ವಿಸ್ತಾರ Explainer | ಪಾಕಿಸ್ತಾನದ ಡ್ರೋನ್‌ ಉರುಳಿಸಲಿದೆ ಭಾರತೀಯ ಸೇನೆಯ ಗಿಡುಗ, ಹೇಗಿದರ ಆಪರೇಷನ್‌? - Vistara News

EXPLAINER

ವಿಸ್ತಾರ Explainer | ಪಾಕಿಸ್ತಾನದ ಡ್ರೋನ್‌ ಉರುಳಿಸಲಿದೆ ಭಾರತೀಯ ಸೇನೆಯ ಗಿಡುಗ, ಹೇಗಿದರ ಆಪರೇಷನ್‌?

ಆಧುನಿಕ ಜಗತ್ತು ಹೊಸತನಕ್ಕೆ ತೆರೆದುಕೊಂಡಂತೆ ಯುದ್ಧ, ದಾಳಿಯ ಮಾದರಿಯೂ ಬದಲಾಗುತ್ತಿರುತ್ತದೆ. ಇದರಿಂದ ಭಾರತದ ಸೇನೆಯೂ ಹೊಸತಲ್ಲ. ಇದಕ್ಕೆ ನಿದರ್ಶನ ಎಂಬಂತೆ ವೈರಿ ರಾಷ್ಟ್ರಗಳ ಡ್ರೋನ್‌ಗಳನ್ನು ಹೊಡೆದುರುಳಿಸಲು ಗಿಡುಗಗಳನ್ನು ಬಳಸಿಕೊಳ್ಳಲು ಸೇನೆ ಮುಂದಾಗಿದೆ. ಇದರ ಕುರಿತ ವಿಸ್ತಾರ Explainer ಇಲ್ಲಿದೆ.

VISTARANEWS.COM


on

Kites In Indian Army
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜಾಗತಿಕವಾಗಿ ಯುದ್ಧದ ಶೈಲಿಗಳು, ಆಕ್ರಮಣದ ಮಾದರಿಗಳು ಬದಲಾಗಿವೆ. ಆಧುನಿಕ ತಂತ್ರಜ್ಞಾನ, ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಲಭ್ಯವಿರುವ ಹಾಗೂ ಕಾಲಕ್ಕೆ ತಕ್ಕಂತೆ ಬದಲಾಗುತ್ತಿರುವ ಕಾರಣ ಯಾವುದೇ ದೇಶದ ಸೇನೆಯಲ್ಲಿ ಬದಲಾವಣೆ, ಶತ್ರುಗಳ ಮೇಲೆ ನಿಗಾ ಇಡುವ ಮಾದರಿ ಮಾರ್ಪಾಡಾಗುವುದು ಅನಿವಾರ್ಯವಾಗಿದೆ. ಹೀಗೆ, ಆಧುನಿಕ ತಂತ್ರಜ್ಞಾನ, ವಿಭಿನ್ನ ಕೌಶಲಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತೀಯ ಸೇನೆಯೂ ಹಿಂದೆ ಬಿದ್ದಿಲ್ಲ. ಇದಕ್ಕೆ ನಿದರ್ಶನ ಎಂಬಂತೆ ಈಗ ವೈರಿಗಳ ಡ್ರೋನ್‌ಗಳನ್ನು ಹೊಡೆದುರುಳಿಸಲು, ಗಡಿಯಲ್ಲಿ ಹೆಚ್ಚಿನ ನಿಗಾ ಇಡಲು ಗಿಡುಗಗಳನ್ನು ಬಳಸಿಕೊಳ್ಳಲು ಮುಂದಾಗಿದೆ.

ಉತ್ತರಾಖಂಡದ ಔಲಿಯಲ್ಲಿ ನಡೆದ ಭಾರತ-ಅಮೆರಿಕ ಜಂಟಿ ತರಬೇತಿ ಪ್ರದರ್ಶನ ‘ಯುದ್ಧ ಅಭ್ಯಾಸ’ದ ಸಮಯದಲ್ಲಿ ಭಾರತೀಯ ಸೇನೆಯು ಶತ್ರು ಡ್ರೋನ್‌ಗಳನ್ನು ಬೇಟೆಯಾಡಲು ಗಿಡುಗಗಳ ಬಳಕೆಯನ್ನು ಪ್ರದರ್ಶಿಸಿದೆ. ಆ ಮೂಲಕ ದೇಶದ ಸೇನೆಯಲ್ಲಿ ಗಿಡುಗಗಳನ್ನೂ ಬಳಸಿಕೊಳ್ಳಬಹುದು ಎಂಬುದನ್ನು ತೋರಿಸಿಕೊಟ್ಟಿದೆ. ಹಾಗಾದರೆ, ವೈರಿಗಳ ದಮನಕ್ಕಾಗಿ ಗಿಡುಗಗಳನ್ನು ಹೇಗೆ ಬಳಸಿಕೊಳ್ಳಲಾಗುತ್ತದೆ? ಅವುಗಳಿಗೆ ಹೇಗೆ ತರಬೇತಿ ನೀಡಲಾಗುತ್ತದೆ? ಗಿಡುಗಗಳು ಹೇಗೆ ಹಲವು ರೀತಿಯಲ್ಲಿ ಉಪಯೋಗವಾಗುತ್ತವೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಗಿಡುಗಗಳಿಗೆ ಹೇಗೆ ತರಬೇತಿ?
ಶತ್ರುಗಳ ಡ್ರೋನ್‌ಗಳನ್ನು ಪತ್ತೆಹಚ್ಚುವ, ನಿಗದಿತ ಗುರಿಯನ್ನು ಹೊಡೆದುರುಳಿಸುವ, ಡ್ರೋನ್‌ಗಳ ಮೇಲೆ ನಿಗಾ ಇಡುವುದನ್ನು ಗಿಡುಗಗಳಿಗೆ ತರಬೇತಿ ನೀಡಲಾಗುತ್ತದೆ. ಶ್ವಾನಗಳ ನೆರವಿನಿಂದ ಗಿಡುಗಗಳು ಡ್ರೋನ್‌ಗಳನ್ನು ಹೊಡೆದುರುಳಿಸುತ್ತವೆ. ಡ್ರೋನ್‌ಗಳ ಶಬ್ದವನ್ನು ಗ್ರಹಿಸುವ ಶ್ವಾನಗಳು ಗಿಡುಗಗಳಿಗೆ ಸೂಚನೆ ನೀಡುತ್ತವೆ. ಆಗ ಗುರಿಯನ್ನು ಆಧರಿಸಿ ಗಿಡುಗಗಳು ವೈರಿರಾಷ್ಟ್ರದ ಡ್ರೋನ್‌ಗಳನ್ನು ಹೊಡೆದುರುಳಿಸುತ್ತವೆ. ಈ ದಿಸೆಯಲ್ಲಿ ಶ್ವಾನಗಳು ಹಾಗೂ ಗಿಡುಗಗಳಿಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಶಬ್ದ ಗ್ರಹಿಸಿ, ನಿಗದಿತ ಗುರಿಯೆಡೆಗೆ ಸಾಗಿ, ಗುರಿಯನ್ನು ಹೊಡೆದುರುಳಿಸುವ ತರಬೇತಿಯನ್ನು ಗಿಡುಗಗಳಿಗೆ ನೀಡಲಾಗುತ್ತದೆ. ಇದರ ಅನ್ವಯ ಅವು ವೈರಿಗಳ ಡ್ರೋನ್‌ಗಳನ್ನು ನಾಶಪಡಿಸುತ್ತವೆ.

ಜಗತ್ತು ಆಧುನಿಕತೆಗೆ ತೆರೆದುಕೊಂಡಂತೆ ಯುದ್ಧದ ಶೈಲಿಗಳೂ ಬದಲಾಗಿವೆ. ಹೀಗೆ, ಬದಲಾದ ಯುದ್ಧ, ದಾಳಿಯ ಶೈಲಿಗೆ ಪ್ರತ್ಯುತ್ತರ ನೀಡಲು ಭಾರತದ ಸೇನೆಯು ಗಿಡುಗಗಳನ್ನು ಬಳಸಿಕೊಳ್ಳಲು ಮುಂದಾಗಿದೆ. ಹಾಗಾದರೆ, ಹೇಗೆ ವೈರಿಗಳನ್ನು ನಿಗ್ರಹ ಮಾಡಲು ಗಿಡುಗಗಳು ಸಹಕಾರಿ? ಇಲ್ಲಿದೆ ವಿಸ್ತಾರ Explainer.
ದೇಶದ ಸೈನಿಕನ ಕೈಯಲ್ಲಿ ತರಬೇತಿ ಪಡೆದಿರುವ ಗಿಡುಗ.

ಪ್ರಾಯೋಗಿಕ ಪರೀಕ್ಷೆ ಹೇಗಾಯಿತು?
ಉತ್ತರಾಖಂಡದಲ್ಲಿ ಗಿಡುಗಗಳ ಕಾರ್ಯನಿರ್ವಹಣೆ ಕುರಿತು ನಡೆಸಿದ ಪ್ರಾಯೋಗಿಕ ಪ್ರದರ್ಶನವು ಯಶಸ್ವಿಯಾಗಿದೆ. ಡ್ರೋನ್‌ಗಳನ್ನು ಹೊಡೆದುರುಳಿಸುವ ಸಂದರ್ಭವನ್ನು ಸೃಷ್ಟಿಸಿ, ಶ್ವಾನಗಳ ಸಹಾಯದಿಂದ ಗಿಡುಗಗಳು ನಿಗದಿತ ಗುರಿಯನ್ನು ಯಶಸ್ವಿಯಾಗಿ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ. ಭಾರತ ಸೇನೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಇಂತಹ ಪ್ರಯೋಗ ನಡೆಸಲಾಗಿದ್ದು, ಮೊದಲ ಯತ್ನದಲ್ಲಿಯೇ ಯಶಸ್ವಿಯಾಗಿದೆ. ಇದರಿಂದ ಗಡಿಯಲ್ಲಿ ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸುವಲ್ಲಿ ಮಹತ್ವದ ಮುನ್ನಡೆ ಸಿಕ್ಕಂತಾಗಿದೆ.

ಸದ್ಯ ಎಲ್ಲಿ ಗಿಡುಗಗಳಿಗೆ ತರಬೇತಿ?
ಉತ್ತರ ಪ್ರದೇಶದ ಮೀರತ್‌ನಲ್ಲಿರುವ ರಿಮೌಂಟ್‌ ವೆಟರಿನರಿ ಕಾರ್ಪ್ಸ್‌ (RVC)ನಲ್ಲಿ ಗಿಡುಗಗಳು ಹಾಗೂ ಗರುಡಗಳಿಗೆ ಗೌಪ್ಯವಾಗಿ ತರಬೇತಿ ನೀಡಲಾಗುತ್ತಿದೆ. ಸದ್ಯ ಕ್ವಾಡ್‌ಕಾಪ್ಟರ್‌ಗಳನ್ನು ಹೊಡೆದುರುಳಿಸುವ ತರಬೇತಿ ನೀಡಲಾಗುತ್ತಿದ್ದು, ಇದರಲ್ಲಿ ಗಿಡುಗಗಳು ಯಶಸ್ವಿಯೂ ಆಗಿವೆ. ತರಬೇತಿ ವೇಳೆ ನೂರಾರು ಡ್ರೋನ್‌ಗಳನ್ನು ಗಿಡುಗಗಳು ಹೊಡೆದುರುಳಿಸಿದ್ದು, ಇದರಲ್ಲಿ ಗಿಡುಗಗಳಿಗೆ ಸಣ್ಣ ಗಾಯವೂ ಆಗಿಲ್ಲ ಎಂದು ತಿಳಿದುಬಂದಿದೆ. ಅಷ್ಟರಮಟ್ಟಿಗೆ, ಸೇನೆಯಲ್ಲಿ ಗಿಡುಗಗಳ ಉಪಯೋಗವು ಯಶಸ್ವಿಯಾದಂತಾಗಿದೆ.

ವೈರಿಗಳ ಡ್ರೋನ್‌ ಹೊಡೆದುರುಳಿಸಲು ಸಜ್ಜಾದ ಗಿಡುಗ.

ಭಾರತದಲ್ಲೇ ಮೊದಲಲ್ಲ?
ವೈರಿಗಳ ಡ್ರೋನ್‌ಗಳನ್ನು ಹೊಡೆದುರುಳಿಸಲು ಗಿಡುಗಗಳ ಬಳಕೆಯು ಭಾರತದಲ್ಲೇ ಮೊದಲಲ್ಲ. ನೆದರ್ಲೆಂಡ್ಸ್‌ನಲ್ಲಿ ಡಚ್‌ ಪೊಲೀಸರು ೨೦೧೬ರಿಂದಲೂ ಗಿಡುಗಗಳನ್ನು ಬಳಸುತ್ತಿದ್ದಾರೆ. ಆಗಸದಲ್ಲಿಯೇ ಮಾನವರಹಿತ ವೆಹಿಕಲ್‌ಗಳನ್ನು (ಡ್ರೋನ್‌) ಹೊಡೆದುರುಳಿಸುವ ರೀತಿ ತರಬೇತಿ ನೀಡಿ, ಗಿಡುಗಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಡ್ರೋನ್‌ಗಳನ್ನು ಗುರುತಿಸಲು ಮಷೀನ್‌ಗಳನ್ನು ಕಂಡು ಹಿಡಿಯಲಾಯಿತು. ಬಳಿಕ ಅವುಗಳನ್ನು ಹೊಡೆದುರುಳಿಸಲು ಗಿಡುಗಗಳನ್ನು ಬಳಸಿಕೊಳ್ಳಲಾಯಿತು ಎಂದು ವರದಿಗಳು ತಿಳಿಸಿವೆ.

ಭಾರತದ ಸೇನೆಗೆ ಅವಶ್ಯ ಏಕೆ?
ಜಮ್ಮು-ಕಾಶ್ಮೀರ ಗಡಿಯಲ್ಲಿ ಉಗ್ರರನ್ನು ಛೂಬಿಡುವ ಪಾಕಿಸ್ತಾನ, ಅವರಿಗೆ ಡ್ರೋನ್‌ಗಳ ಮೂಲಕವೇ ಶಸ್ತ್ರಾಸ್ತ್ರ ಪೂರೈಸುತ್ತಿದೆ. ಜಮ್ಮು-ಕಾಶ್ಮೀರ ಹಾಗೂ ಪಂಜಾಬ್‌ ಗಡಿಗಳಲ್ಲಿ ಶಸ್ತ್ರಾಸ್ತ್ರ, ಸ್ಫೋಟಕ ಸಾಧನ, ಡ್ರಗ್ಸ್‌ ಸೇರಿ ಹಲವು ವಸ್ತುಗಳನ್ನು ಡ್ರೋನ್‌ಗಳ ಮೂಲಕವೇ ಸರಬರಾಜು ಮಾಡುತ್ತಿದೆ. ಇದನ್ನು ನಿಗ್ರಹಿಸಲು ಗಿಡುಗಗಳು ನಿರ್ಣಾಯಕ ಪಾತ್ರ ನಿರ್ವಹಿಸಲಿವೆ. ಅಷ್ಟೇ ಏಕೆ, ವೈರಿರಾಷ್ಟ್ರದ ಗಡಿಗಳಲ್ಲಿ ಯಾವ ಕುತಂತ್ರ ನಡೆಯುತ್ತದೆ ಎಂಬುದನ್ನೂ ಗಿಡುಗಗಳ ಮೂಲಕ ನಿಗಾ ಇಡಬಹುದಾಗಿದೆ. ಗಿಡುಗಗಳಿಗೆ ವಿಡಿಯೊ ಕ್ಯಾಮೆರಾ ಅಳವಡಿಸಿದರೆ, ಅವು ನೆರೆರಾಷ್ಟ್ರದ ಗಡಿಗಳಿಗೆ ತೆರಳಿ, ಅಲ್ಲಿನ ಪರಿಸ್ಥಿತಿಯನ್ನು ರೆಕಾರ್ಡ್‌ ಮಾಡಿಕೊಂಡು ಬರಬಹುದಾಗಿದೆ. ಡ್ರೋನ್‌ ಸೇರಿ ಯಾವುದೇ ಉಪಕರಣವನ್ನು ಬೇರೆ ದೇಶದ ಗಡಿಯಾಚೆ ಕಳುಹಿಸಲು ರೇಡಾರ್‌ ಅಡ್ಡಿಯಾಗುತ್ತದೆ. ಆದರೆ, ಪಕ್ಷಿಗಳು ರೇಡಾರ್‌ ಕಣ್ಣು ತಪ್ಪಿಸಿ ಹಾರಾಟ ನಡೆಸಿ, ವಾಪಸ್‌ ಬರಬಹುದಾಗಿದೆ. ಇದರಿಂದಾಗಿ ಗಿಡುಗಗಳ ತರಬೇತಿ, ಅವುಗಳ ಬಳಕೆಯು ಭಾರತದ ಸೇನೆಗೆ ಅತ್ಯವಶ್ಯವಾಗಿದೆ.

ಇದನ್ನೂ ಓದಿ | Indian Army Kite | ಪಾಕ್ ಡ್ರೋನ್ ಬೇಟೆಯಾಡಲು ನಮ್ಮ ಸೇನೆಯ ‘ಗಿಡುಗ’ ಸಜ್ಜು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Air Crashes: ವಿಮಾನ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ 10 ಪ್ರಭಾವಿ ರಾಜಕಾರಣಿಗಳಿವರು

ಇರಾನ್ ಅಧ್ಯಕ್ಷರ ಸಾವು ವಿಶ್ವದಲ್ಲೇ ರಾಜಕೀಯ ನಾಯಕರ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಮಾಡುವಂತೆ ಮಾಡಿದೆ. ವಿಮಾನ, ಹೆಲಿಕಾಪ್ಟರ್ ಅಪಘಾತದಲ್ಲಿ (Air Crashes) ರಾಜಕೀಯ ನಾಯಕರ ಸಾವು ಇದೇ ಮೊದಲಲ್ಲ. ವಿಶ್ವದ ಹತ್ತು ಪ್ರಮುಖ ನಾಯಕರು ಈ ರೀತಿಯ ದುರಂತದಲ್ಲಿ ಮೃತಪಟ್ಟಿದ್ದಾರೆ.

VISTARANEWS.COM


on

By

Air Crashes
Koo

ಇರಾನ್ ಅಧ್ಯಕ್ಷ (Iran President) ಇಬ್ರಾಹಿಂ ರೈಸಿ (Ebrahim Raisi) ಅವರು ಭಾನುವಾರ ರಾತ್ರಿ ದೇಶದ ಪರ್ವತ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ (Air Crashes) ಸಾವನ್ನಪ್ಪಿದ್ದಾರೆ. ರೈಸಿ ಅವರ ದಣಿವರಿಯದ ಸ್ಫೂರ್ತಿಯ ಸೇವೆಯ ಮಾರ್ಗದಲ್ಲಿ ಮುಂದುವರಿಯುವುದಾಗಿ ಇರಾನ್‌ ಆಡಳಿತ ರಾಷ್ಟ್ರದ ಜನರಿಗೆ ಭರವಸೆ ನೀಡಿದೆ. ವಿಮಾನ ದುರಂತಗಳಲ್ಲಿ ರಾಜಕೀಯ ನಾಯಕರು ಸಾವನ್ನಪ್ಪಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಬೇರೆಬೇರೆ ರಾಷ್ಟ್ರಗಳಲ್ಲಿ ಇಂತಹ ಘಟನೆಗಳು ನಡೆದಿವೆ. ಆ ಕುರಿತ ಹಿನ್ನೋಟ ಇಲ್ಲಿದೆ.


ಸ್ವೀಡನ್ ಪ್ರಧಾನಿ ಅರ್ವಿಡ್ ಲಿಂಡ್‌ಮನ್ (1936)

ಸ್ವೀಡನ್‌ನ ಹಿಂದಿನ ಅಡ್ಮಿರಲ್ ಮತ್ತು ಎರಡು ಬಾರಿ ಸ್ವೀಡನ್‌ನ ಪ್ರಧಾನಮಂತ್ರಿ ಆಗಿದ್ದ ಸಾಲೋಮನ್ ಅರ್ವಿಡ್ ಅಚಾಟೆಸ್ ಲಿಂಡ್‌ಮನ್ ಪ್ರಭಾವಿ ಸಂಪ್ರದಾಯವಾದಿ ರಾಜಕಾರಣಿಯಾಗಿದ್ದರು. 1936ರ ಡಿಸೆಂಬರ್ 9ರಂದು ಲಿಂಡ್‌ಮನ್ ಅವರು ಪ್ರಯಾಣಿಸುತ್ತಿದ್ದ ಡಗ್ಲಾಸ್ ಡಿಸಿ-2 ಯುನೈಟೆಡ್ ಕಿಂಗ್‌ಡಂನ ಕ್ರೊಯ್ಡಾನ್ ವಿಮಾನವು ನಿಲ್ದಾಣದ ಬಳಿ ದಟ್ಟವಾದ ಮಂಜಿನಿಂದ ಟೇಕಾಫ್ ಆದ ಸ್ವಲ್ಪ ಸಮಯದ ಅನಂತರ ಮನೆಗಳಿಗೆ ಅಪ್ಪಳಿಸಿದಾಗ ಮೃತಪಟ್ಟರು.

ಫಿಲಿಪೈನ್ಸ್ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ (1957)

ಫಿಲಿಪೈನ್ಸ್‌ನ ಏಳನೇ ಅಧ್ಯಕ್ಷ ರಾಮನ್ ಮ್ಯಾಗ್ಸೆಸೆ ಅವರು ತಮ್ಮ ಬಲವಾದ ಭ್ರಷ್ಟಾಚಾರ ವಿರೋಧಿ ನಿಲುವು ಮತ್ತು ಜನಪ್ರಿಯ ಕಾರ್ಯಕ್ಕೆ ಹೆಸರುವಾಸಿಯಾಗಿದ್ದರು. ಅವರ ಅಧ್ಯಕ್ಷತೆಯು 1957ರ ಮಾರ್ಚ್ 17ರಂದು ಥಟ್ಟನೆ ಕೊನೆಗೊಂಡಿತು. “ಮೌಂಟ್ ಪಿನಾಟುಬೊ” ಎಂದು ಕರೆಯಲ್ಪಡುವ ಅವರ ಸಿ-47 ವಿಮಾನವು ಸೆಬು ನಗರದ ಮನುಂಗಲ್ ಪರ್ವತಕ್ಕೆ ಅಪ್ಪಳಿಸಿತು. ಆಗ ಮ್ಯಾಗ್ಸೆಸೆ ಮೃತಪಟ್ಟರು. 25 ಪ್ರಯಾಣಿಕರ ಪೈಕಿ ಒಬ್ಬರು ಮಾತ್ರ ಬದುಕುಳಿದಿದ್ದರು.


ಬ್ರೆಜಿಲ್ ಅಧ್ಯಕ್ಷ ನೆರೆಯು ರಾಮೋಸ್ (1958)

ಬ್ರೆಜಿಲ್‌ನ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನೆರೆಯು ರಾಮೋಸ್ ಅವರು 1958ರ ಜೂನ್ 16ರಂದು ನಿಧನರಾದರು. ರಾಮೋಸ್ ಅವರು ಕ್ರೂಝೈರೊ ಡೊ ಸುಲ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಪರಾನಾ ರಾಜ್ಯದ ಕುರಿಟಿಬಾ ಅಫೊನ್ಸೊ ಪೆನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿ ಮೃತಪಟ್ಟರು.

ಇರಾಕ್ ಅಧ್ಯಕ್ಷ ಅಬ್ದುಲ್ ಸಲಾಂ ಆರಿಫ್ (1966)

ಇರಾಕ್‌ನ ಎರಡನೇ ಅಧ್ಯಕ್ಷರಾದ ಅಬ್ದುಲ್ ಸಲಾಂ ಆರಿಫ್ ರಾಜಪ್ರಭುತ್ವವನ್ನು ಉರುಳಿಸಿದ 1958ರ ಕ್ರಾಂತಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದರು. 1966ರ ಏಪ್ರಿಲ್ 13ರಂದು ಆರಿಫ್ ಅವರ ಇರಾಕಿ ಏರ್ ಫೋರ್ಸ್ ವಿಮಾನ, ಡಿ ಹ್ಯಾವಿಲ್ಯಾಂಡ್ ಡಿಹೆಚ್ 104 ಡೋವ್, ಬಸ್ರಾ ಬಳಿ ಅಪಘಾತಕ್ಕೀಡಾದಾಗ ನಿಧನರಾದರು. ಅವರ ಸಹೋದರ ಅಬ್ದುಲ್ ರಹಮಾನ್ ಆರಿಫ್ ಅವರ ಅನಂತರ ಅಧ್ಯಕ್ಷರಾದರು.


ಬ್ರೆಜಿಲ್ ಅಧ್ಯಕ್ಷ ಹಂಬರ್ಟೊ ಡಿ ಅಲೆಂಕಾರ್ ಕ್ಯಾಸ್ಟೆಲೊ ಬ್ರಾಂಕೊ (1967)

ಬ್ರೆಜಿಲ್‌ನ 26ನೇ ಅಧ್ಯಕ್ಷ ಮತ್ತು ಮಾಜಿ ಮಿಲಿಟರಿ ಸರ್ವಾಧಿಕಾರದ ಪ್ರಮುಖ ವ್ಯಕ್ತಿಯಾಗಿದ್ದ ಹಂಬರ್ಟೊ ಡಿ ಅಲೆಂಕಾರ್ ಕ್ಯಾಸ್ಟೆಲೊ ಬ್ರಾಂಕೊ 1967ರ ಜುಲೈ 18ರಂದು ನಿಧನರಾದರು. ಅವರ ಅಧ್ಯಕ್ಷೀಯ ಅವಧಿ ಮುಗಿದ ಸ್ವಲ್ಪ ಸಮಯದ ಅನಂತರ ಕ್ಯಾಸ್ಟೆಲೊ ಬ್ರಾಂಕೋ ಅವರ ಪೈಪರ್ ಪಿಎ -23 ಅಜ್ಟೆಕ್ ವಿಮಾನ ಬ್ರೆಜಿಲಿಯನ್ ವಾಯುಪಡೆ ವಿಮಾನಕ್ಕೆ ಡಿಕ್ಕಿ ಹೊಡೆದು ದುರಂತ ಸಂಭವಿಸಿತು. ಅವರ ಸಾವು ಭಾರಿ ಚರ್ಚೆಗೆ ಕಾರಣವಾಗಿತ್ತು.

ಇಂದಿರಾ ಗಾಂಧಿ ಮಗ ಸಂಜಯ್ ಗಾಂಧಿ (1980)

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುತ್ರ ಸಂಜಯ್ ಗಾಂಧಿ 1980ರ ಜೂನ್ 23ರಂದು ವಿಮಾನ ಅಪಘಾತದಲ್ಲಿ ನಿಧನರಾದರು. ದೆಹಲಿಯ ಸಫ್ದರ್‌ಜಂಗ್ ವಿಮಾನ ನಿಲ್ದಾಣದಲ್ಲಿ ತಾವು ಚಲಾಯಿಸುತ್ತಿದ್ದ ವಿಮಾನದ ನಿಯಂತ್ರಣವನ್ನು ಕಳೆದುಕೊಂಡು ದುರಂತ ಸಾವು ಕಂಡರು.


ಲೆಬನಾನ್ ಪ್ರಧಾನಿ ರಶೀದ್ ಕರಾಮಿ (1987)

ಲೆಬನಾನ್‌ನ ಅತಿ ಹೆಚ್ಚು ಬಾರಿ ಚುನಾಯಿತರಾದ ಪ್ರಧಾನಮಂತ್ರಿ ರಶೀದ್ ಕರಾಮಿ ಅವರು ಲೆಬನಾನಿನ ಅಂತರ್ಯುದ್ಧದ ಸಮಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದರು. 1987ರ ಜೂನ್ 1ರಂದು, ಬೈರುತ್‌ಗೆ ಹೋಗುವ ಮಾರ್ಗದಲ್ಲಿ ಅವರ ಹೆಲಿಕಾಪ್ಟರ್‌ನಲ್ಲಿ ಬಾಂಬ್ ಸ್ಫೋಟಗೊಂಡು ಕರಾಮಿ ಕೊಲ್ಲಲ್ಪಟ್ಟರು.

ಪಾಕಿಸ್ತಾನದ ಅಧ್ಯಕ್ಷ ಮುಹಮ್ಮದ್ ಜಿಯಾ-ಉಲ್-ಹಕ್ (1988)

ಪಾಕಿಸ್ತಾನದ ಆರನೇ ಅಧ್ಯಕ್ಷರಾದ ಜನರಲ್ ಮುಹಮ್ಮದ್ ಜಿಯಾ-ಉಲ್-ಹಕ್ ಅವರು 1988ರ ಆಗಸ್ಟ್ 17ರಂದು ನಿಧನರಾದರು. ಅವರು ಪ್ರಯಾಣಿಸುತ್ತಿದ್ದ ಸಿ-130 ಹರ್ಕ್ಯುಲಸ್ ವಿಮಾನವು ಬಹವಾಲ್‌ಪುರದಿಂದ ಟೇಕಾಫ್ ಆದ ಸ್ವಲ್ಪ ಸಮಯದ ಅನಂತರ ಅಪಘಾತಕ್ಕೀಡಾಯಿತು. ಅಪಘಾತದ ಕಾರಣವು ಇನ್ನೂ ನಿಗೂಢವಾಗಿಯೇ ಉಳಿದಿದೆ.

ಇದನ್ನೂ ಓದಿ: Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?


ಕಾಂಗ್ರೆಸ್‌ ನಾಯಕ ಮಾಧವರಾವ್ ಸಿಂಧಿಯಾ (2001)

ಮಾಧವರಾವ್ ಸಿಂಧಿಯಾ ಭಾರತದ ಪ್ರಮುಖ ರಾಜಕಾರಣಿ ಮತ್ತು ಕಾಂಗ್ರೆಸ್ ನಾಯಕರಾಗಿದ್ದರು. 2001ರ ಸೆಪ್ಟೆಂಬರ್ 30ರಂದು ವಿಮಾನ ಅಪಘಾತದಲ್ಲಿ ದಾರುಣ ಅಂತ್ಯ ಕಂಡರು. ಉತ್ತರ ಪ್ರದೇಶದ ಮೈನ್‌ಪುರಿ ಬಳಿ ಅವರ ಖಾಸಗಿ ಬೀಚ್‌ಕ್ರಾಫ್ಟ್ ಕಿಂಗ್ ಏರ್ ಸಿ 90 ಗಾಳಿಯಲ್ಲಿ ಬೆಂಕಿ ಹೊತ್ತಿಕೊಂಡು ಅಪಘಾತ ಸಂಭವಿಸಿತ್ತು.

ಚಿಲಿಯ ಅಧ್ಯಕ್ಷ ಸೆಬಾಸ್ಟಿಯನ್ ಪಿನೆರಾ (2024)

ಚಿಲಿಯ ಮಾಜಿ ಅಧ್ಯಕ್ಷರಾದ ಸೆಬಾಸ್ಟಿಯನ್ ಪಿಮೆರಾ ಅವರು ಫೆಬ್ರವರಿ 2024ರಲ್ಲಿ ನಿಧನರಾದರು. ಪಿನೆರಾ ಅವರ ಹೆಲಿಕಾಪ್ಟರ್ ದಕ್ಷಿಣ ಚಿಲಿಯ ಸರೋವರಕ್ಕೆ ಅಪ್ಪಳಿಸಿತು. ಈ ದುರಂತದಲ್ಲಿ ಅವರು ಪ್ರಾಣ ಕಳೆದುಕೊಂಡರು. ಅವರು ಸತತ ಎರಡು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿದ್ದ ವೈ ಎಸ್‌ ರಾಜಶೇಖರ್‌ ರೆಡ್ಡಿ ಅವರೂ ಹೆಲಿಕಾಪ್ಟರ್‌ ಅಪಘಾತದಲ್ಲಿ ಮೃತಪಟ್ಟಿದ್ದರು.

Continue Reading

ವಿಜ್ಞಾನ

Nuclear Test In Pokhran: ಭಾರತ ಮೊದಲ ಪರಮಾಣು ಪರೀಕ್ಷೆ ನಡೆಸಿ ಇಂದಿಗೆ 50 ವರ್ಷ; ಏನಿದು ಸ್ಮೈಲಿಂಗ್‌ ಬುದ್ಧ?

ಭಾರತ ಪರಮಾಣು ಶಕ್ತಿ ರಾಷ್ಟ್ರವಾಗಿ ಇಂದಿಗೆ 50 ವರ್ಷ. ಇಂದಿಗೆ ಸುಮಾರು 50 ವರ್ಷಗಳ ಹಿಂದೆ ಭಾರತ ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯನ್ನು (Nuclear Test In Pokhran) ನಡೆಸಿತ್ತು. ಈ ಕುರಿತ ಕುತೂಹಲಕರ ಹಿನ್ನೋಟ ಇಲ್ಲಿದೆ.

VISTARANEWS.COM


on

By

Nuclear test at Pokhran
Koo

ಇಂದಿಗೆ 50 ವರ್ಷಗಳ ಹಿಂದೆ ಭಾರತದ (India) ಇತಿಹಾಸದಲ್ಲಿ ಒಂದು ಅಭೂತಪೂರ್ವ ಕ್ಷಣ ದಾಖಲಾಗಿತ್ತು. ಅದುವೇ ಅಣು ಪರೀಕ್ಷೆ. ಪೋಖ್ರಾನ್‌ನಲ್ಲಿ ಪರಮಾಣು ಪರೀಕ್ಷೆ (Nuclear Test In Pokhran) ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಆಗಿನ ಪ್ರಧಾನಿಯಾಗಿದ್ದ (Prime Minister) ಇಂದಿರಾ ಗಾಂಧಿಯವರು (Indira gandhi) 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ (BARC) ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು.

ಭಾರತ ಇಂದು ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯ 50ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಅಂದಿನ ಪರೀಕ್ಷೆ ಭಾರತವನ್ನು ಪರಮಾಣು ಶಕ್ತಿಯನ್ನಾಗಿ ರೂಪಿಸಿತು.

ಸ್ಮೈಲಿಂಗ್ ಬುದ್ಧ ಹೆಸರು ನೀಡಿದ್ದು ಯಾಕೆ?

ಈ ಪರೀಕ್ಷೆಗೆ ‘ಸ್ಮೈಲಿಂಗ್ ಬುದ್ಧ’ ಎಂಬ ಸಂಕೇತನಾಮವನ್ನು ನೀಡಲಾಯಿತು. 1974ರ ಮೇ 18ರಂದು ಆ ವರ್ಷದ ಬುದ್ಧ ಪೂರ್ಣಿಮೆಯಂದು ಪರೀಕ್ಷೆಯನ್ನು ನಡೆಸಲಾಗಿದ್ದರಿಂದ ಈ ಹೆಸರನ್ನು ಆಯ್ಕೆ ಮಾಡಲಾಯಿತು. “ಬುದ್ಧ ಅಂತಿಮವಾಗಿ ಮುಗುಳ್ನಕ್ಕ” ಎಂಬುದು ಭಾರತದ ಪ್ರಧಾನ ಪರಮಾಣು ಸಂಶೋಧನಾ ಸಂಸ್ಥೆ ಭಾಭಾ ಪರಮಾಣು ಸಂಶೋಧನಾ ಕೇಂದ್ರದ (BARC) ನಿರ್ದೇಶಕ ರಾಜಾ ರಾಮಣ್ಣ ಅವರು ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂದೇಶವನ್ನು ರವಾನಿಸಿದ್ದರು!


ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ಕಾಯಂ ಸದಸ್ಯತ್ವ ಹೊಂದಿರದ ರಾಷ್ಟ್ರವೊಂದು ನಡೆಸಿದ ಮೊದಲ ಪರಮಾಣು ಪರೀಕ್ಷೆ ಇದಾಗಿದೆ.

ಪೋಖ್ರಾನ್‌ನಲ್ಲಿ ಸ್ಫೋಟಿಸಿದ ಸಾಧನದ ಬಗ್ಗೆ ಚರ್ಚೆಯಾಗಿದ್ದರೂ, ಇದು ಸುಮಾರು 8- 12 ಕಿಲೋ ಟನ್‌ಗಳಷ್ಟು ಟಿಎನ್‌ಟಿ (ಪರಮಾಣು ಪರೀಕ್ಷೆ ಮಾಪನ) ಎಂದು ನಂಬಲಾಗಿದೆ. ಪರೀಕ್ಷೆಯ ಪ್ರಮುಖ ಅಂಶವೆಂದರೆ ಭಾರತವು ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಗುಪ್ತಚರ ಸಂಸ್ಥೆಗಳ ಪತ್ತೆಯನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದು. ಇಂತಹ ಪರೀಕ್ಷೆಗಳು ಪರಮಾಣು ಪ್ರಸರಣಕ್ಕೆ ಕಾರಣವಾಗಬಹುದು ಎಂದು ಹೇಳಿದ ಅಮೆರಿಕದಂತಹ ರಾಷ್ಟ್ರದ ನಿರ್ಬಂಧಗಳ ಸರಣಿಯನ್ನು ದೇಶವು ಎದುರಿಸಿತು.


ಎರಡು ವರ್ಷಗಳ ತಯಾರಿ

ಈ ಪರೀಕ್ಷೆಯನ್ನು ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಇಂದಿರಾ ಗಾಂಧಿಯವರು 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು.

ಇದನ್ನೂ ಓದಿ: Chinese Scientists: ಇನ್ನು ಮನುಷ್ಯರು 130 ವರ್ಷ ಬದುಕಬಹುದು! ಚೀನಾ ವಿಜ್ಞಾನಿಗಳ ಸಂಶೋಧನೆ

ಪೋಖ್ರಾನ್-II ಪರೀಕ್ಷೆ

1974ರ ಅನಂತರ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ 1998ರಲ್ಲಿ ಭಾರತವು ಅದೇ ಸ್ಥಳದಲ್ಲಿ ಪೋಖ್ರಾನ್- II ಹೆಸರಿನಲ್ಲಿ ಮತ್ತೊಂದು ಪರಮಾಣು ಪರೀಕ್ಷೆ ನಡೆಸಿತು. ಈ ಪರೀಕ್ಷೆ ಮೇ 1998ರಲ್ಲಿ ಪೋಖ್ರಾನ್‌ನಲ್ಲಿ ಐದು ಪರಮಾಣು ಸ್ಫೋಟಗಳ ಸರಣಿಯನ್ನು ಕಂಡವು. ಪೋಖ್ರಾನ್-II ಪರೀಕ್ಷೆಗಳ ವಾರ್ಷಿಕೋತ್ಸವದ ನೆನಪಿಗಾಗಿ ಪ್ರತಿ ವರ್ಷ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. 2020ರಿಂದ ಭಾರತವು 1974ರ ಪೋಖ್ರಾನ್ ಪರೀಕ್ಷೆಗಳ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಾರಂಭಿಸಿತ್ತು.

Continue Reading

ರಾಜಕೀಯ

Prime Minister Of India: ಸುದೀರ್ಘ ಕಾಲ ಪ್ರಧಾನಿಯಾಗಿದ್ದ ನೆಹರೂ, ಇಂದಿರಾ ದಾಖಲೆಯನ್ನು ಮೋದಿ ಮುರಿಯಲು ಸಾಧ್ಯವೆ?

ಭಾರತ ಸ್ವಾತಂತ್ರ್ಯವಾದ ಬಳಿಕ 14 ಮಂದಿ ಪ್ರಧಾನ ಮಂತ್ರಿ (Prime Minister Of India) ಸ್ಥಾನವನ್ನು ಅಲಂಕರಿಸಿದ್ದಾರೆ. ಅವರಲ್ಲಿ ಕೆಲವರು ಮಾತ್ರ ಸುದೀರ್ಘಾವಧಿಗೆ ಪ್ರಧಾನಿಯಾಗಿದ್ದರು. ಯಾರು ಎಷ್ಟು ಅವಧಿಗೆ ಪ್ರಧಾನಮಂತ್ರಿಯಾಗಿದ್ದರು? ಈ ಕುರಿತ ದಾಖಲೆ ಇಲ್ಲಿದೆ.

VISTARANEWS.COM


on

By

Prime Minister of India
Koo

ಪ್ರತಿ ಬಾರಿಯೂ ಲೋಕಸಭಾ ಚುನಾವಣೆ (Lok sabha election) ಘೋಷಣೆಯಾದ ಬಳಿಕ ಮುಂದಿನ ಪ್ರಧಾನಿ (Prime Minister Of India) ಯಾರಾಗಬಹುದು ಎನ್ನುವ ಕುತೂಹಲವಂತೂ ಇದ್ದೇ ಇರುತ್ತದೆ.

ಭಾರತ ಸ್ವಾತಂತ್ರ್ಯವಾದ ಬಳಿಕ 14 ಮಂದಿ ಪ್ರಧಾನಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ. ಅವರೆಂದರೆ ಜವಾಹರ್ ಲಾಲ್ ನೆಹರೂ (Jawaharlal Nehru) , ಲಾಲ್ ಬಹಾದ್ದೂರ್ ಶಾಸ್ತ್ರೀ (Lal Bahadur Shastri), ಇಂದಿರಾ ಗಾಂಧಿ (Indira gandhi), ಮೊರಾರ್ಜಿ ದೇಸಾಯಿ (morarji desai), ಚರಣ್ ಸಿಂಗ್ (charan singh), ರಾಜೀವ್ ಗಾಂಧಿ (rajiv gandhi), ವಿಶ್ವನಾಥ್ ಪ್ರತಾಪ್ ಸಿಂಗ್ (vishwanath pratap singh), ಚಂದ್ರಶೇಖರ್ (chandra shekhar) , ಪಿ.ವಿ. ನರಸಿಂಹ ರಾವ್ (p.v. narasimha rao), ಅಟಲ್ ಬಿಹಾರಿ ವಾಜಪೇಯಿ (atal bihari vajpayee), ಎಚ್.ಡಿ. ದೇವೇಗೌಡ (h.d. deve gowda), ಇಂದರ್ ಕುಮಾರ್ ಗುಜ್ರಾಲ್ (inder kumar gujral), ಮನ್ ಮೋಹನ್ ಸಿಂಗ್ (manmohan singh), ನರೇಂದ್ರ ಮೋದಿ (narendra modi). ಇವರಲ್ಲಿ ಕೆಲವರು ಮಾತ್ರ ದೀರ್ಘಾವಧಿಗೆ ಪ್ರಧಾನಿ ಯಾಗಿದ್ದರು. ಅವರು ಯಾರು? ಇಲ್ಲಿದೆ ಮಾಹಿತಿ.


ಇಂದಿರಾ ಗಾಂಧಿ (1966ರಿಂದ1977, 1980ರಿಂದ1984)

ಜವಾಹರಲಾಲ್ ನೆಹರೂ ಅವರ ಪುತ್ರಿ ಇಂದಿರಾ ಗಾಂಧಿ ಒಟ್ಟು 15 ವರ್ಷ 350 ದಿನಗಳ ಕಾಲ ಪ್ರಧಾನಿಯಾಗಿದ್ದರು. 1975ರಲ್ಲಿ ತುರ್ತುಪರಿಸ್ಥಿತಿಯ ಜಾರಿ, ಆಪರೇಷನ್‌ ಬ್ಲೂ ಸ್ಟಾರ್‌ ಕಾರ್ಯಾಚರಣೆ ಸೇರಿದಂತೆ ಹಲವು ದಿಟ್ಟ ಮತ್ತು ವಿವಾದಾತ್ಮಕ ನಿರ್ಧಾರಗಳಿಗೆ ಹೆಸರುವಾಸಿಯಾಗಿದ್ದರು. ತುರ್ತು ಪರಿಸ್ಥಿತಿ ಹೇರಿಕೆ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದು ಇಂದಿರಾ ಗಾಂಧಿ 1977ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಇಂದಿರಾ ಗಾಂಧಿ ಅವರು ಹೀನಾಯ ಹಿನ್ನಡೆ ಕಂಡು ಅಧಿಕಾರ ತ್ಯಜಿಸಬೇಕಾಯಿತು. ಆದರೆ 1980ರಲ್ಲಿ ಅವರು ಮತ್ತೆ ಭರ್ಜರಿ ಬಹುಮತದಿಂದ ಅಧಿಕಾರಕ್ಕೆ ಮರಳಿದರು. ಆದರೆ 1984ರಲ್ಲಿ ಸಿಖ್‌ ಭಯೋತ್ಪಾದನೆಗೆ ಬಲಿಯಾದರು.


ಅಟಲ್ ಬಿಹಾರಿ ವಾಜಪೇಯಿ (1996, 1998-2004)

ನುರಿತ ವಾಗ್ಮಿ ಮತ್ತು ದೂರದೃಷ್ಟಿಯ ನಾಯಕ, ಅಟಲ್ ಬಿಹಾರಿ ವಾಜಪೇಯಿ ಅವರು ಮೂರು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಒಮ್ಮೆ 13 ದಿನ, ಮತ್ತೊಮ್ಮೆ 13 ತಿಂಗಳಷ್ಟೇ ಅವರು ಪ್ರಧಾನಿಯಾಗಿದ್ದರು. ಆದರೆ 1998ರಿಂದ 2004ರ ಅವರು ಪೂರ್ಣಾವಧಿ ಪ್ರಧಾನಿಯಾಗಿದ್ದರು. ಒಂದೆಡೆ ಪರಮಾಣು ಪರೀಕ್ಷೆಯ ದಿಟ್ಟತನ ಮತ್ತು ಇನ್ನೊಂದೆಡೆ ಪಾಕಿಸ್ತಾನದೊಂದಿಗೆ ಶಾಂತಿಯನ್ನು ಬೆಳೆಸುವ, ಸಂದರ್ಭ ಬಂದಾಗ ಅದಕ್ಕೆ ಬುದ್ಧಿ ಕಲಿಸುವ ಅವರ ಉಪಕ್ರಮಗಳಿಗಾಗಿ ವಾಜಪೇಯಿ ಸದಾ ನೆನಪಿನಲ್ಲಿರುತ್ತಾರೆ. ಹೆದ್ದಾರಿ ನಿರ್ಮಾಣದ ಕ್ರಾಂತಿ ನಡೆದಿದ್ದು ಅವರ ಕಾಲದಲ್ಲಿ.


ಮನಮೋಹನ್ ಸಿಂಗ್ (2004-2014)

ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದ ಮನಮೋಹನ್ ಸಿಂಗ್ ಅವರು ಒಟ್ಟು 10 ವರ್ಷಗಳ ಕಾಲ ಪ್ರಧಾನಿಯಾಗಿ ಸತತ ಎರಡು ಬಾರಿ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯು ಗಮನಾರ್ಹ ಆರ್ಥಿಕ ಸುಧಾರಣೆಗಳು ಮತ್ತು ಉದಾರೀಕರಣದ ಉಪಕ್ರಮಗಳಿಂದ ಗುರುತಿಸಲ್ಪಟ್ಟಿದೆ.


ನರೇಂದ್ರ ಮೋದಿ (2014ರಿಂದ ಈಗಿನವರೆಗೆ)

ಪ್ರಸ್ತುತ ಭಾರತದ ಪ್ರಧಾನಮಂತ್ರಿ ಆಗಿರುವ ನರೇಂದ್ರ ಮೋದಿ ಅವರು ಸತತ ಎರಡನೇ ಅವಧಿಯಲ್ಲಿದ್ದಾರೆ. ವರ್ಚಸ್ವಿ ನಾಯಕತ್ವಕ್ಕೆ ಹೆಸರುವಾಸಿಯಾದ ಅವರು ದೇಶದಲ್ಲಿ ಗಮನಾರ್ಹ ಸುಧಾರಣೆಗಳನ್ನು ತಂದಿದ್ದಾರೆ. ದೇಶ ಮತ್ತು ವಿದೇಶಗಳಲ್ಲಿ ಭಾರಿ ಜನಪ್ರಿಯತೆ ಗಳಿಸಿದ್ದಾರೆ. ಇದೇ ವೇಳೆ ಅವರನ್ನು ವಿರೋಧಿಸುವವರೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಸರ್ಜಿಕಲ್‌ ಸ್ಟ್ರೈಕ್‌ ಮೂಲಕ ಪಾಕಿಸ್ತಾನಕ್ಕೆ ನಡುವ ಹುಟ್ಟಿಸಿದ ಕೀರ್ತಿ ಖ್ಯಾತಿ ಇವರಿಗಿದೆ. ನೋಟ್‌ ಬ್ಯಾನ್‌, ಜಿಎಸ್‌ಟಿ ಜಾರಿಯಂಥ ಆರ್ಥಿಕ ಸುಧಾರಣೆ ಕ್ರಮಗಳನ್ನೂ ಕೈಗೊಂಡಿದ್ದಾರೆ. ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ವಿದೇಶಿ ನಾಯಕರೊಂದಿಗೆ ಮಾತುಕತೆ ನಡೆಸಿ ಶಾಂತಿ ನೆಲೆಸುವ ಕ್ರಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಎರಡನೇ ಅವಧಿಯು 2019ರಲ್ಲಿ ಪ್ರಾರಂಭವಾಯಿತು. ಮೂರನೇ ಅವಧಿಯಲ್ಲೂ ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದು ಚುನಾವಣೆ ಪೂರ್ವ ಸಮೀಕ್ಷೆಗಳು ಹೇಳಿವೆ. ಆದರೆ ಮೋದಿ ಅವರು ಮೂರನೇ ಅವಧಿಯಲ್ಲಿ ಪ್ರಧಾನಿಯಾಗಿ ಪೂರ್ಣಾವಧಿ ಮುಗಿಸಿದರೂ ನೆಹರೂ ಮತ್ತು ಇಂದಿರಾ ಗಾಂಧಿ ಅವರ ಸುದೀರ್ಘ ಆಡಳಿತ ಅವಧಿಯ ದಾಖಲೆ ಹಾಗೆಯೇ ಮುಂದುವರಿಯುತ್ತದೆ. ಈ ದಾಖಲೆ ಮುರಿಯಬೇಕೆಂದರೆ ಮೋದಿ ನಾಲ್ಕನೇ ಬಾರಿಯೂ ಪ್ರಧಾನಿ ಆಗಬೇಕಾಗುತ್ತದೆ!

Continue Reading

ದೇಶ

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Uttar Pradesh: 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಉತ್ತರ ಪ್ರದೇಶದಲ್ಲಿ 71 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 2019ರಲ್ಲಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇದು ಕೇಂದ್ರದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರಲು ಕಾರಣವಾಗಿತ್ತು. ಆದರೆ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಜಕೀಯ ಸ್ಥಿತಿಗತಿ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Uttar Pradesh
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯಗೊಂಡಿದೆ. ಅದರಲ್ಲೂ, ದೇಶದ ಗಮನವೀಗ ಉತ್ತರ ಪ್ರದೇಶದ (Uttar Pradesh) ರಾಜಕೀಯ ಸ್ಥಿತಿಗತಿಗಳ ಮೇಲೆ ನಿಂತಿದೆ. ಮೊದಲಿನಿಂದಲೂ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಪಕ್ಷವು ಕೇಂದ್ರದಲ್ಲಿ ಅಧಿಕಾರ ಗಳಿಸುತ್ತದೆ ಎಂಬ ಮಾತಿದೆ. ಅದು ಬಹುತೇಕ ಚುನಾವಣೆಗಳಲ್ಲಿ ನಿಜವೂ ಆಗಿದೆ. ಉತ್ತರ ಪ್ರದೇಶದಲ್ಲಿ 80 ಲೋಕಸಭೆ ಕ್ಷೇತ್ರಗಳು ಇರುವುದೇ ಇದಕ್ಕೆ ಕಾರಣವಾಗಿದ್ದು, ಈ ಬಾರಿಯೂ ಕದನ ಕುತೂಹಲ ಮೂಡಿದೆ. ಹಾಗಾದರೆ, ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಸಮರ ಹೇಗೆ ನಡೆಯುತ್ತಿದೆ? ಯಾವ ಪಕ್ಷಕ್ಕೆ ಗೆಲುವಾಗಬಹುದು? ಯಾವ ಪಕ್ಷಗಳ ರಾಜಕೀಯ ತಂತ್ರಗಾರಿಕೆ ಹೇಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ರಾಮಮಂದಿರ ವಿಷಯ ಪ್ರಧಾನ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿರುವುದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಅಸ್ತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್‌ ಅವರು ಅಬ್ಬರದ ಪ್ರಚಾರದ ವೇಳೆ ರಾಮಮಂದಿರ ನಿರ್ಮಾಣ, ಅದು ಹೇಗೆ ಉತ್ತರ ಪ್ರದೇಶದ ಅಸ್ಮಿತೆ ಎಂಬುದರ ಕುರಿತು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಇದರಿಂದಾಗಿ, ಪ್ರತಿಪಕ್ಷಗಳೂ ರಾಮನ ಜಪ ಮಾಡುವಂತಾಗಿದೆ. ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಮೊದಲು ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೇಟಿ ನೀಡಿರುವುದೂ ಪ್ರಮುಖ ಅಂಶವಾಗಿದೆ. ಅಷ್ಟರಮಟ್ಟಿಗೆ, ಉತ್ತರ ಪ್ರದೇಶದಲ್ಲಿ ರಾಮಮಂದಿರವು ಲೋಕಸಭೆ ಚುನಾವಣೆಯ ಪ್ರಬಲ ವಿಷಯವಾಗಿದೆ.

Ram Mandir

ಕಾಂಗ್ರೆಸ್‌-ಎಸ್‌ಪಿ ಮೈತ್ರಿಯ ರಣತಂತ್ರವೇನು?

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳೂ ಆದ ಬಿಜೆಪಿ ಹಾಗೂ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡಿದ್ದು, ಸೀಟುಗಳನ್ನು ಹಂಚಿಕೊಂಡು ಚುನಾವಣೆ ಕಣಕ್ಕಿಳಿದಿವೆ. 2019ರಲ್ಲಿ ಬಿಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು, ಎಡವಿದ ಸಮಾಜವಾದಿ ಪಕ್ಷವು ಈ ಬಾರಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿದೆ. 2022ರ ವಿಧಾನಸಭೆ ಚುನಾವಣೆಯಲ್ಲಿ ಶೇ.3ರಷ್ಟು ಮತ ಪಡೆದರೂ ಕಾಂಗ್ರೆಸ್‌ ಉತ್ಸಾಹದಿಂದ ಪ್ರಚಾರ ಕೈಗೊಳ್ಳುತ್ತಿದೆ. ಉತ್ತರ ಪ್ರದೇಶದಲ್ಲಿ ಶೇ.20ರಷ್ಟು ಮುಸ್ಲಿಮರ ಮತಗಳಿದ್ದು, ಇವುಗಳನ್ನು ಪಡೆಯಲು ಸಮಾಜವಾದಿ ಪಕ್ಷವು ರಣತಂತ್ರ ರೂಪಿಸುತ್ತಿದೆ. ಕಾಂಗ್ರೆಸ್‌ ಹಾಗೂ ಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿಗಳು, ನಾಯಕರು ಜತೆಗೂಡಿ ದಲಿತರು, ಮುಸ್ಲಿಮರು ಹಾಗೂ ಹಿಂದುಳಿದವರ ಮತಗಳನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಹೇಗೆ ಫಲ ನೀಡಲಿದೆ ಎಂಬುದು ಫಲಿತಾಂಶದ ಬಳಿಕವೇ ಗೊತ್ತಾಗಲಿದೆ.

ಮಾಯಾವತಿ ಮಾಡುವರೇ ಕಮಾಲ್?‌

ಬಹುಜನ ಸಮಾಜ ಪಕ್ಷದ ಮಾಯಾವತಿ ಅವರು ಒಂದು ಕಾಲದಲ್ಲಿ ಇಡೀ ರಾಜ್ಯಾದ್ಯಂತ ಪ್ರಾಬಲ್ಯ ಹೊಂದಿದ್ದರು. ಆದರೀಗ, ಅವರ ವರ್ಚಸ್ಸು, ಪಕ್ಷದ ಹಿಡಿತ ಸಡಿಲವಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಶೇ.19.70ರಷ್ಟು ಮತಗಳನ್ನು ಪಡೆದರೂ ಬಿಎಸ್‌ಪಿ ಒಂದೇ ಒಂದು ಸೀಟು ಗೆದ್ದಿರಲಿಲ್ಲ. ಇನ್ನು, 2019ರ ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದರೂ 10 ಸೀಟುಗಳು ಮಾತ್ರ ಲಭಿಸಿದ್ದವು. ಇನ್ನು 2022ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಮತ ಪ್ರಮಾಣವು ಶೇ.12.8ಕ್ಕೆ ಕುಸಿದಿದೆ. ಮುಸ್ಲಿಮರ ಮತಗಳು ಎಂದೋ ಬಿಎಸ್‌ಪಿಯಿಂದ ದೂರಾಗಿವೆ. ಈಗೇನಿದ್ದರೂ ದಲಿತರು, ಹಿಂದುಳಿದವರ ಮತಗಳೇ ಬಿಎಸ್‌ಪಿಯ ಆಧಾರವಾಗಿವೆ. ಇಷ್ಟಾದರೂ, ಟಕ್ಕರ್‌ ಕೊಡಲು ಮಾಯಾವತಿ ರೆಡಿಯಾಗಿದ್ದಾರೆ.

Mayavati

ಯೋಗಿ ಎಂಬ ಬಲಿಷ್ಠ ನಾಯಕ

ಫೈರ್‌ಬ್ರ್ಯಾಂಡ್‌ ನಾಯಕ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದೇಶದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ನಂತರ ಬಿಜೆಪಿಯಲ್ಲಿ ಹೆಚ್ಚು ವರ್ಚಸ್ಸು ಇರುವ ನಾಯಕರಾಗಿದ್ದಾರೆ. ಹಾಗಾಗಿಯೇ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 109 ರ‍್ಯಾಲಿ ಸೇರಿ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಉತ್ತರಾಖಂಡ ಹಾಗೂ ಜಮ್ಮು-ಕಾಶ್ಮೀರದಲ್ಲಿ ಒಟ್ಟು 135 ಚುನಾವಣೆ ಸಮಾವೇಶಗಳನ್ನು ಕೈಗೊಂಡಿದ್ದಾರೆ. ಅದರಲ್ಲೂ, 2017ರಿಂದಲೂ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್‌ ಅವರು ರಾಜ್ಯದಲ್ಲಿ ಅಪರಾಧವನ್ನು ನಿಯಂತ್ರಿಸುವ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಿ ವರ್ಚಸ್ವಿ ನಾಯಕ ಎನಿಸಿದ್ದಾರೆ. ರಾಜ್ಯದಲ್ಲಿ ಇವರ ನಾಯಕತ್ವವೂ ಬಿಜೆಪಿಗೆ ವರದಾನವಾಗಿದೆ.

Yogi Adityanath

ಜಾತಿ ರಾಜಕಾರಣದ ಸಮೀಕರಣ

ಉತ್ತರ ಪ್ರದೇಶದಲ್ಲಿ ದಶಕಗಳಿಂದಲೂ ಚುನಾವಣೆಗಳಲ್ಲಿ ಜಾತಿವಾರು ಮತಗಳ ಸಮೀಕರಣವೇ ನಿರ್ಣಾಯಕವಾಗಿದೆ. 1990ರಿಂದ 2012ರವರೆಗೆ ಉತ್ತರ ಪ್ರದೇಶದಲ್ಲಿ ದಲಿತರು ಹಾಗೂ ಒಬಿಸಿ ಮತಗಳು ಬಿಜೆಪಿಯಿಂದ ದೂರವೇ ಇದ್ದವು. ಆದರೆ, 2014ರಿಂದ ರಾಜ್ಯದಲ್ಲಿ ಜಾಟವರ ಹೊರತಾದ ದಲಿತರು, ಯಾದವರ ಹೊರತಾದ ಒಬಿಸಿಯವರು ಬಿಜೆಪಿಯ ಹಿಂದುತ್ವ ರಾಜಕಾರಣಕ್ಕೆ ಬಲ ತುಂಬುತ್ತಿದ್ದಾರೆ. ಮೇಲ್ವರ್ಗದವರ ಮತಗಳು ಬಿಜೆಪಿಗೆ ಸಲೀಸಾಗಿ ಲಭಿಸಲಿವೆ. ಆದರೆ, ಜಾತಿ ಗಣತಿ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ, ಮೀಸಲಾತಿಯನ್ನು ಕಿತ್ತೊಗೆಯುತ್ತದೆ ಎಂದು ಪ್ರತಿಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿದ್ದು, ಈ ಅಂಶಗಳು ಯಾವ ರೀತಿಯ ಪರಿಣಾಮ ಬೀರಲಿವೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Continue Reading
Advertisement
Mobile
ದೇಶ5 hours ago

ಪರೀಕ್ಷೆಗೆ ಓದುವುದು ಬಿಟ್ಟು ಮೊಬೈಲ್‌ನಲ್ಲೇ ತಲ್ಲೀನ; 22 ವರ್ಷದ ಮಗಳನ್ನೇ ಕೊಂದ ತಾಯಿ

Rameshwaram Cafe Blast
ಕರ್ನಾಟಕ5 hours ago

Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಹುಬ್ಬಳ್ಳಿಯಲ್ಲಿ ಇಬ್ಬರು ಎನ್‌ಐಎ ವಶಕ್ಕೆ

LPL 2024
ಪ್ರಮುಖ ಸುದ್ದಿ6 hours ago

LPL 2024 : ಐಪಿಎಲ್ ಎಫೆಕ್ಟ್​, ಸಿಕ್ಕಾಪಟ್ಟೆ ದುಡ್ಡು ಬಾಚಿದ ಮಹೀಶ್ ಪತಿರಾನಾ

Porsche
ಸಂಪಾದಕೀಯ6 hours ago

ವಿಸ್ತಾರ ಸಂಪಾದಕೀಯ: ಸಬಲರ ಎದುರು ದುರ್ಬಲ ಕಾನೂನು; ಅಮಾಯಕರ ಜೀವಕ್ಕೆ ಬೆಲೆಯೇ ಇಲ್ಲ

Hajj pilgrimage
ಬೆಂಗಳೂರು6 hours ago

Hajj Pilgrimage: ಹಜ್ ಯಾತ್ರಿಗಳನ್ನು ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ; ಹಜ್ ಭವನ ನಿರ್ಮಾಣಕ್ಕೆ ಅನುದಾನ

IPL 2024
ಕ್ರೀಡೆ6 hours ago

IPL 2024 : ಕೆಕೆಆರ್​ 4ನೇ ಬಾರಿ ಐಪಿಎಲ್​​ನ​ ಫೈನಲ್​ಗೆ, ಎಸ್ಆರ್​ಎಚ್​ಗೆ ಇನ್ನೊಂದು ಅವಕಾಶ

Robert Vadra
ದೇಶ7 hours ago

Robert Vadra: ಸ್ವಂತ ಬಲದಿಂದ ರಾಜಕೀಯಕ್ಕೆ ಬರುವೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ ಶಪಥ!

IPL 2024
ಕ್ರೀಡೆ7 hours ago

IPL 2024 : ರನ್​ ಔಟ್​​ ಆಗಿದ್ದಕ್ಕೆ ಸಿಟ್ಟಿಗೆದ್ದ ಕಾವ್ಯಾ ಮಾರನ್​, ಕಣ್ಣೀರು ಹಾಕಿದ ರಾಹುಲ್ ತ್ರಿಪಾಠಿ

Talking Digital Safety for Teens programme by Meta in Bengaluru
ಕರ್ನಾಟಕ7 hours ago

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

MLC Election North East Graduates Constituency Election Prohibitory order imposed in Vijayanagar district from June 1
ವಿಜಯನಗರ7 hours ago

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ11 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು16 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು18 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌