Aircraft Crash: ಭಾರತೀಯ ವಾಯುಪಡೆಯ ವಿಮಾನ ಪತನ; ಭಾಗಗಳು ಸುಟ್ಟು ಭಸ್ಮ - Vistara News

ದೇಶ

Aircraft Crash: ಭಾರತೀಯ ವಾಯುಪಡೆಯ ವಿಮಾನ ಪತನ; ಭಾಗಗಳು ಸುಟ್ಟು ಭಸ್ಮ

Aircraft Crash: ರಾಜಸ್ಥಾನದ ಜೈಸಲ್ಮೇರ್‌ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ವಿಮಾನವೊಂದು ಪತನಗೊಂಡಿದೆ. ದೈನಂದಿನ ಹಾರಾಟದ ವೇಳೆ ವಿಮಾನ ಪತನಗೊಂಡಿದೆ. ಅವಘಡದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಉನ್ನತ ತನಿಖೆಗೆ ಆದೇಶಿಸಲಾಗಿದೆ.

VISTARANEWS.COM


on

Aircraft Crash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ಭಾರತೀಯ ವಾಯಪಡೆಯ (Indian Air Force) ಕಣ್ಗಾವಲು ವಿಮಾನವೊಂದು ರಾಜಸ್ಥಾನದ (Rajasthan) ಜೈಸಲ್ಮೇರ್‌ ಜಿಲ್ಲೆಯಲ್ಲಿ ಗುರುವಾರ (ಏಪ್ರಿಲ್‌ 25) ಬೆಳಗ್ಗೆ ಪತನಗೊಂಡಿದೆ. ಇದು ಮಾನವರಹಿತ ವಿಮಾನವಾದ ಕಾರಣ ಯಾವುದೇ ಸಾವು-ನೋವು ಸಂಭವಿಸಿಲ್ಲ. ಆದಾಗ್ಯೂ, ವಿಮಾನವು ಜಮೀನಿನಲ್ಲಿ ಪತನಗೊಂಡ (Aircraft Crash) ಕಾರಣ ಯಾವುದೇ ಅವಘಡ ಸಂಭವಿಸಿಲ್ಲ. ಆದರೆ, ಇಡೀ ವಿಮಾನವು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.

ಜಿಲ್ಲಾ ಕೇಂದ್ರವಾದ ಜೈಸಲ್ಮೇರ್‌ನಿಂದ ಸುಮಾರು 25 ಕಿಲೋಮೀಟರ್‌ ದೂರದಲ್ಲಿರುವ ಪಿಥಾಲ ಗ್ರಾಮದ ಬಳಿಯ ಜಮೀನಿನಲ್ಲಿ ವಿಮಾನ ಪತನವಾಗಿದೆ. ಈ ಕುರಿತು ವಾಯುಪಡೆಯೇ ಮಾಹಿತಿ ನೀಡಿದೆ. “ಜೈಸಲ್ಮೇರ್‌ ಬಳಿಯಲ್ಲಿ ಭಾರತೀಯ ವಾಯುಪಡೆಯ ಮಾನವರಹಿತ ವಿಮಾನವು ಪತನಗೊಂಡಿದೆ. ದೈನಂದಿನ ಹಾರಾಟದ ವೇಳೆ ವಿಮಾನ ಪತನಗೊಂಡಿದೆ. ಅವಘಡದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಯಾರದ್ದೇ ವೈಯಕ್ತಿಕ ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ” ಎಂದು ತಿಳಿಸಿದೆ.

ವಿಮಾನ ಪತನದ ಸುದ್ದಿ ತಿಳಿಯುತ್ತಲೇ ಖುರಿ ಪೊಲೀಸ್‌ ಠಾಣೆ ಅಧಿಕಾರಿ ಮೇ ಜಾಬ್ತಾ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ವಾಯುಪಡೆ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿದೆ. ವಿಮಾನ ಪತನವಾಗುತ್ತಲೇ ಸುತ್ತಮುತ್ತಲಿನ ನೂರಾರು ಗ್ರಾಮಸ್ಥರು ಜಮಾಯಿಸಿದ್ದರು.

ಕಳೆದ ತಿಂಗಳಷ್ಟೇ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯುಪಡೆಯ ತೇಜಸ್​ ಯುದ್ಧ ವಿಮಾನ ಪತನಗೊಂಡಿತ್ತು. ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (ಎಲ್‌ಸಿಎ) ತೇಜಸ್ ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್ ಬಳಿ ಪತನಗೊಂಡಿದ್ದು, ಪೈಲಟ್​ಗಳು ಸುರಕ್ಷಿತವಾಗಿದ್ದರು.

ʼಭಾರತ್ ಶಕ್ತಿ 2024ʼ ತರಬೇತಿ ವೇಳೆ ಫೈಟರ್ ಜೆಟ್ ಜೈಸಲ್ಮೇರ್‌ನ ಜವಾಹರ್ ಕಾಲೋನಿ ಬಳಿ ಪತನವಾಗಿತ್ತು. ಮಧ್ಯಾಹ್ನ 2 ಗಂಟೆಗೆ ಫೈಟರ್ ಜೆಟ್ ಪತನವಾಗಿ ಬೆಂಕಿ ಹತ್ತಿಕೊಂಡಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು. ಹೇಗೋ ಇಬ್ಬರೂ ಪೈಲಟ್‌ಗಳು ಫೈಟರ್ ಜೆಟ್‌ನಿಂದ ಜಿಗಿದು ತಮ್ಮ ಪ್ರಾಣ ಉಳಿಸಿಕೊಂಡಿದ್ದರು.

ಇದನ್ನೂ ಓದಿ: Russian Military Plane: ರಕ್ಷಣಾ ಸಚಿವಾಲಯದ ವಿಮಾನ ಪತನ; 15 ಮಂದಿಯ ದಾರುಣ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Encounter In Bandipora: ಬಂಡಿಪೋರಾದಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

Encounter In Bandipora: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಒಬ್ಬ ಭಯೋತ್ಪಾದಕ ಹತನಾಗಿದ್ದಾನೆ. ಬಂಡಿಪೋರಾ ಜಿಲ್ಲೆಯ ಅರಗಾಮ್ ಗ್ರಾಮದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸೋಮವಾರ ಮುಂಜಾನೆ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿವೆ.

VISTARANEWS.COM


on

Encounter In Bandipora
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆ (Security forces)ಗಳೊಂದಿಗೆ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಒಬ್ಬ ಭಯೋತ್ಪಾದಕ ಹತನಾಗಿದ್ದಾನೆ. ಬಂಡಿಪೋರಾ ಜಿಲ್ಲೆಯ ಅರಗಾಮ್ (Aragam) ಗ್ರಾಮದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸೋಮವಾರ ಮುಂಜಾನೆ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿವೆ (Encounter In Bandipora).

“ಭಯೋತ್ಪಾದಕರು ಅವಿತು ಕುಳಿತಿದ್ದ ಅಡಗುತಾಣವನ್ನು ಭದ್ರತಾ ಪಡೆಗಳು ಸುತ್ತುವರಿದಾಗ ಗುಂಡಿನ ಚಕಮಕಿ ಆರಂಭವಾಯಿತು. ಎನ್‌ಕೌಂಟರ್‌ನಲ್ಲಿ ಇದುವರೆಗೆ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಈ ಪ್ರದೇಶದಲ್ಲಿ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ” ಎಂದು ಅಧಿಕಾರಿಗಳು ತಿಳಿಸಿದರು. ಹತ್ಯೆಗೀಡಾದ ಭಯೋತ್ಪಾದಕನನ್ನು ಗುರುತು ಕಂಡು ಹಿಡಿಯಲು ಯತ್ನಿಸಲಾಗುತ್ತಿದೆ ಎಂದೂ ಅವರು ಮಾಹಿತಿ ನೀಡಿದರು.

ಆರಂಭದಲ್ಲಿ ಗ್ರಮಾದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಭದ್ರತಾ ಪಡೆಗಳು ಆಗಮಿಸಿ ಅವರನ್ನು ಸುತ್ತುವರಿದ ಬಳಿಕ ಸುಮ್ಮನಾಗಿದ್ದರು. ಬಳಿಕ ಕಾರ್ಯಾಚರಣೆ ಮುಂದುವರಿಯಿತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ (Union Home Minister Amit Shah) ಅವರು ಭಯೋತ್ಪಾದನೆಯನ್ನು ಸಂಪೂರ್ಣವಾಗಿ ತೊಡೆದು ಹಾಕಲಾಗುವುದು ಎಂದು ಭರವಸೆ ನೀಡಿದ್ದರು. ಅಲ್ಲದೆ ಅಮರನಾಥ ಯಾತ್ರೆಯ ವೇಳೆ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಪಡೆಗಳಿಗೆ ಸಲಹೆ ನೀಡಿದ್ದರು. ಸದ್ಯ ಭದ್ರತಾ ಪಡೆಗಳ ಕಾರ್ಯಾಚರಣೆ ಮುಂದುವರಿದಿದೆ.

ಮತ್ತೆ ಉಗ್ರರ ಹಾವಳಿ

ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಹಾವಳಿ ಆರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಜೂನ್ 9ರಂದು ನಡೆದ ಭೀಕರ ಭಯೋತ್ಪಾದಕರ ದಾಳಿಗೆ ಪುಟ್ಟ ಕಂದಮ್ಮನೂ ಸೇರಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ವೇಳೆ ಬಸ್‌ ಆಳವಾದ ಕಮರಿಗೆ ಬಿದ್ದು, ದುರಂತ ಸಂಭವಿಸಿದೆ. ಅದಾದ ಬಳಿಕವೂ ಭಯೋತ್ಪಾದಕರು ದಾಳಿ ನಡೆಸಿದ್ದು ಓರ್ವ ಯೋಧ ಹುತಾತ್ಮರಾಗಿದ್ದಾರೆ. ನಂತರ ಸೇಡು ತೀರಿಸಿಕೊಂಡ ಭಾರತೀಯ ಸೇನೆ ಈಗಾಗಲೇ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಕಥುವಾ ಜಿಲ್ಲೆಯ ಸೈದಾ ಸುಖಲ್ ಗ್ರಾಮದಲ್ಲಿ ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಅಡಗಿದ್ದ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಸಿಆರ್‌ಪಿಎಫ್‌ ಸಿಬ್ಬಂದಿಯೊಬ್ಬರು ಹತರಾಗಿದ್ದರು. ಬಳಿಕ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದರು.

ಇದನ್ನೂ ಓದಿ: Kathua Terror Attack: ಯೋಧನ ಹತ್ಯೆಗೆ ಪ್ರತಿಕಾರ; ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮುವಿನಿಂದ 60 ಕಿ.ಮೀ ದೂರದಲ್ಲಿರುವ, ಅಂತಾರಾಷ್ಟ್ರೀಯ ಗಡಿ ಬಳಿಯ ಗ್ರಾಮದಲ್ಲಿ ಜೂನ್‌ 11ರ ಸಂಜೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಓರ್ವ ನಾಗರಿಕ ಗಾಯಗೊಂಡಿದ್ದ. ನಂತರ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಒಬ್ಬ ಭಯೋತ್ಪಾದಕನನ್ನು ಕೊಂದಿದೆ. ಇನ್ನೊಬ್ಬನನ್ನು ಜೂನ್‌ 12ರ ಮುಂಜಾನೆ ಗುಂಡಿಕ್ಕಿ ಕೊಲ್ಲಲಾಯಿತು. ಈ ಮಧ್ಯೆ ಪೊಲೀಸರು ಶಂಕಿತ ಉಗ್ರರ ರೇಖಾಚಿತ್ರಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದು, ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

Continue Reading

Lok Sabha Election 2024

Rajat Sharma: ಕಾಂಗ್ರೆಸ್ ನಾಯಕರ ವಿರುದ್ಧ ಖ್ಯಾತ ಪತ್ರಕರ್ತ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇಕೆ?

Rajat sharma: ಕಾಂಗ್ರೆಸ್ ನಾಯಕರಾದ ರಾಗಿಣಿ ನಾಯಕ್, ಜೈರಾಮ್ ರಮೇಶ್ ಮತ್ತು ಪವನ್ ಖೇರಾ ವಿರುದ್ಧ ಹಿರಿಯ ಪತ್ರಕರ್ತ ರಜತ್ ಶರ್ಮಾ ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಲೋಕಸಭೆ ಚುನಾವಣೆ ಫಲಿತಾಂಶದ ದಿನ (Lok Sabha Election Result) ತಮ್ಮ ಕಾರ್ಯಕ್ರಮದ ವೇಳೆ “ನಿಂದನೀಯ ಭಾಷೆ” ಬಳಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಸುಳ್ಳು ಆರೋಪ‌ ಮಾಡಿದ್ದಾರೆಂದು ದೂರಿದ್ದಾರೆ.

VISTARANEWS.COM


on

By

Lok Sabha Election Result
Koo

ಲೋಕಸಭೆ ಚುನಾವಣೆ ಫಲಿತಾಂಶದ (Lok Sabha Election Result) ದಿನ ತಮ್ಮ ಕಾರ್ಯಕ್ರಮದ ವೇಳೆ “ನಿಂದನೀಯ ಭಾಷೆ” (abusive language) ಬಳಸಿದ್ದಾರೆಂದು ಆರೋಪಿಸಿದ್ದ ಕಾಂಗ್ರೆಸ್ (congress) ನಾಯಕರಾದ ರಾಗಿಣಿ ನಾಯಕ್ (Ragini Nayak), ಜೈರಾಮ್ ರಮೇಶ್ (Jairam Ramesh) ಮತ್ತು ಪವನ್ ಖೇರಾ (Pawan Khera) ಅವರ ವಿರುದ್ಧ ಹಿರಿಯ ಪತ್ರಕರ್ತ (journalist) ರಜತ್ ಶರ್ಮಾ (Rajat Sharma) ದೆಹಲಿ ಹೈಕೋರ್ಟ್‌ನಲ್ಲಿ (delhi high court) ಮಾನನಷ್ಟ ಮೊಕದ್ದಮೆ (defamation suit) ದಾಖಲಿಸಿದ್ದಾರೆ.

ರಜತ್ ಶರ್ಮಾ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಟ್ವೀಟ್‌ಗಳು ಮತ್ತು ವಿಡಿಯೋಗಳನ್ನು ತೆಗೆದುಹಾಕಬೇಕು, ರಾಜಕೀಯ ನಾಯಕರು ಅವರ ವಿರುದ್ಧ ಆರೋಪ ಮಾಡುವುದನ್ನು ತಡೆಯುವಂತೆ, ಮಾನನಷ್ಟ ಪರಿಹಾರ ನೀಡುವಂತೆ ಶರ್ಮಾ ಅವರ ವಕೀಲರು ನ್ಯಾಯಾಲಯವನ್ನು ಕೋರಿದ್ದಾರೆ.

ಈ ಕುರಿತು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ರಜತ್ ಶರ್ಮಾ ಪರ ವಕೀಲರ ವಾದಗಳನ್ನು ಆಲಿಸಿದ ಅನಂತರ ಮಧ್ಯಂತರ ವಿಚಾರಣೆಗಾಗಿ ಆದೇಶವನ್ನು ಕಾಯ್ದಿರಿಸಿದರು. ಎರಡು ಪಕ್ಷದವರ ವಾದವನ್ನು ಆಲಿಸಲಾಗಿದೆ ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಇಂಡಿಪೆಂಡೆಂಟ್ ನ್ಯೂಸ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ (ಇಂಡಿಯಾ ಟಿವಿ) ಅಧ್ಯಕ್ಷ ಮತ್ತು ಸಂಪಾದಕ-ಮುಖ್ಯಸ್ಥ ರಜತ್ ಶರ್ಮಾ ಕೂಡ ವಿಚಾರಣೆಯ ಸಂದರ್ಭದಲ್ಲಿ ಹಾಜರಿದ್ದರು.

2024ರ ಲೋಕಸಭಾ ಚುನಾವಣೆಯ ಮತ ಎಣಿಕೆಯ ದಿನದಂದು ಕಾರ್ಯಕ್ರಮದ ಚರ್ಚೆಯ ಸಂದರ್ಭದಲ್ಲಿ ರಾಷ್ಟ್ರೀಯ ದೂರದರ್ಶನದಲ್ಲಿ ರಜತ್ ಶರ್ಮಾ ತಮ್ಮನ್ನು ನಿಂದಿಸಿದ್ದಾರೆ ಎಂದು ರಾಗಿಣಿ ನಾಯಕ್ ಆರೋಪಿಸಿದ ಅನಂತರ ಈ ವಿವಾದ ಹುಟ್ಟಿಕೊಂಡಿತು.

ಚುನಾವಣಾ ಫಲಿತಾಂಶ ಬಂದ ಜೂನ್ 4ರ ಸಂಜೆ ವಾಹಿನಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಕಾಂಗ್ರೆಸ್ ನಾಯಕರು ಜೂನ್ 10 ಮತ್ತು 11ರಂದು ಮಾನಹಾನಿಕರ ಟ್ವೀಟ್ ಮಾಡಲು ಆರಂಭಿಸಿದ್ದಾರೆ ಎಂದು ಶರ್ಮಾ ಪರ ವಕೀಲರು ಹೇಳಿದ್ದಾರೆ.

ಶರ್ಮಾ ಅವರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಮಣಿಂದರ್ ಸಿಂಗ್, ಶೋನ ಕ್ಲಿಪ್ ಅನ್ನು ಪ್ರಸಾರ ಮಾಡಲಾಗುತ್ತಿದೆ. ಅದರಲ್ಲಿ ನಿಂದನೆಯನ್ನು ಸೇರಿಸಲಾಗಿದೆ. ಆದರೆ ಮೂಲ ತುಣುಕಿನಲ್ಲಿ ಅಂತಹ ಯಾವುದೇ ಆಕ್ಷೇಪಾರ್ಹ ವಿಷಯವನ್ನು ಹೊಂದಿಲ್ಲ ಎಂದು ಪ್ರತಿಪಾದಿಸಿದರು.

ನ್ಯಾಯಾಲಯದ ಪರಿಶೀಲನೆಗಾಗಿ ಅವರು ವೀಡಿಯೊ ಕ್ಲಿಪ್ ಅನ್ನು ಸಹ ಪ್ಲೇ ಮಾಡಿದರು.

ಯಾವುದೇ ನಿಂದನೆ ಇಲ್ಲ. ಲೈವ್ ಶೋ ನಡೆದ ಆರು ದಿನಗಳ ಅನಂತರ ಅವರು ರಾಗಿಣಿ ನಾಯಕ್ ವಿರುದ್ಧ ಶರ್ಮಾ ನಿಂದನೆ ಮಾಡಿದ್ದಾರೆ ಎಂದು ಟ್ವೀಟ್ ಮಾಡಲಾಗಿದೆ. ಅವರು ಜೂನ್ 11ರಂದು ಪತ್ರಿಕಾಗೋಷ್ಠಿ ನಡೆಸಿ ಆರೋಪಿಸಿದ್ದರು.


ಕಾರ್ಯಕ್ರಮವು ನೇರ ಪ್ರಸಾರವಾಗಿದೆ. ಅವರು ಜೂನ್ 10 ರ ರಾತ್ರಿಯವರೆಗೆ ಆರು ದಿನಗಳವರೆಗೆ ಯಾವುದೇ ಅಸಮಾಧಾನವನ್ನು ಹೊಂದಿರಲಿಲ್ಲ. ಆ ಬಳಿಕ ಇದ್ದಕ್ಕಿದ್ದಂತೆ ಆರೋಪಿಸಿದ್ದೇಕೆ ಎಂದು ಸಿಂಗ್ ವಾದಿಸಿದರು.

ಇದನ್ನೂ ಓದಿ: Suresh Gopi: ಇಂದಿರಾ ಗಾಂಧಿ ಭಾರತದ ಮಾತೆ ಎಂದ ಬಿಜೆಪಿ ಸಂಸದ ಸುರೇಶ್‌ ಗೋಪಿ

ಕಳೆದ ನಾಲ್ಕು ದಶಕಗಳಲ್ಲಿ ಗಳಿಸಿದ ಪತ್ರಕರ್ತನ ಪ್ರತಿಷ್ಠೆಗೆ ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಹುಸಿ ಆರೋಪ ನಷ್ಟವನ್ನುಂಟು ಮಾಡುತ್ತಿದ್ದು, ತಕ್ಷಣವೇ ಟ್ವೀಟ್‌ಗಳನ್ನು ತೆಗೆದುಹಾಕಬೇಕೆಂದು ರಜತ್ ಶರ್ಮಾ ಪರ ವಕೀಲರು ಮನವಿ ಮಾಡಿದರು.

ಇದು ಲೈವ್ ಶೋ ಆಗಿತ್ತು ಮತ್ತು ಲಕ್ಷಾಂತರ ಜನರು ಇದನ್ನು ವೀಕ್ಷಿಸುತ್ತಾರೆ. ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಗಳು ಸಾಮಾಜಿಕ ಜಾಲತಾಣದಲ್ಲಿ ಇದ್ದರೆ ನಿರಂತರ ನಿಂದನೆ ಎದುರಿಸಬೇಕಾಗುತ್ತದೆ. ಹೀಗಾಗಿ ತಕ್ಷಣವೇ ಅದನ್ನು ತೆಗೆದುಹಾಕಬೇಕು. ನಾನು ಯಾರನ್ನೂ ಬೈಯುವುದಕ್ಕೆ ಅಥವಾ ನಿಂದಿಸುವುದಕ್ಕೆ ಹೆಸರಾಗಿಲ್ಲ. ನಾನು ನನ್ನ ಸುಸಂಸ್ಕೃತ ನಡವಳಿಕೆಗೆ ಹೆಸರುವಾಸಿಯಾಗಿದ್ದೇನೆ ಎಂದು ರಜತ್ ಶರ್ಮಾ ಅವರು ನ್ಯಾಯಾಲಯಕ್ಕೆ ತಿಳಿಸಿದರು.

Continue Reading

ದೇಶ

ಅಸ್ಸಾಂನಲ್ಲಿ ʼವಿಐಪಿ ಸಂಸ್ಕೃತಿʼಗೆ ಬ್ರೇಕ್‌ ಹಾಕಲು ಮುಂದಾದ ಸಿಎಂ ಹಿಮಂತ ಬಿಸ್ವಾ; ತಮ್ಮ ವಿದ್ಯುತ್‌ ಬಿಲ್‌ ತಾವೇ ಪಾವತಿಸುವುದಾಗಿ ಘೋಷಣೆ

Himanta Biswa Sarm: ಸುಮಾರು 70 ವರ್ಷಗಳ ವಿಐಪಿ ಸಂಸ್ಕೃತಿಯನ್ನು ತೊಡೆದು ಹಾಕಲು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಂದಾಗಿದ್ದಾರೆ. ಇದರ ಮೊದಲ ಹೆಜ್ಜೆಯಾಗಿ ತಾವು ಮತ್ತು ಮುಖ್ಯ ಕಾರ್ಯದರ್ಶಿ ಜುಲೈ 1ರಿಂದ ತಮ್ಮ ವಿದ್ಯುತ್ ಬಿಲ್ ಅನ್ನು ತಾವೇ ಪಾವತಿಸುವುದಾಗಿ ಪ್ರಕಟಿಸಿದ್ದಾರೆ. ʼʼತೆರಿಗೆದಾರರ ಹಣವನ್ನು ಬಳಸಿಕೊಂಡು ಸರ್ಕಾರಿ ಅಧಿಕಾರಿಗಳ ವಿದ್ಯುತ್ ಬಿಲ್ ಪಾವತಿಸುವ ವಿಐಪಿ ಸಂಸ್ಕೃತಿಯ ನಿಯಮವನ್ನು ನಾವು ಕೊನೆಗೊಳಿಸುತ್ತಿದ್ದೇವೆ. ನಾನು ಮತ್ತು ಮುಖ್ಯ ಕಾರ್ಯದರ್ಶಿ ಜುಲೈ 1ರಿಂದ ನಮ್ಮ ವಿದ್ಯುತ್ ಬಿಲ್‌ಗಳನ್ನು ನಾವೇ ಪಾವತಿಸಲು ಪ್ರಾರಂಭಿಸುತ್ತೇವೆ” ಎಂದು ಘೋಷಿಸಿದ್ದಾರೆ.

VISTARANEWS.COM


on

Himanta Biswa Sarma
Koo

ದಿಸ್ಪುರ: ಅಸ್ಸಾಂನಲ್ಲಿ ಕೆಲವು ʼವಿಐಪಿ ಸಂಸ್ಕೃತಿʼ (VIP culture)ಯನ್ನು ತೊಡೆದು ಹಾಕುವುದಾಗಿ ಹೇಳಿರುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು, ಇದರ ಮೊದಲ ಹೆಜ್ಜೆಯಾಗಿ ತಾವು ಮತ್ತು ಮುಖ್ಯ ಕಾರ್ಯದರ್ಶಿ ಜುಲೈ 1ರಿಂದ ತಮ್ಮ ವಿದ್ಯುತ್ ಬಿಲ್ ಅನ್ನು ತಾವೇ ಪಾವತಿಸುವುದಾಗಿ ಪ್ರಕಟಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ʼʼತೆರಿಗೆದಾರರ ಹಣವನ್ನು ಬಳಸಿಕೊಂಡು ಸರ್ಕಾರಿ ಅಧಿಕಾರಿಗಳ ವಿದ್ಯುತ್ ಬಿಲ್ ಪಾವತಿಸುವ ʼವಿಐಪಿ ಸಂಸ್ಕೃತಿʼಯ ನಿಯಮವನ್ನು ನಾವು ಕೊನೆಗೊಳಿಸುತ್ತಿದ್ದೇವೆ. ನಾನು ಮತ್ತು ಮುಖ್ಯ ಕಾರ್ಯದರ್ಶಿ ಜುಲೈ 1ರಿಂದ ನಮ್ಮ ವಿದ್ಯುತ್ ಬಿಲ್‌ಗಳನ್ನು ನಾವೇ ಪಾವತಿಸಲು ಪ್ರಾರಂಭಿಸುತ್ತೇವೆ” ಎಂದು ಘೋಷಿಸಿದ್ದಾರೆ.

ಜತೆಗೆ “ಜುಲೈಯಿಂದ ಎಲ್ಲ ಸರ್ಕಾರಿ ನೌಕರರು ತಮ್ಮ ಸ್ವಂತ ವಿದ್ಯುತ್ ಬಳಕೆಗೆ ತಾವೇ ಪಾವತಿಸಬೇಕಾಗುತ್ತದೆ” ಎಂದೂ ತಿಳಿಸಿದ್ದಾರೆ. “ಸಚಿವರು ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳ ನಿವಾಸಗಳ ವಿದ್ಯುತ್ ಬಿಲ್‌ಗಳನ್ನು ಸರ್ಕಾರವೇ ಇಷ್ಟು ದಿನ ಪಾವತಿಸುತ್ತ ಬಂದಿದೆ. ಈ ವ್ಯವಸ್ಥೆ ಇಂದು ನಿನ್ನೆಯದ್ದಲ್ಲ. ಸುಮಾರು 75 ವರ್ಷಗಳ ಸುದೀರ್ಘ ಕಾಲದಿಂದ ನಡೆದುಕೊಂಡು ಬಂದಿದೆʼʼ ಎಂದು ಅವರು ಹೇಳಿದ್ದಾರೆ. ಈ ವ್ಯವಸ್ಥೆಯನ್ನು ಬದಲಾಯಿಸುವುದಾಗಿ ನುಡಿದಿದ್ದಾರೆ.

ಕಾರಣವೇನು?

ಅಸ್ತಿತ್ವದಲ್ಲಿರುವ ವಿಐಪಿ ಸಂಸ್ಕೃತಿಯಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ. ಇದನ್ನು ತಪ್ಪಿಸಿದರೆ ವಿದ್ಯುತ್ ಮಂಡಳಿಗೆ ವಿದ್ಯುತ್ ಶುಲ್ಕವನ್ನು ಹೆಚ್ಚಿಸಬೇಕಾದ ಪ್ರಮೇಯ ಎದುರಾಗುವುದಿಲ್ಲ. ಹೀಗಾಗಿ ಈ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ ಎನ್ನಲಾಗಿದೆ. “ನಾನು ಕೂಡ ಮೂರು ವರ್ಷಗಳಿಂದ ಉಚಿತ ವಿದ್ಯುತ್ ಬಳಸಿದ್ದೇನೆ. ಈ ಬಗ್ಗೆ ನನಗೆ ತಿಳಿದಿರಲಿಲ್ಲ. ಇತ್ತೀಚೆಗೆ ಚರ್ಚೆಯ ಸಮಯದಲ್ಲಿ ಅದರ ಬಗ್ಗೆ ತಿಳಿದುಕೊಂಡೆ. ನಮ್ಮ ವಿದ್ಯುತ್‌ ಬಿಲ್‌ ನಾವೇ ಪಾವತಿಸುವುದಿಂದ ವಿದ್ಯುತ್ ಮಂಡಳಿಗೆ ಸಹಾಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಶರ್ಮಾ ಹೇಳಿದ್ದಾರೆ.

“ಸಿಎಂ ಕಾರ್ಯದರ್ಶಿ, ಗೃಹ ಮತ್ತು ಹಣಕಾಸು ಇಲಾಖೆಗಳನ್ನು ಹೊರತುಪಡಿಸಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ರಾತ್ರಿ 8 ಗಂಟೆಗೆ ಸ್ವಯಂ ಚಾಲಿತವಾಗಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಕ್ರಮ ಕೈಗೊಂಡಿದ್ದೇವೆ. ಇದರಿಂದ ನಾವು ವಿದ್ಯುತ್ ಉಳಿಸಬಹುದು. ಈ ಕ್ರಮವು ಈಗಾಗಲೇ ರಾಜ್ಯದಾದ್ಯಂತ 8,000 ಸರ್ಕಾರಿ ಕಚೇರಿಗಳು, ಶಾಲೆಗಳಲ್ಲಿ ಜಾರಿಯಲ್ಲಿದೆ” ಎಂದು ಹಿಮಂತ ಶರ್ಮಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

ಇದಕ್ಕೂ ಮುನ್ನ ಗುವಾಹಟಿಯ ರಾಜ್ಯ ಸಚಿವಾಲಯ ಸಂಕೀರ್ಣದಲ್ಲಿ ನಡೆದ ಸಮಾರಂಭದಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರು 2.5 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಗ್ರಿಡ್-ಸಂಪರ್ಕಿತ ಮೇಲ್ಛಾವಣಿ ಮತ್ತು ನೆಲ-ಮೌಂಟೆಡ್ ಸೌರ ಪಿವಿ ವ್ಯವಸ್ಥೆಯಾದ ಜನತಾ ಭವನ ಸೌರ ಯೋಜನೆಯನ್ನು ಅನಾವರಣಗೊಳಿಸಿದರು. ಈ ವೇಳೆ ಅವರು, ಪ್ರತಿ ಸರ್ಕಾರಿ ಕಚೇರಿಗಳು ಹಂತಹಂತವಾಗಿ ಸೌರಶಕ್ತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಆರಂಭಿಕ ಹಂತದಲ್ಲಿ ವೈದ್ಯಕೀಯ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳನ್ನು ಸೌರ ಶಕ್ತಿಗೆ ಪರಿವರ್ತಿಸಲು ಕರೆ ನೀಡಿದರು.

Continue Reading

ಧಾರ್ಮಿಕ

Bakrid 2024: ತ್ಯಾಗ, ಬಲಿದಾನವನ್ನು ಸ್ಮರಿಸುವ ಈದುಲ್ ಅಝ್ಹಾ

Bakrid 2024: ಹಝ್ರತ್ ಇಬ್ರಾಹಿಂ ಅವರಿಗೆ ಖಲೀಲುಲ್ಲಾಹ್ ಅಲ್ಲಾಹನ ಸ್ನೇಹಿತ ಎಂಬ ಗೌರವ ಪದವಿಯನ್ನು ನೀಡಿ ಗೌರವಿಸುತ್ತಾನೆ. ಪ್ರವಾದಿ ಇಬ್ರಾಹಿಂ ಅವರ ಜೀವನ ಬದುಕು ಇತಿಹಾಸವನ್ನು ನೆನಪಿಸುವುದೇ ಹಜ್ ಬಕ್ರೀದ್‌ ಆಚರಣೆಯ ಉದ್ದೇಶ.

VISTARANEWS.COM


on

bakrid 2024
Koo

:: ಹಾಶಿಂ ಬನ್ನೂರು

ಮುಸ್ಲಿಮರು (Muslim) ಆಚರಿಸುವ ಹಬ್ಬಗಳ ಪೈಕಿ ಈದುಲ್ ಅಝ್ಹಾ (Eid UL Adha- Bakrid 2024) ಹಬ್ಬವು ಒಂದು. ಇದು ಬಹಳ ವಿಶೇಷತೆಯನ್ನು ಹೊಂದಿದೆ. ಜಾಗತಿಕ ವಲಯದಲ್ಲಿ ಸರ್ವ ಮುಸಲ್ಮಾನರು ಎಲ್ಲಾ ಹಬ್ಬಗಳ ಹಾಗೆ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಇದು ತ್ಯಾಗ ಮತ್ತು ಬಲಿದಾನ ಸಾವಿರಾರು ಹಿಂದಿನ ಐತಿಹಾಸಿಕ ಚಾರಿತ್ರಿಕ ಘಟನೆಯನ್ನು ಸ್ಮರಿಸುವ ಹಬ್ಬ. ಈ ಕುರಿತಾದ ಚರಿತ್ರೆಗಳು ಮತ್ತು ನೈಜ ಘಟನೆಗಳು ಖುರ್ ಆನ್ (Quran) ಹಾಗೂ ಇಸ್ಲಾಮಿನ ಧಾರ್ಮಿಕ ಗ್ರಂಥದಲ್ಲಿ ಪುರಾವೆ ಸಮೇತ ಉಲ್ಲೇಖವಿದೆ.

ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ಅರೇಬಿಕ್ ತಿಂಗಳ ಕೊನೇಯ ತಿಂಗಳ ಝುಲ್ ಹಿಜ್ಜ ಬಹಳ ಪವಿತ್ರ ತಿಂಗಳು. ಆರೋಗ್ಯ, ಸಂಪತ್ತು, ಸೌಕರ್ಯ ಹೊಂದಿ ಜವಾಬ್ದಾರಿ ಮುಕ್ತನಾಗಿರುವ ಮುಸ್ಲಿಂ ವ್ಯಕ್ತಿಯ ಮೇಲೆ ಇಸ್ಲಾಮಿನ ಐದು ಪಂಚ ಕರ್ಮಗಳಲ್ಲಿ ಒಂದಾದ ಹಜ್ ಕಡ್ಡಾಯವಾಗಿದೆ. ಅದರ ನಿರ್ವಹಣೆಗಿರುವ ಸಮಯ ಮತ್ತು ತಿಂಗಳು ಇದೇ ಝುಲ್ ಹಜ್ ಆಗಿರುತ್ತದೆ.

ಆಧ್ಯಾತ್ಮಿಕ ಶುದ್ಧೀಕರಣದೊಂದಿಗೆ ಮೆಕ್ಕಾದಲ್ಲಿರುವ ಪವಿತ್ರ್ ಭವನ ಕಅಬಾಗೆ ತೆರಳಿ ಕಅಬಾ ಭವನಕ್ಕೆ ಪ್ರದಕ್ಷಿಣೆ, ಸಫಾ ಮರ್ವಾ ಬೆಟ್ಟಗಳ ಮಧ್ಯೆ ನಡೆಯುವುದು, ಮಿನಾದಲ್ಲಿ ತಂಗುವುದು, ಅರಫಾ ಮೈದಾನಕ್ಕೆ ತೆರಳುವುದು, ಮುಝ್ದಲಿಫಾದಲ್ಲಿ ಇರುವುದು, ಜಮ್ರಾದಲ್ಲಿ ಕಲ್ಲೆಸೆಯುವುದು, ಮತ್ತೆ ಮಿನಾದಲ್ಲಿ ತಂಗಿ ಬಲಿ ನೀಡುವುದು ಈ ರೀತಿ ಕೆಲವೊಂದು ಕರ್ಮಗಳನ್ನು ಒಳಗೊಂಡ ಮಕ್ಕಾ ಪುಣ್ಯ ಯಾತ್ರೆಗೆ ಹಜ್ ಎಂದು ಕರೆಯುತ್ತೇವೆ. ಹಜ್ ನಂತೆಯೇ ಉಮ್ರಾ ಕೂಡ ಇದೇ ಕರ್ಮಗಳನ್ನು ಒಳಗೊಂಡಿವೆ. ಆದರೆ ಹಜ್ ವರ್ಷಕ್ಕೆ ಒಂದು ಬಾರಿ ಝುಲ್ ಹಿಜ್ಜ ತಿಂಗಳಲ್ಲಿ ಮಾತ್ರ. ಉಮ್ರಾ ವರ್ಷದ ಎಲ್ಲಾ ದಿನವು ಮಾಡಬಹುದಾಗಿದೆ.

ಧರ್ಮ ಪ್ರಚಾರ

ಇಸ್ಲಾಂ ದರ್ಮದ ಪ್ರಚಾರಕರಾಗಿ ಆಯುಕ್ತರಾಗಿದ್ದ ಒಂದು ಲಕ್ಷಕ್ಕಿಂತಲೂ ಅಧಿಕ ಪ್ರವಾದಿಗಳ ಪೈಕಿ ಅಲ್ಲಾಹನ ಇಷ್ಟ ದಾಸರಾಗಿ ವಿಶೇಷ ಸ್ಥಾನಮಾನ ಪಡೆದ ಮಹಾನರಾಗಿದ್ದರು ಹಜ್ರತ್ ಇಬ್ರಾಹಿಮ್ ಅಲೈಹಿಸ್ಸಲಾಮ್, ಅವರು ಪ್ರವಾದಿಯಾದ ಬಳಿಕ, ಧರ್ಮ ಪ್ರಚಾರಕ್ಕಿಳಿಯುತ್ತಾರೆ. ಈ ವೇಳೆ ದೇವರು ಇಬ್ರಾಹಿಮ್ ಅವರನ್ನು ಹಲವಾರು ಪರೀಕ್ಷೆಗಳಿಗೆ ಒಳಪಡಿಸುತ್ತಾನೆ. ಏಕದೇವ ವಿಶ್ವಾಸದ ಅನುಷ್ಠಾನಕ್ಕಾಗಿ ಸ್ವಂತ ಹೆತ್ತವರು, ಕುಟುಂಬ, ಮನೆ, ಆಸ್ತಿ, ಊರು ಎಲ್ಲವನ್ನೂ ತ್ಯಾಗ ಮಾಡಿ ದೇಶಾಂತರ ಹೊರಟು, ಸಂತಾನ ಭಾಗ್ಯ ಇಲ್ಲದೆ ಕೊರಗುತ್ತಿದ್ದ ಪ್ರವಾದಿ ಇಬ್ರಾಹಿಂ ಮತ್ತು ಹಾಜರ ಬೀವಿ ಅವರಿಗೆ ಪವಾಡದಂತೆ ವೃದ್ಧಾಪ್ಯದಲ್ಲಿ ಲಭಿಸಿದ ಗಂಡು ಮಗು ಇಸ್ಮಾಯಿಲ್ ಸ್ವಂತ ಮಗನನ್ನೂ ದೇವರ ಆದೇಶದಂತೆ ಬಲಿ ಕೊಡಲು ಮುಂದಾಗುತ್ತಾರೆ. ನಿರ್ಜಲ, ನಿರ್ಜನ ಮರುಭೂಮಿಯಲ್ಲಿ ಪುಟ್ಟ ಮಗುವನ್ನು ಮಡದಿಯನ್ನು ಏಕಾಂಗಿಯಾಗಿ ಬಿಟ್ಟು ಬಿಡುತ್ತಾರೆ.

ಅಲ್ಲಾಹನ ಎಲ್ಲಾ ಆಜ್ಞೆಗಳನ್ನು ಈಡೇರಿಸಿ ಪರೀಕ್ಷೆಗಳನ್ನು ಎದುರಿಸಿ ದೇವ ಪ್ರೀತಿಗೆ ಪಾತ್ರರಾಗಿ ಪ್ರವಾದಿ ಇಬ್ರಾಹಿಂ ಮತ್ತು ಮಡದಿ ಹಾಜರ ಮಗ ಇಸ್ಮಾಯಿಲ್ ತ್ಯಾಗ ಮತ್ತು ಅಛಲ ವಿಶ್ವಾಸ ಸ್ನೇಹ ನಂಬಿಕೆಯ ಬದುಕನ್ನು ರೂಪಿಸಿಕೊಳ್ಳುತ್ತಾರೆ. ಪ್ರವಾದಿ ಇಬ್ರಾಹಿಂ ಅವರ ನಂತರ ತಮ್ಮ ಮಗ ಇಸ್ಮಾಯಿಲ್ ಪ್ರವಾದಿ ಪಟ್ಟವನ್ನು ಸ್ವೀಕರಿಸುತ್ತಾರೆ. ಹಝ್ರತ್ ಇಬ್ರಾಹಿಂ ಅವರಿಗೆ ಖಲೀಲುಲ್ಲಾಹ್ ಅಲ್ಲಾಹನ ಸ್ನೇಹಿತ ಎಂಬ ಗೌರವ ಪದವಿಯನ್ನು ನೀಡಿ ಗೌರವಿಸುತ್ತಾನೆ. ಪ್ರವಾದಿ ಇಬ್ರಾಹಿಂ ಅವರ ಜೀವನ ಬದುಕು ಇತಿಹಾಸವನ್ನು ನೆನಪಿಸುವುದೇ ಹಜ್ ಬಕ್ರೀದ್‌ ಆಚರಣೆಯ ಉದ್ದೇಶ.

ಇದನ್ನೂ ಓದಿ:Govt Holidays : 2024ರಲ್ಲಿ ಸರ್ಕಾರಿ ನೌಕರರಿಗೆ ಭರ್ಜರಿ ರಜೆ; ಇಲ್ಲಿದೆ ಸರ್ಕಾರಿ ರಜೆಗಳ ಪಟ್ಟಿ

Continue Reading
Advertisement
petrol diesel price hike
ಪ್ರಮುಖ ಸುದ್ದಿ8 mins ago

Petrol Diesel Price: ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಇಂದು ಬಿಜೆಪಿ ಮಿಂಚಿನ ಪ್ರತಿಭಟನೆ

Shah Rukh Khan Took ₹1 As Signing Amount For 'Nayak'
ಬಾಲಿವುಡ್16 mins ago

Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

Encounter In Bandipora
ದೇಶ38 mins ago

Encounter In Bandipora: ಬಂಡಿಪೋರಾದಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

BAN vs NEP
ಕ್ರೀಡೆ39 mins ago

BAN vs NEP: ಸ್ವಿಮ್ಮಿಂಗ್ ಪೂಲ್​ಗೆ ಜಿಗಿದು ಸಂಭ್ರಮಿಸಿದ ನೇಪಾಳ ಅಭಿಮಾನಿ; ವಿಡಿಯೊ ವೈರಲ್​

BS Yediyurappa pocso case
ಪ್ರಮುಖ ಸುದ್ದಿ56 mins ago

BS Yediyurappa: ಇಂದು ಸಿಐಡಿ ಮುಂದೆ ಹಾಜರಾಗಲಿರುವ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ

Kiccha Sudeep Replies To Darshan Ban Matter Entertainment
ಸ್ಯಾಂಡಲ್ ವುಡ್1 hour ago

Kiccha Sudeep: ಜಗ್ಗೇಶ್‌ಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ಗೊತ್ತು ಎಂದ ಕಿಚ್ಚ!

T20 World Cup 2024
ಕ್ರೀಡೆ1 hour ago

T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

Nikhil Gupta
ವಿದೇಶ1 hour ago

Nikhil Gupta: ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಹತ್ಯೆಗೆ ಸಂಚು ಆರೋಪ; ಜೆಕ್‌ ಗಣರಾಜ್ಯದಿಂದ ನಿಖಿಲ್‌ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

BAN vs NEP
ಕ್ರೀಡೆ2 hours ago

BAN vs NEP: ಸೂಪರ್​-8 ಪ್ರವೇಶಿಸಿದ ಬಾಂಗ್ಲಾದೇಶ; ನೇಪಾಳ ವಿರುದ್ಧ 21 ರನ್​ ಗೆಲುವು

Actor Darshan of many acquaintance unknown of darshan
ಸ್ಯಾಂಡಲ್ ವುಡ್2 hours ago

Actor Darshan: ಬಂಧಿತರಲ್ಲಿ ಹಲವರಿಗೆ ದರ್ಶನ್ ನೇರ ಪರಿಚಯವೇ ಇಲ್ವಂತೆ; ʻದಚ್ಚುʼ ಅರೆಸ್ಟ್ ಆದ ಬಳಿಕವೇ ಮುಖಾಮುಖಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ17 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ18 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ23 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌