು!
ಆರೋಪಿಗಳಾದ ಆದರ್ಶ್ (25) ಮತ್ತು ತ್ರಿಲೋಕಿ (45) ಅವರನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. ಮೃತರ ಮಕ್ಕಳು ಶುಕ್ರವಾರ ಬೆಳಿಗ್ಗೆ ಶಾಲೆಗೆ ಹೋಗಲು ತಯಾರಾಗುತ್ತಿದ್ದಾಗ, ಅವರ ಪೋಷಕರು ವಿಷ ಸೇವಿಸಿ ಮೃತಪಟ್ಟಿದದರು ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿಗೆ ಮೂವರು ಮಕ್ಕಳಿದ್ದು, ಎಂಟು ಮತ್ತು ಆರು ವರ್ಷದ ಇಬ್ಬರು ಗಂಡು ಮಕ್ಕಳು ಮತ್ತು ಒಂದು ವರ್ಷದ ಮಗಳು ಇದ್ದಾಳೆ .
ಪ್ರಾಥಮಿಕ ತನಿಖೆಯ ಪ್ರಕಾರ, ಅತ್ಯಾಚಾರ ಘಟನೆಯು ಮೃತ ವ್ಯಕ್ತಿಯ ಒಡೆತನದ ಭೂಮಿಯ ಮಾರಾಟಕ್ಕೆ ಸಂಬಂಧಿಸಿದೆ ಎಂದು ಅವರು ಹೇಳಿದರು.
ರೈಲಿನಲ್ಲಿ ದರೋಡೆ
ಜಾರ್ಖಂಡ್ ನ ಲತೇಹರ್ ಮತ್ತು ಬರ್ವಾಡಿಹ್ ನಿಲ್ದಾಣಗಳ ನಡುವೆ ಸಂಚರಿಸುತ್ತಿದ್ದ ಸಂಬಲ್ ಪುರ-ಜಮ್ಮುತಾವಿ ಎಕ್ಸ್ ಪ್ರೆಸ್ ರೈಲಿನ ಸ್ಲೀಪರ್ ಕೋಚ್ ಶನಿವಾರ ರಾತ್ರಿ ದಾಳಿ ನಡೆಸಿದ (Night Robbery) ಮೇಲೆ ಸುಮಾರು ಒಂದು ಡಜನ್ ಶಸ್ತ್ರಸಜ್ಜಿತ ವ್ಯಕ್ತಿಗಳ ಗುಂಪು ಶನಿವಾರ ರಾತ್ರಿ ದಾಳಿ ನಡೆಸಿ ದರೋಡೆ ನಡೆಸಿದೆ. ಪ್ರಯಾಣಿಕರ ಮೇಲೆ ಗುಂಡು ಹಾರಿಸಿದ ಅವರು ನಗದು, ಆಭರಣಗಳು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ದೋಚಿದ್ದಾರೆ ಎಂದು ಸರ್ಕಾರಿ ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಲತೇಹರ್ ನಿಲ್ದಾಣದಿಂದ ರಾತ್ರಿ 11.22 ರ ಸುಮಾರಿಗೆ ಜಮ್ಮುವಿಗೆ ಹೊರಟಿದ್ದ ಸಂಬಲ್ಪುರ-ಜಮ್ಮು ತಾವಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 18309) ಮೇಲೆ ದರೋಡೆಕೋರರು ದಾಳಿ ನಡೆಸಿದ್ದಾರೆ. ದರೋಡೆಕೋರರು ಲತೇಹರ್ ನಿಂದ ರೈಲು ಹತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೂರ್ವ ಮಧ್ಯ ರೈಲ್ವೆಯ ವ್ಯಾಪ್ತಿಯಲ್ಲಿರುವ ಲತೇಹರ್ ಮತ್ತು ಬರ್ವಾಡಿಹ್ ನಿಲ್ದಾಣಗಳ ನಡುವಿನ ಜಮ್ಮು ತಾವಿ ಎಕ್ಸ್ಪ್ರೆಸ್ 9 ಬೋಗಿಯೊಳಗೆ ಕನಿಷ್ಠ 10 ಅಪರಿಚಿತ ವ್ಯಕ್ತಿಗಳು ನುಗ್ಗಿ ಪ್ರಯಾಣಿಕರನ್ನು ದರೋಡೆ ಮಾಡಿದ್ದಾರೆ ಅಧಿಕಾರಿಗಳು ತಿಳಿಸಿದ್ದಾರೆ.