ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ದುಡ್ಡಿಲ್ಲ; ನಿರ್ಮಲಾ ಸೀತಾರಾಮನ್ ಬಿಚ್ಚಿಟ್ಟ ರಹಸ್ಯ ಇದು! - Vistara News

ದೇಶ

ಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ಬಳಿ ದುಡ್ಡಿಲ್ಲ; ನಿರ್ಮಲಾ ಸೀತಾರಾಮನ್ ಬಿಚ್ಚಿಟ್ಟ ರಹಸ್ಯ ಇದು!

ಲೋಕಸಭೆ ಚುನಾವಣೆಯಲ್ಲಿ ತಾವೇಕೆ ಸ್ಪರ್ಧಿಸುತ್ತಿಲ್ಲ ಎಂಬುದರ ಕುರಿತು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ದುಡ್ಡಿನ ವಿಚಾರಕ್ಕಾಗಿ ಅವರು ಸ್ಪರ್ಧಿಸುತ್ತಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.

VISTARANEWS.COM


on

Nirmala Sitharaman
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ಬಿಜೆಪಿಯು ಇದುವರೆಗೆ 400 ಅಭ್ಯರ್ಥಿಗಳಿಗೆ ಟಿಕೆಟ್‌ (BJP Candidates List) ಘೋಷಣೆ ಮಾಡಿದೆ. ಬಿಜೆಪಿ ಅಭ್ಯರ್ಥಿಗಳೂ ಅಷ್ಟೇ, ಟಿಕೆಟ್‌ ಸಿಕ್ಕ ಕೂಡಲೇ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ತಾವೇಕೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ಅವರ ಬಳಿ ಚುನಾವಣೆಯಲ್ಲಿ ಸ್ಪರ್ಧಿಸುವಷ್ಟು ಹಣವಿಲ್ಲದ ಕಾರಣ ಸ್ಪರ್ಧಿಸುತ್ತಿಲ್ಲ ಎಂಬುದಾಗಿ ಹೇಳಿದ್ದಾರೆ.

ಟೈಮ್ಸ್‌ ನೌ ಸಮಿಟ್‌ 2024ರಲ್ಲಿ ಪಾಲ್ಗೊಂಡ ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಬಳಿ ದುಡ್ಡಿಲ್ಲ ಎಂಬುದನ್ನು ತಿಳಿಸಿದ್ದಾರೆ. “ಆಂಧ್ರಪ್ರದೇಶ ಅಥವಾ ತಮಿಳುನಾಡಿನಲ್ಲಿ ಲೋಕಸಭೆ ಚುನಾವಣೆ ಕಣಕ್ಕಿಳಿಯುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಆಯ್ಕೆಗಳನ್ನು ನೀಡಿದ್ದರು. ಆದರೆ, ನನ್ನ ಬಳಿ ಲೋಕಸಭೆ ಚುನಾವಣೆಯಲ್ಲಿ ಖರ್ಚು ಮಾಡುವಷ್ಟು ಹಣವಿಲ್ಲದ ಕಾರಣ ನಾನು ಲೋಕಸಭೆ ಚುನಾವಣೆ ಕಣದಿಂದ ಹಿಂದೆ ಸರಿದೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ನನಗೆ ಆಯ್ಕೆಗಳನ್ನು ನೀಡಿದಾಗ ತುಂಬ ಯೋಚನೆ ಮಾಡಿದೆ. ಒಂದು ವಾರ ಅಥವಾ 10 ದಿನ ಈ ಕುರಿತು ಯೋಚನೆ ಮಾಡಿದ ಬಳಿಕ ಅವರ ಬಳಿ ತೆರಳಿದೆ. ನನ್ನ ಹತ್ತಿರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಷ್ಟು ಹಣವಿಲ್ಲದ ಕಾರಣ ಸ್ಪರ್ಧಿಸಲು ಆಗುವುದಿಲ್ಲ ಎಂದು ತಿಳಿಸಿದೆ. ತಮಿಳುನಾಡು ಆದರೂ ಅಷ್ಟೇ, ಆಂಧ್ರಪ್ರದೇಶವಾದರೂ ಅಷ್ಟೇ. ಸ್ಪರ್ಧಿಸಲು ಆಗುವುದಿಲ್ಲ ಎಂಬುದಾಗಿ ತಿಳಿಸಿದೆ” ಎಂದು ನಿರ್ಮಲಾ ಸೀತಾರಾಮನ್‌ ಅವರು ಹೇಳಿದ್ದಾರೆ.

ಇದನ್ನೂ ಓದಿ: Lok Sabha Election: ಕಾಂಗ್ರೆಸ್‌ ಬಳಿ ದುಡ್ಡಿಲ್ಲ ಎಂದ ಖರ್ಗೆ; ಚುನಾವಣೆಯಲ್ಲಿ ಪಕ್ಷದ ಗತಿ ಏನು?

“ಚುನಾವಣೆಯಲ್ಲಿ ಸ್ಪರ್ಧಿಸಲು ಜಾತಿ, ಧರ್ಮ ಸೇರಿ ಹಲವು ಕಾರಣಗಳು ಮುಖ್ಯವಾಗುತ್ತವೆ. ಅವುಗಳಲ್ಲಿ ಹಣವೂ ಬೇಕಾಗುತ್ತದೆ. ನನ್ನ ಸಂಬಳ, ನನ್ನ ದುಡಿಮೆ ಹಾಗೂ ನಾನು ಮಾಡಿರುವ ಉಳಿತಾಯವನ್ನು ಲೆಕ್ಕ ಹಾಕಿದರೆ, ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಎಂಬುದನ್ನು ಅರಿತುಕೊಂಡೆ. ಇದೇ ವಾದವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಮುಂದಿಟ್ಟೆ” ಎಂಬುದಾಗಿ ಹೇಳಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Ujjwal Nikam: ಪ್ರಮೋದ್‌ ಮಹಾಜನ್‌ ಪುತ್ರಿಗೆ ಕೊಕ್‌, ಮುಂಬೈ ದಾಳಿ ವಕೀಲನಿಗೆ ಬಿಜೆಪಿ ಟಿಕೆಟ್!

Ujjwal Nikam: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು 15ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲೂ, ಮುಂಬೈ ನಾರ್ತ್‌ ಸೆಂಟ್ರಲ್‌ ಕ್ಷೇತ್ರದಲ್ಲಿ ಹಾಲಿ ಸಂಸದೆ ಪೂನಂ ಮಹಾಜನ್‌ ಬದಲಿಗೆ 26/11ರ ಮುಂಬೈ ದಾಳಿ ಪ್ರಕರಣದಲ್ಲಿ ವಾದ ಮಂಡಿಸಿದ ವಕೀಲ ಉಜ್ವಲ್‌ ನಿಕಾಮ್‌ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ.

VISTARANEWS.COM


on

Ujjwal Nikam
Koo

ಮುಂಬೈ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿಯು ಅಳೆದು-ತೂಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತಿದೆ. ಹೊಸಬರಿಗೆ ಆದ್ಯತೆ, ವಿವಾದ ಹೊಂದಿರುವ ನಾಯಕರಿಗೆ ಕೊಕ್‌, ಯುವಕರಿಗೆ ಮಣೆ ಸೇರಿ ಹಲವು ರೀತಿಯಲ್ಲಿ ಪ್ರಯೋಗ ಮಾಡುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಮುಂಬೈ ನಾರ್ತ್‌ ಸೆಂಟ್ರಲ್‌ ಲೋಕಸಭೆ ಕ್ಷೇತ್ರದಲ್ಲಿ ಹಾಲಿ ಸಂಸದೆ, ಬಿಜೆಪಿ ನಾಯಕ ಪ್ರಮೋದ್‌ ಮಹಾಜನ್‌ ಅವರ ಪುತ್ರಿ ಪೂನಂ ಮಹಾಜನ್‌ (Poonam Mahajan) ಅವರ ಬದಲಿಗೆ 26/11ರ ಮುಂಬೈ ಉಗ್ರ ದಾಳಿ (26/11 Mumbai Terror Attack) ವಕೀಲ ಉಜ್ವಲ್‌ ನಿಕಾಮ್‌ (Ujjwal Nikam) ಅವರಿಗೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು 15ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಉಜ್ವಲ್‌ ನಿಕಾಮ್‌ ಅವರಿಗೆ ಟಿಕೆಟ್‌ ನೀಡಿರುವುದು ಪ್ರಮುಖ ಘೋಷಣೆಯಾಗಿದೆ. ಉಜ್ವಲ್‌ ನಿಕಾಮ್‌ ಅವರು ಬಾಂಬೆ ಹೈಕೋರ್ಟ್‌ ವಕೀಲರಾಗಿದ್ದು, ಇವರು ಮುಂಬೈ ಭಯೋತ್ಪಾದಕ ದಾಳಿಯ ಬಳಿಕ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ವಾದ (ಪಬ್ಲಿಕ್‌ ಪ್ರಾಸಿಕ್ಯೂಟರ್) ಮಂಡಿಸಿದ್ದರು. ಇವರೀಗ ಮುಂಬೈ ನಾರ್ತ್‌ ಸೆಂಟ್ರಲ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ವರ್ಷಾ ಗಾಯಕ್ವಾಡ್‌ ಅವರನ್ನು ಎದುರಿಸಲಿದ್ದಾರೆ.

ಯಾರಿವರು ಉಜ್ವಲ್‌ ನಿಕಾಮ್?

ಉಜ್ವಲ್‌ ನಿಕಾಮ್‌ ಅವರ ಹೆಸರು ಮುಂಬೈ ದಾಳಿ ಪ್ರಕರಣದಲ್ಲಿ ದೇಶಾದ್ಯಂತ ಪಸರಿಸಿದರೂ, ಅವರು ಪ್ರಮುಖ ಪ್ರಕರಣಗಳಲ್ಲಿ ವಾದ ಮಂಡಿಸಿದ್ದಾರೆ. 1993ರಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿ, ಗುಲ್ಶನ್‌ ಕುಮಾರ್‌ ಕೊಲೆ ಪ್ರಕರಣ, 2013ರಲ್ಲಿ ಮುಂಬೈನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ ವಾದ ಮಂಡಿಸಿದ್ದಾರೆ. ಅಷ್ಟೇ ಏಕೆ, ಹಾಲಿ ಸಂಸದೆ ಪೂನಂ ಮಹಾಜನ್‌ ಅವರ ತಂದೆ ಪ್ರಮೋದ್‌ ಮಹಾಜನ್‌ ಹತ್ಯೆ ಪ್ರಕರಣದಲ್ಲೂ ಉಜ್ವಲ್‌ ನಿಕಾಮ್‌ ಅವರು ವಾದ ಮಂಡಿಸಿದ್ದರು. ಇವರಿಗೆ 2016ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿಯನ್ನೂ ನೀಡಿದೆ.

ಮುಂಬೈ ದಾಳಿ ಕರಾಳ ಅಧ್ಯಾಯ

ಮುಂಬೈನಲ್ಲಿರುವ ತಾಜ್​ ಹೋಟೆಲ್​ಗಳ ಮೇಲೆ 2008ರಲ್ಲಿ ನಡೆದ ಉಗ್ರ ದಾಳಿ ಇಂದಿಗೂ ನಮ್ಮ ಇತಿಹಾಸದಲ್ಲಿ ಕಪ್ಪುಚುಕ್ಕೆಯಾಗಿ ಉಳಿದಿದೆ. ಅದನ್ನೊಂದು ಕರಾಳ ದಿನವೆಂದೇ ಪರಿಗಣಿಸಲಾಗುತ್ತದೆ. ಅಂದು ಲಷ್ಕರೆ ತಯ್ಬಾ ಸಂಘಟನೆಯ 10 ಉಗ್ರರು ಸಮುದ್ರ ಮಾರ್ಗದ ಮೂಲಕ ಮುಂಬಯಿಗೆ ಬಂದು ಗುಂಡಿನ ದಾಳಿ ನಡೆಸಿದ್ದರು. ನವೆಂಬರ್ 26ರಿಂದ 29ರವರೆಗೆ ಭದ್ರತಾ ಪಡೆಗಳು-ಉಗ್ರರ ನಡುವಿನ ಹೋರಾಟ ನಡೆದಿತ್ತು. ಇದರಲ್ಲಿ ಆರು ಮಂದಿ ಅಮೇರಿಕದವರು ಸೇರಿ 166 ಮಂದಿ ಮೃತಪಟ್ಟಿದ್ದರು. ಹಲವು ಯೋಧರು ಕೂಡ ಹುತಾತ್ಮರಾಗಿದ್ದಾರೆ.

ಇದನ್ನೂ ಓದಿ: ಮೊದಲ ಹಂತದ ಮತದಾನ ಬೆನ್ನಲ್ಲೇ ಕಾಂಗ್ರೆಸ್‌, ಬಿಜೆಪಿ ಅಲರ್ಟ್;‌ ‘ಉತ್ತರ’ದತ್ತ ಚಿತ್ತ, 13 ಸಚಿವರಿಗೆ ಟಾಸ್ಕ್!

Continue Reading

ಮನಿ-ಗೈಡ್

Money Guide: ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಜಮೆ ಯಾವಾಗ?

Money Guide: ದೇಶದಲ್ಲಿನ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರ 2೦19ರಲ್ಲಿ ಜಾರಿಗೆ ತಂದಿದೆ. ಅದರಂತೆ ಪ್ರತಿ ವರ್ಷ ರೈತರ ಖಾತೆಗೆ 3 ಕಂತುಗಳಲ್ಲಿ 6,000 ರೂ. ಜಮೆ ಮಾಡಲಾಗುತ್ತದೆ. ಸದ್ಯ 16 ಕಂತುಗಳನ್ನು ಯಶಸ್ವಿಯಾಗಿ ಜಮೆ ಮಾಡಲಾಗಿದೆ. ಮುಂದಿನ ತಿಂಗಳು 17ನೇ ಕಂತು ಬಿಡಿಗಡೆಯಾಗುವ ನಿರೀಕ್ಷೆ ಇದೆ. ಸದ್ಯ ದಿನಾಂಕ ನಿಗಡಿಪಡಿಸಿಲ್ಲ. ಯಾವುದೇ ಕ್ಷಣದಲ್ಲಿ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Money Guide
Koo

ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯನ್ನು 2೦19ರಲ್ಲಿ ಜಾರಿಗೆ ತಂದಿದೆ. ಈ ಯೋಜನೆ ಮೂಲಕ ಪ್ರತಿ ವರ್ಷ ರೈತರ ಖಾತೆಗೆ 3 ಕಂತುಗಳಲ್ಲಿ 6,000 ರೂ. ಜಮೆ ಮಾಡಲಾಗುತ್ತದೆ. ಸದ್ಯ ಈ ಯೋಜನೆಯ 17ನೇ ಕಂತು ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಹಾಗಾದರೆ ಯಾವಾಗ ಹಣ ಜಮೆ ಆಗಲಿದೆ ಎನ್ನುವ ವಿವರ ಇಂದಿನ ಮನಿಗೈಡ್‌ (Money Guide)ನಲ್ಲಿದೆ.

ಫೆಬ್ರವರಿ 28ರಂದು ಫಲಾನುಭವಿ ಕೃಷಿಕರ ಖಾತೆಗೆ ಕಿಸಾನ್‌ ಸಮ್ಮಾನ್‌ ಯೋಜನೆಯ 16ನೇ ಕಂತು ಬಿಡುಗಡೆ ಮಾಡಲಾಗಿತ್ತು. ದೇಶಾದ್ಯಂತದ 9 ಕೋಟಿಗಿಂತ ಅಧಿಕ ಫಲಾನುಭವಿಗಳ ಖಾತೆಗೆ ಅಂದು ಸುಮಾರು 21,000 ಕೋಟಿ ರೂ. ಜಮೆ ಮಾಡಲಾಗಿತ್ತು. ಸದ್ಯ 17ನೇ ಕಂತು ಬಿಡುಗಡೆಯಾಗಬೇಕಿದೆ.

17ನೇ ಕಂತು ಯಾವಾಗ?

17ನೇ ಕಂತು ಮೇಯಲ್ಲಿ ಬಿಡುಗಡೆಯಾಗಲಿದೆ. ಆದರೆ ದಿನಾಂಕ ನಿಗಡಿಪಡಿಸಿಲ್ಲ. ಯಾವುದೇ ಕ್ಷಣದಲ್ಲಿ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ.

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಎಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ಈ ಯೋಜನೆ ನೆರವಾಗುತ್ತಿದೆ.

ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯಲ್ಲಿ ಹೆಸರು ನೋಂದಾಯಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ‘New Farmer Registration’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಮತ್ತು ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಕ್ಯಾಪ್ಚ ಕೋಡ್‌ ಭರ್ತಿ ಮಾಡಿ.
  • ಅಗತ್ಯ ಮಾಹಿತಿ ತುಂಬಿ ‘Yes’ ಬಟನ್‌ ಕ್ಲಿಕ್‌ ಮಾಡಿ.
  • ಅರ್ಜಿ ಫಾರಂ ತುಂಬಿ, ಸೇವ್‌ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ಔಟ್‌ ತೆಗೆದಿಡಿ.

ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ.
  • ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ.
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ.
  • ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ನಿಮ್ಮ ಹೆಸರು ಫಲಾನುಭವಿ ಪಟ್ಟಿಯಿಂದ ರದ್ದಾಗಲು ಕಾರಣ

  • ನಕಲಿ ಫಲಾನುಭವಿ ಸಂಖ್ಯೆ.
  • ಇ-ಕೆವೈಸಿ ಪೂರ್ಣವಾಗದಿರುವುದು.
  • ಅರ್ಜಿಯಲ್ಲಿನ ತಪ್ಪಾದ ಐಎಫ್‌ಎಸ್‌ಸಿ ಕೋಡ್‌.
  • ಅಮಾನ್ಯ, ವರ್ಗಾವಣೆಗೊಂಡ, ನಿರ್ಬಂಧಿಸಿದ ಅಥವಾ ಸ್ಥಗಿತಗೊಳಿಸಿದ ಬ್ಯಾಂಕ್ ಖಾತೆ.
  • ಬ್ಯಾಂಕ್‌ ಖಾತೆಯೊಂದಿಗೆ ಆಧಾರ್‌ ಕಾರ್ಡ್‌ ನಂಬರ್‌ ಲಿಂಕ್‌ ಆಗದೇ ಇರುವುದು.
  • ಅಪೂರ್ಣ ಅಪ್ಲಿಕೇಷನ್‌ ಫಾರಂ.
  • ಅಮಾನ್ಯ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್ ಹೆಸರು.
  • ಫಲಾನುಭವಿ ಖಾತೆ ಸಂಖ್ಯೆಯು ಫಲಾನುಭವಿ ಕೋಡ್ ಮತ್ತು ಯೋಜನೆಯೊಂದಿಗೆ ಹೋಲಿಕೆ ಆಗದಿರುವುದು.

ಇದನ್ನೂ ಓದಿ: Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

Job Alert: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ ಗುಡ್‌ನ್ಯೂಸ್‌ ನೀಡಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 506 ಅಸಿಸ್ಟಂಟ್‌ ಕಮಾಂಡೆಂಟ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 14. ಪದವಿ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (Central Armed Police Forces)ಗಳಲ್ಲಿನ ಅಸಿಸ್ಟಂಟ್‌ ಕಮಾಂಡೆಂಟ್‌ಗಳು (ಎ ಹುದ್ದೆಗಳು) ಹುದ್ದೆ ಇದಾಗಿದೆ. ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (BSF), ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಫೋರ್ಸ್‌ (CRPF), ಸೆಂಟ್ರಲ್‌ ಇಂಡಸ್ಟ್ರೀಯಲ್‌ ಸೆಕ್ಯುರಿಟಿ ಫೋರ್ಸ್‌ (CISF), ಇಂಡೋ-ಟಿಬೆಟಿಯನ್ ಬಾರ್ಡರ್‌ ಪೋಲೀಸ್‌ (ITBP) ಮತ್ತು ಸಶಸ್ತ್ರ ಸೀಮಾ ಬಲ್‌ (SSB)ಗಳಲ್ಲಿ 506 ಹುದ್ದೆಗಳಿವೆ (UPSC CAPF Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ

ಗಡಿ ಭದ್ರತಾ ಪಡೆ (ಬಿಎಸ್ಎಫ್)-186, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌)- 120, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)- 100, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)- 58, ಸಶಸ್ತ್ರ ಸೀಮಾ ಬಲ್ (ಎಸ್ಎಸ್‌ಬಿ)- 42 ಹುದ್ದೆಗಳಿವೆ. ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ ಮತ್ತು ವಯೋಮಿತಿ

ಅಭ್ಯರ್ಥಿಗಳು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಕೆಯ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ, ಕೇಂದ್ರ ಸರ್ಕಾರಿ ನೌಕರ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಮಹಿಳಾ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು. ಲಿಖಿತ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ (Physical Efficiency Test) ಅಥವಾ ದೈಹಿಕ ಮಾಪನ ಪರೀಕ್ಷೆ (Physical Measurement Test), ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಗಸ್ಟ್‌ 4ರಂದು ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳು ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬಹುದು.

UPSC CAPF Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • Registration ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ. ಇದಕ್ಕಾಗಿ ನಿಮ್ಮ ಮೊಬೈಲ್‌ ನಂಬರ್‌, ಇ ಮೇಲ್‌ ಐಡಿ ನಮೂದಿಸಿ.
  • ಹೆಸರು ನೋಂದಾಯಿಸಿಕೊಂಡ ಬಳಿಕ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಿಸಿ ಲಾಗಿನ್‌ ಆಗಿ.
  • ವಿವರಗಳನ್ನು ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳು, ಸಹಿ ಮತ್ತು ಫೋಟೊವನ್ನು ನಿಗದಿತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ ಅಪ್ಲಿಕೇಷನ್‌ ಫಾರಂ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Continue Reading

ತಂತ್ರಜ್ಞಾನ

English Speaking Practice: ಸರಳ, ಸುಲಭವಾಗಿ ಇಂಗ್ಲಿಷ್ ಮಾತನಾಡಬೇಕೇ?; ಗೂಗಲ್​​ನಲ್ಲಿದೆ ‘ಸ್ಪೀಕಿಂಗ್ ಪ್ರಾಕ್ಟೀಸ್’

English Speaking Practice: ಇಂಗ್ಲಿಷ್ ಮಾತನಾಡುವ ಕೌಶಲವನ್ನು ವೃದ್ಧಿಸಿಕೊಳ್ಳಬೇಕೇ. ಇದಕ್ಕಾಗಿ ಇನ್ನು ಹೆಚ್ಚಿನ ಕಡೆ ಅಲೆದಾಡಬೇಕಿಲ್ಲ. ನಾವು ನಿತ್ಯ ಏನಾದರೊಂದು ವಿಷಯದ ಬಗ್ಗೆ ಹುಡುಕಾಡುವ ಗೂಗಲ್ ನಲ್ಲೇ ಇದು ಲಭ್ಯವಾಗಲಿದೆ.

VISTARANEWS.COM


on

By

English Speaking Practice
Koo

ಸ್ಮಾರ್ಟ್ ಫೋನ್ (smart phone) ಬಳಕೆದಾರರ ಇಂಗ್ಲಿಷ್ ಮಾತನಾಡುವ ಕೌಶಲ್ಯವನ್ನು (English Speaking Practice) ಸುಧಾರಿಸಲು ಗೂಗಲ್ (google) ಹೊಸ ವೈಶಿಷ್ಠ್ಯವೊಂದನ್ನು ಪರಿಚಯಿಸಿದೆ. ‘ಸ್ಪೀಕಿಂಗ್ ಪ್ರಾಕ್ಟೀಸ್’ ಎಂದು ಕರೆಯಲ್ಪಡುವ ಈ ಹೊಸ ವೈಶಿಷ್ಟ್ಯವು ಪ್ರಸ್ತುತ ಅರ್ಜೆಂಟೀನಾ (Argentina), ಕೊಲಂಬಿಯಾ (Colombia), ಭಾರತ (India), ಇಂಡೋನೇಷ್ಯಾ (Indonesia), ಮೆಕ್ಸಿಕೋ (Mexico) ಮತ್ತು ವೆನೆಜುವೆಲಾದಲ್ಲಿ (Venezuela) ಗೂಗಲ್ ಹುಡುಕಾಟದಲ್ಲಿ ಲಭ್ಯವಾಗುತ್ತಿದೆ.

ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಸಹಾಯದಿಂದ ಹೊಸ ವೈಶಿಷ್ಟ್ಯವು ಸಂವಹನ ಭಾಷಾ ಕಲಿಕೆಯನ್ನು ಪ್ರಾಕ್ಟೀಸ್ ಮಾಡಲು ಬಳಕೆದಾರರಿಗೆ ಅವಕಾಶ ಕಲ್ಪಿಸುತ್ತದೆ. ದಿನನಿತ್ಯ ಬಳಸಬಹುದಾದ ಹೊಸ ಪದಗಳನ್ನು ಕಲಿಯಲು ಇದು ಸಹಾಯ ಮಾಡುತ್ತದೆ ಎಂದು ಟೆಕ್ ದೈತ್ಯ ಗೂಗಲ್ ಹೇಳಿದೆ.

ಟೆಕ್ಕ್ರಂಚ್ ಪ್ರಕಾರ, ಸ್ಪೀಕಿಂಗ್ ಪ್ರಾಕ್ಟೀಸ್ ಅನ್ನು ಟ್ವಿಟರ್​​ ನಲ್ಲಿ ಹಿಂದೆ ಪರಿಚಯಿಸಲಾಗಿತ್ತು. ಈ ಹೊಸ ವೈಶಿಷ್ಟ್ಯವು ಬಳಕೆದಾರರಿಗೆ ಪ್ರಶ್ನೆ ಕೇಳುವ ಮೂಲಕ ಕಾರ್ಯನಿರ್ವಹಿಸುತ್ತದೆ. ಅದರ ಅನಂತರ ಬಳಕೆದಾರರು ಪೂರ್ವನಿರ್ಧರಿತ ಪದಗಳ ಗುಂಪಿನಿಂದ ಉತ್ತರಿಸಲು ಪ್ರೇರೇಪಿಸುತ್ತಾರೆ.

ಇದನ್ನೂ ಓದಿ: WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?

ಬಳಕೆದಾರರು ಹಂಚಿಕೊಂಡಿರುವ ಸ್ಕ್ರೀನ್‌ಶಾಟ್‌ಗಳಲ್ಲಿ ಒಂದಾದ ವೈಶಿಷ್ಟ್ಯವು ಎಐ ಚಾಟ್‌ಬಾಟ್ ಅನ್ನು ಹೊಂದಿರುತ್ತದೆ. ಅದು ಬಳಕೆದಾರರು ಏನು ಮಾಡಬೇಕು ಎಂದು ತಿಳಿಸುತ್ತದೆ. ಬಳಕೆದಾರರು ಅನಂತರ ‘ದಣಿದ’, ‘ಹೃದಯ’ ಮತ್ತು ‘ವ್ಯಾಯಾಮ’ ದಂತಹ ಪದಗಳನ್ನು ಒಳಗೊಂಡಿರುವ ಒಂದು ಪದದ ಪ್ರತಿಕ್ರಿಯೆಗಳೊಂದಿಗೆ ಉತ್ತರಿಸ ಬೇಕು.


ಜನರು ತಮ್ಮ ಸ್ಮಾರ್ಟ್ ಫೋನ್‌ಗಳಲ್ಲಿ ಇಂಗ್ಲಿಷ್ ಸಂವಹನವನ್ನು ವೃದ್ಧಿಸಿಕೊಳ್ಳಲು ಗೂಗಲ್ ತನ್ನ ಎಐ ಆಲಿಸುವ ಕೌಶಲ್ಯಗಳನ್ನು 2023ರ ಅಕ್ಟೋಬರ್ ನಲ್ಲಿ ಹೊರತಂದಿದೆ. ಮೊದಲು ಮಾತನಾಡುವ ವಾಕ್ಯಗಳ ಕುರಿತು ಮಾತ್ರ ಪ್ರತಿಕ್ರಿಯೆಯನ್ನು ಒದಗಿಸುತಿತ್ತು. ಈಗ, ಬಳಕೆದಾರರು ತಾವು ಕಲಿಯುತ್ತಿರುವ ಭಾಷೆಯಲ್ಲಿ ನಡೆಯುತ್ತಿರುವ ಸಂಭಾಷಣೆಗಳನ್ನು ಅಭ್ಯಾಸ ಮಾಡಬಹುದು.


ಇಂಗ್ಲಿಷ್ ಟ್ಯೂಟರಿಂಗ್

ಇದಲ್ಲದೇ ಗೂಗಲ್ ಕಳೆದ ವರ್ಷ ಹೊಸ ಡ್ಯುಯೊಲಿಂಗೋ ನಂತಹ ಇಂಗ್ಲಿಷ್ ಟ್ಯೂಟರಿಂಗ್ ವೈಶಿಷ್ಟ್ಯವನ್ನು ಪರಿಚಯಿಸಿತ್ತು. ಅದು ಜನರು ತಮ್ಮ ಇಂಗ್ಲಿಷ್ ಮಾತನಾಡುವ ಕೌಶಲ್ಯಗಳನ್ನು ಅಭ್ಯಾಸ ಮಾಡಲು ಮತ್ತು ಸುಧಾರಿಸಲು ಸಹಾಯ ಮಾಡಿತು. ಮಾತನಾಡುವ ಅಭ್ಯಾಸ ಕಾರ್ಯವು ಇದನ್ನು ಒಳಗೊಂದು ನಿರ್ಮಿಸಲಾಗಿದೆ.

ಹೇಗೆ ಅಭ್ಯಾಸ ಮಾಡುವುದು?

ಹೊಸ ಮಾತನಾಡುವ ಅಭ್ಯಾಸ ವೈಶಿಷ್ಟ್ಯವನ್ನು ಬಳಸಲು ಸ್ಮಾರ್ಟ್ ಫೋನ್ ಅಥವಾ ಲ್ಯಾಪ್ ಟಾಪ್ ನಲ್ಲಿ ಗೂಗಲ್ ಅಪ್ಲಿಕೇಶನ್ ತೆರೆಯಿರಿ ಮತ್ತು ಮೇಲಿನ ಎಡ ಮೂಲೆಯಲ್ಲಿರುವ ಲ್ಯಾಬ್ಸ್ ಐಕಾನ್ ಮೇಲೆ ಟ್ಯಾಪ್ ಮಾಡಿ. ಇಲ್ಲಿ, ನಿಮ್ಮ ಖಾತೆಯಲ್ಲಿ ಲಭ್ಯವಿರುವ ಹೊಸ ವೈಶಿಷ್ಟ್ಯವನ್ನು ನೋಡಬಹುದು.

ಎರಡು ಅತ್ಯಂತ ಜನಪ್ರಿಯ ಭಾಷಾ-ಕಲಿಕೆಯ ಅಪ್ಲಿಕೇಶನ್‌ಗಳಾದ ಡ್ಯುಯೊಲಿಂಗೋ ಮತ್ತು ಬಾಬೆಲ್‌ಗಳಂತಹವುಗಳನ್ನು ಗ್ರಾಹಕರಿಗೆ ಪರಿಚಯಿಸಲು ಗೂಗಲ್ ಬಯಸುತ್ತಿರುವಂತೆ ತೋರುತ್ತಿದೆ. ಈಗಿನಂತೆ ಗೂಗಲ್ ಈ ಪ್ರಾಯೋಗಿಕ ವೈಶಿಷ್ಟ್ಯವನ್ನು ಹೆಚ್ಚಿನ ಪ್ರದೇಶಗಳಿಗೆ ತರಲು ಯೋಜಿಸುತ್ತಿದೆಯೇ ಎಂಬ ಬಗ್ಗೆ ಯಾವುದೇ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.

Continue Reading
Advertisement
Traffic Restrictions
ಬೆಂಗಳೂರು6 mins ago

Traffic Restrictions: ಟಿಸಿಎಸ್‌ ವರ್ಲ್ಡ್ 10ಕೆ ಮ್ಯಾರಥಾನ್; ನಾಳೆ ಬೆಳಗ್ಗೆ ರಾಜಧಾನಿಯ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

karnataka weather Forecast
ಮಳೆ20 mins ago

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Home Remedy For Cracked Heels
ಆರೋಗ್ಯ32 mins ago

Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

IPL 2024
ಕ್ರೀಡೆ40 mins ago

IPL 2024 : ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವುದೇ ಸಿಎಸ್​ಕೆ?

Ujjwal Nikam
ದೇಶ41 mins ago

Ujjwal Nikam: ಪ್ರಮೋದ್‌ ಮಹಾಜನ್‌ ಪುತ್ರಿಗೆ ಕೊಕ್‌, ಮುಂಬೈ ದಾಳಿ ವಕೀಲನಿಗೆ ಬಿಜೆಪಿ ಟಿಕೆಟ್!

Money Guide
ಮನಿ-ಗೈಡ್48 mins ago

Money Guide: ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ಬಿಡುಗಡೆಗೆ ದಿನಗಣನೆ; ನಗದು ಜಮೆ ಯಾವಾಗ?

Murder case in Belgavi
ಬೆಳಗಾವಿ56 mins ago

Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

IPL 2024
ಪ್ರಮುಖ ಸುದ್ದಿ1 hour ago

IPL 2024 : ಅಭಿಮಾನಿಗಳಿಗೆ ಮತ್ತೊಂದು ಖುಷಿಯ ಸುದ್ದಿ ಕೊಡುವುದೇ ಆರ್​ಸಿಬಿ?

Chamarajanagar
ಪ್ರಮುಖ ಸುದ್ದಿ1 hour ago

ಇವಿಎಂ ಧ್ವಂಸ; ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಏಪ್ರಿಲ್‌ 29ರಂದು ಮರು ಮತದಾನ!

Film Festival
ಬೆಂಗಳೂರು1 hour ago

Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20242 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ7 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ14 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌